ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 08 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಜಿಎನ್‍ಎಂ, ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ತರಬೇತಿ ಪಡೆಯುತ್ತಿರುವ ಮತೀಯ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಂiÀiನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 31ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 08 - ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿಂದುಳಿದ ವರ್ಗ)ಯಲ್ಲಿ ಗಣಿತ ಶಿಕ್ಷಕರು ಹಾಗೂ ವಿಜ್ಞಾನ ಶಿಕ್ಷಕರುಗಳ ಹುದ್ದೆ ಖಾಲಿ ಇದ್ದು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳ¯ು ಅರ್ಜಿ ಆಹ್ವಾನಿಸಿದೆ.ಬಿಎಸ್ಸಿ, ಬಿಇಡಿ (ಪಿಸಿಎಂ, ಪಿಎಂಸಿ) ವಿದ್ಯಾರ್ಹತೆಯ ಗಣಿತ ಶಿಕ್ಷಕರ ಹುದ್ದೆಗೆ ಹಾಗೂ ಬಿಎಸ್ಸಿ ಬಿಇಡಿ (ಸಿಬಿಜಡ್) ವಿದ್ಯಾರ್ಹತೆಯುಳ್ಳವರು ವಿಜ್ಞಾನ ಶೀಕ್ಷಕರ ಹುದ್ದೆಗೆ ಅರ್ಹರು.
ಅರ್ಜಿ ಸಲ್ಲಿಸಲು ಆಗಸ್ಟ್ 16 ಕಡೆಯ ದಿನ. ಹೆಚ್ಚಿನ ಮಾಹಿತಿಗೆ ವಸತಿ ಶಾಲಾ ಪ್ರಾಂಶುಪಾಲರನ್ನು (ದೂ.ಸಂ. 08229-232228, ಮೊಬೈಲ್ 9164373076) ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಆ. 08 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಲಾಗಿದೆ.ಅರ್ಜಿ ಹಾಗೂ ವಿವರಗಳಿಗೆ ಇಲಾಖೆಯ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು. ಹಾಗೂ ಸಹಾಯವಾಣಿ ಸಂಖ್ಯೆ 080-65970005, 080-6597006 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಆ. 9 ರಿಂದ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿಸಲು ವಿವಿಧ ಕಾರ್ಯಕ್ರಮ
ಚಾಮರಾಜನಗರ, ಆ. 08 - ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಚ ಭಾರತ್ ಮಿಷನ್ ಕಾರ್ಯಕ್ರಮದಡಿ ಜಿಲ್ಲೆಯನ್ನು ಬಯಲು ಬಹಿರ್ದೆಸೆಯಿಂದ ಮುಕ್ತ ಗ್ರಾಮಗಳನ್ನಾಗಿ ಮಾಡಲು 71ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಸ್ವಾತಂತ್ರ್ಯ ಸಪ್ತಾಹವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು ಆಗಸ್ಟ್ 9ರಿಂದ 15ರವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಆಗಸ್ಟ್ 9ರಂದು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಆಗಸ್ಟ್ 10ರಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಗ್ರಾಮಸಭೆ ಕರೆದು ಶೇ.100ರಷ್ಟು ನೈರ್ಮಲ್ಯ ಸಾಧನೆ ಮಾಡುವಂತೆ ಗ್ರಾಮ ಪಂಚಾಯಿತಿಗಳನ್ನು ಬಯಲು ಬಹಿರ್ದೆಸೆ ಮುಕ್ರವಾಗಿರುವ ಕುರಿತು ವಾರ್ಡ್ ಸಭೆ, ಗ್ರಾಮ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗುತ್ತದೆ.
ಆಗಸ್ಟ್ 11 ರಿಂದ 13ರವರೆಗೆ ಸ್ವಾತಂತ್ರ್ಯ ಸಪ್ತಾಹ ಅಂಗವಾಗಿ ಗುಂಡಿ ತೆಗೆಯುವ ಅಭಿಯಾನದಲ್ಲಿ ಒಂದು ದಿನಕ್ಕೆ 150 ಶೌಚಾಲಯ ನಿರ್ಮಿಸಲು ಗುಂಡಿಗಳನ್ನು ತೆಗೆಸಲಾಗುತ್ತದೆ.
ಆಗಸ್ಟ್ 14ರಂದು ಶಾಲಾ ಕಾಲೇಜುಗಳಲ್ಲಿ ನೈರ್ಮಲ್ಯ ಕುರಿತು ಜಾಥಾ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಆಯೋಜನೆ, ನೈರ್ಮಲ್ಯ ರ್ಯಾಲಿ, ಸ್ಥಬ್ದಚಿತ್ರಗಳನ್ನು ಪ್ರದರ್ಶನ ನಡೆಯಲಿದೆ.
ಆಗಸ್ಟ್ 15ರಂದು ನೈರ್ಮಲ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ ಅಭಿನಂದಿಸಲಾಗುತ್ತದೆ. ಬಯಲು ಬಹಿರ್ದೆಸೆಯಿಂದ ಮುಕ್ತ ಸ್ವಾತಂತ್ರ್ಯ ಸಪ್ತಾಹದ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗುವುದು. ಅಕ್ಟೋಬರ್ 2ರೊಳಗೆ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
No comments:
Post a Comment