Thursday, 7 September 2017

ಮಹದೇಶ್ವರ ಬೆಟ್ಟಕ್ಕೆ ಸಣ್ಣಕೈಗಾರಿಕೆ, ಸಕ್ಕರೆ ಸಚಿವರ ಭೇಟಿ (06-09-2017) ಮಹದೇಶ್ವರ ಬೆಟ್ಟಕ್ಕೆ ಸಣ್ಣಕೈಗಾರಿಕೆ, ಸಕ್ಕರೆ ಸಚಿವರ ಭೇಟಿ ( 06-09-2017)

                                                           
                                                           

ಮಹದೇಶ್ವರ ಬೆಟ್ಟಕ್ಕೆ ಸಣ್ಣಕೈಗಾರಿಕೆ, ಸಕ್ಕರೆ ಸಚಿವರ ಭೇಟಿ


ಚಾಮರಾಜನಗರ, ಸೆ. 06- ಸಣ್ಣ ಕೈಗಾರಿಕೆ ಹಾಗೂ ಸಕ್ಕರೆ ಖಾತೆಯ ನೂತನ ಸಚಿವರಾದ ಡಾ.ಎಂ.ಸಿ.ಮೋಹನಕುಮಾರಿ ಉರುಫ್ ಗೀತಾ ಅವರು ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ದ ಯಾತ್ರಾಕ್ಷೇತ್ರ ಮಹದೇಶ್ವರ ಬೆಟ್ಟಕ್ಕೆ ಇಂದು ಭೇಟಿ ನೀಡಿದ್ದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಸಚಿವರು ಮಲೈಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ  ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಶಾಸಕಿಯಾದ ಬಳಿಕ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೆ. ಸಚಿವರಾದ ಬಳಿಕ ಮೊದಲಬಾರಿಗೆ ಮಹದೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲು ಬಂದಿರುವುದಾಗಿ ಸಚಿವರು ತಿಳಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಉಸ್ತುವಾರಿ ಸಚಿವರಾಗಿದ್ದ ಹೆಚ್.ಎಸ್.ಮಹದೇವಪ್ರಸಾದ್ ಅವರ ಅವಧಿಯಲ್ಲಿ ಆರಂಭವಾಗಿದ್ದ ಮಹದೇಶ್ವರ ಬೆಟ್ಟದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಅನೇಕ ಭಕ್ತಾಧಿಕಗಳಿಗೆ ಅನುಕೂಲ ಕಲ್ಪಿಸುವ ಕೆಲಸಗಳು ನಡೆಯುತ್ತಿವೆ ಎಂದರು.
ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಲವಾರು ಅಭಿವೃದ್ಧಿ ಕಾಮಗಾರಿಗಳು ಮುಂದುವರೆದಿದೆ. ಈ ಪೈಕಿ ಕೆಲ ಕಾಮಗಾರಿಗಳು ನವಂಬರ್ ವೇಳೆಗೆ ಪೂರ್ಣವಾಗಲಿದೆ ಎಂದು ಮಾಹಿತಿ ನೀಡಿದರು.
ವಾಣಿಜ್ಯ ಸಂಕೀರ್ಣ ಸಮುಚ್ಛಯ ನಿರ್ಮಾಣವಾಗಲಿದೆ. ಕಲ್ಯಾಣಿ ನಿರ್ಮಾಣ ಕೆಲಸವು ನಡೆಯುತ್ತಿದೆ. ವಸತಿಗೃಹ ಸೇರಿದಂತೆ ಇತರೆ ಕೆಲಸಗಳನ್ನು ಕೈಗೊಂಡು ಭಕ್ತಾಧಿಗಳ ಸೌಕರ್ಯಕ್ಕಾಗಿ ಕಲ್ಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ವಿಶೇಷವಾಗಿ ಮಹದೇಶ್ವರರ ಪ್ರತಿಮೆಯು 100ಕ್ಕೂ ಹೆಚ್ಚು ಅಡಿಯಲ್ಲಿ ನಿರ್ಮಾಣವಾಗಲಿದ್ದು ಇದಕ್ಕಾಗಿ ಟೆಂಡರ್ ಪ್ರಕ್ರೀಯೆ ಆಗಿದೆ. ಮುರುಡೇಶ್ವರ, ಕೂಡಲಸಂಗಮದಲ್ಲಿ ಪ್ರತಿಮೆ ನಿರ್ಮಾಣ ಮಾಡಿರುವ ಹೆಸರಾಂತ ಕಂಪನಿ ಪ್ರತಿಮೆ ನಿರ್ವಹಣೆ ಹೊತ್ತಿದೆ. ಅತ್ಯಂತ ವಿಶಿಷ್ಟವಾಗಿ ಪ್ರತಿಮೆ ಮೂಡಿಬರಲಿದೆ ಎಂದರು.
ಕಾಡಾ ಅಧ್ಯಕ್ಷರಾದ ಹೆಚ್.ಎಸ್.ನಂಜಪ್ಪ, ಹಾಲು ಒಕ್ಕೂಟ ಮಹಾಮಂಡಳಿಯ ನಿದೇರ್ಶಕರಾದ ಹೆಚ್.ಎಸ್.ನಂಜುಂಡಪ್ರಸಾದ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.
          ಸೆ.7 ರಂದು ನಗರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಚಾಮರಾಜನಗರ, ಸೆ. 06 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಉದ್ಘಾಟನೆ ನೆರವೇರಿಸುವರು. ಸಕ್ಕರೆ ಮತ್ತು ಸಣ್ಣಕೈಗಾರಿಕೆ ಸಚಿವರಾದ ಡಾ.ಎಂ.ಸಿ.ಮೋಹನಕುಮಾರಿ ಉರುಫ್ ಗೀತಾ ಅವರು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವರು. ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಅನಾವರಣ ಮಾಡುವರು.
ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು(ಸಂದೇಶ್ ನಾಗರಾಜು) ಆರ್.ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಆರ್.ಎಂ.ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್.ದಯಾನಿಧಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಡಯಟ್ ಪ್ರಭಾರ ಪ್ರಾಂಶುಪಾಲರಾದ ಎಂ.ಕಾಶೀನಾಥ್ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
                            

      ಸೆ. 7 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ

ಚಾಮರಾಜನಗರ, ಸೆ. 06 - ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಪಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.8 ರಂದು ಚಿಕ್ಕಾಟಿಯಲ್ಲಿ ಕನಕ ಸಮುದಾಯ ಭವನ ಉದ್ಘಾಟನೆ, ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಗುದ್ದಲಿ ಪೂಜೆ
ಚಾಮರಾಜನಗರ, ಸೆ. 06 - ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕನಕ ಸಮುದಾಯ ಭವನ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮವು ಸೆಪ್ಪಂಬರ್ 8 ರಂದು ಬೆಳಗ್ಗೆ 11 ಗಂಟೆಗೆ ಗುಂಡ್ಲುಪೇಟೆ ತಾಲೂಕು ಚಿಕ್ಕಾಟಿ ಗ್ರಾಮದ ಶಾಲಾ ಆವರಣದಲ್ಲಿ ನಡೆಯಲಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಉದ್ಘಾಟನೆ ನೆರವೇರಿಸುವರು. ಸಾರಿಗೆ ಸಚಿವರಾದ ಹೆಚ್.ಎಂ.ರೇವಣ್ಣ ಜ್ಯೋತಿ ಬೆಳಗಿಸುವರು. ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ ಉರುಫ್ ಗೀತಾಮಹದೇವಪ್ರಸದ್ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎಸ್.ಜಯಣ್ಣ, ಆರ್.ಧರ್ಮಸೇನ,  ಕಾಡಾ ಅಧ್ಯಕ್ಷರಾದ ಹೆಚ್.ಎಸ್.ನಂಜಪ್ಪ, ಕನಿಷ್ಠವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಹಾಲು ಒಕ್ಕೂಟ ಮಹಾಮಂಡಳಿಯ ನಿರ್ದೇಶಕರಾದ ಹೆಚ್.ಎಸ್.ನಂಜುಂಡಪ್ರಸಾದ್, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ಚಾಮರಾಜನಗರ ಹಾಲು ಒಕ್ಕೂಟ ನಿರ್ದೇಶಕರಾದ ಡಿ.ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಎನ್.ನಟೇಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸುಮಿತ್ರ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕವಿತಾ, ಉಪಾಧ್ಯಕ್ಷರಾದ ಶಿವಮ್ಮ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ.ಎಂ.ಮುನಿರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರೆಂದು ಪ್ರಕಟಣೆ ತಿಳಿಸಿದೆ.

ಸೆ.7 ರಂದು ನಗರದಲ್ಲಿ ಪ್ರಧಾನ ಮಂತ್ರಿಗಳ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟನೆ

ಚಾಮರಾಜನಗರ, ಸೆ. 06 - ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ ಉದ್ಘಾಟನೆಯು ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಕಟ್ಟಡದ ಎಸ್.ಎನ್.ಆರ್ಕೆಡ್‍ನಲ್ಲಿ ಸೆಪ್ಪಂಬರ್ರ 7 ರಂದು ಬೆಳಗ್ಗೆ 10.30 ಗಂಟೆಗೆ  ನಡೆಯಲಿದೆ.
ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ತರಬೇತಿ ಪಾಲುದಾರ ಸಂಸ್ಥೆಯಾದ ಎಕ್ಸಿಲುಸ್ ಲರ್ನಿಂಗ್ ಸಲ್ಯೂಶನ್ ಸಂಸ್ಥೆ ಸಹಯೋಗದಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಆರಂಭವಾಗಲಿದೆ.
ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಕೇಂದ್ರವನ್ನು ಉದ್ಘಾಟಿಸುವರು. ಸಣ್ಣ ಕೈಗಾರಿಕೆ ಹಾಗೂ ಸಕ್ಕರೆ ಸಚಿವರಾದ ಡಾ.ಎಂ.ಸಿ.ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ,್ರ ಎಸ್.ಜಯಣ್ಣ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್.ಮಳವಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಡಿ.ಎಲ್.ಒ. ವಿನುತ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ರಮೇಶ್ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 7 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಸೆ. 06- ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಸೆಪ್ಪಂಬರ್ 7 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 9 ಗಂಟೆಗೆ ನಗರಕ್ಕೆ ಆಗಮಿಸುವರು. ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆಯಲ್ಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ.ಎಂ.ಎಸ್.ಮಂಜುನಾಥ್ ತಿಳಿಸಿದ್ದಾರೆ.
ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ : ಸಂಸದ ಧ್ರುವನಾರಾಯಣ ಅವರಿಂದ ಸಂತಾಪ
ಚಾಮರಾಜನಗರ, ಸೆ. 06 - ಸಾಮಾಜಿಕ ಚಿಂತಕರು ವಿಚಾರವಾದಿ ಹೋರಾಟಗಾರ್ತಿ ಹಿರಿಯ ಪತ್ರಕರ್ತರಾದ ಗೌರಿಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಬಗ್ಗೆ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಸಮಾನತೆ, ಕೋಮು ಸೌರ್ಹಾದ ಹಾಗೂ ಮಾನವೀಯ ಮೌಲ್ಯಗಳ ಪರ ಹೋರಾಟ ಮನೋಭಾವ ಉಳ್ಳವರಾಗಿದ್ದ ಗೌರಿಲಂಕೇಶ್ ಅವರನ್ನು ಕಳೆದುಕೊಂಡಿರುವುದು ನಾಡಿಗೆ ತುಂಬಲಾರದ ನಷ್ಟವಾಗಿದೆ. ಗೌರಿಲಂಕೇಶ್‍ರ ಅಗಲಿಕೆಯಿಂದ ಅವರ ಕುಟುಂಬ ಅಪಾರ ಬಂಧುಮಿತ್ರರಿಗೆ ಉಂಟಾಗಿರುವ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಧ್ರುವನಾರಾಯಣರವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸೆ. 7 ರಂದು ಚಾ.ನಗರ ಸಾಮಾನ್ಯ ಸಭೆ

ಚಾಮರಾಜನಗರ, ಸೆ. 06 - ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಪ್ರಭಾರ ಅಧ್ಯಕ್ಷರಾದ ಆರ್.ಎಂ.ರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಪಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ರಾಜಣ್ಣ ತಿಳಿಸಿದ್ದಾರೆ.

ಸೆ. 8 ರಂದು ಪ.ಜಾ.ಪ.ಪಂ.ಕೃಷಿಕರಿಗೆ ಕೃಷಿ ಇಲಾಖೆ ಯೋಜನೆ ಅರಿವು ಕಾರ್ಯಕ್ರಮ

ಚಾಮರಾಜನಗರ, ಸೆ. 06- ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ವಿಶೇಷವಾಗಿ ಪರಿಶಿಷ್ಟ ಜಾತಿ ಪರಿಶಿಷ್ಠಪಂಗಡದ ಕೃಷಿಕರಿಗೆ ಕೃಷಿ ಇಲಾಖೆ ಯೋಜನೆಗಳ ಅರಿವು ಹಾಗೂ ಮಹಾತ್ಮಗಾಂಧಿ ಕೃಷಿ ಉದ್ಯೋಗ ಖಾತ್ರಿ ಅಭಿಯಾನ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ  ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೆಪ್ಪಂಬರ್ 8 ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು