Thursday, 15 June 2017

ಆಯೋಗದ ಅದ್ಯಕ್ಷರೆದುರೆ ಜಟಾಪಟಿ.ಪೊಲೀಸರು ಸ್ಥಳದಲ್ಲೆ ಮೊಕ್ಕಂ ,ರೈತ ಮುಖಂಡ ಷಣ್ಮುಖ( 54) ನಿಧನ 15-06-2017 ಬಸ್ ಇಲ್ಲದೆ ಆದರ್ಶ ಶಾಲೆ ವಿದ್ಯಾರ್ಥಿಗಳ ಪರಿಪಾಟಲು


ಆಯೋಗದ ಅದ್ಯಕ್ಷರೆದುರೆ ಜಟಾಪಟಿ.ಪೊಲೀಸರು ಸ್ಥಳದಲ್ಲೆ ಮೊಕ್ಕಂ 

*ವರದಿ *ವಿಎಸ್ಎಸ್*

ಚಾಮರಾಜನಗರ, ಜೂನ್ 15: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಬಿಜೆಪಿಗೆ ಮತ ನೀಡಿದ ಕಾರಣ 25 ಕುಟುಂಬಗಳಿಗೆ ಹಾಕಿದ್ದ ಸಾಮಾಜಿಕ ಬಹಿಷ್ಕಾರದ ಪರಿಶೀಲನೆಗೆ ಬಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಎದುರೇ ಗಲಾಟೆಗಳು ನಡೆದಿದೆ.ಇದರಿಂದ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಜೂನ್ 10 ರಂದು ಹಲ್ಲೆಗೊಳಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಮಹಿಳೆಯರನ್ನು ಆಯೋಗದ ಅಧ್ಯಕ್ಷೆ ಇಂದು ಭೇಟಿಯಾದ ಸಂದರ್ಬ ಆ ಮಹಿಳೆಯರು ತಮ್ಮ ಅಹವಾಲು ಸಲ್ಲಿಸಿದರು. "ಮತ ಎಣಿಕೆ ನಂತರ ನಾವು ಎರಡು ತಿಂಗಳಿಂದ ಮಾನಸಿಕವಾಗಿ ನೆಮ್ಮದಿ ಕಳೆದುಕೊಂಡಿದ್ದೇವೆ. ಎಲ್ಲಿಯೇ ಇದ್ದರೂ ನಮ್ಮ ಮನೆಯ ಮಕ್ಕಳನ್ನು ಹುಡುಕಿಕೊಂಡು ಬಂದು ಹೊಡಿತಾರೆ. ಆಸ್ಪತ್ರೆಯಿಂದ ಮನೆಗೆ ತೆರಳುವಂತೆ ವೈದ್ಯರು ಹೇಳಿದರೂ ಜೀವಭಯದಿಂದ ಹೋಗಲಾಗುತ್ತಿಲ್ಲ. ಎಲ್ಲರೂ ಬೇರೆ ಬೇರೆ ಕಡೆಗಳಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದೇವೆ. ನಮಗೆ ನ್ಯಾಯ ಒದಗಿಸಿಕೊಡಿ ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡಿ," ಎಂದು ಕಾಲಿಗೆ ಬಿದ್ದು ಬೇಡಿಕೊಂಡರು
ಮಾಹಿತಿ ಪಡೆಯುತ್ತಿದ್ದ ವೇಳೆ ಅಂಗಡಿ ಮಾಲೀಕರೊಬ್ಬರು ಗ್ರಾಮದಲ್ಲಿ ಬಹಿಷ್ಕಾರ ಹಾಕಿರುವುದರಿಂದ ಪದಾರ್ಥಗಳು ಹಾಳಾಗುತ್ತಿದೆ ಎಂದು ಆರೋಪಿಸಿದರು. ಇದರಿಂದ ಕುಪಿತಗೊಂಡ ಮತ್ತೊಂದು ಗುಂಪು ನಾವು ಯಾರಿಗೂ ಬಹಿಷ್ಕಾರ ಹಾಕಿಲ್ಲ. ರಾಜಕೀಯ ಉದ್ದೇಶದಿಂದ ಹೀಗೆ ಆರೋಪಿಸುತ್ತಿದ್ದಾರೆ ಎಂದು ಕೂಗಾಟ ನಡೆಸಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಲಾರಂಭಿಸಿದರು.
ಎರಡು ಗುಂಪುಗಳ ಮಹಿಳೆಯರು ಹಾಗೂ ಪುರುಷರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಮಧ್ಯಪ್ರವೇಶಿಸಿದ ಪೊಲೀಸರು ಜನರನ್ನು ನಿಯಂತ್ರಿಸಿದರು.
ಬಳಿಕ ಅಧ್ಯಕ್ಷರು ಜಿಲ್ಲಾಧಿಕಾರಿ ಬಿ.ರಾಮುರವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೂಡಲೇ ಹೆಚ್ಚಿನ ಪೋಲೀಸರನ್ನು ನೇಮಿಸಿ ಸೂಕ್ತ ಬಂದೋಬಸ್ತಿಗೆ ಸೂಚಿಸಿದರು.
ಮಹಿಳಾ ಆಯೋಗದ ಅಧ್ಯಕ್ಷೆ ಗ್ರಾಮದಿಂದ ತೆರಳುತ್ತಿದ್ದಂತೆಯೇ ಗೃಹಬಳಕೆಯ ಸಾಮಾನು ಖರೀದಿಸಲು ಅಂಗಡಿಗೆ ತೆರಳಿದ್ದ ದುಂಡಮ್ಮ ಎಂಬುವವರಿಗೆ ಹಿಂದಿನಿಂದ ಹೊಡೆದು ಗಾಯಗೊಳಿಸಿದ್ದಾರೆ.
ಹಿಂಬಾಲಿಸಿಕೊಂಡು ಬಂದ ಬಹಿಷ್ಕಾರಕ್ಕೊಳಗಾದ ಗುಂಪಿನ ಚನ್ನಾಜಮ್ಮ, ಶಶಿಕಲಾ, ರಾಜೇಶ, ಸೂರ್ಯ ಹಾಗೂ ಗೋವಿಂದ ಎಂಬುವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಗಾಯಾಳು ಮಹಿಳೆ ದುಂಡಮ್ಮ ಆರೋಪಿಸಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಯಿದ್ದು ಕೆಎಸ್‍ಆರ್‍ಪಿ ತುಕಡಿ ಹಾಗೂ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಎಸ್‍ಪಿ ಧರಣೀಂದ್ರ ಕುಮಾರ್ ಮೀನಾ, ಎ ಎಸ್ ಪಿ ಗೀತಾ ಪ್ರಸನ್ನ, ಡಿಎಸ್‍ಪಿ ಎಸ್.ಇ. ಗಂಗಾಧರಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಸುರೇಶ್, ತಹಸೀಲ್ದಾರ್ ಕೆ.ಸಿದ್ದು, ತಾಪಂ ಇಓ ಪುಷ್ಪಾ ಎಂ.ಕಮ್ಮಾರ್, ಸಿಡಿಪಿಓ ರಾಮಕೃಷ್ಣಯ್ಯ ಮೊಕ್ಕಂ ಹೂಡಿದ್ದಾರೆ.
***********************************************************






Adರೈತ ಮುಖಂಡ ಷಣ್ಮುಖ( 54) ನಿಧನ 15-06-2017

ಚಾಮರಾಜನಗರ,ಜೂ.15- ರೈತ ಮುಖಂಡ  ಹಾಗೂ ತಾಲೂಕಿನ ಜೋತಿಗೌಡನಪುರ ಗ್ರಾಮದ ಮುಖಂಡ ಪಿ ಷಣ್ಮುಖ( 54) ಗುರುವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಿಧನರಾದರು.

15-07-
ಕಾವೇರಿ ನೀರಾವರಿ ನಿಗಮದಲ್ಲಿ ಇಂಜಿನಿಯರ್ ಆಗಿದ್ದ ಷಣ್ಮುಖ ಅವರು ಅವರು ವೃತ್ತಿಗೆ ರಾಜೀನಾಮೆ ನೀಡಿ ರೈತ ಮುಖಂಡ ಪ್ರೊ. ನಂಜುಂಡಸ್ವಾಮಿ ಅವರೊಂದಿಗೆ ಸೇರಿ ರೈತರ ಚಳುವಳಿಯಲ್ಲಿ ಪಾಲ್ಗೊಂಡು ರೈತಪರ ಹೋರಾಟವನ್ನು ನಡೆಸಿದರು.
ಜಿಲ್ಲೆಯಲ್ಲಿ ತೆಂಗುಗೆಗೆ ನುಸಿಪೀಡೆ ರೋಗ ಬಂದಾಗ  ಪ್ರೊ.ನಂಜುಂಡಸ್ವಾಮಿ ಅವರೊಂದಿಗೆ ಸೇರಿ ನೀರಾ ಚಳುವಳಿ ನಡೆಸಿದ್ದರು. ಜಿಲ್ಲಾದಿಕಾರಿ ಕಚೇರಿ ಆವರಣದಲ್ಲಿ ಹಿಂದೆ ಸಾಮೂಹಿಕ ಚಳುವಳಿ ನಡೆಸಿ ಅಂದಿನ ಜಿಲ್ಲಾದಿಕಾರಿ ಮನೋಜ್ ಕುಮಾರ್ ಮೀನಾ ಅವರು ಲಾಠಿ ಎತ್ತುವಂತಹ  ಕ್ಷಣವನ್ನು ಇಂದಿಗೂ ಆ ಕ್ಷಣ ನೆನಪಿಸುತ್ತದೆಇದಲ್ಲದೆ ಜಿಲ್ಲೆಯಲ್ಲಿ ರೈತರ ಪರ ಹಲವಾರು ಹೋರಾಟಗಳನ್ನು ಸಹ ನಡೆಸಿದ್ದರು.
ಪ್ರಗತಿಪರರಾಗಿದ್ದ ಷಣ್ಮುಖ ಅವರು ಇದೀಗ ನಂಜುಂಡಸ್ವಾಮಿ ಅವರ ಕನಸಿನ ಕೂಸಾದ ಅಮೃತ ಭೂಮಿಯಲ್ಲಿ ಸಾವಯುವ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.
ಮೃತರು ತಾಯಿ, ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಜೋತಿಗೌಡನಪುರದ ಅವರ ತೋಟದಲ್ಲಿ ನಡೆಯಲಿದೆ.

_____________________________________________________________________

ಮೆಳ್ಳಹಳ್ಳಿ: ಬಸ್ ಇಲ್ಲದೆ ಆದರ್ಶ ಶಾಲೆ ವಿದ್ಯಾರ್ಥಿಗಳ ಪರಿಪಾಟಲು


ಚಾಮರಾಜನಗರ: (ಯಳಂದೂರು) ಜೂ 15 : ತಾಲ್ಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ಇರುವ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು ಪರಿಪಾಟಲು ಪಡುವ ಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ಸರ್ಕಾರಿ ಆದರ್ಶ ಶಾಲೆಯ ಹೊಸ ಕಟ್ಟಡ ಈ ಶೈಕ್ಷಣಿಕ ವರ್ಷದಿಂದ ಆರಂಭಗೊಂಡಿದೆ. ಇಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾರೆ. ತಾಲ್ಲೂಕು ಕೇಂದ್ರದಿಂದ 3 ಕಿ.ಮಿ. ದೂರದಲ್ಲಿರುವ ಇಲ್ಲಿಗೆ ದಿನನಿತ್ಯ ಓಡಾಡಲು ಬಸ್ ಅನ್ನೇ ಅವಲಂಬಿಸಬೇಕಿದೆ. ಯಳಂದೂರಿನಿಂದ ನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಾರೆ. ಮೆಳ್ಳಹಳ್ಳಿ ಗೇಟ್‍ನಲ್ಲಿ ಬಸ್ ಇಳಿದು ಅಲ್ಲಿಂದ ಅರ್ಧ ಕಿ.ಮಿ. ನಡೆದುಕೊಂಡೇ ಹೋಗಬೇಕಾಗುತ್ತದೆ. ಆದರೆ ಶಾಲೆ ಬಿಟ್ಟ ನಂತರ ತಮ್ಮ ಗ್ರಾಮಗಳಿಗೆ ತೆರಳಲು ಇವರಿಗೆ ಬಸ್ ಸೌಲಭ್ಯವಿಲ್ಲ.
ನಿಲ್ಲದ ಕೆಸ್ಸಾರ್ಟಿಸಿ: ಇಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳು ರಾಷ್ಟ್ರೀಯ ಹೆದ್ದಾರಿ 209 ರಿಂದ ಸಂಚರಿಸುತ್ತವೆ. ಆದರೆ ಮೆಳ್ಳಹಳ್ಳಿ ಗೇಟ್ ಬಳಿ ಬಸ್‍ಗಳು ನಿಲ್ಲುವುದೇ ಇಲ್ಲ. ಹಾಗಾಗಿ ವಿದ್ಯಾರ್ಥಿಗಳು ಖಾಸಗಿ ಬಸ್‍ಗಳಲ್ಲೇ ನಿಂತು ಪ್ರಯಾಣ ಮಾಡುವ ಸ್ಥಿತಿ ಇದೆ ನಮ್ಮ ಮಕ್ಕಳು ಮನೆಗೆ ಬರುವವರೆಗೂ ಆತಂಕ ಹೆಚ್ಚಾಗಿರುತ್ತದೆ. ಶಾಸಕರು ಸಂಬಂಧಪಟ್ಟ ಆಧಿಕಾರಿಗಳು ಶಾಲಾ ಸಮಯಕ್ಕೆ ಸಾರಿಗೆ ಬಸ್‍ಗಳ ಸೌಲಭ್ಯ ಮಾಡಿಸಿಕೊಡಬೇಕು ಎಂಬುದು ಭಾರತ್ ಸೇವಾದಳದ ಅಧ್ಯಕ್ಷ ಆರ್. ಗೋಪಾಲಕೃಷ್ಣ, ಪೋಷಕರಾದ ಚಂದ್ರು, ಮಹೇಶ ಸೇರಿದಂತೆ ಹಲವರ ಆಗ್ರಹ.
ಶಿಕ್ಷಕರಿಗೆ ಹೆಚ್ಚಾದ ಜವಾಬ್ದಾರಿ: ಶಾಲೆ ರಸ್ತೆಯಿಂದ ಅರ್ಧ ಕಿ.ಮಿ. ದೂರದಲ್ಲಿದೆ. ಇಲ್ಲಿ ವಿದ್ಯಾರ್ಥಿಗಳಷ್ಟೇ ವಿದ್ಯಾರ್ಥಿನಿಯರ ಸಂಖ್ಯೆಯೂ ಇದೆ. ಶಾಲೆ ಬಿಟ್ಟ ನಂತರ ಮಕ್ಕಳೊಂದಿಗೆ ಶಿಕ್ಷಕರೂ ಜೊತೆಯಲ್ಲೇ ತೆರಳಿ ಹೆದ್ದಾರಿ ಬಳಿ ಇರುವ ಮೆಳ್ಳಹಳ್ಳಿ ಗೇಟ್‍ನಲ್ಲಿ ಮಕ್ಕಳನ್ನು ಬಸ್ ಹತ್ತಿಸಿ ನಂತರ ತಮ್ಮ ಮನೆಗಳಿಗೆ ತೆರಳುತ್ತಾರೆ. ಇದರಂತೆ ನಾನು ಕೂಡ ಶಾಲೆ ಬಿಟ್ಟ ಅರ್ಧಗಂಟೆಯ ನಂತರ ಮನೆಗೆ ತೆರಳುತ್ತೇನೆ. ಮಕ್ಕಳಿಗೆ ಬಸ್ ಸೌಲಭ್ಯ ಒದಗಿಸುವಲ್ಲಿ ಸಂಬಂಧಪಟ್ಟವರು ಗಮನ ಹರಿಸಬೇಕಾಗಿದೆ
 ಯಳಂದೂರು ತಾಲ್ಲೂಕು ಮೆಳ್ಳಹಳ್ಳಿ ಗೇಟ್ ಬಳಿ ಇರುವ ಆದರ್ಶ ಶಾಲೆಯ ವಿದ್ಯಾರ್ಥಿಗಳು ಬಸ್ ಹತ್ತಲು ನಿಂತಿರುವುದು. ಹತ್ತುವಾಗ ಆಗುವ ನೂಕುನುಗ್ಗಲು
___________________________________________________________________________

ಜೂ. 16ರಂದು ವಕೀಲ ಮಧ್ಯಸ್ಥಿಕೆಗಾರರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ 

ಚಾಮರಾಜನಗರ, ಜೂ. 15 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಧ್ಯಸ್ಥಿಕಾ ಕೇಂದ್ರ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ವಕೀಲ ಮಧ್ಯಸ್ಥಿಕೆಗಾರರಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಅಧ್ಯಕ್ಷತೆ ವತಿಸುವರು.
ಮಧ್ಯಸ್ಥಿಕಾ ಕೇಂದ್ರದ ತರಬೇತಿದಾರರಾದ ಪ್ರಶಾಂತ್ ಚಂದ್ರ ಹಾಗೂ ವಿಜಯ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದÉ.

ಜೂ. 17ರಂದು ನಗರದಲ್ಲಿ ರೈತರು ಹಾಗೂ ಭಾವೀ ಉದ್ಯಮಿಗಳಿಗೆ ಕಾರ್ಯಾಗಾರ

ಚಾಮರಾಜನಗರ, ಜೂ. 15 - ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಯೋಜನೆಯಡಿಯಲ್ಲಿ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವುಗಳ ಆಶ್ರಯದಲ್ಲಿ ಜಿಲ್ಲೆಯ ಆಸಕ್ತ ಪ್ರಗತಿಪರ ರೈತರು ಹಾಗೂ ಭಾವಿ ಉದ್ಯಮಿಗಳಿಗೆ ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತ ಉದ್ಯಮಗಳನ್ನು ಸ್ಥಾಪಿಸುವಲ್ಲಿನ ಅವಕಾಶಗಳು ವಿಷಯ ಕುರಿತ ಒಂದು ದಿನದ ಕಾರ್ಯಾಗಾರವನ್ನು ಜೂನ್ 17ರಂದು ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದೆ.
ಕಾರ್ಯಾಗಾರದಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಮಾರುಕಟ್ಟೆ ಅವಕಾಶಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳು, ಬ್ಯಾಂಕಿನಿಂದ ದೊರೆಯುವ ಹಣಕಾಸು ಸೌಲಭ್ಯಗಳು ಹಾಗೂ ಸ್ವಂತ ಉದ್ಯೋಗವನ್ನು ಸ್ಥಾಪಿಸುವ ಕುರಿತು ನುರಿತ ತಜ್ಞರಿಂದ ಮಾಹಿತಿ ನೀಡಲಾಗುವುದು.
ಉಚಿತ ಪ್ರವೇಶಾವಕಾಶವಿದ್ದು ಜಿಲ್ಲೆಯ ಪ್ರಗತಿಪರ ರೈತರು, ಉದ್ಯಮಿಗಳು, ಭಾವಿ ಉದ್ಯಮಿಗಳು ಹಾಗೂ ನಿರುದ್ಯೋಗಿ ವಿದ್ಯಾವಂತ ಯುವಕ ಯುವತಿಯರು ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಸಿಡಾಕ್)ದ  ಉಪನಿರ್ದೇಶಕರನ್ನು (ಕಚೇರಿ ದೂ.ಸಂಖ್ಯೆ 08226-226348, ಮೊಬೈಲ್ 7760145784) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜೂ. 17ರಂದು ಪ್ರತಿಭಾ ಪುರಸ್ಕಾರ

ಚಾಮರಾಜನಗರ, ಜೂ. 15 – ತಾಲೂಕು ಪಂಚಾಯಿತಿ ವತಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿನ ಶಾಲೆಗಳ ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜೂನ್ 17ರಂದು ಮಧ್ಯಾಹ್ನ 1.30 ಗಂಟೆಗೆ ಪ್ರತಿಭಾ ಪುರಸ್ಕಾರ ನೀಡಲು ಕಾರ್ಯಕ್ರಮ ಆಯೋಜಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


 ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ಅಡುಗೆಯವರು, ಅಡುಗೆ ಸಹಾಯಕರ ಹುದ್ದೆ  ಅಭ್ಯರ್ಥಿಗಳಿಗೆ ದಾಖಲಾತಿ ಹಾಗೂ ಪ್ರಾಯೋಗಿಕ ಪರೀಕ್ಷೆ

ಚಾಮರಾಜನಗರ, ಜೂ. 15 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ಅಡುಗೆಯವರ ಹುದ್ದೆಗೆ ಜೂನ್ 22ರಂದು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜೂನ್ 23ರಂದು ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಅಡುಗೆಯವರಿಗೆ ಜೂನ್ 28ರಂದು ಹಾಗೂ ಸಹಾಯಕರಿಗೆ ಜೂನ್ 29ರಂದು ನಡೆಸಲಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 3ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಸಿ ನೀಡಿದ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 18ರಂದು ಹೊರಡಿಸಲಾಗುವುದು.
ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ ತಿತಿತಿ.hಣಣಠಿ://ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ದಾಖಲಾತಿ ಪರಿಶೀಲನೆಗೆ ಕಾಲ್‍ಲೆಟರ್ ಅನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08226-222180 ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.


ಜೂ. 20, 22ರಂದು ತಾಲೂಕು ಮಟ್ಟದ ವಿಕಲಚೇತನರ ತಪಾಸಣಾ ಶಿಬಿರ 

ಚಾಮರಾಜನಗರ, ಜೂ. 15 :- ತಾಲೂಕು ಮಟ್ಟದ ಅಂಗವಿಕಲರಿಗೆ ತಪಾಸಣಾ ಶಿಬಿರವನ್ನು ಜೂನ್ 20ರಂದು ನಗರದ ಕರಿನಂಜನಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಗೂ 22ರಂದು ನಗರದ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯೋಜಿಸಿದೆ.
ಶಿಬಿರದಲ್ಲಿ ಅಂಗವಿಕಲರನ್ನು ಪರೀಕ್ಷಿಸಿ ಪ್ರಮಾಣ ಪತ್ರ ಇಲ್ಲದವರಿಗೆ ಪ್ರಮಾಣ ಪತ್ರ ನೀಡಲಾಗುವುದು ಹಾಗೂ ಸೂಕ್ತ ಸಲಕರಣೆಗಳನ್ನು ನೀಡಲು ಸೂಚಿಸಲಾಗುವುದು.
ಎಲಬು ಮತ್ತು ಕೀಲು ರೋಗ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು ಹಾಗೂ ಮಾನಸಿಕ ಆರೋಗ್ಯ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಪ್ರವೇಶ ಪರೀಕ್ಷೆ

ಚಾಮರಾಜನಗರ, ಜೂ. 15 - ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಗಳಲ್ಲಿ ಖಾಲಿ ಇರುವ ಉಳಿಕೆ ಸೀಟುಗಳನ್ನು ನಿಯಮಾನುಸಾರ ಮೆರಿಟ್ ಆಧಾರದ ಮೇಲೆ ಪ್ರವೇಶ ಪರೀಕ್ಷೆ ನಡೆಸಿ ಭರ್ತಿ ಮಾಡಿಕೊಳ್ಳಲಾಗುವುದು.
ಆಸಕ್ತ ಅಭ್ಯರ್ಥಿಗಳು ಜೂನ್ 16ರೊಳಗೆ ಆಯಾ ವಸತಿ ಶಾಲೆಯ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬಹುದು. ಜೂನ್ 24ರಂದು ಪ್ರವೇಶ ಪರೀಕ್ಷೆಯನ್ನು ಆಯಾ ಶಾಲೆಗಳಲ್ಲಿಯೇ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 17ರಂದು ಸಂತೇಮರಹಳ್ಳಿಯಲ್ಲಿ ಸೆಸ್ಕ್ ಜನಸಂಪರ್ಕ ಸಭೆ

ಚಾಮರಾಜನಗರ, ಜೂ. 15 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಸಂತೇಮರಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜೂನ್ 17ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.
ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರ ಹುದ್ದೆ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಹಾಗೂ ಪ್ರಾಯೋಗಿಕ  ಪರೀಕ್ಷೆ

ಚಾಮರಾಜನಗರ, ಜೂ. 15 - ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆ ಸಹಾಯಕರು ಮತ್ತು ರಾತ್ರಿ ಕಾವಲುಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ಜೂನ್ 21ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆಗೆ ಜೂನ್ 24ರಂದು ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಅಡುಗೆ ಸಹಾಯಕರಿಗೆ ಜೂನ್ 30ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆಗೆ ಜೂನ್ 29ರಂದು ನಡೆಸಲಿದೆ.
ಅಡುಗೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 3ರಂದು ಹಾಗೂ ರಾತ್ರಿ ಕಾವಲುಗಾರರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 5ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಸಿ ನೀಡಿದ ನಂತರ ಅಡುಗೆ ಸಹಾಯಕರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 20ರಂದು ಹಾಗೂ ರಾತ್ರಿ ಕಾವಲುಗಾರರ ಅಂತಿಮ ಆಯ್ಕೆ ಪಟ್ಟಿಯನ್ನು ಜುಲೈ 25ರಂದು ಹೊರಡಿಸಲಾಗುವುದು.
ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದಂತೆ 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ ತಿತಿತಿ.hಣಣಠಿ://ಛಿhಚಿmಚಿಡಿಚಿರಿಚಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ದಾಖಲಾತಿ ಪರಿಶೀಲನೆಗೆ ಹಾಜರಾತಿ ಸೂಚನಾ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಸೂಚಿಸಿರುವಂತೆ ಕ್ರಮ ವಹಿಸುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08226-222855 ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

ಚಿತ್ರಶೀರ್ಷಿಕೆ

 ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿಬಾಯಿ ಅವರು ಇಂದು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಬೊಮ್ಮಲಾಪುರ ಬಹಿಷ್ಕಾರ ಪ್ರಕರಣಕ್ಕೆ ಸಂಬಂದಿಸಿದ ಸಂತ್ರಸ್ತರ ಆರೋಗ್ಯ ವಿಚಾರಿಸಿದರು. ಬಳಿಕ ಬೊಮ್ಮಲಾಪುರಕ್ಕೆ ತೆರಳಿ ಗ್ರಾಮಸ್ಥರಿಂದ ಘಟನೆಯ ಮಾಹಿತಿಯನ್ನು ಪಡೆದುಕೊಂಡರು.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು