Tuesday, 5 September 2017

ಬೈಕ್, ಇತರೆ ವಾಹನಗಳ ಮೂಲಕ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ ಸಮಾರಂಭ ನಿಷೇಧ : ಡಿಸಿ ಆದೇಶ (05-08-2017)

 
ಗಣೇಶ ವಿಸರ್ಜನೆ:ಹೈ ಅಲರ್ಟ್,    ವರದಿ: ವಿಎಸ್ಎಸ್ (೯೪೮೦೦೩೦೯೮೦) 

ಚಾಮರಾಜನಗರ: ನಗರದ ರಥದಬೀದಿಯಲ್ಲಿ ಪ್ರತಿಷ್ಟಾಪಿಸಲಾದ ಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ನಾಳೆ (೬ ರ ಬುದುವಾರ) ನಡೆಗಲಿದೆ. 
* ಗಣಪತಿ ವಿಸರ್ಜನ ಮಹೋತ್ಸವ ಯಾವುದೇ ಅಡ್ಡಿ ಆತಂಕವಿಲ್ಲದೇ ನಡೆಯಲೆಂದು ಪೊಲೀಸ್ ವರೀಷ್ಟಾದಿಕಾರಿ ದರ್ಮೇಂದ್ರ ಕುಮಾರ್ ಮೀನಾ ಅವರು ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಬಂದೂಬಸ್ತ್ ನಿಯೋಜಿಸಿದ್ದಾರೆ 
*ಪೂರ್ವ ಬಾವಿಯಾಗಿ ಎಸ್ಪಿ ದರ್ಮೇಂದ್ರ‌ಕುಮಾರ್ ಅವರ ನೇತೃತ್ವದಲ್ಲಿ ಇಂದು ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು. ಹೆಚ್ಚುವರಿ ವರೀಷ್ಟಾದಿಕಾರಿ ಗೀತಾಪ್ರಸನ್ನ, ಡಿವೈಸ್ಪಿ ಗಂಗಾದರಸ್ವಾಮಿ ಸೇರಿದಂತೆ ಜಿಲ್ಲೆಯ ಆರಕ್ಷಕರು ಪಥಸಂಚಲನದಲ್ಲಿ ಭಾಗವಹಿಸಿದ್ದರು

ಬೈಕ್, ಇತರೆ ವಾಹನಗಳ ಮೂಲಕ  ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ ಸಮಾರಂಭ ನಿಷೇಧ : ಡಿಸಿ ಆದೇಶ


ಚಾಮರಾಜನಗರ, ಸೆ. 05 :- ಜಿಲ್ಲೆಯಾದ್ಯಂತ ಸೆಪ್ಟೆಂಬರ್ 5ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 7ರ ಸಂಜೆ 6 ಗಂಟೆಯವರೆಗೆ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಹಾಗೂ ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್ ಇತ್ಯಾದಿ ಹಾಗು ಇತರೆ ಯಾವುದೇ ವಾಹನಗಳ ಮೂಲಕ , ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳನ್ನು (ಉದ್ದೇಶಿತ ದಿನಾಂಕ 6.9.2017ರ ಚಾಮರಾಜನಗರ ಪಟ್ಟಣದ ಶ್ರೀವಿದ್ಯಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಕಾರ್ಯಕ್ರಮ ಮತ್ತು ಈಗಾಗಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ಪೂರ್ವಾನುಮತಿ ಪಡೆದ ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಇಂದು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಅವರು ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಠಿಯಿಂದ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಅವರ ಶಿಫಾರಸ್ಸಿನ ಮೇರೆಗೆ ಉದ್ದೇಶಿತ ಸೆಪ್ಟೆಂಬರ್ 6ರ ಚಾಮರಾಜನಗರ ಪಟ್ಟಣದ ಶ್ರೀ ವಿದ್ಯಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಕಾರ್ಯಕ್ರಮ ಮತ್ತು ಈಗಾಗಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು, ವ್ಯಕ್ತಿಗಳು ಯಾವುದೇ ಬಗೆಯ ದ್ವಿಚಕ್ರ ವಾಹನ, ಬೈಕ್ ಇತ್ಯಾದಿ ಹಾಗೂ ಇತರೆ ವಾಹನಗಳ ಮೂಲಕ ರ್ಯಾಲಿ, ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವುದನ್ನು ಸೆಪ್ಟೆಂಬರ್ 5ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 7ರ ಸಂಜೆ 6 ಗಂಟೆಯವರೆಗೆ ಜಿಲ್ಲಾದ್ಯಂತ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.

   

ಅನುಮತಿ ಮೀರಿ ರ್ಯಾಲಿ ತೆರಳುವವರ ವಿರುದ್ಧ ಕಾನೂನು ಕ್ರಮ: ಮೀನಾ

ಚಾಮರಾಜನಗರ, ಸೆ05- ಜಿಲ್ಲಾಧಿಕಾರಿಯವರು ವಾಹನಗಳ ಮೂಲಕ ರ್ಯಾಲಿ, ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ-ಸಮಾರಂಭ ಕುರಿತು ಹೊರಡಿಸಿರುವ ಆದೇಶ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ನಿರಾಕರಿಸಲಾಗಿರುವ ಅನುಮತಿಯನ್ನು ಮೀರಿ ಯಾರಾದರೂ ರ್ಯಾಲಿ ತೆರಳಲು ಪ್ರಯತ್ನಿಸಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 7ರಂದು ಬಿ.ಜೆ.ಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಯ ಸಂಬಂಧ ಚಾಮರಾಜನಗರ ಜಿಲ್ಲಾ ಬಿ.ಜೆ.ಪಿ ಯುವ ಮೋರ್ಚಾವು ಸೆಪ್ಟೆಂಬರ್ 6ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ತೆರಳಲು ಕೋರಿದ್ದ ಅನುಮತಿಯನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಾಕರಿಸಲಾಗಿದೆ.
ಸೆಪ್ಟೆಂಬರ್ 6ರ ಚಾಮರಾಜನಗರ ಪಟ್ಟಣದ ಶ್ರೀ ವಿದ್ಯಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಕಾರ್ಯಕ್ರಮ ಮತ್ತು ಈಗಾಗಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು, ವ್ಯಕ್ತಿಗಳು ಯಾವುದೇ ಬಗೆಯ ದ್ವಿಚಕ್ರ ವಾಹನ, ಬೈಕ್ ಇತ್ಯಾದಿ ಹಾಗೂ ಇತರೆ ವಾಹನಗಳ ಮೂಲಕ ರ್ಯಾಲಿ, ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವುದನ್ನು ಸೆಪ್ಟೆಂಬರ್ 5ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 7ರ ಸಂಜೆ 6 ಗಂಟೆಯವರೆಗೆ ಜಿಲ್ಲಾದ್ಯಂತ ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಯವರ ಅದೇಶ ಹಾಗೂ ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ನಿರಾಕರಿಸಲಾಗಿರುವ ಅನುಮತಿಯನ್ನು ಮೀರಿ ಯಾರಾದರೂ ರ್ಯಾಲಿ ತೆರಳಲು ಪ್ರಯತ್ನಿಸಿದಲ್ಲಿ ಅಂತಹವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.


ಸೆ. 6ರಂದು ಯಳಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

ಚಾಮರಾಜನಗರ, ಸೆ. 05 - ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಸೆಪ್ಟೆಂಬರ್ 6ರಂದು ಬೆಳಿಗ್ಗೆ 10.30 ಗಂಟೆಗೆ ಯಳಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದೆ.
ಶಾಸಕರಾದ ಎಸ್. ಜಯಣ್ಣ ಕ್ರೀಡಾಕೂಟ ಉದ್ಘಾಟಿಸುವರು. ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ನಿಂಗರಾಜು ಅಧ್ಯಕ್ಷತೆ ವಹಿಸುವರು.
ತಾಲೂಕು ಪಂಚಾಯಿತಿ ಅಧ್ಯಕ್ಷರಾದ ನಂಜುಂಡಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದÀ ಜೆ. ಯೋಗೇಶ್, ಎನ್. ಉಮಾವತಿ, ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ವೈ.ಎಸ್. ಭೀಮಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪದ್ಮಾವತಿ, ಪಟ್ಟಣ ಪಂಚಾಯಿತಿ ಸದಸ್ಯರಾದ ನಾಗರತ್ನಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 9, 10ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಚಾಮರಾಜನಗರ, ಸೆ. 05 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 9 ಹಾಗೂ 10ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಪುರುಷರ ವಿಭಾಗದಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ. ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 4*400 ಮೀ. ರಿಲೇ ಸ್ಪರ್ಧೆಗಳಿವೆÉ.
ಮಹಿಳೆಯರ ವಿಭಾಗದಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ. ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 4*400 ಮೀ. ರಿಲೇ, ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಿವೆ.
ಗುಂಪು ಆಟಗಳಲ್ಲಿ ವಾಲಿಬಾಲ್, ಕಬ್ಬಡಿ, ಖೋಖೋ, ಫುಟ್ ಬಾಲ್ (ಪುರುಷರಿಗೆ), ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಬ್ಯಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್ ಸ್ಪರ್ಧೆಗಳಿವೆ. ಜಿಲ್ಲಾಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ವಿಭಾಗಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಲಿದ್ದಾರೆ. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.
ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಡಿತರ ಚೀಟಿ, ವಾಹನ ಪರವಾನಗಿ, ಮತದಾರರ ಗುರುತಿನ ಚೀಟಿ ಪೈಕಿ ಯಾವುದಾದರೂ ಒಂದನ್ನು ತರಬೇಕು. 2 ಭಾವಚಿತ್ರ ಹಾಜರುಪಡಿಸಿ ಗುರುತಿನ ಚೀಟಿ ಪಡೆದುಕೊಳ್ಳಬೇಕು. ಆಯಾ ದಿನಾಂಕದಂದು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ವಿಭಾಗಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆಯಾ ದಿನಾಂಕದಂದು ಭಾಗವಹಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥವಾ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9611172984, 9482718278, 9880211027, 9945615695 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸೆ. 7ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ : ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಚಾಮರಾಜನಗರ, ಸೆ. 05 - ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಆಯ್ಕೆಯಾಗಿರುವ ಶಿಕ್ಷಕರಿಗೆ ಸೆಪ್ಟೆಂಬರ್ 7ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಾಥಮಿಕ ಶಾಲಾ ವಿಭಾಗ: ಚಾಮರಾಜನಗರ ತಾಲೂಕಿನ ವೆಂಕಟಮಾದೇಗೌಡ, ಪ್ರಬಾರ ಮುಖ್ಯ ಶಿಕ್ಷಕ, ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ, ರಾಮಸಮುದ್ರ-ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಂ. ಮುರುಗೇಶ, ಕೊಳ್ಳೇಗಾಲ ವಲಯದ ಗೊಬ್ಬಳೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಬಿ. ಶಾಂತಮೂರ್ತಿ, ಹನೂರು ವಲಯದ ದೊಡ್ಡಮಾಲಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಸೋಮಣ್ಣ ಹಾಗೂ ಯಳಂದೂರು ತಾಲೂಕಿನ ಮದ್ದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಅರುಣಕುಮಾರಿ ಎಂ ಆಯ್ಕೆಯಾಗಿದ್ದಾರೆ.
ಪ್ರೌಢ ಶಾಲಾ ವಿಭಾಗ: ಚಾಮರಾಜನಗರ ತಾಲೂಕಿನ ಹರದನಹಳ್ಳಿ  ಸರ್ಕಾರಿ  ಶಾಲೆಯ ಸಹಶಿಕ್ಷಕರಾದ ವಿ. ನಾಗರಾಜು, ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯ ಬ.ಪು. ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಶಿಕ್ಷಕರಾದ ಬಿ. ಸಿದ್ದರಾಜು, ಕೊಳ್ಳೇಗಾಲ ವಲಯದ ಮುಳ್ಳೂರು ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಉಷಾರಾವ್, ಹನೂರು ವಲಯದ ಕೌದಳ್ಳಿ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಲೂರ್ದು ಸ್ಟಿಫನ್ ಸೆಲ್ವಕುಮಾರ ಹಾಗೂ ಯಳಂದೂರು ತಾಲೂಕಿನ ಗುಂಬಳ್ಳಿ ಸರ್ಕಾರಿ ಪ್ರೌಢ ಶಾಲೆಯ ದೇಹಿಕ ಶಿಕ್ಷಣ ಶಿಕ್ಷಕರಾದ ಮಹದೇವಸ್ವಾಮಿ ಆಯ್ಕೆಯಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರ ಸಂಘಗಳ ನೋಂದಣಿ ರದ್ದು : ಆಕ್ಷೇಪಣೆ, ಅಹವಾಲು ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಸೆ. 05 - ಜಿಲ್ಲೆಯಲ್ಲಿ ಸಹಕಾರ ಸಂಘಗಳು ನೋಂದಣಿಯ ಮೂಲ ಉದ್ದೇಶ ಮತ್ತು ಬೈಲಾದಡಿ ನಿಯಮಾನುಸಾರ  ಕೆಲ ಸಹಕಾರ ಸಂಘಗಳು ಕಾರ್ಯ ನಿರ್ವಹಿಸದೇ ಉದ್ದೇಶಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು ಯಾವುದೇ ಚಟುವಟಿಕೆಗಳನ್ನು ನಡೆಸದÉೀ ನಿಷ್ಕ್ರಿಯವಾಗಿದ್ದು ನೋಂದಣಿ ವಿಳಾಸದಲ್ಲಿ ಅಸ್ವಿತ್ವದಲ್ಲಿ ಇರುವುದಿಲ್ಲವೆಂದು ಕೆಳಕಂಡ ಸಹಕಾರ ಸಂಘಗಳನ್ನು ಗುರುತಿಸಲಾಗಿದೆ.
ಕಾಲೋನಿ 1 ಹಾಗೂ 2ರ ಸಿದ್ದಯ್ಯನಪುರ ಸಂಯುಕ್ತ ಬೇಸಾಯ ಸಹಕಾರ ಸಂಘ ನಿಯಮಿತ, ಕಾಲೋನಿ 3ರ ಮೂಡಹಳ್ಳಿ ಸಂಯುಕ್ತ ಬೇಸಾಯ ಸಹಕಾರ ಸಂಘ ನಿಯಮಿತ, ಹೊಂಗನೂರು 1ರ ಹಿರಿಕೆರೆ ಹಾಗೂ ಹೊಂಗನೂರು 2ರ ಬೆಲ್ಲದ ಸಾನಿಕೆರೆ ಸಣ್ಣ ನೀರಾವರಿ ನೀರು ಬಳಕೆದಾರರ ಸಹಕಾರ ಸಂಘ ನಿಯಮಿತ, ಪುಣಜನೂರು ಹಾಗೂ ಕೆರೆಹಳ್ಳಿ ಸಣ್ಣ ನೀರಾವರಿ ನೀರು ಬಳಕೆದಾರರ ಸಹಕಾರ ಸಂಘ ನಿಯಮಿತ, ಚಾಮರಾಜನಗರ ತಾಲೂಕು ಕುಂಬಾರರ ಕುಶಲ ಕೈಗಾರಿಕಾ ಸಹಕಾರ ಸಂಘ ನಿಯಮಿತ, ನಗರದ ಶ್ರೀ ಚಾಮರಾಜೇಶ್ವರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಸ್ಪೂರ್ತಿ ಹಾಗೂ ನಂದಿನಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಚರ್ಮ ಹದ ಮಾಡುವವರ ಮತ್ತು ಮೋಚಿ ಕುಶಲ ಸಹಕಾರ ಸಂಘ ನಿಯಮಿತ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಗ್ರಾನೈಟ್ ಸಹಕಾರ ಸಂಘ ನಿಯಮಿತ, ಭಾರತೀಯ ಪ್ರವಾಸೋದ್ಯಮ ಸಹಕಾರ ಸಂಘ ನಿಯಮಿತ, ಕೊಳ್ಳೇಗಾಲ ತಾಲೂಕು ಬೀಡಿ ಕಾರ್ಮಿಕರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರೇಷ್ಮೆ ನೂಲು ಬಿಚ್ಚಣಿಕೆದಾರರ ಡಾ. ಬಿ.ಆರ್. ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಅರ್ಜುನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘ, ಪಾಳ್ಯ, ಹರಳೆ ಹಾಗೂ ದೊಡ್ಡಿಂದುವಾಡಿಯ ಮೀನುಗಾರರ ಸಹಕಾರ ಸಂಘ ನಿಯಮಿತವು ನಿಷ್ಕ್ರಿಯಗೊಂಡಿರುವ ಸಂಘಗಳಾಗಿವೆ.
ಈ ಸಂಘಗಳು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತಿರುವುದರಿಂದ ಸಂಘದ ಸದಸ್ಯರಿಗಾಗಲೀ, ಸಾರ್ವಜನಿಕರಿಗಾಗಲೀ ಯಾವುದೇ ಪ್ರಯೋಜನ ಇಲ್ಲವೆಂದು ಪರಿಗಣಿಸಿ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಕಾಯ್ದೆ 1959 ಮತ್ತು ನಿಯಮ 1960ರ ಅಡಿ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಿ ನೋಂದಣÉ ರದ್ದುಗೊಳಿಸಲು ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಆದ್ದರಿಂದ ನಿಷ್ಕ್ರಿಯ ಸಹಕಾರ ಸಂಘಗಳ ಕಾರ್ಯಚಟುವಟಿಕೆಯನ್ನು ಮುಂದುವರೆಸಿಕೊಂಡು ಹೋಗಲು ಆಸಕ್ತಿಯಿದ್ದಲ್ಲಿ ಮತ್ತು ಸಂಘವನ್ನು ಸಮಾಪನೆಗೊಳಿಸಿ ನೋಂದಣಿ ರದ್ದತಿಗೆ ಕ್ರಮ ವಹಿಸುವ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ  15 ದಿವಸದ ಒಳಗೆ ಖುದ್ದಾಗಿ ಅಥವ ಪತ್ರ ಮುಖೇನ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ, ಅಹವಾಲುಗಳು ಸ್ವೀಕೃತವಾಗದಿದ್ದಲ್ಲಿ ಸಂಘದ ನೋಂದಣಿ ಸಂಖ್ಯೆ ರದ್ದತಿಗೆ ಯಾರಿಂದಲೂ ಯಾವುದೇ ಆಕ್ಷೇಪಣೆಗಳು ಇಲ್ಲವೆಂದು ಹಾಗೂ ಪುನಶ್ಚೇತನಕ್ಕೆ ಯಾವ ಸದಸ್ಯರಿಗÀೂ ಆಸಕ್ತಿ ಇಲ್ಲವೆಂದು ಪರಿಗಣಿಸಿ ಸಂಘದ ನೋಂದಣಿ ಸಂಖ್ಯೆ ರದ್ದತಿಗೆ ಸಕ್ಷಮ ಪ್ರಾಧಿಕಾರದಿಂದ ಕ್ರಮ ವಹಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.













No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು