ಕೌಟುಂಬಿಕ ಕಲಹ,ನೇಣುಬಿಗಿದ ಪತಿರಾಯ!
ಚಾಮರಾಜನಗರ: ಕುಟುಂಬದಲ್ಲಿ ಆಗಾಗ ನಡೆಯುತ್ತಿದ್ದ ಕೌಟುಂಬಿಕ ಕಲಹ ಇಂದು ಅಂತಿಮ ಘಟ್ಟ ತಲುಪಿರುವ ಘಟನೆ ಗ್ರಾಮಾಂತರ ಠಾಣಾ ವಲಯದಲ್ಲಿ ನಡದಿದೆ
ಸರಿಸುಮಾರು 9 ರ ಸಮಯದಲ್ಲಿ ಪತಿ ಮಹಾಶಯ ಪತ್ನಿಯ ಕಪಾಲಕ್ಕೆ ಹೊಡೆದು ನೇಣು ಹಾಕಿ ಏನು ಗೊತ್ತಿಲ್ಲದ ರೀತಿ ಇದ್ದು ನಂತರ ಪೊಲೀಸರ ಹೊಡೆತಕ್ಕೆ ಎದುರಿ ಸತ್ಯ ಬಾಯಿ ಬಿಟ್ಟಿದ್ದಾನೆ. ಮೂಲತಃ ಕೆಲ್ಲಂಬಳ್ಳಿ ಗ್ರಾಮದ ಶಿವಕುಮಾರ್, ಮನೆಯಲ್ಲಿ ಪತ್ನಿ ಮಮತಾಗೆ ಟೀ ಮಾಡಿ ಕೊಡುವಂತೆ ಹೇಳಿದ್ದಾನೆ ,ಪತ್ನಿ ಟೀ ತಂದು ಕೊಟ್ಟ ಮೇಲೆ ಟೀ ಸರಿಯಾಗಿ ಮಾಡಲಿಲ್ಲ ಎಂದು ಬಿಸಿಯಾದ ಟೀ ಎರಚಿ ಪತಿ ಕಪಾಲಕ್ಕೆ ಹೊಡೆದಿದ್ದಾನೆ ಎನ್ನಲಾಗಿದೆ. ಕಪಾಲಕ್ಕೆ ಹೊಡೆದ ರಭಸಕ್ಕೆ ಸಾವನ್ನಪ್ಪಿದ್ದು ನಂತರ ನೇಣು ಹಾಕಿ ಆತ್ಮಹತ್ಯೆಯ ನಾಟಕವಾಡಲು ಹೋಗಿ ಪೊಲೀಸರ ಹೊಡೆತಕ್ಕೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ
*********************************************************************************
ಕರ್ತವ್ಯ ಲೋಪ: ಪಿಡಿಓ ಅಮಾನತು
ಚಾಮರಾಜನಗರ, ಜೂ. 23 :-ಮುಖ್ಯಮಂತ್ರಿಯವರು ಘೋಷಿಸಿರುವಂತೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿಯೂ ಸಹ ಕಾರ್ಯಕ್ರಮ ಅನುಷ್ಟಾನಗೊಳಿಸುವ ದಿಸೆಯಲ್ಲಿ ಜಿಲ್ಲಾ ಪಂಚಾಯಿತಿ ಹಿರಿಯ ಅಧಿಕಾರಿಗಳು ನೀಡಿದ ಸೂಚನೆಯನ್ನು ಪಾಲಿಸಲು ಹಿಂದೇಟು ಹಾಕಿದ ಗುಂಡ್ಲುಪೇಟೆ ತಾಲ್ಲೂಕಿನ ಕಣ್ಣೇಗಾಲ ಹಾಗೂ ಕೂತನೂರು (ಪ್ರಭಾರ) ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕೆ.ಹರೀಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.ಬಿ.ಕೆ.ಶ್ರೀನಿವಾಸ್ ಅಮಾನುತುಗೊಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿ. ಜೂನ್ 22ರಂದು ಜಿಲ್ಲಾ ಪಂಚಾಂiÀiತ್ ಉಪಕಾರ್ಯದರ್ಶಿ ಹಾಗೂ ಮುಖ್ಯ ಯೋಜನಾಧಿಕಾರಿಗಳು ಶೌಚಾಲಯ ನಿರ್ಮಾಣ ಸಂಬಂಧ ಪ್ರಗತಿ ಪರಿಶೀಲಿಸಿದ ವೇಳೆ ಕಣ್ಣೇಗಾಲ ಹಾಗೂ ಕೂತನೂರು ಗ್ರಾಮಪಂಚಾಯಿತಿಯು ಗುರಿ ಸಾಧನೆಯಲ್ಲಿ ಕುಂಠಿತವಾಗಿರುವುದು ಕಂಡುಬಂತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮದ ಗುರಿ ಸಾಧಿಸಲು ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದೆ ಇರುವುದು ಕಂಡುಬಂದಿದ್ದು, ಕರ್ತವ್ಯಲೋಪವಾಗಿದೆ ಎಂಬ ಅಂಶ ಗಮನಕ್ಕೆ ಬಂತು.
ಈ ಸಂದರ್ಭದಲ್ಲಿ ಬಿ.ಕೆ.ಶ್ರೀನಿವಾಸ್ ಗುರಿ ಸಾಧಿಸಲು ನಮಗೆ ಸಿಬ್ಬಂದಿ ಇಲ್ಲ ಹೀಗಾಗಿ ಗುರಿ ಸಾಧಿಸಲು ಸಾಧ್ಯವಿಲ್ಲ ಈ ರೀತಿಯಾದಲ್ಲಿ ಧೀರ್ಘಾವಧಿ ರಜೆಯ ಮೇಲೆ ತಾವು ಹೋಗುವುದಾಗಿ ಸಭೆಯಲ್ಲಿ ತಿಳಿಸಿದರು.
ಈ ವರ್ತನೆ ಕಾರ್ಯಕ್ರಮದ ಆಶಯದ ವಿರುದ್ದವಾಗಿ ಇದ್ದು ಸರ್ಕಾರಿ ನೌಕರರಿಗೆ ಈ ಬಗೆಯ ವರ್ತನೆ ತರವಲ್ಲವೆಂದು ಭಾವಿಸಿದ್ದು, ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿ.ಕೆ.ಶ್ರೀನಿವಾಸ್ ಅವರನ್ನು ಮುಂದಿನ ಆದೇಶದವರೆಗೆ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ರವರು ತಿಳಿಸಿದ್ದಾರೆ.
ಅಕ್ರಮವಾಗಿ ಗಾಂಜಾ ಗಿಡ ಬೆಳೆದ ವ್ಯಕ್ತಿಗೆ ಸಜೆ
ಚಾಮರಾಜನಗರ, ಜೂ. 23 - ಮನೆಯ ಬಳಿ ಇರುವ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದ ವ್ಯಕ್ತಿಗೆ 2 ವರ್ಷಗಳ ಶಿಕ್ಷೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ಹನೂರು ಭಾಗದ ಕುರಟ್ಟಿಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚೆನ್ನೂರು ಗ್ರಾಮದ ಪುಟ್ಟಮಾದಶೆಟ್ಟಿ ಅಲಿಯಾಸ್ ತಮ್ಮಯ್ಯ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಮನೆಯ ಹಿತ್ತಲಿನಲ್ಲಿ 80 ಕೆಜಿಯಷ್ಟು ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದು 2014ರ ನವೆಂಬರ್ 13ರಂದು ರಾಮಾಪುರ ಠಾಣೆಯ ವೃತ್ತ ನಿರೀಕ್ಷಕರಾದ ರಾಜಣ್ಣ ದಾಳಿ ಮಾಡಿದ್ದರು. ಸದರಿ ಪ್ರಕರಣದ ವಿಚಾರಣೆ ನಡೆದು ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಪುಟ್ಟಮಾದಶೆಟ್ಟಿ ಅಲಿಯಾಸ್ ತಮ್ಮಯ್ಯನಿಗೆ 2 ವರ್ಷಗಳ ಸಜೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ವಿದ್ಯಾರ್ಥಿನಿಲಯಕ್ಕೆ ಬಾಡಿಗೆಗೆ ಕೊಠಡಿ : ಆಸಕ್ತರಿಂದ ವಿವರ ಆಹ್ವಾನ
ಚಾಮರಾಜನಗರ, ಜೂ. 23 :– ಕೊಳ್ಳೇಗಾಲ ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕಾಗಿ 50 ರಿಂದ 100 ವಿದ್ಯಾರ್ಥಿನಿಯರ ವಾಸಕ್ಕೆ ಅನುಕೂಲವಾಗುವ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ, ಶೌಚಾಲಯವುಳ್ಳ ಕಟ್ಟಡವು ಬಾಡಿಗೆಗೆ ಬೇಕಾಗಿದ್ದು ಆಸಕ್ತ ಮಾಲೀಕರು ದಾಖಲಾತಿಗಳೊಡನೆ ವಿವರ ಸಲ್ಲಿಸಬಹುದಾಗಿದೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿನಿಲಯ ನಿರ್ವಹಣೆ ಮಾಡಲಿದೆ. ಕಟ್ಟಡಕ್ಕೆ ಲೋಕೋಪಯೋಗಿ ಇಲಾಖೆ ನಿಗದಿಪಡಿಸುವ ಬಾಡಿಗೆ ನೀಡಲಾಗುವುದು. ಕಟ್ಟಡ ಮಾಲೀಕರು ಅಗತ್ಯ ದಾಖಲಾತಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲï. ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 28ರಂದು ಅಡುಗೆ ಸಹಾಯಕರ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ
ಚಾಮರಾಜನಗರ, ಜೂ. 23:- ಸಮಾಜ ಕಲ್ಯಾಣ ಇಲಾಖೆಯ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆ ಸಹಾಯಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಜೂನ್ 21ರಂದು ನಡೆದ ದಾಖಲಾತಿ ಪರಿಶೀಲನೆಗೆ ಹಾಜರಾಗದೇ ಇರುವ ಅಭ್ಯರ್ಥಿಗಳಿಗೆ ಜೂನ್ 28ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದೆ.ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವೆಬ್ ಸೈಟ್ ತಿತಿತಿ.hಣಣಠಿ://ಛಿhಚಿmಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ಹಾಜರಾತಿ ಸೂಚನಾ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಅದರಲ್ಲಿರುವ ಮಾಹಿತಿಯಂತೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ 1:5ರ ಅನುಪಾತದಲ್ಲಿ ದಾಖಲಾತಿ ಪರಿಶೀಲನೆಯನ್ನು ಸರ್ಕಾರದ ಆದೇಶದಂತೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ದೂ.ಸಂ. 08226-222855 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಜೂ. 28ರಂದು ಮಹದೇಶ್ವರ ದೇವಾಲಯದ ಗೋಲಕ ಹಣ ಎಣಿಕೆ
ಚಾಮರಾಜನಗರ, ಜೂ. 23 :- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಜೂನ್ 28ರಂದು ಬೆಳಿಗ್ಗೆ ನಡೆಯಲಿದೆ.ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ್ಲ ತಿಳಿಸಿದ್ದಾರೆ.
ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕ ಆಹ್ವಾನ
ಚಾಮರಾಜನಗರ, ಜೂ. 23 - ಕನ್ನಡ ಸಾಹಿತ್ಯ ಪರಿಷತ್ತು 2016ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.ಮಲ್ಲಿಕಾ ದತ್ತಿ ಪ್ರಶಸ್ತಿ, ಅಂತರಾಷ್ಟ್ರೀಯ ಮಹಿಳಾ ವರ್ಷದ ಮಹಿಳಾ ದತ್ತಿ, ಶಾರದಾ ರಾಮಲಿಂಗಪ್ಪ ದತ್ತಿ, ಲಿಂ. ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ, ನೀಲಗಂಗ ದತ್ತಿ, ಕೆ ಎಸ್ ಭಾರತಿ ರಾಜಾರಾಂ ಮಧ್ಯಸ್ಥ ದತ್ತಿ, ಶಾರದಾ ಆರ್ ರಾವ್ ದತ್ತಿ, ಗೌರಮ್ಮ ಹಾರ್ನಳ್ಳಿ ಕೆ ಮಂಜಪ್ಪ ದತ್ತಿ, ದಿವಂಗತ ಎಚ್. ಕರಿಯಣ್ಣ ದತ್ತಿ, ಡಾ. ಎಚ್. ನರಸಿಂಹಯ್ಯ ದತ್ತಿ, ಅಸುಂಡಿ ಹುದ್ದಾರ್ ಕೃಷ್ಣರಾವ್ ಸ್ಮಾರಕ್ ದತ್ತಿ, ಜಿ ಪಿ ರಾಜರತ್ನಂ ಸಂಸ್ಕರಣ ದತ್ತಿ (ಮಕ್ಕಳ ಪುಸ್ತಕ ಬಹುಮಾನ ಸ್ಪರ್ಧೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬರಹಗಾರರಿಗೆ ಮಾತ್ರ), ದಿವಂಗತ ಕೆ ವಿ ರತ್ನಮ್ಮ ದತ್ತಿ, ರತ್ನಾಕರ ವರ್ಣಿ ಮುದ್ದಣ್ಣ ಅನಾಮಿಕ ದತ್ತಿ, ಪಿ. ಶಾಂತಿಲಾಲ್ ದತ್ತಿ, ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ, ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ, ಕಂಬಾಸ ಪ್ರಶಸ್ತಿ ದತ್ತಿ, ಪ್ರೊ. ಡಿ.ಸಿ. ಅನಂತಸ್ವಾಮಿ ದತ್ತಿ, ಜಿ.ಆರ್. ರೇವಯ್ಯ ದತ್ತಿ, ಸಿಶು ಸಂಗಮೇಶ ದತ್ತಿ, ಪಂಪಮ್ಮ ಶರಣಗೌಡ ವಿರೂಪಾಪುರ ದತ್ತಿ, ಕೆ. ವಾಸುದೇವಾಚಾರ್ ದತ್ತಿ, ಡಾ. ಆರ್.ಜೆ. ಗಲಗಲಿ ದತ್ತಿ, ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ ಮದನಕೇಸರಿ ಜೈನ ದತ್ತಿ, ಬಿಜಾಪುರ ಜಿಲ್ಲಾ ಸಮೀರವಾಡಿಯಲ್ಲಿ ನಡೆದ 7ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದನೆನಪಿನ ದತ್ತಿ (ಬಾಗಲಕೋಟೆ ಮತ್ತು ಬಿಜಾಪುರ ಜಿಲ್ಲೆಯ ಲೇಖಕ ಲೇಖಕಿಯರಿಗೆ ಮಾತ್ರ ಅವಕಾಶ), ಬಸುದೇವ ಭೂಪಾಲಂ ದತ್ತಿ, ದಿ. ಡಿ. ಮಾಣಿಕರಾದ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ, ದಿ. ಕಾಕೋಳು ಸರೋಜಮ್ಮ ದತ್ತಿ, ದಿ. ಡಾ. ಎಎಸ್. ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿ, ನಾ.ಕು. ಗಣೇಶ್ ದತ್ತಿ, 17,18 ಡಿಸೆಂಬರ್ 2011ರಂದು ಬೀಳಗಿಯಲ್ಲಿ ನಡೆದ ಬೀಳಗಿ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸವಿನೆನಪು ದತ್ತಿ (ಬಾಗಲಕೋಟೆಯ ಬೀಳಗಿ ತಾಲೂಕಿನ ಬರಹಗಾರರಿಗೆ ಮಾತ್ರ ಅವಕಾಶ), ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ, ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿನಿಧಿ, ಪಳಕಳ ಸೀತಾರಾಮಭಟ್ಟ ದತ್ತಿನಿಧಿ, ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ, ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ, ಶ್ರೀಮತಿ ಲಕ್ಷ್ಮೀದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಬೀಳಗಿ ಘಟಕ ದತ್ತಿ ಪ್ರಶಸ್ತಿ (ಬಾಗಲಕೋಟೆ ಜಿಲ್ಲೆಯ ಬರಹಗಾರರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು), ಪ್ರಕಾಶಕ ಆರ್.ಎನ್. ಹಬ್ಬು ದತ್ತಿ ಪ್ರಶಸ್ತಿ,ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿನೆನಪಿನ ದತ್ತಿ (ಎಲ್. ಬಸವರಾಜು ದತ್ತಿ), ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದತ್ತಿ, ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ, ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ, ಶ್ರೀಮತಿ ಗೌರುಭಟ್ ದತ್ತಿ ಪ್ರಶಸ್ತಿ, ಶ್ರೀಮತಿ ಜಯಲಕ್ಷ್ಮಿ ಮತ್ತು ಶ್ರೀ ಬಾಪು ರಾಮಣ್ಣ ದತ್ತಿ ಪ್ರಶಸ್ತಿ, ಶ್ರೀಮತಿ ಸುಮನ್ ಸೋಮಶೇಖರ್ ಸೋಮವಾರಪೇಟೆ ದತ್ತಿ ಪ್ರಶಸ್ತಿ, ದಿವಂಗತ ಶ್ರೀ ಹೇಮರಾಜ್ ಜಿ.ಎಸ್. ಕುಶಾಲನಗರ ದತ್ತಿ ಪ್ರಶಸ್ತಿಗಳಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರ ಶೀರ್ಷಿಕೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಸದರು ಹಾಗೂ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಂ.ಸಿ.ಮೋಹನಕುಮಾರಿ ಉರುಫ್ ಗೀತಾ, ಜಿಲ್ಲಾಧಿಕಾರಿ ಬಿ.ರಾಮು, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಇತರೆ ಅಧಿಕಾರಿಗಳು ಹಾಜರಿದ್ದರು.
No comments:
Post a Comment