Saturday, 17 June 2017

ಚಾಮರಾಜನಗರ ಪಟ್ಟಣದಲ್ಲಿ ಮತ್ತೆ ಹೆಚ್ಚಿದ ಮನೆಗಳ್ಳತನ , ,ವಚನಸಾಹಿತ್ಯ ಕ್ಷೇತ್ರದಲ್ಲಿ ದೇವರ ದಾಸಿಮಯ್ಯ ಪ್ರಮುಖರು : ಜಿ.ಪಂ. ಅಧ್ಯಕ್ಷರಾದ ರಾಮಚಂದ್ರ 17-06-2017

ಚಾಮರಾಜನಗರ ಪಟ್ಟಣದಲ್ಲಿ ಮತ್ತೆ ಹೆಚ್ಚಿದ ಮನೆಗಳ್ಳತನ 

*ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* 

 ಚಾಮರಾಜನಗರ: ಚಾಮರಾಜನಗರ ಪಟ್ಟಣದಲ್ಲೇ ಮತ್ತೆ ಮತ್ತೆ ಮನೆಗಳ್ಳತನ ಹೆಚ್ಚಾಗುತ್ತಿದ್ದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಕಳೆದ ರಾತ್ರಿ ಸಿದ್ದಾರ್ಥ ನಗರದ ಬಡಾವಣೆಯಲ್ಲಿ ವಕೀಲೊಬ್ಬರ ಮನೆಯಲ್ಲಿ ಬಾಡಿಗೆಗೆ ಇದ್ದ ಕರಿಕಲ್ಲು ಉದ್ಯಮಿಯೊಬ್ಬರ ಮನೆಯನ್ನ ಕಳ್ಳರು ಟಾರ್ಗೆಟ್ ಮಾಡಿದ್ದಾರೆ. 


ಅಂತರ್ ಜಿಲ್ಲಾ ವಾಸಿಯಾಗಿರುವ( ರಾಜು ಹಾಗೂ ನಜೀಬ್ ಎಂಬುವವರು  ಕರಿಕಲ್ಲು  ಪಾಲುದಾರಿಕೆ ಉದ್ಯಮಿದಾರರಾಗಿದ್ದು ಕಳ್ಳ ಇವರ‌ ಮನೆಗೆ ನುಗ್ಗಿದ್ದಾನೆ ಎಂದು ತಿಳಿದುಬಂದಿದೆ‌.
.ಮನೆಯಲ್ಲಿ ಲ್ಯಾಪ್ ಟಾಪ್, ಲಕ್ಷಕ್ಕೂ ಹೆಚ್ಚು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. .‌ಘಟನೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅದೀಕ್ಷಕಿ ಗೀತಾ ಪ್ರಸನ್ನ ,ಡಿವೈಸ್ಪಿ ಗಂಗಾದರಸ್ವಾಮಿ ಪಟ್ಟಣ ಠಾಣಾ ಇನ್ಸಪೆಕ್ಟರ್ ಮಹದೇವಯ್ಯ ಬೇಟಿ ನೀಡಿ ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ಕರೆತಂದು ಆರೋಪಿಗಳ ಪತ್ತೆ ಗಾಗಿ ಹುಡುಕಾಟ ಆರಂಬಿಸಿದ್ದಾರೆ.
 ಒಟ್ಟಾರೆ ರಾಜ್ಯದಲ್ಲಿ ಕಳ್ಳತನ ಸೇರಿದಂತೆ ವಿವಿದ ಅಕ್ರಮಗಳನ್ನ ತಡೆಯಲು ಇಲಾಖೆ ಜಾರಿಗೆ ತಂದ ನ್ಯೂ ಬೀಟ್ ಸಿಸ್ಟಂ ಜಾರಿಯಾಗುತ್ತಿದ್ದಂತೆ ಚಾಮರಾಜನಗರ ಪಟ್ಟಣದಲ್ಲಿ ಕಳ್ಳತನ ಹೆಚ್ಚಾಗುತ್ತಿರುವುದು ಮಾತ್ರ ವಿಪರ್ಯಾಸವಾಗಿದೆ.



ವಚನಸಾಹಿತ್ಯ ಕ್ಷೇತ್ರದಲ್ಲಿ ದೇವರ ದಾಸಿಮಯ್ಯ ಪ್ರಮುಖರು : ಜಿ.ಪಂ. ಅಧ್ಯಕ್ಷರಾದ ರಾಮಚಂದ್ರ

 ಎಸ್.ವಿ.ಎಸ್

ಚಾಮರಾಜನಗರ, ಜೂ. 17 - ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯ ಕ್ರಾಂತಿಯಲ್ಲಿ ಪ್ರಮುಖರಾಗಿದ್ದು ಹಲವಾರು ಮೌಲ್ಯಯುತ ವಚನಗಳನ್ನು ರಚಿಸಿದ್ದಾರೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರ ದಾಸಿಮಯ್ಯ ಅವರು ಸರಳವಾಗಿ ವಚನ ರಚಿಸುವ ಮೂಲಕ ಆಧ್ಯಾತ್ಮಕ ಹಾಗೂ ಭೌತಿಕ ಮಾತಿಗೆ ಶಕ್ತಿ ತುಂಬಿದರು. ಜನಪದ ಸಾಹಿತ್ಯಕ್ಕೂ ಅವರು ಅವರದ್ದೇ ಆದ ಧಾಟಿಯಲ್ಲಿ ಕೊಡುಗೆ ನೀಡಿದರು ಎಂದರು.

ದೇವರ ದಾಸಿಮಯ್ಯ ಅವರು 188ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ಬಗ್ಗೆ ಮಾಹಿತಿ ಇದೆ. ಸಮಾಜವನ್ನು ಎಚ್ಚರಿಸುವ ಹಾಗೂ ಮಾರ್ಗದರ್ಶನ ಮಾಡುವ ವಿಚಾರಗಳು ವಚನದಲ್ಲಿ ಅಡಕವಾಗಿವೆ. ಇವರ ವಚನಗಳ ಆಶಯ ಸದುದ್ದೇಶವಾಗಿದೆ ಎಂದು ರಾಮಚಂದ್ರ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಹಾಗೂ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಿ. ಪುಟ್ಟರಂಗಶೆಟ್ಟಿ ಅವರು ದೇವರ ದಾಸಿಮಯ್ಯನವರು ಸಮಾಜವನ್ನು ತಿದ್ದುವ ಅನೇಕ ವಚನಗಳನ್ನು ರಚನೆ ಮಾಡಿದ್ದಾರೆ. ಜ್ಞಾನದ ಪ್ರತೀಕವಾಗಿರುವ ವಚನಗಳು ಪ್ರಸ್ತುತ ಸಂದರ್ಭಕ್ಕೂ ಅಗತ್ಯವಾಗಿದೆ ಎಂದರು.
ನೇಕಾರ ಸಮುದಾಯ ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳಬೇಕಿದೆ. ಶಿಕ್ಷಣ ಕ್ಷೇತ್ರದಲ್ಲೂ ಹೆಚ್ಚಿನ ಆಸಕ್ತಿ ವಹಿಸಬೇಕು. ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಎಲ್ಲಾ ರಂಗಗಳಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದು ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಜಯಂತಿ ಅವರು ಮಾತನಾಡಿ ಶರಣರು, ವಚನಕಾರರು ತಮ್ಮ ಅಮೂಲ್ಯ ವಿಚಾರಧಾರೆಗಳಿಂದ ಸಮಾಜದ ಸುಧಾರಣೆ ಹಾಗೂ ಪರಿವರ್ತನೆಗೆ ಸಲಹೆ ಮಾಡಿದ್ದಾರೆ. ಹೀಗಾಗಿ ಇಂತಹ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಇಂದ್ವಾಡಿ ಶಿವಣ್ಣ ಅವರು ಮುಖ್ಯ ಭಾಷಣ ಮಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ನಗರದಸಭೆ ಸದಸ್ಯರಾದ ಗೋಪಾಲಕೃಷ್ಣ, ಸಮಾಜದ ಮುಖಂಡರಾದ ಲಕ್ಷ್ಮೀಕಾಂತ್, ಮಲ್ಲೇಶ್, ಗೋಪಾಲಕೃಷ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಾಗವೇಣಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಮಾರಂಭಕ್ಕೂ ಮೊದಲು ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದ ಬಳಿ ವಿವಿಧ ಜಾನಪದ ಕಲಾತಂಡಗಳೊಡನೆ ನಡೆದ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ : ಸಿ. ಪುಟ್ಟರಂಗಶೆಟ್ಟಿ

ಎಸ್.ವಿ.ಎಸ್

ಚಾಮರಾಜನಗರ, ಜೂ. 17 - ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಸವಲತ್ತುಗಳನ್ನು ನೀಡುತ್ತಿದ್ದು ಇದರ ಪ್ರಯೋಜನ ಪಡೆದು ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಬೇಕೆಂದು ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.
ನಗರದ ತಾಲೂಕು ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಇಂದು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ನಡೆದ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ತಾಲೂಕು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಕರ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಅತಿಥಿ ಶಿಕ್ಷಕರ ನೇಮಕಕ್ಕೂ ಅವಕಾಶ ನೀಡಲಾಗಿದೆ. ಕಟ್ಟಡಗಳ ನಿರ್ಮಾಣ, ಶೌಚಾಲಯ, ಕಾಂಪೌಂಡ್, ಕುಡಿಯುವ ನೀರು, ಇತರೆ ಸೌಲಭ್ಯಗಳಿಗೆ ಅನುದಾನ ಲಭಿಸುತ್ತಿದೆ ಎಂದರು.
ಕೆಲ ಜಿಲ್ಲೆಯ ಕೆಲ ಭಾಗದಲ್ಲಿ ಕೆಲ ಸಮುದಾಯದವರು ಸಹ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕಿದೆ. ಕಳೆದ ಫಲಿತಾಂಶವನ್ನು ಗಮನಿಸಿದಾಗ ಕೆಲ ತಾಲೂಕುಗಳಲ್ಲಿ ನಿರ್ಧಿಷ್ಟವಾದ ಕೆಲ ಭಾಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡದಿರುವುದು ಕಂಡುಬಂದಿದೆ. ಇನ್ನೂ ಕೆಲ ಭಾಗಗಳಲ್ಲಿ ಹೆಚ್ಚಿನ ಸುಧಾರಣೆ ಆಗಬೇಕಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟದಲ್ಲಿ ಪುರಸ್ಕರಿಸುವ ಕಾರ್ಯಕ್ರಮವನ್ನುÀ ಸಹ ಹಮ್ಮಿಕೊಳ್ಳಲಾಗುವುದು ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಜನಪ್ರತಿನಿಧಿಗಳು, ಅಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಕಾರ, ಉತ್ತೇಜನ ಕಾರಣವಾಯಿತು. ಮುಂದೆಯೂ ಇದೇ ರೀತಿ ಉತ್ತಮ ಸ್ಥಾನ ಗಳಿಸಲು ಉತ್ತೇಜನ ನೀಡಲಾಗುವುದು ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ತಾಲೂಕು ಪಂಚಾಯತ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ನೆರವಿಗಾಗಿ ಕೈಪಿಡಿ ಬಿಡುಗಡೆ ಮಾಡಲಾಗಿತ್ತು. ಎಲ್ಲರ ಪರಿಶ್ರಮದಿಂದ ತಾಲೂಕು ಹೆಚ್ಚಿನ ಸಾಧನೆ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ ಮಾತನಾಡಿ ಅಂಕಗಳಿಕೆ ಆಧಾರದ ಮೇಲೆ ವಿದ್ಯಾರ್ಥಿಗಳು ಕೀಳರಿಮೆಯಿಂದ ಬಳಲದಂತೆ ನೋಡಿಕೊಳ್ಳಬೇಕು. ಎಲ್ಲರನ್ನೂ ಸರಿಸಮಾನವಾಗಿ ಪ್ರೋತ್ಸಾಹಿಸಬೇಕು ಎಂದು ಕಿವಿಮಾತುಹೇಳಿದರು.
ಮತ್ತೋರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಮಾತನಾಡಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿÀ ಉತ್ತಮ ಫಲಿತಾಂಶ ಬರುವಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕಿದೆ. ಶಿಕ್ಷಕರ ಕೊರತೆ ಕಾಡದಂತೆ ಅಗತ್ಯ ವ್ಯವಸ್ಥೆ ಆಗಬೇಕಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗಸುಂದರಮ್ಮ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ತಾ.ಪಂ., ಗ್ರಾ..ಪಂ. ಉಪಚುನಾವಣೆಗೆ ಅ  ಅದಿಸೂಚನೆ ಪ್ರಕಟ

ಚಾಮರಾಜನಗರ, ಜೂ. 17 – ವಿವಿಧ ಕಾರಣದಿಂದ ತೆರವಾಗಿರುವ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಣಗಳ್ಳಿ ತಾಲೂಕು ಪಂಚಾಯಿತಿ ಸದಸ್ಯ ಸ್ಥಾನ ಹಾಗೂ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ ತಾಲೂಕಿನ ಗ್ರಾಮ ಪಂಚಾಯಿತಿಯ ತಲಾ ಒಂದೊಂದು ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು ಜಿಲ್ಲಾಧಿಕಾರಿ ಬಿ. ರಾಮು ಅವರು ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಬೋಗಾಪುರ (ಅನುಸೂಚಿತ ಪಂಗಡ(ಮಹಿಳೆ)), ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ(ಸಾಮಾನ್ಯ-ಮಹಿಳೆ), ಗುಂಡ್ಲುಪೇಟೆ ತಾಲೂಕಿನ ನೇನೇಕಟ್ಟೆ (ಹಿಂದುಳಿದ ಅ ವರ್ಗ) ಗ್ರಾಮ ಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಹಾಗೂ ಕೊಳ್ಳೇಗಾಲ ತಾಲೂಕಿನ ಮಣಗಳ್ಳಿ ತಾಲೂಕು ಪಂಚಾಯಿತಿ ಒಂದು ಸದಸ್ಯ ಸ್ಥಾನಕ್ಕೆ (ಸಾಮಾನ್ಯ) ಚುನಾವಣೆ ನಿಗದಿಯಾಗಿದೆ.
ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನವಾಗಿದೆ. ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಜೂನ್ 23 ಕಡೆಯ ದಿನವಾಗಿದೆ. ಜುಲೈ 2ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ (ಅವಶ್ಯವಿದ್ದಲ್ಲಿ) ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಜುಲೈ 4ರಂದು ನಡೆಸಲಾಗುತ್ತದೆ. ಜುಲೈ 5ರಂದು ತಾಲ್ಲೂಕು ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜುಲೈ 5ರಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಬಿ.ರಾಮು ಅವರು ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು