Friday, 9 June 2017

ಆಧಾರ್ ಸಂಖ್ಯೆ ಜೋಡಣೆ ಕುರಿತ ಕಾರ್ಯಾಗಾರ 09-06-2017

     ಆಧಾರ್ ಸಂಖ್ಯೆ ಜೋಡಣೆ ಕುರಿತ ಕಾರ್ಯಾಗಾರ 

                                            ರಾಮಸಮುದ್ರ ಎಸ್.ವೀರಭದ್ರಸ್ವಾಮಿ

  ಚಾಮರಾಜನಗರ, ಜೂ. 09 - ಜಿಲ್ಲಾಡಳಿತ ಮತ್ತು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಹಯೋಗದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕುರಿತು ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ಇತ್ತೀಚೆಗೆ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
    ನಂತರ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಹರೀಶ್‍ಕುಮಾರ್ ಅವರು ಆಧಾರ್ ಸಂಖ್ಯೆಯು ಇಂದಿನ ದಿನಗಳಲ್ಲಿ ಬಹಳ ಮಹತ್ವ ಹೊಂದಿದೆ. ಇತ್ತೀಚೆಗೆ ಕಾನೂನು ಮಾನ್ಯತೆ ಪಡೆದ ಆಧಾರ್ ಸಂಖ್ಯೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳ ಸೌಲಭ್ಯ, ಸವಲತ್ತುಗಳನ್ನು ಪಡೆಯಲು ಕಡ್ಡಾಯಗೊಳಿಸಿದೆ. ನಾಗರಿಕರು ಇದರ ಸದುಪಯೋಗ ಪಡೆಯಬೇಕು ಎಂದರು.
    ಇ-ಆಡಳಿತ ಕೇಂದ್ರದ ಸಂಪನ್ಮೂಲವ್ಯಕ್ತಿ ರಘುವಂಶಿ ಅವರು ಮಾತನಾಡಿ ಆಧಾರ್ ಸಂಖ್ಯೆಯನ್ನು ಯಾವುದೇ ವ್ಯಕ್ತಿ ನಕಲು ಮಾಡಲು ಸಾಧ್ಯವಿಲ್ಲ. ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ಅಳವಡಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುವುದನ್ನು ತಪ್ಪಿಸಬಹುದು ಎಂದರು.
    ಇ-ಆಡಳಿತ ಕೇಂದ್ರದ ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಶ್ರೇಯಸ್‍ರಾವತ್ ಮಾತನಾಡಿ ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಲ್ಲಿ ಆಧಾರ್ ಸಂಖ್ಯೆ ಪ್ರಮುಖ ಪಾತ್ರ ವಹಿಸಿದೆ. ಮುಂದಿನ ದಿನಗಳಲ್ಲಿ ಕಾಗದ ರಹಿತ ಕಚೇರಿಗಳಾಗುತ್ತಿರುವುದರಿಂದ ನಿಖರ ಹಾಗೂ ವೇಗವನ್ನೊಳಗೊಂಡ ಪಾರದರ್ಶಕ ಆಡಳಿತಕ್ಕೆ ನಾಂದಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
    ಹೆಚ್ಚುವರಿ ಜಿಲ್ಲಾಧಿಕಾರಿ ಗಾಯತ್ರಿ, ಉಪವಿಭಾಗಾಧಿಕಾರಿ ರೂಪ, ಜಿಲ್ಲಾ ಆಧಾರ್ ಸಂಯೋಜಕರಾದ ರಾಮಪ್ರಸಾದ್, ಇ-ಆಡಳಿತ ಕೇಂದ್ರದ ಯೋಜನಾ ವ್ಯವಸ್ಥಾಪಕರು ಜಿಲ್ಲಾ ಭೂಮಿ ಸಮಾಲೋಚಕರು, ಜಿಲ್ಲಾ ಹಾಗೂ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಹಾಜರಿದ್ದರು.    

                   ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ 

ಚಾಮರಾಜನಗರ, ಜೂ. 09 :- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಜೂನ್ 11 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.


ಜೂನ್ 11 ರಂದು ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ

ಚಾಮರಾಜನಗರ, ಜೂ. 09- ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃಧ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಜೂನ್ 11 ರಂದು ಬೆಳಿಗ್ಗೆ 9.30 ಗಂಟೆಗೆ ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಆವರಣದಲ್ಲಿ ನಡೆಯಲಿದೆ.
ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಗುರುಸ್ವಾಮಿ ಅವರು ದಿವ್ಯಸಾನಿಧ್ಯ ವಹಿಸಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮ ಉದ್ಫಾಟಿಸುವರು. ಮುಜರಾಯಿ ಹಾಗೂ ಜವಳಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ವಧುವರರಿಗೆ ಮಾಂಗಲ್ಯ ವಿತರಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ನೆನಪಿನ ಕಾಣಿಕೆ ವಿತರಿಸುವರು.
ವಿಧಾನ ಪರಿಷತ್ ಉಪ ಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು. ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾ ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಇರ್ಷಾದ್ ಭಾನು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಚಾಮರಾಜನಗರ, ಜೂ. 09 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 12 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಹೊರಡುವ ಜಾಥಾಗೆ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್, ಮಳವಳ್ಳಿ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಆರ್.ಪಿ. ನಂದೀಶ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಮಹಿಳಾ ಮತ್ತು ಮಕ್ಕಳ ಅಭಿವ್ರದ್ಧಿ ಇಲಾಖೆ ಉಪನಿರ್ದೇಶಕರಾದ ಜಿ.ಎಂ. ಸರ್ವೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್, ನಗರಸಭೆ ಪೌರಾಯುಕ್ತ ರಾಜಣ್ಣ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಟಿ.ಜೆ. ಸುರೇಶ್, ಡಾ. ಬಿ.ಆರ್, ಅಂಬೇಡ್ಕರ್ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸಿದ್ದರಾಜು, ಜಿಲ್ಲಾ ದ್ವಿಚಕ್ರ ವಾಹನ ದುರಸ್ಥಿಗಾರರ ಸಂಘದ ಅಧ್ಯಕ್ಷರಾದ ಮುಜಾಹೀದ್ ಉಲ್ಲಾಖಾನ್ ಅವರುಗಳು ಮುಖ್ಯ ಅತಿಥಿಗಳಾಗಿ ಬಾಗವಹಿಸುವರು.
ಮೈಸೂರಿನ ಫೋರಮ್ ಪೀಪಲ್ ಲೀಗ್ ನಿರ್ದೇಶಕರಾದ ಪಿ.ಪಿ. ಬಾಬುರಾಜ್ ಅವರು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಯಲ್ಲಿ ಸಮಾಜದ ಪಾತ್ರ ಕುರಿತು ಉಪನ್ಯಾಸ ಮಾಡುವರುಎಂದು ಪ್ರಕಟಣೆ ತಿಳಿಸಿದೆ.

ಮಲ್ಲಯ್ಯನಪುರದ ನೂತನ ಕಟ್ಟಡಕ್ಕೆ ಆದರ್ಶ ವಿದ್ಯಾಲಯ ಸ್ಥಳಾಂತರ

ಚಾಮರಾಜನಗರ, ಜೂ. 09  ಇದುವರೆಗೆ ಚಾಮರಾಜನಗರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕಿನ ಆದರ್ಶ ವಿದ್ಯಾಲಯವನ್ನು ಮಲ್ಲಯ್ಯನಪುರದಲ್ಲಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು, ಪೋಷಕರು ಸಹಕರಿಸುವಂತೆ ಆದಶರ್À ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 10 ಮತ್ತು 11 ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಜೂ. 09 :- ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಜೂನ್ 10 ಮತ್ತು 11 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗುವುದು. ನಾಗರಿಕರು ಸಹಕರಿಸಬೇಕಾಗಿ ಚೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ : ಎಸ್.ಸಿ. ಎಸ್.ಟಿ. ವಿದ್ಯಾರ್ಥಿಗಳಿಗೆ ಉಚಿತ್ ಬಸ್‍ಪಾಸ್

ಚಾಮರಾಜನಗರ, ಜೂ. 09 :- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವತಿಯಿಂದ 2017-18ನೇ ಸಾಲಿಗೆ ವಿದ್ಯಾರ್ಥಿ ರಿಯಾಯಿತಿ ಉಚಿತ ಬಸ್‍ಪಾಸ್‍ಗಳನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಜೂನ್ 9ರಿಂದ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುತ್ತಿದೆ.
     ಈ ಸೌಲಭ್ಯ ಪಡೆಯಲಿಚ್ಚಿಸುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಅರ್ಜಿ ನಮೂನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗ ನಮೂದಿಸಲು ಅವಕಾಶವಿರುವ ಕಲಂಗಳಲ್ಲಿ ನಮೂದು ಮಾಡಬೇಕು. ಅದಕ್ಕೆ ಪೂರಕವಾಗಿ ಜಾತಿ ಪ್ರಮಾನಪತ್ರದ ನಕಲನ್ನು ಅರ್ಜಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ.
     ಅರ್ಹ ಫಲಾನುಭವಿ ವಿದ್ಯಾರ್ಥಿಗಳು ಬಸ್‍ಪಾಸಿನ ದರವನ್ನು ವಿಧಿಸುವಂತಿಲ್ಲ. ಆದರೆ ನಿಯಾಮಾನುಸಾರ ಸಂಸ್ಕರಣಾ ಶುಲ್ಕ ಮತ್ತು ಅಪಘಾತ ಪರಿಹಾರ ನಿಧಿ ಶುಲ್ಕಗಳನ್ನು ಪಾವತಿಸಬೇಕು. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ನಿಗಧಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ನಿಗಮಕ್ಕೆ ಸಲ್ಲಿಸಿ ಬಸ್‍ಪಾಸ್‍ಗಳನ್ನು ಪಡೆಯಬೇಕು.
     ವಿದ್ಯಾರ್ಥಿಗಳು ಶೈಕಣಿಕ ಸಂಸ್ಥೆಯಿಂದ ವಾಸ ಸ್ಥಳಕ್ಕೆ 60 ಕಿ.ಮೀ. ಗರಿಷ್ಠ ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಬಸ್‍ಪಾಸ್ ಸೌಲಭ್ಯಕ್ಕೆ ಅರ್ಹರಾಗಿತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಆರ್.ಟಿ.ಸಿ ನಿಗಮವನ್ನು ಸಂಪರ್ಕಿಸುವÀಂತೆ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆರಕಣಾಂಬಿ ಐ.ಟಿ.ಐ : ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

     ಚಾಮರಾಜನಗರ, ಜೂ. 09:- ಗುಂಡ್ಲುಪೇಟೆ ತಾಲೂಕು ತೆರಕಣಾಂಬಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2017-18ನೇ ಸಾಲಿಗೆ ಪ್ರವೇಶಗಳನ್ನು ಮೆರಿಟ್ ಕಂ-ರಿಸರ್ವೇಷನ್ ಆಧಾರದಲ್ಲಿ ಆನ್‍ಲೈನ್ ಮೂಲಕ ಮಾಡಲಾಗುವುದು.
    ಸಂಸ್ಥೆಯಲ್ಲಿ ರಾಜ್ಯ ಶಿಕ್ಷಣ ಪರಿಷತ್‍ನಿಂದ ಸಂಯೋಜನೆ ಪಡೆದಿರುವ ವೃತ್ತಿಗಳಾದ ಎಲೆಕ್ಟ್ರಿಷಿನ್ ಮತ್ತು ಫಿಟ್ಟರ್ ವೃತ್ತಿಗಳ ಕುರಿತು ಹೇಳಿಕೊಡಲಾಗುವುದು.
    ದಿನಾಂಕ: 25-05-2017ರಂದು 14 ವರ್ಷ ಮೇಲ್ಪಟ್ಟ ವಯೋಮಿತಿಯ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಸಿ.ಟಿ.ಎಸ್. ಯೋಜನೆÀಯಡಿಯಲ್ಲಿರುವ ತಾಂತ್ರಿಕ ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್ ತಿತಿತಿ.emಠಿ.ಣಡಿg.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ರ ಮೂಲಕ ಅರ್ಜಿಗಳನ್ನು ಜೂನ್ 12ರೊಳಗೆ ಸಲ್ಲಿಸಬಹುದಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರ ಮೊ: ಸಂಖ್ಯೆ 9448322941 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
   

ಬೇಗೂರು ಐ.ಟಿ.ಐ : ವಿವಿಧ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

     ಚಾಮರಾಜನಗರ, ಜೂ. 09- ಗುಂಡ್ಲುಪೇಟೆ ತಾಲೂಕು ಬೇಗೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2017-18ನೇ ಸಾಲಿಗೆ ಪ್ರವೇಶಗಳನ್ನು ಮೆರಿಟ್ ಕಂ-ರಿಸರ್ವೇಷನ್ ಆಧಾರದಲ್ಲಿ ಆನ್‍ಲೈನ್ ಮೂಲಕ ಮಾಡಲಾಗುವುದು.
    ಸಂಸ್ಥೆಯಲ್ಲಿ ರಾಜ್ಯ ಶಿಕ್ಷಣ ಪರಿಷತ್‍ನಿಂದ ಸಂಯೋಜನೆ ಪಡೆದಿರುವ ವೃತ್ತಿಗಳಾದ ಎಂ.ಆರ್.ಎ.ಸಿ, ಎಂ.ಎಂ.ವಿ, ಟರ್ನರ್, ಮೆಕ್ಯಾನಿಕಲ್ ಡೀಸೆಲ್  ಹಾಗೂ ಡ್ರೆಸ್ ಮೇಕಿಂಗ್ ಮತ್ತು ನವದೆಹಲಿಯ ಡಿ.ಜಿ.ಇ.ಟಿ ಯಿಂದ ಸಂಯೋಜನೆ ಪಡೆದಿರುವ ವೃತ್ತಿಗಳಾದ ಎಲೆಕ್ಟ್ರಿಷಿನ್, ಫಿಟ್ಟರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಹಾಗೂ ಐ.ಸಿ.ಟಿ.ಎಸ್.ಎಂ ವೃತ್ತಿಗಳ ಕುರಿತು ಬೋಧಿಸಲಾಗುವುದು.
    ದಿನಾಂಕ: 25-05-2017ರಂದು 14 ವರ್ಷ ಮೇಲ್ಪಟ್ಟ ವಯೋಮಿತಿಯ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಸಿ.ಟಿ.ಎಸ್. ಯೋಜನೆÀಯಡಿಯಲ್ಲಿರುವ ತಾಂತ್ರಿಕ ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ರ ಮೂಲಕ ಅರ್ಜಿಗಳನ್ನು ಜೂನ್ 12ರೊಳಗೆ ಸಲ್ಲಿಸಬಹುದಾಗಿದೆ.
    ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 08229-231010 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಶಂಕುಸ್ಥಾಪನೆ ಮುಂದೂಡಿಕೆ

     ಚಾಮರಾಜನಗರ, ಜೂ. 09 - ಉಮ್ಮತ್ತೂರು ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿಯವರಿಂದ ಶಂಕುಸ್ಥಾಪನೆ ಮಾಡಲು ಜೂನ್ 17 ರಂದು ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಅಂದು ಬೆಂಗಳೂರಿಗೆ ಗೌರವಾನ್ವಿತ ರಾಷ್ಟ್ರಪತಿಯವರು ಆಗಮಿಸಲಿರುವುದರಿಂದ ಜಿಲ್ಲೆಯ ಉಮ್ಮತ್ತೂರು ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾಸ್ಪತ್ರೆಯ ಶೌಚಾಲಯಗಳ ಪೈಪ್ ಬದಲಾಯಿಸುವ ಕಾಮಗಾರಿ ಆರಂಭ

    ಚಾಮರಾಜನಗರ, ಜೂ. 09- ನಗರದ ಜಿಲ್ಲಾಸ್ಪತ್ರೆಯ ಹೊಸ ಕಟ್ಟಡದಲ್ಲಿ ಶೌಚಾಲಯಗಳ ಪೈಪ್‍ಗಳು ಒಡೆದು ಆಗಾಗ್ಗೆ ನೀರು ಸೋರಿಕೆಯಾಗಿ ವಾರ್ಡ್‍ಗಳು, ವರಾಂಡ ಹಾಗೂ ಕೆಳಮಹಡಿಯಲ್ಲಿ ಶೌಅಚಾಲಯದ ನೀರು ಹರಿಯುತ್ತಿರುವುದರಿಂದ ಪೈಪ್‍ಗಳನ್ನು ಬದಲಾಯಿಸುವ ಕಾಮಗಾರಿಯನ್ನು ತುರ್ತಾಗಿ ಪ್ರಾರಂಭಿಸಿರುವ ಹಿನ್ನಲೆಯಲ್ಲಿ ಕಾಮಗಾರಿ ಮುಗಿಯಲು 8 ವಾರಗಳ ಅವಧಿಯಾಗುವುದರಿಂದ ಹೊಸ ಕಟ್ಟಡದಲ್ಲಿರುವ ವಾರ್ಡ್‍ಗಳ ಹಾಸಿಗೆ ಸಾಮಥ್ರ್ಯವನ್ನು ತಾತ್ಕಾಲಿಕವಾಗಿ ಕಡಿಮೆಗೊಳಿಸಲಾಗಿದೆ.
    ಅಗತ್ಯ ತುರ್ತು ಪ್ರಕರಣಗಳನ್ನು ಮಾತ್ರ ಒಳರೋಗಿಗಳಾಗಿ ದಾಖಲಾತಿ ಮಡಿಕೊಂಡು ಚಿಕಿತ್ಸೆ ಸೌಲಭ್ಯ ನೀಡಲಾಗುವುದು. ಇತರೆ ಸಾಮಾನ್ಯ ಪ್ರಕರಣದ ರೋಗಿಗಳನ್ನು ಹೊರರೋಗಿಯಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರಘುರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
     








No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು