ತಾಲೂಕುಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಮೇ. 05 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳು ಮೇ 6 ರಿಂದ 31ರವರೆಗೆ ಆಯಾ ದಿನದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಮೇ 6ರಂದು ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹದಲ್ಲಿ, ಮೇ 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸುವರು.
ಮೇ 17ರಂದು ಯಳಂದೂರಿನ ಸರ್ಕಾರಿ ಅತಿಥಿಗೃಹದಲ್ಲಿ, ಮೇ 24ರಂದು ಕೊಳ್ಳೇಗಾಲದ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕರಿಸುವರು.
ಮೇ 31ರಂದು ಹನೂರಿನ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕರಿಸುವರು.
ಭ್ರಚ್ಠಾಚಾರ ನಿಗ್ರಹ ದಳ 1988 ಕಾಯಿದೆಯಡಿ ಸರ್ಕಾರಿ ಕಚೇರಿ ಕೆಲಸಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಚ್ಠಾಚಾರ ನಿಗ್ರಹ ದಳದ ಕಚೇರಿ ಪ್ರಕಟಣೆ ತಿಳಿಸಿದೆ.
No comments:
Post a Comment