ವಿಶೇಷ ದಂತ ಚಿಕಿತ್ಸೆಯ ಸೌಲಭ್ಯಗಳಿಗೆ ಸಂಸದ ಆರ್.ಧ್ರುವನಾರಾಣ್ ಅವರಿಂದ ಚಾಲನೆ-------------------------------- -VSS
ಚಾಮರಾಜನಗರ ಜು:07- ಚಾಮರಾಜನಗರ ಜಿಲ್ಲೆಯು ಹಿಂದುಳಿದ ಪ್ರದೇಶವಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಹಲ್ಲಿನ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಉದ್ದೇಶದಿಂದ ಈ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಸದ ಆರ್.ಧುೃವನಾರಯಣ್ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯಲ್ಲಿ ದಂತ ವಿಭಾಗದ ವತಿಯಿಂದ ನೂತನ ಡೆಂಟಲ್ ಚೆರ್ ಉಧ್ಘಾಟಿಸಿ ಮಾತನಾಡುತ್ತ ಜಿಲ್ಲಾ ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅವರ ಆರೋಗ್ಯದ ದೃಷ್ಠಿಯಿಂದ ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ನೀಡುತ್ತ ಬಂದಿದೆ. ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮ ತಜ್ಞರಿಂದ ತಪಾಸಣೆ ನಡೆಸಲಾಗುತ್ತೆದೆ ಎಂದು ತಿಳಿಸಿದರು.ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ಉದ್ದೇಶದಿಂದ ದಂತ ವಿಭಾಗದಲ್ಲಿ ಬೇರಿನ ಚಿಕಿತ್ಸೆ, ಮಕ್ಕಳ ದಂತ ಚಿಕಿತ್ಸೆ, ಹುಳುಕು ಹಲ್ಲನ್ನು ತಡೆಗಟ್ಟುವುದು, ಹುಳುಕು ಹಲ್ಲುಗಳಿಗೆ ಬೆಳ್ಳಿ ತುಂಬುವುದು ಅಥವಾ ಹುಳುಕು ಹಲ್ಲಿಗೆ ಹಲ್ಲಿನ ಬಣ್ಣದ ಸಿಮೆಂಟ್ ತುಂಬುವುದು, ಮತ್ತು 21 ವರ್ಷದ ವರೆಗೆ ವಯಸಿನ ದೃಢೀಕರಣವನ್ನು, ಕೃತಕ ಹಲ್ಲಿನ ಜೊಡಣೆ ಮುರಿದ ದವಡೆಯ ಚಿಕಿತ್ಸೆ ಹಾಗೂ ಬಾಯಿ ಕ್ಯಾನ್ಸರ್ ಕಂಡುಯಿಡಿಯುವುದು ಇಂತಹ ಚಿಕಿತ್ಸೆಗಳಿಗೆ ನಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯ ದಂತ ವ್ಯದ್ಯರಾದ ಡಾ|| ಸತ್ಯಪ್ರಕಾಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತ್ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಪಂಚಾಯಿತ್ ಸದಸ್ಯ ಸದಾಶಿವಮೂರ್ತಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ರಘುರಾಮ್ ಸರ್ವೆಗಾರ್, ಜಿಲ್ಲಾ ಆರೋಗ್ಯಧಿಕಾರಿ ಡಾ.ಪ್ರಸಾದ್ ಹಾಗೂ ದಂತ ವಿಭಾಗದ ದಂತ ವೈದ್ಯರು ಮತ್ತು ವ್ಯದ್ಯಕೀಯ ಕಾಲೇಜಿನ ವೈದ್ಯರೆಲ್ಲರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಜು. 13ರಂದು ನಗರದಲ್ಲಿ ಉದ್ಯೋಗ ಮೇಳ .....VSS
ಚಾಮರಾಜನಗರ, ಜು. 07:- ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಜುಲೈ 13ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.ಅಪೋಲೋ ಆಸ್ಪತ್ರೆ, ಮದ್ದೂರಿನ ಸಿಂಪ್ಲಿ ಗ್ರಾಮೀಣ್ ಬಿಸಿನೆಸ್ ಸಲ್ಯೂಷನ್ ಲಿ., 108 ಜಿವಿಕೆಇಎಂಆರ್‍ಐ ಎಮರ್ಜೆನ್ಸಿ, ಕೇನ್ಸ್ ಟೆಕ್ನಾಲಜಿ, ಎಲ್‍ಐಸಿ ಆಫ್ ಇಂಡಿಯಾ, ಎಲ್ ಅಂಡ್ ಟಿ, ಮೈಸೂರು, ರ್ಯಾಕ್ ಮೈಂಡ್ಸ್ ಟೆಕ್ನಾಲಜಿ ಲಿ., ಫುಡ್ ಇಂಡಸ್ಟ್ರಿ, ಯುರೇಕಾ ಫೋಕ್ಸ್ ಲಿಮಿಟೆಡ್ ಸಂಸ್ಥೆಗಳು ತರಬೇತಿ ಹಾಗೂ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳಲಿವೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ನರ್ಸಿಂಗ್, ಡಿಪ್ಲೊಮಾ, ಐಟಿಐ, ಡ್ರೈವಿಂಗ್ ಹೊಂದಿರುವ 18 ರಿಂದ 35ರ ವಯೋಮಿತಿಯೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜು. 9ರಂದು ನಗರದಲ್ಲಿ ಬದು ಸಂಜೀವಿನಿ ಆಂದೋಲನಕ್ಕೆ ಚಾಲನೆ
ಚಾಮರಾಜನಗರ, ಜು. 07 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಆಶ್ರಯದಲ್ಲಿ ಮಣ್ಣು ಮತ್ತು ಮಳೆ ನೀರು ಸಂರಕ್ಷಣೆಗಾಗಿ ಆರಂಭಿಸಲಾಗುತ್ತಿರುವ ಬದು ಸಂಜೀವಿನಿ ಕಾರ್ಯಕ್ರಮವನ್ನು ಜುಲೈ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಬದು ಸಂಜೀವಿನಿ ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಹನೂರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಮಮತ ಮಹದೇವ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿ.ಪಂ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು
ಹನೂರಿನಲ್ಲಿ ಜು. 8ರಂದು ಡಾ. ಬಾಬು ಜಗಜೀವನರಾಂ ಭವನ ಉದ್ಘಾಟನೆ .....VSS
ಚಾಮರಾಜನಗರ, ಜು. 07:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜುಲೈ 8ರಂದು ಹನೂರು ಪಟ್ಟಣದಲ್ಲಿ ನಿರ್ಮಿಸಿರುವ ಡಾ. ಬಿ.ಬಾಬು ಜಗಜೀವನರಾಂ ಭವನದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.ಮಧ್ಯಾಹ್ನ 1.30 ಗಂಟೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ನೂತನ ಕಟ್ಟಡ ಉದ್ಘಾಟಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಹನೂರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಮಮತ ಮಹದೇವ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಹನೂರು ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಎಂ. ಬಸವರಾಜು, ಉಪಾಧ್ಯಕ್ಷರಾದ ಲತಾ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ, ರಾಷ್ಟ್ರ ಪ್ರಶಸ್ತಿಗೆ ಶಿಕ್ಷಕರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 07 - ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿಗೆ ರಾಜ್ಯ, ರಾಷ್ಟ್ರ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯ ಉತ್ತಮ ಶಿಕ್ಷಕರಿಂದ ಪ್ರಸ್ತಾವನೆ ಆಹ್ವಾನಿಸಿದೆ.
10 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರು ರಾಜ್ಯ ಪ್ರಶಸ್ತಿಗೆ, 15 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಹಾಗೂ 20 ವರ್ಷ ಸೇವೆ ಸಲ್ಲಿಸಿರುವ ಮುಖ್ಯೋಪಾಧ್ಯಾಯರು ಅರ್ಹರು.
ಪ್ರಸ್ತಾವನೆ 50 ಪುಟಗಳನ್ನು ಮೀರಿರಬಾರದು. ಶೈಕ್ಷಣಿಕ ಸಾಧನೆಗಳನ್ನು ಬಿಂಬಿಸುವಂತಿರಬೇಕು. ಸಮೂಹ ಸಂಪನ್ಮೂಲ ವ್ಯಕ್ತಿಗಳು ಪರಿಶೀಲಿಸಿ ಅರ್ಹ ಶಿಕ್ಷಕರ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜುಲೈ 18ರ ಒಳಗೆ ಸಲ್ಲಿಸಬೇಕು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಚ್ಚಾರಿತ್ರ ಹೊಂದಿರುವ, ಯಾವುದೇ ದೂರು, ವಿಚಾರಣೆ, ನ್ಯಾಯಾಲಯದ ಪ್ರಕರಣಗಳು ಇಲ್ಲದಿರುವುದನ್ನು ದೃಢಪಡಿಸಿಕೊಂಡು ಶೈಕ್ಷಣಿಕ ಸಾಧನೆಗಳನ್ನು ಖುದ್ದು ಪರಿಶೀಲಿಸಿ ತಾಲೂಕು ಸಮಿತಿಯಲ್ಲಿ ಮಾನದಂಡ ಹಾಗೂ ಮಾರ್ಗಸೂಚಿ ಅನುಸರಿಸಿ ಅರ್ಹ ಪ್ರಸ್ತಾವನÉಗಳನ್ನು ಆಯ್ಕೆ ಮಾಡಿ ತಾಲೂಕು ಸಮಿತಿ ವರದಿಯೊಂದಿಗೆ ಡಯಟ್ ಪ್ರಾಂಶುಪಾಲರಿಗೆ ಜುಲೈ 25ರೊಳಗೆ ಸಲ್ಲಿಸಬೇಕು.
ಡಯಟ್ ಪ್ರಾಂಶುಪಾಲರು ಪ್ರಸ್ತಾವನೆಗಳನ್ನು ಕ್ಷೇತ್ರ ಭೇಟಿ ಮೂಲಕ ಖುದ್ದು ಪರಿಶೀಲಿಸಿ ಅರ್ಹ ತಲಾ 2 ಪ್ರಸ್ತಾವನೆಗಳನ್ನು ಜುಲೈ 31ರೊಳಗೆ ಜಿಲ್ಲಾ ಆಯ್ಕೆ ಸಮಿತಿಗೆ ಸಲ್ಲಿಸುವಂತೆ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು. 9ರಂದು ವಿದ್ಯುತ್ ವ್ಯತ್ಯಯ .....VSS
ಚಾಮರಾಜನಗರ, ಜು. 07 - ತಾಲೂಕಿನ ದೊಡ್ಡರಾಯಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜುಲೈ 9ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೊಡ್ಡರಾಯಪೇಟೆ ವ್ಯಾಪ್ತಿ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಜು. 10ರಂದು ಸಾಮಾನ್ಯ ಸಭೆ .....VSS
ಚಾಮರಾಜನಗರ, ಜು. 07 ):- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಪ್ರಭಾರ ಅಧ್ಯಕ್ಷರಾದ ಆರ್.ಎಂ. ರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ಜುಲೈ 10ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ .....VSS
ಚಾಮರಾಜನಗರ, ಜು. 07 :- ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಬಾಯಿ ಅವರು ಜುಲೈ 8 ರಿಂದ 10ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲದ ಸರ್ಕಾರಿ ಅತಿಥಿ ಗೃಹಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಗೆ ಕಾಗಲವಾಡಿಗೆ ಆಗಮಿಸುವರು. ಸಂಜೆ 4 ಗಂಟೆಗೆ ಬಿಳಿಗಿರಿರಂಗನಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.
ಜುಲೈ 9ರಂದು ಬೆಳಿಗ್ಗೆ 10 ಗಂಟೆÉಗೆ ಸೋಲಿಗ ಜನಾಂಗದ ಮಹಿಳೆಯರ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ವಾಸ್ತವ್ಯ ಹೂಡುವರು. ಜುಲೈ 10ರಂದು ಬೆಳಿಗ್ಗೆ 9 ಬೆಂಗಳೂರಿಗೆ ತೆರಳುವರÀು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಜು. 8, 9ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ .....VSS
ಚಾಮರಾಜನಗರ, ಜು. 07 - ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಜುಲೈ 8 ಹಾಗೂ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8ರಂದು ಬೆಳಿಗ್ಗೆ 8 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲ ಪಟ್ಟಣದ ವೆಂಕಟೇಶ ಮಹಲ್‍ನಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 11 ಗಂಟೆಗೆ ಅರಣ್ಯ ಇಲಾಖೆ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಹನೂರಿನಲ್ಲಿ ನಡೆಯಲಿರುವ ಡಾ. ಬಾಬು ಜಗಜೀವನರಾಂ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 3 ಗಂಟೆಗೆ ಹೂಗ್ಯಂನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿಶಾಲೆ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜುಲೈ 9ರಂದು ಬೆಳಿಗ್ಗೆ 9 ಗಂಟೆಗೆ ಚಾಮರಾಜನಗರದಲ್ಲಿ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಾಣ ಮಾಡಲಿರುವ ಮಲೆಮಹದೇಶ್ವರಸ್ವಾಮಿ ಪ್ರತಿಮೆ ಸಂಬಂಧ ಸಭೆಯಲ್ಲಿ ಭಾಗವಹಿಸುವರು. 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುಣಮಟ್ಟ ಶಿಕ್ಷಣದ ಸಾಧನೆಗೆ ಒಂದು ಹೆಜ್ಜೆ ಎಂಬ ಕಾರ್ಯಕ್ರಮದಡಿ ಪಾಲ್ಗೊಳ್ಳುವರು. ಬಳಿಕ ಮಹಿಳಾ ಉದ್ಯೋಗ ಖಾತರಿ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸತ್ವ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ನಗರದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ. ಎಂ.ಎಸ್. ಮಂಜುನಾಥ್ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವರ ಪರಿಷ್ಕøತ ಜಿಲ್ಲಾ ಪ್ರವಾಸ .....VSS
ಚಾಮರಾಜನಗರ, ಜು. 07 :- ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರು ಜುಲೈ 8ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8ರಂದು ಮಧ್ಯಾಹ್ನ 1.30 ಗಂಟೆÉಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಮಧ್ಯಾಹ್ನ 2.30 ಗಂಟೆಗೆ ಹನೂರಿಗೆ ಆಗಮಿಸಿ ಡಾ. ಬಾಬು ಜಗಜೀವನರಾಂ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ಹೂಗ್ಯಂನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯ ಬಾಲಕರ ವಸತಿನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಸಂಜೆ 4.30ಕ್ಕೆ ನಂಜನಗೂಡಿಗೆ ತೆರಳುವರÀು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಡೆಂಗ್ಯೂ ಇತರೆ ಜ್ವರ ಪ್ರಕರಣಗಳು ಉಲ್ಬಣಿಸದಂತೆ ಕ್ರಮವಹಿಸಿ : ಎಂ ರಾಮಚಂದ್ರ
ಚಾಮರಾಜನಗರ ಜುಲೈ. 7 )ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇನ್ನಿತರ ಜ್ವರ ಪ್ರಕರಣಗಳು ಉಲ್ಬಣಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಮುಂಜಾಗರುಕತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿಂದು ಡೆಂಗ್ಯೂ ಹಾಗೂ ಇತರೆ ಜ್ವರ ಸಂಬಂಧಿಸಿದ ಪ್ರಕರಣಗಳ ವಾಸ್ತವ ಪರಿಶೀಲನೆಗಾಗಿ ನೆಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಭಾರಿ ಡೆಂಗ್ಯೂ ಸೇರಿದಂತೆ ಇನ್ನೀತರ ಜ್ವರದಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚು ದಾಖಲಾಗಿವೆ. ಇದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚು ಹೊಣೆಗಾರಿಕೆಯಿಂದ ಪರಿಸ್ಥಿತಿಯನ್ನು ನಿಭಾಯಿಸಬೇಕಾಗಿದೆ. ಯಾವುದೇ ಭಾಗದಲ್ಲಿ ಜನರಿಗೆ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.
ನಗರ ಪ್ರದೇಶದಲ್ಲಿ ಮಾತ್ರ ನೈರ್ಮಲ್ಯ ಕ್ರಮಗಳಿಗೆ ಮುಂದಾದರೆ ಸಾಲದು. ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಕವಾಗಿ ಶುಚಿತ್ವದ ಬಗ್ಗೆ ತಿಳಿವಳಿಕೆ ನೀಡಬೇಕಿದೆ. ಪಟ್ಟಣ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ಮಾಡಲಾಗುತ್ತಿದೆ. ಈ ಕಾರ್ಯ ಗ್ರಾಮಾಂತರ ಪ್ರದೇಶಗಳಲ್ಲೂ ಸಹ ಮಾಡಬೇಕು ಎಂದರು.
ಜ್ವರ ಪ್ರಕರಣಗಳು ದಾಖಲಾದ ಕೂಡಲೇ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ರಕ್ತ ಪರೀಕ್ಷೆ ನಡೆಸಿ ಯಾವ ಬಗೆಯ ಜ್ವರವಿದೆ ಎಂದು ಧೃಡಪಡೆಸಿಕೊಳ್ಳಬೇಕು. ಜನರು ಅನಗತ್ಯವಾಗಿ ಆತಂಕಕ್ಕೆ ಒಳಗಾಗದಂತೆ ಸೂಕ್ತ ಸಲಹೆ ಮಾರ್ಗದರ್ಶನ ಮಾಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ವಿಳಂಭ ಮಾಡದೇ ಕ್ರಮವಹಿಸಬೇಕು ಎಂದು ರಾಮಚಂದ್ರರವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಭಾಗಗಳಿಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ಮಾಡಬೇಕು. ಜನರಿಗೆ ಆರೋಗ್ಯ ಸಂಬಂಧಿ ಚಿಕಿತ್ಸೆ ಸಲಹೆಗಳು ಸಕಾಲಕ್ಕೆ ಲಭ್ಯವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಅವರು ಮಾತನಾಡಿ ಖಾಸಗಿ ಪ್ರಯೋಗಾಲಯಗಳು ತ್ವರಿತವಾಗಿ ರ್ಯಾಪಿಡ್ ಟೆಸ್ಟ್ ಮೂಲಕ ಡೆಂಗ್ಯೂ ಎಂದು ವರದಿನೀಡುತ್ತಿವೆ, ಆದರೆ ಡೆಂಗ್ಯೂ ಧೃಡೀಕೃತ ವರದಿ ನೀಡುವ ಪ್ರಯೋಗಾಲಯಗಳು ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಪ್ರಯೋಗಾಲಯ ಹಾಗೂ ಜಿಲ್ಲಾ ಸರ್ವೆಕ್ಷಣ ಪ್ರಯೋಗಾಲಯ ಮಾತ್ರ ಎಂಬ ಬಗ್ಗೆ ಬಹುತೇಕರಿಗೆ ಮಾಹಿತಿ ಇಲ್ಲ. ಹೀಗಾಗಿ ನಾಗರೀಕರಿಗೆ ಸೂಕ್ತ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಹೆಚ್. ಪ್ರಸಾದ್ ರವರು ಮಾತನಾಡಿ ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಪ್ರಕರಣಗಳಿಗೆ ತುರ್ತಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲೆಡೆ ಆಯೋಜನೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ|| ಅನಿಲ್‍ಕುಮಾರ್, ಜಿಲ್ಲಾ ಕಣ್ಗಾವಲು ಘಟಕದ ಅಧಿಕಾರಿ ಡಾ|| ನಾಗರಾಜು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ಕೆ.ಎಂ ವಿಶ್ವೇಶ್ವರಯ್ಯ ಇತರರು ಸಭೆಯಲ್ಲಿ ಹಾಜರಿದ್ದರು.
ಸತ್ವ ಕಾರ್ಯಗಾರಕ್ಕೆ ಲೋಕಸಭಾ ಸದಸ್ಯರಿಂದ ಚಾಲನೆ.
ಚಾಮರಾಜನಗರ ಜುಲೈ. 7) ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಸಮರ್ಪಕ ಸೇವಾ ಮನೋಭಾವನೆಯು ತಾಯಿ-ಶಿಶು ಮರಣದ ಪ್ರಮಾಣ ಇಳಿಮುಖವಾಗಲು ಕಾರಣವಾಗಿದೆ ಎಂದು ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಅಭಿಪ್ರಾಯ ಪಟ್ಟರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜೀವನ್ ಜ್ಯೋತಿ ಟ್ರಸ್ಟ್ ಆಶ್ರಯದಲ್ಲಿ ರಕ್ತಹೀನತೆ ತಡೆಗೆ ಅನುಸರಿಸಲಾಗುವ ಸತ್ವ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸುಧಾರಿಸುವ ಸಲುವಾಗಿ ರಕ್ತಹೀನತೆ ತಡೆಗೆ ಕ್ರಮಬದ್ದ ವಿಧಾನಗಳ ಅನುಷ್ಠಾನಕ್ಕಾಗಿ ಸತ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಈ ಬಗ್ಗೆ ಕಾರ್ಯಗಾರ ಆಯೋಜಿತವಾಗಿರುವುದು ಆಶಾ ಕಾರ್ಯಕರ್ತೆಯರಿಗೆ ಅನುಕೂಲವಾಗಿದೆ ಎಂದರು.
ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲೂ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಮತ್ತು ಶಿಶುವಿನ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವ ಆಶಾ, ಅಂಗನವಾಗಿ ಕಾರ್ಯಕರ್ತೆಯರು ಡೆಂಗ್ಯೂ, ಇತರೆ ಸಾಂಕ್ರಾಮಿಕ ರೋಗಗಳ ಬರದಂತೆ ವಹಿಸಬೇಕಿರುವ ಮುನ್ನೇಚರಿಕೆ ಕ್ರಮ, ಶುಚಿತ್ವದ ಬಗ್ಗೆ ಸಲಹೆ ನೀಡಬೇಕು. ಜನರಲ್ಲಿ ಉಂಟಾಗುವ ಭೀತಿಯನ್ನು ದೂರ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಹೆಚ್ ಪ್ರಸಾದ್ ಅವರು ಸತ್ವ ಕಾರ್ಯಕ್ರಮ ಅನುಷ್ಠಾನ ಕುರಿತು ವಿವರಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ ರಾಮಚಂದ್ರ ಆರೋಗ್ಯ ಮತ್ತು ಶಿಶಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಪ್ರಭಾರ ಜಿಲ್ಲಾಧಿಕಾರಿ ಡಾ|| ಕೆ. ಹರೀಶ್ ಕುಮಾರ್ ಇತರರು ಉಪಸ್ಥಿತರಿದ್ದರು.
ಜು. 9ರಂದು ನಗರದಲ್ಲಿ ಗುಣಮಟ್ಟದ ಶಿಕ್ಷಣ ಸಾಧನೆಯಡೆಗೆ ಒಂದು ಹೆಜ್ಜೆ ಕಾರ್ಯಕ್ರಮ
ಚಾಮರಾಜನಗರ, ಜು. 07:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುಣಮಟ್ಟದ ಶಿಕ್ಷಣದ ಸಾಧನೆಯಡೆಗೆ ಒಂದುಹೆಜ್ಜೆ (ಸ್ಟೆಪ್) ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಸ್ಟೆಪ್ ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತುಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಹೆಚ್,ವಿ.ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜುಲೈ 9ರಂದು ನಗರದಲ್ಲಿ ಸತ್ವ ಕಾರ್ಯಕ್ರಮ ಉದ್ಘಾಟನೆ
ಚಾಮರಾಜನಗರ, ಜು. 07:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸುದಾರಿಸಲು ರಕ್ತಹೀನತೆ ತಡೆಗೆ ಕ್ರಮಬದ್ದ ವಿಧಾನಗಳ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿರುವ ಸತ್ವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಸತ್ವ ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತುಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಹೆಚ್,ವಿ.ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment