ವಿಭಾಗ ಮಟ್ಟದ ಸವಲತ್ತು ವಿತರಣೆ ಸಮಾವೇಶ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ ಮೇ. 26 : ಮೈಸೂರುಕಂದಾಯ ವಿಭಾಗ ವ್ಯಾಪ್ತಿಯ 8 ಜಿಲ್ಲೆಗಳ ಫಲಾನುಭವಿಗಳನ್ನು ಒಳಗೊಂಡ ವಿಭಾಗ ಮಟ್ಟದ ಸವಲತ್ತು ವಿತರಣೆ ಸಮಾವೇಶವನ್ನುಜೂನ್ 3 ರಂದು ಮೈಸೂರಿನಲ್ಲಿ ಆಯೋಜಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಫಲಾನುಭವಿಗಳನ್ನು ಕರೆದೊಯ್ಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ ರಾಮು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸವಲತ್ತು ವಿತರಣೆ ಸಮಾವೇಶ ಸಂಬಂಧ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಕಳದ ನಾಲ್ಕು ವರ್ಷಗಳಲ್ಲಿ ಹಲವಾರು ಯೋಜನೆಗಳನ್ನು ವಿವಿಧ ಇಲಾಖೆಗಳ ಮೂಲಕ ಅನುಷ್ಥಾನ ಮಾಡಿದೆ. ಈ ಅವಧಿಯಲ್ಲಿ ಪ್ರಯೋಜನ ಪಡೆದ ಫಲಾನುಭವಿಗಳ ಸಮಾವೇ±ವನ್ನು ಮೈಸೂರಿನ ಮಹಾರಾಜ ಕಾಲೇಜು ಮೈಧಾನದಲ್ಲಿ ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಪ್ರಸಕ್ತ ಸಾಲಿನಡಿ ವಿವಿಧ ಇಲಾಖೆಗಳಿಂದ ಫಲಾನುಭವಿಗಳನ್ನು ಆಯ್ಕೆಮಾಡಿ ಸೌಲಭ್ಯಗಳನ್ನು ನೀಡಲಾಗುತ್ತದೆ.
ಕೃಷಿ ಭಾಗ್ಯ ಅನ್ನಭಾಗ್ಯ ಪಶುಭಾಗ್ಯ ಅರೋಗ್ಯ ಭಾಗ್ಯ ವಿದ್ಯಾಸಿರಿ ಋಣಮುಕ್ತ. ಕ್ಷೀರಭಾಗ್ಯ ಕ್ಷೀರಧಾರೆ ಹೀಗೆ ಹಲವಾರು ಜನಪರ ಯೋಜನೆಗಳು ಅನುಷ್ಠಾನದಲ್ಲಿವೆ. ಜಿಲ್ಲೆಯಲ್ಲಿ ಇತರೆ ಇಲಾಖೆಗಳಿಂದ ಸರ್ಕಾರದ ಯೋಜನೆ ಯಡಿ ಸಾಕಷ್ಟು ಸಂಖ್ಯೆಯಲ್ಲಿ ಫಲಾನುಭವಿಗಳು ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಪ್ರಸಕ್ತ ಸಾಲಿನಲ್ಲಿನ ಫಲಾನುಭವಿಗಳನ್ನು ಆಯ್ಕೆ ಮಾಡಿ ಸವಲತ್ತುಗಳನ್ನು ತಲುಪಿಸಲು ಕ್ರಮ ತೆಗೆದುಕೊಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಲ್ಲದೇ ಸ್ವಯಂ ಉದ್ಯೋಗಿಗಳಿಗೆ ಆರ್ಥಿಕ ನೆರವು, ಪ್ರವಾಸೋದ್ಯಮ ಇಲಾಖೆಯಿಂದ ನೀಡುವಟ್ಯಾಕ್ಸಿ, ವಿದ್ಯಾಸಿರಿ ಯೋಜನೆ, ನಗದು ಬಹುಮಾನದಚೆಕ್, ಭವನಗಳ ಹಸ್ತಾಂತರ, ಶಾದಿ ಭಾಗ್ಯಯೋಜನೆ ಫಲಾನುಭವಿಗಳಿಗೆ ಚೆಕ್, ಬೀದಿ ಬದಿ ವ್ಯಾಪಾರಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಸಮೃದ್ಧಿ ಯೋಜನೆ,ಇತರೆ ಕಾರ್ಯಕ್ರಮದಡಿ ಮಂಜೂರಾತಿ ಪತ್ರ, ಮುಂತಾದ ಯೋಜನೆಗಳ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಿಕೊಳ್ಳುವಂತೆ ಬಿ.ರಾಮು ತಿಳಿಸಿದರು.
ಮುಖ್ಯಮಂತ್ರಿಯವರು, ಜಿಲ್ಲಾ ಉಸ್ತುವಾರಿ ಸಚಿವರು ಇತರೆ ಜನ ಪ್ರತಿನಿಧಿಗಳೊಂದಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಫಲಾನುಭವಿಗಳನ್ನು ಮೈಸೂರಿನ ಸಮಾವೇಶಕ್ಕೆ ಕರೆತಂದು ಕಾರ್ಯಕ್ರಮ ಮುಗಿದಬಳಿಕ ಫಲಾನುಭವಿಗಳನ್ನು ವಾಪಸ್ಸು ಕರೆದೊಯ್ಯುವ ಹೊಣೆಗಾರಿಕೆಯನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಹರೀಶ್ ಕುಮಾರ್ ಮಾತನಾಡಿ ಅಧಿಕಾರಿಗಳು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸಿದ್ದತೆ ಕೈಗೊಳ್ಳಬೇಕು. ಪೂರ್ವ ತಯಾರಿಯೊಂದಿಗೆ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರುವ ಜವಾಬ್ದರಿಯನ್ನು ವಹಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 26 :-ಚಾಮರಾಜನಗರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಯೊಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಕಲಾವಿದರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪ.ಪಂಗಡದ ಕಲಾವಿದರು ಸೇರಿದಂತೆ ಒಟ್ಟು ಎಂಟು (08) ಜನ ಕಲಾವಿದರು ಚಾಮರಾಜನಗರ ಜಿಲ್ಲೆಯವರಾಗಿರಬೇಕು.
ಬೀದಿನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ಮತ್ತು ಪಾನ್‍ಕಾರ್ಡ್ ಹಾಗೂ ಎಂಟು ಜನ ಕಲಾವಿದರ ಬ್ಯಾಂಕ್ ಖಾತೆ ಕಡ್ಡಾಯವಾಗಿದೆ. ತಂಡವು ನೊಂದಣಿಯಾಗಿ ಮೂರು ವರ್ಷಗಳಾಗಿರಬೇಕು. ತಂಡವು ನೋಂದಾಯಿಸಿದ ನೋಂದಣಿ ಪ್ರತಿ ಮತ್ತು ಕಳೆದ ಮೂರು ವರ್ಷದ ಅಡಿಟ್ ಪ್ರತಿ ಹಾಗೂ 08ಜನ ಸದಸ್ಯರನ್ನೊಳಗೊಂಡ ಪಾಸ್‍ಪೋರ್ಟ್ ಆಳತೆಯ 2 ಭಾವಚಿತ್ರ ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯ.
ಬೀದಿನಾಟಕ ಕಲಾತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.
ಬೀದಿನಾಟಕ ಕಲಾತಂಡಗಳ ಮುಖ್ಯಸ್ಥರು ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಕಚÉೀರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಬೀದಿನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ, ಪಾನ್‍ಕಾರ್ಡ್, ಎಂಟು ಜನ ಕಲಾವಿದರ ಬ್ಯಾಂಕ್ ಖಾತೆ ಹಾಗೂ ಆಧಾರ ಕಾರ್ಡ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಿ ಮೇ31ರೂಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಾಮರಾಜನಗರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08226-224731 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಜ. 27ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಮೇ. 26 :- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಮೇ 27ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸೆಸ್ಕ್ ಜನಸಂಪರ್ಕ ಸಭೆ ಮುಂದೂಡಿಕೆ
ಚಾಮರಾಜನಗರ, ಮೇ. 26 (- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಮೇ 27ರಂದು ಮಧ್ಯಾಹ್ನ 3 ಗಂಟೆಗೆ ನಿಗದಿಗೊಳಿಸಿದ್ದ ಜನಸಂಪರ್ಕ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಿದೆ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 27 ರಂದು ನಗರದಲ್ಲಿ ಕೃಷಿ, ಸಾವಯವ ಸಿರಿಧಾನ್ಯ ಮೇಳ
ಚಾಮರಾಜನಗರ, ಮೇ. 26 - ಜಿಲ್ಲಾ. ತಾಲ್ಲೋಕು ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಕೃಷಿಮೇಳ ವಸ್ತು ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳ ಮೇ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹತ್ತಿರ ಇರುವÀ ನಾಯಕರ ವಿದ್ಯಾರ್ಥಿ ನಿಲಯ ಅವರಣದಲ್ಲಿ ಏರ್ಪಡಿಸಲಾಗಿದೆ.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ವಸ್ತುಪ್ರದರ್ಶನ ಮಳಿಗೆ ಉದ್ಘಾಟಿಸುವರು.ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಉಪಸ್ಥಿತರಿರುವರು.
ಜಿಲ್ಲಾಕೇಂದ್ರಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿ ಸ್ಥಳಾಂತರ
ಚಾಮರಾಜನಗರ ಮೇ26- ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಛೇರಿಯು ಮರಿಯಾಲದ ರುಡ್‍ಸೆಟ್ ಸಂಸ್ಥೆಯ ಆವರಣದಿಂದ ಚಾಮರಾಜನಗರದ ಶಂಕರಪುರ 1 ಕ್ರಾಸ್‍ರಾಮಮಂದಿರದ ಪಕ್ಕದ ಸಂಕೀರ್ಣಕ್ಕೆ ಸ್ಥಳಾಂತರವಾಗಿದೆ ಎಂದು ಪ್ರಾದೇಶಿಕ ವ್ಯವಸ್ಥಾಪಕರು ಪಿ.ಎಸ್.ಹೆಗ್ಗಡೆ ತಿಳಿಸಿದ್ದಾರೆ.ನಗರದ ಶಂಕರಪುರದದಲ್ಲಿ ನೂತನ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಥಮವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾದೇಶಿಕ ಕಛೇರಿಯನ್ನು ತೆರೆಯಲು ನಮಗೆ ಜೆ.ಎಸ್.ಎಸ್ ಸಂಸ್ಥೆಯ ಸ್ವಾಮೀಜಿಯವರು ಸ್ಥಳಾವಕಾಶ ನೀಡಿದ್ದರು. ಅವರಿಗೆ ನಾವು ಅಭಾರಿಯಾಗಿದ್ದೇವೆ ಗ್ರಾಹಕರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಪ್ರಾದೇಶಿಕ ಕಛೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಸಾರ್ವಜನಿಕರು ಎಂದಿನಂತೆ ಸಹಕಾರ ನೀಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿನೀಯರ್ ಮ್ಯನೇಜರ್ ಸಿ. ಸತ್ಯನಾರಯಣ, ಎಂ.ಎನ್.ಸಿರೀಸ್É ಎಂ.ಪೂರ್ಣಿಮ,ಶಶಿಕಲಾ,ಪವನ್‍ಕುಮಾರ್, ಜರ್ನಾಧನ್,ನೀಕಿಲೇಶ್,ಮಹದೇವಪ್ಪ, ಸುಂದರ್, ಭಾರತ್, ಸಿದ್ದರಾಜು, ಎಸ್.ಸಿದ್ದರಾಜು, ನಾಗಶ್ರೀ, ಶ್ರೀನಾಥ್,ಕುಮಾರ ಹಾಗೂ ಇನ್ನು ಮುಂತಾದವರು ಹಾಜರಿದ್ದರು.
No comments:
Post a Comment