ನಗರಕ್ಕೆ ವಿಧಾನಸಭೆಯ ಕಾಗದಪತ್ರಗಳ ಸಮಿತಿ ಭೇಟಿ : ಅಧಿಕಾರಿಗಳೊಂದಿಗೆ ಸಭೆ ..................................... vss
ಚಾಮರಾಜನಗರ, ಸೆ. 13 :- ಕರ್ನಾಟಕ ವಿಧಾನ ಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯು ಇಂದು ಚಾಮರಾಜನಗರಕ್ಕೆ ಭೇಟಿ ನೀಡಿ ವಿವಿಧ ಇಲಾಖೆಗಳ ವಾರ್ಷಿಕ ಲೆಕ್ಕ ವರದಿಗಳನ್ನು ಜಿಲ್ಲಾ ಪಂಚಾಯತ್‍ನಿಂದ ಸಲ್ಲಿಸದಿರುವ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಿತು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಧಾನಸಭೆಯ ಸದಸ್ಯರು ಹಾಗೂ ಸಮಿತಿಯ ಅಧ್ಯಕ್ಷರಾದ ಸಾ.ರಾ. ಮಹೇಶ್ ಹಾಗೂ ಸದಸ್ಯರಾದ ಕೃಷ್ಣಾರೆಡ್ಡಿ, ವಿಧಾನಸಭೆ ಸಚಿವಾಲಯದ ಅಧಿಕಾರಿಗಳು, ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಮಹಾಲೇಖಪಾಲಕರ ಕಚೇರಿಯ ಅಧಿಕಾರಿಗಳು ವಾರ್ಷಿಕ ಲೆಕ್ಕ ವರದಿ ಸಲ್ಲಿಕೆಯಾಗದ ಕುರಿತು ಜಿಲ್ಲೆಯ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚೆ ನಡೆಸಿದರು.
ಸಮಿತಿಯು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ವರದಿ ಬಗ್ಗೆ ಮಹಾ ಲೇಖಪಾಲರ ಆಕ್ಷೇಪಣೆ, ಕಂಡಿಕೆ ವಿವರಗಳನ್ನು ಪರಿಶೀಲಿಸಿತು.
ಈಗಾಗಲೇ ಸಮಿತಿಯು ದಾವಣಗೆರೆ, ಶಿವಮೊಗ್ಗ ಹಾಗೂ ಮೈಸೂರಿಗೆ ಭೇಟಿ ನೀಡಿ ವರದಿ ಸಂಬಂಧ ಸಭೆ ನಡೆಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಷೇಪಣೆ ಕಂಡಿಕೆ ತೀರುವಳಿ ಸಂಬಂಧ ಕೈಗೊಂಡಿರುವ ಕಾರ್ಯದ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ನಿರ್ವಹಿಸಿರುವ ಬದ್ಧತೆ ಕೆಲಸದ ಬಗ್ಗೆ ತೀವ್ರ ಪ್ರಶಂಸೆ ವ್ಯಕ್ತವಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಸಮಿತಿಗೆ ಪ್ರಮುಖ ಮಾಹಿತಿಗಳನ್ನು ನೀಡಿದರÀು. ಅಲ್ಲದೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವರದಿ ಸಂಬಂಧ ಸಮಿತಿಗೆ ಮಾಹಿತಿಗಳನ್ನು ಒದಗಿಸಿದರು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಂಟಿ ಕಾರ್ಯದರ್ಶಿ ಸಾಗರ, ಆಂತರಿಕ ಆರ್ಥಿಕ ಸಲಹೆಗಾರರಾದ ಡಾ. ಹನುಮಂತೇಗೌಡ, ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಕೆ.ಎಸ್. ಗಣೇಶ್, ಮಹಾಲೇಖಪಾಲಕರ ಕಚೇರಿ ಸಹಾಯಕ ಲೆಕ್ಕಾಧಿಕಾರಿ ರವೀಂದ್ರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಲೆಕ್ಕಾಧಿಕಾರಿ ಸಿ. ಬಸವರಾಜು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬಳಿಕ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ವಿಧಾನಸಭೆ ಸಚಿವಾಲಯ ಹಾಗೂ ಇತರೆ ಹಿರಿಯ ಅಧಿಕಾರಿಗಳು ಜಿಲ್ಲಾ ಪಂಚಾಯತ್‍ಗೆ ಭೇಟಿ ನೀಡಿದರು.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಗೆ ಸಜೆ
ಚಾಮರಾಜನಗರ, ಸೆ. 13:- ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ 2 ವರ್ಷ 2 ತಿಂಗಳು ಸಾದಾ ಸಜೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ತಾಲೂಕಿನ ಅರಳೀಪುರ ಗ್ರಾಮದ ಹನುಮಶೆಟ್ಟಿ ಅವರ ಮಗ ನಾಗರಾಜು ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಕಳೆದ 2013ರ ಏಪ್ರಿಲ್ 26ರಂದು ನಗರದ ಪಟ್ಟಣ ಪೊಲೀಸ್ ಠಾಣೆಯ ಮುಂಭಾಗ ಸಾರ್ವಜನಿಕರನ್ನು ಉದ್ದೇಶಿಸಿ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದರು. ಈ ಸಮಯದಲ್ಲಿ ಸಮವಸ್ತ್ರದಲ್ಲಿದ್ದ ಪಟ್ಟಣ ಪೊಲೀಸ್ ಠಾಣೆಯ ಪೇದೆ ಎಂ. ಮಹೇಶ ಅವರು ಕೇಳಲು ಹೋದಾಗ ಆರೋಪಿಯು ಮಹೇಶ್ ಅವರ ಬಟ್ಟೆಯನ್ನು ಹಿಡಿದುಕೊಂಡು ಎಳೆದಾಡಿ ಬಾಯಿಯಿಂದ ಎಡಗಡೆ ಎದೆಯ ಬಳಿ ಕಚ್ಚಿ, ನಂತರ ಎಡಬೆರಳನ್ನೂ ಸಹ ಬಾಯಿಯಿಂದ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದ.
ಪ್ರಕರಣ ದಾಖಲುಗೊಂಡು ಪೊಲೀಸ್ ಪೇದೆ ಮಹೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ರುಜುವಾತಾಗಿದೆ ಎಂದು ತೀರ್ಮಾನಿಸಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ನಾಗರಾಜುವಿಗೆ 2 ವರ್ಷ 2 ತಿಂಗಳÀು ಸಾದಾ ಸಜೆ ವಿಧಿಸಿ ಕಳೆದ ಸೆಪ್ಟೆಂಬರ್ 11ರಂದು ತೀರ್ಪು ನೀಡಿದ್ದಾರೆ.
ಪ್ರಾಶ್ಚಾತ್ಯ ಸಂಸ್ಕøತಿಗೆ ಮಾರುಹೋಗದೆ ಭಾರತೀಯ ಸಂಸ್ಕøತಿಯನ್ನು ಮೈಗೂಡಿಸಿಕೊಳ್ಳಿ - ಆರ್.ರಂಗನಾಥಬಾಬು
ಪಟ್ಟಣದ ಜೆಎಸ್‍ಎಸ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕøತಿಕ ಹಾಗೂ ಕ್ರೀಡಾ ವೇದಿಕೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳಾಗಿರುವ ನೀವು ಅಂಧಾನುಕರಣೆ ಮಾಡಬೇಡಿ ಕಲೆ, ಸಾಹಿತ್ಯ, ಸಂಸ್ಕøತಿಗಳನ್ನು ಮೈಗೂಡಿಸಿಕೊಂಡು ಶ್ರದ್ಧೆ, ಆಸಕ್ತಿ, ಆತ್ಮವಿಶ್ವಾಸದಿಂದ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ಯೆಪೋಟಿ ನೀಡಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ನಿಮ್ಮ ವಿದ್ಯಾರ್ಥಿ ಜೀವನದಲ್ಲಿ ಮುನ್ನಡೆಯಿರಿ ಎಂದು ಕಿವಿಮಾತು ಹೇಳಿದರು ಹಾಗೂ ಈ ಭಾಗದ ಕಲೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಜವಬ್ದಾರಿ ನಿಮ್ಮಮೇಲಿದೆ ನಮ್ಮ ನಡೆ ಯಾವ ಕಡೆ ಹೋಗುತ್ತಿದೆ ನಾವು ಇಂದು ಜೀವನವನ್ನು ಯಾವ ರೀತಿ ರೂಪಿಸಿಕೊಳ್ಳುತ್ತಿದ್ದೇವೆ ಎಂಬುದನ್ನು ಅರಿಯಬೇಕು ಸಣ್ಣ ಸಣ್ಣ ಆಸೆಗಳಿಗೆ ಒಳಗಾಗಬೇಡಿ ಜನನಿಯೇ ಜನ್ಮಭೂಮಿ ಈ ಜನ್ಮಭೂಮಿಯ ಋಣವನ್ನು ತೀರಿಸಬೇಕೆಂದು ಕರೆ ಕೊಟ್ಟರು.
ಚಾಮರಾಜನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಎಂ. ನಾಗಮಲ್ಲಪ್ಪ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಮಾನವ ಸ್ವಭಾವತಾ ಸಂಘಜೀವಿ ಭೂಮಿಯ ಮೇಲಿರುವ ಜೀವಿಗಳಿಗಿಂತ ವಿಭಿನ್ನವಾಗಿರುವ ಜೀವಿ ಮಾತನಾಡುವ ಕಲೆ ಬಲ್ಲ ಮನುಷ್ಯ ವಿಕಾಸ ಹೊಂದಿದ್ದರೂ ಮಾನಸಿಕ ಸ್ಥಿತಿಗತಿಗಳು ಬದಲಾವಣೆ ಹೊಂದದಿರುವುದು ವಿಪರ್ಯಾಸ ಮನುಷ್ಯ ಯಾವುದನ್ನು ಎಷ್ಟು ಯಾವ ರೀತಿ ಬಳಸಬೇಕು ಎಂಬ ವಿವೇಚನೆಯ ಅರಿವಿನಿಂದ ಪರಿಪೂರ್ಣವಾದ ಜೀವನವನ್ನು ನಡೆಸುವಂತವರಾಗಬೇಕು ನಾವು ಉಟ್ಟಿದಾಗಲೇ ನಮ್ಮ ಸಾವು ನಮ್ಮ ಹಿಂದೆ ಹಿಂದೆ ಹಿಂಬಾಲಿಸುತ್ತಿರುತ್ತದೆ ಆದುದರಿಂದ ನಾವು ಯಾವುದೇ ಕ್ಷಣಿಕ ಸುಖಗಳಿಗೆ ಒಳಗಾಗದೇ ನಿಮ್ಮ ವಿದ್ಯಾಭ್ಯಾಸವನ್ನು ಯಶಸ್ವಿಗೊಳಿಸಿ ಆದರೆ ಅಂಕ ಗಳಿಸುವ ಪ್ರವೃತ್ತಿಯನ್ನು ಬಿಟ್ಟು ಮಾನವೀಯತೆ, ಅನುಕಂಪ ಜೀವನಾನುಭವದಿಂದ ಕೂಡಿರುವ ಬದುಕನ್ನು ನಡೆಸಿ ಸಮಾಜಕ್ಕೆ, ತಂದೆ ತಾಯಿಗಳಿಗೆ ಆಸ್ತಿಯಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರೆಜಿನಾ ಪಿ ಮಲಾಕಿ ವಹಿಸಿ ಮಾತನಾಡುತ್ತಾ ಆಸಕ್ತಿ, ಶ್ರದ್ಧೆ, ಪ್ರಾಮಾಣಿಕತೆಯಿಂದ ಅಧ್ಯಯನ ಮಾಡಿ ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಗುರಿಯನ್ನು ಮುಟ್ಟಲು ನಿಮ್ಮ ಪ್ರಯತ್ನ ಪರಿಶ್ರಮ ಅತ್ಯವಶ್ಯಕ. ಗ್ರಾಮೀಣ ಪ್ರದೇಶದ ಹಿನ್ನಲೆಯಲ್ಲಿ ಬಂದಂತಹ ನೀವು ನಿಮ್ಮ ತಂದೆ ತಾಯಿಗಳನ್ನು ನೆನೆಯುತ್ತಾ ಶಿಕ್ಷಣವೇ ಧ್ಯೇಯ ಎಂಬ ಉದ್ದೇಶವನ್ನು ಹೊಂದಿರುವ ಜೆಎಸ್‍ಎಸ್ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ನೀವೇ ಪುಣ್ಯವಂತರು. ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿರುವ ಸಂಸ್ಥೆಗೆ ನೀವು ಉನ್ನತ ಸ್ಥಾನಮಾನಗಳನ್ನು ಗಳಿಸಿದಾಗ ಕೃತಜ್ಞರಾಗಿರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಾಪಕರು ಪ್ರಾಮಾಣಿಕವಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿ ಅವರ ಬದುಕನ್ನು ಕಟ್ಟಲು ಸಹಕಾರಿಯಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎನ್.ಮಹದೇವಸ್ವಾಮಿ, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸೆಪ್ಟೆಂಬರ್ 14ರಂದು ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಸೆ. 13 - ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು 2017ರ ಅಕ್ಟೋಬರ್ 5ರಂದು ಆಚರಿಸುವ ಸಂಬಂಧ ಸೆಪ್ಟೆಂಬರ್ 14ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಸಭೆಯಲ್ಲಿ ಪರಿಶಿಷ್ಟ ವರ್ಗದ ಹಾಗೂ ಇತರೆ ಸಮುದಾಯದ ಮುಖಂಡರು, ಎಲ್ಲಾ ಸಂಘಸಂಸ್ಥೆಗಳು ಮತ್ತು ಕನ್ನಡ ಪರ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಜಿಲ್ಲಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ಪರಿಶಿಷ್ಟ ವರ್ಗದ ಹಾಗೂ ಇತರೆ ಸಮುದಾಯದ ಮುಖಂಡರು, ಎಲ್ಲಾ ಸಂಘಸಂಸ್ಥೆಗಳು ಮತ್ತು ಕನ್ನಡ ಪರ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಜಿಲ್ಲಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ, ಶೈಕ್ಷಣಿಕ ಶುಲ್ಕ ಮರುಪಾವತಿ, ಸಾಧನೆ ಪ್ರಶಸ್ತಿ : ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 13- ಯುವÀಜನ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಇಲಾಖೆಯ ವಿವಿಧ ಯೋಜನೆಗಳಡಿ ನೀಡಲಾಗುವ ಪ್ರೋತ್ಸಾಹ ಮತ್ತು ಪ್ರಶಸ್ತಿಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕ್ರೀಡಾ ವಿದ್ಯಾರ್ಥಿವೇತನ ಯೋಜನೆ, ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, ಕ್ರೀಡಾ ಪ್ರತಿಭಾ ಯೋಜನೆ, ಸ್ಪೋಟ್ರ್ಸ್ ಅಕಾಡೆಮಿ ಫಾರ್ ಎಕ್ಸ್‍ಲೆನ್ಸ್ ಅಡಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 18. ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು hಣಣಠಿ://ಜಥಿes.ಞಚಿಡಿ.ಟಿiಛಿ.iಟಿ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08226-224932 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸೆ. 15ರಂದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ
ಚಾಮರಾಜನಗರ, ಸೆ. 13- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸÀುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಉದ್ಘಾಟನೆ ನೆರವೇರಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರೆಜಿನ ಪಿ ಮೆಲಾಕಿ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ದಸರಾ ಕನ್ನಡ ಪುಸ್ತಕ ಮಾರಾಟ ಮೇಳ : ಮಳಿಗೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 13 :- ಇತಿಹಾಸ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಆಶ್ರಯದಲ್ಲಿ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಸೆಪ್ಟೆಂಬರ್ 21 ರಿಂದ 29ರವರೆಗೆ ಮೈಸೂರಿನಲ್ಲಿ ಏರ್ಪಡಿಸಲಾಗುತ್ತದೆ.ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು ಮಳಿಗೆಯೊಂದಕ್ಕೆ 2 ಸಾವಿರ ರೂ. ಭದ್ರತಾ ಠೇವಣಿ ಡಿಡಿ.ಯನ್ನು ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಡಿಡಿ ಹಾಗೂ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆಯನ್ನು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಇಲ್ಲವೆ ಪ್ರಾಧಿಕಾರದ ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜiಞಚಿಡಿಚಿ .ಛಿom ನಲ್ಲಿ ಉಚಿತವಾಗಿ ಪಡೆಯಬಹುದು.
ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 18 ಕಡೆಯ ದಿನ. ಅರ್ಜಿ ಹಾಗೂ ಡಿಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು ಇವರಿಗೆ ಅಂಚೆ ಹಾಗೂ ಇ ಮೇಲ್ ಞಚಿಟಿಟಿಚಿಜಚಿಠಿಠಿಡಿಚಿಜiಞಚಿಡಿಚಿ@gmಚಿiಟ.ಛಿom ಮೂಲಕ ಸಲ್ಲಿಸಬೇಕು.
ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತದೆ. ಮಾಹಿತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅಥವಾ ದೂ.ಸಂ. 080-22484516/22107704 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸೆ. 20ರಂದು ಕೊಳ್ಳೇಗಾಲ ತಾಲೂಕು ಪ.ಜಾ. ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಸೆ. 13 - ಕೊಳ್ಳೇಗಾಲ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಕೊಳ್ಳೇಗಾಲ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 20ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಿತರಕ್ಷಣೆ ಕುಂದುಕೊರತೆ ಬಗ್ಗೆ ಸಭೆಯಲ್ಲಿ ಚರ್ಚಿಸಲು ಇಚ್ಚಿಸಿದ್ದಲ್ಲಿ ಸಂಘಸಂಸ್ಥೆ ಜಾತಿ ವರ್ಗದವರು ಸೆಪ್ಟೆಂಬರ್ 16ರೊಳಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಲಿಖಿತವಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹನೂರು : ವಾಹನ ಪಡೆಯಲು ಕಾಲಾವಕಾಶ
ಚಾಮರಾಜನಗರ, ಸೆ. 13 - ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ದ್ವಿಚಕ್ರ ವಾಹನಗಳ ವಾರಸುದಾರರು ಇದುವರೆಗೂ ಪತ್ತೆಯಾಗದ ಕಾರಣ ವಾಹನಗಳನ್ನು ಬಹಿರಂಗ ಹರಾಜು ಹಾಕಲು ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಾಹನ ಮಾಲೀಕರು ಇದ್ದಲ್ಲಿ ವಾಹನ ದಾಖಲಾತಿ ಹಾಜರುಪಡಿಸಿ ವಶಕ್ಕೆ ಪಡೆಯಲು 10 ದಿನಗಳ ಕಾಲಾವಕಾಶ ನೀಡಲಾಗಿದೆ.ಹರಾಜು ಹಾಕಲಿರುವ ವಾಹನಗಳನ್ನು ಹನೂರು ಪೊಲೀಸ್ ಠಾಣೆಯಲ್ಲಿ ನೋಡಬಹುದಾಗಿದೆ. ನಿಗದಿತ 10 ದಿನಗಳ ಅವಧಿಯಲ್ಲಿ ವಾಹನ ಮಾಲೀಕರು ಬಾರದಿದ್ದಲ್ಲಿ ಬಹಿರಂಗ ಹರಾಜಿಗೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಹನೂರು ಪೊಲೀಸ್ ಠಾಣೆ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.
No comments:
Post a Comment