Monday, 4 September 2017

ಗಣಪತಿ ವಿಸರ್ಜನಾ ಮೆರವಣಿಗೆ : ಪ್ರಮುಖ ಬೀದಿಗಳಲ್ಲಿ ಎತ್ತರದ ಕಟ್ಟಡಗಳ ಮೇಲೆ ಮೆರವಣಿಗೆ ವೀಕ್ಷಣೆಗೆ ನಿಷೇಧ (04-09-2017)

   

ಗಣಪತಿ ವಿಸರ್ಜನಾ ಮೆರವಣಿಗೆ : ಪ್ರಮುಖ ಬೀದಿಗಳಲ್ಲಿ ಎತ್ತರದ ಕಟ್ಟಡಗಳ ಮೇಲೆ ಮೆರವಣಿಗೆ ವೀಕ್ಷಣೆಗೆ ನಿಷೇಧ 

ಚಾಮರಾಜನಗರ, ಸೆ. 04 - ನಗರದಲ್ಲಿ ಪ್ರತಿಷ್ಠಾಪಿಸಿರುವ ವಿದ್ಯಾಗಣಪತಿ ವಿಸರ್ಜನಾ ಮೆರವಣಿಗೆಯು ಸೆಪ್ಟೆಂಬರ್ 6ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೆರವಣಿಗೆ ಹಾದುಹೋಗುವ ಪ್ರಮುಖ ಬೀದಿಗಳಲ್ಲಿ ನಾಗರಿಕರು ಎತ್ತರದ ಕಟ್ಟಡಗಳ ಮೇಲೆ ಹತ್ತಿ ಕುಳಿತುಕೊಳ್ಳುವುದು ಹಾಗೂ ಮಹಡಿ ಮೇಲಿಂದ ಗುಂಪು ಕಟ್ಟಿಕೊಂಡು ಮೆರವಣಿಗೆ ವೀಕ್ಷಿಸುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಖಡಕ್‍ಪುರ ಮೊಹಲ್ಲಾ, ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ರಸ್ತೆ, ದೇವಾಂಗ 3ನೇ ಬೀದಿ, ನಾಗಪ್ಪ ಶೆಟ್ಟರ ವೃತ್ತ, ದೊಡ್ಡಂಗಡಿ ಬೀಡಿ, ಗುಂಡ್ಲುಪೇಟೆ ವೃತ್ತ, ಗಾಡಿಖಾನೆ ಮೊಹಲ್ಲ ಬೀದಿ, ಮೇಗಲ ಪರಿವಾರ ನಾಯಕರ ಬೀದಿ, ಆದಿಶಕ್ತಿ ದೇವಸ್ಥಾನದ ಬೀದಿ, ಬಣಜಿಗರ ಬೀದಿ, ಭ್ರಮರಾಂಭ ಬಡಾವಣೆಯ 1ನೇ ಹಾಗೂ 2ನೇ ಕ್ರಾಸ್, ಕುರುಬರ ಬೀದಿ, ಹಳ್ಳದ ಬೀದಿ, ಅಗ್ರಹಾರ ಬೀದಿ, ಪೊಲೀಸ್ ಕಚೇರಿ ರಸ್ತೆ, ಖಾಸಗಿ ಬಸ್ ನಿಲ್ದಾಣ, ವೀರಭದ್ರ ದೇವಸ್ಥಾನ, ಕನ್ನಿಕಾ ಪರಮೇಶ್ವರಿ ದೇವಸ್ಥಾನ ರಸ್ತೆ, ಮಾರ್ಕೆಟ್ ವೃತ್ತ, ಸಂತೆಮರಹಳ್ಳಿ ವೃತ್ತ, ಜೈನರ ಬೀದಿ, ಆಂಜನೇಯಸ್ವಾಮಿ ದೇವಸ್ಥಾನದ ಬೀದಿ, ದೊಡ್ಡರಸನ ಕೊಳ ರಸ್ತೆಯಲ್ಲಿ ಕಟ್ಟಡಗಳ ಮೇಲೆ ಹತ್ತಿ ಕುಳಿತುಕೊಳ್ಳುವುದು ಹಾಗೂ ಮಹಡಿ ಮೇಲಿಂದ ಜನರು ಗುಂಪುಗೂಡಿ ಮೆರವಣಿಗೆ ವೀಕ್ಷಣೆ ಮಾಡುವುದು ನಿಷೇಧಿಸಲಾಗಿದೆ. ಸೆಪ್ಟೆಂಬರ್ 6ರ ಬೆಳಿಗ್ಗೆ 7 ಗಂಟೆಯಿಂದ ಸೆಪ್ಟೆಂಬರ್ 7ರ ಬೆಳಿಗ್ಗೆ 7 ಗಂಟೆಯವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯಾಗಣಪತಿ ವಿಸರ್ಜನಾ ಮೆರವಣಿಗೆ ಹಾದುಹೋಗಲಿದ್ದು ಈ ಹಿನ್ನೆಲೆಯಲ್ಲಿ ಈ ನಿರ್ಬಂಧ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.


ಸೆ. 5ರಂದು ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಚಾಮರಾಜನಗರ, ಸೆ. 0:- ಜಿಲ್ಲಾ ಹಾಗೂ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಚರ್ಚಿಸುವ ಸಲುವಾಗಿ ಸೆಪ್ಟೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಗೆ ಎಲ್ಲ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಸಲಹೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರ ಜಿಲ್ಲಾ ಪ್ರವಾಸ

ಚಾಮರಾಜನಗರ, ಸೆ. 04 - ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಎಚ್.ಸಿ. ರುದ್ರಪ್ಪ ಅವರು ಸೆಪ್ಟೆಂಬರ್ 5 ಹಾಗೂ 6 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬಿಳೆಗ್ಗೆ 11.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮದ್ಯಪಾನ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಚರ್ಚಿಸುವರು. ಮಧ್ಯಾಹ್ನ 3 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಅಲ್ಲಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡುವರು. ಸೆಪ್ಟೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘದ ವತಿಯಿಂದ ಆಯೋಜಿಸಲಾಗಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 7ರಂದು ಯಳಂದೂರು ತಾಲೂಕು ಪ.ಜಾ. ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ

ಚಾಮರಾಜನಗರ, ಸೆ. 04 - ಯಳಂದೂರು ತಾಲೂಕು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಮಿತಿಗೆ ಮಹದೇವಪ್ಪ ಸಿದ್ದೇಶ್ವರಪೇಟೆ ಮಾಂಬಳ್ಳಿ (ಮೊ.9739825516), ಆರ್. ನಾಗರಾಜು ಅಗರ (ಮೊ. 9986585161) ಹಾಗೂ ಮಹದೇವಶೆಟ್ಟಿ ವೈಕೆ ಮೋಳೆ (ಮೊ. 9480003951) ಇವರು ನಾಮನಿರ್ದೇಶಿತÀ ಸದಸ್ಯರಾಗಿರುತ್ತಾರೆ. ನಾಗರಿಕರು ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯಗಳಿಗೆ ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಸ್ಯೆಗಳಿದ್ದಲ್ಲಿ ಈ ಸಮಿತಿ ಸದಸ್ಯರ ಮುಖಾಂತರ ಅಥವ ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಮುಖಾಂತರ ಮನವಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಭಾ ಕಾರಂಜಿ ಸದ್ಬಳಕೆಗೆ ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು ಸಲಹೆ

ಚಾಮರಾಜನಗರ, ಸೆ. 01- ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಸಲಹೆ ಮಾಡಿದರು. 
ತಾಲೂಕಿನ ಮೇಲಾಜಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಅಪಾರವಾದ ಕಲಾಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡಿಕೊಳ್ಳಲು ಹೆಚ್ಚಿನ ಉತ್ತೇಜನ ನೀಡಬೇಕಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
ಮಕ್ಕಳಲ್ಲಿ ಅಡಗಿರುವ ವೈವಿಧ್ಯಮಯ ಪ್ರತಿಭೆ ಸಾಮಥ್ರ್ಯವನ್ನು ಹೊರಹಾಕಲು ವಿಶೇಷವಾಗಿ ಪೋಷಕರು ಹೆಚ್ಚು ಗಮನವಿಡಬೇಕಿದೆ. ಮಕ್ಕಳನ್ನು ತಾರತಮ್ಯ ಮಾಡದೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಾಗ ಮಾತ್ರ ಮಕ್ಕಳ ಸಾಧನೆ ಗುರುತಿಸಲು ಸಹಾಯಕವಾಗಲಿದೆ ಎಂದು ಬಾಲರಾಜು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿಯೂ ಎಲ್ಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪೋಷಕರು ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳನ್ನು ಅಕ್ಷರ ವಂಚಿತರನ್ನಾಗಿಸಬಾರದು. ಶಿಕ್ಷಣ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಸಹ ಕಲಿಕೆಯೊಂದಿಗೆ ಇನ್ನಿತರ ಪೂರಕ ಚಟುವಟಿಕೆಗಳಲ್ಲಿ ತೊಡಗಬೇಕು. ತಾಲೂಕು ಜಿಲ್ಲಾ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಒಳ್ಳೆಯ ಹೆಸರು ಕೀರ್ತಿ ತರುವಂತಾಗಬೇಕು ಎಂದು ಬಾಲರಾಜು ಅವರು ಸಲಹೆ ಮಾಡಿದರು.
ತಾಲೂಕು ಪಂಚಾಯಿತಿ ಸದಸ್ಯರಾದ ಬಸವಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸುಗುಣ ಲಿಂಗಪ್ಪ, ಸದಸ್ಯರಾದ ನಾಗೇಂದ್ರಮೂರ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.












No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು