Saturday, 8 July 2017

ಶಿಕ್ಷಣ ಪಡೆಯಲು ಸಮಾಜ ಕಲ್ಯಾಣ ಸಚಿವರ ಸಲಹೆ.... 08-07-25017

ಶಿಕ್ಷಣ ಪಡೆಯಲು ಸಮಾಜ ಕಲ್ಯಾಣ ಸಚಿವರ ಸಲಹೆ.... vss

ಚಾಮರಾಜನಗರ ಜುಲೈ 08  ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಉತ್ತೇಜನ ನೀಡುತ್ತಿದ್ದು ಪ್ರತಿಯೊಬ್ಬರು ಶಿಕ್ಷಣ ಪಡೆದು ಸಮಾಜದಲ್ಲಿ ಮೇಲೆ ಬರಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್. ಆಂಜನೇಯ ಸಲಹೆ ಮಾಡಿದರು.
ಹನೂರು ಪಟ್ಟಣದಲ್ಲಿಂದು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಿರ್ಮಾಣ ಮಾಡಲಾಗಿರುವ ಬಾಬು ಜಗಜೀವನ್ ರಾಂ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ವರ್ಗಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಮೊರಾರ್ಜಿ ದೇಸಾಯಿ ಇತರೆ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಎಲ್ಲಾ ಬಡ ವರ್ಗದವರಿಗೂ ಈ ಶಾಲೆಗಳು ಉಪಯೋಗ ವಾಗಲಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಸ್ಥಾನಕ್ಕೆ ಏರಬೇಕೆಂದು ಸಚಿವರು ತಿಳಿಸಿದರು.
ಡಾ|| ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಂ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣದ ಮಹತ್ವವನ್ನು ಸಹ ತಿಳಿಸಿದ್ದಾರೆ. ಇವರ ಆಶಯಗಳು ಮಾರ್ಗದರ್ಶನವಾಗಿದೆ ಎಂದರು.
ಸರ್ಕಾರ ರಾಜ್ಯವನ್ನು ಹಸಿವು ಮುಕ್ತ ಗೊಳಿಸಬೇಕೆಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಬರಗಾಲ ಸಂದರ್ಭದಲ್ಲೂ ಜನರಿಗೆ ನೆರವಾಗಿದೆ. ಸ್ವಾಭಿಮಾನ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿರುವ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಹೆಚ್ಚಿನ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿಡುತ್ತಾ ಬಂದಿದೆ. ಇದರ ಫಲವಾಗಿ ಪರಿಶಿಷ್ಟರ ಕಾಲೋನಿಗಳಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ, ಚರಂಡಿ ಇನ್ನಿತರ ಸೌಲಭ್ಯಗಳನ್ನು ಕಾಣಬಹುದಾಗಿದೆ ಎಂದರು.
ರಾಜ್ಯ ಸರ್ಕಾರದ ವತಿಯಿಂದ ನಿರ್ಮಾಣವಾಗಿರುವ ಬಾಬು ಜಗಜೀವನ್ ರಾಂ ಸಮುದಾಯ ಭವನ ಗುಣಮಟ್ಟದಿಂದ ಕೂಡಿದೆ. ಈ ಭವನವನ್ನು ಶಿಕ್ಷಣ ಕೇಂದ್ರವನ್ನಾಗಿ ರೂಪಿಸಿಕೊಂಡು ಸಹ ಬಳಕೆ ಮಾಡಿಕೊಳ್ಳಬೇಕು. ಸ್ಥಳೀಯರ ಬೇಡಿಕೆಯಂತೆ ಭವನಕ್ಕೆ ಬೇಕಿರುವ ಪೀಠೋಪಕರಣಗಳನ್ನು ತಮ್ಮ ಸಂಸದ ಅನುದಾನದಿಂದ ಬಿಡುಗಡೆ ಮಾಡಿಕೊಡುವುದಾಗಿ ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತಾನಾಡಿದ ಶಾಸಕರಾದ ಆರ್. ನರೇಂದ್ರ ಅವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ 112 ಸಮುದಾಯ ಭವನಗಳು ನಿರ್ಮಾಣವಾಗುತ್ತಿವೆ. ಈ ಎಲ್ಲಾ ಭವನಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೆರವು ಲಭಿಸುತ್ತಿದೆ. ಪ್ರಸ್ತುತ ಉದ್ಘಾಟನೆಯಾಗಿರುವ ಜಗಜೀವನ್ ರಾಂ ಭವನಕ್ಕೆ ಕಾಂಫೌಡ್ ನಿರ್ಮಿಸಲು ನೆರವು ದೊರೆಯುತ್ತಿದೆ. ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧಕ್ಷರಾದ ಎಸ್. ಬಸವರಾಜು, ಶಾಸಕರಾದ ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ ಸದಸ್ಯರಾದ ಶಿವಮ್ಮ, ಮರಗದಮಣಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾರಾಜಣ್ಣ, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮಮತ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಎಲ್. ಗಂಗಾಧರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಳಿಕ ಸಚಿವರು ಹೂಗ್ಯಂಗೆ ತೆರಳಿ ಅಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನಿರ್ಮಾಣಮಾಡಲಾಗಿರುವ ಮೊರಾರ್ಜಿ ದೇಸಾಯಿ ವಸತಿ ಕಟ್ಟಡವನ್ನು ಉದ್ಘಾಟಿಸಿದರು.



ಜುಲೈ 9 ರಂದು ಮಹಿಳಾ ಉದ್ಯೋಗ ಖಾತರಿ ಅಭಿಯಾನಕ್ಕೆ ಚಾಲನೆ..vsss

ಚಾಮರಾಜನಗರ ಜುಲೈ 8  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣವನ್ನು ಗುರಿಯಾಗಿಸಿಕೊಂಡಿದ್ದು ಮಹಿಳಾ ಸ್ವಾವಲಂಬನೆಗಾಗಿ ಜಿಲ್ಲಾ ಪಂಚಾಯತ್ ರೂಪಿಸಿರುವ ವಿಶಿಷ್ಟ ಕಾರ್ಯಕ್ರಮವಾದ ಮಹಿಳಾ ಉದ್ಯೋಗ ಖಾತರಿ ಅಭಿಯಾನಕ್ಕೆ ಜುಲೈ 9ರಂದು ಚಾಲನೆ ದೊರೆಯಲಿದೆ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜುಲೈ 9ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಶಾಸಕರು ಹಾಗೂ ಇತರೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಮಹಾತ್ಮಗಾಂಧಿ ನರೇಗಾ ಅಧಿನಿಯಮದಡಿ ಸೃಷ್ಠಿಸಲಾದ ಉದ್ಯೋಗಾವಕಾಶಗಳಲ್ಲಿ ಕನಿಷ್ಟ ಮೂರನೇ ಒಂದು ಬಾಗದಷ್ಟು ಉದ್ಯೋಗವನ್ನು ಮಹಿಳೆಯರಿಗೆ ನೀಡುವಂತೆ ಸ್ಪಷ್ಟವಾಗಿ ತಿಳಿಸಿರುತ್ತದೆ. ಅದರೊಂದಿಗೆ  ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಆದ್ಯತೆಯ ಮೇರೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ  ಯೋಜನೆಯಡಿ ಉದ್ಯೋಗ ನೀಡುವುದರ ಮೂಲಕÀ  ಗ್ರಾಮೀಣ ಜನತೆಗೆ ಆರ್ಥಿಕ ಹಾಗು ಸಾಮಾಜಿಕ ಭದ್ರತೆ ನೀಡುವ ವಿನೂತನ ಪ್ರಯತ್ನ ಇದಾಗಿದ್ದು ಉದ್ಯೋಗ ವಂಚಿತ ಗ್ರಾಮೀಣ ಮಹಿಳೆಯರು, ಸ್ತ್ರೀ ಶಕ್ತಿ ಸಂಘಗಳು, ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಮತ್ತು ಯೋಜನೆಯಡಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುವ ಅಭಿಯಾನವಾಗಿದೆÀ  ಅದರೊಂದಿಗೆ ಮಹಿಳೆಯರಲ್ಲಿ ವಿಧವೆಯರು, ಪತಿ ಪರಿತ್ಯಕ್ತರು, ಮತ್ತು ನಿರಾಶ್ರಿತ ಮಹಿಳೆಯರಿದ್ದು ಅವರುಗಳನ್ನು ದುರ್ಬಲ ವರ್ಗದವರೆಂದು ಮತ್ತು ವಿಶೇಷ ವರ್ಗದವರೆಂದು ಪರಿಗಣಿಸಿ ಅವಕಾಶಗಳನ್ನು ನೀಡುವುದು ಸಹಾ ಅಭಿಯಾನದ ಉದ್ದೇಶವಾಗಿದೆ.
ಬಾಲ್ಯವಿವಾಹ, ಲಿಂಗತಾರತಮ್ಯ, ಶೌಚಾಲಯ ನಿರ್ಮಾಣ, ಕುರಿತಂತೆ ಜಾಗೃತಿ ಮೂಡಿಸುವ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮ ಇದಾಗಿದ್ದು. ಗ್ರಾಮೀಣ ಪ್ರದೇಶದ ಸ್ಥಳೀಯ ಸ್ವ ಸಹಾಯ ಸಂಘಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸ್ಥಳಿಯ ಸರ್ಕಾರೇತರ ಸಂಸ್ಥೆಗಳು   ಸ್ತ್ರೀ ಶಕ್ತಿ ಸಂಘಗಳು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತಿಗಳು, ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ಹಾಗೂ ಜಿಲ್ಲಾ ಆಡಳಿತದ ಸಹಯೋಗದೊಂದಿಗೆ ಅನುಷ್ಟಾನವಾಗಲಿದ್ದು ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಮುನ್ನುಡಿಯಾಗಿದೆ.

ಜು. 9ರಂದು ನಗರದಲ್ಲಿ ಗುಣಮಟ್ಟದ ಶಿಕ್ಷಣ ಸಾಧನೆಯಡೆಗೆ ಒಂದು ಹೆಜ್ಜೆ ಕಾರ್ಯಕ್ರಮ

ಚಾಮರಾಜನಗರ, ಜು. 08 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುಣಮಟ್ಟದ ಶಿಕ್ಷಣದ ಸಾಧನೆಯಡೆಗೆ ಒಂದುಹೆಜ್ಜೆ (ಸ್ಟೆಪ್) ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಸ್ಟೆಪ್ ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತುಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಹೆಚ್,ವಿ.ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜುಲೈ 9ರಂದು ನಗರದಲ್ಲಿ ಸತ್ವ ಕಾರ್ಯಕ್ರಮ ಉದ್ಘಾಟನೆ


ಚಾಮರಾಜನಗರ, ಜು. 08:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಸುದಾರಿಸಲು ರಕ್ತಹೀನತೆ ತಡೆಗೆ ಕ್ರಮಬದ್ದ ವಿಧಾನಗಳ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿರುವ ಸತ್ವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಸತ್ವ ಕಿರು ಹೊತ್ತಿಗೆ ಬಿಡುಗಡೆ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತುಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಹೆಚ್,ವಿ.ಚಂದ್ರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.






No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು