Tuesday, 30 May 2017

30-05-2017 *ಮೆಡಿಕಲ್ ಸ್ಟೊರ್ ಬಂದ್,ಪರದಾಡಿದ ರೋಗಿಗಳು, ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಕುಂದುಕೊರತೆ ಆಲಿಕೆ

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:- ದಿನಾಂಕ:30-05-2017ರ ಮಂಗಳವಾರದಂದು ಬೆಳಿಗ್ಗೆ  7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಎಂ.ಗಾಯತ್ರಿ, ಕೆ.ಎ.ಎಸ್.(ಹಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ ಶ್ರೀ ಮ.ಮ. ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ  ಪ್ರಭಾರ  ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು  ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,  ಕಛೇರಿಯ ಅಧೀಕ್ಷಕರಾದ  ಶ್ರೀ ಬಿ.ಮಾದರಾಜು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀ ಷಣ್ಮುಗ ವರ್ಮ, ಆರಕ್ಷಕ ನಿರೀಕ್ಷಕರು, ಮಹದೇಶ್ವರಬೆಟ್ಟ ಹಾಗೂ ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.  1,00,11,424/- ( ಒಂದು ಕೋಟಿ ಹನ್ನೊಂದು ಸಾವಿರದ ನಾಲ್ಕು ನೂರ ಇಪ್ಪತ್ತ ನಾಲ್ಕು ರೂಗಳು ಮಾತ್ರ) ಬಂದಿರುತ್ತದೆ. ಇದಲ್ಲದೇ ಚಿನ್ನದ  ಪದಾರ್ಥಗಳು 0. 038 ( ಮೂವತ್ತೆಂಟು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 0.800(ಎಂಟುನೂರು ಗ್ರಾಂ) ದೊರೆತಿರುತ್ತದೆ. 

**************************************

ಜಿಲ್ಲಾಸ್ಪತ್ರೆ ಅವ್ಯವಸ್ಥೆ, ಬೀದಿಗೆ ಬಂದ ಬಿ.ಜೆ.ಪಿ. 

 ವರದಿ.ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ; ಜಿಲ್ಲಾಸ್ಪತ್ರೆಯಲ್ಲಿ‌ ವೈದ್ಯರು ಹಣ ಪಡೆದುಕೊಳ್ಳದೆ ಚಿಕಿತ್ಸೆ ನೀಡೋದಿಲ್ಲ ಎಂದು ಆರೋಪಿಸಿ ಬಿ.ಜೆ.ಪಿ ಘಟಕ‌ವತಿಯಿಂದ ಇಂದು ಪ್ರತಿಭಟಿಸಿದರು. ಸರ್ಕಾರ, ಜಿಲ್ಲಾ ಆರೋಗ್ಯ ಅದಿಕಾರಿ, ಆರೋಗ್ಯ ಸಚಿವ ಹಾಗೂ ‌‌ಉಸ್ತುವಾರಿ ಸಚಿವರಿಗೆ ದಿಕ್ಕಾರ ಘೋಷಣೆ ಕೂಗಿ ಪ್ರತಿಭಟಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಸರಿಯಾಗಿ ವೈದ್ಯರಿಲ್ಲ. ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಔಷದಿಯನ್ನ ಅಂಗಡಿಗೆ ಬರೆದುಕೊಡುತ್ತಿದ್ದಾರೆ ಎಂದು ಆರೊಪಿಸಿದರು

*ಮೆಡಿಕಲ್ ಸ್ಟೊರ್ ಬಂದ್,ಪರದಾಡಿದ ರೋಗಿಗಳು, 

ಜನರಿಕ್ ಔಷದಿ ಮಳಿಗೆಗೆ ಹೆಚ್ಚಿದ ಬೇಡಿಕೆ*

 ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ

 ಚಾಮರಾಜನಗರ :‌ಬೇಡಿಕೆ ಈಡೇರಿಕೆಗಾಗಿ ಇಂದು ನಡೆಸುತ್ತಿರುವ ಮೆಡಿಕಲ್ ಸ್ಟೋರ್ ಬಂದ ಯಶಸ್ವಿಯಾಗಿದೆ. ಔಷದಿ ಕೊಂಡುಕೊಳ್ಳಬೇಕಾದ ರೋಗಿಗಳು ಪರದಾಡುತ್ತಿದ್ದು ಒಂದೆಡೆಯಾದರೆ ಇತ್ತ ಜಿಲ್ಲಾಸ್ಪತ್ರೆಯಲ್ಲಿ ನ ಜನರಿಕ್ ಅಂಗಡಿ ಮಳಿಗೆ ಪುಲ್ ಭರ್ತಿಯಾಗಿದೆ.
ವೈದ್ಯರು ಬರೆದುಕೊಟ್ಟ ಪ್ರಿಸ್ಕ್ರಿಪ್ಸನ್ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕಾದ ಇ ಪೊರ್ಟಲ್ ಹಾಗೂ ಆನ್ ಲೈನ್ ಮಾರಾಟ ವ್ಯವಸ್ಥೆ ರದ್ದು ಮಾಡಬೇಕೆಂಬ ಬೇಡಿಕೆಯಿಟ್ಟು ಅಂಗಡಿ ಬಾಗಿಲು ಹಾಕಿ ಪ್ರತಿಭಟಿಸುತ್ತಿದ್ದಾರೆ. ಇತ್ತ ಔಷದ ನಿಯಂತ್ರಣಾದಿಕಾರಿಯವರಿಗೆ ಜಿಲ್ಲಾದಿಕಾರಿ‌ ಮುಖಾಂತರ ಮನವಿ ಪತ್ರ ಬಂದಿದ್ದು ತೊಂದರೆಯಾಗದಂತೆ ಕ್ರಮವಹಿಸಿ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅಂಗಡಿ ಮಾಲೀಕರಾದ ಗಗನ್ ಮೆಡಿಕಲ್ ನ ಶಿವಕುಮಾರ್ ಸಂಪರ್ಕಿಸಲಾಗಿ ಸಂಘದ ಮನವಿಯಂತೆ ನಾವು ಬಂದ್ ಮಾಡಿ ಬೆಂಬಲ ಸೂಚಿಸುತ್ತಿದ್ದೇವೆ ಎಂದರು

ಮೇ. 31ರಂದು ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಕುಂದುಕೊರತೆ ಆಲಿಕೆ

ಚಾಮರಾಜನಗರ, ಮೇ. 30 :- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಮೇ 31ರಂದು ಬೆಳಿಗ್ಗೆ9.30 ರಿಂದ 10.30 ಗಂಟೆಯವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವರು.
ನಾಗರಿಕರು ಯಾವುದೇ ಸಮಸ್ಯೆ, ಕುಂದುಕೊರತೆಗಳಿದ್ದಲ್ಲಿ ಉಸ್ತುವಾರಿ ಸಚಿವರನ್ನು ನೇರವಾಗಿ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೇ. 31ರಂದು ಗುಂಡ್ಲುಪೇಟೆ ತಾಲೂಕಿನಲ್ಲಿ ಲೋಕಸಭಾ ಸದಸ್ಯರ ಪ್ರವಾಸ

ಚಾಮರಾಜನಗರ, ಮೇ 30 - ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮೇ 31ರಂದು ಗುಂಡ್ಲುಪೇಟೆ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಮುಂಟಿಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಕಟ್ಟಡ, ಭೀಮನಬೀಡುವಿನಲ್ಲಿ ಹೆಚ್ಚುವರಿ ಶಾಲಾ ಕೊಠಡಿ ಹಾಗೂ ಅಣ್ಣೂರುಕೇರಿಯಲ್ಲಿ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಜೂ. 2ರಂದು ಚಿತ್ರ ಬರೆಯುವ ಸ್ಪರ್ಧೆ
ಚಾಮರಾಜನಗರ, ಮೇ 30 :- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶಾಲಾ ಮಕ್ಕಳಿಗಾಗಿ ಪರಿಸರ ಕುರಿತು ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆಯನ್ನು ಜೂನ್ 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ (ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ) ಏರ್ಪಡಿಸಲಾಗಿದೆ.
ಕಿರಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧಿಗಳಿಗೆ ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುತ್ತದೆ. ಬಣ್ಣ ಇನ್ನಿತರ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು.
ಆಸಕ್ತರು ಸ್ಥಳದಲ್ಲಿಯೇ ಹೆಸರು ನೊಂದಾಯಿಸಬಹುದು. ವಿವರಗಳಿಗೆ ಉಪ ಪರಿಸರ ಅಧಿಕಾರಿ ಪಿ.ಕೆ. ಉಮಾಶಂಕರ್ (ಮೊ.9448160267, ಕಚೇರಿ ದೂ.ಸಂ. 08226-223846) ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಸರ ಅಧಿಕಾರಿ ಬಿ.ಎಂ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಸಾಲ

ಚಾಮರಾಜನಗರ, ಮೇ 30 - ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಸಿಇಟಿಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳ ಪ್ರವರ್ಗ 1, ಪ್ರವರ್ಗ 2ಎ (ವಿಶ್ವಕರ್ಮ ಮತ್ತು ಉಪಜಾತಿ ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ), ಪ್ರವರ್ಗ 3ಎ, 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ. ಮಿತಿಯೊಳಗಿರಬೇಕು.
ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ  ನೋಡಬಹುದು. ಅರ್ಜಿ ಸಲ್ಲಿಕೆಗೆ ಜೂನ್ 9 ಕಡೆಯ ದಿನ.
ಹೆಚ್ಚಿನ ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ (ದೂ.ಸಂ. 08226-223587) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಚಾ.ನಗರ ತಾಲೂಕು : ವಿದ್ಯಾರ್ಥಿನಿಲಯ, ಆಶ್ರಮಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ 30 :- ಚಾಮರಾಜನಗರ ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಆಶ್ರಮ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಚಾಮರಾಜನಗರ ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುವವರು ಪ್ರವೇಶ ಪಡೆಯಬಹುದು. ಅಲ್ಲದೆ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಇತರೆ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವವರು ಪ್ರವೇಶ ಪಡೆಯಬಹುದು.
ಪುಣಜನೂರು, ಬೇಡಗುಳಿ, ರಂಗಸಮುದ್ರ, ಕೆ.ಗುಡಿ, ಮುರಟಿಪಾಳ್ಯ, ಕೋಳಿಪಾಳ್ಯದಲ್ಲಿರುವ ಗಿರಿಜನ ಆಶ್ರಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ.
ಪರಿಶಿಷ್ಟ ವರ್ಗ, ಇತರೆ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯ, ಆಶ್ರಮಶಾಲೆ ಅಥವಾ ನಗರದ ಖಾಸಗಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಜೂನ್ 9ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸದರಿ ಕಚೇರಿ (ದೂ.ಸಂ. 08226-223823) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಗತಿ


ಚಾಮರಾಜನಗರ, ಮೇ 30 :- 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಗತಿಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಲಿದೆ.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಕೊಳ್ಳೇಗಾಲದ ಎಸ್ ವಿಕೆ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಗುಂಡ್ಲುಪೇಟೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ನೋಡಲ್ ಕೇಂದ್ರಗಳಾಗಿವೆ.
ವಿಶೇಷ ತರಬೇತಿಗಳು ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳು ನೋಡಲ್ ಕೇಂದ್ರಗಳಲ್ಲಿ ಹೆಸರು ನೊಂದಾಯಿಸಿ ತರಗತಿಗೆ ಹಾಜರಾಗಬಹುದೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೆಜಿನಾ. ಪಿ. ಮಲಾಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು