ಶ್ರೀಚಾಮರಾಜೇಶ್ವರ ದೇವಸ್ಥಾನದ ಗೋಲಕಗಳ ಬೀಗವನ್ನು ಮುರಿದು ಅದರಲ್ಲಿದ್ದ ಹಣ ದೋಚಿದ್ದ ವ್ಯಕ್ತಿ ಬಂದನ
**********************************
ಯೋಜನೆ ರೂಪಿಸಲು ಅಂಕಿಅಂಶಗಳು ಅಗತ್ಯ : ಜಿಪಂ ಸಿಇಓ ಡಾ. ಕೆ. ಹರೀಶ್ ಕುಮಾರ್ ಎಸ್.ವಿ.ಎಸ್
ಚಾಮರಾಜನಗರ, ಜೂ. 29 - ರಾಷ್ಟ್ರದ ಜನಪರ ಯೋಜನೆ ಕಾರ್ಯಕ್ರಮಗಳನ್ನು ರೂಪಿಸಲು ಅಂಕಿಅಂಶಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಗೆÀ ಜವಾಬ್ದಾರಿಯುತÀ ಹೊಣೆಗಾರಿಕೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಇಂದು ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಂಖ್ಯಿಕ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳನ್ನು ರೂಪಿಸಲು ಅಂಕಿಅಂಶಗಳು ಅಗತ್ಯವಾಗಿರುವುದು ವಾಸ್ತವ ಸಂಗತಿಯಾಗಿದೆ. ಅಂಕಿಅಂಶಗಳಿರದೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ. ಯೋಜನೆಯ ಸಾಧಕಬಾಧಕಗಳ ವಿಶ್ಲೇಷಣೆಗೆ ಅಂಕಿಅಂಶಗಳನ್ನು ಆಧಾರವಾಗಿ ಇಟ್ಟುಕೊಳ್ಳಬೇಕಾಗುತ್ತದೆ ಎಂದರು.
ಯೋಜನೆ ತಯಾರಿಸಿ ಪ್ರಗತಿ ಕಾರ್ಯಕ್ರಮಗಳು ಅನುಷ್ಠಾನವಾಗುವುದರಿಂದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಗೆ ಗುರುತರವಾದ ಜವಾಬ್ದಾರಿ ಹಾಗೂ ಮಹತ್ವ ಇದೆ. ಇಲಾಖೆಯು ಸಹ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಣೆಯನ್ನು ಉತ್ತಮವಾಗಿ ಮಾಡುತ್ತಿದೆ ಎಂದು ಹರೀಶ್ ಕುಮಾರ್ ಪ್ರಶಂಶಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ಅಂಕಿಅಂಶಗಳ ಲೆಕ್ಕಾಚಾರ ಕುಟುಂಬದಿಂದ ಆರಂಭವಾಗಿ ಇಡೀ ವಿಶ್ವಕ್ಕೇ ವ್ಯಾಪಿಸಿದೆ. ಯೋಜನೆ ವೆಚ್ಚ ಖರ್ಚು ಇನ್ನಿತರ ಎಲ್ಲಾ ಬಹುಮುಖ್ಯ ಕಾರ್ಯಕ್ರಮಗಳಿಗೂ ಅಂಕಿಅಂಶವನ್ನೇ ಗಣನೆಗೆ ಇಟ್ಟುಕೊಳ್ಳಬೇಕಾಗುತ್ತದೆ. ಹುಟ್ಟು ಸಾವಿನ ಸಂಖ್ಯೆಗಳನ್ನು ಸಹ ದಾಖಲಿಸಲಾಗುತ್ತದೆ. ಹೀಗಾಗಿ ಅಂಕಿಅಂಶಗಳನ್ನು ಹೊರತುಪಡಿಸಿದ ಯೋಜನೆ ಕಾರ್ಯಕ್ರಮಗಳು ಇಲ್ಲದೇ ಇರುವದನ್ನು ಗಮನಿಸಬಹುದಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ. ಮಾದೇಶು ಅವರು ಮಾತನಾಡಿ ಭಾರತೀಯ ಸಾಂಖ್ಯಿಕ ಸಂಸ್ಥೆಯನ್ನು ಸ್ಥಾಪಿಸಿ ದೊಡ್ಡ ಪ್ರಮಾಣದ ಮಾದರಿ ಸಮೀಕ್ಷೆಗಳ ವಿನ್ಯಾಸಕ್ಕೆ ಪ್ರಶಾಂತಚಂದ್ರ ಮಹಾಲಾನೋಬಿಸ್ ಅಪಾರ ಕೊಡುಗೆ ನೀಡಿದ್ದಾರೆ. ಬೆಳೆ ಇಳುವರಿ ಕಂಡುಹಿಡಿಯುವ ಸಂಖ್ಯಾಶಾಸ್ತ್ರದ ಮಾದರಿ ಸಮೀಕ್ಷೆಗಳನ್ನು ಪ್ರಾರಂಭಿಸಿದರು. ಭಾಷಾ ಶಾಸ್ತ್ರದ ಬಗ್ಗೆ ಕೂಡ ಆಸಕ್ತಿವಹಿಸಿ ಅನೇಕ ಉಪಯುಕ್ತ ಕೊಡುಗೆಗಳನ್ನು ನೀಡಿದರು ಎಂದರು.
ಬೆಂಗಳೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಟಿ. ರವೀಂದ್ರ ನಾಯ್ಕ ಅವರು ವಿಶೇಷ ಉಪನ್ಯಾಸ ನೀಡಿದರು.
ಇದೇವೇಳೆ ಆಡಳಿತದಲ್ಲಿ ಅಂಕಿಅಂಶ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ವತಿಯಿಂದ ಬಾಲಮಂದಿರದ ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗ್, ನೋಟ್ ಬುಕ್ ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಯೋಜನಾ ನಿರ್ದೆಶಕರಾದ ಪ್ರಕಾಶ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ತೋಟಗಾರಿಕೆ ಉಪನಿರ್ದೇಶಕರಾದ ನಾಗರಾಜು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ, ಆರ್. ರೇವತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜು. 6ರಂದು ಡಾ. ಬಾಬು ಜಗಜೀವನರಾಮ್ ಪುಣ್ಯಸ್ಮರಣೆ
ಚಾಮರಾಜನಗರ, ಜೂ. 29 :- ಜಿಲ್ಲಾಡಳಿತದ ವತಿಯಿಂದ ಹಸಿರುಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪಪ್ರÀಧಾನಿ ಡಾ. ಬಾಬು ಜಗಜೀವನರಾಮ್ ಅವರ 31ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 6ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವ ಮುಖಾತರ ಗೌರವ ನಮನ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಸಂಘಸಂಸ್ಥೆಗಳ ಸಮುದಾಯಗಳ ಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು, ನಾಗರಿಕರು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಕೋರಿದ್ದಾರೆ.
ಹರವೆಯಲ್ಲಿ ಯಶಸ್ವಿಯಾಗಿ ನಡೆದ ಡೆಂಗೆ ಜಾಗೃತಿ ಕಾರ್ಯಕ್ರಮ
ಎಸ್.ವಿ.ಎಸ್
ಚಾಮರಾಜನಗರ, ಜೂ. 29 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಹರವೆಯಲ್ಲಿ ಇಂದು ಡೆಂಗೆ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜನರ ಅರಿವಿಗಾಗಿ ಏರ್ಪಡಿಸಲಾಗಿದ್ದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆರೆಹಳ್ಳಿ ನವೀನ್ ಅವರು ಡೆಂಗೆ ಸೇರಿದಂತೆ ಜ್ವರ ಸಂಬಂಧಿ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ತಡೆಯಲು ಜನರಿಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಎಂದರು.ರೋಗ ನಿಯಂತ್ರಣಕ್ಕೆ ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳು, ಶುಚಿತ್ವ ಸುತ್ತಮುತ್ತಲ ಪರಿಸರ ನೈರ್ಮಲ್ಯ ಕಾಪಾಡುವಿಕೆ ಮಹತ್ವವನ್ನು ತಿಳಿಸಿಕೊಡಬೇಕಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳು ಮತ್ತು ನಾಗರಿಕರ ಸಹಭಾಗಿತ್ವ ಅಗತ್ಯವಾಗಿದೆ ಎಂದು ನವೀನ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮಾತನಾಡಿ ಯಾವುದೇ ಜ್ವರ ಬಂದರೂ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮನೆಯ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕು. ವೈಯಕ್ತಿಕ ಶುಚಿತ್ವದ ಬಗ್ಗೆಯೂ ಹೆಚ್ಚು ಗಮನ ಕೊಡಬೇಕು ಎಂದರು.
ಯಾವುದೇ ಆರೋಗ್ಯ ಸಮಸ್ಯೆಗಳಿರಲಿ ಆರೋಗ್ಯ ಇಲಾಖೆ ಸ್ಪಂದಿಸಿ ಪರಿಹರಿಸುವ ಯತ್ನ ಮಾಡುತ್ತಿದೆ. ಜ್ವರ ಸಂಬಂಧಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆ ನೀಡುತ್ತಿದೆ. ಆರೋಗ್ಯ ಇಲಾಖೆ ಸೇವೆಯನ್ನು ಪಡೆದುಕೊಂಡು ಸಹಕರಿಸುವಂತೆ ಡಾ. ಕೆ.ಎಚ್. ಪ್ರಸಾದ್ ಇದೇವೇಳೆ ಮನವಿ ಮಾಡಿದರು.
ತಾಲ್ಲೂಕು ಪಂಚಾಯಿತಿ ಸ್ಸಯರಾದ ರೇವಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುಟ್ಟಮ್ಮ, ಉಪಾಧ್ಯಕ್ಷರಾದ ಜಯಶೀಲ, ಸದಸ್ಯರಾದ ಮಹದೇವಸ್ವಾಮಿ, ನಂಜುಂಡಸ್ವಾಮಿ, ಸುಬ್ಬಶೆಟ್ಟಿ, ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಡಾ. ಎಂ. ನಾಗರಾಜು, ಹರವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಚ್.ಎನ್. ಮೋಹನ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜು. 1ರಂದು ಶಾಸಕರ ಅಧ್ಯಕ್ಷತೆಯಲ್ಲಿ ತಾ.ಪಂ. ಕೆಡಿಪಿ ಸಭೆ
ಚಾಮರಾಜನಗರ, ಜೂ. 29 - ಚಾಮರಾಜನಗರ ತಾಲೂಕಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕರ್ನಾಕಟ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜುಲೈ 1ರಂದು ಬೆಳಿಗ್ಗೆ 10.30 ಗಂಟೆÉಗೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೊರಾರ್ಜಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 29 – ಗುಂಡ್ಲುಪೇಟೆ ತಾಲ್ಲೂಕಿನ ಯಡವನ ಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಉನ್ನತೀಕರಿಸಿ 2017-18ನೇ ಸಾಲಿಗೆ ವಿಜ್ಞಾನ ಪದವಿಪೂರ್ವ ತರಗತಿ ಆರಂಭಿಸಲಾಗಿದೆ. ವಿಜ್ಞಾನ ವಿಷಯಗಳಾದ ಪಿಸಿಎಂಬಿ ಹಾಗೂ ಪಿಸಿಎಂಸಿ ವಿಷಯಗಳಿಗೆ ಪ್ರಥಮ ಪಿಯುಸಿಗೆ ಪ್ರವೇಶ ನೀಡಲಾಗುತ್ತದೆ.
ಅರ್ಜಿಯನ್ನು ಜಿಲ್ಲೆಯ ಯಾವುದೇ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜುಲೈ 6ರೊಳಗೆ ಯಡವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿಶಾಲೆಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವಸತಿ ಶಾಲೆಯ ಪ್ರಾಂಶುಪಾಲರು ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*******************************************************************************
ಹೈನುಗಾರಿಕೆ ಹಾಗೂ ಎರೆಹುಳು ಸಾಕಣಿಕೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ:
ಚಾಮರಾಜನಗರ, ಜೂ. 29 -
(ಎಸ್.ವಿ.ಎಸ್)
ಜಿಲ್ಲಾ ಪಂಚಾಯತ್, ಚಾಮರಾಜನಗರ ಜಿಲ್ಲೆ, ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ, ಸ್ವಯಂ ಉದ್ಯೋಗ ಕೈಗೊಳ್ಳಲು ಗುಂಡ್ಲುಪೇಟೆ ತಾಲ್ಲೂಕು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ 10 ದಿನಗಳ ಹೈನುಗಾರಿಕೆ ಹಾಗೂ ಎರೆಹುಳು ಸಾಕಣಿಕೆ ತರಬೇತಿ ಕಾರ್ಯಕ್ರಮವನ್ನು ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ಪ್ರಾರಂಭಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ಡಾ. ಹರೀಶ್ ಕುಮಾರ್.ಕೆ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಚಾಮರಾಜನಗರ ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ, ಯುವಜನತೆ ನಗರ ಪ್ರದೇಶಗಳಿಗೆ ವಲಸೆಹೋಗುವುದನ್ನ ತಪ್ಪಿಸಲು, ಸ್ವಯಂ ಉದ್ಯೋಗವನ್ನು ಕೈಗೊಂಡು ಕುಟುಂಬದ ಆರ್ಥಿಕಾಭಿವೃದ್ಧಿಯನ್ನು ಕಾಣಲು, ಈಗಾಗಲೇ ಮಾಡುವ ಕೆಲಸದ ಜೊತೆಗೆ ಉಪಕಸುಬನ್ನು ಹೊಂದಿ ಉದ್ಯೋಗವನ್ನು ಕೈಗೊಳ್ಳಲು ಈ ರಾಜೀವ್ ಗಾಂಧಿ ಚೈತನ್ಯ ಯೋಜನೆಯನ್ನು ಸರ್ಕಾರವು ಪ್ರಾರಂಭಿಸಿರುತ್ತದೆ. ಈ ತರಬೇತಿಯನ್ನು ಯಶಸ್ವಿಯಾಗಿ ಪಡೆದು ಬ್ಯಾಂಕಿನಿಂದ ಸಾಲವನ್ನು ಪಡೆದು ಹೈನುಗಾರಿಕೆ ಉದ್ಯಮವನ್ನು ಪ್ರಾರಂಭಿಸಿರಿ ಎಂಬುದಾಗಿ ತಿಳಿಸಿದರು. ಅಲ್ಲದೆ ಪ್ರತಿಯೊಬ್ಬ ಮನುಷ್ಯನು ದುಡಿಮೆಯ ಮೂಲಕ ಸಂಪಾದನೆಯನ್ನು ಮಾಡಿ ತನ್ನ ಸಂಸಾರವನ್ನು ನಡೆಸಿಕೊಂಡು ಹೊಗುವುದು ಸೂಕ್ತ. ಪರಿಶ್ರಮವಿಲ್ಲದೆ ದೊರಕುವ ಪದವಿ ಅಥವಾ ಅಧಿಕಾರ ಶಾಶ್ವತವಲ್ಲ ಎಂಬುದಾಗಿ ತಿಳಿಸಿದರು. ಅಲ್ಲದೆ ರುಡ್‍ಸೆಟ್ ಸಂಸ್ಥೆಯು ಸರ್ಕಾರದೊಡನೆ ಕೈಗೂಡಿಸಿ ಯಶಸ್ವಿಯಾಗಿ ವಿವಿಧ ಕೌಶಲ್ಯ ತರಬೇತಿಗಳನ್ನು ನಡೆಸಿ ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಕಾರಣಕರ್ತರಾಗಿರುತ್ತಾರೆ. ಅಂತಿಮವಾಗಿ ಸ್ವ-ಉದ್ಯೋಗವನ್ನು ಪ್ರಾತಂಭಿಸಿ ಅದರಿಂದ ಆದಾಯವನ್ನು ಪಡೆದು ಮುಂದಿನ ದಿನಗಳಲ್ಲಿ ಯಶಸ್ವಿ ಉದ್ಯಮಿಗಳಾಗಿರಿ ಎಂಬುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀಯುತ ಶ್ರೀಧರ್, ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್ ಹಾಗೂ ಶ್ರೀಯುತ ಶ್ರೀನಿವಾಸ್, ಸಹಾಯಕ ಯೋಜನಾ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಚಾ ನಗರ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಸ್ಥೆಯ ಯೋಜನಾಧಿಕಾರಿಗಳಾದ ಶ್ರೀ ಬಿ.ಎಂ.ಚಂದ್ರಶೇಖರ್ ಸಂಸ್ಥೆಯ ಪರಿಚಯ ತಿಳಿಸಿದರು. ಸಂಯೋಜಕರಾದ ಶ್ರೀ ಬಿ.ಚಿನ್ನಸ್ವಾಮಿಯವರು ನೇರೆದಿದ್ದ ಗಣ್ಯರು ಹಾಗೂ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ವಂದನಾರ್ಪಣೆ ತಿಳಿಸಿದರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
No comments:
Post a Comment