Monday, 29 May 2017

29-05-2017 ಚಾ.ನಗರ : ಜೂ. 1ರಿಂದ ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾರ

ಚಾ.ನಗರ : ಜೂ. 1ರಿಂದ ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾರ


ಚಾಮರಾಜನಗರ, ಮೇ 29 - ಚಾಮರಾಜನಗರ ನಗರಸಭೆ ವತಿಯಿಂದ 2016-17ನೇ ಸಾಲಿನ ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ (ಡೇ ನಲ್ಮ್) ಬೀದಿಬದಿ ವ್ಯಾಪಾರಸ್ಥರಿಗೆ ಜೂನ್ 1 ರಿಂದ 6ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಐದು ದಿನಗಳ ಕಾಲ ತರಬೇತಿ ಕಾರ್ಯಾಗಾರ ಏರ್ಪಡಿಸಿದೆ.
ಕಾರ್ಯಾಗಾರವು ಜೂನ್ 1ರಂದು ಜಿಲ್ಲಾಡಳಿತ ಭವನದ ಹಳೆಯ ಕೆಡಿಪಿ ಸಭಾಂಗಣದಲ್ಲಿ ಹಾಗೂ ಜೂನ್ 2 ರಿಂದ 6ರವರೆಗೆ ನಗರದ ಜೋಡಿ ರಸ್ತೆಯಲ್ಲಿರುವ ಸಿಡಿಎಸ್ ಸಮುದಾಯ ಭವನದಲ್ಲಿ ನಡೆಯಲಿದೆ.
ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಹಾಗೂ ಇತರೆ ಹಿಂದುಳಿದ ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವುದರ ಜತೆಗೆ ಕೌಶಲ್ಯಾಭಿವೃದ್ಧಿ, ಕಿರು ಉದ್ದಿಮೆ ಸ್ಥಾಪನೆಗೆ ನೆರವು, ಬ್ಯಾಂಕುಗಳೊಂದಿಗೆ ಸಂಪರ್ಕ ಸಾಧಿಸುವುದರ ಜತೆಗೆ ಸಾಲಸೌಲಭ್ಯ ಒದಗಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.
ತರಬೇತಿಗೆ ಹಾಜರಾಗುವ ಬೀದಿಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ತರಬೇಕು. ಭಾಗವಹಿಸುವ ಬೀದಿಬದಿ ವ್ಯಾಪಾರಸ್ಥರಿಗೆ ಒಂದು ದಿನದ ಕನಿಷ್ಠ ಕೂಲಿಯನ್ನು ನೀಡಲಾಗುವುದು.
ಬೀದಿಬದಿ ವ್ಯಾಪಾರಸ್ಥರು ಕಾರ್ಯಾಗಾರದ ಸದುಪಯೋಗ ಮಾಡಿಕೊಳ್ಳುವಂತೆ ನಗರಸಭೆ ಪೌರಾಯುಕ್ತ ರಾಜಣ್ಣ ತಿಳಿಸಿದ್ದಾರೆ.

ಜೂ. 3ರಂದು ನಗರದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ

ಚಾಮರಾಜನಗರ, ಮೇ 29:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಜೂನ್ 3ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೊಳ್ಳೇಗಾಲದ ಇಂದ್ವಾಡಿ ಶಿವಣ್ಣ ಅವರು ಮುಖ್ಯ ಭಾಷಣ ಮಾಡುವರು. ದೊಡ್ಡಿಂದುವಾಡಿಯ ವಿದ್ವಾನ್ ಮಹಾಂತಯ್ಯ ಮತ್ತು ತಂಡದಿಂದ ವಚನ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜೂ. 6ರಂದು ನಗರದಲ್ಲಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಚಾಮರಾಜನಗರ, ಮೇ 29 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜೂನ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಪಿರಿಯಾಪಟ್ಟಣದ ಹಾರನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನೀಗೂ ರಮೇಶ್ ಅವರು ಮುಖ್ಯ ಭಾಷಣ ಮಾಡುವರು. ತೆರಕಣಾಂಬಿಯ ಸಿದ್ದನಗೌಡ ಬಿ. ಪಾಟೀಲ್ ಅವರಿಂದ ವಚನ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ : ಅರ್ಜಿ ಆಹ್ವಾನ

ಚಾಮರಾಜನಗರ, ಮೇ 29 - ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿನಿರತ ಕೈಗಾರಿಕಾ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರವನ್ನು ನಿರ್ಮಾಣ ಮಾಡಿಕೊಡುವ ಸಲುವಾಗಿ ವೃತ್ತಿಪರ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿದಿರು, ಬೆತ್ತ, ಬಡಗಿ, ಕಮ್ಮಾರಿಕೆ, ಚರ್ಮಗಾರಿಕೆ, ಕರಕುಶಲ ವಸ್ತು ತಯಾರಿಕೆ, ತೆಂಗಿನ ನಾರಿನ ಉತ್ಪನ್ನ, ಕುಂಬಾರಿಕೆ, ಜೀನ್ಸ್ ಹೊಲಿಗೆ, ಬೆಳ್ಳಿ ಬಂಗಾರ ಆಭರಣ ತಯಾರಿಕೆ, ಖಾದಿ ಕೈಮಗ್ಗ ನೇಯ್ಗೆ (ಹತ್ತಿ, ರೇಷ್ಮೆ, ಪಾಲಿಸ್ಟರ್), ನೂಲುಗಾರರು, ಕೌದಿ ಹೊಲೆಯುವುದು, ಜನರಲ್ ಎಂಜಿನಿಯರಿಂಗ್, ಚಾಪೆ, ಬುಟ್ಟಿ ಹೆಣೆಯುವಿಕೆ, ತೆಂಗಿನ ನಾರಿನ ಹಗ್ಗ ತಯಾರಿಕೆ (ಪ್ಲಾಸ್ಟಿಕ್ ಹೊರತುಪಡಿಸಿ), ಅಗರಬತ್ತಿ, ಕಸೂತಿ, ಎಂಬ್ರಾಯಿಡರಿ, ಎತ್ತಿನಗಾಡಿ ತಯಾರಿಕೆ, ಕಲ್ಲಿನ ಕೆತ್ತನೆ, ಇತರೆ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ಒಟ್ಟು 2 ಲಕ್ಷದ 50 ಸಾವಿರ ರೂ. ವೆಚ್ಚದಲ್ಲಿ ವಸತಿ ಕಾರ್ಯಾಗಾರ ನಿರ್ಮಿಸಿಕೊಡಲಿದ್ದು ಫಲಾನುಭವಿಗಳು 30 ಸಾವಿರ ರೂ. ವಂತಿಕೆಯನ್ನು ಭರಿಸಬೇಕಿದೆ.
ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿಗೆ ಜೂನ್ 6ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ (ದೂ.ಸಂ. 08226-224915) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಹಕಾರ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ 29 :- ಮೈಸೂರಿನ ಕರ್ನಾಟಕ ಇನ್ಸ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್  ಮ್ಯಾನೇಜ್‍ಮೆಂಟ್ ವತಿಯಿಂದ 6 ತಿಂಗಳ ಅವಧಿಯ ಡಿಪ್ಲಮೋ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ, ಇತರೆ ಸಹಕಾರ ಸಂಘ ಬ್ಯಾಂಕುಗಳ ಉದ್ಯೋಗ ಅವಕಾಶಕ್ಕೆ ಆದ್ಯತೆ ಕಲ್ಪಿಸಲಾಗಿದೆ. ಕೋರ್ಸ್‍ನ ಪಠ್ಯಕ್ರಮವು ಕೆಎಎಸ್ ಪರೀಕ್ಷೆಯ ಸಹಕಾರ ಮತ್ತು ಗ್ರಾಮೀಣಾಭಿವೃದ್ಧಿ ವಿಷಯ, ಸಹಕಾರ ಇಲಾಖೆಯ ಸಹಕಾರಿ ನಿರೀಕ್ಷಕರು, ಇನ್ನಿತರ ಹುದ್ದೆಗಳ ನೇಮಕಾತಿ ಪರೀಕ್ಷೆಗೂ ಅನುಕೂಲವಾಗಲಿದೆ.
ಅಭ್ಯರ್ಥಿಗಳು ಕನಿಷ್ಠ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ತರಬೇತಿ ಅವಧಿಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 400 ರೂ., ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 500 ರೂ. ಅನ್ನು ಶಿಷ್ಯ ವೇತನವಾಗಿ ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿಯನ್ನು ಮೈಸೂರಿನ ಚಾಮರಾಜ ಜೋಡಿರಸ್ತೆಯಲ್ಲಿರುವ ಸಹಕಾರ ಭವನದಿಂದ ಪಡೆದು ಶೀಘ್ರವೇ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2520563 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮೇ. 31ರಂದು ವಿಶ್ವ ತಂಬಾಕು ರಹಿತ ದಿನ : ಜಾಗೃತಿ ಜಾಥಾ


ಚಾಮರಾಜನಗರ, ಮೇ 29 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ತಂಬಾಕು ರಹಿತ ದಿನ ಆಚರಣೆ ಸಂಬಂಧ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಜಾಗೃತಿ ಜಾಥಾವನ್ನು ಏರ್ಪಡಿಸಲÁಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ್ಲ ತಿಳಿಸಿದ್ದಾರÉ.


ಮೇ 30 ರಂದು ಜಿಲ್ಲೆಯಲ್ಲಿ ಲೋಕಸಭಾ ಸದಸ್ಯರ ಪ್ರವಾಸ

ಚಾಮರಾಜನಗರ, ಮೇ 29 :- ಲೋಕಸಭಾ ಸದಸ್ಯರಾದ ಆರ್. ದ್ರುವನಾರಾಯಣ ಅವರು ಮೇ 30ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದಲ್ಲಿ ರಾಮ ಮಂದಿರ ಕಟ್ಟಡ ಉದ್ಘಾಟನೆ, ಲಿಂಗರಾಜಪುರದಲ್ಲಿ ಉಪ್ಪಾರ ಸಮುದಾಯ ಭವನ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು