ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಿ :ಡಾ.ಅಭಯ್‍ಕುಮಾರ್
ಅವರು ಲಯನ್ಸ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಿಗೆ ಬಡಜನರೇ ಹೆಚ್ಚು ಬರುತ್ತಾರೆ ಇದರಿಂದ ವೈದ್ಯರು ಸದಾ ಇರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಕಚೇರಿ ಕೆಲಸದಿಂದ ಬಿಡುಗಡೆಗೊಳಿಸಿ ರೋಗಗಳ ಕಡೆ ಹೆಚ್ಚು ಗಮನ ನೀಡುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಜನಪ್ರತಿನಿಧಿಗಳಾಗಲು ಚುನಾವಣಾ ಆಯೋಗ ಶಿಕ್ಷಣದ ಅವಶ್ಯಕತೆಯನ್ನು ನಿಗದಿ ಮಾಡಬೇಕು ಎಂದ ಅವರು ಜನಪ್ರತಿನಿಧಿಗಳು ಶಿಕ್ಷಣವಂತರಾದರೆ ಆಯಾ ಇಲಾಖೆಯ ಆಡಳಿತ ನಡೆಸಲು ಅವರಿಗೆ ಸುಲಭವಾಗುತ್ತದೆ ಎಂದರು.
ಸನ್ಮಾನ ಸ್ವೀಕರಿಸಿದ ಡಾ.ಅಭಯ್‍ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಶ್ರಮ ಜೀವಿಗಳು ಆದರೆ ಸ್ವಚ್ಚತೆಯ ಕೊರತೆಯಿಂದ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಹರಡುತ್ತವೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಿ ಸಾಂಕ್ರಾಮಿಕ ರೋಗ ತಡೆಗೆ ಸಹಕಾರ ನೀಡಬೇಕು ಎಂದು ಕೋರಿದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ವೈ.ಪಿ.ರಾಜೇಂದ್ರಪ್ರಸಾದ್ ಮಾತನಾಡಿ, ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡಿ ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರು ವೈದ್ಯರುಗಳು ಮಾತ್ರ ಗ್ರಾಮೀಣ ಪ್ರದೇಶಗಳಿಗೆ ಬಾರದಿರುವುದರಿಂದ ಬಡ ಜನರಿಗೆ ಗುಣ ಮಟ್ಟದ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ವಿಷಾಧಿಸಿದರು. ಕೆಲವು ಕಡೆ ಹಳ್ಳಿಗ ಳಲ್ಲೂ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವುದರಿಂದ ಅಂತಹವರನ್ನು ಗುರುತಿಸಿ ಲಯನ್ಸ್ ಸಂಸ್ಥೆ ಸನ್ಮಾನ ಕಾರ್ಯಕ್ರಮ ನಡೆಸುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ವೈದ್ಯರಾದ ಡಾ.ಅಭಯ್‍ಕುಮಾರ್ ಮತ್ತು ಡಾ. ಗೋವಿಂದರಾಜು ಅವರನ್ನು ವೈದ್ಯರ ದಿನಾಚರಣೆ ಅಂಗವಾಗಿ ಲಯನ್ಸ್ ಸಂಸ್ಥೆಯಿಂದ ಸನ್ಮಾನಿಸಲಾಯಿತು.
ಕಾರಾಗೃಹದ ಕೈದಿಗಳಿಗೆ ಆಧಾರ್‍ಕಾರ್ಡ್ ಮಾಡಿಕೊಡುವ ಕಾರ್ಯಕ್ರಮಕ್ಕೆ ನ್ಯಾಯಧೀಶರಾದ ಆರ್.ಪಿ ನಂದೀಶ್ ಅವರಿಂದ ಚಾಲನೆ
ನಗರದ ನ್ಯಾಯಲಯ ರಸ್ತೆಯಲ್ಲಿ ಇರುವ ಜಿಲ್ಲಾ ಕಾರಗೃಹದಲ್ಲಿ ಜಿಲ್ಲಾ ಕಾನೂನು ಸೇವ ಪ್ರಾಧಿಕಾರ,ಜಿಲ್ಲಾ ವಕೀಲರ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಹರಿವು ನೆರವು ಕಾರ್ಯಕ್ರದಲ್ಲಿ ವಿಚರಣಾ ಬಂದಿಗಳಿಗಾಗಿ ಅಧಾರ್ ಕಾರ್ಡ್ ನೋಂದಣಿ ಕುರಿತು ಮಾಹಿತಿ ನೀಡುತ್ತಾ ಮಾತನಾಡಿದರು. ಮೊದಲು ಕೆಲವೊಬ್ಬರು ತಮ್ಮ ಹೆಸರಿನಲ್ಲಿ 2 ರೆಷನ್‍ಕಾರ್ಡ್, ಸರ್ಕಾರ ದಿಂದ ನೀಡುವ ಪಿಂಚಣಿ ಹಣವನ್ನು 2 ಕಡೆ ಪಡೆದು ಸರ್ಕಾರಗಳಿಗೆ ವಂಚನೆ ಮಾಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಧಾರ್‍ಕಾರ್ಡ್‍ಗಳನ್ನು ಪ್ರತಿಯೋಬ್ಬರು ಮಾಡಿಸಲೆ ಬೇಕು ಆದೇಶವನ್ನು ನೀಡಿತು. ಆಧಾರ್ ಮನುಷ್ಯನ ಧೈಹಿಕ ಮಾಪನ ದಿಂದ ಮಾಡುವ ತಂತ್ರಜ್ಞಾನದಿಂದ ಇದೆ 1 ಸರಿ ಆಧಾರ್‍ಕಾರ್ಡ್ ಮಾಡಿಸಿದ್ದರೆ ಮತ್ತೆ ಮಾಡಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ಆಧಾರ್‍ಕಾರ್ಡ್ ಮಾಡಲು ಕಣ್ಣು 2 ಕೈಗಳ ಬೆರಳುಗಳನ್ನು ಸ್ಕಾನ್ ಮಾಡಲಾಗುವುದು ಮತ್ತು ಅವರ ಮೊಬೈಲ್ ಸಂಖ್ಯೆ ಹೆಸರು ವಿಲಾಸವನ್ನು ನೀಡಬೇಕು. ಪ್ರತಿಯೊಬ್ಬರಿಗೂ ಬೇರೆ ಬೇರೆ ರೀತಿಯಲ್ಲಿ ರೇಖೆಗಳು ಇರುತ್ತದೆ .ಆಧಾರ್ ಅನ್ನು ಮತ್ತೆಮಾಡಿಸಲು ಸಾಧ್ಯವಾಗದು ಇದರಿಂದ ( ಆಧಾರ್‍ಕಾರ್ಡ್ ) ಎಲ್ಲಾ ರೀತಿಯಲ್ಲಿ ಅನುಕೂಲವಾಗುತ್ತದೆ ಆಧಾರ್ ಅನ್ನು ನಕಲಿ ಮಾಡಲು ಸಾಧ್ಯವಿಲ್ಲ ಈಗ ಪ್ರತಿಯೊಂದು ಬ್ಯಾಂಕ್ ಹಾಗೂ ಸರ್ಕಾರಿ ಇಲಾಖೆಗಳಿಗೆ ಆಧಾರ್ ನೀಡಲೆಬೇಕು ಯಾವುದೆ ಐಡಿಕಾರ್ಡ್‍ಗಳು ಇದ್ದರು ಅಧಾರ್ ಪ್ರಮುಖವಾದ್ದು ಆಧಾರ್ ಕಾರ್ಡ್ ಇದರ ಉಪಯೋಗ ಬಹಳ ಇದೆ.
ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಧೀಶರಾದ ಆರ್.ಪಿ. ನಂದೀಶ್ ಮಾತನಾಡಿ ಪ್ರತಿಯೊಬ್ಬ ನಾಗರಿಕರಿಗೆ ಸಿಗುವ ಸೌಲಭ್ಯಗಳು ನಿಮಗೆ ದೊರೆಯಲಿ ಎಂದು ಆಧಾರ್ ನೀಡಲಾಗುವುದು. ನೀವುಗಳು ಯಾವುದೊ ಕೆಟ್ಟ ಗಳಿಗೆಯಲ್ಲಿ ಇಲ್ಲಿಗೆ ಬಂದಿದ್ದೀರಿ ಮುಂದೆ ನೀವು ಉತ್ತಮ ನಾಡಿಗೆ ಉತ್ತಮ ಮನುಷ್ಯನಾಗಿ ಬಾಳಿರಿಅವರ ನಿಮ್ಮಗಾಗಿ ಕಾರಗೃಹದಲ್ಲಿ ಆಧಾರ್ ಮಾಡಿಸಿವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ ಆಧಾರ್ ಇಲ್ಲ ದವರು ಇದರ ಸದುಪಯೋಗ ಪಡೆದು ಕೊಳ್ಳಿ ಎಂದು ತಿಳಿಸಿದರು.
ಆದ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರಾಗೃಹದ ಅಧಿಕ್ಷಕರಾದ ಶಾಂತಶ್ರೀ ಮಾತನಾಡಿ , ಆಧಾರ್ ಪ್ರತಿಯೊಂದು ಕೆಲಸಗಳಿಗೆ ಅಗತ್ಯವಾಗಿದೆ ಎಲ್ಲಾ ಕಾರಾಗೃಹಗಳಲ್ಲಿ ಆಧಾರ್‍ಕಾರ್ಡ್ ಮಾಡಿಸುವ ಕಾರ್ಯಕ್ಕೆ ಇಂದಿನಿಂದ ಚಾಲನೆ ದೊರೆತಿದೆ. ಮೊದಲನೆ ಆಧಾರ್ ಜೊಡಣೆ ನಮ್ಮ ಕಾರಾಗೃಹದಿಂದಲೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಬಡತನ, ಶೋಷಣೆಮುಕ್ತ ರಾಜ್ಯ ನಿರ್ಮಾಣಕ್ಕೆ ಅರಸು ಅವಿರತ ಶ್ರಮ: ಆರ್. ಧ್ರುವನಾರಾಯಣ
ಚಾಮರಾಜನಗರ, ಆ. 20 - ಸಾಮಾಜಿಕ ಕ್ರಾಂತಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಬಡತನ ಮತ್ತು ಶೋಷಣೆಮುಕ್ತ ರಾಜ್ಯವನ್ನಾಗಿಸಲು ಪಣತೊಟ್ಟು ಅವಿರತವಾಗಿ ಶ್ರಮಿಸಿದರೆಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇವರಾಜ ಅರಸು ಅವರು ಆಡಳಿತದಲ್ಲಿ ಅನೇಕ ಮಹತ್ತರ ಸುಧಾರಣೆಗಳನ್ನು ತಂದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದರು. ಬಡತನ, ಶೋಷಣೆಯಿಂದ ರಾಜ್ಯವನ್ನು ಮುಕ್ತಗೊಳಿಸುವ ಉದ್ದೇಶದಿಂದ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದರು ಎಂದರು.
ಭೂ ಸುಧಾರಣೆಯನ್ನು ಎಲ್ಲರ ಸಹಕಾರ ಪಡೆದು ಯಶಸ್ವಿಯಾಗಿ ಅನುಷ್ಟಾನಕ್ಕೆ ತಂದರು. ಗ್ರಾಮೀಣ ಭಾಗದಲ್ಲಿ ಜೀವಂತವಾಗಿದ್ದ ಜೀತ ಪದ್ಧತಿಯನ್ನು ಹೋಗಲಾಡಿಸಲು ಕಾನೂನು ಜಾರಿಗೆ ತಂದರು. ಜೀತವಿಮುಕ್ತರಿಗೆ ಉದ್ಯೋಗ, ಆಶ್ರಯ ನೀಡುವ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದರು ಎಂದು ಧ್ರುವನಾರಾಯಣ ತಿಳಿಸಿದರು.
ಅರಸು ಅವರು ಹಾವನೂರು ಆಯೋಗ ವರದಿಯನ್ನು ಜಾರಿಗೊಳಿಸುವ ಮೂಲಕ ಹಿಂದುಳಿದ ವರ್ಗದವರಿಗೆ ಮೀಸಲಾತಿಯನ್ನು ಕಲ್ಪಿಸಿದರು. ಇದರಿಂದ ಶೈಕ್ಷಣಿಕ, ಸಾಮಾಜಿಕ, ಉದ್ಯೋಗ ಕ್ಷೇತ್ರಗಳಲ್ಲಿ ಹೆಚ್ಚು ಅವಕಾಶಗಳು ದೊರೆತವು. ರಾಜಕೀಯ ಪ್ರಾತಿನಿದ್ಯವು ಸಹ ಲಭಿಸಿತು. ವಿದ್ಯಾಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಟಲ್‍ಗಳನ್ನು ತೆರೆಯುವ ಮೂಲಕ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಟ್ಟರು ಎಂದರು.
ಅರಸು ಅವರ ಆಡಳಿತ ಅವಧಿಯಲ್ಲಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಆರಂಭವಾಯಿತು. ವಿಧವಾ ವೇತನ, ವೃದ್ದಾಪ್ಯ ವೇತನದಂತಹ ಸೌಲಭ್ಯಗಳು ಅರಸು ಅವರ ಕಾಲದಲ್ಲಿಯೇ ಜಾರಿಗೆ ಬಂದವು. ಸಮಾಜದ ಸಣ್ಣ ಪುಟ್ಟ ವರ್ಗಗಳನ್ನು ಗುರುತಿಸಿ ಶೋಷಿತರ ಏಳಿಗೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ದೇವರಾಜ ಅರಸು ಅವರು 20 ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದರು. ಅವರು ತಂದ ಕೆಲ ಸುಧಾರಣೆಗಳಿಗೆ ಸಾಕಷ್ಟು ತೊಡಕುಗಳು ಎದುರಾದರೂ ಸಹ ಎದೆಗುಂದದೆ ಜಾರಿಗೊಳಿಸಲು ಮುಂದಾದರು. ಈ ಮೂಲಕ ಸಾಮಾಜಿಕ ನ್ಯಾಯವನ್ನು ತಂದುಕೊಟ್ಟರು ಎಂದರು.
ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರ ಸಮಗ್ರ ಪ್ರಗತಿ ಸಾಧ್ಯವಾಗಲಿದೆ. ರಾಜ್ಯ ಸರ್ಕಾರ ವ್ಯಾಸಂಗಕ್ಕೆ ಪೂರಕವಾಗಿ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರ ಪ್ರಯೋಜನ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು ಎಂದು ರಾಮಚಂದ್ರ ಸಲಹೆ ಮಾಡಿದರು.
ಪ್ರಗತಿಪರ ಸಾಹಿತಿ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ ದೇವರಾಜ ಅರಸು ಅವರು ಸರಳ ಹಾಗೂ ಮೂಲತ: ಶ್ರಮಜೀವಿಯಾಗಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಸ್ವತ: ಹೊಲದಲ್ಲಿ ನೇಗಿಲು ಹಿಡಿದು ಉತ್ತು, ಬೆಳೆ ಬೆಳೆಯುತ್ತಿದ್ದರು. ಕೃಷಿಕರ, ಶ್ರಮಿಕರ ಕಷ್ಟ, ನೋವಿನ ಅರಿವು ಅರಸು ಅವರಿಗೆ ಇತ್ತು ಎಂದರು.
ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದ ಹೆಗ್ಗಳಿಕೆ ಅರಸು ಅವರಿಗಿದೆ. ಬಡವರ ಪರ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದ ದೇವರಾಜ ಅರಸು ಅವರ ಹೆಸರು ದೇಶದ ಮುಖ್ಯಮಂತ್ರಿಗಳ ಚರಿತ್ರೆಯಲ್ಲಿ ಪ್ರಮುಖವಾಗಿದೆ ಎಂದು ಕಾಳೇಗೌಡ ನಾಗವಾರ ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಗಣ್ಯರು ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟಲ್‍ಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾಂಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ನಡೆದ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಗೆ ಚಾಮರಾಜೇಶ್ವರ ದೇವಾಲಯ ಬಳಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಇತರೆ ಗಣ್ಯರು ಚಾಲನೆ ನೀಡಿದರು.
ಅಪ್ರೆಂಟಿಸ್ ತರಬೇತಿಗೆ ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 20- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ(ಎಸ್‍ಸಿಎಸ್‍ಪಿ)ಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನಿಸಿದೆ.ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸೆಪ್ಟೆಂಬರ್ 2017ರಿಂದ ಮಾರ್ಚ್ 2018ರ ವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 20 ಸಾವಿರ ರೂ. ಗೌರವಧನವನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಒಟ್ಟು ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಂಡು ತರಬೇತಿ ಕೊಡಲಾಗುತ್ತದೆ.
ಅಭ್ಯರ್ಥಿಗಳು 22 ರಿಂದ 38ರ ವಯಸ್ಸಿನವರಾಗಿರಬೇಕು. ಕನ್ನಡ ಹಾಗೂ ಗಣಕಯಂತ್ರದ ಜ್ಞಾನ ಹೊಂದಿರಬೇಕು. ಬೇರೆ ಯಾವುದೇ ಉದ್ಯೋಗದಲ್ಲಿರಬಾರದು. ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಸ್ಥಳೀಯವಾಗಿ ಅಭ್ಯರ್ಥಿಗಳು ದೊರೆಯದಿದ್ದಲ್ಲಿ ಪಕ್ಕದ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಚಾಮರಾಜನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ ಹಾಗೂ ದೂರವಾಣಿ ಸಂಖ್ಯೆ: 08226-224731 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment