ಮೇ. 14ರಂದು ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಕುಂದುಕೊರತೆ ವಿಚಾರಣೆ
ನಾಗರಿಕರು ಯಾವುದೇ ಸಮಸ್ಯೆ, ಕುಂದುಕೊರತೆಗಳಿದ್ದಲ್ಲಿ ಉಸ್ತುವಾರಿ ಸಚಿವರನ್ನು ನೇರವಾಗಿ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮೇ. 15ರಂದು ಜನ-ಮನ ಕಾರ್ಯಕ್ರಮ: ಉಸ್ತುವಾರಿ ಸಚಿವರೊಂದಿಗೆ ವಿವಿಧ ಯೋಜನೆÀ ಫಲಾನುಭವಿಗಳ ಸಂವಾದ
ಚಾಮರಾಜನಗರ, ಮೇ. 13:- ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಫಲಾನುಭವಿಗಳ ಅಭಿಪ್ರಾಯ ಆಲಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆಯುವ ಸಂವಾದ “ಜನ-ಮನ” ಕಾರ್ಯಕ್ರಮವನ್ನು ಮೇ 15ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಜನಮನ ಕಾರ್ಯಕ್ರಮವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ನಡೆಯಲಿದೆ.
ರಾಜ್ಯಸರ್ಕಾರವು ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಪಶುಭಾಗ್ಯ, ಆರೋಗ್ಯಭಾಗ್ಯ, ಮೈತ್ರಿ, ಹರೀಶ್ ಸಾಂತ್ವನ ಯೋಜನೆ, ಮನಸ್ವಿನಿ, ಋಣಮುಕ್ತ, ಹೀಗೆ ಹತ್ತು ಹಲವಾರು ಜನಪರ ಹಾಗೂ ಜನಮುಖಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಫಲ ಜನರಿಗೆ ಹೇಗೆ ತಲುಪಿದೆ ಎಂದು ಜನರಿಂದಲೇ ನೇರವಾಗಿ ತಿಳಿದುಕೊಳ್ಳುವ ವಿಶಿಷ್ಟ ಕಾರ್ಯಕ್ರಮ ಜನ-ಮನವಾಗಿದೆ.
ಜಾರಿಯಲ್ಲಿರುವ ಯೋಜನೆಗಳನ್ನು ಜನರಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಹೇಗೆ ತಲುಪಿಸಬಹುದು, ಯೋಜನೆಗಳಲ್ಲಿ ಏನಾದರೂ ಬದಲಾವಣೆಯಿದೆಯೇ ಎಂಬ ಬಗ್ಗೆ ಜನರ ಮನದಿಂದಲೇ ಅರಿತು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಜನ-ಮನ ಸಂವಾದ ಕಾರ್ಯಕ್ರಮ ಆಯೋಜಿತವಾಗಿದೆ. ಈ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಫಲಾನುಭವಿಗಳು ಪಾಲ್ಗೊಂಡು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಎಸ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
ಮೇ. 14ರಂದು ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಮೇ. 13 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ರಾಜೀವ್ ಗಾಂಧಿ ಪಂಚಾಯಿತಿ ಸಶಕ್ತೀಕರಣ ಅಭಿಯಾನ ಯೋಜನೆಯಡಿ ಜಿಲ್ಲಾಡಳಿತ ಭವನದ ಅವರಣದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದ ನೂತನ ಕಟ್ಟಡವು ಮೇ 14 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಜ್ಯೋತಿ ಬೆಳಗಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರುಗಳು ಗೌರವಾನ್ವಿತ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಅಧ್ಯಕ್ಷರಾದ ಎನ್.ಎಸ್. ರೇಣುಕಾ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೇ. 15ರಂದು ಮಾವು ಮತ್ತು ಹಲಸು ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳ
ಚಾಮರಾಜನಗರ, ಮೇ. 13:- ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ(ನಿ), ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‍ನ ಮತ್ತು ತೋಟಗಾರಿಕಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೇ 15 ರಿಂದ 17ರವರೆಗೆ ಮಾವು ಮತ್ತು ಹಲಸು ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಅವರಣದಲ್ಲಿ ಆಯೋಜಿಸಲಾಗಿದೆ.ರೈತರಿಂದ ಗ್ರಾಹಕರಿಗೆ ಮಾವು ಮತ್ತು ಹಲಸು ಹಣ್ಣುಗಳನ್ನು ನೇರ ಮಾರಾಟ ಮಾಡುವ ಸಲುವಾಗಿ ಹಮ್ಮಿಕೊಳ್ಳಲಾಗಿರುವ ಈ ಮಾರಾಟ ಮೇಳವನ್ನು ಮೇ 15ರಂದು ಬೆಳಿಗ್ಗೆ 10 ಗಂಟೆಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರುಗಳು ಗೌರವಾನ್ವಿತ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾವಿನ ತಳಿಗಳ ಪ್ರದರ್ಶನದ ಮಳಿಗೆಗಳನ್ನು ಚಾಲನೆ ನೀಡಲಿದ್ದಾರೆ
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಅಧ್ಯಕ್ಷರಾದ ಎಲ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಎಸ್. ರೇಣುಕಾ ಬಸಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಬೆಂಗಳೂರು ಕೆ.ಎಚ್.ಎಫ್ ಉಪಾಧ್ಯಕ್ಷರಾದ ಕೋಡಿಮೋಳೆ ರಾಜಶೇಖರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಶ್ರೀಕಂಠಪ್ಪ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ತೋಟಗಾರಿಕಾ ಹೆಚ್ಚುವರಿ ನಿರ್ದೇಶಕರು(ಹಣ್ಣುಗಳು) ಹಾಗೂ ಬೆಂಗಳೂರು(ಲಾಲ್‍ಭಾಗ್) ಜಿಲ್ಲಾ ಉಸ್ತುವಾರಿ ಅಧಿಕಾರಿ ಡಾ.ಕೆ,ಎಂ. ಪರಶಿವಮೂರ್ತಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಕದರೇಗೌಡ, ಚಾಮರಾಜನಗರ ಎ.ಪಿ.ಎಂ.ಸಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ನಿರ್ದೇಶಕರಾದ ಜಿ.ಎಸ್. ಗೌಡರ್, ಮೊಹಮ್ಮದ್ ಇಸ್ಮಾಯಿಲ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೇ 15 ಮತ್ತು 16ರಂದು ಸಂಜೆ 7 ಗಂಟೆಯಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇ 14 ರಂದು ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 13 :- ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮೇ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30ಗಂಟೆಗೆ ಮೈಸೂರಿಗೆ ತೆರಳುವರೆಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಮೇ 14 ರಂದು ಉನ್ನತ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 13:- ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಮೇ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಮೇ 14 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 13 - ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಮೇ 14 ಮತ್ತು 15ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಮೇ 14ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ವಿಚಾರಣೆ ನಡೆಸುವರು. 10 ಗಂಟೆಗೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಸಂಪನ್ಮೂಲ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. 11-30 ಗಂಟೆಗೆ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮೇ 15ರಂದು ಬೆಳಿಗ್ಗೆ 10ಗಂಟೆಗೆ ಮಾವು ಮತ್ತು ಹಲಸು ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 11 ಗಂಟೆಗೆ ಉದ್ಯೋಗ ಕೌಶಲ್ಯ ನೈಪುಣ್ಯತೆ ತರಬೇತಿಯ ವೆಬ್ ಪೋರ್ಟಲ್ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ನಗರದ ವಾರ್ಡ್ ನಂ 15ರ ಪೌರ ಕಾರ್ಮಿಕರ ಕಾಲೋನಿಯಲ್ಲಿ ನಡೆಎಯಲಿರುವ ಮಠಾಧೀಶರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3 ಗಂಟೆಗೆ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯುವ ಜನ-ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಂಗಳೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.
No comments:
Post a Comment