Wednesday, 23 August 2017

ಮಕ್ಕಳ ಕಲಿಕಾ ಪ್ರಗತಿಗೆ ಪೋಷಕರ ಸಹಕಾರ ಅಗತ್ಯ : ಎಂ.ರಾಮಚಂದ್ರ (22-08-2017)


ಮಕ್ಕಳ ಕಲಿಕಾ ಪ್ರಗತಿಗೆ ಪೋಷಕರ ಸಹಕಾರ ಅಗತ್ಯ : ಎಂ.ರಾಮಚಂದ್ರ

ಚಾಮರಾಜನಗರ, ಆ. 22 - ಮಕ್ಕಳ ಕಲಿಕಾ ಪ್ರಗತಿಯನ್ನು ಉತ್ತಮಪಡಿಸಲು ಶಿಕ್ಷಕರೊಂದಿಗೆ ಪೋಷಕರ ಸಹಕಾರವು ತುಂಬಾ ಅಗತ್ಯವಾಗಿದೆ. ಹೀಗಾಗಿ ಪೋಷಕರ ಸಭೆಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ನಡೆಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಪಂಚಾಯತ್‍ವತಿಯಿಂದ ಪ್ರೌಢಶಾಲಾ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಗುಣಾತ್ಮಕ ಶಿಕ್ಷಣಕ್ಕಾಗಿ ಪೋಷಕರ ಸಹಭಾಗಿತ್ವ ಎಂಬ ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ವ್ಯಾಸಂಗ, ಕಲಿಕೆ ಪ್ರಗತಿಯನ್ನು ಪೋಷಕರು ಗಮನಿಸಬೇಕು. ಗ್ರಾಮಾಂತರ ಪ್ರದೇಶವು ಸೇರಿದಂತೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪೋಷಕರ ಸಭೆ ಕರೆದು ಮಾರ್ಗದರ್ಶನ ಮಾಡಿದರೆ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಾಣಬಹುದು. ಈ ಹಿನ್ನೆಲೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಸಹಕಾರ ನೀಡಬೇಕೆಂದು ರಾಮಚಂದ್ರ ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಸುಧಾರಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ವತಿಯಿಂದ ಕಳೆದ ಸಾಲಿನಲ್ಲಿ ಸ್ಮಾರ್ಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರ ಫಲವಾಗಿ ಜಿಲ್ಲೆಯು ಫಲಿತಾಂಶದಲ್ಲಿ 12ನೇ ಸ್ಥಾನಕ್ಕೆ ಬರಲು ಕಾರಣವಾಯಿತು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯು ಸಹ ಸ್ಟೆಪ್ ಎಂಬ ನೂತನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ. ಇದರ ಭಾಗವಾಗಿಯೇ ಈಗಾಗಲೆ ಹಲವಾರು ಕಾರ್ಯಕ್ರಮಗಳು ನಡೆದಿವೆ ಎಂದರು.
ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ನೆರವು ನೀಡುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಶಿಥಿಲ ಶಾಲಾಕೊಠಡಿಗಳು ಇನ್ನಿತರ ಸಮಸ್ಯೆಗಳು ಕಂಡು ಬಂದಲ್ಲಿ ಶಿಕ್ಷಕರು ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಜನಪ್ರತಿನಿಧಿಗಳು ಕಾರ್ಯನಿಮಿತ್ತ ್ಷಅಥವಾ ಅನಿರೀಕ್ಷಿತs ಭೇಟಿ ನೀಡಿದ ಸಂದರ್ಭದಲ್ಲಿ ಮಾತ್ರ ಅಹವಾಲು ಸಲ್ಲಿಕೆಯಾಗುತ್ತವೆ. ಇದಕ್ಕೆ ಅವಕಾಶ ನೀಡದೇ ಸಾಕಷ್ಟು ಮೊದಲೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಶಿಕ್ಷಕರು ಮಾಹಿತಿ ನೀಡಬೇಕು ಎಂದು ರಾಮಚಂದ್ರ ತಿಳಿಸಿದರು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ ಅವರು ಗುಣಾತ್ಮಕ ಶಿಕ್ಷಣ ನೀಡುವ ಚಿಂತನೆಯಿಂದ ಜಿಲ್ಲಾಪಂಚಾಯತ್ ಮುಖೇನ ನೂತನ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರ ಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಹೆಚ್ಚಳಕ್ಕೆ ಅನುವಾಗುವಂತೆ ಜಿಲ್ಲಾ ಪಂಚಾಯತ್ ರೂಪಿಸಿ ಅನುಷ್ಠಾನ ಮಾಡುತ್ತಿರುವ ಕಾರ್ಯಕ್ರಮಗಳನ್ನು ಶಿಕ್ಷಕರು ಆಸಕ್ತಿಯಿಂದ ಜಾರಿಗೊಳಿಸಬೇಕು. ಇದರಿಂದ ಉದ್ದೇಶ ಯಶಸ್ವಿಯಾಗಲಿದೆ ಎಂದು ಸದಾಶಿವಮೂರ್ತಿ ನುಡಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಮಾತನಾಡಿ ಗುಣಮಟ್ಟದ ಶಿಕ್ಷಣ ಲಭಿಸಬೇಕು ಮತ್ತು ಫಲಿತಾಂಶ ಸುಧಾರಣೆಯಾಗಬೇಕು ಎಂಬ ಮಹತರ ಆಶಯದೊಂದಿಗೆ ಸ್ಟೆಪ್ ಕಾರ್ಯಕ್ರಮವನ್ನು ಈ ಬಾರಿ ಆರಂಭಿಸಲಾಗಿದೆ.ಶಾಲಾ ಹಂತದಲ್ಲಿ ಎದುರಾಗುವ ನ್ಯೂನತೆಗಳನ್ನು ಸರಿಪಡಿಸಲಾಗುವುದು. ಶಿಕ್ಷಕವೃಂದ ಧನಾತ್ಮಕ ಆಲೋಚನೆ ಗಳನ್ನು ಹೊಂದಬೇಕು. ಒಟ್ಟಾರೆ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಬೇಕು ಎಂದರು.
ಮಕ್ಕಳ ಕಲಿಕಾ ಸಾಮಥ್ರ್ಯ ಹಾಗೂ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ಕಲಿಕೆಯಲ್ಲಿ ಕಂಡುಬರುವ

ಆಗಸ್ಟ್ 28 ರಂದು ಚಾಮರಾಜನಗರಕ್ಕೆ 29 ರಂದು ಗುಂಡ್ಲುಪೇಟೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ದೂರು ಸ್ವೀಕಾರ

ಚಾಮರಾಜನಗರ, ಆ. 22 :- ಲೋಕಾಯುಕ್ತ ಅಧಿಕಾರಿಗಳು ಚಾಮರಾಜನಗರ ತಾಲೂಕು ಹಾಗೂ ಗುಂಡ್ಲುಪೇಟೆ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವರು.
ಆಗಸ್ಟ್ 28ರಂದು ಚಾಮರಾಜನಗರದ ಸರ್ಕಾರಿ ಅತಿಥಿಗೃಹ ಹಾಗೂ ಆಗಸ್ಟ್ 29 ರಂದು ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ, ಇತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ದೂರುಗಳಿದಲ್ಲಿ ನಾಗರಿಕರು ನಿಗದಿತ ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯವಿರಂದ ಅಪಿಡವಿಟ್ ಮಾಡಿಸಿ ಸಲ್ಲಿಸಬಹುದು.
ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ವಿಭಾಗದ ಇನ್ಸ್‍ಪೆಕ್ಟರ್‍ರವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 23 ರಂದು ರಾಷ್ಟ್ರೀಯ ಡೆಂಗ್ಯೂ ಜಾಗೃತಿ ಜಾಥಾ 

ಚಾಮರಾಜನಗರ, ಆ. 22- ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಆಗಸ್ಟ್ 23 ರಂದು ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಗೆ ಚಾಮರಾಜೇಶ್ವರ ದೇವಾಲಯ ಆವರಣದಿಂದ ಹೊರಟು ಜಿಲ್ಲಾಡಳಿತ ಭವನಕ್ಕೆ ಸೇರಲಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅನಿಲ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

ಚಾಮರಾಜನಗರ, ಆ. 22 - ಕರ್ನಾಟಕ ಮಾಧ್ಯಮ ಅಕಾಡೆಮಿಯು ಪ್ರತಿಕೋದ್ಯಮ ಸ್ನಾತಕೋತ್ತರ ಪದವೀಧÀರರಿಗೆ ಪ್ರಮುಖ ದಿನಪತ್ರಿಕೆ, ಎಲೆಕ್ಟ್ರಾನಿಕ್ ಮಾಧ್ಯಮ ಕಚೇರಿಯಲ್ಲಿ ತರಬೇತಿ ಕೊಡಿಸುವ ಸಲುವಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟಜಾತಿ, ಪರಿಶಿಷ್ಠಪಂಗಡಗಳ ಉಪಯೋಜನೆಯಡಿ 5 ಮಂದಿ ಹಾಗೂ ಇತರೆ ವರ್ಗಗಳ 5 ಮಂದಿಯನ್ನು ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ 10 ತಿಂಗಳುಗಳ ಕಾಲ ಮಾಸಿಕ ತಲಾ 10ಸಾವಿರ ರೂ. ಗೌರವ ಧನ ನೀಡಲಾಗುತ್ತದೆ.
ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸ್ವವಿವರ, ವಿದ್ಯಾರ್ಹತೆ, ಅಂಕಪಟ್ಟಿ, ಜಾತಿಪ್ರಮಾಣ ಪತ್ರ ಛಾಯಾಚಿತ್ರಗಳನ್ನು ಸ್ಕ್ಯಾನ್‍ಮಾಡಿ ಇಮೇಲ್ ವಿಳಾಸ ಣಡಿಚಿieeಞmಚಿ@gmಚಿiಟ.ಛಿom ಗೆ ಕಳುಹಿಸಬೇಕು. ಅಂಚೆ ಮೂಲಕ ಕಳುಹಿಸುವವರು ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕಡೆಯದಿನವಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಎಂ.ಸಿದ್ದರಾಜು ರವರು ಪ್ರಕಟಣೆಯಲಿ ಕೋರಿದ್ದಾರೆ.ದೋಷಗಳನ್ನು ಗುರುತಿಸಬೇಕು. ಶಾಲಾಭಿವೃದ್ಧಿ ಸಮಿತಿ ಪೋಷಕರನ್ನು ಕಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸುಸ್ಥಿರ ಹಾಗೂ ಗುಣಾತ್ಮಕ ಶಿಕ್ಷಣ ಸೌಲಭ್ಯ ಜಿಲ್ಲೆಯ ಮಕ್ಕಳಿಗೆ ಸಿಗಬೇಕು ಎಂದು ಹರೀಶ್‍ಕುಮಾರ್ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ಪ್ರಾಸ್ತವಿಕ ನುಡಿಗಳನ್ನಾಡಿದರು. ಶಿವಮೊಗ್ಗದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಾರದ ಹರಿಪ್ರಸಾದ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸ ನೀಡಿದರು.
 ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಕಾಶಿನಾಥ್, ವಿಷಯ ಪರಿವೀಕ್ಷಕರಾದ ತಮ್ಮಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಣ್ಣ, ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಮ್ಮಲ್ಲಪ್ಪ, ಶಿಕ್ಷಣಾಧಿಕಾರಿಗಳಾದ ಮಂಜುನಾಥ್, ಲಕ್ಷ್ಮೀಪತಿ, ಸೋಮಶೇಖರಯ್ಯ, ಸಿ.ಎನ್.ರಾಜು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.







No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು