Wednesday, 16 August 2017

ಕೂಡ್ಲೂರಿನಲ್ಲಿ ಅಂಚೆ ಸಂತೆ (16-08-2017)

ಆ. 29ರಂದು ಕೂಡ್ಲೂರಿನಲ್ಲಿ ಅಂಚೆ ಸಂತೆ

ಚಾಮರಾಜನಗರ, ಆ. 16:– ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಆಗಸ್ಟ್ 29ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಕೂಡ್ಲೂರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕÀ ಕೋರಿದ್ದಾರೆ.

ಆ. 17ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಆ. 16:- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಆಗಸ್ಟ್ 17ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ನಗರಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ರೈತರೊಂದಿಗೆ ಸಮಾಲೋಚನ ಸಭೆ ನಡೆಸುವರು. ಸಂಜೆ 5 ಗಂಟೆಗೆ ಮಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಂ.ಎಸ್. ಮಂಜುನಾಥ್ ತಿಳಿಸಿದ್ದಾರೆ.

ಆ. 17ರಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಸಮಾಲೋಚನ ಸಭೆ

ಚಾಮರಾಜನಗರ, ಆ. 16 :- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 17ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ರೈತರ ಸಮಾಲೋಚನ ಸಭೆ ನಡೆಯಲಿದೆ.
ಈ ಸಭೆಗೆ ಹೆಚ್ಚಿನ ರೈತರು ಭಾಗವಹಿಸುವಂತೆ ಜಂಟಿ ಕೃಷಿ ನಿರ್ದೇಶಕ ಕೋರಿದ್ದಾರೆ.

ಆ. 18 ರಂದು ಸಂಸದರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವ್ಥದ್ಧಿ ಸಮನ್ವಯ, ಉಸ್ತುವಾರಿ ಸಮಿತಿ ಸಭೆ 

ಚಾಮರಾಜನಗರ, ಆ. 16 :- ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆ. 20ರಂದು ನಗರದಲ್ಲಿ ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಸಮಾರಂಭ

ಚಾಮರಾಜನಗರ, ಆ. 16 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಸಾಧನೆಗಳ ಸರದಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 20ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಚಾಮರಾಜೇಶ್ವರ ದೇವಾಲಯ ಬಳಿ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಕಲಾತಂಡಗಳೊಂದಿಗೆ ಆರಂಭವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅರಸು ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್  ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಪ್ರಗತಿಪರ ಸಾಹಿತಿಗಳಾದ ಪ್ರೊ. ಕಾಳೇಗೌಡ ನಾಗವಾರ ಶ್ರೀ ಡಿ. ದೇವರಾಜ ಅರಸು ಅವರ ಬಗ್ಗೆ ಉಪನ್ಯಾಸ ನೀಡುವರು. ಮಧ್ಯಾಹ್ನ 2 ಗಂಟೆಗೆ ಇಲಾಖೆಯ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ

ಮಹಿಳಾ ಬೀದಿಬದಿ ವ್ಯಾಪಾರಿಗಳಿಗೆ ಸಮೃದ್ಧಿ ಯೋಜನೆಯಡಿ ಪ್ರೋತ್ಸಾಹಧನ : ಅರ್ಜಿ ಆಹ್ವಾನ    

ಚಾಮರಾಜನಗರ, ಆ. 16:-  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಸಮೃದ್ಧಿ ಯೋಜನೆಯಡಿ ಬೀದಿ ಬದಿ ಮಹಿಳಾ ವ್ಯಾಪಾರಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದು ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ತಲಾ 10 ಸಾವಿರ ರೂ.ಗಳ ಪ್ರೋತ್ಸಾಹಧನ ಒದಗಿಸಲಾಗುವುದು.
18 ರಿಂದ 60 ವರ್ಷದೊಳಗಿನವರು ಅರ್ಹರು. ನಗರದ ಪ್ರದೇಶದ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪೌರಾಡಳಿತ ಇಲಾಖೆಯಲ್ಲಿ ಬೀದಿಬದಿ ವ್ಯಾಪಾರಿ ಎಂದು ನೋಂದಣಿ ಮಾಡಿಸಿ ಗುರುತಿನ ಚೀಟಿ ಹೊಂದಿರಬೇಕು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅವರಿಂದ ಬೀದಿ ಬದಿ ವ್ಯಾಪಾರಿ ದೃಢೀಕರಣ ದಾಖಲೆ ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ರಾಷ್ರೀಕೃತ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಪ್ರತಿ ಲಗತ್ತಿಸಬೇಕು. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕೇಜ್ ಆಗಿರಬೇಕು. ಒಂದು ಬಾರಿ ಸೌಲಭ್ಯ ಪಡೆಯಬಹುದಾಗಿದೆ.
ಅರ್ಜಿಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಚಾಮರಾಜನಗರ (08226-222603), ಸಂತೆಮರಹಳ್ಳಿ (08226-240215), ಕೊಳ್ಳೇಗಾಲ (08224-252367), ಗುಂಡ್ಲುಪೇಟೆ (087229-222286) ಹಾಗೂ ಯಳಂದೂರು (08226-240224) ಸಂಪÀರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿರಿಯ ನಾಗರಿಕರ ಕ್ಷೇತ್ರದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಆ. 16 – ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂಬಂಧ 7 ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ ಅಥವಾ ಕ್ರೀಡೆ, ಸಮಾಜ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
6 ವೈಯುಕ್ತಿಕ ಪ್ರಶಸ್ತಿ ಹಾಗೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಒಂದು ಸಂಸ್ಥಗೆ ಪ್ರಶಸ್ತಿ ನೀಡಲಾಗುವುದು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಡನೆ ಆಗಸ್ಟ್ 28ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ (ದೂ.ಸಂ. 08226-223688, 224688) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.                    

ಸಹಕಾರ ಸಂಘ ರದ್ದು : ಆಕ್ಷೇಪಣೆ, ಅಹವಾಲು ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಆ. 16 :-  ತಾಲೂಕಿನ ನಾಗವಳ್ಳಿಯ ಸಿದ್ದಾಪ್ಪಾಜಿ ಮೇದರ ಕುಶಲ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘವು ತನ್ನ ಬೈಲಾ ರೀತ್ಯ ಉದ್ದೇಶಗಳನ್ನು ಈಡೇರಿಸದೇ ಕಾರ್ಯ ಸ್ಥಗಿತಗೊಂಡಿರುವುದರಿಂದ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರÀನ್ನು ಸಂಘದ ಸಮಾಪನಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಸಮಾಪನಾಧಿಕಾರಿಯವರು ಸಂಘದ ಸಮಾಪನಾ ಕಾರ್ಯವನ್ನು ಪೂರ್ಣಗೊಳಿಸಿ ಸಮಾಪನಾ ಕಾರ್ಯದ ಪ್ರಗತಿ ಸಾಧಿಸಬೇಕಾಗಿದೆ. ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಸಂಘದ ಯಾವುದೇ ಸದಸ್ಯರುಗಳು ಈವರೆವಿಗೂ ಆಸಕ್ತಿ ತೋರಿಸದ ಕಾರಣ ಸಂಘದ ನೋಂದಣಿ ರದ್ದತಿಗೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಸಂಘದ ನೋಂದಣಿ ರದ್ದುಗೊಳಿಸುವ ಸಂಬಂಧ ಅಥವಾ ಸಂಘವನ್ನು ಪುನ:ಶ್ಚೇತನಗೊಳಿಸಿಕೊಳ್ಳಲು ಸಂಘದ ಸದಸ್ಯರುಗಳಾಗಲಿ ಅಥವಾ ಸಾರ್ವಜನಿಕರಾಗಲಿ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 26ರ ಒಳಗೆ ಸಮಾಪನಾಧಿಕಾರಿಯವರನ್ನು ಖುದ್ದು ಭೇಟಿ ಮಾಡಿ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬೇಕು.
ನಿಗಧಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ, ಅಹವಾಲು ಸ್ವೀಕೃತವಾಗದಿದ್ದಲ್ಲಿ ಸಂಘದ ನೋಂದಣಿ ರದ್ದತಿಗೆ ಸಂಘದ ಸದಸ್ಯರಿಂದ ಅಥವಾ ಯಾರಿಂದಲೂ ಯಾವುದೇ ಆಸಕ್ತಿ, ಆಕ್ಷೇಪಣೆಗಳು ಇಲ್ಲವೆಂದು ಪರಿಗಣಿಸಿ ಸಂಘದ ರದ್ದತಿಗೆ ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಪ್ರಕಟಣೆ ತಿಳಿಸಿದೆ.

ಕಾಣೆಯಾದ ಮಹಿಳೆ ಪತ್ತೆಗೆ ಸಹಕರಿಸಿ

ಚಾಮರಾಜನಗರ, ಆ. 16 -  ತಾಲೂಕಿನ ಅಮಚವಾಡಿ ಗ್ರಾಮದ ಮಹೇಶ್ ಅವರು ಆಗಸ್ಟ್ 12ರಂದು ಅವರ ಪತ್ನಿ ಮಂಜುಳ ಎಂಬಾಕೆ ತೋಟದ ಮನೆಯಿಂದ ಮಗನನ್ನು ಶಾಲೆಗೆ ಬಿಟ್ಟು ಬರುವುದಾಗಿ ತಿಳಿಸಿ ಹೋದವರು ಹಿಂದಿರುಗಿ ಬಂದಿರುವುದಿಲ್ಲ. ಎಲ್ಲ ಕಡೆ ವಿಚಾರಿಸಿದರೂ ಪತ್ತೆಯಾಗಿಲ್ಲ ಎಂಬ ಕಾರಣ ನೀಡಿ ದೂರು ಸಲ್ಲಿಸಿದ್ದಾರೆ.
ಮಂಜುಳ ಅವರು 27 ವರ್ಷದವರಾಗಿದ್ದು 5 ಅಡಿ ಎತ್ತರವಿರುತ್ತಾರೆ. ಗುಂಡು ಮುಖ, ಸಾದಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು ನೀಲಿ ಬಣ್ಣದ ಸೀರೆ ಧರಿಸಿರುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (08226-222243), ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ (08226-222092) ಅಥವಾ ಜಿಲ್ಲಾ ನಿಸ್ತಂತು ಕೊಠಡಿ (08226-222383)ಗೆ ತಿಳಿಸುವಂತೆ ನಗರದ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರÉ.

ಉದ್ಯೋಗಿನಿ ಯೋಜನೆಯಡಿ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಆ. 16 - ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ಸಹಾಯಧನ ಮತ್ತು ಬ್ಯಾಂಕುಗಳಿಂದ ಸಾಲ ಒದಗಿಸಲು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.
ಗರಿಷ್ಠ ಯೋಜನಾ ವೆಚ್ಚ 1 ಲಕ್ಷ ರೂ. ನಿಗಧಿಪಡಿಸಿದ್ದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ. 50ರಷ್ಟು ಗರಿಷ್ಟ 50 ಸಾವಿರ ರೂ., ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ. 20ರಷ್ಟು ಗರಿಷ್ಠ 7500 ರೂ. ಸಹಾಯಧನ ನೀಡಲಾಗುವುದು. ವಿಧವೆಯರು, ಅಂಗವಿಕಲರು, ಸಂಕಷ್ಟ ವರ್ಗದ ಮಹಿಳೆಯರಿಗೆ ಶೇ. 30 ರಷ್ಟು ಗರಿಷ್ಠ 10 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.
ಕೃಷಿ ಆಧಾರಿತ ಚಟುವಟಿಕೆಗಳಿಗೆ ಹಾಗೂ ಇತರೆ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಸ್ವಯಂ ಉದ್ಯೋಗದಲ್ಲಿ ಜ್ಞಾನ ಹೊಂದಿದ್ದು ಅನುಭವ ಪಡೆÀದಿರಬೇಕು. ಚಟುವಟಿಕೆಗಳಲ್ಲಿ ತರಬೇತಿ ಪಡೆದವರಿಗೆ ವಿಶೇಷ ಆದ್ಯತೆ ನೀಡಲಾಗುವುದು. 18 ರಿಂದ 45ರ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ 40 ಸಾವಿರ ರೂ. ಮೀರಿರಬಾರದು. ಆಧಾರ್ ಪ್ರತಿ, ವಿಧವಾ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಆದಾಯ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರ ಹಾಗೂ ಭಾವಚಿತ್ರ ಸಲ್ಲಿಸಬೇಕು.
ಅರ್ಜಿಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಅಥವಾ ಸಂತೆಮರಹಳ್ಳಿ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗಳನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.








No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು