RAMASAMUDRA S VEERABHADRA SWAMY
ಸಾಕಾರಗೊಳ್ಳುತ್ತಿರುವ ಗುಂಡ್ಲುಪೇಟೆ ತಾಲೂಕಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಸೇವೆ
ಚಾಮರಾಜನಗರ, ಆ. 29 :- ಗುಂಡ್ಲುಪೇಟೆ ತಾಲೂಕಿನ ಮಹತ್ವಾಕಾಂಕ್ಷೆಯ ಶಾಶ್ವತ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಫಲ ಸಾಕಾರಗೊಳ್ಳುತ್ತಿದೆ.ಕುಡಿಯುವ ನೀರಿನ ಬವಣೆ ಅನುಭವಿಸುತ್ತಿದ್ದ ಗುಂಡ್ಲುಪೇಟೆ ತಾಲೂಕಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಪೂರೈಸಬೇಕೆಂಬ ಬೇಡಿಕೆ ಈ ಹಿಂದಿನಿಂದಲೂ ಇತ್ತು. ಉಸ್ತುವಾರಿ ಸಚಿವರು ಹಾಗೂ ಗುಂಡ್ಲುಪೇಟೆ ಕ್ಷೇತ್ರದ ಶಾಸಕರೂ ಆಗಿದ್ದ ದಿವಂಗತ ಹೆಚ್.ಎಸ್. ಮಹದೇವಪ್ರಸಾದ್ ಅವರು ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಶ್ರಮ ವಹಿಸಿದ ಫಲವಾಗಿ 2014ರಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಯೋಜನೆ ಪೂರ್ಣಗೊಂಡು ನೀರು ಪೂರೈಸುವ ಸೇವೆಯನ್ನು ನಾಗರಿಕರ ಬಳಕೆಗೆ ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಆಗಸ್ಟ್ 30ರಂದು ತೆರಕಣಾಂಬಿಯಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ 131 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಅಂದಾಜು ಮೊತ್ತ 205 ಕೋಟಿ ರೂ.ಗಳಾಗಿದೆ. ತಾಲೂಕಿನ 155 ಜನವಸತಿ ಪ್ರದೇಶಗಳಿಗೆ ಯೋಜನೆಯಡಿ ನೀರು ಒದಗಿಸಲಾಗುತ್ತಿದೆ. ಒಟ್ಟು 1,48,312 ಜನಸಂಖ್ಯೆಗೆ ನೀರು ಸೌಲಭ್ಯ ಲಭ್ಯವಾಗಲಿದೆ. ಅಲ್ಲದೆ 2036ನೇ ಇಸವಿವರೆಗೂ 2,29,650 ಜನಸಂಖ್ಯೆಗೆ ನೀರು ತಲುಪಿಸುವ ಗುರಿಯೊಂದಿಗೆ ಯೋಜನೆ ಪೂರ್ಣಗೊಂಡಿದೆ.
ದಿನವೊಂದಕ್ಕೆ ಪ್ರತಿಯೊಬ್ಬರಿಗೆ 55 ಲೀಟರ್ (ಎಲ್‍ಪಿಸಿಡಿ) ಪ್ರಮಾಣದಲ್ಲಿ ನೀರು ಸರಬರಾಜು ಮಾಡಲಾಗುತ್ತದೆ. ಸದರಿ ಯೋಜನೆಗೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿರುವ ಕಬಿನಿ ನದಿಯಿಂದ ನೀರನ್ನು ಎತ್ತಿ ಪೂರೈಸಲಾಗುತ್ತಿದೆ. ಹುಲ್ಲಹಳ್ಳಿ ನದಿ ತೀರದ ಬಳಿ ಅತ್ಯಾಧುನಿಕ ಶುದ್ಧೀಕರಣ ಸ್ಥಾವರ ನಿರ್ಮಾಣ ಮಾಡಲಾಗಿದೆ. ಶುದ್ದೀಕರಿಸಿದ ನೀರನ್ನು 29.50 ಕಿ.ಮೀ. ದೂರದಲ್ಲಿರುವ ಕುರುಬರಹುಂಡಿಯ ಹತ್ತಿರ ಬರುವ 42 ಲಕ್ಷ ಲೀಟರ್ ಮತ್ತು 12 ಲಕ್ಷ ಲೀಟರ್ ಸಾಮಥ್ರ್ಯದ ಜಲಸಂಗ್ರಹಾಗಾರಗಳಿಗೆ ಏರು ಕೊಳವೆ ಮೂಲಕ (ರೈಸಿಂಗ್ ಮೇನ್) ನೀರು ಸಂಗ್ರಹಿಸಲಾಗುತ್ತದೆ. ಇಲ್ಲಿಂದ ಗುರುತ್ವಾಕರ್ಷಣೆ ಮೂಲಕ 9 ವಲಯ ಜಲಸಂಗ್ರಹಾಗಾರಗಳಿಗೆ ನೀರು ಸರಬರಾಜಾಗಲಿದೆ.
ತೆರಕಣಾಂಬಿ ಗ್ರಾಮದ ಬಳಿ 32 ಲಕ್ಷ ಲೀ. ಸಾಮಥ್ರ್ಯದ ಮದ್ಯಂತರ ನೀರಿನ ತೊಟ್ಟಿಯನ್ನು ನಿರ್ಮಾಣ ಮಾಡಿದ್ದು ಅದರಿಂದ ಅತಿ ಎತ್ತರ ಪ್ರದೇಶವಾದ ತೆರಕಣಾಂಬಿ ಬೆಟ್ಟದಲ್ಲಿ 14 ಲಕ್ಷ ಲೀಟರ್ ಸಾಮಥ್ರ್ಯದ ಮಾಸ್ಟರ್ ಬ್ಯಾಲೆನ್ಸಿಂಗ್ ರಿಸರ್ವಯರ್ (ಎಂಬಿಆರ್) ಗೆ ನೀರನ್ನು ಪಂಪಿಂಗ್ ಮೂಲಕ ಸಂಗ್ರಹಿಸಲಾಗುತ್ತದೆ. ಇದರಿಂದಲೇ 54 ಜನವಸತಿ ಪ್ರದೇಶಗಳಿಗೆ ಗುರುತ್ವಾಕರ್ಷಣೆ ವಿಧಾನದಿಂದ ನೀರು ಸರಬರಾಜು ಮಾಡಲಾಗುತ್ತದೆ.
ನೀರು ಪೂರೈಸಲು 29.50 ಕಿ.ಮೀ. ಏರು ಕೊಳವೆ ಮತ್ತು 373.50 ಕಿ.ಮೀ.ನಷ್ಟು ಉದ್ದದ ವಿತರಣಾ ಕೊಳವೆಯನ್ನು ಅಳವಡಿಸಲಾಗಿದೆ. ಒಟ್ಟು 403 ಕಿ.ಮೀ. ನಷ್ಟು ಪೈಪ್ ಲೈನ್ ಹಾದುಹೋಗಿದ್ದು ಈ ಮೂಲಕ ನೀರು ಪೂರೈಕೆಯಾಗುತ್ತಿದೆ.
ಯೋಜನೆಯಡಿ 15 ಎಂಎಲ್‍ಡಿ ನೀರನ್ನು ತಾಲೂಕಿನ ಜನತೆಗೆ ಪೂರೈಸಲಾಗುತ್ತದೆ. ತಾಲೂಕಿನಾದ್ಯಂತ ಇರುವ 156 ಓವರ್ ಹೆಡ್ ಟ್ಯಾಂಕುಗಳಿಗೆ ನೀರು ಸರಬರಾಜಾಗಲಿದೆ.
ತಾಲೂಕಿನ ಬಹುನಿರೀಕ್ಷಿತ ಬಹುಗ್ರಾಮ ಕುಡಿಯುವ ನೀರು ಯೋಜನೆ ಸೇವೆಯು ಪೂರ್ಣಪ್ರಮಾಣದಲ್ಲಿ ಆಗಸ್ಟ್ 30ರಿಂದಲೇ ಅರಂಭವಾಗುತ್ತಿರುವುದು ತಾಲೂಕಿನ ಜನರಲ್ಲಿ ನೀರಿನ ಬವಣೆ ನೀಗಿ ನೆಮ್ಮದಿ ತಂದುಕೊಡುವ ಆಶಾಭಾವ ಹೊಂದಲಾಗಿದೆ.
ಆಗಸ್ಟ್ 30ರಂದು ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 29 - ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಆಗಸ್ಟ್ 30ರಂದು ಜಿಲ್ಲಾ ಪ್ರವಾಸ ಕ್ಯಗೊಂಡಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಗೆ ಆಗಮಿಸಿ ಅಲ್ಲಿನ ಪಂಪ್ ಸ್ಟೇಷನ್‍ನಲ್ಲಿ ತಾಲೂಕಿನ 131 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇವೆಯನ್ನು ಉದ್ಘಾಟಿಸುವರು. ಬಳಿಕ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ : ಆ. 30ರಂದು ಮುಖ್ಯಮಂತ್ರಿಗಳಿಂದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,ಶಿಲಾನ್ಯಾಸ ಕಾರ್ಯಕ್ರಮ
RAMASAMUDRA S VEERABHADRA SWAMY
ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಅವರು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಜ್ಯೋತಿ ಬೆಳಗಿಸುವರು. ಶಾಸಕರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅಧ್ಯಕ್ಷತೆ ವಹಿಸುವರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವರಾದ ಟಿ.ಬಿ. ಜಯಚಂದ್ರ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಜಲಸಂಪನ್ಮೂಲ ಸಚಿವರಾದ ಡಾ. ಎಂ.ಬಿ. ಪಾಟೀಲ್, ಕೃಷಿ, ಮಾರುಕಟ್ಟೆ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಎನ್. ನಟೇಶ್, ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಬಿ.ಕೆ. ಶಿವಪ್ಪ, ತೆರಕಣಾಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಹೆಚ್. ಉಮೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 29 :- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಆಗಸ್ಟ್ 30ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 9 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ತೆರಕಣಾಂಬಿಯಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಂ.ಎಸ್. ಮಂಜುನಾಥ್ ತಿಳಿಸಿದ್ದಾರೆ.
ಆ. 30 ಜಲಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 29 - ಜಲ ಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ ಅವರು ಆಗಸ್ಟ್ 30ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ತೆರಕಣಾಂಬಿಯಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಆ. 30 ಇಂಧನ ಸಚಿವರ ಜಿಲ್ಲಾ ಪ್ರವಾಸ
RAMASAMUDRA S VEERABHADRA SWAMY
ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಗೆ ಆಗಮಿಸಿ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ತೆರಕಣಾಂಬಿಯಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೂ ಸಿಎಂ ಅವರಿಂದ ಶಿಲಾನ್ಯಾಸ
ಚಾಮರಾಜನಗರ, ಆ. 29:- ಕಾವೇರಿ ನೀರಾವರಿ ನಿಗಮದ ವತಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೆರೆಗಳಿಗೆ ನೀರು ತುಂಬಿಸುವ ಎರಡು ಮಹತ್ವದ ಯೋಜನೆಗಳಿಗೆ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಆಗಸ್ಟ್ 30ರಂದು ತೆರಕಣಾಂಬಿ ಸಮಾರಂಭದಲ್ಲಿ ಚಾಲನೆ ನೀಡುವರು.
ಈಗಾಗಲೇ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನವಾಗುತ್ತಿದೆ. ಮುಖ್ಯಮಂತ್ರಿಯವರು ಆಗಸ್ಟ್ 30ರಂದು ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲೂಕಿನ 11 ಕೆರೆಗಳಿಗೆ ನೀರು ತುಂಬಿಸುವ ಹುತ್ತೂರು ಏತ ಯೋಜನೆಗೆ ಶಿಲಾನ್ಯಾಸ ನೆರವೇರಿಸುತ್ತಿದ್ದಾರೆ. ಸುಮಾರು 53 ಕೋಟಿ ರೂ. ವೆಚ್ಚದ ಈ ಯೋಜನೆಯಡಿ ಆಲಂಬೂರು ಏತ ಯೋಜನೆಯ 3ನೇ ಹಂತದಲ್ಲಿರುವ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ, ಕರಕಲಮಾದಳ್ಳಿ ಕೆರೆ, ವಡೆಯನಪುರ ಕೆರೆ, ವಿಜಯಪುರ ಅಮಾನಿಕೆರೆ, ಕಲ್ ಕಟ್ ಕೆರೆ, ಬೊಮ್ಮಲಾಪುರ ಕೆರೆ, ದಾರಿ ಬೇಗೂರು ಕೆರೆ, ಯರಿಯೂರು ಕೆರೆ, ಬೊಮ್ಮನಹಳ್ಳಿ ಕೆರೆಗೆ ನೀರು ತುಂಬಿಸಲಾಗುತ್ತದೆ. ಚಾಮರಾಜನಗರ ತಾಲೂಕಿನ ಸುವರ್ಣನಗರ ಕೆರೆ, ಅರಕಲವಾಡಿ ಕೆರೆಗೂ ಸಹ ಯೋಜನೆಯಡಿ ನೀರು ತುಂಬಿಸಲಾಗುತ್ತದೆ.
ಕಾಮಗಾರಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಸ್ತಾವನೆಗೆ ಕಾವೇರಿ ನೀರಾವರಿ ನಿಗಮದಿಂದ ಆಡಳಿತಾತ್ಮಕ ಹಾಗೂ ನೀರಾವರಿ ಎಂಜಿನಿಯರ್ ವಲಯದಿಂದ ತಾಂತ್ರಿಕ ಅನುಮೋದನೆ ದೊರೆತಿದೆ. ಈ ಯೋಜನೆಯನ್ನು ಆಲಂಬೂರು ಏತ ಯೋಜನೆಯ ಮುಂದುವರೆದ ಭಾಗವಾಗಿ ಹಾಗೂ 4ನೇ ಹಂತದ ಕಾಮಗಾರಿಯನ್ನಾಗಿ ಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಆಲಂಬೂರು ಏತ ಯೋಜನೆಯ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಾದ ಮೆಗಾ ಎಂಜಿನಿಯರಿಂಗ್ ಇನ್ ಫ್ರಾಸ್ಚಕ್ಚರ್ಸ್ ಅವರಿಗೆ ಹುತ್ತೂರು ಯೋಜನೆಯನ್ನು ವಹಿಸಲಾಗಿದೆ. ಈಗಾಗಲೇ ರೈಸಿಂಗ್ ಮೈನ್ ಅಲೈನ್‍ಮೆಂಟ್ ಪಂಪ್ ಹೌಸ್ ಸರ್ವೆ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ಮತ್ತೊಂದು ಬಹುಮುಖ್ಯ ರಾಘವಪುರ ಏತ ಯೋಜನೆಯಡಿ ಗುಂಡ್ಲುಪೇಟೆ ತಾಲೂಕಿನ 4 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೂ ಚಾಲನೆ ಸಿಗಲಿದೆ. ಒಟ್ಟು 15 ಕೋಟಿ ರೂ. ವೆಚ್ಚದ ಕಾಮಗಾರಿ ಅನುಷ್ಠಾನಕ್ಕೆ ಕಾವೇರಿ ನೀರಾವರಿ ನಿಗಮದಿಂದ ಆಡಳಿತಾತ್ಮಕ ಅನುಮೋದನೆ ಲಭಿಸಿದೆ. ಈ ಯೋಜನೆಯನ್ನು ಗಾಂಧಿ ಗ್ರಾಮ ಏತ ಯೋಜನೆಯ ಮುಂದುವರೆದ ಭಾಗವಾಗಿ ಹಾಗೂ 3ನೇ ಹಂತದ ಕಾಮಗಾರಿಯನ್ನಾಗಿ ಕೈಗೊಳ್ಳಲಾಗುತ್ತಿದೆ.
ಯೋಜನೆಯಡಿ ಗಾಂಧಿ ಗ್ರಾಮ ಏತ ಯೋಜನೆಯ 2ನೇ ಹಂತದಲ್ಲಿ ಬರುವ ರಾಘವಪುರ ಕೆರೆಯಿಂದ ನೀರನ್ನು ಪಂಪ್ ಮಾಡಿ ಗುಂಡ್ಲುಪೇಟೆ ತಾಲೂಕಿನ ದೇವಲಾಪುರ ಕೆರೆ, ಸವಕನಹಳ್ಳಿ ಕೆರೆ, ಶಟ್ಟಹಳ್ಳಿ ಕೆರೆ ಹಾಗೂ ಮಂಚಹಳ್ಳಿ ಕೆರೆಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ.
ಆ. 31ರಂದು ಮಾವಿನ ತೋಟಗಳ ಪುನಶ್ಚೇತನ, ನಿರ್ವಹಣೆ ಕುರಿತು ಕಾರ್ಯಾಗಾರ
ಚಾಮರಾಜನಗರ, ಆ. 29 - ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಸರ್ಕಾರಿ ಐಟಿಐ ಕಾಲೇಜು ಎದುರು ಇರುವ ರಾಜು ಅವರ ಮಾವಿನ ತೋಟದಲ್ಲಿ ಆಗಸ್ಟ್ 31ರಂದು ಬೆಳಿಗ್ಗೆ 10 ಗಂಟೆಗೆ ಮಾವಿನ ತೋಟಗಳ ಪುನಶ್ಚೇತನ, ನಿರ್ವಹಣೆ ಹಾಗೂ ಸವರುವಿಕೆ ಕುರಿತು ಕಾರ್ಯಾಗಾರ ಏರ್ಪಡಿಸಲಾಗಿದೆ.ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕಾರ್ಯಾಗಾರ ಉದ್ಘಾಟಿಸುವರು. ಶಾಸಕರಾದ ಡಾ.ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾದ ಎಲ್. ಗೋಪಾಲಕೃಷ್ಣ ಕಿರುಹೊತ್ತಿಗೆ ಬಿಡುಗಡೆ ಮಾಡುವರು.
ಮೈಸೂರು ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಉಪಾಧ್ಯಕ್ಷರಾದ ಪಿ. ರಾಜಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಗುಂಡ್ಲುಪೇಟೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಉಪಾಧ್ಯಕ್ಷರಾದ ರೂಪ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್ ಮಹೇಶ್, ಪಿ. ಚನ್ನಪ್ಪ, ಅಶ್ವಿನಿ, ರತ್ನಮ್ಮ, ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿ.ಕೆ. ಶ್ರೀಕಂಠಪ್ಪ, ತಾಲೂಕು ಅಧ್ಯಕ್ಷರಾದ ಹೆಚ್.ಎಸ್. ನಂಜುಂಡಸ್ವಾಮಿ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ಶಿವಪ್ಪ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕೆ.ಸಿ. ಮಧು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್. ಚೇತನ್, ಉಪಾಧ್ಯಕ್ಷರಾದ ಚೈತ್ರ, ತಾಲೂಕು ಪಂಚಾಯತ್ ಸದಸ್ಯರಾದ ತಾಯಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಜಿ.ಎಸ್. ಗೌಡರ್, ಹೆಚ್.ಸಿ. ಮೊರಬ್ ಹಾಗೂ ಮೊಹಮ್ಮದ್ ಇಸ್ಮಾಯಿಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ತಾಂತ್ರಿಕ ಅಧಿವೇಶನದಲ್ಲಿ ಮಾವಿನಲ್ಲಿ ಸವರುವಿಕೆ ಕುರಿತು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕದಿರೇಗೌಡ ಹಾಗೂ ಮಾವು ಪುನಶ್ಚೇತನ ಹಾಗೂ ನಿರ್ವಹಣೆ ಕುರಿತು ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞರಾದ ಮೋಹನ್ ಕುಮಾರ್ ಭಾಗವಹಿಸುವರು
ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಆ. 29- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ಸ್ವವಿರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್‍ಎಸ್‍ಎಲ್‍ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ,ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತಪ್ರತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಆದಕಾರಣ ಹಸ್ತಪ್ರತಿಯ, ಡಿಟಿಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.
ಅರ್ಜಿಗಳನ್ನು ಸೆಪ್ಟೆಂಬರ್ 11ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ (ದೂ.ಸಂ.080-22484516, 22017704)ವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸೆ. 7ರಂದು ಚಾ.ನಗರ ಸಾಮಾನ್ಯ ಸಭೆ
ಚಾಮರಾಜನಗರ, ಆ. 29 - ಚಾಮರಾಜನಗರ ಸಭೆಯ ಸಾಮಾನ್ಯ ಸಭೆಯು ಪ್ರಭಾರ ಅಧ್ಯಕ್ಷರಾದ ಆರ್.ಎಂ. ರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.______________________________________________________________________________
ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.73,70,044.00 ( ರೂಪಾಯಿ ಎಪ್ಪತ್ತ ಮೂರು ಲಕ್ಷದ ಎಪ್ಪತ್ತುಸಾವಿರದ ನಲವತ್ತನಾಲ್ಕು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 022 ( ಇಪ್ಪತ್ತೆರಡು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.010(ಒಂದು ಕೆ.ಜಿ. ಹತ್ತು ಗ್ರಾಂ) ------------VEERABHADRA SWAMY S
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:- ದಿನಾಂಕ:29-08-2017ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಎಂ.ಗಾಯತ್ರಿ, ಕೆ.ಎ.ಎಸ್.(ಹಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಪ್ರಭಾರ ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ, ಕಛೇರಿಯ ಅಧೀಕ್ಷಕರಾದ ಶ್ರೀ ಬಿ.ಮಾದರಾಜು, ಆರೋಗ್ಯ ನಿರೀಕ್ಷಕರಾದ ಶ್ರೀಕಾಂತ್ ವಿಭೂತಿ ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ ಆರಕ್ಷಕ ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.73,70,044.00 ( ರೂಪಾಯಿ ಎಪ್ಪತ್ತ ಮೂರು ಲಕ್ಷದ ಎಪ್ಪತ್ತುಸಾವಿರದ ನಲವತ್ತನಾಲ್ಕು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 022 ( ಇಪ್ಪತ್ತೆರಡು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.010(ಒಂದು ಕೆ.ಜಿ. ಹತ್ತು ಗ್ರಾಂ) ದೊರೆತಿರುತ್ತದೆ.
No comments:
Post a Comment