Monday, 15 May 2017

15-05-2017 ಕೌಶಲ್ಯ ಕರ್ನಾಟಕ ತರಬೇತಿ ನೊಂದಣಿ ವೆಬ್ ಪೋರ್ಟಲ್‍ಗೆ ಚಾಲನೆ ,ಮಾವು ಮಾರಾಟ ಮತ್ತು ಪ್ರದರ್ಶನ,

ಕೌಶಲ್ಯ ಕರ್ನಾಟಕ ತರಬೇತಿ ನೊಂದಣಿ ವೆಬ್ ಪೋರ್ಟಲ್‍ಗೆ ಚಾಲನೆ 



ಚಾಮರಾಜನಗರ, ಮೇ. 15 :- ಮುಖ್ಯಮಂತ್ರಿಗಳ ಕರ್ನಾಟಕ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗಿ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೊಂದಣಿಯ ವೆಬ್ ಪೋರ್ಟಲ್ ಕಾರ್ಯಕ್ರಮಕ್ಕೆ ನಗರದಲ್ಲಿಂದು ಚಾಲನೆ ದೊರೆಯಿತು.
ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇದು ಮುಖ್ಯಮಂತ್ರಿಯವರ ಬಹುದಿನಗಳ ಕನಸಿನ ಯೋಜನೆಯಾಗಿದೆ. ಯುವಕರು ದೇಶದ ಸಂಪತ್ತು. ಇಂದಿನ ಯುವಜನತೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿಗಳ ಜತೆಗೆ ವೃತ್ತಿ ನೈಪುಣ್ಯತೆ, ಕೌಶಲ್ಯ ತರಬೇತಿ ಪಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದರು.

ವಿದ್ಯಾಭ್ಯಾಸ ಮುಗಿಸಿದ ಯುವಕರಿಗೆ ಸರ್ಕಾರಿ ಕೆಲಸವೇ ಬೇಕೆಂದಿಲ್ಲ. ಸರ್ವರು ವೃತ್ತಿ ಕೌಶಲ್ಯ ಶಿಕ್ಷಣ ಪಡೆದು ಸ್ವಉದ್ಯೋಗ ಆರಂಭಿಸಿ ಸ್ವಾವಲಂಬಿಯಾಗಿ ಜೀವನ ನಡೆಸಲು ಅನುಕೂಲ ಮಾಡಿಕೊಡುವ ಸಲುವಾಗಿ ಸರ್ಕಾರವು ಆಧ್ಯತೆ ನೀಡಿದೆ. ಆಧುನಿಕ ತಂತ್ರಜ್ಞಾನ ಬಳಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ನಿಟ್ಟಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಕೌಶಲ್ಯ ಯೋಜನೆಯು ನಿರುದ್ಯೋಗಿ ಯುವಜನರಿಗೆ ಮಾರ್ಗದರ್ಶಿಯಾಗಿದೆ. ಮೊದಲು ಸಂಪನ್ಮೂಲ ಕೇಂದ್ರದಲ್ಲಿ ಹಾಗೂ ಆಯಾ ತಾಲೂಕು ಕೇಂದ್ರಗಳಲ್ಲಿ ಆನ್‍ಲೈನ್ ನೊಂದಣಿ ಮಾಡಿಸಿದ ನಂತರ ಅವರವರÀ ಪ್ರತಿಭೆಗನುಗುಣವಾಗಿ 3ರಿಂದ 6 ತಿಂಗಳು ತÀರಬೇತಿ ನೀಡಿ ಪ್ರಮಾಣಪತ್ರ ವಿತರಿಸಲಾಗುವುದು. ಆಯಾ ತಾಲೂಕು ಹಾಗೂ ಜಿಲ್ಲಾಕೇಂದ್ರಗಳಲ್ಲಿ ಉದ್ಯೋಗ ಮೇಳ ಆಯೋಜಿಸಿ ವಿವಿಧ ಕಂಪನಿ ಮತ್ತು ಕಾರ್ಖಾನೆಗಳಲ್ಲಿ ಉದ್ಯೋಗವಕಾಶ ಕಲ್ಪಿಸÀಲಾಗುವುದು ಎಂದು ಸಚಿವರು ತಿಳಿಸಿದರು.

ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಯವಕ, ಯುವತಿಯರಿಗೆ ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆ ತರಬೇತಿ ಅತ್ಯವಶ್ಯಕವಾಗಿದೆ. ಸಂಪನ್ಮೂಲ ಕೇಂದ್ರದ ಮೂಲಕ ವರ್ಷಕ್ಕೆ 5 ಲಕ್ಷ ಯುವಜನರಿಗೆ ವೃತ್ತಿ ನೈಪುಣ್ಯತೆ ತರಬೇತಿ ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಹೆಚ್ಚಿನ ಕೈಗಾರಿಕೆಗಳನ್ನು ತೆರೆಯುವಂತೆ ಕೈಗಾರಿಕಾ ಸಚಿವರೊಂದಿಗೆ ಈಗಾಗಲೇ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಮುಖ್ಯಮಂತ್ರಿಯವರ ಕರ್ನಾಟಕ ಕೌಶಲ್ಯ ತರಬೇತಿ ಯೋಜನೆಯಡಿ ವೃತ್ತಿ ನೈಪುಣ್ಯತೆಯ ಕೆಲವೇ ವಿಷಯಗಳನ್ನು ಮಾತ್ರ ಹೊಂದಿಲ್ಲ. ಕೃಷಿ, ತೋಟಗಾರಿಕೆ ಹಾಗೂ ರೇಷ್ಮೇ ವಿಷಯಗಳು ಸೇರಿದಂತೆ ಇತರೆ ಪ್ರಮುಖ ವೃತ್ತಿಯಲ್ಲಿ ತರಬೇತಿ ನೀಡುವುದು ಸಹ ಸೇರಿದೆ. ಪ್ರತಿ 2 ತಿಂಗಳಿಗೊಮ್ಮೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸಭೆ ಕರೆದು ಯೋಜನೆಯ ಪ್ರಗತಿ ಕುರಿತು ಚರ್ಚಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು, ಶಾಲೆ ಹಾಗೂ ಮುಖ್ಯೋಪಾಧ್ಯಾಯರನ್ನು ಪ್ರಮಾಣಪತ್ರ ಹಾಗೂ ಸ್ಮರಣಿಕೆ ಫಲಕಗಳನ್ನು ನೀಡಿ ಸನ್ಮಾನಿಸಲಾಯಿತು.      
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. 
ಶಾಸಕರಾದ ಆರ್. ನರೇಂದ್ರ, ನಗರಸಭೆ ಅಧ್ಯಕ್ಷರಾದ ಎನ್.ಎಸ್. ರೇಣುಕ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಬಿ. ರಾಮು, ಹೆಚ್ಚುವೆಇ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಜಿನಾ ಪಿ. ಮಲಾಕಿ, ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.

ಕೌಶಲ್ಯ ತರಬೇತಿ ನೊಂದಣಿ : ಆಧಾರ್, ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಕಡ್ಡಾಯ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ, ಮೇ. 15:- ಮುಖ್ಯಮಂತ್ರಿಗಳ ಕರ್ನಾಟಕ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗಿ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೊಂದಣಿಯು ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ಮೇ 22ರ ವರೆಗೂ ನಡೆಯಲಿದೆ. 
ನೊಂದಾಯಿಸಿಕೊಳ್ಳುವ ನಿರುದ್ಯೋಗಿ ಯುವಜನರು ಆಧಾರ್‍ಸಂಖ್ಯೆ, ಮೊಬೈಲ್‍ಸಂಖ್ಯೆ ಹಾಗೂ ಇ-ಮೇಲ್ ಐಡಿ ಯನ್ನು ಕಡ್ಡಾಯವಾಗಿ ಹೊಂದಿರಬೇಕು. ಈಗಾಗಲೇ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ತಹಶೀಲ್ದಾರ್ ಕೆ. ಪುರಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮೇ. 16ರಂದು ನಗರದಲ್ಲಿ ಶ್ರೀ ಭಗವಾನ್ ಮಾಹಾವೀರ ಜಯಂತಿ 

ಚಾಮರಾಜನಗರ, ಮೇ. 15 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಮೇ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀಕ್ಷೇತ್ರ ಕನಕಗಿರಿ ಜೈನಮಠದ ಸ್ವಸ್ತಿ ಶ್ರೀ ಭುವನಕೀರ್ತಿ ಭಟ್ಟಾರಕಸ್ವಾಮಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.
ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. 
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಎಸ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ  ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರು ವಿ.ವಿ. ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಪ್ರೀತಿ ಶ್ರೀ ಮಂದರ್‍ಕುಮಾರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡುವರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 9.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನದ ಬಳಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಭಗವಾನ್ ಮಹಾವೀರರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ವೇದಿಕೆ ಕಾರ್ಯಕ್ರಮದ ನಂತರ ನಗರದ ಕುಮಾರಿ ಅಕ್ಷತಾ ಜೈನ್ ಮತ್ತು ತಂಡದವರಿಂದ ನೃತ್ಯರೂಪಕ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 
















No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು