ಚಾಮರಾಜನಗರ ಪಟ್ಟಣ ಠಾಣೆಯ 07 ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಅಮಾನತ್ತುಡಿಸಿಕೊಳ್ಳಲಾಗಿದೆ.
ಹಾಗೂ ಮ.ಮ.ಬೆಟ್ಟ ಪೊಲೀಸ್ ಠಾಣೆಯ 19 ಪ್ರಕರಣಗಳು ಪತ್ತೆಯಾಗಿದ್ದು, ಸುಮಾರು 10,74,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ. ಅಲ್ಲದೇ ಸಂತೇಮರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯ ಬಲತ್ಕಾರಕ್ಕೆ ಯತ್ನಿಸಿ, ಮೊಬೈಲ್ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ದಿನಾಂಕ:06-07-2017 ರಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪತ್ರಿಕಾ ಗೋಷ್ಟಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರ್ಮೇಂದರ್ ಕುಮಾರ್ ಮೀನಾ, ಐಪಿಎಸ್ ರವರು, ಅಪರ ಪೊಲೀಸ್ ಅಧೀಕ್ಷರಾದ ಶ್ರೀಮತಿ ಗೀತಪ್ರಸನ್ನ ರವರು, ಚಾ.ನಗರ ಉಪ ವಿಭಾಗದ ಡಿವೈಎಸ್ಪಿ ರವರಾದ ಶ್ರೀ ಗಂಗಾಧರಸ್ವಾಮಿ ರವರು ಹಾಗೂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
************************************************
ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಬಾಬು ಜಗಜೀವನರಾಂ ಪುಣ್ಯಸ್ಮರಣೆ
ಚಾಮರಾಜನಗರ, ಜು. 06:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಗರದಲ್ಲಿ ಇಂದು ನಡೆಸಲಾಯಿತು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಪ್ರಭಾರ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ssಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸದಸ್ಯರಾದ ಸಿ.ಎನ್. ಬಾಲರಾಜು, ನಗರಸಭೆ ಸದಸ್ಯರಾದ ಮಹದೇವಯ್ಯ, ಇತರೆ ಜನಪ್ರತಿನಿಧಿಗಳು ಪುಷ್ಪನಮನ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಮುಖಂಡರಾದ ಅರಕಲವಾಡಿ ನಾಗೇಂದ್ರ, ಚಾ.ಗು. ನಾಗರಾಜು, ಆರ್.ಎಂ.ಕಾಂತರಾಜು ಇತರೆ ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುಷ್ಪನಮನ ಸಲ್ಲಿಸಿದರು.
ಮೊದಲ ಬಾರಿಗೆ ರಾತ್ರಿ ಕಾವಲುಗಾರರ ಹುದ್ದೆಗಳಿಗೆ ನಡೆದ ದೈಹಿಕ ಸಾಮಥ್ರ್ಯ ಪರೀಕ್ಷೆ
ಚಾಮರಾಜನಗರ, ಜು. 06 :- ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ರಾತ್ರಿ ಕಾವಲುಗಾರರ ಹುದ್ದೆಗಳಿಗೆ ಇದೇ ಮೊದಲ ಬಾರಿಗೆ ದೈಹಿಕ ಸಾಮಥ್ರ್ಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಕಾವಲುಗಾರರ ಹುದ್ದೆಗಳ ಅಭ್ಯರ್ಥಿಗಳಿಗೆ ವಿವಿಧ ಆಟೋಟಗಳ ಮೂಲಕ ದೈಹಿಕ ಸಾಮಥ್ರ್ಯ ಪರೀಕ್ಷೆಯನ್ನು ನಡೆಸಲಾಯಿತು.
ಅಭ್ಯರ್ಥಿಗಳಿಗೆ 800 ಮೀ. ಓಟ, 100 ಮೀ, 200 ಮೀ. ಓಟ, ಗುಂಡು ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಮಾಡಲಾಗಿತ್ತು. ಮಹಿಳಾ ಅಭ್ಯರ್ಥಿಗಳಿಗೆ 800 ಮೀ. ಹೊರತುಪಡಿಸಿ ಉಳಿದೆಲ್ಲಾ ಆಟೋಟಗಳಲ್ಲಿ ಸಾಮಥ್ರ್ಯ ಸಾಬೀತುಪಡಿಸುವುದನ್ನು ಸಹ ಕಡ್ಡಾಯಗೊಳಿಸಲಾಗಿತ್ತು.
ಪೊಲೀಸ್ ಇಲಾಖೆ ಅಧಿಕಾರಿ ಕಾಮತ್ ಅವರ ನೇತೃತ್ವದ ತಂಡ ಆಟೋಟ ಸ್ಪರ್ಧೆಗಳನ್ನು ವೀಕ್ಷಿಸಿ ಅಭ್ಯರ್ಥಿಗಳ ಸಾಮಥ್ರ್ಯವನ್ನು ಖಾತರಿ ಮಾಡಿಕೊಂಡಿತು. ಇದರ ಜತೆ ಶಿಕ್ಷಣ ಇಲಾಖೆಯ ದೈಹಿಕ ಸಾಮಥ್ರ್ಯ ಶಿಕ್ಷಕರ ತಂಡವನ್ನು ನಿಯೋಜಿಸಿ ಅಭ್ಯರ್ಥಿಗಳ ಸಾಮಥ್ರ್ಯ ಪರಿಶೀಲನೆಗೆ ಸಮಾಜ ಕಲ್ಯಾಣ ಇಲಾಖೆ ಅವಕಾಶ ಕಲ್ಪಿಸಿತ್ತು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್ ಅವರ ಮೇಲ್ವಿಚಾರಣೆಯಲ್ಲಿ ರಾತ್ರಿ ಕಾವಲುಗಾರರ ಹುದ್ದೆಗಳ ಅಭ್ಯರ್ಥಿಗಳಿಗೆ ನಡೆದ ದೈಹಿಕ ಸಾಮಥ್ರ್ಯ ಪರೀಕ್ಷೆ ಪ್ರಕ್ರಿಯೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಚೆಲುವಯ್ಯ, ನೋಡಲ್ ಅಧಿಕಾರಿಯಾಗಿ ನಿಯೋಜಿತರಾಗಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ಅವರು ಸಹ ನೆರವಾದರು.
ಒಟ್ಟು 26 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದ್ದು ಇಂದು ನಡೆದ ದೈಹಿಕ ಸಾಮಥ್ರ್ಯ ಪರೀಕ್ಷೆಗೆ 14 ಮಹಿಳಾ ಅಭ್ಯರ್ಥಿಗಳು ಹಾಗೂ 24 ಪುರುಷ ಅಭ್ಯರ್ಥಿಗಳು ಹಾಜರಾಗಿದ್ದಾರೆ. 49 ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಪತ್ರ ಕಳುಹಿಸಲಾಗಿತ್ತು. ಒಟ್ಟಾರೆ 38 ಅಭ್ಯರ್ಥಿಗಳು ಮಾತ್ರ ದೈಹಿಕ ಸಾಮಥ್ರ್ಯ ಪರೀಕ್ಷೆಗಾಗಿ ನಡೆದ ಆಟೋಟಗಳಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ. ಎಚ್. ಸತೀಶ್ ತಿಳಿಸಿದರು.
ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ
ಚಾಮರಾಜನಗರ, ಜು. 06- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಐಎಂ, ಐಐಟಿ ಮತ್ತು ಐಐಎಸ್ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಜುಲೈ 29 ಕಡೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಲಿಟರಿ ಬಾಲಕರ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 06 - ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.6 ರಿಂದ 12ನೇ ತರಗತಿ ಮತ್ತು ಡಿಪ್ಲೊಮಾ ಓದುತ್ತಿರುವ ರಾಜ್ಯದ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತದೆ.
ಮೈಸೂರು ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ವಸತಿ ನಿಲಯ ಪ್ರವೇಶಕ್ಕೆ ಅವಕಾಶವಿದೆ. ಅರ್ಜಿಯನ್ನು ಮೈಸೂರಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜುಲೈ 14ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದÀೂ.ಸಂ. 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ.
ಕ್ರೀಡಾ ಪೋಷಕರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 06 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.ಕ್ರೀಡಾ ಪೋಷಕರು, ಸಾಧಕರನ್ನು ಗುರುತಿಸಿ 5 ಲಕ್ಷ ರೂ. ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜುಲೈ 15ರ ಒಳಗೆ ನಿರ್ದೇಶಕರು/ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
ಸಂಪೂರ್ಣ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ (ದೂ.ಸಂ. 08226-224932) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕೈಮಗ್ಗ ಗಣತಿ : ಅಗತ್ಯ ಮಾಹಿತಿ ನೀಡಲು ನೇಕಾರರಿಗೆ ಮನವಿ
ಚಾಮರಾಜನಗರ, ಜು. 06 - ಜಿಲ್ಲೆಯಲ್ಲಿ ಜುಲೈ 10 ರಿಂದ 31ರವರೆಗೆ 4ನೇ ರಾಷ್ಟ್ರೀಯ ಕೈಮಗ್ಗ ಗಣತಿ ಕಾರ್ಯ ನಡೆಯಲಿದ್ದು ಈ ಸಂದರ್ಭದಲ್ಲಿ ಕೈಮಗ್ಗ ನೇಕಾರರು ಸಹಕರಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಮನವಿ ಮಾಡಿದೆ.ಕೇಂದ್ರ ಜವಳಿ (ಕೈಮಗ್ಗ) ಇಲಾಖೆ ಆದೇಶದನ್ವಯ ರಾಷ್ಟ್ರೀಯ ಕೈಮಗ್ಗ ಗಣತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಕಾರ್ವೆ ಡಾಟಾ ಮ್ಯಾನೇಜ್‍ಮೆಂಟ್ ಏಜೆನ್ಸಿ ಮೂಲಕ ಗಣತಿ ಕಾರ್ಯ ನಡೆಸಲಾಗುತ್ತದೆ. ಏಜೆನ್ಸಿ ಪ್ರತಿನಿಧಿಗಳು ಕೈಮಗ್ಗ ನೇಕಾರರ ಮನೆಗಳಿಗೆ ಗಣತಿ ಅವಧಿಯಲ್ಲಿ ಭೇಟಿ ಕೊಟ್ಟ ಸಂದರ್ಭದಲ್ಲಿ ಅವಶ್ಯಕ ಮಾಹಿತಿ ನೀಡಿ ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಕಾರ್ವೆ ಡಾಟಾ ಮ್ಯಾನೇಜ್‍ಮೆಂಟ್ ಸರ್ವೀಸ್ ಲಿ.ನ ರಾಜ್ಯ ಸಮನ್ವಯ ಅಧಿಕಾರಿ ಎಂ.ಎಚ್. ಶ್ರೀನಿವಾಸ (ಮೊ. 9742428471) ಅವರನ್ನು ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 06 - ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರು ಜುಲೈ 7 ಹಾಗೂ 8ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜುಲೈ 7ರಂದು ಸಂಜೆ 7.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.
ಜುಲೈ 8ರಂದು ಬೆಳಿಗ್ಗೆ 10.30 ಗಂಟೆÉಗೆ ಹನೂರಿಗೆ ಆಗಮಿಸಿ ಡಾ. ಬಾಬು ಜಗಜೀವನರಾಂ ಭವನದ ನೂತನ ಕಟ್ಟಡ ಉದ್ಘಾಟಿಸುವರು. ಬಳಿಕ ಮಧ್ಯಾಹ್ನ 12 ಗಂಟೆಗೆ ಹೂಗ್ಯಂನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯ ಬಾಲಕರ ವಸತಿನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಮಧ್ಯಾಹ್ನ 12.30ಕ್ಕೆ ನಂಜನಗೂಡಿಗೆ ತೆರಳುವರÀು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ದಡಾರ / ಎ.ಎಫ್.ಪಿ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಕಾರ್ಯಗಾರ
ಚಾಮರಾಜನಗರ ಜುಲೈ.06- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶ್ವ ಆರೋಗ್ಯ ಸಂಸ್ಥೆವತಿಯಿಂದ ಗುರುವಾರ ದÀಂದು ದಡಾರ / ಎ.ಎಫ್.ಪಿ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಇಲಾಖಾ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಕೆ.ಹೆಚ್.ಪ್ರಸಾದ್ ರವರು ಗಿಡಕ್ಕೆ ನೀರು ಹಾಕುವ ಮುಖಾಂತರ ಕಾರ್ಯಗಾರಕ್ಕೆ ಚಾಲನೆ ನೀಡಿ, ಮಾತನಾಡುತ್ತಾ ಜಿಲ್ಲೆಯಲ್ಲಿ ದಡಾರ ಪ್ರಕರಣಗಳು ಹಾಗೂ ಎ.ಎಫ್.ಪಿ ಪ್ರಕರಣಗಳನ್ನು ಪತ್ತೆ ಹಚ್ಚಿ ಅವುಗಳನ್ನು ವರದಿ ಮಾಡುವ ಜವಾಬ್ದಾರಿಯು ವೈದ್ಯಾಧಿಕಾರಿಗಳಾಗಿರುತ್ತದೆ. ಹಾಗೂ 2020 ಕ್ಕೆ ಸಂಪೂರ್ಣವಾಗಿ ದಡಾರ ನಿರ್ಮೂಲನೆ ಹಾಗೂ ರುಬೆಲ್ಲಾ ನಿಯಂತ್ರಣ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹೆಚ್ಚು ಕಾರ್ಯ ಪ್ರವೃತ್ತರಾಗಿರಬೇಕು ಎಂದು ತಿಳಿಸಿದರು.ನಂತರ ಜಿಲ್ಲಾ ಲಸಿಕಾ ಅಧಿಕಾರಿಗಳಾದ ಡಾ|| ಕೆ.ಎಂ ವಿಶ್ವೇಶ್ವರಯ್ಯನವರು ಮಾತನಾಡುತ್ತಾ ಸಾರ್ವತ್ರಿಕ ಲಸಿಕಾ ಗುಣಮಟ್ಟವು ಉತ್ತಮವಾದಂತೆ ದಡಾರ ಹಾಗೂ ಎ.ಎಫ್.ಪಿ ಪ್ರಕರಣಗಳನ್ನು ನಿರ್ಮೂಲನೆ ಮಾಡಬಹುದು ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿ ಒಂದು ಮಗುವಿಗೂ ಲಸಿಕೆ ನೀಡಿ ಲಸಿಕೆಯಿಂದ ವಂಚಿತರಾಗದಂತೆ ಕ್ರಿಯಾ ಯೋಜನೆಯನ್ನು ರೂಪಿಸುವುದು ಆಯಾ ವೈದ್ಯಾಧಿಕಾರಿಗಳ ಜವಾಬ್ದಾರಿ ಆಗಿರುತ್ತದೆ ಎಂದು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಡಾ|| ಸತೀಶ್‍ಚಂದ್ರ ರವರು ಕಾರ್ಯಗಾರದ ಸಂಪೂರ್ಣ ವಿವರವನ್ನು ನೀಡುತ್ತಾ ದಡಾರ ಪ್ರಕರಣವನ್ನು ಗುರುತಿಸುವ ವಿಧಾನವನ್ನು ಚಿತ್ರಣದ ಮೂಲಕ ವಿವರವಾಗಿ ತಿಳಿಸಿದರು. ಹಾಗೂ ಒಂದು ಲಸಿಕಾ ಕ್ರಿಯಾ ಯೋಜನೆಯ ಮಹತ್ವ ಹಾಗೂ ಉದ್ದೇಶದ ಬಗ್ಗೆ ವಿವರವಾಗಿ ತಿಳಿಸುತ್ತಾ ಈ ಒಂದು ನಿಟ್ಟಿನಲ್ಲಿ ಎಲ್ಲಾ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಸಮುದಾಯ ಮಟ್ಟದಲ್ಲಿ ಕ್ರಿಯಾಶೀಲರಾಗಿರಬೇಕೆಂದು ತಿಳಿಸಿದರು.
ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಕೆ.ಹೆಚ್.ಪ್ರಸಾದ್ ರವರು, ಜಿಲ್ಲಾ ಲಸಿಕಾ ಅಧಿಕಾರಿಗಳಾದ ಡಾ|| ಕೆ.ಎಂ ವಿಶ್ವೇಶ್ವರಯ್ಯನವರು, ವಿಶ್ವ ಆರೋಗ್ಯ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಡಾ|| ಸತೀಶ್‍ಚಂದ್ರ ರವರು ಮತ್ತು ಚಾಮರಾಜನಗರ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ|| ಗಿರೀಶ್‍ರವರು ಹಾಗೂ ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ|| ಶ್ರೀಮತಿ ಸುಗುಣರವರು ಹಾಗೂ ಜಿಲ್ಲೆಯ ಎಲ್ಲಾ ಮಕ್ಕಳ ತಜ್ಞರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಈ ಒಂದು ಕಾರ್ಯಗಾರದಲ್ಲಿ ಭಾಗವಹಿಸಿದರು.
No comments:
Post a Comment