Friday, 12 May 2017

12-05-2017 ಪಿಯುಸಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸಾಧನೆ: ಜಿಲ್ಲಾ ಉಸ್ತುವಾರಿ ಸಚಿವರ ಅಭಿನಂದನೆ , ಕೊಳ್ಳೇಗಾಲ ಜೆ.ಎಸ್.ಎಸ್ ಬಾಲಕಿಯರ ಕಾಲೇಜಿಗೆ ಶೇ. 84 ರಷ್ಟು ಫಲಿತಾಂಶ.


ಪಿಯುಸಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸಾಧನೆ: ಜಿಲ್ಲಾ ಉಸ್ತುವಾರಿ ಸಚಿವರ ಅಭಿನಂದನೆ 

ಚಾಮರಾಜನಗರ, ಮೇ.12-ಜಿಲ್ಲೆಯು ಈ ಬಾರಿಯ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್‍ರವರು ಅಭಿನಂದಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕಳೆದ ಸಾಲಿನಲ್ಲಿ 27ನೇ ಸ್ಥಾನಕ್ಕೆ ಕುಸಿದಿದ್ದ ಜಿಲ್ಲೆಯು ಈ ಬಾರಿ ಉತ್ತಮ ಫಲಿತಾಂಶ ಪಡೆಯುವ ಮೂಲಕ 12ನೇ ಸ್ಥಾನಕ್ಕೆ ಜಿಗಿದಿದೆ.  ಪಿಯುಸಿ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ ಗಣನೀಯ ಸಾಧನೆ ಮಾಡುವ ಮೂಲಕ 9ನೇ ಸ್ಥಾನಕ್ಕೆ ಬಂದಿದೆ. ಫಲಿತಾಂಶ ಸುಧಾರಣೆಗೆ ಪ್ರಮುಖ ಕಾರಣರಾದ ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ಸಮೂಹ, ಶೈಕ್ಷಣಿಕ ಸಂಸ್ಥೆಗಳ ಆಡಳಿತ ವರ್ಗ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಫಲಿತಾಂಶ ಹೆಚ್ಚಳಕ್ಕೆ ಪಾತ್ರರಾದ ಎಲ್ಲರಿಗೂ ಉಸ್ತುವಾರಿ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
 ಮುಂಬರುವ ಶೈಕ್ಷಣಿಕ ಸಾಲಿನಲ್ಲೂ ಫಲಿತಾಂಶದಲ್ಲಿ ಸಾಕಷ್ಟು ಸಾಧನೆ ಮಾಡುವ ಮೂಲಕ ಜಿಲ್ಲೆಯು ಅಗ್ರ ಸ್ಥಾನದಲ್ಲಿ ನಿಲ್ಲಲಿದೆ ಎಂಬ ವಿಶ್ವಾಸವನ್ನು ಉಸ್ತುವಾರಿ ಸಚಿವರು ವ್ಯಕ್ತ ಪಡಿಸಿದ್ದಾರೆ.


ಕೊಳ್ಳೇಗಾಲ ಜೆ.ಎಸ್.ಎಸ್ ಬಾಲಕಿಯರ ಕಾಲೇಜಿಗೆ ಶೇ. 84 ರಷ್ಟು ಫಲಿತಾಂಶ.ಅಶ್ವಿನಿ. ಸಿ. ಜಿಲ್ಲೆಗೆ ಪ್ರಥಮ.

ಕೊಳ್ಳೇಗಾಲ :- ಮೇ 12 - ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಜೆ.ಎಸ್.ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಶೇ.84 ರಷ್ಟು ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಹಾಜರಾದ 188ಗಳ ಪೈಕಿ 155 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಈ ಪೈಕಿ 15 ಮಂದಿ ಅತ್ಯುನ್ನತ ಶ್ರೇಣಿ, 97 ಪ್ರಥಮ ಶ್ರೇಣಿ, 28 ದ್ವಿತೀಯ ಹಾಗೂ 15 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರಲ್ಲಿ ಅಶ್ವಿನಿ.ಸಿ. ವಿಜಾÐನ ವಿಭಾಗದಲ್ಲಿ 600ಕ್ಕೆ 585, ಕನ್ನಡ-97, ಇಂಗ್ಲೀಷ್-95, ಭೌತಶಾಸ್ತ್ರ-98, ರಸಾಯನ ಶಾಸ್ತ್ರ-99, ಗಣಿತ-96, ಜೀವಶಾಸ್ತ್ರ-100 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ,
ಕಲಾ ವಿಭಾಗದಲ್ಲಿ ಶೇ.82 ರಷ್ಟು ಫಲಿತಾಂಶ ಬಂದಿದ್ದು, ಅತ್ಯುತ್ತಮ ಶ್ರೇಣಿ-02, ಪ್ರಥಮ-23, ದ್ವಿತೀಯ ದರ್ಜೆ- 15, ತೃತೀಯ ದರ್ಜೆ-09 ವಿದ್ಯಾರ್ಥಿನಿಯರು ಉತ್ತೀರ್ಣರಾಗಿರುತ್ತಾರೆ.  ಇವರಲ್ಲಿ ಕೋಕಿಲ.(515), ಅರ್ಬಿನ ತಾಜ್ (513) ಅಂಕಗಳನ್ನು ಪಡೆದಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಶೇ.94 ರಷ್ಟು ಫಲಿತಾಂಶ, ಇದರಲ್ಲಿ ಪರೀಕ್ಷೆಗೆ ಹಾಜರಾದ 82 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಈ ಪೈಕೆ 10 ಮಂದಿ ಅತ್ಯುತ್ತಮ ಶ್ರೇಣಿ, 52 ಪ್ರಥಮ ಶ್ರೇಣಿ, 08 ದ್ವೀತೀಯ ಶ್ರೇಣಿ ಹಾಗೂ 06 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಇವರಲ್ಲಿ ಅಂಬಿಕ.ಪಿ (571), ಮಾದಲಾಂಬಿಕ (555), ಅರ್ಪಿತ(552), ಕಾವ್ಯ (548) ಐಶ್ವರ್ಯ(547) ಸುಷ್ಮ(533) ಸೌಂದರ್ಯ(528) ಪ್ರೀತಿ(519), ರತ್ನ (513) ಚೈತ್ರ.ಎಸ್.(512) ಅಂಕಗಳನ್ನು ಪಡೆದಿರುತ್ತಾರೆ.
ವಿಜಾÐನ ವಿಭಾಗದಲ್ಲಿ 03 ಅತ್ಯುತ್ತಮ ದರ್ಜೆ, 20 ಪ್ರಥಮ ದರ್ಜೆ, 05 ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಅಶ್ವಿನಿ.ಸಿ.(585) ಸಾನಿಯಾ.ಐ.(526), ಶೆರ್ಲಿ(515) ಅಂಕಗಳನ್ನು ಪಡೆದಿರುತ್ತಾರೆ.  ಅಶ್ವಿನಿ.ಸಿ ಜೀವಶಾಸ್ತ್ರದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ. ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಯರನ್ನು, ಪೋಷಕರನ್ನು ಹಾಗೂ ಅಧ್ಯಾಪಕರನ್ನು ಆಡಳಿತ ಮಂಡಳಿಯ ವತಿಯಿಂದ ಪ್ರಾಂಶುಪಾಲರು ಅಭಿನಂದಿಸುತ್ತಾರೆ.




 ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಚುನಾವಣೆ:  ಕರಡು ಮತದಾರರ ಪಟ್ಟಿ ಪ್ರಕಟ

ಚಾಮರಾಜನಗರ, ಮೇ. 12 - ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆ ಸಂಬಂಧ ಮತ ಚಲಾಯಿಸಲು ಹಕ್ಕುಳ್ಳ ಅರ್ಹರಾದ ಸದಸ್ಯ ಸಂಘಗಳು ಹಾಗೂ ಹಕ್ಕನ್ನು ಹೊಂದಿರದ ಸದಸ್ಯ ಸಂಘಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಒಕ್ಕೂಟ ಆಡಳಿತ ಮಂಡಳಿ ಚುನಾವಣೆಯು ಜೂನ್ 30ರಂದು ನಿಗಧಿಯಾಗಿದೆ. ಸದರಿ ಕರಡು ಮತದಾರರ ಪಟ್ಟಿಯನ್ನು ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ, ನಗರದ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿ ಹೋಬಳಿಯ ಕುದೇರು ಗ್ರಾಮದಲ್ಲಿರುವ ಜಿಲ್ಲಾ  ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಕಚೇರಿ, ನಗರದ ರಾಮಸಮುದ್ರದಲ್ಲಿರುವ ಹಾಲು ಶೀತಲೀಕರಣ ಕೇಂದ್ರ, ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರಿನಲ್ಲಿರುವ ಹಾಲು ಶೀತಲೀಕರಣ ಕೇಂದ್ರ ಹಾಗೂ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಹಾಲು ಉತ್ಪಾದಕರ ಒಕ್ಕೂಟದ ಉಪ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಈ ಸಂಬಂಧ ಯಾವುದೇ ಆಕ್ಷೇಪಣೆಗಳಿದ್ದಲ್ಲಿ 30 ದಿನಗಳೊಳಗೆ ಲಿಖಿತವಾಗಿ ಕುದೇರು ಗ್ರಾಮದಲ್ಲಿರುವ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲ್ಲಿಸುವಂತೆ ಜಿಲ್ಲಾ ಸಹಕಾರ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 14 ರಂದು ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 12:- ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮೇ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30ಗಂಟೆಗೆ ಮೈಸೂರಿಗೆ ತೆರಳುವರೆಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಮೇ 14 ರಂದು ಉನ್ನತ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 12:- ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಮೇ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು