Saturday, 6 May 2017

06=05=25017 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 06 - ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000ಗಳು ಪಟ್ಟಣ ಪ್ರದೇಶದವರಿಗೆ ರೂ.55,000ಗಳ ಒಳಗಿರಬೇಕು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000ಗಳು. 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಜಿದಾರರÀು ಐಎಫ್‍ಸಿ ಕೋಡ್ ಹೊಂದಿರುವ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು.
ಚೈತನ್ಯ ಸಬ್ಸಿಡಿ ಕಂ ಸಾಫ್ಟ್‍ಲೋನ್ ಯೋಜನೆಯಡಿ ಕೃಷಿ, ವ್ಯಾಪಾರ, ಸಾರಿಗೆ ಕೈಗಾರಿಕೆ, ಸೇವಾ ವಲಯದಲ್ಲಿ ಬರುವ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ ರೂ. 5 ಲಕ್ಷಗಳವರೆಗೆ ಸಾಲ ಹಾಗೂ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1 ಲಕ್ಷಗಳ ಶೇಕಡ 4ರ ಬಡ್ಡಿ ದರದಲ್ಲಿ ಮಾರ್ಜಿನ್ ಹಣ. ರೂ.1 ಲಕ್ಷಕ್ಕಿಂತ ಕಡಿಮೆ ಇರುವ ಸಾಲಕ್ಕೆ ಶೇ.30ರಷ್ಟು ಅಥವಾ ಗರಿಷ್ಟ ರೂ. 10 ಸಾವಿರಗಳ ಸಹಾಯಧನ (ಸಬ್ಸಿಡಿ) ದೊರೆಯಲಿದೆ.
ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷಗಳ ಮಿತಿಯಲ್ಲಿದ್ದು, ಪರೀಕ್ಷೆ ಮುಖಾಂತರ ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆದು, ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇ.2ರ ಬಡ್ಡಿ ದರದಲ್ಲಿ ಗರಿಷ್ಠ ವಾರ್ಷಿಕ ರೂ.1 ಲಕ್ಷಗಳವರೆಗೆ ಸಾಲ ಒದಗಿಸಲಾಗುವುದು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ     ಬಡ್ಡಿರಹಿತ ಸಾಲ ಯೋಜನೆ ಲಭ್ಯವಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಲಭಿಸಲಿದ್ದು ಇದರಲ್ಲಿ ಗರಿಷ್ಟ ಶೇ. 15ರಷ್ಟು ಸಹಾಯಧನ. ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.
ಕಿರುಸಾಲ ಸೌಲಭ್ಯ ಯೋಜನೆಯಡಿ ಸ್ವ ಸಹಾಯ ಗುಂಪುಗಳ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಅಂದರೆ ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಗರಿಷ್ಠ  10 ಸಾವಿರ ರೂ. ಸಾಲ ಹಾಗೂ 5 ಸಾವಿರ ರೂ.ಗಳ ಸಹಾಯಧನ ನೀಡಲಾಗುವುದು. ಅರ್ಜಿದಾರರು ಬಿ.ಪಿ.ಎಲ್ ಕುಟುಂಬಕ್ಕೆ ಸೇರಿರಬೇಕು.
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಿದ್ದು ಇದರಲ್ಲಿ ಗರಿಷ್ಠ ಶೇ. 15ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿ ದರದಲ್ಲಿ ಸÁಲ ನೀಡಲಾಗುವುದು.
ಗಂಗಾ-ಕಲ್ಯಾಣ ಯೋಜನೆ- ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ 2.50 ಲಕ್ಷ ರೂ. ವೆಚ್ಚದಲ್ಲಿ ಕೊಳವೆ ಬಾವಿ ಕೊರೆಯಿಸಿ ಅಗತ್ಯ ಪರಿಕರಗಳನ್ನು ಒದಗಿಸಲಾಗುತ್ತದೆ. ಸಾಮೂಹಿಕ ನೀರಾವರಿ ಯೋಜನೆಯಡಿ ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ ರೂ. 4 ಲಕ್ಷಗಳ ವೆಚ್ಚದಲ್ಲಿ 2 ಕೊಳವೆ ಬಾವಿ, 15 ಎಕರೆಗಿಂತ ಹೆಚ್ಚಿನ ಜಮೀನಿಗೆ 6 ಲಕ್ಷ ರೂ.ಗಳ ವೆಚ್ಚದಲ್ಲಿ 3 ಕೊಳವೆಬಾವಿ ಕೊರೆಯಿಸಿ ಪಂಪ್‍ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಮಡಿವಾಳ, ಸವಿತ, ಕುಂಬಾರ, ತಿಗಳ ಮತ್ತು ಉಪ್ಪಾರ ಸಮುದಾಯಗಳ ಅಭಿವೃದ್ದಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುತ್ತದೆ.
ಮಡಿವಾಳ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಡಿ ದೋಬಿವೃತ್ತಿ ನಿರ್ವಹಣೆಗೆ ಗರಿಷ್ಠ ರೂ.2 ಲಕ್ಷಗಳ ವರೆಗೆ ಶೇ.2ರ ಬಡ್ಡಿ ದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸÀಹಾಯಧನ. ಮಹಿಳಾ ಸ್ವಸಹಾಯ ಗುಂಪುಗಳಿಗೆ ರೂ.3 ಲಕ್ಷಗಳವರೆಗೆ ಆರ್ಥಿಕ ನೆರವು.  ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಕೌಶಲ್ಯಾಭಿವೃದ್ಧಿ ತರಬೇತಿ, ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ಬ್ಯುಟಿಷಿಯನ್, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ಇತ್ಯಾದಿ ನೀಡಲಾಗುತ್ತದೆ.
ಸವಿತ ಸಮಾಜ ಅಭಿವೃದ್ಧಿ ಕಾರ್ಯಕ್ರಮಗಳಡಿ ಕ್ಷೌರಿಕ ವೃತ್ತಿ ನಿರ್ವಹಣೆಗೆ ರೂ.2.00 ಲಕ್ಷಗಳವರೆಗೆ ಶೇ. 2ರ ಬಡ್ಡಿ ದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸಹಾಯಧನ. ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ. 2  ಲಕ್ಷಗಳವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ, ಇದರಲ್ಲಿ ಶೇ. 15ರಷ್ಡು ಸಹಾಯಧನ. ನಾದಸ್ವರ ಡೋಲು ಉಪಕರಣ ಕೊಳ್ಳಲು ವೈಯುಕ್ತಿಕ 10 ಸಾವಿರ ರೂ.ಗಳಿಂದ 25 ಸಾವಿರ ರೂ.ಗಳವರೆಗೆ ಆರ್ಥಿಕ ನೆರವು. ಇದರಲ್ಲಿ ಶೇ.30ರಷ್ಟು ಸಹಾಯಧನ ಲಭ್ಯವಿದೆ.
ತಿಗಳ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮದಡಿ ಹೂವು ತರಕಾರಿ ಮಾರಾಟಗಾರರಿಗೆ ತರಕಾರಿ ಹೂವು ಬೆಳೆ ಬೆಳೆಯಲು ಗರಿಷ್ಠ 2 ಲಕ್ಷ ರೂ.ಗಳವರೆಗೆ ಶೇ. 2ರ ಬಡ್ಡಿ ದರದಲ್ಲಿ ಸಾಲ, ಇದರಲ್ಲಿ ಶೇ. 15ರಷ್ಟು ಸಹಾಯಧನ. ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಅನಿಮೇಷನ್, ಆಟೋಕ್ಯಾಡ್, ಸೌಂಡ್ ಇಂಜಿನಿಯರಿಂಗ್, ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ನೀಡಲಾಗುವುದು.
ಕುಂಬಾರ ಸಮುದಾಯದ ಅಭಿವೃದ್ಧಿ ಕಾರ್ಯಕ್ರವiದಡಿ ಕುಂಬಾರಿಕೆ ವೃತ್ತಿ ನಿರ್ವಹಣೆಗೆ ಗರಿಷ್ಟ 2 ಲಕ್ಷ ರೂ.ಗಳವರೆಗೆ ಶೇ.2ರ ಬಡ್ಡಿದರದಲ್ಲಿ ಸಾಲ. ಇದರಲ್ಲಿ ಶೇ. 15ರಷ್ಟು ಸಹಾಯಧನ. ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಟ 2 ಲಕ್ಷ ರೂ.ಗಳವರೆಗೆ ಶೇ.4ರ ಬಡ್ಡಿದರದಲ್ಲಿ ಸಾಲ. ಇದರಲ್ಲಿ ಶೇ.15ರಷ್ಟು ಸಹಾಯಧನ. ವೈಯಕ್ತಿಕ ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ. ಅರಿವು-ಶೈಕ್ಷಣಿಕ ಸಾಲ, ಕುಂಬಾರಿಕೆ ಕಲಾತ್ಮಕ ಉತ್ಪನ್ನಗಳ ತಯಾರಿಕೆ. ಡಿಟಿಪಿ ತರಬೇತಿ, ವಾಹನ ಚಾಲನ ತರಬೇತಿ, ರೆಡಿಮೇಡ್ ಗಾರ್ಮೆಂಟ್ಸ್ ತರಬೇತಿ ನೀಡಲಾಗುವುದು.
ಸಾರಾಯಿ ಮಾರಾಟ ನಿಷೇದದಿಂದ ಉದ್ಯೋಗ ಕಳೆದುಕೊಂಡಿರುವ ವೆಂಡರ್, ಮೂರ್ತೆದಾರರು, ಈಡಿಗ ಇತ್ಯಾದಿ ಸಮುದಾಯಗಳ ಸ್ವಯಂ ಉದ್ಯೋಗ ಕೈಗೊಳ್ಳಲು  ಆರ್ಥಿಕ ಚಟುವಟಿಕೆ ಅನುಸಾರ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಲ್ಲಿ ಗರಿಷ್ಠ 2 ಲಕ್ಷ ರೂ.ಗಳವರೆಗೆ ಸಾಲ ಶೇ. 4ರ ಬಡ್ಡಿದೆರದಲ್ಲಿ. ಇದರಲ್ಲಿ ಶೇ.15ರಷ್ಟು ಸಹಾಯಧನ ದೊರೆಯಲಿದೆ.
ಡಾ. ಡಿ.ಎಂ. ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾವಂತ ನಿರುದ್ಯೋಗಿಗಳ (ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ) 10 ಸದಸ್ಯರನ್ನು ಒಳಗೊಂಡ ಸ್ವಸಹಾಯ ಗುಂಪುಗಳಿಗೆ 3.50 ಲಕ್ಷ ರೂ.ಗಳÀ ಆರ್ಥಿಕ ನೆರವು ನೀಡಲಿದ್ದು ಇದರಲ್ಲಿ ಶೇ. 30ರಷ್ಟು ಸಹಾಯಧನವಾಗಿ ಉಳಿಕೆ ಹಣವನ್ನು ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲವಾಗಿ ನೀಡಲಾಗುವುದು.
ಮಡಿವಾಳ ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಬ್ಯಾಂಕುಗಳ ಮೂಲಕ ಟ್ಯಾಕ್ಸಿ ಕೊಳ್ಳಲು 5 ಲಕ್ಷ ರೂ.ಗಳವರೆಗೆ ಸಾಲ ದೊರೆಯಲಿದೆ. ಇದರಲ್ಲಿ ನಿಗಮದಿಂದ ಶೇ. 20ರಷ್ಟು ಗರಿಷ್ಟ 1 ಲಕ್ಷ ರೂ.ಗಳ ಮಾರ್ಜಿನ್ ಹಣ, ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ. ಉಳಿಕೆ ಮೊತ್ತ ಬ್ಯಾಂಕ್ ಪಾಲಿನ ಸಾಲವಾಗಿರುತ್ತದೆ.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ದಿ ನಿಗಮದÀ ಸಾಲ ಯೋಜನೆಯಡಿ ಕೃಷಿವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯದಲ್ಲಿ ಆಟೋರಿಕ್ಷ, ಗೂಡ್ಸ್ ಆಟೋರಿಕ್ಷ, ನ್ಯೂ ಸ್ವರ್ಣಿಮಾ, ಮೈಕ್ರೋ ಫೈನಾನ್ಸ್ ವಲಯಗಳಲ್ಲಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಆಯಾ ವಲಯದ ಅನುಮೋದಿತ ಘಟಕ ವೆಚ್ಚದ ಮಿತಿಗೊಳಪಟ್ಟು ಗರಿಷ್ಠ ರೂ.10ಲಕ್ಷ ಗಳವರೆಗೆ ವಾರ್ಷಿಕ ಶೇಕಡ 6 ರಿಂದ 7ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗವುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಿದ್ದು ಇಂಜಿನಿಯರಿಂಗ್, ಮೆಡಿಕಲ್, ವೆಟರ್ನರಿ, ಕಾನೂನು, ಐ.ಸಿ.ಡಬೂ.್ಯಎ, ಸಿ.ಎ, ಹೋಟೆಲ್ ಮ್ಯಾನೇಜ್‍ಮೆಂಟ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.2.50 ಲಕ್ಷ ಅಥವಾ ಕೋರ್ಸ್‍ನ ಅವಧಿಗೆ ಒಟ್ಟು ರೂ.10ಲಕ್ಷಗಳ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.
ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ರೂ.20ಲಕ್ಷ ಸಾಲವನ್ನು ಶೇ. 4ರ ಬಡ್ಡಿದರ. ಹಾಗೂ ವಿದ್ಯಾರ್ಥಿನಿಯರಿಗೆ ಶೇ.3.5ರ ಬಡ್ಡಿದರದಲ್ಲಿ ನೀಡಲಾಗುವುದು.
ಸ್ವಯಂ ಸಕ್ಷಮ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ಲಿನಿಕ್ ಸ್ಥಾಪಿಸಲು ವಕೀಲ ವೃತ್ತಿ ಆರಂಭಿಸಲು, ಮೆಡಿಕಲ್ ಸ್ಟೋರ್ ಪ್ರಾರಂಭಿಸಲು, ಇತ್ಯಾದಿ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.10 ಲಕ್ಷಗಳವರೆಗೆ ಗರಿಷ್ಠ ಶೇ. 6 ರಿಂದ 7ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.
ಮಹಿಳಾ ಸಮೃದ್ಧಿ ಯೋಜನೆಯಡಿ ಹಿಂದುಳಿದ ವರ್ಗಗಳ ಮಹಿಳಾ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ ರೂ.35,000ಗಳ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ನೀಡಲಾಗುವುದು.
ಮೈಕ್ರೋ ಫೈನಾನ್ಸ್ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ, ಪುರುಷ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ, ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ ರೂ.35,000ಗಳ ಸಾಲವನ್ನು ಶೇ. 5ರ ಬಡ್ಡಿ ದgದಲ್ಲಿ ನೀಡಲಾಗುವುದುÀ.
ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ನಂ:305, 3ನೇ ಮಹಡಿ, ಜಿಲ್ಲಾಡಳಿತ ಭವನ ಚಾಮರಾಜನಗರ ಜಿಲ್ಲೆ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಮೇ 10 ರಿಂದ 25ರೊಳಗೆ ಪಡೆಯಬಹುದು. (ಅರ್ಜಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು) ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಇಲ್ಲಿಯೂ ಸಹ ಅರ್ಜಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 26 ರಿಂದ ಜೂನ್ 9ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ. 8ರಂದು ವಿವಿಧ ಮಹಾತ್ಮರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಮೇ. 06 :- ಜಿಲ್ಲಾಡಳಿತದ ವತಿಯಿಂದ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ, ಸಂತಕವಿ ಸರ್ವಜ್ಞ, ದಲಿತ ವಚನಕಾರರು, ದೇವರ ದಾಸಿಮಯ್ಯ ಹಾಗೂ ಮಹಾವೀರ ಜಯಂತಿಯನ್ನು ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮೇ 8ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಹಾಜರಾಗಿ ಅವಶ್ಯ ಸಲಹೆ ಸಹಕಾರ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಕೋರಿದ್ದಾರೆ.






 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು