ಗೌರಿ ಗಣೇಶ ಪ್ರತಿಷ್ಠಾಪನೆ : ಅನುಮತಿ ಕಡ್ಡಾಯ .............. VSS
ಚಾಮರಾಜನಗರ, :– ಜಿಲ್ಲೆಯಲ್ಲಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸಂಘಸಂಸ್ಥೆಗಳು ನಿಗದಿಮಾಡಿರುವ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವುದರ ಜತೆಗೆ ಕಡ್ಡಾಯವಾಗಿ ಅನುಮತಿ ಪಡೆದು ಆಗಸ್ಟ್ 15ರೊಳಗೆ ಸಂಬಂಧಪಟ್ಟ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.ಗೌರಿ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಗಳ ಉಸ್ತುವಾರಿ ಮುಖ್ಯಸ್ಥರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಎಲ್ಲ ಆಗುಹೋಗುಗಳಿಗೆ ಜವಾಬ್ದಾರರೆಂಬ ಬಗ್ಗೆ, ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಸ್ಥಳೀಯ ನ್ಯಾಯಾಲಯ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ನೀಡುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಬಗ್ಗೆ ಅನ್ಯಧರ್ಮ, ಮತ, ಸಂಘಟನೆ, ಜನಾಂಗ, ಸಾರ್ವಜನಿಕ ವ್ಯಕ್ತಿಗಳಿಗೆ ನೋವಾಗದಂತೆ ನಡೆದುಕೊಳ್ಳುವ ಬಗ್ಗೆ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.
ಪ್ರತಿಷ್ಠಾಪನೆ ದಿನ ವಿಶೇಷ ಕಾರ್ಯಕ್ರಮಗಳ ಆಯೋಜನೆ, ಭಾಗವಹಿಸಲಿರುವ ವಿಶೇಷ ಅತಿಥಿಗಳ ವಿವರ, ಸಾಂಸ್ಕøತಿಕ ಕಾರ್ಯಕ್ರಮಗಳು, ಮೆರವಣಿಗೆ, ವಿಸರ್ಜನಾ ದಿನ, ಮೆರವಣಿಗೆಯ ಮಾರ್ಗ ವಿವರಗಳನ್ನು ಸಲ್ಲಿಸಬೇಕು. (ಠಾಣಾಧಿಕಾರಿಗಳೊಂದಿಗೆ ಖುದ್ದು ಚರ್ಚಿಸಿ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು)
ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸ್ಥಳ, ವಿಳಾಸ ಹಾಗೂ ಸ್ಥಳದ ಮಾಲೀಕರಿಂದ ಪಡೆದ ಅನುಮತಿ ಪತ್ರ (ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ನಗರಸಭೆ, ಖಾಸಗಿ ವ್ಯಕ್ತಿಗಳು), ಸ್ಥಳೀಯ ವಿದ್ಯುತ್ ಪ್ರಾಧಿಕಾರದಿಂದ ಪಡೆದ ನಿರಾಪೇಕ್ಷಣ ಪತ್ರ, ಅಗ್ನಿಶಾಮಕ ದಳದವರಿಂದ ಪಡೆದ ನಿರಾಪೇಕ್ಷಣ ಪತ್ರ ಸಲ್ಲಿಸಬೇಕು. ಸ್ಥಳೀಯ ಠಾಣೆಯಿಂದ ಧ್ವನಿವರ್ಧಕ ಬಳಕೆಗೆ ಪಡೆದ ಅನುಮತಿ ಪತ್ರವನ್ನು ನೀಡಬೇಕು.
ಕಾರ್ಯಕ್ರಮ ಸಂಬಂಧ ಹಾಕಲಾಗುವ ಎಲ್ಲಾ ಫ್ಲೆಕ್ಸ್, ಪೋಸ್ಟರ್, ಫೋಟೋ ಇನ್ನಿತರ ಸಾಮಗ್ರಿಗಳಿಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಅನ್ಯಧರ್ಮ, ಮತ, ಸಂಘಟನೆ, ಜನಾಂಗ, ಸಾರ್ವಜನಿಕ ವ್ಯಕ್ತಿಗಳಿಗೆ ನೋವುಂಟು ಮಾಡದಂತಿರಬೇಕು. ವಿಸರ್ಜನಾ ಸ್ಥಳದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮ, ಜೀವರಕ್ಷಕ ಸಾಧನಗಳ ವಿವರ ಒದಗಿಸಬೇಕು.
ಪ್ರತಿಷ್ಠಾಪಿತ ಮೂರ್ತಿಯ ರಕ್ಷಣೆಗೆ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಬೇಕು. ನಿಯೋಜಿತರಾದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆವುಳ್ಳ ಭಾವಚಿತ್ರ ಹೊಂದಿದ ಐಡಿ ಕಾರ್ಡ್, ಹಗಲುರಾತ್ರಿ ನಿಯೋಜಿಸಿರುವ ವೇಳಾಪಟ್ಟಿ ನೀಡಬೇಕು. ಪ್ರತಿಷ್ಠಾಪಿತ ಸ್ಥಳದಲ್ಲಿ ಒಂದು ರಿಜಿಸ್ಟರ್ ಇಟ್ಟು ಕಾವಲು ವಿವರವನ್ನು ನಮೂದಿಸಬೇಕು.
ಸಾರ್ವಜನಿಕರಿಂದ ಗಣಪತಿ ಪ್ರತಿಷ್ಠಾಪನೆಗೆ ಬಲವಂತವಾಗಿ ಚಂದಾ ವಸೂಲಿ ಮಾಡುವುದು ಕಾನೂನುಬಾಹಿರವಾಗಿದೆ. ಲಾಟರಿ ಇನ್ನಿತರ ಯೋಜನೆಗಳ ಮುಖಾಂತರವೂ ಹಣ ಸಂಗ್ರಹಣೆ ಮಾಡುವಂತಿಲ್ಲ. ಇಂತಹ ಪ್ರಕ್ರಿಯೆ ಕಂಡು ಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿರುವಂತೆ ಮಣ್ಣಿನಿಂದ ಮಾಡಿದ ಬಣ್ಣರಹಿತ ಪರಿಸರಸ್ನೇಹಿ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಅಲಂಕಾರಕ್ಕೆ ನೈಸರ್ಗಿಕ ಸಾಮಗ್ರಿಗಳನ್ನು ಬಳಸಬೇಕು. ಸಾಧ್ಯವಾದಷ್ಟು ಮನೆಯಲ್ಲಿ ಬಕೆಟ್‍ಗಳಲ್ಲಿ ನೀರು ತುಂಬಿಸಿ ಮೂರ್ತಿಯನ್ನು ವಿಸರ್ಜಿಸಬೇಕು. ಇಲ್ಲವೇ ಲಭ್ಯವಿರುವ ಕೆರೆಗಳಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಸಂಚಾರಿ ವಿಸರ್ಜನಾ ವಾಹನ ಬಳಸಿ ವಿಸರ್ಜನೆ ಮಾಡಬೇಕು. ವಿಸರ್ಜನೆಗೆ ಮುನ್ನ ಅಲಂಕಾರಿಕ ವಸ್ತುಗಳನ್ನು ತೆಗೆಯಬೇಕು. ವಿಸರ್ಜನಾ ಮೆರವಣಿಗೆಯಲ್ಲಿ ಸಾರ್ವಜನಿಕರಿಗೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಬೇಕು.
ಗಣಪತಿ ಮೂರ್ತಿ ಷ್ರತಿಷ್ಠಾಪನೆ ಸಂಬಂಧ ನೀಡಲಾಗಿರುವ ಎಲ್ಲಾ ಕ್ರಮಗಳನ್ನು ಪಾಲನೆ ಮಾಡಬೇಕು. ನಿಬಂಧನೆಗಳನ್ನು ಉಲ್ಲಂಘಿಸುವುದು, ಶಾಂತಿಭಂಗ ಉಂಟುಮಾಡುವುದು ಕಂಡುಬಂದಲ್ಲಿ ಪೊಲೀಸ್ ಅಧೀಕ್ಷಕರು, ದೂರವಾಣಿ ಸಂಖ್ಯೆ 08226-222243, ಮೊಬೈಲ್ 9480804601, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದೂರವಾಣಿ ಸಂಖ್ಯೆ 08226-225979, ಮೊಬೈಲ್ 9480804602, ಡಿಎಸ್‍ಪಿ, ಚಾಮರಾಜನಗರ ದೂರವಾಣಿ ಸಂಖ್ಯೆ 08226-222090, ಮೊಬೈಲ್ 9480804620, ಡಿಎಸ್‍ಪಿ ಕೊಳ್ಳೇಗಾಲ, ದೂರವಾಣಿ ಸಂಖ್ಯೆ 08224-252840, ಮೊಬೈಲ್ 9480804621, ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08226-222383, ಮೊಬೈಲ್ 9480804600ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment