ಅರ್ಥಪೂರ್ಣವಾಗಿ ನಡೆದ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ
ಚಾಮರಾಜನಗರ, ಜೂ. 06:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ನಗರದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷರಾದ ಎಸ್.ಎನ್.ರೇಣುಕ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ರೇಣುಕ ಅವರು ಹೇಮರೆಡ್ಡಿ ಮಲ್ಲಮ್ಮ ಅವರು ಶಿವನ ಪರಮಭಕ್ತೆಯಾಗಿದ್ದು ತನ್ನ ಉತ್ತಮ ನಡೆಯಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ತಾಳ್ಮೆ, ಸ್ವಾಭಿಮಾನ, ಸಹನೆ ಗುಣಗಳು ಅನುಕರಣೀಯವಾಗಿದೆ ಎಂದರು.
ಹೇಮರೆಡ್ಡಿ ಮಲ್ಲಮ್ಮ ಅವರಿಗೆ ಬಾಲ್ಯದಲ್ಲಿಯೆ ಪೋಷಕರಿಂದ ವೇದ,ಪುರಾಣ,ಉಪಕತೆ ಕೇಳುವ ಅವಕಾಶ ಲಭಿಸಿತ್ತು. ಉತ್ತಮ ಸಂಸ್ಕಾರ ರೂಢಿಸಿಕೊಂಡಿದ್ದ ಮಲ್ಲಮ್ಮ ಅವರು ವೈವಾಹಿಕ ಕುಟುಂಬ ನಿರ್ವಹಣೆಯಲ್ಲಿ ಎದುರಾದ ಅನೇಕ ಕಷ್ಟ ನೋವುಗಳನ್ನು ಸಮರ್ಥವಾಗಿ ನಿಭಾಯಿಸಿದರು. ಅವರ ಜೀವನ ಕ್ರಮವೇ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ರೇಣುಕ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್‍ಕುಮಾರ್ ಅವರು ಜಗತ್ತಿನಲ್ಲಿ ಅನೇಕ ಸಾಧಕರು, ಸಂತರು, ಶರಣರು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಇದರ ಮಹತ್ವ ಮೌಲ್ಯಗಳು ಇಂದಿಗೂ ಪರಿಚಯಿಸಬೇಕೆನ್ನುವ ಉದ್ದೇಶದಿಂದ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಹೇಮರೆಡ್ಡಿ ಮಲ್ಲಮ್ಮ ಅವರು ಜೀವನವೆ ಉತ್ತಮ ಸಂದೇಶವಾಗಿದೆ. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸಿ ಮಾದರಿಯಾಗಿರುವ ಹೇಮರೆಡ್ಡಿ ಮಲ್ಲಮ್ಮ ಅವರು ಎಲ್ಲರಿಗೂ ದಾರಿದೀಪವಾಗಿದ್ದಾರೆ. ಇವರ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ ಎಂದು ಹರೀಶ್‍ಕುಮಾರ್ ತಿಳಿಸಿದರು.
ಜಿಲ್ಲಾ ಪಂಚಾಯಿತ್ ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿನವೀನ್ ಮಾತನಾಡಿ ಸಮಾಜವನ್ನು ಓಳ್ಳೆಯ ದಿಕ್ಕಿಗೆ ಕೊಂಡೋಯ್ಯುವ ಚಿಂತನೆಯನ್ನು ಮಾಡಿ ಅದರ ಕಾರ್ಯ ಸಾಧನೆಗೆ ಸಾಕಷ್ಟು ಮಹಾತ್ಮರು ಕೊಡುಗೆ ನೀಡಿದ್ದಾರೆ. ಇದರ ಪ್ರಯೋಜನ ಪಡೆದರೆ ಜಯಂತಿ ಕಾರ್ಯಕ್ರಮಗಳು ಅರ್ಥಪೂರ್ಣವಾದಂತೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತ್ ಸದಸ್ಯರಾದ ಸಿ.ಎನ್.ಬಾಲರಾಜು ಮಾತನಾಡಿ ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆಯವರು ಅನುಸರಿಸಬೇಕಾದ ಅಗತ್ಯವಿದೆ. ಎಲ್ಲರಿಗೂ ಒಳಿತನ್ನು ಬಯಸಿದ ಮಲ್ಲಮ್ಮ ಅವರ ಗುಣಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ಮಾಡಿದರು.
ಉಪನ್ಯಾಸಕರಾದ ನೀಗೂರಮೇಶ್ ಮುಖ್ಯ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಉಪವಿಭಾಗ ಅಧಿಕಾರಿ ರೂಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗವೇಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜೂನ್ 7 ರಂದು ನಗರದಲ್ಲಿ ಮಹಿಳಾ ಸಬಲೀಕರಣ ಕುರಿತು ಕಾರ್ಯಾಗಾರ
ಚಾಮರಾಜನಗರ, ಜೂ. 06- ಜಿಲ್ಲಾ ಪಂಚಾಯತ್ ವತಿಯಿಂದ ಮಹಿಳಾ ಸಬಲೀಕರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜೂನ್ 7 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರಾದ ಡಿ. ಪ್ರಾಣೇಶ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಯು. ಎನ್. ವುಮೆನ್ ಯೋಜನೆ ರಾಜ್ಯ ಯೋಜನಾಧಿಕಾರಿ ಸಯ್ಯದ್ ನೂರ್ ಫಾತಿಮಾ, ಪ್ರೋಗ್ರಾಮ್ ಅನಾಲಿಸ್ಟ್ ಅರುಣಿಮಾ ಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಸರ್ವೇಶ್, ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಂ.ಸಿ ಶೈಲಜಾ, ಸಯ್ಯದ್ ಅಂಜಿದಾ ಫರ್ವೀನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.
ಜೂನ್ 13 ರಂದು ಜಿ.ಪಂ. ಕೆ.ಡಿ.ಪಿ ಸಭೆ
ಚಾಮರಾಜನಗರ, ಜೂ. 06:- ಜಿಲ್ಲಾ ಪಂಚಾಯತ್‍ನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಮಾಸಿಕ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ರವರ ಅಧ್ಯಕ್ಷತೆಯಲ್ಲಿ ಜೂನ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅರಿವು ಸಾಲ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಜೂ. 06:- ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮವು ಸಿ.ಇ.ಟಿ ಬರೆದು ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ಅರಿವು ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 14ರ ವರೆಗೆ ವಿಸ್ತರಿಸಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಸಮಾಜ ಸೇವಾ ಕಾರ್ಯಕರ್ತೆಯರ ಆಯ್ಕೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 06- ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾಗಿರುವ ಮಹಿಳಾ ವಿಶೇಷ ಚಿಕಿತ್ಸಾ ಘಟಕಕ್ಕೆ ಮೂವರು ಸಮಾಜ ಸೇವಾ ಕಾರ್ಯಕರ್ತೆಯರನ್ನು ಆಯ್ಕೆ ಮಾಡುವ ಸಲುವಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಬಿ.ಎಸ್.ಡಬ್ಲೂ ಅಥವಾ ಬಿ.ಎ(ಸೈಕಾಲಜಿ) ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು. ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಅನುಭವ ತರಬೇತಿ ಹಾಗೂ ಸೇವಾ ಮನೋಭಾವದ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಯ್ಕೆ ಯಾದವರಿಗೆ ಮಾಸಿಕ 10 ಸಾವಿರ ರೂ ಗೌರವಧನ ನೀಡಲಾಗುವುದು. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ನಗರದ ಜಿಲ್ಲಾ ಆಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಜೂನ್ 15 ರೊಳಗೆ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08226-224720 ಅಥವಾ 222445 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment