Friday, 11 August 2017

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ (11-08-2017)

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ  

ಚಾಮರಾಜನಗರ, ಆ. 11 :- ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಲಭ್ಯತೆಗೆ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆಗಿರುವ ಮಳೆ, ಬಿತ್ತನೆ ಹಾಗೂ ಮೇವು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಯವರು ಕುಡಿಯುವ ನೀರು ಸೌಲಭ್ಯವನ್ನು ಸಮರ್ಪಕವಾಗಿ ಕಲ್ಪಿಸಬೇಕು. ಯಾವುದೇ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಹ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರು ಯೋಜನೆ ಇರುವ ಕಡೆ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ನೀರು ಪೋಲಾಗದಂತೆ ಇರುವ ಬಗ್ಗೆಯೂ ನಿಗಾ ವಹಿಸಬೇಕು. ಮೇವು ದಾಸ್ತಾನು ಪ್ರಕ್ರಿಯೆಯು ಸಮರ್ಪಕವಾಗಿ ಇರಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹಾಗೂ ಪ್ರಕ್ರಿಯೆ ಕುರಿತು ಸಹಕಾರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಯವರು ಘಟಕಗಳ ಸ್ಥಾಪನೆಗೆ ಅವಶ್ಯವಾಗಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಅರಣ್ಯ ವ್ಯಾಪ್ತಿಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಗಮನ ನೀಡಬೇಕು. ಇದಕ್ಕಾಗಿ ಶಾಶ್ವತವಾದ ಹಾಗೂ ಧೀರ್ಘಕಾಲ ಉಪಯೋಗವಾಗುವ ಪರಿಹಾರ ಯೋಜನೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇವೇಳೆ ಇತರ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಉಸ್ತುವಾರಿ ಕಾರ್ಯದರ್ಶಿಯವರು ಪರಾಮರ್ಶೆ ನಡೆಸಿದರು.
ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ವಿಭಾಗಾಧಿಕಾರಿ ಎ.ಜೆ. ರೂಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಆ. 14ರಂದು ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿ    

ಚಾಮರಾಜನಗರ, ಆ. 11 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್  ಅವರು ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತರಿರುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎನ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಅಮಚವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಸುರೇಶ್ ಎನ್. ಋಗ್ವೇದಿ ಅವರು ಕಾರ್ಯಕ್ರಮದ ಮುಖ್ಯ ಭಾಷಣ ಮಾಡುವರು ಕಾರ್ಯಕ್ರಮದ ನಂತರ ನಗರದ  ಅಕ್ಷತಾ ಎಸ್. ಜೈನ್ ಮತ್ತು ತಂಡದವರಿಂದ ಶ್ರೀ ಕೃಷ್ಣ ನೃತ್ಯರೂಪಕವನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ 

ಚಾಮರಾಜನಗರ, ಆ. 11– ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್  ಅವರು ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 5.30 ರಿಂದ 6.30ರವರೆಗೆ ಚಾಮರಾಜನಗರದ ಬಿ. ಬಸವರಾಜು ಮತ್ತು ತಂಡದವರಿಂದ ದೇಶಭಕ್ತಿ ಗೀತೆ ಗಾಯನ, ಸಂಜೆ 6.30 ರಿಂದ 7.30ರವರೆಗೆ ಶಾಲಾಮಕ್ಕಳಿಂದ ಕಾರ್ಯಕ್ರಮ ನಡೆಯಲಿದೆ. 7.30 ರಿಂದ 8ರವರೆಗೆÉ ಮೈಸೂರಿನ ಕೃಷ್ಣ ನೃತ್ಯ ಶಾಲೆಯ ವಿದೂಷಿ ಡಿಂಪಲ್ ಮತ್ತು ತಂಡದಿಂದ ಹಾಗೂ 8 ರಿಂದ 8.30ರವರೆಗೆ ಕೊಳ್ಳೇಗಾಲದ ರಂಗ ಲಕ್ಷಣಂ ಫೌಂಡೇಷನ್‍ನ ವಿದುಷಿ ಚಿತ್ರಬಿಳಿಗಿರಿ ಮತ್ತು ತಂಡದಿಂದ ನೃತ್ಯ ರೂಪಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.                    
ಆ. 19ರಂದು ನಗರದಲ್ಲಿ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ  
ಚಾಮರಾಜನಗರ, ಆ. 11- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಗಸ್ಟ್ 19ರಂದು ನಾಡಪ್ರಭು ಕೇಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ನಾಡಪ್ರಭು ಕೆಂಪೇಗೌಡರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ನಗರದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ  ಕೆಂಪೇಗೌಡರ ಜಯಂತಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತರಿರುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಸೋಮೇಶ್ವರನಾಥಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನ್‍ಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರು ಮಹಾರಾಜ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಪಿ.ಕೆ. ಕೆಂಪೇಗೌಡ ಅವರು ಕಾರ್ಯಕ್ರಮದ ಮುಖ್ಯ ಭಾಷಣ ಮಾಡುವರು. ಜ್ಯೋತಿಗೌಡಪುರದ ಜೆ.ಬಿ. ಮಹೇಶ ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಆ. 11 :- ಜಿಲ್ಲೆಯ ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 16 ಹಾಗೂ 17ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಆಗಸ್ಟ್ 16ರಂದು ಕೊಳ್ಳೇಗಾಲ ಹಾಗೂ 17ರಂದು ಯಳಂದೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಆ. 14ರಂದು ಫಸಲ್ ವಿಮಾ ಯೋಜನೆ ನೋಂದಣಿಗೆ ಕಡೆಯ ದಿನ

ಚಾಮರಾಜನಗರ, ಆ. 11 - ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ನೀರಾವರಿ ಆಶ್ರಿತ ಭತ್ತ, ರಾಗಿ, ಮಳೆಯಾಶ್ರಿತ ರಾಗಿ, ಅವರೆ, ಹತ್ತಿ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆ ಕಂತು ಪಾವತಿಸಲು ಆಗಸ್ಟ್ 14 ಕೊನೆಯ ದಿನವಾಗಿದ್ದು ರೈತರು ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದು ಕೃಷಿ ಇಲಾಖೆ ಮನವಿ ಮಾಡಿದೆ.
ನೀರಾವರಿ ಭತ್ತದ ಬೆಳೆಗೆ ವಿಮಾ ಮೊತ್ತವಾಗಿ ಎಕರೆಗೆ 34399 ಇರುತ್ತದೆ. ವಿಮಾ ಕಂತಾಗಿ 688 ರೂ. ಪಾವತಿಸಬೇಕಿದೆ. ನೀರಾವರಿ ಆಶ್ರಿತ ರಾಗಿ ಬೆಳೆಗೆ ವಿಮಾ ಮೊತ್ತವಾಗಿ 17807 ಮತ್ತು ಮಳೆಯಾಶ್ರಿತ ರಾಗಿಗೆ 14569 ರೂ. ಲಭಿಸಲಿದೆ. ವಿಮಾ ಕಂತಾಗಿ ಕ್ರಮವಾಗಿ 356 ರೂ. ಹಾಗೂ 291 ರೂ. ಪಾವತಿಸಬೇಕಿದೆ. ಮಳೆಯಾಶ್ರಿತ ಅವರೆ ಬೆಳೆಗೆ ಎಕರೆಗೆ 10117 ರೂ. ಇದ್ದು ವಿಮಾ ಮೊತ್ತವಿದ್ದು ಇದರ ಕಂತಾಗಿ 202 ರೂ. ಪಾವತಿಸಬೇಕಿದೆ. ಮಳೆಯಾಶ್ರಿತ ಹತ್ತಿ ಬೆಳೆಗೆ ಎಕರೆಗೆ 17402 ರೂ. ಲಭಿಸಲಿದ್ದು ವಿಮಾ ಕಂತಾಗಿ 870 ರೂ. ಪಾವತಿಸಬೇಕಿದೆ.
ಬೆಳೆ ಸಾಲ ಮಂಜೂರಾದ ಎಲ್ಲ ರೈತರನ್ನು ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆಯದ ರೈತರು ವಿಮೆ ಯೋಜನೆ ಪಡೆಯಲು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀತಿ, ಆಧಾರ್ ಸಂಖ್ಯೆಯನ್ನು ಬ್ಯಾಂಕುಗಳಲ್ಲಿ ಸಲ್ಲಿಸಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು