Monday, 28 August 2017

ಆ. 30ರಂದು ಮುಖ್ಯಮಂತ್ರಿಯವರಿಂದ ಗುಂಡ್ಲುಪೇಟೆ ತಾಲೂಕು ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ : ಇತರೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಎಂ.ಸಿ. ಮೋಹನಕುಮಾರಿ -(28-08-2017)

     

ಗುಂಡ್ಲುಪೇಟೆ : ಆ. 30ರಂದು ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮ....VEERABHADRA SWAMY. S

ಚಾಮರಾಜನಗರ, ಆ.28 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭವು ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹತ್ತಿರ ನಡೆಯಲಿದೆ.
ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಅವರು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್  ಜ್ಯೋತಿ ಬೆಳಗಿಸುವರು. ಶಾಸಕರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅಧ್ಯಕ್ಷತೆ ವಹಿಸುವರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವರಾದ ಟಿ.ಬಿ. ಜಯಚಂದ್ರ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಕೃಷಿ, ಮಾರುಕಟ್ಟೆ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಎನ್. ನಟೇಶ್, ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಬಿ.ಕೆ. ಶಿವಪ್ಪ, ತೆರಕಣಾಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಹೆಚ್. ಉಮೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಆ. 30ರಂದು ಮುಖ್ಯಮಂತ್ರಿಯವರಿಂದ ಗುಂಡ್ಲುಪೇಟೆ ತಾಲೂಕು ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ : ಇತರೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಎಂ.ಸಿ. ಮೋಹನಕುಮಾರಿ..VEERABHADRA SWAMY. S

ಚಾಮರಾಜನಗರ, ಆ.28 :- ಗುಂಡ್ಲುಪೇಟೆ ತಾಲೂಕಿನ 131 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇವೆಯನ್ನು ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಆಗಸ್ಟ್ 30ರಂದು ತೆರಕಣಾಂಬಿಯಲ್ಲಿ ಲೋಕಾರ್ಪಣೆ ಮಾಡಲಿದ್ದಾರೆಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ತಿಳಿಸಿದರು.
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ವಿವಿರ ನೀಡಿದ ಶಾಸಕರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು 205 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ತಮ್ಮ ಪತಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಕನಸಿನ ಈ ಯೋಜನೆಗೆ  2014ರಲ್ಲಿ ಚಾಲನೆ ನೀಡಲಾಗಿತ್ತು. ಈ ಯೋಜನೆ ಕಾಮಗಾರಿ ಮುಗಿದಿದ್ದು ಆಗಸ್ಟ್ 30ರಂದು ತೆರಕಣಾಂಬಿಯಲ್ಲಿ ಮುಖ್ಯಮಂತ್ರಿಯವರು ತಾಲೂಕಿನ ಎಲ್ಲಾ 131 ಗ್ರಾಮಗಳಿಗೆ ನೀರು ಒದಗಿಸುವ ಕಾರ್ಯವನ್ನು ಉದ್ಘಾಟಿಸಲಿದ್ದಾರೆ ಎಂದರು.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ನೀರು ಎತ್ತಿ ತಾಲೂಕಿನ 131 ಗ್ರಾಮಗಳ 155 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಕೆ ಮಾಡಲಾಗುತ್ತದೆ. ಈಗಾಗಲೇ ಎಲ್ಲಾ ಗ್ರಾಮಗಳಿಗೂ ಕಚ್ಚಾ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲ ಗ್ರಾಮಗಳಿಗೆ ಶುದ್ಧ ನೀರು ಸಹ ಸರಬರಾಜು ಮಾಡಲಾಗುತ್ತಿದೆ. ಆಗಸ್ಟ್ 30ರಂದು ಮುಖ್ಯಮಂತ್ರಿಗಳು ಯೋಜನೆ ಸೇವೆಯನ್ನು ನಾಗರಿಕರ ಬಳಕೆಗೆ ಉದ್ಘಾಟಿಸುವ ಮೂಲಕ ಎಲ್ಲಾ 131 ಗ್ರಾಮಗಳಿಗೂ ಶುದ್ಧ ನೀರು ಪೂರೈಕೆ ಆರಂಭವಾಗಲಿದೆ ಎಂದು ಮೋಹನಕುಮಾರಿ ತಿಳಿಸಿದರು.
ಮೊದಲಿಗೆ ತೆರಕಣಾಂಬಿ ಮದ್ಯಂತರ ಜಲಸಂಗ್ರಹಾಲಯದಲ್ಲಿ ಮುಖ್ಯಮಂತ್ರಿಯವರು ಯೋಜನೆ ಬಳಕೆ ಸೇವೆಗೆ ಚಾಲನೆ ನೀಡುವರು. ಬಳಿಕ ಸಮೀಪದಲ್ಲೇ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿ ಇತರೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ 1.50 ಕೋಟಿ ರೂ. ವೆಚ್ಚದ ಗಣ್ಯರ ಅತಿಥಿಗೃಹ, ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 3.81 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 10 ಮುಚ್ಚು ಹರಾಜುಕಟ್ಟೆ, 10 ಶಾಪ್ ಕಂ ಗೋದಾಮು, ತೆರಕಣಾಂಬಿ ಎಪಿಎಂಸಿ ಉಪಮಾರುಕಟ್ಟೆ ಪ್ರಾಂಗಣದಲ್ಲಿ 97 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಒಂದು ಸಾವಿರ ಮೆಟ್ರಿಕ್ ಟನ್ ಸಾಮಥ್ರ್ಯದ ವೈಜ್ಞಾನಿಕ ಗೋದಾಮು, 46 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ 5 ಟಿಪಿಎಚ್ ಸಾಮಥ್ರ್ಯದ ಕ್ಲೀನಿಂಗ್, ಗ್ರೇಡಿಂಗ್, ಮತ್ತು ಪ್ಯಾಕಿಂಗ್ ಯೂನಿಟ್ ಕಟ್ಟಡ, 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಉದ್ಘಾಟಿಸುವರು.
ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲೂಕಿನ 11 ಕೆರೆಗಳಿಗೆ ನೀರು ತುಂಬಿಸುವ ಹುತ್ತೂರು ಯೋಜನೆ, 15 ಕೋಟಿ ರೂ. ವೆಚ್ಚದಲ್ಲಿ ಗುಂಡ್ಲುಪೇಟೆ ತಾಲೂಕಿನ 4 ಕೆರೆಗಳಿಗೆ ನೀರು ತುಂಬಿಸುವ ರಾಘವಪುರ ಏತ ಯೋಜನೆ ಹಾಗೂ ಹರವೆ ಗ್ರಾಮದಲ್ಲಿ ನಿರ್ಮಾಣವಾಗಲಿರುವ 13.5 ಕೋಟಿ ರೂ. ವೆಚ್ಚದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಯವರು ತೆರಕಣಾಂಬಿ ಸಮಾರಂಭದಲ್ಲಿಯೇ ಶಿಲಾನ್ಯಾಸ ನೆರವೇರಿಸುವರು ಎಂದರು.
ಉಸ್ತುವಾರಿ ಸಚಿವರಾಗಿದ್ದ ಮಹದೇವ ಪ್ರಸಾದ್ ಅವರ ಕನಸು ನನಸಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾಗುತ್ತಿರುವುದು ತಮಗೆ ಅತೀವ ಸಂತಸ ತಂದಿದೆ. ಗುಂಡ್ಲುಪೇಟೆ ತಾಲೂಕಿನ ಪ್ರಗತಿಪರ ಕೆಲಸಗಳು ಯಶಸ್ವಿಯಾಗಿ ಮುಗಿಯಲು ಜನಪ್ರತಿನಿಧಿಗಳು, ಅಧಿಕಾರಿಗಳು ಕೈಜೋಡಿಸಿದ್ದಾರೆ. ಹಲವಾರು ಮಹತ್ವದ ಯೋಜನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯವರು ಸೇವೆಗೆ ಸಮರ್ಪಿಸುತ್ತಿರುವುದು ಸಂತೋಷ ತಂದಿದೆ ಎಂದು ಮೋಹನಕುಮಾರಿ ತಿಳಿಸಿದರು.
ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಜ್ಯೋತಿ ಬೆಳಗಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವರಾದ ಟಿ.ಬಿ. ಜಯಚಂದ್ರ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಕೃಷಿ, ಮಾರುಕಟ್ಟೆ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಎನ್. ನಟೇಶ್, ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಬಿ.ಕೆ. ಶಿವಪ್ಪ, ತೆರಕಣಾಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಹೆಚ್. ಉಮೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಮೋಹನಕುಮಾರಿ ತಿಳಿಸಿದರು.
ತಾಲೂಖು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ಶಿವಪ್ಪ, ತಾಲೂಖು ಪಂಚಾಯತ್ ಸದಸ್ಯರಾದ ಬಸವರಾಜು, ಮುಖಂಡರಾದ ಕುಮಾರಸ್ವಾಮಿ, ಬಿ.ಎಂ. ಮುನಿರಾಜು, ಇತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಆ.28 :- 2017-18ನೇ ಸಾಲಿನಲ್ಲಿ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ 124 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಆಂಗ್ಲ ಭಾಷೆ ವಿಷಯದ ಹುದ್ದೆಗಳು 59, ಗಣಿತ ಮತ್ತು ವಿಜ್ಞಾನದ ವಿಷಯಗಳ ಹುದ್ದೆಗಳು 54, ಸಮಾಜ ಪಾಠಗಳ ವಿಷಯದ ಹುದ್ದೆಗಳು 11 ಸೇರಿದಂತೆ ಒಟ್ಟು 124 ಹುದ್ದೆಗಳಿವೆ.
ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ hಣಣಠಿ://sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನೀಡಿರುವ ಸೂಚನೆಗಳನ್ನು ಗಮನಿಸಬೇಕು. ಇಲಾಖಾ ವೆಬ್ ಸೈಟ್‍ನಲ್ಲಿ ಒದಗಿಸಿರುವ ಸಿಎಸಿ ಲಿಂಕ್ ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 25 ಕಡೆಯ ದಿನವಾಗಿದೆ. ಬ್ಯಾಂಕುಗಳಲ್ಲಿ ನಿಗದಿತ ಶುಲ್ಕ ಪಾವತಿಸಲು ಸೆಪ್ಟೆಂಬರ್ 27 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ (ದೂ.ಸಂ. 08226-222406) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕಿತ್ತೂರು ರಾಣಿ ಚನ್ನಮ್ಮ, ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ.28 - ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡಲಾಗುವ 2017-18ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಹಾಗೂ ಆಪತ್ಕಾಲದಲ್ಲಿ ಸಮಯಪ್ರಜ್ಞೆಯಿಂದ ಅಪಾರ ಧೈರ್ಯಸಾಹಸ ತೋರಿದ ಮಹಿಳೆಗೆ ನೀಡುವ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿಕನಿಷ್ಟ 5 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಮಹಿಳಾ ಅಭಿವೃದ್ಧಿ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರುವ ವ್ಯಕ್ತಿಗೆ ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿ ನೀಡಲಾಗುತ್ತದೆ.
ಜೀವದ ಹಂಗನ್ನು ತೊರೆದು ಸಾಹಸ ಪ್ರದರ್ಶಿಸಿದ 18 ರಿಂದ 45ರ ವಯೋಮಿತಿಯೊಳಗಿನ ಮಹಿಳೆಯರನ್ನು ವೀರ ಮಹಿಳೆ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಸಾಧನೆಯು ಹಿಂದಿನ ವರ್ಷದ ಜನವರಿ 1 ರಿಂದ ಡಿಸೆಂಬರ್ 31ರ ಒಳಗಿರಬೇಕು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.







No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು