Monday, 12 June 2017

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ (12-06-2017)

 ಅದಿಕಾರದವದಿಯಲ್ಲಿಲದ ವ್ಯಾಮೋಹ ಈಗ ದಲಿತರ ಮನೆ ಊಟದಲ್ಲೇಕೆ.? 

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ 

ಚಾಮರಾಜನಗರ: ಐದು ವರ್ಷದ ಅವದಿಯಲ್ಲಿ ಚಾಮರಾಜನಗರಕ್ಕೆ‌ ಬಾರದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗ ದಲಿತರ ಹಾಗೂ ಅವರ ಮನೆ ಮೇಲಿನ ಊಟದ ಮೇಲೆ ಯಾಕೆ ಎಂಬ ಅನುಮಾನ ಜನರನ್ನ ಕಾಡತೊಡಗಿದೆ. ಚಾಮರಾಜನಗರ ರಾಮಸಮುದ್ರದ
ದಲಿತರ ಮನೆಯಲ್ಲಿ ಉಪಹಾರ ಸೇವಿದ ಬಿ.ಎಸ್.ಯಡಿಯೂರಪ್ಪ ಅವರನ್ನ ಜನ ಪ್ರಶ್ನಿಸತೊಡಗಿದ್ದಾರೆ.

ರಾಮಸಮುದ್ರ ದಲಿತ ಮುಖಂಡ ನಂಜುಂಡಸ್ವಾಮಿ ನಿವಾಸದಲ್ಲಿ ಇಂದು ಊಟ ಸೇವನೆ ಮಾಡಿದ್ದು ಸದರಿ ಪತ್ರಿಕಾಗೋಷ್ಟಿಯಲ್ಲಿ ಅದಿಕಾರದವದಿಯಲ್ಲಿಲ್ಲದ ವ್ಯಾಮೋಹ ದಲಿತರ ಹಾಗೂ ಊಟ ಮೇಲೇಕೆ ಎಂದು ಪ್ರಶ್ನಿಸಿದರು. ಯಡಿಯೂರಪ್ಪ ಇದಕ್ಕೆ ಊಟ ಮಾಡಿದ್ದು ಸುದ್ದಿಯಲ್ಲ ದಲಿತರ ಸಮಸ್ಯೆಗಳನ್ನ ಅರಿಯುತ್ತಿದ್ದೇನೆ ಎಂದರು.

*ಯಡಿಯೂರಪ್ಪ ತಿಂದ ತಿಂಡಿ ಏನು?*

ದೋಸೆ,ಇಡ್ಲಿ,ಉಪ್ಪಿಟ್ಟು,ಕೇಸರಿಬಾತ್, ಬೋಂಡಾ,‌ಸಾಗು ಸವಿದ ಯಡಿಯೂರಪ್ಪ ಅವರ ಈ ಎಲ್ಲಾ ಪದಾರ್ಥಗಳು


*ಕನ್ನಡ ಸಂಘಟನೆಗಳು ಇಂದು ಕರೆ ನೀಡಿದ್ದ ರಾಜ್ಯ ಬಂದ್ ಗೆ ಚಾಮರಾಜನಗರದಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

*ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ
*ಕೆಲ ಕಾಲ ರಸ್ತೆ ಸಂಚಾರ ತಡೆ ನಡೆಸಿದ ಪ್ರತಿಭಟನಾಕಾರರು
*ಮುನ್ನೆಚ್ಚರಿಕೆ ಕ್ರಮವಹಿಸಿ‌ ಬಿಗಿ ಪೊಲೀಸ್ ಬಂದೋಬಸ್ತ್

 *ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ಶೂನ್ಯ ಎಂದ ಮಾಜಿ ಸಿ.ಎಮ್. ಯಡಿಯೂರಪ್ಪ. ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಜಿಲ್ಲೆ ಸಿದ್ದು ಅವರ ಕೊಡುಗೆ ಏನು ನಾವು ಮಾಡಿದ್ದನ್ನೆ ಅವರದ್ದು ಎನ್ನುತ್ತಿದ್ದಾರೆ ಅವರ ಕೊಡುಗೆ ಏನು ಇದೆ ತೋರಿಸಲಿ ಎಂದು ಆರೋಪಿಸಿದರು. 

ಚಾಮರಾಜನಗರ ಸುದ್ದಿಗೋ ಷ್ಟಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು,ಮಲೆ ಮಹದೇಶ್ವರ ಬೆಟ್ಟ ಅಭಿ ವೃದ್ಧಿ ಪ್ರಾಧಿಕಾರ ರಚನೆ,

ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸಿದ್ದು ಬಿ.ಜೆ.ಪಿ ಹೊರತು ಕಾಂಗ್ರೆಸ್ ಅಲ್ಲ ಎಂದರು.

ಕೇಂದ್ರದ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಟಾನ ಮಾಡುವಲ್ಲಿ ವಿಫಲವಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ,

ಭಾಗ್ಯಲಕ್ಷ್ಮಿ ಯೋಜನೆ ಬಡವರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೊಪಿಸಿದರು‌.

ಬಿಜೆಪಿಯಿಂದ ಜುಲೈ ಎರಡನೆ ವಾರದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು ಎಂದರು. ಇತ್ತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳು ಇರಬಾರದು ಎಂದರು ಡಿ ನೊಟಿಪೈ ಮಾಡಲಜ ಹೊರಟಿದ್ದಾರೆ‌ ಇದರ ಮೇಲೆ ಯಾಕೊ ಮುಖ್ಯಮಂತ್ರಿಗಳಿಗೆ ವ್ಯಾಮೋಹ ಗೊತ್ತಿಲ್ಲ ಎಂದರು

_________________________________________________


ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

*ವಿ.ಎಸ್ ಎಸ್.*

ಚಾಮರಾಜನಗರ, ಜೂ. 12 - ಮೂರನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಲ್ಲಿ ಜೂನ್ 21ರಂದು ಯಶಸ್ವಿಯಾಗಿ ಹಮ್ಮಿಕೊಳ್ಳಲು ಅಗತ್ಯವಿರುವ ಸಿದ್ಧತಾ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಗ ಆರೋಗ್ಯಕರ ಜೀವನಕ್ಕೆ ಅವಶ್ಯವಾಗಿದ್ದು ಪ್ರತಿಯೊಬ್ಬರೂ ಯೋಗ ಮಾಡುವುದರಿಂದ ದೀರ್ಘ ಕಾಲ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಶವಿದೇಶಗಳಲ್ಲೂ ಯೋಗದ ಬಗ್ಗೆ ಹೆಚ್ಚಿನ ಅರಿವು ಉಂಟಾಗುತ್ತಿದೆ. ಸರ್ಕಾರದ ವತಿಯಿಂದಲೂ ಸಹ ಯೋಗದ ಮಹತ್ವ ಸಾರುವ ದಿಸೆಯಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ವ್ಯಾಪಕವಾಗಿ ಯೋಗ ದಿನಾಚರಣೆಯನ್ನು ಸಾಮೂಹಿಕ ಯೋಗ ಮಾಡುವ ಮೂಲಕ ನಡೆಸಬೇಕು. ಜಿಲ್ಲೆಯ ಎಲ್ಲ 16 ಹೋಬಳಿ ಕೇಂದ್ರಗಳಲ್ಲಿ ಸಾಮೂಹಿಕ ಯೋಗ ಪ್ರದರ್ಶನದ ಮೂಲಕ ಯೋಗ ದಿನ ಆಚರಣೆಯನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳಬೇಕು. ಇದಕ್ಕೆ ಅಗತ್ಯವಿರುವ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಲು ಅನುವಾಗುವಂತೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6 ಗಂಟೆಗೆ ಯೋಗ ದಿನಾಚರಣೆ ಕೈಗೊಳ್ಳಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ನಗರದಲ್ಲಿ ಉಚಿತವಾಗಿ ಯೋಗ ತರಬೇತಿ ನೀಡಲು ಜೂನ್ 13ರ ಬೆಳಿಗ್ಗೆ 6 ಗಂಟೆಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜೂನ್ 13ರ ಬೆಳಿಗ್ಗೆ 6 ಗಂಟೆಯಿಂದ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯವರು ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಲಿದ್ದಾರೆ. ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಯೋಗ ತರಬೇತಿಯ ಪ್ರಯೋಜನ ಪಡೆಯಲು ಮುಂದೆ ಬರಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಇದೇ ವೇಳೆ ಮನವಿ ಮಾಡಿದರು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾ, ಗ್ರಾಮ ಹಾಗೂ ತಾಲೂಕು ಪಂಚಾಯಿತಿ ವ್ಯಾಪ್ತಿಗಳಲ್ಲಿ ನೋಡಲ್ ಅಧಿಕಾರಿಗಳನ್ನಾಗಿ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹ ಶಾಲಾ ಕಾಲೇಜುಗಳಲ್ಲಿ ಯೋಗ ತರಬೇತಿ ಆರಂಭಿಸಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಮಾತನಾಡಿ ಹೋಬಳಿ ಮಟ್ಟದಲ್ಲಿ ಸಾಮಾಹಿಕ ಯೋಗ ಪ್ರದರ್ಶನ ಆಯೋಜನೆಗೆ ಪೂರ್ವಭಾವಿಯಾಗಿ ಗ್ರಾಮಾಂತರ ಭಾಗಗಳ ಶಾಲಾಕಾಲೇಜುಗಳಲ್ಲಿ ಯೋಗ ತರಬೇತಿಗೆ ಏರ್ಪಾಡು ಮಾಡಬೇಕು. ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಎಲ್ಲರನ್ನೂ ತೊಡಗಿಸಿಕೊಂಡು ಯೋಗ ದಿನವನ್ನು ಆಚರಣೆ ಮಾಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುನೀತ್, ಡಾ. ಕೆ. ಪ್ರಫುಲ್ಲಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಮಾಜದ ಪರಿವರ್ತನೆಯಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ : ಸಿಇಈ ಡಾ. ಕೆ. ಹರೀಶ್ ಕುಮಾರ್ ಅಭಿಮತ
*ವಿ.ಎಸ್ ಎಸ್.*

ಚಾಮರಾಜನಗರ, ಜೂ. 12 - ಸಮಾಜದಲ್ಲಿ ಬೇರೂರಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯು ಸಮಾಜದಲ್ಲಿನ ಮಾನಸಿಕ ಬದಲಾವಣೆಯಿಂದ ಮಾತ್ರ ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ಇಂದಿಗೂ ನಾವು ಸಮಾಜದಲ್ಲಿ ನೋಡುತ್ತಿದ್ದೇವೆ. ಇದರ ಮೂಲೋತಾÀ್ಘಟನೆಗೆ ಇಲಾಖೆಗಳ ಜತೆ ಎಲ್ಲರೂ ಕೈಜೋಡಿಸಿದರೆ ಯಶಸ್ವಿಯಾಗಬಹುದು. ಬಾಲಕಾರ್ಮಿಕ ಪದ್ಧತಿ ದೂರ ಮಾಡಲು ಹಲವಾರು ಕಾಯಿದೆಗಳು ಇದ್ದರೂ ಸಹ ಸಮಾಜದಲ್ಲಿ ಪರಿವರ್ತನೆಯಾದರೆ ಮಾತ್ರ ಉದ್ದೇಶ ಸಫಲವಾಗುತ್ತದೆ ಎಂದು ಹರೀಶ್ ಕುಮಾರ್ ತಿಳಿಸಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ವಿಶೇಷ ಕಾಳಜಿ ನೀಡಬೇಕಿದೆ. ಸಂವಿಧಾನದ ಆಶಯದಂತೆ ಮಕ್ಕಳ ಪ್ರಗತಿಗೆ ಪೂರಕವಾಗಿರುವ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ವರ ಸಹಕಾರವೂ ಅಗತ್ಯವಾಗಿದೆ ಎಂದು ಹರೀಶ್ ಕುಮಾರ್ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಅವರು ಬಾಲ ಕಾರ್ಮಿಕ ಪದ್ಧತಿ ಹಿಂದಿನ ದಿನಗಳಿಗೆ ಹೋಲಿಸಿದರೆ ಪ್ರಸ್ತುತ ಸಂದರ್ಭದಲ್ಲಿ ಕಡಿಮೆಯಾಗಿದೆ. ಆದರೂ ಸಂಪೂರ್ಣವಾಗಿ ಹೋಗಲಾಡಿಸಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ. ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಕಂಡುಬಂದರೆ ಅವರಿಗೆ ತಿಳಿವಳಿಕೆ ನೀಡಿ ಶಾಲೆ ಪುನರ್ವಸತಿ ಕಾರ್ಯಕ್ರಮಗಳಿಗೆ ಸೇರ್ಪಡೆ ಮಾಡಲು ನಾಗರಿಕರು ಮುಂದಾಗಬೇಕೆಂದು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿರಲು ಕಾರಣವಾಗಿರುವ ಅಂಶಗಳನ್ನು ಗುರುತಿಸಿ ಅದರ ನಿವಾರಣೆಗೆ ಮುಂದಾಗಬೇಕಿದೆ. ಶಿಕ್ಷಣ, ಆರ್ಥಿಕ ನೆರವು ಇನ್ನಿತರ ಕಾರ್ಯಕ್ರಮಗಳ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸ ಯಶಸ್ವಿಯಾಗಿ ನಡೆಯಬೇಕಿದೆ ಎಂದು ಸಿವಿಲ್ ನ್ಯಾಯಾಧೀಶರು ಹೇಳಿದರು.
ಮೈಸೂರಿನ ಪೀಪಲ್ಸ್ ಲೀಗಲ್ ನಿರ್ದೇಶಕರು ಹಾಗೂ ವಕೀಲರಾದ ಪಿ.ಪಿ. ಬಾಬುರಾಜ್ ಅವರು ಮಾತನಾಡಿ ಮಕ್ಕಳ ನೆರವಿಗಾಗಿ ಬಾಲನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಬಾಲಕಾರ್ಮಿಕ ಪುನರ್ವಸತಿ ಕೇಂದ್ರ, ಸಮಗ್ರ ಮಕ್ಕಳ ರಕ್ಷಣೆ ಯೋಜನೆ ಸೇರಿದಂತೆ ಇತರೆ ಹಲವು ಮಂಡಳಿಗಳು ಅಸ್ತಿತ್ವದಲ್ಲಿವೆ. ಈ ಎಲ್ಲಾ ವ್ಯವಸ್ಥೆಗಳ ಉದ್ದೇಶ ಮಕ್ಕಳ ಹಕ್ಕುಗಳ ರಕ್ಷಣೆಯೇ ಆಗಿದೆ. ಈ ಕೆಲಸಗಳು ಸಮರ್ಪಕವಾಗಿ ನಿರ್ವಹಣೆಯಾಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕಾದ ಅಧಿಕಾರ ಎಲ್ಲರಿಗೂ ಇದೆ ಎಂದರು.
ಪ್ರತಿ ಮಗುವಿಗೂ ರಕ್ಷಣೆ, ಅಭಿವೃದ್ಧಿ, ಭಾಗವಹಿಸುವಿಕೆ, ವಿಕಾಸ ಹೊಂದುವುದೂ ಸೇರಿದಂತೆ ನಾನಾ ಹಕ್ಕುಗಳನ್ನು ನೀಡಲಾಗಿದೆ. ಬಾಲಕಾರ್ಮಿಕ ಪದ್ಧತಿ ಕಾಯಿದೆಯು ಬದಲಾಗಿದೆ. ಕಿಶೋರ ಅವಧಿಯಲ್ಲಿ ಅಂದರೆ 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದೂ ಸಹ ಅಪರಾಧವಾಗಿದೆ, ಈ ಬಗ್ಗೆ ಹೆಚ್ಚು ಮನವರಿಕೆ ಮಾಡಿಕೊಡಬೇಕಿದೆ ಎಂದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯ ಬಳಿ ಜಾಗೃತಿ ಜಾಥಾಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಚಾಲನೆ ನೀಡಿದರು.

ಜೂ. 13ರಂದು ನಗರದಲ್ಲಿ ದಲಿತ ವಚನಕಾರರ ಜಯಂತಿ 

*ವಿ.ಎಸ್ ಎಸ್.*

ಚಾಮರಾಜನಗರ, ಜೂ. 12 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ದಲಿತ ವಚನಕಾರರ ಜಯಂತಿಯನ್ನು ಜೂನ್ 13ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ  ದಲಿತ ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಸಿದ್ದಾರ್ಥನಗರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ. ಪುರುಷೊತ್ತಮ್ ಅವರು ಮುಖ್ಯ ಭಾಷಣ ಮಾಡುವರು. ಮೈಸೂರಿನ ನವೀನ್ ಮತ್ತು ತಂಡದಿಂದ ವಚನ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜೂ. 17ರಂದು ನಗರದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ

ಚಾಮರಾಜನಗರ, ಜೂ. 12 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಜೂನ್ 17ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೊಳ್ಳೇಗಾಲದ ಇಂದ್ವಾಡಿ ಶಿವಣ್ಣ ಅವರು ಮುಖ್ಯ ಭಾಷಣ ಮಾಡುವರು. ದೊಡ್ಡಿಂದುವಾಡಿಯ ವಿದ್ವಾನ್ ಮಹಾಂತಯ್ಯ ಮತ್ತು ತಂಡದಿಂದ ವಚನ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗಗಳ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 1:- 2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿರುವ ಹಿಂದುಳಿದ ವರ್ಗಗಳ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ಮೇಲ್ಪಟ್ಟ 35 ವರ್ಷಗಳ ವಯೋಮಿತಿಯೊಳಗಿರುವ 7ನೇ ತರಗತಿ ಉತ್ತೀರ್ಣರಾಗಿದ್ದು ಪ್ರವರ್ಗ-1, 2ಎ, 2ಬಿ, 3ಎ, 3ಬಿ ಗೆ ಸೇರಿದವರಾಗಿರಬೇಕು. ನಿರ್ಗತಿಕ ಮಹಿಳೆಯರು, ವಿಧವೆಯರುಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಮಾಹೆಯಾನ 300 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಒಂದು ಹೊಲಿಗೆ ಯಂತ್ರ ಮತ್ತು ಅರ್ಹತಾ ಪತ್ರವನ್ನು ಉಚಿತವಾಗಿ ನೀಡಲಾಗುವುದು.
ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿ, ಗುಂಡ್ಲುಪೇಟೆ ಹೊಲಿಗೆ ತರಬೇತಿ ಕೇಂದ್ರ, ಬೇಗೂರು (ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಕಟ್ಟಡ, ಬೇಗೂರು) ಇಲ್ಲಿ ಪಡೆದು ಜೂನ್ 30ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಕೆಡಿಪಿ ಸಭೆ ಮುಂದೂಡಿಕೆ

ಚಾಮರಾಜನಗರ, ಜೂ. 12:- ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಜೂನ್ 13ರಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಿಗಧಿಯಾಗಿದ್ದ ಮಾಸಿಕ ಕೆಡಿಪಿ ಸಭೆಯನ್ನು ಅನಿವಾರ್ಯ ಕಾರಣಗಳಿಂದಿ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು