Thursday, 10 August 2017

ಮಾಜಿ ರಾಜ್ಯಪಾಲರಾದ ಬಿ. ರಾಚಯ್ಯ ಸ್ಮಾರಕ ನಿರ್ಮಾಣ, ಜೋಡಿರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿಯವರಿಂದ ಶಿಲಾನ್ಯಾಸ (10-08-2017)

ಮಾಜಿ ರಾಜ್ಯಪಾಲರಾದ ಬಿ. ರಾಚಯ್ಯ ಸ್ಮಾರಕ ನಿರ್ಮಾಣ, ಜೋಡಿರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿಯವರಿಂದ ಶಿಲಾನ್ಯಾಸ

 ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ, ಆ. 10 - ಮಾಜಿ ರಾಜ್ಯಪಾಲರಾದ ದಿವಂಗತ ಬಿ. ರಾಚಯ್ಯರವರ ಸ್ಮಾರಕ ನಿರ್ಮಾಣಕ್ಕೆ ತಾಲೂಕಿನ ಆಲೂರಿನಲ್ಲಿ ಹಾಗೂ ಚಾಮರಾಜನಗರ ಪಟ್ಟಣದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.ಮೊದಲಿಗೆ ಮುಖ್ಯಮಂತ್ರಿಯವರು ಆಲೂರಿಗೆ ತೆರಳಿ ಬಿ. ರಾಚಯ್ಯರವರ ಸ್ಮಾರಕ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. ಇದೇವೇಳೆ ಬಿ. ರಾಚಯ್ಯನವರ ಸ್ಮಾರಕದ ನೀಲಿ ನಕ್ಷೆ ಅನಾವರಣ ಮಾಡಲಾಯಿತು. ಬಿ. ರಾಚಯ್ಯನವರ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಿ. ರಾಚಯ್ಯ ಅವರ ಸೇವೆ ಸ್ಮರಣೀಯವಾಗಿದೆ. ತಮ್ಮ ರಾಜಕೀಯ ಏಳಿಗೆಗೂ ಬಿ. ರಾಚಯ್ಯ ಅವರೂ ಸಹ ಪ್ರಮುಖ ಕಾರಣರಾಗಿದ್ದಾರೆ. ಬಿ. ರಾಚಯ್ಯ ಅವರು ಸಲ್ಲಿಸಿದ ಸೇವೆ ಸ್ಮರಿಸುವ ಸಲುವಾಗಿ ರಾಜ್ಯಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ ಎಂದರು.
ಬಳಿಕ ಚಾಮರಾಜನಗರದ ತಹಸೀಲ್ದಾರ್ ಕಚೇರಿ ಬಳಿ ನಡೆದ ಸಮಾರಂಭದಲ್ಲಿ ಬಿ. ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಯವರು ಚಾಲನೆ ನೀಡಿದರು.

 ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರಸಕ್ತ ಸಾಲಿನಲ್ಲಿ 27 ಸಾವಿರ ಕೋಟಿ ರೂ. ಗೂ ಹೆಚ್ಚು ಹಣವನ್ನು ವೆಚ್ಚ ಮಾಡುತ್ತಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಜನತೆ ಕಾಮಗಾರಿ ಗುತ್ತಿಗೆ ಪಡೆಯಲು ಸಹ ಮೀಸಲಾತಿ ಕಲ್ಪಿಸುವ ಕಾಯಿದೆ ಜಾರಿಗೆ ತಂದಿದೆ. ಬಡ್ತಿ ಮೀಸಲಾತಿ ಸಂಬಂಧವೂ ಸುಗ್ರೀವಾಜ್ಞೆ ಹೊರಡಿಸಿದೆ ಎಂದರು.

ರಾಜ್ಯದ ಒಟ್ಟಾರೆ 6.5 ಕೋಟಿ ಜನರಿಗೆ ಒಂದಿಲ್ಲೊಂದು ಕಾರ್ಯಕ್ರಮ ಜಾರಿಗೆ ತಂದು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ರೈತರ ಹಿತವನ್ನು ಬಲಿಕೊಡುವ ಯಾವುದೇ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಹಿತ ಕಾಪಾಡುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ರೈತರ ಹಿತ ಕಾಪಾಡುವಲ್ಲಿ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಆಹಾರ ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಮಾತನಾಡಿ ಬಿ. ರಾಚಯ್ಯನವರದ್ದು ಮಾದರಿ ವ್ಯಕ್ತಿತ್ವ. ಅವರ ಸೇವೆ ಕೊಡುಗೆ ಅಪಾರವಾಗಿದೆ. ಅಭಿವೃದ್ಧಿ ಕೆಲಸಗಳು ಸಹ ಸಾಕಷ್ಟು ಅವರ ಅವಧಿಯಲ್ಲಿ ನಡೆದಿದೆ ಎಂದು ಸ್ಮರಿಸಿದರು.
ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಮಾತನಾಡಿ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಉದ್ದೇಶಗಳಿಟ್ಟುಕೊಂಡು ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಹಿಂದುಳಿದ, ಅಲ್ಪಸಂಖ್ಯಾತ ಪರಿಶಿಷ್ಟರು, ಮಹಿಳೆಯರು, ಕ್ಥಷಿಕರು ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗೂ ಗಮನ ಹರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯು ಸಾಕಷ್ಟು ರಸ್ತೆ ಕಾಮಗಾರಿಯನ್ನು ಕೈಗೊಂಡಿದೆ. ಪ್ರಸ್ತುತ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿಯನ್ನು 35 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡು ಪಟ್ಟಣದ ಜನತೆಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಪ್ರಸ್ತುತ ಅಪೂರ್ಣಗೊಂಡಿರುವ ಪಟ್ಟಣದ ರಸ್ತೆ ನಿರ್ಮಾಣಕ್ಕೂ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರಾದ ಮಹದೇವಪ್ಪ ಅವರು ತಿಳಿಸಿದರು.

ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ಬಿ. ರಾಚÀಯ್ಯ ಅವರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರ ಅವಧಿಯಲ್ಲಿ ಜಿಲ್ಲೆಯ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯಗಳು ನಿರ್ಮಾಣವಾದವು. ಪಾಲಿಟೆಕ್ನಿಕ್ ಕಾಲೇಜೂ ಸೇರಿದಂತೆ ಇನ್ನಿತರ ಪ್ರಗತಿಪರ ಕಾರ್ಯಗಳಿಗೂ ಬಿ. ರಾಚಯ್ಯನವರ ಕೊಡುಗೆ ಸಾಕಷ್ಟು ಇದೆ ಎಂದರು.
ಇದೇವೇಳೆ ಬಿ. ರಾಚಯ್ಯ ಅವರ ಧರ್ಮಪತ್ನಿ ಗೌರಮ್ಮ ಅವರನ್ನು ಮುಖ್ಯಮಂತ್ರಿಯವರು ಸನ್ಮಾನಿಸಿದರು.
ಮಾಜಿ ಶಾಸಕರು ಹಾಗೂ ಬಿ. ರಾಚಯ್ಯ ಅವರ ಪುತ್ರರೂ ಆದ ಎ.ಆರ್. ಕೃಷ್ಣಮೂರ್ತಿ ಅವರು ಸ್ಮಾರಕ ನಿರ್ಮಾಣ ಮಾಡುತ್ತಿರುವ ಬಗ್ಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ನಗರಸಭೆsವತಿಯಿಂದ ಮುಖ್ಯಮಂತ್ರಿಯವರಿಗೆ ಪೌರಸನ್ಮಾನ ಮಾಡಲಾಯಿತು.
 ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕಳಲೆ ಕೇಶವಮೂರ್ತಿ, ವಿಧಾನಪರಿಷತ್ ಸದಸ್ಯರಾದ ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಚ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು,
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧÀ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ
ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಲಕ್ಷ್ಮಣ್‍ರಾವ್ ಪೇಶ್ವೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
*******************************************************************************



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು