ವಿಶ್ವ ಯೋಗ ದಿನಾಚರಣೆ - ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ವಿಶ್ವ ಯೋಗ ದಿನಾಚರಣೆ - ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಇಂದು ಕೇಂದ್ರ ಸರ್ಕಾರದ ಆಯುಷ್ ಮಂತ್ರಾ ಲಯ, ರಾಜ್ಯ ಆಯುಷ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಪತಂಜಲಿ ಯೋಗ ಫೌಂಡೇಷನ್ ಸಹಯೋಗದಲ್ಲಿ ೩ನೇ ಅಂತ ರಾಷ್ಟ್ರೀಯ ಯೋಗದಿನಾಚರಣೆಯನ್ನು ಆಚರಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆದ ೩ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ೨೦೦೦ಕ್ಕೂ ಹೆಚ್ಚು ವಿವಿಧ ಶಾಲೆಯ ಮಕ್ಕಳು, ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ ಮಾಡಿದರು.ಜಿಲ್ಲಾಧಿಕಾರಿ ಬಿ.ರಾಮು, ಎಡಿಸಿ ಗಾಯಿತ್ರಿ, ಜಿಲ್ಲಾ ಪಂಚಾಯಿತಿ ಸಿಇಒ ಹರೀಶ್ ಕುಮಾರ್, ಎಸ್ಪಿ ಧರ್ಮೇಂದ್ರಕುಮಾರ್, ಎಎಸ್ಪಿ ಎಂ.ಎಸ್.ಗೀತಾ, ಡಿವೈಎಸ್ಪಿ ಗಂಗಾಧರಸ್ವಾಮಿ, ಪಾಲ್ಗೊಂಡಿದ್ದರು.
**********************************************************************************
ಜೂ. 23ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 21 - ಕಡಕೊಳ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಜೂನ್ 23ರಂದು ಬಸ್ ಷಟ್ ಡೌನ್ ಇರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಆಗುವ ಕಾರಣ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
******************************************************
ಯಶಸ್ವಿಯಾಗಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಚಾಮರಾಜನಗರ, ಜೂ. 21 :- ಶಾಂತಿ ಮತ್ತು ಐಕ್ಯತೆಗಾಗಿ ಯೋಗ ಎಂಬ ಘೋಷವಾಕ್ಯದಡಿ 3ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಇಂದು ನಗರದಲ್ಲಿ ಯಶಸ್ವಿಯಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಫೌಂಡೇಶನ್ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಯೋಗ ದಿನ ಆಚರಣೆ ಅಂಗವಾಗಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಶಾಲಾಕಾಲೇಜು ವಿದ್ಯಾರ್ಥಿಗಳು, ಸಂಘಸಂಸ್ಥೆಗಳು ಪ್ರತಿನಿಧಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ನಾಗರಿಕರು, ಯೋಗ ಆಸಕ್ತರು ಪಾಲ್ಗೊಂಡರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಫೌಂಡೇಶನ್ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಯೋಗ ದಿನ ಆಚರಣೆ ಅಂಗವಾಗಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಶಾಲಾಕಾಲೇಜು ವಿದ್ಯಾರ್ಥಿಗಳು, ಸಂಘಸಂಸ್ಥೆಗಳು ಪ್ರತಿನಿಧಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ನಾಗರಿಕರು, ಯೋಗ ಆಸಕ್ತರು ಪಾಲ್ಗೊಂಡರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಅವರು ಮೈದಾನದಲ್ಲಿ ನಿಂತು ಎಲ್ಲರೊಡನೆ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು ವಿಶೇಷ ಗಮನ ಸೆಳೆಯಿತು.
ಬೆಳಿಗ್ಗೆ 6 ಗಂಟೆಯಿಂದಲೇ ತಂಡೋಪತಂಡವಾಗಿ ವಿದ್ಯಾರ್ಥಿಗಳು, ಯೋಗ ಆಸಕ್ತರು ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಸಮಾವೇಶಗೊಂಡರು. ಬಳಿಕ ಸುಮಾರು ಒಂದು ಗಂಟೆಗಳ ಕಾಲ ಯೋಗ ಪ್ರದರ್ಶನ ನಡೆಯಿತು. ಅತ್ಯಂತ ವ್ಯವಸ್ಥಿತವಾಗಿ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಸಿದ್ಧತೆ ಮಾಡಲಾಗಿತ್ತು.
ಬೆಳಿಗ್ಗೆ 6 ಗಂಟೆಯಿಂದಲೇ ತಂಡೋಪತಂಡವಾಗಿ ವಿದ್ಯಾರ್ಥಿಗಳು, ಯೋಗ ಆಸಕ್ತರು ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಸಮಾವೇಶಗೊಂಡರು. ಬಳಿಕ ಸುಮಾರು ಒಂದು ಗಂಟೆಗಳ ಕಾಲ ಯೋಗ ಪ್ರದರ್ಶನ ನಡೆಯಿತು. ಅತ್ಯಂತ ವ್ಯವಸ್ಥಿತವಾಗಿ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಸಿದ್ಧತೆ ಮಾಡಲಾಗಿತ್ತು.
ಯೋಗ ಪ್ರದರ್ಶನದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಜ್ಞಾನ ಬಲದಿಂದ ಅಜ್ಞಾನ ದೂರವಾಗುತ್ತದೆ ಎಂಬ ಮಾತನ್ನು ಉಲ್ಲೇಖಿಸಿ ಯೋಗದ ಬಲದಿಂದ ಅನಾರೋಗ್ಯ ಇಲ್ಲವಾಗುತ್ತದೆ. ಹೀಗಾಗಿ ದೀರ್ಘ ಆಯಸ್ಸು, ಸಂತೋಷಕರ ಜೀವನಕ್ಕೆ ಯೋಗ ಪ್ರತಿಯೊಬ್ಬರಿಗೂ ಅಗತ್ಯವಿದೆ. ಜೀವನದುದ್ದಕ್ಕೂ ಉಲ್ಲಾಸಕರವಾಗಿ ಇರಬೇಕಾದರೆ ಯೋಗ ಅಭ್ಯಾಸ ಮಾಡಬೇಕೆಂದರು.
ವಿದ್ಯಾರ್ಥಿಗಳಿಗೆ ವಿಶೇಷವಾಗಿ ಏಕಾಗ್ರತೆ ಅಗತ್ಯವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಅಧÀ್ಯಯನಶೀಲರಾಗುವ ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸಲು ಹಾಗೂ ಮನಸ್ಸನ್ನು ಚಂಚಲತೆಯಿಂದ ದೂರಮಾಡಿ ಗ್ರಹಿಕೆ ಸಾಮಥ್ರ್ಯ ಹೆಚ್ಚಾಗಲು ಯೋಗ ಅನುಕೂಲಕರವಾಗಿದೆ. ಈ ಹಿನ್ನೆಲೆಯಲ್ಲಿ ಯೋಗ ಅಭ್ಯಾಸವನ್ನು ಮಾಡುವುದು ಒಳಿತು ಎಂದ ಜಿಲ್ಲಾಧಿಕಾರಿ ರಾಮು ಅವರು ತಾವೂ ಸಹ ವಿದ್ಯಾರ್ಥಿ ಜೀವನದಲ್ಲೇ ಯೋಗ ಕಲಿತ ಬಗ್ಗೆ ನೆನಪುಗಳನ್ನು ಬಿಚ್ಚಿಟ್ಟರು.
ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿರುವ ಯೋಗ ಅಭ್ಯಾಸವನ್ನು ಒಂದು ದಿನದ ಆಚರಣೆಗಷ್ಟೇ ಸೀಮಿತಗೊಳಿಸಬಾರದು. ಯೋಗ ಅಭ್ಯಾಸವನ್ನು ನಿರಂತರವಾಗಿ ಮುಂದುವರೆಸಬೇಕು. ಯೋಗದ ಮಹತ್ವವನ್ನು ವ್ಯಾಪಕವಾಗಿ ತಿಳಿಸುವ ಉದ್ದೇಶದಿಂದಲೇ ಈ ಬಾರಿ ಹಿಂದಿನ ವರ್ಷಕ್ಕಿಂತಲೂ ಹೆಚ್ಚಿನ ಕಾಳಜಿ ವಹಿಸಿ ಎಲ್ಲಾ ಭಾಗಗಳಲ್ಲಿ ಯೋಗ ದಿನ ಆಚರಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲೆಯ ಎಲ್ಲಾ ಹೋಬಳಿ ಕೇಂದ್ರಗಳಲ್ಲಿಯೂ ಸಾವಿರಾರು ವಿದ್ಯಾರ್ಥಿಗಳು ಯೋಗ ಆಸಕ್ತರು ಸಾಮೂಹಿಕ ಯೋಗ ಪ್ರದರ್ಶನ ನೀಡಿದ್ದಾರೆ ಎಂದು ರಾಮು ತಿಳಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು ಅವರು ಮಾತನಾಡಿ ಪ್ರಾಚೀನ ಕಾಲದಲ್ಲೇ ಯೋಗಕ್ಕೆ ವಿಶೇಷ ಮಹತ್ವ ಇತ್ತು. ಇಂದು ವಿದೇಶಿಗರು ಸಹ ಯೋಗದ ಉತ್ತಮ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಂಡಿದ್ದಾರೆ. ಯೋಗ ಅಭ್ಯಾಸವನ್ನು ವಿದೇಶಗಳ ವಿವಿಧ ರಂಗಗಳ ಸಾಧಕರು ನಡೆಸುತ್ತಿದ್ದಾರೆ. ಯಾವುದೇ ಸಾಧನ ಸಲಕರಣೆಗಳಿಲ್ಲದೇ ಎಲ್ಲರೂ ಸರಳವಾಗಿ ಯೋಗ ಕಲಿತು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ತಿಳಿಸಿದರು.
ಪತಂಜಲಿ ಯೋಗ ಫೌಂಡೇಶನ್ ಅಧ್ಯಕ್ಷರಾದ ಕುಮಾರಸ್ವಾಮಿ ಅವರು ಅಂತರಾಷ್ಟ್ರೀಯ ಯೋಗ ದಿನ ಆಚರಣೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹೆಚ್ಚು ಆಸಕ್ತಿ ವಹಿಸಿ ಯಶಸ್ಸುಗೊಳಿಸಿರುವ ಕುರಿತು ಶ್ಲಾಘಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಬಿ. ಪುನೀತ್ ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಜಿನಾ ಮೆಲಾಕಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
**********************************************************************
**********************************************************************
ಸಮರೋಪಾದಿಯಲ್ಲಿ ಸ್ವಚ್ಚತೆ, ಆರೋಗ್ಯ ಪೂರಕ ಕಾರ್ಯಕ್ರಮ ಅನುಷ್ಠಾನ ಮಾಡಲು ಜಿಲ್ಲಾಧಿಕಾರಿ ತಾಕೀತು
ಚಾಮರಾಜನಗರ, ಜೂ. 21 - ಡೆಂಗೆ ಸೇರಿದಂತೆ ಇತರೆ ಜ್ವರ ಸಂಬಂಧಿ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸ್ವಚ್ಚತೆ ಹಾಗೂ ಆರೋಗ್ಯಪೂರಕ ಜಾಗೃತಿ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ ಪರಾಮರ್ಶೆ ಹಾಗೂ ಇತರೆ ಆರೋಗ್ಯ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಡೆಂಗೆ ಇತರೆ ಜ್ವರ ಸಂಬಂಧ ಪ್ರಕರಣಗಳು ದಾಖಲಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಹೀಗಾಗಿ ನೈರ್ಮಲ್ಯಕ್ಕೆ ವಿಶೇಷ ಒತ್ತು ನೀಡಬೇಕು. ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ನೈರ್ಮಲ್ಯಪೂರಕ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ವ್ಯಾಪಕವಾಗಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ, ಕಸ ವಿಲೇವಾರಿ, ಸೊಳ್ಳೆಗಳ ನಿರ್ಮೂಲನೆ, ಇತರೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕೂಡಲೇ ತಹಸೀಲ್ದಾರ್ ಅವರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಆಯಾ ತಾಲೂಕು ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿ ಸಿಬ್ಬಂದಿಯನ್ನು ಒಳಗೊಂಡ ಸಭೆಯನ್ನು ಕರೆಯಬೇಕು. ಅಗತ್ಯವಾಗಿ ಚಾಲನೆ ನೀಡಬೇಕಿರುವ ಆರೋಗ್ಯ ಸಂಬಂಧಿ ಕೆಲಸಗಳಿಗೆ ಕಾರ್ಯೋನ್ಮುಖರಾಗಲು ಸೂಚಿಸಬೇಕೆಂದು ರಾಮು ತಿಳಿಸಿದರು.
ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಚರಂಡಿ, ಅನುಪಯುಕ್ತ ಸ್ಥಳಗಳಲ್ಲಿ ನೀರು ನಿಲ್ಲದಂತೆ ವಿಲೇವಾರಿ ಮಾಡಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಇರದಂತೆ ವಹಿಸಬೇಕಿರುವ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತೊಡಗಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ವಚ್ಚತೆ ಹಾಗೂ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸಗಳು ಜತೆಜತೆಯಲ್ಲಿಯೇ ಸಾಗಬೇಕು. ಹೊಟೆಲ್, ರೆಸ್ಟೂರೆಂಟ್, ಬೇಕರಿ, ಬೀದಿಬದಿಯ ಅಂಗಡಿಗಳಲ್ಲಿ ನೈರ್ಮಲ್ಯ ಕ್ರಮಗಳನ್ನು ಪಾಲಿಸುತ್ತಿದ್ದಾರೆಯೇ ಎಂದು ಪರಿಶೀಲಿಸಬೇಕು. ಆರೋಗ್ಯಕರ ವಿದಾನಗಳನ್ನು ಅನುಸರಿಸದೇ ಇರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲ ಹಾಡಿಗಳಲ್ಲೂ ಸಹ ಆರೋಗ್ಯ ತಪಾಸಣೆಯನ್ನು ನಡೆಸಬೇಕು. ಸಂಚಾರಿ ಚಿಕಿತ್ಸಾ ವಾಹನಗಳ ಸೌಲಭ್ಯ ಲಭಿಸಬೇಕು. ಅನಾರೋಗ್ಯದಿಂದ ಬಳಲುತ್ತಿರುವವರು ಕಂಡುಬಂದರೆ ಅವರ ರಕ್ತ ಮಾದರಿಯನ್ನು ಪರೀಕ್ಷಿಸಿ ಅವಶ್ಯವಿರುವ ಚಿಕಿತ್ಸೆಯನ್ನು ನೀಡಬೇಕು. ಗಂಭೀರತೆ ಅಂಶಗಳು ಕಂಡುಬಂದರೆ ಪಟ್ಟಣದ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು. ವಿಶೇಷ ಆಂದೋಲನ ಮಾದರಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಆರೋಗ್ಯ ಕಾಪಾಡುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಯಾವುದೇ ಭಾಗದಲ್ಲಿ ಶಂಕಿತ ಜ್ವರ ಪ್ರಕರಣಳಿಂದ ಸಾವನ್ನಪ್ಪುವುದು ಕಂಡುಬಂದರೆ ಆಯಾ ಭಾಗದ ಹಿರಿಯ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ರಾಮು ಎಚ್ಚರಿಕೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ವ್ಯಾಪಕವಾಗಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಆರೋಗ್ಯ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಜ್ವರ ಸಂಬಂಧಿ ಪ್ರಕರಣಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಪ್ರತಿನಿತ್ಯದ ಕಾರ್ಯನಿರ್ವಹಣೆಯ ವರದಿಗಳು ಬರಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಎಂ. ಅನಿಲ್ ಕುಮಾರ್, ಜಿಲ್ಲಾ ಕಣ್ಗಾವಲು ಘಟಕ ಅಧಿಕಾರಿ ಡಾ. ಎಂ. ನಾಗರಾಜು, ತಹಸೀಲ್ದಾರರಾದ ಪುರಂಧರ, ಚಂದ್ರಮೌಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮಕುಮಾರ್, ನಗರಸಭೆ ಆಯುಕ್ತರಾದ ರಾಜಣ್ಣ, ರಮೇಶ್, ಇನ್ನಿತರ ಸ್ಥಳೀಯ ಸಂಸ್ಥೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಜೂ. 23ರಂದು ಜಿಲ್ಲೆಗೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾಮಗಾರಿ ಪರಿಶೀಲನಾ ಸಮಿತಿ ಅಧ್ಯಕ್ಷರು, ಸದಸ್ಯರ ಭೇಟಿ
ಚಾಮರಾಜನಗರ, ಜೂ. 21 - ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಸ್.ಜಿ. ನಂಜಯ್ಯಮಠ ಹಾಗೂ ಸಮಿತಿಯ ಸದಸ್ಯರು ಜೂನ್ 23ರಂದು ಬೆಳಿಗ್ಗೆ 10.30 ಗಂಟೆಗೆ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ಇದೇವೇಳೆ ಕ್ಷೇತ್ರಗಳಿಗೆ ಭೇಟಿ ನೀಡುವರು. ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾಮಗಾರಿ ಸಂಬಂಧ ಪರಾಮರ್ಶೆ ನಡೆಸುವರೆಂದು ಜಿಲ್ಲಾ ಪಂಚಾಯತ್ ತಿಳಿಸಿದೆ.
ಜೂ. 22ರಂದು ರಫ್ತು ಜಾಗೃತಿ ಶಿಬಿರ
ಚಾಮರಾಜನಗರ, ಜೂ. 21 - ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಗ್ರಾನೈಟ್ ಉದ್ಯಮಿಗಳ ಸಂಘ ಮತ್ತು ವರ್ತಕರ ಸಂಘದ ಆಶ್ರಯದಲ್ಲಿ ಕೈಗಾರಿಕೋದ್ಯಮಿ ಹಾಗೂ ವಾಣೀಜ್ಯೋದ್ಯಮಿಗಳಿಗಾಗಿ ರಫ್ತು ಉತ್ತೇಜನ ಕುರಿತು ರಫ್ತು ಜಾಗೃತಿ ಶಿಬಿರವನ್ನು ಜೂನ್ 22ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ವರ್ತಕರ ಭವನದಲ್ಲಿ ಆಯೋಜಿಸಲಾಗಿದೆ.ಆಸಕ್ತ ಉದ್ದಿಮೆದಾರರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಭೀಮಾ ಬೆಳೆ ವಿಮೆಗೆ ನೊಂದಾಯಿಸಲು ಮನವಿ
ಚಾಮರಾಜನಗರ. ಜೂ. 21 2017-18ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯ 4 ತಾಲ್ಲೂಕಿನ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಿದ್ದು, ನಿರ್ಧರಿತ ಬೆಳೆಗಳಿಗೆ ಬೆಳೆ ವಿಮೆ ನೊಂದಾಯಿಸಿಕೊಳ್ಳಲು ಕೃಷಿ ಇಲಾಕೆ ಮನವಿ ಮಾಡಿದೆ.ಮಳೆ ಆಶ್ರಿತ ಉದ್ದು, ಹೆಸರು, ಎಳ್ಳು ಬೆಳೆಗೆ ನೊಂದಾಯಿಸಿಕೊಳ್ಳಲು ಜೂನ್ 30 ಕಡೆಯ ದಿನವಾಗಿದೆ.
ನೀರಾವರಿ ಆಶ್ರಿತ ಮುಸುಕಿನ ಜೋಳ, ಜೋಳ, ಸಜ್ಜೆ, ಆಲೂಗೆಡ್ಡೆ, ಈರುಳ್ಳಿ, ಸೂರ್ಯಕಾಂತಿ, ಟೊಮೆಟೋ, ಮಳೆ ಆಶ್ರಿತ ಮುಸುಕಿನ ಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ನೆಲಗಡಲೆ (ಶೇಂಗ), ಅಲಸಂದೆ ಬೆಳೆಗೆ ಮತ್ತು ಬದನೆ, ಬೀನ್ಸ್ ಬೆಳೆಗೆ ನೊಂದಾಯಿಸಿಕೊಳ್ಳಲು ಜುಲೈ 15 ಕಡೆಯ ದಿನವಾಗಿದೆ.
ಮಳೆ ಆಶ್ರಿತ ತೊಗರಿ, ಹುರುಳಿ, ಹರಳು ಮತ್ತು ಅರಿಶಿನ ಬೆಳೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕಡೆಯ ದಿನವಾಗಿದೆ.
ನೀರಾವರಿ ಮತ್ತು ಮಳೆ ಆಶ್ರಿತ ಭತ್ತ, ರಾಗಿ ಹಾಗೂ ಮಳೆ ಆಶ್ರಿತ ಹತ್ತಿ, ಅವರೆ ಬೆಳೆಗೆ ನೊಂದಾಯಿಸಿಕೊಳ್ಳಲು ಆಗಸ್ಟ್ 14 ಕಡೆಯ ದಿನವಾಗಿದೆ.
2017ರ ಮುಂಗಾರು ಹಂಗಾಮಿನಲ್ಲಿ ಬೆಳೆÉ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಇಲ್ಲವೇ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ಅಡುಗೆಯವರು, ಅಡುಗೆ ಸಹಾಯಕರ ಹುದ್ದೆ ಅಭ್ಯರ್ಥಿಗಳಿಗೆ ದಾಖಲಾತಿ ಹಾಗೂ ಪ್ರಾಯೋಗಿಕ ಪರೀಕ್ಷೆ
ಚಾಮರಾಜನಗರ, ಜೂ. 21- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.ಅಡುಗೆಯವರ ಹುದ್ದೆಗೆ ಜೂನ್ 22ರಂದು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜೂನ್ 23ರಂದು ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಅಡುಗೆಯವರಿಗೆ ಜೂನ್ 28ರಂದು ಹಾಗೂ ಸಹಾಯಕರಿಗೆ ಜೂನ್ 29ರಂದು ನಡೆಸಲಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 3ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಸಿ ನೀಡಿದ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 18ರಂದು ಹೊರಡಿಸಲಾಗುವುದು.
ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ ತಿತಿತಿ.hಣಣಠಿ://ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ದಾಖಲಾತಿ ಪರಿಶೀಲನೆಗೆ ಕಾಲ್‍ಲೆಟರ್ ಅನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08226-222180 ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.
No comments:
Post a Comment