ಚಾಮರಾಜನಗರ ಜಿಲ್ಲಾ ನೂತನ ಎಸ್ ಪಿ.ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ಅದಿಕಾರ ಸ್ವೀಕಾರ
, * ರಾಮಸಮುದ್ರ. ಎಸ್ .ವೀರಭದ್ರಸ್ವಾಮಿ*
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆಯಿಂದ ತೆರವಾಘಿದ್ದ ಸ್ಥಾನಕ್ಕೆ ಧರ್ಮೇಂದ್ರ ಕುಮಾರ್ ಮೀನಾ (, ಐಪಿಎಸ್.).ಚಾ.ನಗರ ಜಿಲ್ಲಾ ನೂತನ ಎಸ್ ಪಿ..ಆಗಿ ಇಂದು ಅದಿಕಾರ ವಹಿಸಿಕೊಳ್ಳಲಿದ್ದಾರೆ.
ಕಳೆದ ಮೂರು ನಾಲ್ಕುದ ದಿನದ ಹಿಂದೆ ಸರ್ಕಾರ ಆದೇಶನ್ವಯ ಜಾರಿಯಾಗುವಂತೆ ಚಾಮರಾಜನಗರ ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಡಾ.ರೋಹಿಣಿ ಕಟೋಚ್, ಅವರನ್ನು ನೇಮಿಸಿತ್ತು. ಆದರೆ ಯಾಕೊ ಏನೊ ತಕ್ಷಣ ಬದಲಾವಣೆ ಮಾಡಿ ಶ್ರೀ ಧರ್ಮೇಂದ್ರ ಕುಮಾರ್ ಮೀನಾ, ಅವರನ್ನು ಮೊನ್ನೆಯಷ್ಟೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿತ್ತು.
ಧರ್ಮೇಂದ್ರ ಕುಮಾರ್ ಮೀನಾ ಅವರು ಈಗಾಗಲೇ ಹುಮ್ನಾಬಾದ್ ನ ಬೀದರ್ ಅಲ್ಲಿ ಎಎಸ್ಪಿಯಾಗಿ, ದಾರವಾಡದಲ್ಲಿ ಎಸ್ಪಿ ಆಗಿ ಕಾರ್ಯನಿರ್ಹಹಿಸಿರುವ ಿವರು ಇಂದು ಚಾಮರಾಜನರಕ್ಕೆ ಬಂದು ಅದಿಕಾರ ಸ್ವೀಕರಿಸಿ ಜನರ ದೂರು ದುಮ್ಮಾನೆಗಳಿಗೆ ಸ್ಪಂದಿಸಿ ಜನಸ್ನೇಹಿ ಪೋಲೀಸರಾಗಲು ಶ್ರಮಿಸುತ್ತೇವೆ ಎಂದರು ಅಷ್ಟೆ ಅಲ್ಲ ಇತ್ತೀಚೆಗೆ ಸರ್ಕಾರ ಜಾರಿಗೆ ತಂದ ಇ ಬೀಟ್ ವ್ಯವಸ್ಥೆ ಪರಿಪೂರ್ಣಗೊಳಸುವುದರ ಜೊತೆಗೆ ಹಿಂದೆ ಮಾಡಿದ್ದ ಕೆಲವು ಯೋಜನೆಗಳನ್ನು ಜಾರಿ ಮಾಢುವುದರ ಜೊತೆಗೆ ಅದನ್ನು ಅಬಿವೃದ್ದಿ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿರುವ ಠಾಣೆಗಳ ವಿಭಾಗ ,ಉಪವಿಭಾಗಗಳಿಗೆ ಭೇಟಿ ನೀಡಿ ಪರಿಶಿಲನೆ ಮಾಢಿ ಏನೇನೋ ವ್ಯವಸ್ಥೆಯಾಗಬೇಕು, ಅಲ್ಲಿ ಇರುವ ಸಮಸ್ಯೆ ಬಗ್ಗೆ ತಿಳಿಯಲಾಗುವುದು ಎಂಧರು. ಹೆಚ್ಚಿದ ದಟ್ಟ ಸಂಚಾರದಿಂದ ಗಲಾಟೆ ಹಲ್ಲೆ ನಡೆಯುತ್ತಿದೆ. ಕೇಳಲು ಹೋದ ಪೇದೆಗಳ ಮೇಲೆ ಹಲ್ಲೆ ನಡೆಯುತ್ತಿದೆ. ಇದಕ್ಕೆ ಅಂಜಿಯೋ , ನಮಗೇಕೊ ಎಂದು ಪೇದೆಗಳು ಸುಮ್ಮನಾಗುತ್ತಿದ್ದಾರೆ. ಎಲ್ಲಕ್ಕಿಂತ ಮಿಗಿಲಾಗಿ ಸಬ್ ಇನ್ಸ್ ಪೆಕ್ಟರ್ ಮೇಲೂ ಮಾತಿಗೆ ಮಾತು ಬೆಳೆಸಿ ಗಲಾಟೆಗೆ ಮುಂದಾದರೂ ಅವರು ಸುಮ್ಮನಾದ ಮೇಲೆ ಇಲಾಖೆ ಯಾರಿಗೆ ರಕ್ಷಣೆ ನೀಡುತ್ತದೆ ಎಂಬುದಕ್ಕೆ ಎಸ್ಪಿ ಅವರು ಈಗ ನಡೆಯುತ್ತಿರುವ ಮೊದಲ ಸಭೆಯಲ್ಲಿ ಅದರ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು
ಹಾಗೂ ತಮ್ಮ ಇಲಾಖೆಗೆ ಸಂಬಂದ ಪಟ್ಟ ಸಿ.ಸಿ.ಕ್ಯಾಮೆರಾ ಕೆಟ್ಟಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಇದರ ಬಗ್ಗೆ ಸಂಬಂದಪಟ್ಟವರೊಂದಿಗೆ ಮಾತು ಕತೆ ಆಡಿ ಅಲ್ಲಿ ಆ ಅವದಿ ನಿರ್ವಹಣೆ ಅವದಿ ಮುಗಿದಿದ್ದರೆ ದುರಸ್ಥಿ ಹಾಗೂ ಹೊಸದಾಗಿ ಅಳವಡಿಸುವ ಅಗತ್ಯವಿದ್ದರೆ ಅಳವಡಿಸಲಾಗುವುದು ಎಂದರು.
ಠಾಣೆಗಳಲ್ಲಿ ಸಂದರ್ಶಕರ ಪುಸ್ತಕವಿಲ್ಲದರ ಬಗ್ಗೆ ಪ್ರಸ್ತಾಪಸಿದ ಪತ್ರಕರ್ತ ಎಸ್. ವೀರಭದ್ರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಠಾಣೆಗಳಲ್ಲಿ ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಇಲ್ಲದಿದ್ದರೆ ಅದರ ಬಗ್ಗೆ ಗಮನ ಹರಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.
************************************
ಜಿಲ್ಲಾ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ಶೌಚಾಲಯ ದುರಸ್ತಿ, ನವೀಕರಣ, ಎಕ್ಸ್ ರೇ ಕೊಠಡಿ, ನೂತನವಾಗಿ ನಿರ್ಮಿಸಲಾಗುತ್ತಿರುವ ಶವಾಗಾರ, ರಕ್ತನಿಧಿ ಬ್ಯಾಂಕ್ ಘಟಕ ನಿರ್ಮಾಣ, ತ್ಯಾಜ್ಯ ವಸ್ತು ಸಂಗ್ರಹಣಾ ಘಟಕ, ಸ್ಯಾನಿಟರಿ ಪೈಪ್‍ಲೈನ್ ದುರಸ್ತಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.
ನೂತನ ಕಟ್ಟಡದಲ್ಲಿ ಸಹ ಒಳಚರಂಡಿ, ಪಾರ್ಕಿಂಗ್ ಸ್ಥಳ, ಶೌಚಾಲಯ ದುರಸ್ತಿ, ನವೀಕರಣ ಇನ್ನಿತರ ಕಟ್ಟಡ ಕೆಲಸಗಳನ್ನು ಶಾಸಕರು ಪರಿಶೀಲಿಸಿದರು. ಆಸ್ಪತ್ರೆ ಆವರಣದ ಮುಖ್ಯ ದ್ವಾರದ ಬಳಿ ನಿರ್ಮಾಣ ಮಾಡಲಾಗುತ್ತಿರುವ ಊಟದ ಹಾಲ್ ಕಾಮಗಾರಿಯನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗುಣಮಟ್ಟದ ಕೆಲಸ ಮಾಡಬೇಕು. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅಗತ್ಯವಿರುವೆಡೆ ಸುರಕ್ಷಿತವಾಗಿ ಆಸ್ಪತ್ರೆಯ ಕಟ್ಟಡದ ಇತರೆ ವಿಭಾಗಕ್ಕೆ ಸ್ಥಳಾಂತರಿಸಿ ಕಾಮಗಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಕಾಮಗಾರಿ ಹೆಚ್ಚಿನ ಪ್ರಮಾಣದಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ವಿಳಂಬವಾಗಿ ನಡೆಯುತ್ತಿದೆ. ಇನ್ನಾದರೂ ಯಾವುದೇ ಸಬೂಬು ಹೇಳದೆ ತ್ವರಿತವಾಗಿ ಕಾಮಗಾರಿ ಮುಗಿಸಬೇಕು. ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಸಹಜವಾಗಿ ಹೆಚ್ಚಿನ ಜನರು ಬರುತ್ತಿದ್ದಾರೆ. ಇವರಿಗೆ ಯಾವುದೇ ಅನಾನುಕೂಲವಾಗದಂತೆ ಕೆಲಸ ಪೂರ್ಣ ಮಾಡಬೇಕು ಎಂದರು.
ಆಸ್ಪತ್ರೆ ಆವರಣದ ಎದುರು ಒಳಚರಂಡಿ ಮ್ಯಾನ್ ಹೋಲ್‍ನಿಂದ ನೀರು ಹೊರಬರುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಒಳಚರಂಡಿ ನಿರ್ವಹಣೆ ಎಂಜಿನಿಯರ್ ಅವರನ್ನು ಕರೆಯಿಸಿ ಇನ್ನೆರಡು ದಿನಗಳಲ್ಲಿ ಕೆಲಸ ಆರಂಭಿಸಬೇಕು. ಮುಖ್ಯ ಸಂಪರ್ಕ ಜೋಡಣೆಗೆ ಆಸ್ಪತ್ರೆ ಒಳಚರಂಡಿಯನ್ನು ಸಂಪರ್ಕಿಸುವ ಕೆಲಸವನ್ನು ಶೀಘ್ರವಾಗಿ ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಶುಚಿತ್ವ ಕೆಲಸಗಳನ್ನು ಪ್ರತೀದಿನ ಉತ್ತಮವಾಗಿ ನಿರ್ವಹಿಸಬೇಕು. ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಬೇಕು. ರೋಗಿಗಳಿಗೆ ಅಗತ್ಯವಿರುವ ಮೂಲಸೌಕರ್ಯ ಇನ್ನಿತರ ಔಷದೋಪಚಾರಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಸರ್ಜನ್ ಡಾ. ರಘುರಾಂ, ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು, ಕಾಮಗಾರಿ ನಿರ್ವಹಣೆ ಎಂಜಿನಿಯರ್‍ಗಳು, ಇತರರು ಹಾಜರಿದ್ದರು.
ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಜೂನ್ 5ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಜೂನ್ 9ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.
ಜೂನ್ 13ರಂದು ಯಳಂದೂರು, 24ರಂದು ಕೊಳ್ಳೇಗಾಲ ಹಾಗೂ ಜೂನ್ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ ಪಟ್ಟಣದಲ್ಲಿ 2007ರಲ್ಲಿ ಪ್ರಾರಂಭವಾದ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ದೀರ್ಘಾವಧಿ ಕೋರ್ಸು ಅಧ್ಯ್ಯಯನಕ್ಕೆ ಅವಕಾಶ ನೀಡಿದ್ದು ಇದುವರೆಗೆ 150 ವಿದ್ಯಾರ್ಥಿಗಳು ತರಬೇತಿ ಪಡೆದು ರಾಷ್ಟ್ರಮಟ್ಟದ ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ನೌಕರಿ ಅವಕಾಶ ಲಭಿಸಿದೆ.
ಟೂಲ್ ಮತ್ತು ಡೈ ಮೇಕಿಂಗ್ ಕೋರ್ಸಿಗೆ ಈ ಮೊದಲು ಪ್ರತಿ ವರ್ಷ 30 ವಿದ್ಯಾರ್ಥಿಗಳಿಗೆ ಮಾತ್ರÀ ಪ್ರವೇಶಕ್ಕೆ ಅವಕಾಶವಿತ್ತು, ಈ ಕೋರ್ಸು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ದೇಶವಿದೇಶಗಳಲ್ಲೂ ಹೆಚ್ಚಿನÀ ಉದ್ಯೋಗ ಅವಕಾಶ ಇರುವ ಹಿನ್ನಲೆಯಲ್ಲಿ ಸಹಜವಾಗಿ ಕೋರ್ಸು ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಕರ್ನಾಟಕ ಸರ್ಕಾರ ಮತ್ತು ಂIಅಖಿಇ ಅನುಮೋದನೆ ಪಡೆದು 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ತರಬೇತಿ ಕೇಂದ್ರದಲ್ಲಿ ಇತರೆ ಸರ್ಟಿಫೈಡ್ ಕೋರ್ಸು ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಟೂಲ್ ರೂಂ ಮೆಷಿನಿಷ್ಟ್, ಟೂಲ್ ಅಂಡ್ ಡೈ ಟೆಕ್ನಿಷಿಯನ್ ಕೋರ್ಸುಗಳಲ್ಲಿ ತರಬೇತಿ ನೀಡಲಾಗುತ್ತಿದೆ.
ತರಬೇತಿ ಕೇಂದ್ರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಾಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಟೂಲ್ ರೂಂ ಮೆಷಿನಿಷ್ಟ್, ಸಿ.ಎನ್.ಸಿ ಟೆಕ್ನಾಲಜಿಸ್ಟ್ ಕ್ಯಾಡ್/ಕ್ಯಾಮ್ ಸ್ಪೆಷಲಿಸ್ಟ್, ಟರ್ನರ್, ಮಿಲ್ಲರ್ ವಿಷಯದಲ್ಲಿ ಅಲ್ಪಾವಧಿಯ ತರಬೇತಿಯನ್ನು ನೀಡುತ್ತಿದೆ.
ನೂತನ ಸೌಕರ್ಯ, ತಂತ್ರ ವಿಧಾನಗಳನ್ನು ಬಳಸಿಕೊಂಡು ಕೈಗಾರಿಕೆಗಳಲ್ಲಿ ಗರಿಷ್ಠ ಉತ್ಪಾದನೆಗಾಗಿ ತರಬೇತಿ ಹಾಗೂ ಆವಿಷ್ಕಾರಕ್ಕಾಗಿ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಮಹತ್ತರ ಗುರಿಯೊಂದಿಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಆರಂಭವಾಗಿದೆ.
ಗುಂಡ್ಲುಪೇಟೆ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೋರ್ಸುಗಳ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿಗಳನ್ನು ವಿತರಿಸಲಾಗುತ್ತಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 8ರೊಳಗೆ ಸಲ್ಲಿಸಬೇಕಿದೆ. ವಿವರಗಳಿಗೆ ದೂರವಾಣಿ 08229-222344 ಅಥವಾ ಮೊಬೈಲ್ 9880800692 ಸಂಪರ್ಕಿಸುವಂತೆಯು ಪ್ರಾಂಶುಪಾಲರಾದ ಗಣಪತಿ ಎಸ್. ಮೇತ್ರಿ ತಿಳಿಸಿದ್ದಾರೆ.
ಹರದನಹಳ್ಳಿಯ ವಾಲ್ಮೀಕಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಅವರು ಮಾತನಾಡಿ ಗ್ರಾಮೀಣ ಅಭಿವೃದ್ಧಿ ಕೆಲಸಗಳ ಪೈಕಿ ಸ್ವಚ್ಚ ಭಾರತ್ ಅಡಿ ಶೌಚಾಲಯಗಳ ನಿರ್ಮಾಣ ಕಾರ್ಯ ಹೆಚ್ಚು ನಡೆಯಬೇಕಿದೆ. ಶೌಚಾಲಯಗಳನ್ನು ನಿರ್ಮಿಸಿದರಷ್ಟೇ ಸಾಲದು. ಇದರ ಬಳಕೆಯೂ ಆಗಬೇಕು. ಆರೋಗ್ಯ ದೃಷ್ಠಿಯಿಂದ ಶೌಚಾಲಯ ಉಪಯೋಗಿಸುವುದು ಒಳಿತು ಎಂಬ ಅರಿವು ಎಲ್ಲರಲ್ಲೂ ಮೂಡಿಸಬೇಕು. ಆಗಮಾತ್ರ ಗ್ರಾಮದ ವಾತಾವರಣವು ಉತ್ತಮವಾಗಿರುತ್ತದೆ ಎಂದರು.
ಕುಡಿಯುವ ನೀರು ಸಮಸ್ಯೆ ಕಾಡದಂತೆ ಅಪೂರ್ಣಗೊಂಡಿರುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಿದೆ. ಪೈಪ್ ಲೈನ್ ಅಳವಡಿಕೆ, ವಿದ್ಯುತ್ ಸಂಪರ್ಕ ಕಾರಣದಿಂದ ಕೊಳವೆ ಬಾವಿಗಳ ನೀರು ಪ್ರಯೋಜನಕ್ಕೆ ಬಾರದಂತಿದೆ. ಹೀಗೆ ಮಾಡಿದರೆ ಅಭಾವ ಪರಿಸ್ಥಿತಿ ಬದಲಾಗುವುದಿಲ್ಲ. ಕಾಲಮಿತಿಯಲ್ಲಿ ಪೂರಕವಾಗಿ ಕಾಮಗಾರಿಗಳು ನಡೆಯಬೇಕು. ಇದಕ್ಕೆ ಎಲ್ಲಾ ರೀತಿಯ ನೆರವು ಪಂಚಾಯತ್ ವತಿಯಿಂದ ನೀಡಲಾಗುತ್ತದೆ ಎಂದು ರಾಮಚಂದ್ರ ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯಡಿ ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಅವಕಾಶವಿದೆ. ಸ್ಥಳೀಯ ಪಂಚಾಯತಿ ಪ್ರತಿನಿಧಿಗಳು ಒಟ್ಟುಗೂಡಿ ಆಯಾ ಭಾಗದ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿ ಗುರುತಿಸಬೇಕು. ಈ ಬಹು ಉಪಯೋಗಿ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಸದುಪಯೋಗಪಡಿಸಿಕೊಂಡರೆ ಉದ್ಯೋಗ ಅವಕಾಶಗಳು ಸ್ಥಳೀಯವಾಗಿ ಲಭ್ಯವಾಗಲಿದೆ ಎಂದು ರಾಮಚಂದ್ರ ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಉದ್ಯೋಗ ಖಾತರಿ ಯೋಜನೆಯು ಆಯಾ ಗ್ರಾಮದ ಪ್ರಮುಖ ಅಭಿವೃದ್ಧಿಗೆ ಪೂರಕವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಚರ್ಚಿಸಿ ಸಕಾಲದಲ್ಲಿ ಕ್ರಿಯಾಯೋಜನೆಗಳನ್ನು ತಯಾರಿಸಿಕೊಂಡು ತಕ್ಷಣವೇ ಅನುಮೋದನೆ ಪಡೆದುಕೊಂಡರೆ ಹೆಚ್ಚಿನ ಪ್ರಗತಿ ಸಾಧಿಸಲು ಅವಕಾಶವಾಗುತ್ತದೆ ಎಂದರು.
ಸ್ವಚ್ಚ ಭಾರತ್ ಮಿಷನ್ ಅಡಿ ಜಿಲ್ಲೆಯಲ್ಲಿ ಶೇ. 100ರಷ್ಟು ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಶೌಚಾಲಯ ಕಟ್ಟಿಕೊಳ್ಳಲು ಮುಂದೆಬರುವ ಫಲಾನುಭವಿಗಳಿಗೆ ಪ್ರೋತ್ಸಾಹಧನ ಲಭಿಸಲಿದೆ. ಶೌಚಾಲಯಗಳ ನಿರ್ಮಾಣಕ್ಕೆ ಯಾವುದೇ ಅನುದಾನ ಕೊರತೆ ಇಲ್ಲ. ಈ ಸೌಲಭ್ಯ ಪಡೆದುಕೊಳ್ಳಲು ಎಲ್ಲರೂ ಪ್ರೇರೇಪಿಸಬೇಕಿದೆ ಎಂದು ತಿಳಿಸಿದರು.
ಸ್ತ್ರೀಶಕ್ತಿ ಸಂಘಗಳು ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಬಾರದು. ಗ್ರಾಮದ ನೈರ್ಮಲ್ಯ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಒದಗಿಸುವ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಬೇಕು. ಬಾಲ್ಯವಿವಾಹದಂತಹ ಪಿಡುಗಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಜಾಗೃತಿಗೊಳಿಸುವ ಕೆಲಸದಲ್ಲಿಯೂ ಸಹ ಮುಂದಾಗಬೇಕೆಂದು ಹರೀಶ್ ಕುಮಾರ್ ಸಲಹೆ ಮಾಡಿದರು.
ಹರದನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಬ್ಬಶೆಟ್ಟಿ, ಸದಸ್ಯರಾದ ಮಹೇಶ್, ವೆಂಕಟಯ್ಯ ಛತ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಣ್ಣ, ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಾಲಕ್ಷ್ಮಿ ಮಹಾದೇವಯ್ಯ, ಇತರರು ಮಾತನಾಡಿದರು.
ತಾಲೂಕು ಪಂಚಾಯತ್ ಸದಸ್ಯರಾದ ಕಾಂತಾಮಣಿ, ಕುಮಾರನಾಯಕ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಕೆ. ಮಾದೇಶು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಾಸಕರಿಂದ ಜಿಲ್ಲಾ ಆಸ್ಪತ್ರೆ ನವೀಕರಣ ಕಾಮಗಾರಿ ಪರಿಶೀಲನೆ
, * ರಾಮಸಮುದ್ರ. ಎಸ್ .ವೀರಭದ್ರಸ್ವಾಮಿ*
ಚಾಮರಾಜನಗರ, ಜೂ. 02 - ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 81.35 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಯನ್ನು ಶಾಸಕರು ಹಾಗೂ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆದ ಸಿ. ಪುಟ್ಟರಂಗಶೆಟ್ಟಿ ಇಂದು ಪರಿಶೀಲಿಸಿದರು.ಜಿಲ್ಲಾ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ಶೌಚಾಲಯ ದುರಸ್ತಿ, ನವೀಕರಣ, ಎಕ್ಸ್ ರೇ ಕೊಠಡಿ, ನೂತನವಾಗಿ ನಿರ್ಮಿಸಲಾಗುತ್ತಿರುವ ಶವಾಗಾರ, ರಕ್ತನಿಧಿ ಬ್ಯಾಂಕ್ ಘಟಕ ನಿರ್ಮಾಣ, ತ್ಯಾಜ್ಯ ವಸ್ತು ಸಂಗ್ರಹಣಾ ಘಟಕ, ಸ್ಯಾನಿಟರಿ ಪೈಪ್‍ಲೈನ್ ದುರಸ್ತಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.
ನೂತನ ಕಟ್ಟಡದಲ್ಲಿ ಸಹ ಒಳಚರಂಡಿ, ಪಾರ್ಕಿಂಗ್ ಸ್ಥಳ, ಶೌಚಾಲಯ ದುರಸ್ತಿ, ನವೀಕರಣ ಇನ್ನಿತರ ಕಟ್ಟಡ ಕೆಲಸಗಳನ್ನು ಶಾಸಕರು ಪರಿಶೀಲಿಸಿದರು. ಆಸ್ಪತ್ರೆ ಆವರಣದ ಮುಖ್ಯ ದ್ವಾರದ ಬಳಿ ನಿರ್ಮಾಣ ಮಾಡಲಾಗುತ್ತಿರುವ ಊಟದ ಹಾಲ್ ಕಾಮಗಾರಿಯನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗುಣಮಟ್ಟದ ಕೆಲಸ ಮಾಡಬೇಕು. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅಗತ್ಯವಿರುವೆಡೆ ಸುರಕ್ಷಿತವಾಗಿ ಆಸ್ಪತ್ರೆಯ ಕಟ್ಟಡದ ಇತರೆ ವಿಭಾಗಕ್ಕೆ ಸ್ಥಳಾಂತರಿಸಿ ಕಾಮಗಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಕಾಮಗಾರಿ ಹೆಚ್ಚಿನ ಪ್ರಮಾಣದಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ವಿಳಂಬವಾಗಿ ನಡೆಯುತ್ತಿದೆ. ಇನ್ನಾದರೂ ಯಾವುದೇ ಸಬೂಬು ಹೇಳದೆ ತ್ವರಿತವಾಗಿ ಕಾಮಗಾರಿ ಮುಗಿಸಬೇಕು. ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಸಹಜವಾಗಿ ಹೆಚ್ಚಿನ ಜನರು ಬರುತ್ತಿದ್ದಾರೆ. ಇವರಿಗೆ ಯಾವುದೇ ಅನಾನುಕೂಲವಾಗದಂತೆ ಕೆಲಸ ಪೂರ್ಣ ಮಾಡಬೇಕು ಎಂದರು.
ಆಸ್ಪತ್ರೆ ಆವರಣದ ಎದುರು ಒಳಚರಂಡಿ ಮ್ಯಾನ್ ಹೋಲ್‍ನಿಂದ ನೀರು ಹೊರಬರುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಒಳಚರಂಡಿ ನಿರ್ವಹಣೆ ಎಂಜಿನಿಯರ್ ಅವರನ್ನು ಕರೆಯಿಸಿ ಇನ್ನೆರಡು ದಿನಗಳಲ್ಲಿ ಕೆಲಸ ಆರಂಭಿಸಬೇಕು. ಮುಖ್ಯ ಸಂಪರ್ಕ ಜೋಡಣೆಗೆ ಆಸ್ಪತ್ರೆ ಒಳಚರಂಡಿಯನ್ನು ಸಂಪರ್ಕಿಸುವ ಕೆಲಸವನ್ನು ಶೀಘ್ರವಾಗಿ ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಶುಚಿತ್ವ ಕೆಲಸಗಳನ್ನು ಪ್ರತೀದಿನ ಉತ್ತಮವಾಗಿ ನಿರ್ವಹಿಸಬೇಕು. ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಬೇಕು. ರೋಗಿಗಳಿಗೆ ಅಗತ್ಯವಿರುವ ಮೂಲಸೌಕರ್ಯ ಇನ್ನಿತರ ಔಷದೋಪಚಾರಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಸರ್ಜನ್ ಡಾ. ರಘುರಾಂ, ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು, ಕಾಮಗಾರಿ ನಿರ್ವಹಣೆ ಎಂಜಿನಿಯರ್‍ಗಳು, ಇತರರು ಹಾಜರಿದ್ದರು.
ಗುಣಮಟ್ಟದ ಶಿಕ್ಷಣ ಪಡೆಯಲು ಜಿ.ಪಂ. ಅಧ್ಯಕ್ಷ ರಾಮಚಂದ್ರ ಸಲಹೆ
ಚಾಮರಾಜನಗರ, ಜೂ. 02 :- ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಸರ್ಕಾರ ನೀಡುವ ಉಚಿತ ಸವಲತ್ತುಗಳನ್ನು ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆವಯಿಂದ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ಆಯೋಜಿಸಲಾಗಿದ್ದ 2017-18ನೇ ಸಾಲಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್ ಮತ್ತು ಬೈಸಿಕಲ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಕ್ಷೇತ್ರ ಇಂದು ತೀವ್ರ ಸ್ಪರ್ಧಾತ್ಮಕವಾಗಿದ್ದು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಂದ ಪೈಪೋಟಿ ಎದುರಿಸಬೇಕಾಗಿದೆ. ಖಾಸಗಿ ಶಾಲಾ ಸಂಸ್ಥೆಗಳ ಮಕ್ಕಳಿಗಿಂತ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಒದಗಿಸಿ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಅಧ್ಯತೆ ನೀಡಿದೆ ಎಂದರು.
ಕಳೆÀದ ಬಾರಿ ಎಸ್.ಎಸ್.ಎಲ್.ಸಿ ಯಲ್ಲಿ 27ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ 12ನೇ ಸ್ಥಾನ ಪಡೆದ ಶಿಕ್ಷಣಕ್ಷೇತ್ರದಲ್ಲಿ ಪ್ರಗತಿಯತ್ತ ಸಾಗಿದೆÉ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್‍ವತಿಯಿಂದ ಶಿಕ್ಷಕರಿಗೆ ಹಲವಾರು ಅವಲೋಕನ ಕಾರ್ಯಾಗಾರ, ಕಮ್ಮಟಗಳನ್ನು ಹಮ್ಮಿಕೊಂಡಿದ್ದೇ ಈ ಪ್ರಗತಿಗೆ ಕಾರಣ. ಮುಂದಿನ ವರ್ಷಗಳಲ್ಲಿ ಎಸ್,ಎಸ್.ಎಲ್.ಸಿ ಫಲಿತಾಂಸದಲ್ಲಿ ಜಿಲ್ಲೆ 5ರಿಂದ 4ನೇ ಸ್ಥಾನಕ್ಕೇರುವ ನಿರೀಕ್ಷೆಯಿದೆ. ಸರ್ಕಾರ ವಿದ್ಯಾರ್ಥಿಗಳಿಗೆ ವಿವಿಧ ಕಲಿಕಾ ಯೋಜನೆಗಳನ್ನು ರೂಪಿಸಿ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತಿದೆ. ಅದರ ಸದುಪಯೋಗವಾಗಬೇಕು ಎಂದು ರಾಮಚಂದ್ರ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಶಿಕ್ಷಣ ಇಲಾಖೆ ಇತರೆ ಇಲಾಖೆಗಳಿಗಿಂತ ವಿಶೇಷವಾಗಿದೆ. ಬದಲಾವಣೆ ಎನ್ನುವುದು ನಿರಂತರ ಪ್ರಕ್ರಿಯೆ. ಶೈಕ್ಷಣಿಕ ಬದಲಾವಣೆಗೆ ಜಿಲ್ಲೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಹೊಂದಬೇಕು. ಈ ಬಾರಿಯು ಸಹ ಜಿಲ್ಲಾ ಪಂಚಾಯತ್‍ನಿಂದ ಶೈಕ್ಷಣಿಕ ಪ್ರಗತಿಗಾಗಿ ಶಿಕ್ಷಕರಿಗೆ ಹಾಗೂ ಶಾಲಾ ಮಕ್ಕಳಿಗೆ ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜಿಲ್ಲೆಯ ಶೈಕ್ಷಣಿಕ ಅಭಿವೃದ್ದಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿದೆ. ಜಿಲ್ಲೆಯ ಪ್ರಗತಿಗೆ ಪೂರಕವಾಗಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಿವೆ. ಇದೇ ತಿಂಗಳಲ್ಲಿ ಕಾನೂನು ಕಾಲೇಜು ಆರಂಭವಾಗಲಿದೆ ಎಂದರು.
ಮುಂದಿನ ದಿನಗಳಲ್ಲಿ ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಅವರನ್ನೆ ಆಸ್ತಿ ಎಂದು ಪರಿಗಣಿಸಬೇಕು ಎಂದು ಪುಟ್ಟರಂಗಶೆಟ್ಟಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಜೂ. 5ರಂದು ನಗರದಲ್ಲಿ ಸೆಸ್ಕ್ ಜನಸಂಪರ್ಕ ಸಭೆ
ಚಾಮರಾಜನಗರ, ಜೂ. 02 (- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜೂನ್ 5ರಂದು ಬೆಳಿಗ್ಗೆ 11 ಗಂಟೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಜೂ. 02 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ ಮಾಹೆಯ ವಿವಿಧ ದಿನಗಳಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಜೂನ್ 5ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಜೂನ್ 9ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.
ಜೂನ್ 13ರಂದು ಯಳಂದೂರು, 24ರಂದು ಕೊಳ್ಳೇಗಾಲ ಹಾಗೂ ಜೂನ್ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
ಉದ್ಯೋಗ ಅವಕಾಶಕ್ಕೆ ನೆರವಾಗುತ್ತಿರುವ ಗುಂಡ್ಲುಪೇಟೆ ಜಿ.ಟಿ.ಟಿ.ಸಿ ಕೇಂದ್ರ
ಚಾಮರಾಜನಗರ, ಜೂ. 02- ಗುಂಡ್ಲುಪೇಟೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉದ್ಯೋಗಾವಕಾಶಕ್ಕೆ ನೆರವಾಗುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿಗಳನ್ನು ನೀಡುತ್ತಿದ್ದು ಜಿಲ್ಲೆಯ ಯುವ ಜನರು ಇದರ ಪ್ರಯೋಜನ ಪಡೆಯಲು ಮನವಿ ಮಾಡಲಾಗಿದೆ.ಗುಂಡ್ಲುಪೇಟೆ ಪಟ್ಟಣದಲ್ಲಿ 2007ರಲ್ಲಿ ಪ್ರಾರಂಭವಾದ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ದೀರ್ಘಾವಧಿ ಕೋರ್ಸು ಅಧ್ಯ್ಯಯನಕ್ಕೆ ಅವಕಾಶ ನೀಡಿದ್ದು ಇದುವರೆಗೆ 150 ವಿದ್ಯಾರ್ಥಿಗಳು ತರಬೇತಿ ಪಡೆದು ರಾಷ್ಟ್ರಮಟ್ಟದ ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ನೌಕರಿ ಅವಕಾಶ ಲಭಿಸಿದೆ.
ಟೂಲ್ ಮತ್ತು ಡೈ ಮೇಕಿಂಗ್ ಕೋರ್ಸಿಗೆ ಈ ಮೊದಲು ಪ್ರತಿ ವರ್ಷ 30 ವಿದ್ಯಾರ್ಥಿಗಳಿಗೆ ಮಾತ್ರÀ ಪ್ರವೇಶಕ್ಕೆ ಅವಕಾಶವಿತ್ತು, ಈ ಕೋರ್ಸು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ದೇಶವಿದೇಶಗಳಲ್ಲೂ ಹೆಚ್ಚಿನÀ ಉದ್ಯೋಗ ಅವಕಾಶ ಇರುವ ಹಿನ್ನಲೆಯಲ್ಲಿ ಸಹಜವಾಗಿ ಕೋರ್ಸು ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಕರ್ನಾಟಕ ಸರ್ಕಾರ ಮತ್ತು ಂIಅಖಿಇ ಅನುಮೋದನೆ ಪಡೆದು 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ತರಬೇತಿ ಕೇಂದ್ರದಲ್ಲಿ ಇತರೆ ಸರ್ಟಿಫೈಡ್ ಕೋರ್ಸು ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಟೂಲ್ ರೂಂ ಮೆಷಿನಿಷ್ಟ್, ಟೂಲ್ ಅಂಡ್ ಡೈ ಟೆಕ್ನಿಷಿಯನ್ ಕೋರ್ಸುಗಳಲ್ಲಿ ತರಬೇತಿ ನೀಡಲಾಗುತ್ತಿದೆ.
ತರಬೇತಿ ಕೇಂದ್ರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಾಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಟೂಲ್ ರೂಂ ಮೆಷಿನಿಷ್ಟ್, ಸಿ.ಎನ್.ಸಿ ಟೆಕ್ನಾಲಜಿಸ್ಟ್ ಕ್ಯಾಡ್/ಕ್ಯಾಮ್ ಸ್ಪೆಷಲಿಸ್ಟ್, ಟರ್ನರ್, ಮಿಲ್ಲರ್ ವಿಷಯದಲ್ಲಿ ಅಲ್ಪಾವಧಿಯ ತರಬೇತಿಯನ್ನು ನೀಡುತ್ತಿದೆ.
ನೂತನ ಸೌಕರ್ಯ, ತಂತ್ರ ವಿಧಾನಗಳನ್ನು ಬಳಸಿಕೊಂಡು ಕೈಗಾರಿಕೆಗಳಲ್ಲಿ ಗರಿಷ್ಠ ಉತ್ಪಾದನೆಗಾಗಿ ತರಬೇತಿ ಹಾಗೂ ಆವಿಷ್ಕಾರಕ್ಕಾಗಿ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಮಹತ್ತರ ಗುರಿಯೊಂದಿಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಆರಂಭವಾಗಿದೆ.
ಗುಂಡ್ಲುಪೇಟೆ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೋರ್ಸುಗಳ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿಗಳನ್ನು ವಿತರಿಸಲಾಗುತ್ತಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 8ರೊಳಗೆ ಸಲ್ಲಿಸಬೇಕಿದೆ. ವಿವರಗಳಿಗೆ ದೂರವಾಣಿ 08229-222344 ಅಥವಾ ಮೊಬೈಲ್ 9880800692 ಸಂಪರ್ಕಿಸುವಂತೆಯು ಪ್ರಾಂಶುಪಾಲರಾದ ಗಣಪತಿ ಎಸ್. ಮೇತ್ರಿ ತಿಳಿಸಿದ್ದಾರೆ.
ಹರದನಹಳ್ಳಿಯಲ್ಲಿ ಚಾಲನೆಗೊಂಡ ಗ್ರಾಮೀಣಾಭಿವೃದ್ಧಿ ಪೂರಕ ಚಿಂತನ - ಮಂಥನ
, * ರಾಮಸಮುದ್ರ. ಎಸ್ .ವೀರಭದ್ರಸ್ವಾಮಿ*
ಚಾಮರಾಜನಗರ, ಜೂ. 02 :- ಗ್ರಾಮೀಣ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮಹತ್ತರ ಗುರಿಯೊಂದಿಗೆ ಜಿಲ್ಲೆಯ 23 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ನಡೆಸುವ ಚಿಂತನ-ಮಂಥನ ಕಾರ್ಯಕ್ರಮವು ಹರದನಹಳ್ಳಿ ಮೂಲಕ ಗುರುವಾರ ಶುಭಾರಂಭವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಅನುಷ್ಠಾನ ಮಾಡುತ್ತಿರುವ ಕಾರ್ಯಕ್ರಮಗಳ ಪೈಕಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ, ಸ್ವಚ್ಛ ಭಾರತ್ ಮಿಷನ್ ಅಡಿ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಇತರೆ ಕಾರ್ಯದಲ್ಲಿ ಗಣನೀಯ ಪ್ರಗತಿ ಸಾಧಿಸಲು ಜಿಲ್ಲಾ ಪಂಚಾಯಿತಿಯು ಎಲ್ಲಾ ಚುನಾಯಿತ ಜನಪ್ರತಿನಿಧಿಗಳನ್ನು ಒಳಗೊಂಡು ವಿಶೇಷ ಕಾರ್ಯಕ್ರಮ ರೂಪಿಸಿದೆ. ಆಯಾ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲೇ ಆಯಾ ಭಾಗದ ಎಲ್ಲಾ ಹಂತದ ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲೇ ಕುಳಿತು ಅಭಿವೃದ್ಧಿ ಕೆಲಸಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ರೂಪಿಸಿರುವ ವಿಶೇಷ ಪರಿಕಲ್ಪನೆಯ ಚಿಂತನ – ಮಂಥನ ಹರದನಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಚಾಲನೆಗೊಂಡಿದೆ.ಹರದನಹಳ್ಳಿಯ ವಾಲ್ಮೀಕಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಅವರು ಮಾತನಾಡಿ ಗ್ರಾಮೀಣ ಅಭಿವೃದ್ಧಿ ಕೆಲಸಗಳ ಪೈಕಿ ಸ್ವಚ್ಚ ಭಾರತ್ ಅಡಿ ಶೌಚಾಲಯಗಳ ನಿರ್ಮಾಣ ಕಾರ್ಯ ಹೆಚ್ಚು ನಡೆಯಬೇಕಿದೆ. ಶೌಚಾಲಯಗಳನ್ನು ನಿರ್ಮಿಸಿದರಷ್ಟೇ ಸಾಲದು. ಇದರ ಬಳಕೆಯೂ ಆಗಬೇಕು. ಆರೋಗ್ಯ ದೃಷ್ಠಿಯಿಂದ ಶೌಚಾಲಯ ಉಪಯೋಗಿಸುವುದು ಒಳಿತು ಎಂಬ ಅರಿವು ಎಲ್ಲರಲ್ಲೂ ಮೂಡಿಸಬೇಕು. ಆಗಮಾತ್ರ ಗ್ರಾಮದ ವಾತಾವರಣವು ಉತ್ತಮವಾಗಿರುತ್ತದೆ ಎಂದರು.
ಕುಡಿಯುವ ನೀರು ಸಮಸ್ಯೆ ಕಾಡದಂತೆ ಅಪೂರ್ಣಗೊಂಡಿರುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಿದೆ. ಪೈಪ್ ಲೈನ್ ಅಳವಡಿಕೆ, ವಿದ್ಯುತ್ ಸಂಪರ್ಕ ಕಾರಣದಿಂದ ಕೊಳವೆ ಬಾವಿಗಳ ನೀರು ಪ್ರಯೋಜನಕ್ಕೆ ಬಾರದಂತಿದೆ. ಹೀಗೆ ಮಾಡಿದರೆ ಅಭಾವ ಪರಿಸ್ಥಿತಿ ಬದಲಾಗುವುದಿಲ್ಲ. ಕಾಲಮಿತಿಯಲ್ಲಿ ಪೂರಕವಾಗಿ ಕಾಮಗಾರಿಗಳು ನಡೆಯಬೇಕು. ಇದಕ್ಕೆ ಎಲ್ಲಾ ರೀತಿಯ ನೆರವು ಪಂಚಾಯತ್ ವತಿಯಿಂದ ನೀಡಲಾಗುತ್ತದೆ ಎಂದು ರಾಮಚಂದ್ರ ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯಡಿ ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಅವಕಾಶವಿದೆ. ಸ್ಥಳೀಯ ಪಂಚಾಯತಿ ಪ್ರತಿನಿಧಿಗಳು ಒಟ್ಟುಗೂಡಿ ಆಯಾ ಭಾಗದ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿ ಗುರುತಿಸಬೇಕು. ಈ ಬಹು ಉಪಯೋಗಿ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಸದುಪಯೋಗಪಡಿಸಿಕೊಂಡರೆ ಉದ್ಯೋಗ ಅವಕಾಶಗಳು ಸ್ಥಳೀಯವಾಗಿ ಲಭ್ಯವಾಗಲಿದೆ ಎಂದು ರಾಮಚಂದ್ರ ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಉದ್ಯೋಗ ಖಾತರಿ ಯೋಜನೆಯು ಆಯಾ ಗ್ರಾಮದ ಪ್ರಮುಖ ಅಭಿವೃದ್ಧಿಗೆ ಪೂರಕವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಚರ್ಚಿಸಿ ಸಕಾಲದಲ್ಲಿ ಕ್ರಿಯಾಯೋಜನೆಗಳನ್ನು ತಯಾರಿಸಿಕೊಂಡು ತಕ್ಷಣವೇ ಅನುಮೋದನೆ ಪಡೆದುಕೊಂಡರೆ ಹೆಚ್ಚಿನ ಪ್ರಗತಿ ಸಾಧಿಸಲು ಅವಕಾಶವಾಗುತ್ತದೆ ಎಂದರು.
ಸ್ವಚ್ಚ ಭಾರತ್ ಮಿಷನ್ ಅಡಿ ಜಿಲ್ಲೆಯಲ್ಲಿ ಶೇ. 100ರಷ್ಟು ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಶೌಚಾಲಯ ಕಟ್ಟಿಕೊಳ್ಳಲು ಮುಂದೆಬರುವ ಫಲಾನುಭವಿಗಳಿಗೆ ಪ್ರೋತ್ಸಾಹಧನ ಲಭಿಸಲಿದೆ. ಶೌಚಾಲಯಗಳ ನಿರ್ಮಾಣಕ್ಕೆ ಯಾವುದೇ ಅನುದಾನ ಕೊರತೆ ಇಲ್ಲ. ಈ ಸೌಲಭ್ಯ ಪಡೆದುಕೊಳ್ಳಲು ಎಲ್ಲರೂ ಪ್ರೇರೇಪಿಸಬೇಕಿದೆ ಎಂದು ತಿಳಿಸಿದರು.
ಸ್ತ್ರೀಶಕ್ತಿ ಸಂಘಗಳು ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಬಾರದು. ಗ್ರಾಮದ ನೈರ್ಮಲ್ಯ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಒದಗಿಸುವ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಬೇಕು. ಬಾಲ್ಯವಿವಾಹದಂತಹ ಪಿಡುಗಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಜಾಗೃತಿಗೊಳಿಸುವ ಕೆಲಸದಲ್ಲಿಯೂ ಸಹ ಮುಂದಾಗಬೇಕೆಂದು ಹರೀಶ್ ಕುಮಾರ್ ಸಲಹೆ ಮಾಡಿದರು.
ಹರದನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಬ್ಬಶೆಟ್ಟಿ, ಸದಸ್ಯರಾದ ಮಹೇಶ್, ವೆಂಕಟಯ್ಯ ಛತ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಣ್ಣ, ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಾಲಕ್ಷ್ಮಿ ಮಹಾದೇವಯ್ಯ, ಇತರರು ಮಾತನಾಡಿದರು.
ತಾಲೂಕು ಪಂಚಾಯತ್ ಸದಸ್ಯರಾದ ಕಾಂತಾಮಣಿ, ಕುಮಾರನಾಯಕ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಕೆ. ಮಾದೇಶು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No comments:
Post a Comment