ಖಾತೆ ಆಂದೋಲನ ಸದುಪಯೋಗಕ್ಕೆ ಶಾಸಕರ ಸಲಹೆ
ಚಾಮರಾಜನಗರ, ಮೇ. 19 - ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಮನೆ, ನಿವೇಶನದಾರರು ಅಗತ್ಯ ಯೋಜನೆ ಹಾಗೂ ಪರಿಹಾರ ಸೌಲಭ್ಯಗಳನ್ನು ಪಡೆಯಲು ಅನುವಾಗುವಂತೆ ಮನೆ ಬಾಗಿಲಿಗೆ ಬಂದು ಖಾತೆ ಮಾಡಿಕೊಡಲಾಗುತ್ತಿದ್ದು ಅರ್ಹರು ಈ ಅನುಕೂಲವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.ನಗರದ ಚೆನ್ನಿಪುರಮೋಳೆಯಲ್ಲಿಂದು ನಗರಸಭಾ ವತಿಯಿಂದ ಹಮ್ಮಿಕೊಳ್ಳಲಾಗಿರುವ ಖಾತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರದ ಯಾವುದೇ ವಸತಿ ಯೋಜನೆ ಅಥವಾ ಪರಿಹಾರ ಪಡೆಯಲು ಖಾತೆಗೆ ಸಂಬಂಧಿಸಿದ ದಾಖಲೆಗಳು ಅವಶ್ಯವಾಗಿವೆ. ಹಲವಾರು ಮಂದಿ ಅವರ ಸ್ವಾಧೀನದಲ್ಲಿರುವ ಮನೆ ಇನ್ನಿತರ ಆಸ್ತಿಗಳಿಗೆ ಸಂಬಂಧಿಸಿದಂತೆ ಖಾತೆಯನ್ನು ಹಲವಾರು ಕಾರಣಗಳಿಂದ ಪ್ರಸ್ತುತ ಸಂದರ್ಭಕ್ಕೆ ಹೊಂದದೇ ಇರುವುದು ಕಂಡುಬರುತ್ತಿದೆ. ಇದರಿಂದ ನೈಸರ್ಗಿಕ ವಿಕೋಪದಂತಹ ಸಂದರ್ಭದಲ್ಲಿ ಮನೆ ಇನ್ನಿತರ ಆಸ್ತಿಪಾಸ್ತಿಗಳಿಗೆ ಹಾನಿಯಾದಾಗ ಪರಿಹಾರ ಪಡೆಯಲು ತೊಡಕಾಗುತ್ತಿದೆ. ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ತೆರಳಿ ಖಾತೆ ಮಾಡಿಕೊಡುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.
ಎಲ್ಲಾ ಬಡಾವಣೆಗಳಲ್ಲೂ ಖಾತೆ ಆಂದೋಲನ ಕೈಗೊಳ್ಳಲಾಗುತ್ತದೆ. ಅಗತ್ಯ ದಾಖಲೆಗಳನ್ನು ಪಡೆದು ಖಾತೆ ಮಾಡಿಕೊಡುವ ಕೆಲಸವನ್ನು ಅಧಿಕಾರಿಗಳು ಆಯಾ ಬಡಾವಣೆಯಲ್ಲಿಯೇ ನಿರ್ವಹಿಸಲಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಳೀಯರು ಸ್ಪಂದಿಸಬೇಕು. ಎಲ್ಲ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲಾಗಿದ್ದು ಖಾತೆ ಆಂದೋಲನ ಸೌಲಭ್ಯವನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ಪುಟ್ಟರಂಗಶೆಟ್ಟಿಯವರು ತಿಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರೂ ಆದ ನಂಜುಂಡಸ್ವಾಮಿಯರವರು ಮಾತನಾಡಿ ಖಾತೆ ಆಂದೋಲನದಂತಹ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಇನ್ನು ಹೆಚ್ಚಿನ ಅಧಿಕಾರಿಗಳನ್ನು ಖಾತೆ ಆಂದೋಲನಕ್ಕೆ ನಿಯೋಜಿಸಲಾಗುತ್ತದೆ. ವಾರ್ಡ್‍ಗಳಲ್ಲೇ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು ಜನತೆ ಅವರಲ್ಲಿರುವ ಲಭ್ಯ ದಾಖಲೆಗಳನ್ನು ಒದಗಿಸಿದರೆ ಖಾತೆ ಮÁಡಿಕೊಡಲಾಗುತ್ತದೆ ಎಂದರು.
ನಗರಸಭೆ ಆಯುಕ್ತರಾದ ರಾಜಣ್ಣ ಮಾತನಾಡಿ ಖಾತೆ ಆಂದೋಲನದಲ್ಲಿ ಲಭ್ಯವಿರುವ ದಾಖಲೆಗಳನ್ನು ಸ್ವೀಕರಿಸಿ ಖಾತೆ ಮಾಡಿಕೊಡುವ ಪ್ರಕ್ರಿಯೆ ನಿರ್ವಹಿಸಲಾಗುತ್ತಿದೆ. ಎಲ್ಲಾ ಬಗೆಯ ನೆರವು ನೀಡಿ ಪೂರ್ಣ ಪ್ರಮಾಣದಲ್ಲಿ ಖಾತೆ ಮಾಡಿಕೊಡಲಾಗುತ್ತದೆ. ಜನತೆ ಈ ಆಂದೋಲನಕ್ಕೆ ಪೂರಕ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ನಗರಸಭೆ ಸದಸ್ಯರಾದ ಕೆಂಪರಾಜು, ಮಹೇಶ್ ಉಪ್ಪಾರ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
****************************
ಮೇ. 20ರಂದು ಗುಂಡ್ಲುಪೇಟೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಮೇ. 19 - ಗುಂಡ್ಲುಪೇಟೆ ವಿದ್ಯುತ್ ಮಾರ್ಗದಲ್ಲಿ ಮೇ 20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬೊಮ್ಮಲಾಪುರ, ತೆರಕಣಾಂಬಿ, ಹರವೆ, ಹಂಗಳ, ಬೇಗೂರು ಹಾಗೂ ಕಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ನಾಗರಿಕರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಜತೆ ಸಹಕರಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರÉ.
ಕೃಷಿ ಚಟುವಟಿಕೆಗಳಿಗೆ ಸೌಲಭ್ಯ : ಬಿತ್ತನೆ ಕಾರ್ಯದಲ್ಲಿ ತೊಡಗಲು ಮನವಿ
ಚಾಮರಾಜನಗರ, ಮೇ. 19 :- ಜಿಲ್ಲೆಯಲ್ಲಿ ಮುಂಗಾರು ಆಶಾದಾಯಕವಾಗಿದ್ದು ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.ಜನವರಿಯಿಂದ ಇದುವರೆಗೆ ಪೂರ್ವಮುಂಗಾರಿನ ಭಾಗವಾಗಿ ವಾಡಿಕೆಯಷ್ಟು ಹಾಗೂ ಕೆಲವೆಡೆ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾಗಿದ್ದು ಒಟ್ಟಾರೆ 213.77 ಮಿ.ಮೀ. ಮಳೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಇಂತಹ ವಾರ್ತಾವರಣದಿಂದ ಈಗಾಗಲೇ ಕೆಲವು ರೈತರು ಬಿತ್ತನೆ ಕಾರ್ಯವನ್ನು ಕೈಗೊಂಡಿದ್ದಾರೆ. ಆದರೆ ಕೆಲ ಗ್ರಾಮಗಳಲ್ಲಿ ಕೃಷಿ ಚಟುವಟಿಕೆಗಳು ಕೈಗೊಳ್ಳದಿರುವುದು ಕಂಡುಬಂದಿದೆ.
ಈಗಾಗಲೇ ರೈತಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಬೇಕಾದ ಜೋಳ, ಸೂರ್ಯಕಾಂತಿ, ನೆಲಗಡಲೆ, ಹಲಸಂದೆ, ಹೆಸರು, ಉದ್ದು, ಮುಸುಕಿನಜೋಳ ಮುಂತಾದ ಬಿತ್ತನೆ ಬೀಜಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ. ಪರಿಕರ ಮಾರಾಟಗಾರರ ಬಳಿ ಹಾಗೂ ಮಾರ್ಕೆಟಿಂಗ್ ಫೆಡರೇಷನ್ ಮತ್ತು ಸೊಸೈಟಿಗಳಲ್ಲಿ ಸಾಕಷ್ಟು ರಸಗೊಬ್ಬರವೂ ದಾಸ್ತಾನು ಇದೆ.
ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕೊಳ್ಳೇಗಾಲ : ಪರಿಶಿಷ್ಟ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 - ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ವಿವಿಧೆಡೆ ಇರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಣೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಕೊಳ್ಳೇಗಾಲ ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್ ನಂತರದ ಬಾಲಕಿಯರ ಹಾಗೂ ಬಾಲಕರ ವಿದ್ಯಾರ್ಥಿನಿಲಯ, ಬಂಡಳ್ಳಿ, ಒಡೆಯರಪಾಳ್ಯದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮಲೆಮಹದೇಶ್ವರ ಬೆಟ್ಟದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅವಕಾಶವಿದೆ.
ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ತಿಂಡಿ, ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ವಿಶೇಷ ಬೋಧನೆ, ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯ ಅಥವಾ ಕೊಳ್ಳೇಗಾಲ ಪಟ್ಟಣದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 10ರೊಳಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08224-255060 ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 23, 24ರಂದು ವಸತಿಶಾಲೆಗಳ ಪ್ರವೇಶಕ್ಕೆ ಕೌನ್ಸಲಿಂಗ್
ಚಾಮರಾಜನಗರ, ಮೇ. 19:- 2017-18ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಏಕಲವ್ಯ ವಸತಿಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಮೇ 23 ಹಾಗೂ 24ರಂದು ನಗರದ ಕೋರ್ಟ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.ವಿದ್ಯಾರ್ಥಿಗಳ ಪ್ರವೇಶ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟಿಸಲಾಗಿದ್ದು ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಮೇ 23ರಂದು ಪರಿಶಿಷ್ಟ ಜಾತಿ, ವಿಶೇಷ ವರ್ಗದ ವಿದ್ಯಾರ್ಥಿಗಳು ಮತ್ತು ಆಯಾ ವರ್ಗದಡಿ ಕಾಯ್ದಿರಿಸಿದ ಸೀಟುಗಳಿಗೆ ಮತ್ತು ಮೇ 24ರಂದು ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಆಯಾ ವರ್ಗದಡಿ ಕಾಯ್ದಿರಿಸಿದ ಸೀಟುಗಳಿಗೆ ಕೌನ್ಸೆಲಿಂಗ್ ನಡೆಯಲಿದೆ.
ಅರ್ಹ ವಿದ್ಯಾರ್ಥಿಗಳಿಗೆ ಈಗಾಗಲೇ ಪತ್ರ ರವಾನಿಸಲಾಗಿದ್ದು ಅಗತ್ಯ ದಾಖಲೆಗಳೊಂದಿಗೆ ಕೌನ್ಸೆಲಿಂಗ್ ಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಹನ ಚಾಲನಾ ತರಬೇತಿಗೆ ಪಜಾ, ಪಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 - ಪ್ರಾದೇಶಿಕ ಸಾರಿಗೆ ಇಲಾಖೆಯು ಲಘು ಹಾಗೂ ಭಾರೀ ವಾಹನ ಚಾಲನಾ ತರಬೇತಿ ನೀಡಲಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಲಘು ಮೋಟಾರು ವಾಹನ ಚಾಲನೆ ತರಬೇತಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. ಭಾರೀ ವಾಹನ ತರಬೇತಿಗೆ ಕನಿಷ್ಟ 20 ವರ್ಷ ವಯಸ್ಸಾಗಿರಬೇಕು ಮತ್ತು ಲಘು ಮೋಟಾರು ವಾಹನ ಪರವಾನಗಿ ಪಡೆದು ಒಂದು ವರ್ಷ ತುಂಬಿರಬೇಕು. ತರಬೇತಿಗೆ ತಗಲುವ ವೆಚ್ಚದಲ್ಲಿ ಶೇ. 25ರಷ್ಟನ್ನು ಅಭ್ಯರ್ಥಿಗಳು ಭರಿಸಬೇಕು. ಅರ್ಜಿಯನ್ನು ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಈಗಾಗಲೇ ವಿತರಿಸುತ್ತಿದ್ದು ಮೇ 27ರವರೆಗೂ ಬೆಳಿಗ್ಗೆ 11 ರಿಂದ 1.30ರ ಗಂಟೆಯವರೆಗೆ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಮೇ 31 ಕಡೆಯ ದಿನವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ ಲೈನ್ ಮೂಲಕವೂ ಕೌಶಲ ಯೋಜನೆ ನೋಂದಣಿಗೆ ಅವಕಾಶ
ಚಾಮರಾಜನಗರ, ಮೇ. 19 :- ಮುಖ್ಯಮಂತ್ರಿಗಳ ಕರ್ನಾಟಕ ಕೌಶಲ್ಯ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯವನ್ನು ಮೇ 22ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು ಹೆಚ್ಚಿನ ಯುವಜನರು ಪ್ರಯೋಜನ ಪಡೆಯಲು ಅವಕಾಶವಿದೆ.ನೊಂದಣಿಗೆ ಬರುವ ಯುವ ಅಭ್ಯರ್ಥಿಗಳು ಆಧಾರ್, ಮೊಬೈಲ್ ಸಂಖ್ಯೆ ಹಾಗೂ ಇ ಮೇಲ್ ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅಗತ್ಯ ದೃಢೀಕರಣ ಪತ್ರದೊಂದಿಗೆ ಬರುವ ಅಭ್ಯರ್ಥಿಗಳನ್ನು ನೋಂದಾಯಿಸಲಾಗುತ್ತದೆ. ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕವೂ ಸಹ ನೋಂದಾಯಿಸಬಹುದಾಗಿದೆ. ತಿತಿತಿ.ಞಚಿushಚಿಟಞಚಿಡಿ.ಛಿom ಹಾಗೂ ಮೊಬೈಲ್ ಆಪ್ ಉಇಖಿ ಏ ಏಂUSಊಂಐಏಂಖಒಔಃIಐಇ ಂPP ಔಓ>ಉಔಔಉಐಇPಐಂಙ ಮುಖಾಂತರ ನೋಂದಣಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಹಸೀಲ್ದಾರ್ ಕೆ. ಪುರಂಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment