ಬಿತ್ತನೆ ಕೆಲಸ ಪ್ರಾರಂಭಿಸಲು ಜಿಲ್ಲಾಧಿಕಾರಿ ಮನವಿ
ಚಾಮರಾಜನಗರ, ಮೇ.23 :- ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು, ಬೆಳೆಗಾರರು ಬಿತ್ತನೆ ಕೆಲಸ ಪ್ರಾರಂಭಿಸಿ, ಹೆಚ್ಚು ಆಹಾರ ಉತ್ಪನ್ನ ಬೆಳೆಗಳನ್ನು ಬೆಳೆಯಲು ಜಿಲ್ಲಾಧಿಕಾರಿ ಬಿ.ರಾಮು ಅವರು ಮನವಿ ಮಾಡಿದ್ದಾರೆ.ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ಜಮೀನಗಳನ್ನು ಹದ ಮಾಡಿಕೊಂಡು ಬಿತ್ತನೆ ಕೆಲಸ ಪ್ರಾರಂಭಿಸದೇ ಋತುಮಾನವನ್ನು ಕಾದುಕೊಂಡಿರುವುದು ಮೆಲ್ನೊಟಕ್ಕೆ ಕಂಡುಬಂದಿದೆ. ಋತುಮಾನವನ್ನು ಕಾಯುವ ಬದಲಾಗಿ ಮಳೆ ಬಂದಿರುವ ಸಂದರ್ಭದಲ್ಲಿ ಬಿತ್ತನೆ ಮಾಡಬೇಕಿದೆ.
ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತಲೂ ವಾಸ್ತಾವ ಮಳೆ ಅಧಿಕವಾಗಿದ್ದರೂ ಇದುವರೆಗೆ ಬಿತ್ತನೆ ಕೆಲಸ ಚುರುಕಾಗದೇ ಇರುವುದು ವಿಷಾದನೀಯ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ವಿರುದ್ದವಾಗಿದೆ.
ಆದ್ದರಿಂದ ಬಿತ್ತನೆ ಮಾಡದೇ ಇರುವವರಿಗೆ ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಸೆಕ್ಷನ್ 84ರ ರೀತ್ಯಾ ನೋಟೀಸ್ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಕೆಲಸ ಪ್ರಾರಂಭಿಸಿ ಹೆಚ್ಚು ಪ್ರಮಾಣದಲ್ಲಿ ಆಹಾರ ಉತ್ಪನ್ನಗಳನ್ನು ಬೆಳೆಯುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ
ಅರ್ಜಿ ಸಲ್ಲಿಕೆಗೆ ಅವಕಾಶಚಾಮರಾಜನಗರ, ಮೇ. 23 - ಕೊಳ್ಳೇಗಾಲ ತಾಲೂಕಿನ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮಾಹಿಕ ವಿವಾಹವನ್ನು ಜೂನ್ 11ರಂದು ಏರ್ಪಡಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣವಾಗಿರಬೇಕು. ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಅಥವಾ ಮೂಳೆ ತಜ್ಞರಿಂದ ದೃಢೀಕರಣ ಪತ್ರ ಲಗತ್ತಿಸಿರಬೇಕು. ವರ ವಧುವಿನ ಭಾವಚಿತ್ರ, ಜಾತಿ ದೃಢೀಕರಣ ಪತ್ರ, ಮದುವೆ ಆಗಿರದ ಬಗ್ಗೆ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಸಂಸ್ಥೆಗಳಿಂದ ಪತ್ರ ಪಡೆದು ಲಗತ್ತಿಸಬೇಕು. ಎರಡನೇ ಮದುವೆ ಅಥವಾ ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವಧುವಿಗೆ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ, ರವಿಕೆ, ವರನಿಗೆ ಪಂಚೆ, ಶರ್ಟು, ಟವಲ್ ಅನ್ನು ಪ್ರಾಧಿಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತದೆ. ವಧೂವರನ ಕಡೆಯವರು ತಲಾ 10 ಜನಕ್ಕೆ ಮೀರದಂತೆ ಇರಬೇಕು. ಪ್ರಾಧಿಕಾರದ ವತಿಯಿಂದ ವಸತಿ ಊಟದ ವ್ಯವಸ್ಥೆ ಮಾಡಲಾಗುತ್ತದೆ.
ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿರುವ ಮಲೆಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಜೂನ್ 6ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 8277244893, 9480215865 ಹಾಗೂ 08225-272128 ಸಂಪರ್ಕಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 23- ಹನೂರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ವಸತಿ ಕಾಲೇಜಿಲ್ಲಿ ಪ್ರಥಮ ಹಾಗೂ ದ್ವಿತೀಯ ಪದವಿಪೂರ್ವ ವಿಜ್ಞಾನ ಶಿಕ್ಷಣಕ್ಕೆ ಅವಕಾಶವಿದೆ. ಪಿಸಿಎಂಬಿ, ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವಕಾಶವಿದೆ.
ಜಿಲ್ಲಾ ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಗಣಿತ, ವಿಜ್ಞಾನ, ಇಂಗ್ಲೀಷ್ ವಿಷಯಗಳಲ್ಲಿ ಶೇ.60ಕ್ಕಿಂತ ಹೆಚ್ಚು ಗಳಿಸಿದ ಅಂಕಗಳ ಆಧಾರದ ಮೇಲೆ ಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುತ್ತದೆ. ಅರ್ಜಿಯನ್ನು ಗುಂಡ್ಲುಪೇಟೆ ತಾಲೂಕಿನ ಯರವನಹಳ್ಳಿ, ಕೊಳ್ಳೇಗಾಲ ತಾಲೂಕಿನ ಹನೂರು, ಚಾ.ನಗರ ತಾಲೂಕಿನ ಉಮ್ಮತ್ತೂರು, ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗೇಟ್‍ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾ¯ ಹಾಗೂ ಹನೂರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಕಾಲೇಜು, ಕೊಳ್ಳೇಗಾಲ ಪಟ್ಟಣದ ತಿಮ್ಮರಾಜಿಪುರ, ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿರುವ ಕಿತ್ತೂರುರಾಣಿ ಚನ್ನಮ್ಮ ವಸತಿಶಾಲೆಯಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಕೆಗೆ ಮೇ 27 ಕಡೆಯ ದಿವವಾಗಿÀದೆ. ಹೆಚ್ಚಿನ ಮಾಹಿತಿಯನ್ನು ಆಯಾ ವಸತಿ ನಿಲಯದ ಪ್ರಾಂಶುಪಾಲರು, ಅಥವಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಅರ್ಜಿಯನ್ನು ಆನ್ ಲೈನ್ ನಲ್ಲಿ ಸಹ ತಿತಿತಿ.ಞಡಿeಟs.ಞಚಿಡಿ.ಟಿiಛಿ.iಟಿ ಮೂಲಕ ಪಡೆಯಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ವಜ್ಞನ ತ್ರಿಪದಿ ವಿಚಾರ ಸಾರ್ವಕಾಲಿಕ : ಎಸ್.ಜಯಣ್ಣ
ಚಾಮರಾಜನಗರ, ಮೇ.23 :- ಕವಿ ಸರ್ವಜ್ಞ ರವರು ಸಮಾಜದ ಅಂಕು-ಡೊಂಕುಗಳನ್ನು ಅತ್ಯಂತ ಸಹಜವಾಗಿ ತಮ್ಮ ತ್ರಿಪದಿಗಳ ಮೂಲಕ ಎಚ್ಚರಿಸುವ ಕೆಲಸ ಮಾಡಿದ್ದಾರೆ ಎಂದು ಶಾಸಕರಾದ ಎಸ್.ಜಯಣ್ಣ ಹೇಳಿದರು.ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಡು ಭಾಷೆಯಲ್ಲಿ ಸಮಾಜದ ಓರೆ-ಕೊರೆಗಳನ್ನು ವಿಡಂಬನತ್ಮಕವಾಗಿ ಹಾಗೂ ಅಷ್ಟೆ ನಿಷ್ಠುರವಾಗಿ ತ್ರಿಪದಿಗಳ ಮೂಲಕ ಜನರಿಗೆ ತಿಳಿಸುವ ಕಾರ್ಯ ನಿರ್ವಹಿಸಿದ್ದಾರೆ. ಸರ್ವಜ್ಞರ ವಿಚಾರ ಮೌಲ್ಯಗಳು ಸಾರ್ವಕಾಲಿಕ ಸತ್ಯವಾಗಿದೆ.
ಕನ್ನಡ ಸಾಹಿತ್ಯ ರಂಗಕ್ಕೆ ಸರ್ವಜ್ಞರ ಕೊಡುಗೆ ಅಪಾರವಾಗಿದೆ ಎಂದು ಜಯಣ್ಣ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಸರ್ವಜ್ಞ ಜಾತಿ ಪದ್ದತಿ, ಅಹಂಕಾರ ತ್ಯಜಿಸಬೇಕೆಂಬ ಮಹತ್ವವನ್ನು ಸಾರಿದರು. ಇಡೀ ಮಾನವ ಕುಲಕ್ಕೆ ಅಮೂಲ್ಯವಾದ ತ್ರಿಪದಿಗಳ ಮೂಲಕ ತಿಳಿವಳಿಕೆ ನೀಡಿದರು. ಅವರ ಜಯಂತಿ ಆಚರಣೆಯು ನಿಜಕ್ಕೂ ಅರ್ಥಪೂರ್ಣವಾಗಿದೆ ಎಂದರು.
ಕುಂಬಾರ ಸಮೂದಾಯವು ಪಾರಂಪರಿಕ ಕಸುಬಿನಿಂದ ತನ್ನದೇ ಆದ ವಿಶಿಷ್ಟವಾದ ಸ್ಥಾನವನ್ನು ಪಡೆದುಕೊಂಡಿದೆ. ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಜಿಲ್ಲಾ ಕೇಂದ್ರದಲ್ಲಿ ಕುಂಬಾರ ಸಮೂದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಹ ತಾವು ಸಿದ್ದರಿರುವುದಾಗಿ ಪುಟ್ಟರಂಗಶೆಟ್ಟಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಮಾತನಾಡಿ ಸರ್ವಜ್ಞ ಅವರು ಎಲ್ಲಾರ ಒಳಿತನ್ನೆ ಬಯಿಸಿ ತಮ್ಮ ತ್ರಿಪದಿಗಳಲ್ಲಿ ಪ್ರತಿಪಾದಿಸಿದ್ದಾರೆ. ಅವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡು ಮುಂದೆ ಸಾಗಬೇಕಿದೆ ಎಂದರು.
ನಗರ ಸಭೆ ಅಧ್ಯಕ್ಷರಾದ ರೇಣುಕಾ ಅವರು ಮಾತನಾಡಿ ಸರ್ವಜ್ಞ ಅವರು ದೇಶ ಪರ್ಯಾಟನೆ ಮಾಡಿ ಪಡೆದುಕೊಂಡ ಅನುಭವಗಳನ್ನು ಹಂಚಿಕೊಂಡರು. ಸಮಾಜದ ಆಗು-ಹೋಗುಗಳ ಬಗ್ಗೆ ಎಚ್ಚರಿಸುತ್ತಾ, ಉತ್ತಮ ಮಾರ್ಗದಲ್ಲಿ ನಡೆಯುವ ಬಗ್ಗೆ ಮಾರ್ಗದರ್ಶನವನ್ನು ಮಾಡಿದ್ದಾರೆ. ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಗೆ ಅವರ ತ್ರಿಪದಿಯಲ್ಲಿನ ಮೌಲ್ಯಗಳು ಅರಿವು ಮೂಡಿಸಲಿದೆ ಎಂದರು.
ಜಿಲ್ಲಾಪಂಚಾಯತ್ ಸದಸ್ಯರಾದ ಸಿ.ಎನ್.ಬಾಲರಾಜು ಅವರು ಮಾತನಾಡಿ ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಹೇಳದ ವಿಚಾರವಿಲ್ಲ ಎಂಬ ನಾಣ್ನುಡಿಯಿದೆ. ಸರ್ವಜ್ಞ ಅವರು ಎಲ್ಲಾ ಕ್ಷೇತ್ರಗಳಿಗೂ ತಮ್ಮದೇ ಆದ ದಾಟಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ಅವರ ತ್ರಿಪದಿಗಳ ಮೂಲಕ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಾಂಶುಪಾಲರಾದ ಮಹೇಶ ಹರವೆ ಮುಖ್ಯ ಭಾಷಣ ಮಾಡಿದರು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೆಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗವೇಣಿ, ಕುಂಬಾರ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸರ್ವಜ್ಞರ ಭಾವಚಿತ್ರ ಮೆರವಣಿಗೆಗೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಚಾಮರಾಜೇಶ್ವರ ದೇವಾಲಯ ಬಳಿ ಚಾಲನೆ ನೀಡಿದರು.
***************************************************
ವಡಗೆರೆಯ ಸುತ್ತಮುತ್ತ ಚಿರತೆ: ಗ್ರಾಮಸ್ಥರಲ್ಲಿ ಆತಂಕ, ಅರಣ್ಯ ಇಲಾಖೆ ನಿರ್ಲಕ್ಷ್ಯ: ಆರೋಪ
ಯಳಂದೂರು: ತಾಲ್ಲೂಕಿನ ವಡಗೆರೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ.ಅರಣ್ಯ ಇಲಾಖೆ ನಿರ್ಲಕ್ಷ್ಯ ರೈತರ ಆರೋಪ: ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿ ಮಹಾದೇವಯ್ಯ ಚಿರತೆ ನಿತ್ಯ ಪ್ರಯಾಣ ಮಾಡುತ್ತಿರುತ್ತದೆ. ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅದಕ್ಕೆ ತೊಂದರೆ ನೀಡಬೇಡಿ ಎಂದು ಹೇಳಿ ಹೋಗಿದ್ದಾರೆ. ಆದರೆ ಕಳೆದ ಮೂರು ತಿಂಗಳಿಂದಲೂ ಈ ಭಾಗದಲ್ಲಿ ಚಿರತೆ ಇದೆ. ಕರಿಕಲ್ಲಿನ ಕ್ವಾರಿಯ ಬಳಿ ಎರಡು ಮರಿಗಳೊಂದಿಗೆ ಕಾಣಿಸಿಕೊಂಡಿದೆ. ನಾಯಿ, ಕುರಿ, ಕೋಳಿಗಳ ಮೇಲೂ ಧಾಳಿ ಮಾಡಿದೆ. ಆದರೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅವರು ರೈತರ ಪರ ಮಾತನಾಡುತ್ತಿಲ್ಲ. ಹಾರಿಕೆಯ ಉತ್ತರಗಳನ್ನು ನೀಡುತ್ತಾರೆ. ಕಡು ಪ್ರಾಣಿಗಳಿಗೆ ತೊಂದರೆ ಮಾಡಬೇಡಿ ಎಂದು ಹೇಳುತ್ತಾರೆ. ಆದರೆ ರೈತರು ಬರದ ಪರಿಸ್ಥಿತಿಯಲ್ಲಿ ಬೆಳೆಗಳನ್ನು ಕಾಯಲು ಹಗಲು ರಾತ್ರಿ ಎನ್ನದೆ ಜಮೀನಿನಲ್ಲೇ ಇರುತ್ತಾರೆ. ಬೋನು ತಂದು ಇದನ್ನು ಹಿಡಿಯುವ ಬದಲು ಇಂತಹ ಉತ್ತರ ನೀಡುತ್ತಿರುವ ಇಲಾಖೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂಬುದು ರೈತರಾದ ಮಹಾದೇವಯ್ಯ, ಶಿವನಂಜ, ರಮೇಶ, ಸುಂದರ್ ರವರ ದೂರು.
ಪೋಟೋ ಶೀರ್ಷಿಕೆ (ಎ) ಯಳಂದೂರು ತಾಲ್ಲೂಕಿನ ವಡಗೆರೆ ಗ್ರಾಮದ ಬಳಿ ಇರುವ ಬಸವರಾಜು ಎಂಬುವವರ ಜಮೀನಿನಲ್ಲಿ ಕಾಣಿಸಿಕೊಂಡಿರುವ ಚಿರತೆಯ ಹೆಜ್ಜೆ ಗುರುತು,
No comments:
Post a Comment