ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಕ್ಕೆ ಸಜ್ಜಾಗಿ : ಜಿಲ್ಲಾಧಿಕಾರಿ ಸೂಚನೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವಿಶೇಷ ಘಟಕ ಹಾಗೂ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಘಟಕ ಹಾಗೂ ಉಪಯೋಜನೆಯಡಿ ಅನುದಾನ ನಿಗದಿಯಾಗುತ್ತಿದೆ. ಅನುದಾನಕ್ಕೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಹೀಗಾಗಿ ವಿಳಂಬ ಮಾಡದೆ ಕಾರ್ಯಕ್ರಮ ಅನುಷ್ಠಾನಕ್ಕೆ ಅಗತ್ಯವಿರುವ ಪ್ರಕ್ರಿಯೆಗೆ ಅಧಿಕಾರಿಗಳು ಸಿದ್ಧರಾಗಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಈಗಾಗಲೇ ಹಲವಾರು ಇಲಾಖೆಗಳಿಗೆ ರಾಜ್ಯ ಹಾಗೂ ಜಿಲ್ಲಾವಾರು ಯೋಜನೆಗಳಿಗೆ ಅನುದಾನ ನಿಗದಿಗೊಂಡಿದೆ. ಇಂತಹ ಇಲಾಖೆಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು. ಫಲಾನುಭವಿಗಳ ಆಯ್ಕೆ, ಅನುದಾನ ಹಂಚಿಕೆ, ಇನ್ನಿತರ ಅವಶ್ಯಕ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದರು.
ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳ ಅನುದಾನ ಖಜಾನೆಗೆ ತಲುಪಿದ ಬಳಿಕ ಅನುಷ್ಠಾನ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುವ ಧೋರಣೆಯನ್ನು ತಾವು ಸಹಿಸುವುದಿಲ್ಲ. ಅಧಿಕಾರಿಗಳು ಅನುದಾನ ಲಭ್ಯತೆಗೆ ಅನುಗುಣವಾಗಿ ಪೂರ್ವಸಿದ್ಧತೆಯೊಂದಿಗೆ ಕಾರ್ಯಕ್ರಮಗಳನ್ನು ತಲುಪಿಸಲು ಎಲ್ಲ ಏರ್ಪಾಡುಗಳನ್ನು ಕೈಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಅನುದಾನ ಸಕಾಲದಲ್ಲಿ ಬಿಡುಗಡೆ ಮಾಡುವಂತೆ ಆಯಾ ಇಲಾಖೆಗಳ ಕೇಂದ್ರ ಕಚೇರಿಗೆ ಪತ್ರ ವ್ಯವಹಾರ ಮಾಡಬೇಕು. ಆರ್ಥಿಕ ವರ್ಷದ ಕೊನೆಯ ಅವಧಿಯಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕು. ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಪ್ರಮಾಣದಲ್ಲಿ ಪರಿಶಿಷ್ಟÀ ಕಲ್ಯಾಣ ಯೋಜನೆಗಳನ್ನು ಶೇ. 100ರಷ್ಟು ಪೂರ್ಣಗೊಳಿಸಬೇಕೆಂದು ರಾಮು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯ ಹಲ ಭಾಗದಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಇಂತಹ ಪ್ರದೇಶಗಳಲ್ಲಿ ವಿಶೇಷ ಘಟಕ ಉಪಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ನೆರವು ನೀಡಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ವ್ಯಾಪಕ ಪ್ರವಾಸ ಮಾಡಿ ವರದಿ ಮಾಡಬೇಕು. ರೈತರಿಗೆ ಬೆಳೆಗಾರರಿಗೆ ಅಗತ್ಯ ಮಾರ್ಗದರ್ಶನ ಮಾಡಿ ಪ್ರಸ್ತುತ ಸಂದರ್ಭಕ್ಕೆ ಅನುಗುಣವಾದ ಬೆಳೆ ಬೆಳೆಯಲು ಸಲಹೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಆಹಾರ ಇಲಾಖೆ ಪನಿರ್ದೇಶಕರಾದ ಆರ್. ರಾಚಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಆರ್. ಸರಸ್ವತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಮೇ. 19ರಂದು ಜಿಲ್ಲೆಯಲ್ಲಿ ಲೋಕಸಭಾ ಸದಸ್ಯರ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಚಾಮರಾಜನಗರ, ಮೇ. 17 (:- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮೇ 19ರಂದು ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ದೊಡ್ಡಿಂದುವಾಡಿ ಗ್ರಾಮದ ಡೈರಿ ಹತ್ತಿರ ಉಪ್ಪಾರ ಸಮುದಾಯ ಭವನದ ಅಡುಗೆ ಮನೆ ಕಟ್ಟಡ ಉದ್ಘಾಟನೆ, ಬಂಡಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡ, ಶಾಗ್ಯ ಹಾಗೂ ಸೂಳೇರಿಪಾಳ್ಯ ಗ್ರಾಮಗಳಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ, ರಾಮಾಪುರ ಹಾಗೂ ಗೆಜ್ಜಲವತ್ತ ಗ್ರಾಮಗಳಲ್ಲಿ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ಕಟ್ಟಡ ಹಾಗೂ ಲೊಕ್ಕನಹಳ್ಳಿ ಗ್ರಾಮದಲ್ಲಿ ಉಪ್ಪಾರ ಸಮುದಾಯ ಭವನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬೈಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಧ್ರುವನಾರಾಯಣ ಭಾಗವಹಿಸುವರು
ಮೇ. 23ರಂದು ನಗರದಲ್ಲಿ ಕವಿ ಸರ್ವಜ್ಞ ಜಯಂತಿ ದಿನಾಚರಣೆ
ಚಾಮರಾಜನಗರ, ಮೇ. 17 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕವಿ ಸರ್ವಜ್ಞ ಜಯಂತಿಯನ್ನು ಮೇ 23ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಗಂಟೆಗೆ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಬಳಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸರ್ವಜ್ಞ ಅವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಉದ್ಫಾಟಿಸುವರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವೆಂಕಟಯ್ಯನಛತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರÀ ಪ್ರಾಂಶುಪಾಲರಾದ ಮಹೇಶ್ ಹರವೆ ಮುಖ್ಯ ಭಾಷಣ ಮಾಡುವರು.
ಕಾರ್ಯಕ್ರಮಕ್ಕೂ ಮೊದಲು ನಗರದ ಕದಳಿ ಮಹಿಳಾ ವೇದಿಕೆಯಿಂದ ವಚನಗಾಯನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿವಿಧ ಸಾಲಸೌಲಭ್ಯಕ್ಕೆ ವಿಶ್ವಕರ್ಮ ಸಮುದಾಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 17 :- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2017-18ನೇ ಸಾಲಿಗೆ ವಿವಿಧ ಸಾಲಸೌಲಭ್ಯ ನೀಡಲಿದ್ದು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯ ಸರ್ಕಾರದ ಯೋಜನೆಗಳಡಿ ಪಂಚವೃತ್ತಿ ಅಭಿವೃದ್ಧಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ, ಮಹಿಳೆಯರಿಗೆ ಕಿರು ಸಾಲ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡ ಉದ್ಯಮಿಗಳಿಗೆ ವಿಶೇಷ ಪ್ಯಾಕೇಜ್ ಯೋಜನೆಗಳಲ್ಲಿ ಸಾಲಸೌಲಭ್ಯ ದೊರೆಯಲಿದೆ.
ಎನ್‍ಬಿಸಿಎಫ್‍ಡಿಸಿ ಯೋಜನೆಯಡಿ ಕೃಷಿ, ಸಣ್ಣ ವ್ಯಾಪಾರ, ಸೇವಾವಲಯ, ಸಾರಿಗೆ ವಲಯಕ್ಕೆ ಸಾಲ ದೊರೆಯಲಿದೆ. ಶೈಕ್ಷಣಿಕ ಸಾಲ ಯೋಜನೆಯಡಿ ದೇಶ ಹಾಗೂ ವಿದೇಶದಲ್ಲಿ ವ್ಯಾಸಂಗಕ್ಕೆ, ನ್ಯೂ ಸ್ವರ್ಣಿಮಾ ಯೋಜನೆಯಡಿ ಮಹಿಳೆಯರಿಗೆ ಸಾಲ, ಶಿಲ್ಪ ಸಂಪದ, ಸ್ವಯಂ ಸಕ್ಷಮ ಸಾಲ, ಮೈಕ್ರೋ ಫೈನಾನ್ಸ್, ಕೃಷಿ ಸಂಪದ, ಮಹಿಳಾ ಸಮೃದ್ಧ ಯೋಜನೆಯಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ವೈಯಕ್ತಿಕವಾಗಿ ಸಾಲಸೌಲಭ್ಯ ನೀಡಲಾಗುತ್ತದೆ.
ಅಭ್ಯರ್ಥಿಗಳು 18 ರಿಂದ 55ರ ವಯೋಮಿತಿಯೊಳಗಿರಬೇಕು. ಶೈಕ್ಷಣಿಕ ಸಾಲಕ್ಕೆ 18 ರಿಂದ 30ರ ವಯೋಮಿತಿಯೊಳಗಿರಬೇಕು. ಸಾಲಸೌ¯ಭ್ಯ ಪಡೆಯಲು ಇಚ್ಚಿಸುವವರು ನಿಗದಿತ ನಮೂನೆಯ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಮೇ 18 ರಿಂದ ಜೂನ್ 2ರವರೆಗೆ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 17ರ ಒಳಗೆ ಸಲ್ಲಿಸಬೇಕು. ಸಂಪೂರ್ಣ ಮಾಹಿತಿಯನ್ನು ನಿಗಮದ ವ್ಯವಸ್ಥಾಪಕರ ಕಚೇರಿ (ದೂ.ಸಂ.08226-223587) ಅಥವಾ ವೆಬ್ ಸೈಟ್ ತಿತಿತಿ.ಞvಛಿಜಛಿಟ.ಛಿom ನಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಮೇ. 23ರಂದು ಕೊಳ್ಳೇಗಾಲದಲ್ಲಿ ಪಜಾ. ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಕುಂದುಕೊರತೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಮೇ. 17 - ಕೊಳ್ಳೇಗಾಲ ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ಮೇ 23ರಂದು ಮಧ್ಯಾಹ್ನ 3 ಗಂಟೆಗೆ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಇಚ್ಚಿಸಿದಲ್ಲಿ ನಾಗರಿಕರು ಸಂಘಸಂಸ್ಥೆಗಳು ಲಿಖಿತವಾಗಿ ಮೇ 20ರೊಳಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
No comments:
Post a Comment