Thursday, 18 May 2017

18-05-2017 ಇಂಜಿನಿಯರಿಂಗ್ ವಿದ್ಯಾರ್ಥಿನಿ:ಆತ್ಮಹತ್ಯೆಗೆ ಯತ್ನ

ಇಂಜಿನಿಯರಿಂಗ್ ವಿದ್ಯಾರ್ಥಿನಿ:ಆತ್ಮಹತ್ಯೆಗೆ ಯತ್ನ


ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್ರಿಯಕರನಿಂದ     ಮೋಸಕ್ಕೆ ಬಲಿಯಾಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಆರ್. ರಕ್ಷಿತ (21  ) ಮೈಸೂರಿನ ಗಂಗೋತ್ರಿ ಲೇಔಟ್ ನ ನಿವಾಸಿ ಎಂದು ತಿಳಿದುಬಂದಿದೆ.     ಈಕೆ ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿ.ಎಸ್.ವಿಭಾಗದ 6  ಸೆಮಿಷ್ಟರ್ ನಲ್ಲಿ  ವ್ಯಾಸಂಗ ಮಾಡುತ್ತಿದ್ದಳು. 
ಪ್ರತಿದಿನ ಮೈಸೂರಿನಿಂದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ  ಪ್ರಯಾಣಿಸುತ್ತಿದ್ದಳು. ಇದೇ ಸಂದರ್ಭದಲ್ಲಿ  ಕೆ ಎಸ್ ಆರ್ ಟಿ ಸಿ ಡ್ರೈವರ್  ಶ್ರೀನಿವಾಸ್  ಜೊತೆ ಪ್ರೇಮಾಂಕುರ  ಬೆಳೆಯಿತು ಎನ್ನಲಾಗಿದೆ.  ಈತ  ಚಾಮರಾಜನಗರದ ಕುರುಬರಹುಂಡಿ ಗ್ರಾಮದವನು. 4 ತಿಂಗಳ ಹಿಂದೆ ರಕ್ಷಿತಾಗೆ ತಾಳಿ ಕಟ್ಟಿದ್ದ ಎನ್ನಲಾಗಿದೆ.
ಶ್ರೀನಿವಾಸ ಕೊರಮ ಸಮುದಾಯಕ್ಕೆ ಸೇರಿದವನು. ರಕ್ಷಿತ ಒಕ್ಕಲಿಗ ಗೌಡ ಸಮುದಾಯದ ಹುಡುಗಿ.  ಆದರೆ ಶ್ರೀನಿವಾಸನ ಮನೆಯಲ್ಲಿ ಅಂತರ್ಜಾತಿ ವಿವಾಹಕ್ಕೆ ವಿರೋಧವಿತ್ತು.  ನಿನ್ನೆ ಶ್ರೀನಿವಾಸನ ಅಕ್ಕ ಹುಡುಗಿಯ ತಾಳಿಯನ್ನು ಕಿತ್ತುಕೊಂಡು ಬಂದಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸುವುದಕ್ಕಾಗಿ ರಕ್ಷಿತಾಳ ತಂದೆ ಇಂದು ಬೆಳಿಗ್ಗೆ, ಚಾಮರಾಜನಗರದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋಗೆ ಆಕೆಯನ್ನು ಕರೆದುಕೊಂಡು ಬಂದಿದ್ದಾರೆ. ಶ್ರೀನಿವಾಸ್  ಡಿಪೋ ಗೆ ಇನ್ನೂ ಬಂದಿಲ್ಲವಾದ್ದರಿಂದೋ ಏನೋ ಬೇಸತ್ತು  ಶೌಚಾಲಯಕ್ಕೆ  ಹೋಗುವುದಾಗಿ ತಂದೆಗೆ ತಿಳಿಸಿ, ಪೆಟ್ರೋಲ್ ಮಿಶ್ರಿತ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.
  ಬೆಂಕಿ ಹಚ್ಚಿಕೊಂಡ ಆರ್. ರಕ್ಷಿತ ರನ್ನು ತಕ್ಷಣ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಿಕೊಡಲಾಗಿದೆ .
ಪಟ್ಟಣ ಠಾಣೆಯಲ್ಲಿ ದೂರು ಧಾಖಲಿಸಿಕೊಂಡು ಈಗಾಗಲೇ ಚಾಲಕ ಶ್ರನಿವಾಸ್ ಅನ್ನು ಬಂದಿಸಲಾಗಿದೆ ಎಂದು ತಿಳಿದುಬಂದಿದೆ



 

 




ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಮೇ. 18 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮೇ 22 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಮೇ 22ರಂದು ಕೊಳ್ಳೇಗಾಲ, 23ರಂದು ಯಳಂದೂರು, 24ರಂದು ಚಾಮರಾಜನಗರ ಹಾಗೂ 25ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಮೇ. 19ರಂದು ಜಿಲ್ಲೆಯಲ್ಲಿ ಲೋಕಸಭಾ ಸದಸ್ಯರ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಚಾಮರಾಜನಗರ, ಮೇ. 18- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮೇ 19ರಂದು ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ದೊಡ್ಡಿಂದುವಾಡಿ ಗ್ರಾಮದ ಡೈರಿ ಹತ್ತಿರ ಉಪ್ಪಾರ ಸಮುದಾಯ ಭವನದ ಅಡುಗೆ ಮನೆ ಕಟ್ಟಡ ಉದ್ಘಾಟನೆ, ಬಂಡಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡ, ಶಾಗ್ಯ ಹಾಗೂ ಸೂಳೇರಿಪಾಳ್ಯ ಗ್ರಾಮಗಳಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ, ರಾಮಾಪುರ ಹಾಗೂ ಗೆಜ್ಜಲವತ್ತ ಗ್ರಾಮಗಳಲ್ಲಿ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ಕಟ್ಟಡ ಹಾಗೂ ಲೊಕ್ಕನಹಳ್ಳಿ ಗ್ರಾಮದಲ್ಲಿ ಉಪ್ಪಾರ ಸಮುದಾಯ ಭವನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬೈಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಧ್ರುವನಾರಾಯಣ ಭಾಗವಹಿಸುವರು ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಆದರ್ಶ ಶಾಲೆ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟ

ಚಾಮರಾಜನಗರ, ಮೇ. 18 - 2017-18ನೇ ಸಾಲಿಗೆ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿಯ ಪ್ರವೇಶಕ್ಕೆ ನಡೆದ ಪರೀಕ್ಷಾ ಫಲಿತಾಂಶವನ್ನು ಶಾಲೆಯಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಮುಖ್ಯಸ್ಥರನ್ನು ಸಂಪರ್ಕಿಸುವಂತೆ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಎಂಇಜಿಪಿ ಯೋಜನೆಯಡಿ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 18- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿಯಲ್ಲಿ ಬ್ಯಾಂಕಿನಿಂದ ಆರ್ಥಿಕ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ರೆವಿನ್ಯೂ ದಾಖಲಾತಿಗಳ ಪ್ರಕಾರ ವರ್ಗೀಕರಿಸಿದ ಯಾವುದೇ ಗ್ರಾಮೀಣ ಪ್ರದೇಶ ಮತ್ತು 2001ರ ಜನಗಣತಿಯಲ್ಲಿ 20 ಸಾವಿರ ಜನರಿಗಿಂತ ಕಡಿಮೆ ಇರುವ ಪಟ್ಟಣವೆಂದು ವರ್ಗೀಕರಿಸಿರುವ ಪ್ರದೇಶದಲ್ಲಿನ ಅಭ್ಯರ್ಥಿಗಳು ಅರ್ಹರು.
ಸಾಮಾನ್ಯ ವರ್ಗದವರು 21 ರಿಂದ 35 ವರ್ಷದೊಳಗಿರಬೇಕು. ವಿಶೇಷ ವರ್ಗದವರಿಗೆ 45 ವರ್ಷ. (ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಯೋಧರು ಹಾಗೂ ಅಂಗವಿಕಲರಿಗೆ ಗರಿಷ್ಠ ವಯೋಮಿತಿ ಅನ್ವಯವಾಗಲಿದೆ).
ಕನಿಷ್ಟ 8ನೇ ತರಗತಿ ಉತ್ತೀರ್ಣರಾಗಿರಬೇಕು. ಆದಾಯದ ಮಿತಿ ಇರುವುದಿಲ್ಲ.
ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಮಾತ್ರ ಪ್ರತಿ ಫಟಕಕ್ಕೆ ಗರಿಷ್ಟ 10 ಲಕ್ಷ ಯೋಜನಾ ವೆಚ್ಚದ ಕಿರು ಉತ್ಪಾದನಾ ಘಟಕಗಳನ್ನು ಹಾಗೂ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆಗಳ ಮೂಲಕ ಸಾಲ ನೀಡಲಾಗುವುದು. ಹಿಂದಿನ ವರ್ಷದಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗಿ ಬ್ಯಾಂಕಿನಿಂದ ಸಾಲ ಮಂಜೂರಾಗದೇ ಇರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು.
ಸಾಮನ್ಯ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ. 25ರಷ್ಟು (ಗರಿಷ್ಟ 2 ಲಕ್ಷದ 50 ಸಾವಿರ ರೂ.ವರೆಗೆ) ಹಾಗೂ ವಿಶೇಷ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ. 35ರಷ್ಟು (ಗರಿಷ್ಟ 3 ಲಕ್ಷದ 50 ಸಾವಿರ ರೂ.ವರೆಗೆ) ಸಹಾಯಧನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 12ರೊಳಗೆ ತಿತಿತಿ.ಛಿmegಠಿ.ಞಚಿಡಿ.ಟಿiಛಿ.iಟಿ ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಕೊ. ಸಂ. 323)ಮತ್ತು ಖಾದಿ ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಅಧಿಕಾರಿಯವರನ್ನು (ಕೊ. ಸಂ. 332) ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 18 - ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿಗೆ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕು ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಚಾಮರಾಜನಗರ ಟೌನ್, ಸಂತೇಮರಹಳ್ಳಿ, ಚಂದಕವಾಡಿ, ಉಡಿಗಾಲ, ವೆಂಕಟಯ್ಯನಛತ್ರ, ಬಿಸಲವಾಡಿ, ಕುದೇರು, ಆಲೂರು, ಹರವೆ, ಹೊಂಗನೂರು ಹಾಗೂ ಜನ್ನೂರು ಗ್ರಾಮಗಳಲ್ಲಿನ ಮೆಟ್ಟಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಚಾಮರಾಜನಗರ ಪಟ್ಟಣದಲ್ಲಿರುವ ಬಾಲಕ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ, ಕುದೇರಿನಲ್ಲಿರುವ  ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಪ್ರಥಮ ಪಿಯುಸಿ.ಯಿಂದ ಅಂತಿಮ ಬಿಎ, ಬಿಎಸ್ಸಿ.ವರೆಗೂ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಹರದನಹಳ್ಳಿಯ ವರ್ಗೀಕೃತ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕೆ ಅವಕಾಶವಿದೆ.
ಚಾಮರಾಜನಗರ ಪಟ್ಟಣದಲ್ಲಿರುವ ಸ್ನಾತಕೋತ್ತರ ಕಾಲೇಜು ಬಾಲಕರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಬಹುದು
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಆಯಾ ವಿದ್ಯಾರ್ಥಿನಿಲಯಗಳ ನಿಲಯಪಾಲಕರು ಅಥವಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಜೂನ್ 5ರೊಳಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-223143 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 18 :- ಕಲೆ, ಸಾಂಸ್ಕøತಿಕ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ  ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮÁಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
5 ರಿಂದ 18ರ ವಯೋಮಿತಿಯೊಳಗಿನ ಅಂದರೆ ದಿನಾಂಕ 1.8.1999 ಹಾಗೂ ನಂತರ ಜನಿಸಿದ ಮಕ್ಕಳನ್ನು 2017ರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ರಾಷ್ಟ್ರ ಮಟ್ಟದ ಪ್ರಶಸ್ತಿಯು 20 ಸಾವಿರ ರೂ. ನಗದು, 10 ಸಾವಿರ ರೂ, ಮೌಲ್ಯದ ಪುಸ್ತಕ ಓಚರ್, ಒಂದು ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರತೀ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ, 10 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಪುಸ್ತಕ ಓಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಪ್ರಶಸ್ತಿಗೆ ಆಯ್ಕೆಯಾಗಲು ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ನಿಗದಿತ ನಮೂನೆಯ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳÀ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಅರ್ಜಿಯನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಮೇ 30ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆದುಕೊಳ್ಳುವಂತೆ ಮಹಿಳೆಯರ ಮತ್ತು ಮಕ್ಕಳÀ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.










No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು