ಎಎಸ್ಪಿ ಅವರಿದ್ದ ವಾಹನ ಅಪಘಾತ: ಮೂವರು ಆಸ್ಪತ್ರೆಗೆ ದಾಖಲು.. vss
(ಚಿತ್ರವನ್ನು ಸಾರ್ವಜನಿಕರೋರ್ವರು ತೆಗೆದಿದ್ದು)
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
14:- ಮುಖ್ಯಮಂತ್ರಿ ಬಂದೋಬಸ್ತ್ ನಲ್ಲಿದ್ದ ಎಎಸ್ಪಿ ಅವರು ವಾಪಸ್ ತೆರಳುವಾಗ ಅವರ ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಮೂವರು ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮುಖ್ಯಮಂತ್ರಿ ಅವರ ಉಮ್ಮತ್ತೂರು ಕಾರ್ಯಕ್ರಮ ಮುಗಿಸಿ ಹೋಗುವಾಗ ಸಂಜೆ 6.15 ಸಂತೆಮರಳ್ಳಿ ಸಮೀಪ ಎಎಸ್ಪಿ ಅವರ ವಾಹನಕ್ಕೆ ಬೈಕೊಂದು ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಎಎಸ್ಪಿ ಗೀತಾ ಪ್ರಸನ್ನ, ಚಾಲಕ ನಾಗೇಶ್ ಹಾಗೂ ಗನ್ ಮ್ಯಾನ್ ಸಿದ್ದರಾಜು ಎಂಬುವವರಿಗೆ ಗಾಯವಾಗಿದೆ ಎನ್ನಲಾಗಿದೆ.
ಚಿತ್ರ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಆಸ್ಪತ್ರೆಗೆ ಐಜಿಪಿ ವಿಫುಲ್ ಕುಮಾರ್, ಜಿಲ್ಲಾ ಎಸ್ಪಿ ದಮೇಂದ್ರ ಕುಮಾರ್ ಸೇರಿದಂತೆ ಎಲ್ಲಾ ಪೋಲಿಸರು ಭೇಟಿ ನೀಡಿ ಎಎಎಸ್ಪಿ ಸೇರಿದಂತೆ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದರು.
ನೀರಾವರಿ ಯೋಜನೆಗಳಿಗೆ 40 ಸಾವಿರ ಕೋಟಿ ರೂ ವೆಚ್ಚ: ಸಿ.ಎಂ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಿತ್ರ:: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಉಮ್ಮತೂರಿನಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮದ ವತಿಯಿಂದ ನಂಜನಗೂಡು, ಚಾಮರಾಜನಗರ ಮತ್ತು ಯಳಂದೂರು ತಾಲೂಕಿನ 24 ಕೆರೆಗಳಿಗೆ ಕಬಿನಿ ನದಿಯಿಂದ ಕುಡಿಯುವ ನೀರಿಗಾಗಿ ನೀರು ತುಂಬಿಸುವ ಯೋಜನೆಯ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಆರಂಭದಲ್ಲೆ ಐದುವರ್ಷಗಳಲ್ಲಿ ನೀರಾವರಿ ಯೋಜನೆಗಳಿಗೆ 50 ಸಾವಿರ ಕೋಟಿರೂ ಖರ್ಚು ಮಾಡುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಪ್ರತಿವರ್ಷ 10 ಸಾವಿರ ಕೋಟಿರೂಗಳಂತೆ ನಾಲ್ಕು ವರ್ಷದಲ್ಲಿ ನೀರಾವರಿ ಯೋಜನೆಗಳಿಗೆ 40 ಸಾವಿರ ಕೋಟಿರೂ ವೆಚ್ಚ ಮಾಡಿದ್ದೇವೆ. ಒಟ್ಟು 3306 ಕೋಟಿ ರೂಗಳನ್ನು ಕೆರೆಗಳಿಗೆ ನೀರು ತುಂಬಿಸುವ 60 ಯೋಜನೆಗಳಿಗೆ ವಿನಿಯೋಗ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ 1326 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೊಳ್ಳಲಾಗಿದೆ. ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳವಾಗಲಿದೆ. ಇದರಿಂದ ಕೊಳವೆಬಾವಿಗಳ ಮೂಲಕ ನೀರು ದೊರೆಯಲಿದೆ. ಜಾನುವಾರುಗಳಿಗೆ, ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಹೀಗಾಗಿ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ಮುಂದಾಗುತ್ತಿದೆ ಎಂದರು.
ಪ್ರಸ್ತುತ ಉಮ್ಮತ್ತೂರಿನಲ್ಲಿ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದರೊಂದಿಗೆ ಕಾರ್ಯ, ಹನುಮನಪುರ, ಕೆಂಪನಪುರ, ಕಥನಾಯಕನಕೆರೆಗಳಿಗೂ ನೀರು ತುಂಬಿಸಬೇಕೆಂಬ ಬೇಡಿಕೆ ಇರುವ ಹಿನ್ನಲೆಯಲ್ಲಿ ಈ ಎಲ್ಲ ಕೆರೆಗಳನ್ನು ಯೋಜನೆಗೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಮಾತನಾಡಿ ಜಿಲ್ಲೆಯ ಸರ್ವಾಂಗಿಣ ಅಭಿವೃದ್ದಿಗೆ ಮುಖ್ಯ ಮಂತ್ರಿಯವರು ವಿಶೇಷ ಕಾಳಜಿ ವಹಿಸಿದ್ದಾರೆ. ಜಿಲ್ಲೆಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದಾರೆಎಂದರು.
ಜಲಸಂಪನ್ಮೂಲ ಸಚಿವರಾದ ಎಂ.ಬಿ.ಪಾಟೀಲ್ ಅವರು ಮಾತನಾಡಿ ಪ್ರಸ್ತುತ ಚಾಲನೆ ನೀಡಿರುವ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂಬ ಗಡವು ನಿಗದಿ ಮಾಡಲಾಗಿದೆ. ಆದರೂ 12 ತಿಂಗಳಲ್ಲಿ ಯೋಜನೆ ಮುಗಿಸುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಠಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಅವರು ಮಾತನಾಡಿ ಮುಖ್ಯಮಂತ್ರಿಗಳು ಜಿಲ್ಲೆಯ 71 ಕೆರೆಗಳ ನೀರು ತುಂಬಿಸುವ ಯೋಜನೆಗೆ 580 ಕೋಟಿ ರೂ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ. ಹನೂರು ಕ್ಷೇತ್ರಕ್ಕೂ ಬಹುಗ್ರಾಮ ಕುಡಿಯುವ ನೀರು ಯೋಜನೆ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಶೀಘ್ರವಾಗಿ ಜಾರಿಗೆ ಬರಬೇಕೆಂದು ಮನವಿ ಮಾಡಿದರು.
ಶಾಸಕರಾದ ಎಸ್.ಜಯಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೋಪಯೋಗಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಆರ್. ನರೇಂದ್ರ, ಎಂ.ಸಿ.ಮೋಹನಕುಮಾರಿ ಉರುಫ್ ಗೀತಾ, ಕಳಲೆ ಕೇಶವಮೂರ್ತಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು, ಕಾಡಾ ಅಧ್ಯಕ್ಷರಾದ ಹೆಚ್.ಎಸ್.ನಂಜಪ್ಪ. ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಕರ್ನಾಟಕ ರಾಜ್ಯ ವಿಶ್ವಕರ್ಮ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ನಂದಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಠಾಪಕ ನಿರ್ದೇಶಕರಾದ ಬಿ.ಶಿವಶಂಕರ್, ಜಿಲ್ಲಾಧಿಕಾರಿ ಡಾ. ಕೆ.ಹರೀಶ್‍ಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಠಿತರಿದ್ದರು.
ಇದಕ್ಕೂ ಮೊದಲು ಮುಖ್ಯ ಮಂತ್ರಿಯವರು ಕುದೇರಿನಲ್ಲಿ ಇರುವ ಚಾಮರಾಜನಗರ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ( ಚಾಮುಲ್) ಕ್ಕೆ ಭೇಟಿ ನೀಡಿ ಅಲ್ಲಿ ನಿರ್ಮಾಣ ಹಂತದಲ್ಲಿ ಇರುವ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.
No comments:
Post a Comment