ಚಾಮರಾಜನಗರ, ಸೆ. 08 - ಚಾಮರಾಜನಗರ ಪಟ್ಟಣದ ಪರಿಮಿತಿಯಲ್ಲಿ 300.750 ರಿಂದ 305.180 ಕಿ.ಮೀ.ರವರೆಗೆ ಸಂತೆಮರಹಳ್ಳಿ ವೃತ್ತದಿಂದ ಭುವನೇಶ್ವರಿ (ಪಚ್ಚಪ್ಪ) ವೃತ್ತದವರೆಗೆ ರಸ್ತೆ ಕಾಮಗಾರಿ ನಿರ್ವಹಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಕೊಳ್ಳೇಗಾಲ, ಟಿ.ನರಸೀಪುರ, ಸಂತೆಮರಹಳ್ಳಿ ಮಾರ್ಗದಿಂದ ಬರುವ ಭಾರಿ ಗೂಡ್ಸ್ ವಾಹನಗಳು ಚಾಮರಾಜನಗರ ಪಟ್ಟಣದ ಸಂತೆಮರಹಳ್ಳಿ ವೃತ್ತದಿಂದ ಪಾಲಿಟೆಕ್ನಿಕ್ ಬೈಪಾಸ್ ರಸ್ತೆ, ಗುಂಡ್ಲುಪೇಟೆ ರಸ್ತೆ ಮಾರ್ಗವಾಗಿ ಗುಂಡ್ಲುಪೇಟೆ ವೃತ್ತ, ಷರೀಫ್ ವೃತ್ತ ನಂತರ ಸತ್ಯಮಂಗಲದ ಕಡೆ ಸಂಚರಿಸಬೇಕಿದೆ. ಖಾಸಗಿ ಸರ್ಕಾರಿ ಬಸ್ಸುಗಳು ಲಘು ಖಾಸಗಿ ವಾಹನಗಳು 4 ಚಕ್ರದ ವಾಹನಗಳು, ಸ್ಕೂಟರ್ ಸವಾರರು ಸಂತೆಮರಹಳ್ಳಿ ವೃತ್ತ, ಎಲ್ ಐಸಿ ವೃತ್ತ, ಖಾಸಗಿ ಬಸ್ ನಿಲ್ದಾಣ, ಆರ್‍ಟಿಓ ಕಚೇರಿ, ಗುಂಡ್ಲುಪೇಟೆ ವೃತ್ತ ಷರೀಫ್ ವೃತ್ತ ಮಾರ್ಗವಾಗಿ ಸಂಚರಿಸಬೇಕಿದೆ.
ಬಿಳಿಗಿರಿರಂಗನಬೆಟ್ಟ, ಚಂದಕವಾಡಿ, ರಾಮಸಮುದ್ರ ಕಡೆಯಿಂದ ಬರುವ ಭಾರಿ ಹಾಗೂ ಲಘುವಾಹನ ಹಾಗೂ ಇನ್ನಿತರ ವಾಹನಗಳು ಭೂವನೇಶ್ವರಿ ವೃತ್ತ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಷರೀಫ್ ವೃತ್ತ, ಗುಂಡ್ಲುಪೇಟೆ ವೃತ್ತ ಬೈಪಾಸ್ ರಸ್ತೆ ಕಡೆಯಿಂದ ಸಂಚರಿಸಬೇಕಿದೆ.ತಮಿಳುನಾಡಿನಿಂದ ಬರುವ ವಾಹನಗಳು ಷರೀಫ್ ವೃತ್ತ, ಗುಂಡ್ಲುಪೇಟೆ ವೃತ್ತ, ಬೈಪಾಸ್ ರಸ್ತೆ ಮುಖಾಂತರ ಗುಂಡ್ಲುಪೇಟೆ, ಮೈಸೂರು ಹಾಗೂ ಟಿ. ನರಸೀಪುರ ಕಡೆ ಸಂಚರಿಸಬೇಕಿದೆ. ನಂಜನಗೂಡು ಕಡೆಯಿಂದ ಬರುವ ಭಾರಿ ವಾಹನಗಳು ಬೈಪಾಸ್ ರಸ್ತೆಯಿಂದ ಗುಂಡ್ಲುಪೇಟೆ ರಸ್ತೆ, ಗುಂಡ್ಲುಪೇಟೆ ವೃತ್ತ, ಷರೀಫ್ ವೃತ್ತ ಕಡೆಗೆ ಬರಬೇಕಿದೆ. ಲಘು ವಾಹನಗಳು ಎಲ್‍ಐಸಿ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬೇಕಿದೆ.
ರಸ್ತೆ ಕಾಮಗಾರಿ ಮುಗಿಯುವವರೆಗೆ ಸೂಚಿತ ಬದಲಿ ಮಾರ್ಗಗಳಲ್ಲಿ ವಾಹನಗಳು ಸಂಚರಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲ ರಸ್ತೆ ಕಾಮಗಾರಿ : ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಡಿಸಿ ಆದೇಶ
ಚಾಮರಾಜನಗರ, ಸೆ. 08 - ಕೊಳ್ಳೇಗಾಲ ನಗರ ಪರಿಮಿತಿಯಲ್ಲಿ ಕಿ.ಮೀ. 336.260 ರಿಂದ ಕಿ.ಮೀ. 344.600ರವರೆಗೆ ಅಂದರೆ ಅಚ್ಗಾಳ್ ವೃತ್ತದಿಂದ ಐಬಿ ವೃತ್ತದವರೆಗೆ ರಸ್ತೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಆದೇಶಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.ಎಡಿವಿ ವೃತ್ತದಿಂದ ಬೆಂಗಳೂರು ಸರ್ಕಲ್‍ನÀ ಪಟ್ಟಣ ಠಾಣೆ ಮುಂಭಾಗದಿಂದ ತೆರಳಿ ಮಸೀದಿ ವೃತ್ತಕ್ಕೆ ಪ್ರವೇಶಿಸಿ ಡಾ. ರಾಜ್ ಕುಮಾರ್ ರಸ್ತೆ ಹಾಗೂ ಜಯ ಇನ್ಸ್‍ಟ್ಯೂಟ್ ರಸ್ತೆಯ ಮೂಲಕ ಪ್ರಶಾಂತಿ ಲಾಡ್ಜ್ ಹತ್ತಿರ ಎಡಕ್ಕೆ ತಿರುಗಿ ಬಸ್ ನಿಲ್ದಾಣವನ್ನು ಪ್ರವೇಶಿಸಬೇಕು.
ಹೊರ ಹೋಗುವ ವಾಹನಗಳು ಗಣಪತಿ ದೇವಸ್ಥಾನದಿಂದ ಎಬಿಎಂ ರಸ್ತೆಯ ಮೂಲಕ ಡಾ. ರಾಜ್ ಕುಮಾರ್ ರಸ್ತೆಯ ಮುಖಾಂತರ ಮಸೀದಿ ವೃತ್ತಕ್ಕೆ ಬಂದು ಕನ್ನಿಕಾಪರಮೇಶ್ವರಿ ವೃತ್ತದಲ್ಲಿ ಬಲಕ್ಕೆ ತಿರುಗಿ ಎಸ್‍ಡಿಎ ಶಾಲೆಯ ರಸ್ತೆಯ ಮುಂಭಾಗದಿಂದ ಬೆಂಗಳೂರು ರಸ್ತೆ ತಲುಪಬೇಕು.
ಭಾರಿ, ಲಘು ಹಾಗೂ ಎಲ್ಲಾ ರೀತಿಯ ವಾಹನಗಳು ರಸ್ತೆ ಕಾಮಗಾರಿ ಮುಗಿಯುವವರೆಗೆ ಸೂಚಿತ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸೆ. 9ರಂದು ನಗರದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಸೆ. 08 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 9ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಜ್ಯೋತಿ ಬೆಳಗಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸದಸ್ಯರಾದ ಎಂ. ರಾಜಶೇಖರಮೂರ್ತಿ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಸೆ. 11ರಂದು ರಾಷ್ಟ್ರೀಯ ಅರÀಣ್ಯ ಹುತಾತ್ಮರ ದಿನಾಚರಣೆ
ಚಾಮರಾಜನಗರ, ಸೆ. 08 :- ಅರಣ್ಯ ಇಲಾಖೆಯ ಬಿಆರ್‍ಟಿ ಹುಲಿ ಸಂರಕ್ಷಿತ ವಿಭಾಗವು ಸೆಪ್ಟೆಂಬರ್ 11ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸಸ್ಯಕ್ಷೇತ್ರದ ಅರಣ್ಯ ಹುತಾತ್ಮರ ಸ್ಮಾರಕ ಕೇಂದ್ರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಿದೆ.ಪ್ರಾದೇಶಿಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಲಾಲ್ ಮೀನಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಸೆ. 12ರಂದು ವಿಶ್ವ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆ
ಚಾಮರಾಜನಗರ, ಸೆ. 08 - ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು ಈ ಸಂಬಂಧ ಸೆಪ್ಟೆಂಬರ್ 12ರಂದು ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
60 ವರ್ಷಕ್ಕೂ ಮೇಲ್ಪಟ್ಟ ಹಿರಿಯ ಆಸಕ್ತ ನಾಗರಿಕರು ತಮ್ಮ ಹೆಸರನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ (ದೂ.ಸಂ. 08226-223688) ಅಥವಾ ನಗರದ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ (ದೂ.ಸಂ. 08226-222030) ನೊಂದಾಯಿಸಿಕೊಳ್ಳುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.
ಯಳಂದೂರು : ತರಬೇತಿ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 08- ಯಳಂದೂರು ಪಟ್ಟಣ ಪಂಚಾಯಿತಿಯು 2017-18ನೇ ಸಾಲಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದ ಉಪಯೋಜನೆಗಳಾದ ಇಎಸ್‍ಟಿ ಅಂಡ್ ಪಿ ಮತ್ತು ಎಸ್‍ಇಪಿ ಕಾರ್ಯಕ್ರಮಗಳಡಿ ಲಘುವಾಹನ ಚಾಲನಾ ತರಬೇತಿ, ಟೈಲರಿಂಗ್ ತರಬೇತಿ ಹಾಗೂ ಸ್ವಯಂ ಉದ್ಯೋಗದಡಿ ಸಣ್ಣ ಉದ್ದಿಮೆ ಸ್ಥಾಪಿಸಲು ಸಹಾಯಧನದೊಂದಿಗೆ ಸಾಲಸೌಲಭ್ಯ ಕಲ್ಪಿಸಿಕೊಡಲಿದೆ.ಫಲಾನುಭವಿಗಳಿಗೆ ಶೇ.7ಕ್ಕಿಂತ ಮೇಲ್ಪಟ್ಟ ಬಡ್ಡಿ ಸಹಾಯಧನದೊಂದಿಗೆ ಸೌಲಭ್ಯ ದೊರೆಯಲಿದ್ದು 18ರಿಂದ 45ರ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ಸಮುದಾಯ ಸಂಘಟಕರನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಎಸ್. ಉಮಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗೆ ಸಂಪರ್ಕಿಸಿ
ಚಾಮರಾಜನಗರ, ಸೆ. 08 - ಹರದನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪರಿಶಿಷ್ಟ ವರ್ಗ) ಇಲ್ಲಿಗೆ 2017-18ನೇ ಸಾಲಿಗೆ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ (ಬಿಎಸ್ಸಿ, ಬಿಎಡ್) ಅಥವಾ ತತ್ಸಮಾನ ಖಾಲಿ ಇದ್ದು ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳಲಾಗುವುದು.ಅರ್ಹರು ಶೀಘ್ರವಾಗಿ ಖುದ್ದಾಗಿ ಶಾಲಾ ಕಚೇರಿ (ಮೊ.9448067272)ಯನ್ನು ಸಂಪರ್ಕಿಸುವಂತೆ ವಸತಿ ಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತ್ಯುತ್ತಮ ಯುವಸಂಘ, ಯುವತಿ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 08:- ನಗರದ ನೆಹರು ಯುವ ಕೇಂದ್ರವು ಜಿಲ್ಲೆಯ ಯುವಜನರನ್ನು ವಿವಿಧ ಸಾಮಾಜಿಕ, ಶೈಕ್ಷಣಿಕ, ಪರಿಸರ ಸಂರಕ್ಷಣೆ, ಆರೋಗ್ಯ ಹಾಗೂ ಇನ್ನಿತರೆ ಚಟುವಟಿಕೆಗಳಿಗಾಗಿ ಸಂಘಟಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ಯುವ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಒಂದು ಯುವ ಸಂಘಟನೆ, ಯುವತಿ ಮಂಡಳಿಗೆ ಪ್ರಶಸ್ತಿ ನೀಡಲಿದ್ದು ಅರ್ಜಿ ಆಹ್ವಾನಿಸಿದೆ.ಯುವಕ ಯುವತಿ ಮಂಡಳಿಯು ಯುವಜನ ಚಟುವಟಿಕೆ, ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮ, ಸಮುದಾಯ ಅಭಿವೃದ್ಧಿ, ಸಮಾಜ ಸೇವೆ, ಜಾಗೃತಿ ಕಾರ್ಯಕ್ರಮದ ಶಿಬಿರಗಳು, ವಿವಿಧ ರಾಷ್ಟ್ರೀಯ, ಅಂತರಾಷ್ಟ್ರೀಯ ದಿನಾಚರಣೆಗಳು ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಜರುಗಿಸಿದಂತಹವರು ಅರ್ಜಿ ಸಲ್ಲಿಸಬಹುದು.
ಯುವ ಮಂಡಳಿ ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿರುತ್ತದೆ.
ಅರ್ಹ ಆಸಕ್ತ ಯುವ ಸಂಘಟನೆಗಳು, ಮಹಿಳಾ ಮಂಡಳಿಗಳು ಸೆಪ್ಟೆಂಬರ್ 18ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿಗಳ ಕಚೇರಿ (ದೂ.ಸಂ. 08226-222120) ಸÀಂಪರ್ಕಿಸುವಂತೆ ಜಿಲ್ಲಾ ಯುವ ಸಮನ್ವಯಾಧಿಕಾರಿ ಎಸ್. ಸಿದ್ಧರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಮಗ್ಗ ನೇಕಾರರಿಗೆ ಎಲೆಕ್ಟ್ರಾನಿಕ್, ನ್ಯಾಮ್ಯಾಟಿಕ್, ಮೋಟರೈಸ್ಡ್ ಜಕಾರ್ಡ್ ಕಿಟ್ ವಿತರಣೆ : ಅರ್ಜಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಸೆ. - ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ಕೈಮಗ್ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಮಗ್ಗ ನೇಕಾರರಿಗೆ ಕೈಮಗ್ಗ ವಿನ್ಯಾಸಗಳ ಉನ್ನತೀಕರಣಕ್ಕಾಗಿ ವಿವಿಧ ಜಕಾರ್ಡ್ ಕಿಟ್‍ಗಳನ್ನು ಒದಗಿಸಲಿದೆ.
ಶೇ. 50ರ ಸಹಾಯಧನದಲ್ಲಿ ಸಾಮಾನ್ಯ ವರ್ಗದವರಿಗೆ ಹಾಗೂ ಶೇ. 90ರ ಸಹಾಯಧನದಲ್ಲಿ ಪಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಎಲೆಕ್ಟ್ರಾನಿಕ್ ಜಕಾರ್ಡ್, ನ್ಯೂಮ್ಯಾಟಿಕ್ ಜಕಾರ್ಡ್ ಹಾಗೂ ಮೋಟರೈಸ್ಡ್ ಜಕಾರ್ಡ್ ಕಿಟ್‍ಗಳನ್ನು ಒದಗಿಸಲಾಗುವುದು.
ಹಾಲಿ ಕೈಮಗ್ಗ ವೃತ್ತಿಯಲ್ಲಿರುವ ನೇಕಾರರು ಕೈಮಗ್ಗ ವೃತ್ತಿಯಲ್ಲಿ ತೊಡಗಿಕೊಂಡಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಅರ್ಜಿಗಳನ್ನು ಕಚೇರಿಯಿಂದ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿ (ದೂ.ಸಂ. 08226-222883)ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಸೆ. 08 - ಜಿಲ್ಲೆಯ ಚಾಮರಾಜನಗರ ತಾಲೂಕಿಗೆ ಸೆಪ್ಟೆಂಬರ್ 15ರಂದು ಹಾಗೂ ಗುಂಡ್ಲುಪೇಟೆ ತಾಲೂಕಿಗೆ ಸೆಪ್ಟೆಂಬರ್ 16ರಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಹೆಣ್ಣುಮಕ್ಕಳಿಗೆ ಬಾಲ್ಯವಿವಾಹ ಬೇಡ: ಸಚಿವರಾದ ಗೀತಾಮಹದೇವಪ್ರಸಾದ್
ಚಾಮರಾಜನಗರ, ಸೆ. 08 - ಹೆಣ್ಣುಮಕ್ಕಳಿಗೆ ಬಾಲ್ಯ ವಿವಾಹಮಾಡದೇ ಅವರ ಶೈಕಣಿಕ ಅಭಿವೃದ್ಧಿಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕೆಂದು ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾಮಹದೇವಪ್ರಸಾದ್ ಸಲಹೆ ಮಾಡಿದರು.
ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿಂದು ಕನಕ ಸಮುದಾಯ ಭವನ ಉದ್ಘಾಟನೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡುವುದರಿಂದ ಅವರ ಆರೋಗ್ಯ ಮತ್ತು ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಕ್ಕಳನ್ನು ಕಷ್ಟಕ್ಕೆ ದೂಡದೆ ಅವರ ವ್ಯಾಸಂಗಕ್ಕೆ ಹೆಚ್ಚಿನ ಆದ್ಯತೆ ಕೊಡಿ. ಹೆಚ್ಚು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಿದ್ಯಾಸಂಸ್ಥೆಗಳು ಇವೆ. ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರ ಅವಧಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು ಆರಂಭವಾಗಿವೆ. ಗುಂಡ್ಲುಪೇಟೆ ತಾಲೂಕಿನಲ್ಲಿ ಜಿ.ಟಿ.ಟಿ.ಸಿ, ಐ.ಟಿ.ಐ ಕಾಲೇಜು ಸೌಲಭ್ಯವಿದೆ. ಇನ್ನಿತರ ಶಾಲಾಕಾಲೇಜುಗಳು ಸಹ ಇದ್ದು, ವಿದ್ಯಾಬ್ಯಾಸಕ್ಕೆ ಅನುಕೂಲವಾಗಿವೆ. ಈ ಎಲ್ಲ ಸೌಕರ್ಯವನ್ನು ಬಳಸಿಕೊಳ್ಳಬೇಕೆಂದು ಸಚಿವರು ನುಡಿದರು.
ಜಿಲ್ಲೆಯಲ್ಲಿ ವಿವಿಧ ವರ್ಗಗಳ ಜನತೆಗೆ ಅಗತ್ಯವಿರುವ ಸಮುದಾಯ ಭವನಗಳ ನಿಮಾಣ ಕಾರ್ಯ ನಡೆಯುತ್ತಿದೆ. ಒಟ್ಟು 15 ಸಮುದಾಯ ಭವನಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಈ ಎಲ್ಲ ಭವನಗಳ ಕಾಮಗಾರಿ ಕಾಲಮಿತಿಯೊಳಗೆ ಮುಗಿಯಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
ತಾಲೂಕಿನ 131 ಗ್ರಾಮಗಳಿಗೆ ನದಿಮೂಲದಿಂದ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಸೇವೆ ಆರಂಭಿಸಲಾಗಿದೆ. ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರ ಕಾಲದಲ್ಲಿ ಆರಂಭವಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ಸಿಕ್ಕಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ ಅವರು ಜಿಲ್ಲೆ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮಹದೇವಪ್ರಸಾದ್ ಅವರು ಅವಿರತವಾಗಿ ಶ್ರಮಿಸಿದ್ದರು. ನೂತನ ಸಚಿವರಿಗೂ ಎಲ್ಲ ಬಗೆಯ ಸಹಕಾರ ನೀಡಲಿದ್ದು, ಜಿಲ್ಲೆಯ ಬೆಳವಣಿಗೆಗೆ ಪೂರಕವಾಗಿ ಎಲ್ಲರೂ ಸ್ಪಂದಿಸಲಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ.ಎಂ. ಮುನಿರಾಜು, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಹಾಲು ಒಕ್ಕೂಟ ಮಹಾಮಂಡಳಿಯ ನಿರ್ದೇಶಕರಾದ ಎಚ್.ಎಸ್. ನಂಜುಂಡಪ್ರಸಾದ್, ಮುಖಂಡರಾದ ಕೊಡಸೋಗೆ ಶಿವಬಸಪ್ಪ ಮಾತನಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚೆನ್ನಪ್ಪ, ರತ್ನಮ್ಮ, ಹಾಲು ಒಕ್ಕೂಟ ನಿರ್ದೇಶಕರಾದ ಡಿ. ಮಾದಪ್ಪ, ತಾ.ಪಂ. ಸದಸ್ಯರಾದ ಸುಮಿತ್ರಮಹೇಶ್, ಮಧುಶೇಖರ್, ಗ್ರಾಮಪಂಚಾಯಿತಿ ಉಪಾಧ್ಯಕ್ಷರಾದ ಶಿವಮ್ಮ, ಎ.ಪಿ.ಎಂ.ಸಿ ಅಧ್ಯಕ್ಷರಾದ ಮಲ್ಲಣ್ಣ ಇತರರು ಉಪಸ್ಥಿತರಿದ್ದರು.
ಸೆ. 25ರಿಂದ 28ರವರೆಗೆ ಜಿಲ್ಲಾಕೇಂದ್ರದಲ್ಲಿ ದಸರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ, ಸೆ. 08- ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿಯೂ ಸೆಪ್ಟೆಂಬರ್ 25ರಿಂದ 28ರವರೆಗೆ ಒಟ್ಟು 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.ಕಳೆದ ಬಾರಿಯಂತೆ ಈ ಬಾರಿಯೂ ದಸರಾ ಉತ್ಸವ ಕಾರ್ಯಕ್ರಮವನ್ನು ನಗರದ ಚಾಮರಾಜೇಶ್ವರ ದೇವಾಲಯ ಮುಂಭಾಗ ನಡೆಸಲಾಗುತ್ತದೆ. ಪ್ರತಿ ದಿನ ಸಂಜೆಯ ವೇಳೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ದಸರಾ ಉತ್ಸವಕ್ಕೆ ಮೆರುಗು ನೀಡಲಿವೆ.
ದಸರಾ ಕಾರ್ಯಕ್ರಮ ಸುಗಮವಾಗಿ ನಿರ್ವಹಣೆÀಯಾಗಲೂ ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸ್ವಾಗತ ಸಮಿತಿ, ಸಾಂಸ್ಕ್ರತಿಕ ಸಮಿತಿ, ಸ್ಥಳೀಯ ಕಲಾವಿದರು ಹಾಗೂ ರಾಜ್ಯಮಟ್ಟದ ಕಲಾವಿದರ ಆಯ್ಕೆ ಸಮಿತಿ, ಆಹಾರ ಸಮಿತಿ, ವೇದಿಕೆ ನಿರ್ಮಾಣ ಸಮಿತಿ, ಸ್ವಚ್ಚತಾ ಸಮಿತಿ, ಆರೋಗ್ಯ ಸಮಿತಿ, ಸಂಚಾರ ನಿಯಂತ್ರಣ ಮತ್ತು ಭದ್ರತಾ ಸಮಿತಿ ಹಾಗೂ ಪ್ರಚಾರ ಸಮಿತಿಯನ್ನು ಜಿಲ್ಲಾಧಿಕಾರಿಯವರು ರಚಿಸಿದ್ದಾರೆ.
ಸೆಪ್ಟೆಂಬರ್ 25ರಂದು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅಂದಿನಿಂದಲೇ ಕಾರ್ಯಕ್ರಮಗಳು ಆರಂಭವಾಗಲಿವೆ.
ಜಿಲ್ಲಾಧಿಕಾರಿ ಬಿ.ರಾಮು ಅವರು ದಸರಾ ಉತ್ಸವ ಆಚರಣೆ ಸಂಬಂಧ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಕೈಗೊಳ್ಳಬೇಕಿರುವ ಕಾರ್ಯಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಸ್ವಾಗತ ಸಮಿತಿ ಅಧಿಕಾರಿಗಳು ಸುಸೂತ್ರವಾಗಿ ವಹಿಸಿದ ಎಲ್ಲಾ ಕೆಲಸಗಳನ್ನು ನಿಭಾಯಿಸಬೇಕು. ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರ ಪಾಲನೆ, ಗಣ್ಯರ ಬರಮಾಡಿಕೊಳ್ಳುವಿಕೆ ಸೇರಿದಂತೆ ಇತರ ಅಗತ್ಯ ಕೆಲಸಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಾಂಸ್ಕøತಿಕ ಸಮಿತಿಯು ಕಲಾವಿದರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಅಗತ್ಯವಿರುವ ಸಿದ್ಧತೆ ಮಾಡಬೇಕು. ಕಲಾವಿದರ ಆಯ್ಕೆ ಸಮಿತಿಯು ಪಾರದಶರ್Àಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಿ ಸ್ಥಳೀಯ ಹಾಗೂ ರಾಜ್ಯಮಟ್ಟದ ಕಲಾವಿದರ ಆಯ್ಕೆಗೆ ಅವಕಾಶ ಮಾಡಿಕೊಡಬೇಕು. ಯಾವುದೇ ಗೊಂದ¯ಕ್ಕೆ ಆಸ್ಪದ ನೀಡಬಾರದೆಂದು ರಾಮು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವೇದಿಕೆ ನಿಮಾಣ ಸಮಿತಿ ಸದಸ್ಯರು ಕಾರ್ಯಕ್ರಮ ನಡೆಯುವ ಚಾಮರಾಜೇಶ್ವರ ದೇವಾಲಯ ಮುಂಬಾಗದಲ್ಲಿ ವೇದಿಕೆ ಧ್ವನಿವರ್ಧಕ, ವಿದ್ಯುತ್ ಸರಬರಾಜು, ಜನರೇಟರ್, ಶಾಮಿಯಾನ ವ್ಯವಸ್ಥೆ ನೋಡಿಕೊಳ್ಳಬೇಕು. ಸ್ವಚ್ಚತಾ ಸಮಿತಿಯು ಕಾರ್ಯಕ್ರಮ ಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿದಿನ ವಿಶೇಷವಾಗಿ ಸ್ವಚ್ಚತೆ ಕೆಲಸ ಕೈಗೊಳ್ಳಬೇಕು. ಇತರೆ ಸಮಿತಿಗಳು ನಿಗಧಿಪಡಿಸಿರುವ ಜವಾಬ್ದಾರಿಯನ್ನು ಯಾವುದೇ ಲೋಪಕ್ಕೆ ಅವಕಶವಾಗದಂತೆ ನಿಭಾಯಿಸಬೇಕು. ಒಟ್ಟಾರೆ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಲು ಎಲ್ಲಾ ಸಿದ್ಧತೆಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.
ದಸರಾ ಕಾರ್ಯಕ್ರಮಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 08 - ಚಾಮರಾಜನಗರ ದಸರಾ ಮಹೋತ್ಸವ-2017ರ ಅಂಗವಾಗಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದ ಆವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮವನ್ನು ನಡೆಸಲಾಗುವುದು.ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ, ಸುಗಮ, ಜಾನಪದ, ವಾದ್ಯಸಂಗೀತ ಹಾಗೂ ಇನ್ನಿತರ ಸಂಗೀತ ಕಲಾಪ್ರಕಾರಗಳು, ಶಾಸ್ತ್ರೀಯ ನೃತ್ಯ ಪ್ರಕಾರಗಳು, ನೃತ್ಯ ರೂಪಕ ಹಾಗೂ ನೃತ್ಯದ ವಿವಿಧ ಕಲಾಪ್ರಕಾರಗಳಲ್ಲಿ ಅಪಾರ ಅನುಭವವಿರುವ ಕಲಾವಿದರುಗಳು ಅರ್ಜಿ ಸಲ್ಲಿಸಬಹುದು.
ಆಸ್ತಕರು ಸೆಪ್ಟಂಬರ್ 15ರಂದು ಸಂಜೆ 4 ಗಂಟೆಯೊಳಗೆ ಸ್ವ-ವಿವರವುಳ್ಳ ಅರ್ಜಿ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿ ಸಂಖ್ಯೆ 104ಕ್ಕೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-223160 ರಲ್ಲಿ ಈ ಕಚೇರಿಯ ಹರೀಶ್ ಮತ್ತು ಮಹೇಶ್‍ರವರನ್ನು ಸಂಪರ್ಕಿಸುವುದು.
ಅರ್ಜಿಯನ್ನು ಸೆಪ್ಟೆಂಬರ್ 15ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು. ಕಾರ್ಯಕ್ರಮಗಳು ಸಮಯದ ಮಿತಿಗೊಳಪಟ್ಟಿರುತ್ತದೆ. ಅರ್ಜಿಯ ಜೊತೆ ಕಾರ್ಯಕ್ರಮದ ಪೋಟೋ ಮತ್ತು ಸಿಡಿಗಳನ್ನು ಸಲ್ಲಿಸತಕ್ಕದ್ದು. ಕಳೆದ ಮೂರು ವರ್ಷಗಳಲ್ಲಿ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸದ ಕಲಾವಿದರುಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಕಾರ್ಯಕ್ರಮದ ಆಯ್ಕೆಯು ಆಯ್ಕೆ ಸಮಿತಿಯ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ ಎಂದು ದಸರಾ ಸಾಂಸ್ಕ್ರತಿಕ ಸಮಿತಿ ಪ್ರಕಟಣೆ ತಿಳಿಸಿದೆ.
No comments:
Post a Comment