Monday, 19 June 2017

ಜೂ. 21ರಂದು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ, 19-06-2017


ಜೂ. 21ರಂದು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ



ಚಾಮರಾಜನಗರ, ಜೂ. 19:- ಆಯುಷ್ ಮಂತ್ರಾಲಯ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನ ಸಂಸ್ಥೆ ಮತ್ತು ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ, ಶ್ರೀ ಪತಂಜಲಿ ಯೋಗ ಫೌಂಡೇಷನ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕಚೇರಿ ಪಕ್ಕದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6.30 ಗಂಟೆಗೆ 3ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು.ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವ ಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ವಿಶೇಷ ಆಹ್ವಾನಿತರಾಗಿ ಆಯುಷ್ ಇಲಾಖೆ ನಿರ್ದೇಶಕರಾದ ರಾಜ್ ಕಿಶೋರ್ ಸಿಂಗ್ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜೂ. 20ರಂದು ನಗರದಲ್ಲಿ ರಾಜ್ಯಮಟ್ಟದ ಬುಡಕಟ್ಟು ಉತ್ಸವಕ್ಕೆ ಚಾಲನೆ

ಚಾಮರಾಜನಗರ, ಜೂ. 19 - ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜೂನ್ 20 ಹಾಗೂ 21ರಂದು ರಾಜ್ಯ ಮಟ್ಟದ ಎರಡು ದಿನಗಳ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8.30 ಗಂಟೆಗೆ ನಗರದ ವಾಲ್ಮೀಕಿ ಭವನದಿಂದ ಕಲಾತಂಡಗಳ ಮೆರವಣಿಗೆ ಹೊರಡಲಿದ್ದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸಮಾರಂಭವನ್ನು ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬುಡಕಟ್ಟು ಕರಕುಶಲ ವಸ್ತುಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಯರವ ಬುಡಕಟ್ಟು ಭಾಷಾ ಶಬ್ದಕೋಶ ಬಿಡುಗಡೆ ಮಾಡುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಡಾ. ಎಂ.ಸಿ. ಮೋಹನ್‍ಕುಮಾರಿ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19 - ಸಮಾಜ ಕಲ್ಯಾಣ ಇಲಾಖೆಯ ನಿರ್ವಹಣೆಯಲ್ಲಿರುವ ಹರದನಹಳ್ಳಿಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಕಾಲೇಜು ವಿದ್ಯಾರ್ಥಿನಿಲಯ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು ಬಾಲಕರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗುತ್ತಿದ್ದು ಪರಿಶಿಷ್ಟ ಜಾತಿಯ ವಿದ್ಯಾಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿಧವೆಯರಿಗೆ ಆರ್ಥಿಕ ನೆರವು 

ಚಾಮರಾಜನಗರ, ಜೂ. 19 :- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ.ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಅದರ ಉಪಸಮುದಾಯ ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
ವಾರ್ಷಿಕ ವರಮಾನ ಗ್ರಾಮಾಂತರ ಪÀ್ರದೇಶದವರಾಗಿದ್ದಲ್ಲಿ 40 ಸಾವಿರ ರೂ. ಹಾಗೂ ಪಟ್ಟಣ ಪ್ರದೇಶದವರಾಗಿದ್ದಲ್ಲಿ 55 ಸಾವಿರ ರೂ. ಒಳಗಿರಬೇಕು.
ಆರ್ಥಿಕ ಚಟುವಟಿಕೆ ಕೈಗೊಳ್ಳಲು ಶೇ.4ರ ಬಡ್ಡಿದರದಲ್ಲಿ 30 ಸಾವಿರ ರೂ. ಸಾಲ ಹಾಗೂ 10 ಸಾವಿರ ರೂ. ಸಹಾಯಧನ ಸೇರಿದಂತೆ ಒಟ್ಟು 40 ಸಾವಿರ ರೂ. ನೆರವು ನೀಡಲಾಗುತ್ತದೆ. ಅರ್ಜಿಗಳನ್ನು ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 20ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂ.ಸಂ. 08226-223587 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19 :– ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಚಾಮರಾಜನಗರ ಪಟ್ಟಣದಲ್ಲಿ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅವಕಾಶವಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಮತೀಯ ಅಲ್ಪಸಂಖ್ಯಾತ ಜನಾಂಗಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಪಾರ್ಸಿ, ಸಿಖ್ ಹೆಣ್ಣುಮಕ್ಕಳು ಪ್ರವೇಶ ಪಡೆಯಬಹುದು. ವಸತಿ, ಊಟ, ಗ್ರಂಥಾಲಯ, ಕ್ರೀಡಾಸಾಮಗ್ರಿ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ. ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ (ದೂ.ಸಂ. 08226-224380) ಅಥವಾ ವಿದ್ಯಾರ್ಥಿನಿಲಯದ ನಿಲಯಪಾಲಕರು (ಮೊಬೈಲ್ 9980865550)ರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ಕ್ಷೇತ್ರಗಳ ಸಾಧಕ ಮಕ್ಕಳಿಂದ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19– ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲೆ, ಕ್ರೀಡೆ, ಸಾಂಸ್ಕøತಿಕ, ತಾರ್ಕಿಕ ಸಾಧನೆ, ಸಂಗೀತ, ನಾವಿನ್ಯತೆ, ಸಮಾಜಸೇವೆ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ನೀಡುವ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
2017ನೇ ವರ್ಷದ ಜಿಲ್ಲಾಮಟ್ಟದ ಪ್ರಶಸ್ತಿಗೆ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು 10 ಸಾವಿರ ರೂ. ನಗರದು ಬಹುಮಾನ ಒಳಗೊಂಡಿದೆ.
ವಯೋಮಿತಿ ಬಗ್ಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿರಬೇಕು. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜೂನ್ 30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




ಕರಾಟೆ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19:– ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆ ಆದರ್ಶ ವಿದ್ಯಾಲಯಗಳಲ್ಲಿ 9ನೇ ತರಗತಿ ವಿದ್ಯಾರ್ಥಿನಿಯರಿಗೆ ಕರಾಟೆ, ಜೂಡೋ, ಟಿಕ್ವೆಂಡೋ ಹಾಗೂ ಇತರೆ ಸ್ವರಕ್ಷಣಾ ಕೌಶಲ್ಯ ತರಬೇತಿ ನೀಡುವ ತರಬೇತಿದಾರರಿಂದ ಅರ್ಜಿ ಆಹ್ವಾನಿಸಿದೆ.
3 ತಿಂಗಳ ಅವಧಿಗೆ ವಾರಕ್ಕೆ ಎರಡು ಅವಧಿಯಂತೆ ತರಬೇತಿ ನೀಡಬೇಕಿದೆ. ತರಬೇತಿದಾರರಿಗೆ ಪ್ರತಿ ಶಾಲೆಗೆ 8400 ರೂ. ಗೌರವಧನ ನೀಡಲಾಗುತ್ತದೆ. ಆಸಕ್ತ ಅರ್ಹ ತರಬೇತಿದಾರರು ಸಂಬಂಧಪಟ್ಟ ಪ್ರೌಢಶಾಲಾ ಮುಖ್ಯಸ್ಥರಿಗೆ ಜೂನ್ 22ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 08226-224429 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ಅಡುಗೆಯವರು, ಅಡುಗೆ ಸಹಾಯಕರ ಹುದ್ದೆ  ಅಭ್ಯರ್ಥಿಗಳಿಗೆ ದಾಖಲಾತಿ ಹಾಗೂ ಪ್ರಾಯೋಗಿಕ ಪರೀಕ್ಷೆ

ಚಾಮರಾಜನಗರ, ಜೂ. 19 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ಅಡುಗೆಯವರ ಹುದ್ದೆಗೆ ಜೂನ್ 22ರಂದು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜೂನ್ 23ರಂದು ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಅಡುಗೆಯವರಿಗೆ ಜೂನ್ 28ರಂದು ಹಾಗೂ ಸಹಾಯಕರಿಗೆ ಜೂನ್ 29ರಂದು ನಡೆಸಲಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 3ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಸಿ ನೀಡಿದ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 18ರಂದು ಹೊರಡಿಸಲಾಗುವುದು.
ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ ತಿತಿತಿ.hಣಣಠಿ://ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ದಾಖಲಾತಿ ಪರಿಶೀಲನೆಗೆ ಕಾಲ್‍ಲೆಟರ್ ಅನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08226-222180 ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರ ಹುದ್ದೆ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಹಾಗೂ ಪ್ರಾಯೋಗಿಕ  ಪರೀಕ್ಷೆ

ಚಾಮರಾಜನಗರ, ಜೂ. 19 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ಜೂನ್ 21ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆಗೆ ಜೂನ್ 24ರಂದು ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಅಡುಗೆ ಸಹಾಯಕರಿಗೆ ಜೂನ್ 30ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆಗೆ ಜೂನ್ 29ರಂದು ನಡೆಸಲಿದೆ.
ಅಡುಗೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 3ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 5ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಸಿ ನೀಡಿದ ನಂತರ ಅಡುಗೆ ಸಹಾಯಕರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 20ರಂದು ಹಾಗೂ ರಾತ್ರಿ ಕಾವಲುಗಾರರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 25ರಂದು ಹೊರಡಿಸಲಾಗುವುದು.
ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ ತಿತಿತಿ.hಣಣಠಿ://ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ದಾಖಲಾತಿ ಪರಿಶೀಲನೆಗೆ ಹಾಜರಾತಿ ಸೂಚನಾ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಸೂಚಿಸಿರುವಂತೆ ಕ್ರಮ ವಹಿಸುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08226-222855 ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು