Wednesday, 5 July 2017

ಅಡುಗೆ ಸಹಾಯಕರ ಹುದ್ದೆಗಳಿಗೆ ಪ್ರಾಯೋಗಿಕ ಪರೀಕ್ಷೆ : ವಿವಿಧ ಖಾದ್ಯ ತಯಾರಿಸಿದ ಅಭ್ಯರ್ಥಿಗಳು (05-07-2017)

  ಅಡುಗೆ ಸಹಾಯಕರ ಹುದ್ದೆಗಳಿಗೆ ಪ್ರಾಯೋಗಿಕ ಪರೀಕ್ಷೆ : ವಿವಿಧ ಖಾದ್ಯ ತಯಾರಿಸಿದ ಅಭ್ಯರ್ಥಿಗಳು


ಚಾಮರಾಜನಗರ, ಜು. 05 - ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆ ಸಹಾಯಕರ ಹುದ್ದೆಗಳಿಗೆ ಇದೇ ಮೊದಲ ಬಾರಿಗೆ ನಡೆದ ಪ್ರಾಯೋಗಿಕ ಪರೀಕ್ಷೆ ಅತ್ಯಂತ ವಿಶಿಷ್ಟವಾಗಿದ್ದು ಅಭ್ಯರ್ಥಿಗಳೇ ಸಂದರ್ಶಕರ ಮುಂದೆ ಅಡುಗೆ ತಯಾರಿಸಿದರು.
ನಗರದ ವಾಲ್ಮೀಕಿ ಭವನದಲ್ಲಿ ಇಂದು ಬೆಳಿಗ್ಗೆಯಿಂದಲೇ ಆರಂಭವಾದ ಅಡುಗೆ ಸಹಾಯಕರ ಪ್ರಾಯೋಗಿಕ ಪರೀಕ್ಷೆಯಲ್ಲಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅಧಿಕಾರಿಗಳ ಮುಂದೆ ವಿವಿಧ ಬಗೆಯ ತಿಂಡಿ, ಉಪಾಹಾರ, ಊಟ ಸಿದ್ಧಪಡಿಸಿದರು.
ಪ್ರತಿ ಅಭ್ಯರ್ಥಿಗೂ ಅರ್ಧ ಗಂಟೆಗಳ ಕಾಲ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳ ಅಡುಗೆ ಪರೀಕ್ಷೆಗೆ ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ ಅಧಿಕಾರಿ ಸೇರಿದಂತೆ ಒಟ್ಟು 6 ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳ ಮುಂದೆ 57 ಅಭ್ಯರ್ಥಿಗಳು ಹಾಜರಾಗಿ ಅಡುಗೆ ತಯಾರಿಸಿದರು.
ಪ್ರತಿ ಅಭ್ಯರ್ಥಿ ತಯಾರಿಸಿದ ಅಡುಗೆಯನ್ನು ವೀಡಿಯೋ ಚಿತ್ರೀಕರಣ ಮಾಡಲಾಗಿದೆ. ಇದರಿಂದ ಪಾರದರ್ಶಕವಾಗಿ ಪ್ರಾಯೋಗಿಕ ಪರೀಕ್ಷೆಗೆ ಅವಕಾಶ ನೀಡಿದಂತಾಗಿದೆ.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ. ಎಚ್. ಸತೀಶ್ ಅವರ ನೇತೃತ್ವದಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆÀ ಅಧಿಕಾರಿ ಡಾ. ಕೆ.ಎಚ್. ಪ್ರಸಾದ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದು ಅಭ್ಯರ್ಥಿಗಳ ಅಡುಗೆ ತಯಾರಿಕೆ ಬಗ್ಗೆ ಪರಿಶೀಲಿಸಿದರು.
ಒಟ್ಟು 31 ಅಡುಗೆ ಸಹಾಯಕರ ಹುದ್ದೆಗಳಿಗೆ 1:3 ಅನುಪಾತದಲ್ಲಿ ಪ್ರಾಯೋಗಿಕ ಪರೀಕ್ಷೆ ನಿಗದಿಮಾಡಲಾಗಿತ್ತು. ಒಟ್ಟು 57 ಅಭ್ಯರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿದ್ದಾರೆ. ಪಾರದರ್ಶಕವಾಗಿ ಇಂದಿನ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಮಾಹಿತಿ ನೀಡಿದರು.

 ಜು. 6ರಂದು ಡಾ. ಬಾಬು ಜಗಜೀವನರಾಮ್ ಪುಣ್ಯಸ್ಮರಣೆ
ಚಾಮರಾಜನಗರ, ಜು. 05 - ಜಿಲ್ಲಾಡಳಿತದ ವತಿಯಿಂದ ಹಸಿರುಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪಪ್ರÀಧಾನಿ ಡಾ. ಬಾಬು ಜಗಜೀವನರಾಮ್ ಅವರ 31ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 6ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವ ಮುಖಾತರ ಗೌರವ ನಮನ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಸಂಘಸಂಸ್ಥೆಗಳ ಸಮುದಾಯಗಳ ಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು, ನಾಗರಿಕರು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಮಾಜ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 05:- ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರು ಜುಲೈ 7 ಹಾಗೂ 8ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 7ರಂದು ಸಂಜೆ 7.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.
ಜುಲೈ 8ರಂದು ಬೆಳಿಗ್ಗೆ 10.30 ಗಂಟೆÉಗೆ ಹನೂರಿಗೆ ಆಗಮಿಸಿ ಡಾ. ಬಾಬೂ ಜಗಜೀವನರಾಂ ಭವನದ ನೂತನ ಕಟ್ಟಡ  ಉದ್ಘಾಟಿಸುವರು. ಬಳಿಕ ಮಧ್ಯಾಹ್ನ 12 ಗಂಟೆಗೆ ಹೂಗ್ಯಂನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯ ಬಾಲಕರ ವಸತಿನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಮಧ್ಯಾಹ್ನ 12.30ಕ್ಕೆ ನಂಜನಗೂಡಿಗೆ ತೆರಳುವರÀು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 6ರಿಂದ ನಗರದಲ್ಲಿ ಸಸ್ಯ ಸಂತೆ
ಚಾಮರಾಜನಗರ,  ಜು. 05- ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಸತ್ತಿ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯಲ್ಲಿ ಜುಲೈ 6 ರಿಂದ 15ರವರೆಗೆ ಸಸ್ಯ ಸಂತೆ ಏರ್ಪಡಿಸಲÁಗಿದೆ.
ಹಣ್ಣಿನ ಗಿಡ ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ದÀೂ.ಸಂ. 08226-222142, ಮೊಬೈಲ್ 9480292129, 9164343243, 9845861715ಗಳನ್ನು ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 6ರಂದು ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ
ಚಾಮರಾಜನಗರ, ಜು. 05 - ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಗುಂಡ್ಲುಪೇಟೆಯ ಸುಗಂಧ ಮಹಿಳಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜುಲೈ 6ರಂದು ಬೆಳಿಗ್ಗೆ 11 ಗಂಟೆÉಗೆ ಗುಂಡ್ಲುಪೇಟೆಯ ನಿರ್ಮಲ ಸೇವಾ ಕೇಂದ್ರÀದಲ್ಲಿ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಿರ್ಮಲ ಸೇವಾ ಕೇಂದ್ರÀದ ಸಂಯೋಜಕರಾದ ಜೆಸ್ಸಿ ಡಿಸೋಜ ಕಾರ್ಯಕ್ರಮ ಉದ್ಘಾಟಿಸುವರು. ಸುಗಂಧ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ನೀಲಮ್ಮ ಅಧ್ಯಕ್ಷತೆ ವಹಿಸುವರು. ಧ್ವನಿ ಮಹಿಳಾ ಅಭಿವೃದ್ಧಿ ಸಂಘದ ಸಂಯೋಜಕರಾದ ಲೀನಾಕುಮಾರಿ ಅತಿಥಿ ಉಪನ್ಯಾಸ ನೀಡುವರು. ಪುರಸಭೆ ಅಧ್ಯಕ್ಷರಾದ ಭಾಗ್ಯಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.



ಜು.11ರಂದು ಜಿಪಂ ಕೆಡಿಪಿ ಸಭೆ
ಚಾಮರಾಜನಗರ, ಜು. 05 - ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 10ರಂದು ಸಾಮಾನ್ಯ ಸಭೆ
ಚಾಮರಾಜನಗರ, ಜು. 05:- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಪ್ರಭಾರ ಅಧ್ಯಕ್ಷರಾದ ಆರ್.ಎಂ. ರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ಜುಲೈ 10ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶುಭಾಗ್ಯ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಚಾಮರಾಜನಗರ, ಜು. 05- ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2017-18ನೇ ಸಾಲಿನ ಪಶುಭಾಗ್ಯ ಯೋಜನೆ ಪ್ರಯೋಜನ  ಪಡೆಯಲು ರೈತಾಪಿ ವರ್ಗದವರಿಂದ ಅರ್ಜಿ ಆಹ್ವಾನಿಸಿದೆ.
ಎಲ್ಲ ವರ್ಗದವರಿಗೆ ಹೈನುಗಾರಿಕೆ, ಕುರಿ ಮತ್ತು ಮೇಕೆ, ಹಂದಿ, ಕೋಳಿ ಸಾಕಾಣಿಕೆ ಮತ್ತು ನಿರ್ಗತಿಕ ಶೋಷಿತ ಮಹಿಳೆಯರಿಗೆ ಅಮೃತ ಯೋಜನೆಯಡಿ ಹೈನುಗಾರಿಕೆ, ಕುರಿ ಮೇಕೆ ಸಾಕಾಣಿಕೆಗೆ ಬ್ಯಾಂಕ್ ಮುಖಾಂತರ ಸಾಲ ಮಂಜೂರಾತಿ ಶಿಫಾರಸಿನೊಂದಿಗೆ ಸಹಾಯಧನ ನೀಡಲಾಗುತ್ತದೆ.
ಅರ್ಜಿಗಳನ್ನು ಆಯಾ ತಾಲೂಕಿನ ಪಶುಪಾಲನಾ ಸಹಾಯಕ ನಿರ್ದೇಶಕರ ಕಚೇರಿ ಪಶು ಆಸ್ಪತ್ರೆಗಳಲ್ಲಿ ವಿತರಿಸಲಾಗುತ್ತಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜುಲೈ 25 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ ಚಾಮರಾಜನಗರ 08226-222757, ಗುಂಡ್ಲುಪೇಟೆ 08229-222346, ಕೊಳ್ಳೇಗಾಲ 08224-252215 ಮತ್ತು ಯಳಂದೂರು  08226-240128 ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಡಾ. ಬಾಲಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು