Tuesday, 20 June 2017

ರಾಜ್ಯಮಟ್ಟದ ಬುಡಕಟ್ಟು ಉತ್ಸವಕ್ಕೆ ವರ್ಣರಂಜಿತ ಚಾಲನೆ,ಜೂ. 21ರಂದು ನಗರದಲ್ಲಿ 3ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: 50 ಸಾವಿರಕ್ಕೂ ಹೆಚ್ಚು ಮಂದಿಯಿಂದ ಯೋಗ ಪ್ರದರ್ಶನ-ಹೋಬಳಿ ಕೇಂದ್ರಗಳಲ್ಲಿಯೂ ಸಾಮೂಹಿಕ ಯೋಗ

ಜೂ. 21ರಂದು ನಗರದಲ್ಲಿ 3ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: 50 ಸಾವಿರಕ್ಕೂ ಹೆಚ್ಚು ಮಂದಿಯಿಂದ ಯೋಗ ಪ್ರದರ್ಶನ-ಹೋಬಳಿ ಕೇಂದ್ರಗಳಲ್ಲಿಯೂ ಸಾಮೂಹಿಕ ಯೋಗ 

ಎಸ್,ವಿ.ಎಸ್.

ಚಾಮರಾಜನಗರ, ಜೂ. 20 :- ಶಾಂತಿ ಮತ್ತು ಐಕ್ಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ  ಜೂನ್ 21ರಂದು 3ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಜಿಲ್ಲೆಯಲ್ಲಿ ವ್ಯಾಪಕವಾಗಿ ಆಚರಿಸಲಾಗುತ್ತಿದ್ದು, ಜಿಲ್ಲಾದ್ಯಂತ ಸುಮಾರು 50 ಸಾವಿರ ಮಂದಿ ಯೋಗ ಪ್ರದರ್ಶನ ನೀಡುವ ಮೂಲಕ ಸಾಕ್ಷೀಕರಿಸಲಿದ್ದಾರೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಫೌಂಡೇಶನ್ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಈ ಬಾರಿ ಈ ಹಿಂದಿನ ವರ್ಷಗಳಿಗಿಂತ ವಿಭಿನ್ನವಾಗಿ ಯೋಗ ದಿನ ಆಚರಣೆಗೆ ಸಜ್ಜುಗೊಳ್ಳಲಾಗಿದೆ.
ಈ ಬಾರಿ ಜಿಲ್ಲೆಯ ಎಲ್ಲಾ 16 ಹೋಬಳಿ ಕೇಂದ್ರಗಳಲ್ಲಿಯೂ ಸಾಮೂಹಿಕ ಯೋಗ ಪ್ರದರ್ಶನ ನೀಡಲಾಗುತ್ತಿದೆ. ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಶಿಕ್ಷಕರು, ಸರ್ಕಾರಿ ಇಲಾಖೆಯ ಅಧಿಕಾರಿ, ಸಿಬ್ಬಂದಿ, ನಾಗರಿಕರು, ಯೋಗ ಆಸಕ್ತರು ಭಾಗವಹಿಸಲಿದ್ದಾರೆ.
ಸಾಮೂಹಿಕ ಯೋಗ ಆಚರಣೆಗೆ ವ್ಯಾಪಕವಾಗಿ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯೋಗ ತಾಲೀಮು ನಡೆಸಿದ್ದು, ಜೂನ್ 21ರ ಯೋಗ ದಿನದಂದು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಈಗಾಗಲೇ ಸಾಕಷ್ಟು ಪೂರ್ವಭಾವಿ ಸಭೆ ನಡೆಸುವ ಮೂಲಕ ಅಗತ್ಯ ಮಾರ್ಗದರ್ಶನ ಮಾಡಿದ್ದಾರೆ. ಅಧಿಕಾರಿ, ಶಿಕ್ಷಕರು, ಸಿಬ್ಬಂದಿ ಸಹ ನಿಗದಿಯಾದ 45 ನಿಮಿಷಗಳ ಯೋಗ ಆಸನಗಳನ್ನು ಅಭ್ಯಾಸ ಮಾಡಿದ್ದಾರೆ.
ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6.30 ಗಂಟೆಗೆ ಯೋಗ ಪ್ರದರ್ಶನ ಆರಂಭವಾಗಲಿದೆ. ನಗರದಲ್ಲಿ ನಡೆಯುವ ಯೋಗ ಪ್ರದರ್ಶನದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಯೋಗ ಆಸಕ್ತರು, ಜನಪ್ರತಿನಿಧಿಗಳು, ನಾಗರಿಕರು, ಅಧಿಕಾರಿ ಸಿಬ್ಬಂದಿ ವರ್ಗದವರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಹೋಬಳಿಗೆ ಸಂಬಂಧಿಸಿದಂತೆ ವೆಂಕಟಯ್ಯನ ಛತ್ರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹರವೆ ಹೋಬಳಿಗೆ ಸಂಬಂಧಿಸಿದಂತೆ ಹರವೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತೇಮರಳ್ಳಿ ಹೋಬಳಿಗೆ ಸಂಬಂಧಿಸಿದಂತೆ ಸಂತೇಮರಳ್ಳಿಯ ಜೆ.ಎಸ್.ಎಸ್. ಪದವಿ ಪೂರ್ವ ಕಾಲೇಜು, ಚಂದಕವಾಡಿ ಹೋಬಳಿಗೆ ಸಂಬಂಧಿಸಿದಂತೆ ಚಂದಕವಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾಳ್ಯ ಹೋಬಳಿಗೆ ಸಂಬಂಧಿಸಿದಂತೆ ಪಾಳ್ಯ ಗ್ರಾಮಾಂತರ ಪೌಢಶಾಲೆ, ಹನೂರು ಹೋಬಳಿಗೆ ಸಂಬಂಧಿಸಿದಂತೆ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣ, ರಾಮಾಪುರ ಹೋಬಳಿಗೆ ಸಂಬಂಧಿಸಿದಂತೆ ರಾಮಾಪುರದ ಸರ್ಕಾರಿ ಪ್ರೌಢಶಾಲೆ, ಲೊಕ್ಕನಹಳ್ಳಿಗೆ ಸಂಬಂಧಿಸಿದಂತೆ ಲೊಕ್ಕನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಗುಂಡ್ಲುಪೇಟೆ ಕಸಬಾ ಹೋಬಳಿಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪಟ್ಟಣದ ಡಿ.ದೇವಅರಸು ಕ್ರೀಡಾಂಗಣ, ಬೇಗೂರು ಹೋಬಳಿಗೆ ಸಂಬಂಧಿಸಿದಂತೆ ಬೇಗೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಹಂಗಳ ಸರ್ಕಾರಿ ಪದವಿಪೂರ್ವ ಕಾಲೇಜು, ತೆರಕಣಾಂಬಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಯಳಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಅಗರದ ಟಿ.ಎಸ್. ಸುಬ್ಬಣ್ಣ ಪ್ರೌಢಶಾಲೆ, ಬಿಳಿಗಿರಿರಂಗನಬೆಟ್ಟದ ವಿ.ಜಿ.ಕೆ.ಕೆ ಕೇಂದ್ರದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನೀಡಲಾಗುತ್ತಿದೆ.
ಅಲ್ಲದೆ ಗ್ರಾಮ ಪಂಚಾಯಿತಿ ಕೇಂದ್ರಗಳು ಎಲ್ಲಾ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಲ್ಲಿಯೂ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅವಶ್ಯವಾಗಿದೆ. ಯೋಗದ ಮಹತ್ವ ದಿನೇ ದಿನೇ ಹೆಚ್ಚುತ್ತಿದ್ದು, ಎಲ್ಲರಲ್ಲೂ ಜಾಗೃತಿ ಉಂಟಾಗುತ್ತಿದೆ. ಯೋಗದ ವೈಶಿಷ್ಟ್ಯತೆ ಹಾಗೂ ಅನುಕೂಲಗಳನ್ನು ತಿಳಿಸುವ ಸಲುವಾಗಿಯೇ ವ್ಯಾಪಕವಾಗಿ ಯೋಗ ದಿನ ಆಚರಣೆಯಾಗುತ್ತಿದೆ.
ಜಿಲ್ಲೆಯಲ್ಲೂ ಎಲ್ಲೆಡೆ ಜೂನ್ 21ರಂದು ಬೆಳಿಗ್ಗೆ 6.30 ಗಂಟೆಗೆ ಯೋಗ ಪ್ರದರ್ಶನ ಆರಂಭವಾಗಲಿದೆ. ಜಿಲ್ಲೆಯ ವಿದ್ಯಾರ್ಥಿಗಳು, ನಾಗರಿಕರು, ಜನಪ್ರತಿನಿಧಿಗಳು, ಯೋಗ ಆಸಕ್ತರು, ಪಾಲ್ಗೊಳ್ಳುವ ಮೂಲ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿಯವರಾದ ಬಿ. ರಾಮು ಅವರು ಮನವಿ ಮಾಡಿದ್ದಾರೆ.

ರಾಜ್ಯಮಟ್ಟದ ಬುಡಕಟ್ಟು ಉತ್ಸವಕ್ಕೆ ವರ್ಣರಂಜಿತ ಚಾಲನೆ

ಚಾಮರಾಜನಗರ, ಜೂ. 20:- ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಎರಡು ದಿನಗಳ ಬುಡಕಟ್ಟು ಉತ್ಸವಕ್ಕೆ ಇಂದು ವರ್ಣರಂಜಿತ ಚಾಲನೆ ದೊರೆಯಿತು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಉತ್ಸವಕ್ಕೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಚಾಲನೆ ನೀಡಿದರು. ಇದೇವೇಳೆ ಮಾತನಾಡಿದ ಧ್ರುವನಾರಾಯಣ ಅವರು ಬುಡಕಟ್ಟು ಜನರಲ್ಲಿ ವೈವಿಧ್ಯಮಯ ಸಂಸ್ಕøತಿ ಕಲಾಪ್ರಕಾರಗಳು ಇವೆ. ಇಂತಹ ವಿಭಿನ್ನ ಪರಂಪರೆ ಅನಾವರಣಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಬುಡಕಟ್ಟು ಉತ್ಸವವನ್ನು ಆಯೋಜಿಸಲಾಗುತ್ತಿದೆ. ಇದರಿಂದ ಬೇರೆಬೇರೆ ಪ್ರದೇಶಗಳ ಬುಡಕಟ್ಟು ಜನರು ಒಂದೆಡೆ ಸೇರಿ ಕಲೆ ಸಂಸ್ಕøತಿಯನ್ನು ಪ್ರದರ್ಶಿಸಲು ಅನುಕೂಲವಾಗುತ್ತಿದೆ ಎಂದರು.
 ರಾಜ್ಯದಲ್ಲಿ 42 ಲಕ್ಷ ಬುಡಕಟ್ಟು ಜನರು ಇದ್ದಾರೆ. ಹಲವಾರು ಸಮುದಾಯಗಳಿವೆ. ಆದರೆ ಮೂಲ ನಿವಾಸಿಗಳ ಪಟ್ಟಿಯಲ್ಲಿ ಜೇನುಕುರುಬ, ಕೊರವರು ಮಾತ್ರ ಸೇರ್ಪಡೆಯಾಗಿದೆ. ಸೋಲಿಗರ ಸಂಖ್ಯೆಯೂ ಸಾಕಷ್ಟಿದ್ದು ಇವರನ್ನೂ ಸಹ ಮೂಲನಿವಾಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ರಾಜ್ಯವು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಧ್ರುವನಾರಾಯಣ ತಿಳಿಸಿದರು.

ಬುಡಕಟ್ಟು, ಅರಣ್ಯವಾಸಿಗಳು ಹಾಗೂ ಕಾಡಂಚಿನ ಪ್ರದೇಶದ ಜನರು ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಶಿಕ್ಷಣ ಪಡೆಯಲು ಅನುವಾಗುವಂತೆ ಸರ್ಕಾರ ಮೊರಾರ್ಜಿ, ಏಕಲವ್ಯ ಹಾಗೂ ಆಶ್ರಮಶಾಲೆಗಳನ್ನು ಹೆಚ್ಚು ಸಂಖ್ಯೆಯಲ್ಲಿ ತೆರೆದಿದೆ. ಈ ಪ್ರಯೋಜನ ಪಡೆಯಬೇಕು. ಶಿಕ್ಷಣದಿಂದಲೇ ಸರ್ವಪ್ರಗತಿಯೂ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸಮಾಜದ ಮುಖಂಡರು ಹೆಚ್ಚು ಆಸಕ್ತಿವಹಿಸಿ ಶಿಕ್ಷಣ ಪಡೆಯಲು ಉತ್ತೇಜಿಸಬೇಕಾದ ಅಗತ್ಯವಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪÀಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಬುಡಕಟ್ಟು ಜನರ ಕಲೆ, ಸಂಸ್ಕøತಿ ಪರಂಪರೆಯನ್ನು ಪೋಷಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತದೆ. ಅತ್ಯಂತ ವೈಶಿಷ್ಟ್ಯಪೂರ್ಣವಾದ ಬುಡಕಟ್ಟು ಜನರು ಆಚರಿಸಿಕೊಂಡು ಬರುತ್ತಿರುವ ಎಲ್ಲ ಪ್ರಕಾರಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿರುವ ಬುಡಕಟ್ಟು ಜನರ ಆರೋಗ್ಯ ರಕ್ಷಣೆಗಾಗಿಯೇ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತದೆ. ಶಿಕ್ಷಣ ಇನ್ನಿತರ ಪ್ರಮುಖ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುತ್ತಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಜನತೆ ಮುಂದೆಬರಬೇಕೆಂದು ರಾಮಚಂದ್ರ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಜಿಲ್ಲೆಯಲ್ಲಿ 146 ಹಾಡಿಗಳಿವೆ. ಈ ಜನರ ಆರೋಗ್ಯ, ಶಿಕ್ಷಣ ಕಾರ್ಯಕ್ರಮಗಳಿಗೆ ವಿಶೇಷ ಕಾಳಜಿ ವಹಿಸಲಾಗಿದೆ. ಅರಣ್ಯವಾಸಿಗಳಿಗೆ ಪ್ರಸ್ತುತ 6 ತಿಂಗಳ ಅವಧಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರವನ್ನು 12 ತಿಂಗಳಿಗೆ ಹೆಚ್ಚಿಸುವ ದಿಸೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಪ್ರೊ. ಟಿ.ಟಿ. ಬಸವನಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿ.ಪಂ. ಸದಸ್ಯರಾದ ಶಿವಮ್ಮ, ಚನ್ನಪ್ಪ, ಉಮಾವತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಎ. ರಾಜೇಂದ್ರಪ್ರಸಾದ್, ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ಬುಡಕಟ್ಟು ಕರಕುಶಲ ವಸ್ತುಪ್ರದರ್ಶನ ಹಾಗೂ ಮಾರಾಟ ಮಳಿಗೆ ಉದ್ಘಾಟಿಸಲಾಯಿತು. ಯರವ ಬುಡಕಟ್ಟು ಭಾಷಾ ಶಬ್ದಕೋಶ ಬಿಡುಗಡೆ ಮಾಡಲಾಯಿತು.
ವಾಲ್ಮೀಕಿ ಭವನದ ಬಳಿ ಬುಡಕಟ್ಟು ಕಲಾವಿದರ ಕಲಾಪ್ರದರ್ಶನಗಳ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡಿದರು.

ಜೂ. 21ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ 

ಚಾಮರಾಜನಗರ, ಜೂ. 20- ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಹಾಗೂ ಅಟ್ಟುಗೂಳಿಪುರ ವಿದ್ಯುತ್ ವಿತರಣಾ ಕೇಂದ್ರಗಳÀಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಜೂನ್ 21ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅರಕಲವಾಡಿ, ಯರಗನಹಳ್ಳಿ, ಸುವರ್ನನಗರ, ಫ್ಯಾಕ್ಟರಿ ಡೊಳ್ಳುಪುರ, ಪುಣಜನೂರು, ಬಿಸಲವಾಡಿ, ಅಮಚವಾಡಿ, ಎನ್ ಜೆ ವೈ ಮಾದಲವಾಡಿ, ಎನ್ ಜೆ ವೈ ಚನ್ನಪ್ಪನಪುರ, ಸಿದ್ದಯ್ಯ£ಪುರ, ಹೊಂಗಲವಾಡಿ, ಕೋಳಿಪಾಳ್ಯ, ಎನ್ ಜೆ ವೈ, ಬಂದೀಗೌಡನಹಳ್ಳಿ, ಅಟ್ಟುಗೂಳ್ಳಿಪುರ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಜೂ. 21ರಂದು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಚಾಮರಾಜನಗರ, ಜೂ. 19 - ಆಯುಷ್ ಮಂತ್ರಾಲಯ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನ ಸಂಸ್ಥೆ ಮತ್ತು ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ, ಶ್ರೀ ಪತಂಜಲಿ ಯೋಗ ಫೌಂಡೇಷನ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕಚೇರಿ ಪಕ್ಕದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6.30 ಗಂಟೆಗೆ 3ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವ ಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಆಯುಷ್ ಇಲಾಖೆ ನಿರ್ದೇಶಕರಾದ ರಾಜ್ ಕಿಶೋರ್ ಸಿಂಗ್ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು