ಚಾಮರಾಜನಗರ ದಸರಾ ಮಹೋತ್ಸವ : ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 14 - ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 25 ರಿಂದ 28ರವರೆಗೆ ನಡೆಯಲಿರುವ 4 ದಿನಗಳ ದಸರಾ ಮಹೋತ್ಸವದಲ್ಲಿ ವಿವಿಧ ಅಭಿರುಚಿಯುಳ್ಳ ಆಹಾರ ಮಳಿಗೆಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಸರಾ ಮಹೋತ್ಸವ ನಡೆಯುವ ಚಾಮರಾಜೇಶ್ವರ ದೇವಾಲಯ ಬಳಿ 10*10 ಚದರ ಅಡಿ ಅಳತೆಯ ಮಳಿಗೆಗಳನ್ನು ನಿರ್ಮಿಸಿ ಆಹಾರ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ.
ಆಹಾರ ಮಳಿಗೆಯಲ್ಲಿ ಭಾಗವಹಿಸುವವರು ನೇರ ಆಹಾರ ತಯಾರಕರು, ಗೃಹಿಣಿಯರು, ಕೇಟರರ್ಸ್ ಅಥವ ಹೋಟೆಲ್ ಮಾರಾಟಗಾರರಾಗಿರಬೇಕು. ಆಹಾರದ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳಿಂದ ನೊಂದಾಯಿಸಲ್ಪಟ್ಟಿರಬೇಕು.
ಅರ್ಜಿದಾರರು ಕಡ್ಡಾಯವಾಗಿ ಅನುಭವ ನೋಂದಣಿ ಮತ್ತು ಯಾವ ಶೈಲಿಯ ಆಹಾರ ತಯಾರಿಸುತ್ತೇವೆ ಎಂಬ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕಡೆಯ ದಿನವಾಗಿದೆ. ಅರ್ಜಿಗಳನ್ನು ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಚಾಮರಾಜನಗರ ಜಿಲ್ಲೆ ಮತ್ತು ಕಾರ್ಯಾಧ್ಯಕ್ಷರು, ದಸರಾ ಮಹೋತ್ಸವ 2017ರ ಆಹಾರ ಸಮಿತಿ ಇವರ ಹೆಸರಿಗೆ 100 ರೂ. ಡಿಡಿ ಅಥವಾ ನಗದು ಪಾವತಿಸಿ ಪಡೆಯಬಹುದು.
ಆಹಾರ ಮಳಿಗೆಯಲ್ಲಿ ಭಾಗವಹಿಸುವವರು ದಸರಾ ಮಹೋತ್ಸವ ಸಮಿತಿ ವಿಧಿಸುವ ಶುಲ್ಕ ಪಾವತಿಸಲು ಹಾಗೂ ಇತರೆ ಷರತ್ತುಗಳನ್ನು ಪೂರೈಸಲು ಬದ್ಧರಾಗಿರಬೇಕು.
ಹೆಚ್ಚಿನ ಮಾಹಿತಿಗೆ ಆರ್. ರಾಚಪ್ಪ, ಉಪನಿರ್ದೇಶಕರು ಹಾಗೂ ಆಹಾರ ಸಮಿತಿಯ ಕಾರ್ಯಾಧ್ಯಕ್ಷರು, ದೂ.ಸಂ. 08226-224660, ಮೊಬೈಲ್ ಸಂಖ್ಯೆ 9739875870 ಅಥವಾ ಎ.ಜೆ. ಶ್ರೀನಿವಾಸ್, ಸಹಾಯಕ ನಿರ್ದೇಶಕರು, ಉಪನಿರ್ದೇಶಕರ ಕಚೇರಿ, ಆಹಾರ ಶಾಖೆ, ಮೊಬೈಲ್ ಸಂಖ್ಯೆ 9448413218 ಅಥವಾ ಕೆ.ಎಂ. ಲಿಂಗರಾಜು, ಲೆಕ್ಕಾಧೀಕ್ಷಕರು, ಆಹಾರ ಶಾಖೆ, ಮೊಬೈಲ್ ಸಂಖ್ಯೆ 8073160006 ಸಂಪರ್ಕಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೆಶಕರು ಹಾಗೂ ಆಹಾರ ಸಮಿತಿ ಕಾರ್ಯಾಧ್ಯಕ್ಷರು ಆಗಿರುವ ಆರ್. ರಾಚಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಾಟಾಳ್ ಮನವಿ
ಚಾಮರಾಜನಗರ, ಸೆ.14- ಚಾಮರಾಜನಗರದ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅದ್ಯಕ್ಷ ವಾಟಾಳ್ ನಾಗರಾಜ್ ಅವರು ಒತ್ತಾಯಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಬಿ.ರಾಮು ಅವರನ್ನು ಭೇಟಿ ಮಾಡಿ ಚಾಮರಾಜನಗರ ಸವiಗ್ರ ಅಭಿವೃದ್ದಿಗೆ ಒತ್ತಾಯಿಸಿ ಮನವಿ ಪತ್ರ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ಅವರು, ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಕೂಡಲೇ ತೀವ್ರ ಗಮನ ಹರಿಸಬೇಕು ಇಲ್ಲವಾದಲ್ಲಿ ಮುಂದಿನ ತಿಂಗ ಳು 10 ರಂದು ಚಾಮರಾಜನಗರ ಬಂದ್‍ಗೆ ಕರೆ ನೀಡಲಾಗುವುದು ಎಂದು ವಾಟಾಳ್ ಎಚ್ಚರಿಸಿದರು.
ಒಳ ಚರಂಡಿ ಕಾಮಗಾರಿ ಪ್ರಾರಂಭವಾಗಿ ಸುಮಾರು 10 ವರ್ಷ ಕಳೆದಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ ಬೇಗ ಕೆಲಸ ಮುಗಿಸಬೇಕು ಚಾಮರಾಜನಗರ ಧೂಳಿನಿಂದ ಕೂಡಿದ್ದು ಧೂಳು ರಹಿತ ನಗರವನ್ನಾಗಿ ಮಾಡಬೇಕೆಂದು ಆಗ್ರಹಿಸಿದರು.
ಚಾಮರಾಜನಗರ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು. ಚಾಮರಾಜನಗರಕ್ಕೆ ಕಾವೇರಿ ಕುಡಿಯುವ ನೀರಿನ ಎರಡನೇ ಹಂತ ಆಗಬೇಕು. ನಗರದ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಬಡ ಜನರಿಗೆ ನಿವೇಶನಗಳನ್ನು ನೀಡುವುದರ ಜೊತೆಗೆ 5 ಸಾವಿರ ನಿವೇಶನಗಳುಳ್ಳ ಸುಂದರವಾದ ಉಪನಗರ ಆಗಬೇಕು ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
ಶ್ರೀ ಚಾಮರಾಜೇಶ್ವರ ರಥೋತ್ಸವ ಮುಂದಿನ ಸಾಲಿನಲ್ಲಾದರೂ ನಡೆಯಬೇಕು ರಥ ನಿರ್ಮಾಣ ಮಾಡಲು ನುರಿತ ಕುಶಲಕರ್ಮಿಗಳನ್ನು ಕರೆತಂದು ರಥವನ್ನು ಕೆತ್ತನೆ ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ದಿ ಆಗಬೇಕು ಅರ್ಧಕ್ಕೆ ನಿಂತಿರುವ ರಂಗಮಂದಿರ ಕಾಮಗಾರಿ ತಕ್ಷಣವೇ ಮುಗಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ನದಿ ಪಾತ್ರಗಳಿಂದ ಖಾಯಂ ಕುಡಿಯುವ ನೀರು ಕಲ್ಪಿಸಬೇಕು ಎಂದು ವಾಟಾಳ್ ಆಗ್ರಹಿಸಿದರು.
ನಗರದ ಶಂಕರಪುರ ಮತ್ತು ಭ್ರಮರಾಂಭ ಬಡಾವಣೆಯ ನಿವಾಸಿಗಳು ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ಮೂಲಭೂತ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದ ಸಂದರ್ಭದಲ್ಲಿ ಅವರ ಮೇಲೆ ಹಾಗು ಸಾರ್ವಜನಿಕರ ಮೇಲೆ ಕೇಸು ದಾಖಲೆ ಮಾಡಿರುವುದು ಸರಿಯಾದ ಕ್ರಮವಲ್ಲ ಇದು ತೀವ್ರ ಖಂಡನೀಯ ಈ ವಾರದೊಳಗೆ ಅವರ ಎಲ್ಲಾ ಕೇಸುಗಳನ್ನು ವಜಾ ಮಾಡದಿದ್ದಲ್ಲಿ ಮಹಿಳೆಯರ ಜೊತೆ ಸೇರಿ ಪೋಲಿಸರ ಈ ಕ್ರಮದ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ಎಚ್ಚರಿಸಿದರು.
ಕರ್ನಾಟಕದ ಎಲ್ಲಾ ಬ್ಯಾಂಕುಗಳಲ್ಲಿ ಆಡಳಿತ ಬಾಷೆ ಕನ್ನಡದಲ್ಲೆ ಎಲ್ಲಾ ವ್ಯವಹಾರ ಮಾಡಬೇಕು ಸಾರ್ವಜನಿಕರಿಗೆ ನೀಡುವ ಎಲ್ಲಾ ವ್ಯವಹಾರಗಳ ಅರ್ಜಿ ನಮೂನೆಗಳು ಸಹ ಕನ್ನಡದಲ್ಲೇ ಮುದ್ರಿಸಿರಬೇಕು. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡದಲ್ಲೇ ಓದಿದವರಿಗೆ ಉದ್ಯೋಗ ನೀಡಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಒತ್ತಾಯಿಸಿ ಇದೇ ಸೆ.17 ರಂದು ಬೆಂಗಳೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ಗೆ ಕನ್ನಡ ಒಕ್ಕೂಟದ ವತಿಯಿಂದ ಮುತ್ತಿಗೆ ಹಾಕುವ ಚಳವಳಿಯನ್ನು ಹಮ್ಮಿಕೊಳ್ಳಲಾಗುವುದ ಎಂದು ವಾಟಾಳ್ ತಿಳಿಸಿದರು.
_+______________________________________________________________________
ಸೆಪ್ಟೆಂಬರ್ 15ರಂದು ನಗರದಲ್ಲಿ ಭಾರತ ಯಾತ್ರೆ ಕಾರ್ಯಕ್ರಮ
ಚಾಮರಾಜನಗರ, ಸೆ. 14 :- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ ಹಾಗೂ ಸಾಧನ ಸಂಸ್ಥೆಯ ಸಹಯೋಗದೊಂದಿಗೆ ಸೆಪ್ಟೆಂಬರ್ 15ರಂದು ಸುರಕ್ಷಿತ ಬಾಲ್ಯ-ಸುರಕ್ಷಿತ ಭಾರತ ಕಲ್ಪನೆಯೊಂದಿಗೆ ಭಾರತ ಯಾತ್ರೆ ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಆರಂಭವಾಗುವ ಜಾಥಾ ಕಾರ್ಯಕ್ರಮಕ್ಕೆ ಪಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್, ಮಳವಳ್ಳಿ ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಹಾಗೂ ಭಾರತ ಯಾತ್ರೆಯಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕøತರಾದ ಕೈಲಾಶ್ ಸತ್ಯಾರ್ಥಿಯವರ ಪ್ರತಿನಿಧಿ ಪ್ರಸನ್ನ ಅವರು ಇದೇ ಸಂದರ್ಭದಲ್ಲಿ ಹಾಜರಿರುವರು.
ಬೆಳಿಗ್ಗೆ 11.30 ಗಂಟೆÀಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗ ಸಹಿ ಸಂಗ್ರಹಣೆ ಕಾರ್ಯ ನಡೆಯಲಿದೆ. ಕಾರ್ಯಕ್ರಮವನ್ನು ಸಿ.ಜೆ.ಎಂ. ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಅವರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಮಂಜುಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಜಿನಾ ಮಾಲಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶಕರಾದ ಬಸವರಾಜು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಜಯಶೀಲ, ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳು, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕಳ್ಳ ಸಾಗಾಣಿಕೆ ತೆಡೆಗಟ್ಟಲು ನೇತೃತ್ವದಲ್ಲಿ ಕೈಗೊಳ್ಳಲಾಗಿರುವ ಭಾರತ ಯಾತ್ರೆಯು ನಗರಕ್ಕೆ ಆಗಮಿಸಲಿದೆ. ಜಾಥಾ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ 500 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಟಿ.ಜೆ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 15ರಂದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ
ಚಾಮರಾಜನಗರ, ಸೆ. 14 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸÀುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತರಿರುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಉದ್ಘಾಟನೆ ನೆರವೇರಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರೆಜಿನ ಪಿ ಮೆಲಾಕಿ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- 2017-18ನೇ ಸಾಲಿನ 14/17 ವರ್ಷ ವಯೋಮಿತಿಯ ಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ದಿನಾಂಕ 21.9.2017ರಂದು ಪ್ರೌಢಶಾಲಾ ವಿಭಾಗ ಮತ್ತು 22.9.2017ರಂದು ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟವು ಶ್ರೀ ಮಹದೇಶ್ವರ ಕಾಲೇಜು ಕ್ರೀಡಾಂಗಣ ಕೊಳ್ಳೇಗಾಲದಲ್ಲಿ ನಡೆಯಲಿದೆ. ಆದ್ದರಿಂದ ತಾಲೂಕು ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಮೇಲ್ಕಂಡ ಸ್ಥಳದಲ್ಲಿ ಬೆಳಿಗ್ಗೆ 8.30ಕ್ಕೆ ಹಾಜರಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ.
ಸೆಪ್ಟೆಂಬರ್ 17, 18ರಂದು ವಿಭಾಗಮಟ್ಟದ ದಸರಾ ಫುಟ್ ಬಾಲ್ ಪಂದ್ಯ
ಚಾಮರಾಜನಗರ, ಸೆ. 14- ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್ ಬಾಲ್ ಪಂದ್ಯಾವಳಿ(ಪುರುಷರಿಗೆ)ಯನ್ನು ಸೆಪ್ಟೆಂಬರ್ 17 ಮತ್ತು 18 ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆಯ ಡಿ. ದೇವರಾಜ ಅರಸು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
ಪಿ.ಎಂ.ಇ.ಜಿ.ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ವಿಶೇಷ ಡ್ರೈವ್ ಮೂಲಕ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ (ಪಿಎಂಇಜಿಪಿ)ದಡಿಯಲ್ಲಿ ಕೈಗಾರಿಕಾ ಘಟಕಗಳಿಗೆ ಹಾಗೂ ಸೇವಾ ಘಟಕಗಳಿಗೆ ಸಾಲಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಶೇ. 25 ರಿಂದ ಶೇ. 35ರವರೆಗೆ ಸಹಾಯಧನ (ಮಾರ್ಜಿನ್‍ಮನಿ) ನೀಡಲಾಗುವುದು. ಯೋಜನಾ ವೆಚ್ಚದ ಶೇ.5ರಷ್ಡು ಸ್ವಂತ ಬಂಡವಾಳವನ್ನು ಹೂಡಬೇಕಾಗುತ್ತದೆ. ಉತ್ಪಾದನಾ ಕ್ಷೇತ್ರದ ಉದ್ಯೋಗದ ಸಲುವಾಗಿ ಗರಿಷ್ಟ ರೂ. 25 ಲಕ್ಷದ ತನಕ ಹಾಗೂ ಸೇವಾ ಕ್ಷೇತ್ರದ ಸಲುವಾಗಿ ಗರಿಷ್ಟ ರೂ. 10 ಲಕ್ಷದ ತನಕ ಸಾಲವನ್ನು ನೀಡಲಾಗುತ್ತದೆ. ಈ ಯೋಜನೆಯು ಹೊಸ ಉದ್ದಿಮೆದಾರರಿಗೆ ಮಾತ್ರ. ಹಾಲಿ ಇರುವ ಘಟಕಗಳಿಗೆ ಅನ್ವಯಿಸುವುದಿಲ್ಲ.
ಸಾಲವನ್ನು ಅಂಗೀಕೃತ ರಾಷ್ಟ್ರೀಕೃತ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಮತ್ತು ಖಾಸಗಿ ವಲಯದ ವಾಣಿಜ್ಯ ಬ್ಯಾಂಕುಗಳು ನೀಡುತ್ತವೆ. ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸತಕ್ಕದ್ದು. ಫೋಟೋ, ಆಧಾರ್ ಕಾರ್ಡ್, ವಿಳಾಸದ ಪುರಾವೆ, ವಿದ್ಯಾರ್ಹತೆ. ಜಾತಿ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ (ಗ್ರಾಮೀಣರಿಗೆ ಮಾತ್ರ), ಯೋಜನಾ ವರದಿಯನ್ನು ಲಗತ್ತಿಸಿಸಬೇಕು.
ಯಾವುದೇ ವ್ಯಕ್ತಿಯು ಅಥವ ಅವರ ಕುಟುಂಬದ ಸದಸ್ಯರು ಪಿಎಂಇಜೆಪಿ, ಪಿಎಂಆರ್‍ವೈ, ಆರ್ ಇ ಜಿಪಿ ಹಾಗೂ ಇತರೆ ಯೋಜನೆಯಡಿ ಸಹಾಯಧನವನ್ನು ಹಿಂದೆ ಪಡೆದಿದ್ದರೆ ಅಂತಹ ವ್ಯಕ್ತಿಗಳು ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಹಾಕಲು ಅರ್ಹರಾಗಿರುವುದಿಲ್ಲ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಏಗಿIಅ ವೆಬ್ ಸೈಟ್ ತಿತಿತಿ.ಞviಛಿ.oಡಿg.iಟಿ / ತಿತಿತಿ.ಠಿmegಠಿ.iಟಿ ನೋಡಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10 ಕಡೆಯ ದಿನ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಗ್ರಾಮೋದ್ಯೋಗ ಮಂಡಳಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಚಾಮರಾಜನಗರ ದಸರಾ ಮಹೋತ್ಸವ : ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 14 - ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 25 ರಿಂದ 28ರವರೆಗೆ ನಡೆಯಲಿರುವ 4 ದಿನಗಳ ದಸರಾ ಮಹೋತ್ಸವದಲ್ಲಿ ವಿವಿಧ ಅಭಿರುಚಿಯುಳ್ಳ ಆಹಾರ ಮಳಿಗೆಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಸರಾ ಮಹೋತ್ಸವ ನಡೆಯುವ ಚಾಮರಾಜೇಶ್ವರ ದೇವಾಲಯ ಬಳಿ 10*10 ಚದರ ಅಡಿ ಅಳತೆಯ ಮಳಿಗೆಗಳನ್ನು ನಿರ್ಮಿಸಿ ಆಹಾರ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ.
ಆಹಾರ ಮಳಿಗೆಯಲ್ಲಿ ಭಾಗವಹಿಸುವವರು ನೇರ ಆಹಾರ ತಯಾರಕರು, ಗೃಹಿಣಿಯರು, ಕೇಟರರ್ಸ್ ಅಥವ ಹೋಟೆಲ್ ಮಾರಾಟಗಾರರಾಗಿರಬೇಕು. ಆಹಾರದ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳಿಂದ ನೊಂದಾಯಿಸಲ್ಪಟ್ಟಿರಬೇಕು.
ಅರ್ಜಿದಾರರು ಕಡ್ಡಾಯವಾಗಿ ಅನುಭವ ನೋಂದಣಿ ಮತ್ತು ಯಾವ ಶೈಲಿಯ ಆಹಾರ ತಯಾರಿಸುತ್ತೇವೆ ಎಂಬ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕಡೆಯ ದಿನವಾಗಿದೆ. ಅರ್ಜಿಗಳನ್ನು ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಚಾಮರಾಜನಗರ ಜಿಲ್ಲೆ ಮತ್ತು ಕಾರ್ಯಾಧ್ಯಕ್ಷರು, ದಸರಾ ಮಹೋತ್ಸವ 2017ರ ಆಹಾರ ಸಮಿತಿ ಇವರ ಹೆಸರಿಗೆ 100 ರೂ. ಡಿಡಿ ಅಥವಾ ನಗದು ಪಾವತಿಸಿ ಪಡೆಯಬಹುದು.
ಆಹಾರ ಮಳಿಗೆಯಲ್ಲಿ ಭಾಗವಹಿಸುವವರು ದಸರಾ ಮಹೋತ್ಸವ ಸಮಿತಿ ವಿಧಿಸುವ ಶುಲ್ಕ ಪಾವತಿಸಲು ಹಾಗೂ ಇತರೆ ಷರತ್ತುಗಳನ್ನು ಪೂರೈಸಲು ಬದ್ಧರಾಗಿರಬೇಕು.
ಹೆಚ್ಚಿನ ಮಾಹಿತಿಗೆ ಆರ್. ರಾಚಪ್ಪ, ಉಪನಿರ್ದೇಶಕರು ಹಾಗೂ ಆಹಾರ ಸಮಿತಿಯ ಕಾರ್ಯಾಧ್ಯಕ್ಷರು, ದೂ.ಸಂ. 08226-224660, ಮೊಬೈಲ್ ಸಂಖ್ಯೆ 9739875870 ಅಥವಾ ಎ.ಜೆ. ಶ್ರೀನಿವಾಸ್, ಸಹಾಯಕ ನಿರ್ದೇಶಕರು, ಉಪನಿರ್ದೇಶಕರ ಕಚೇರಿ, ಆಹಾರ ಶಾಖೆ, ಮೊಬೈಲ್ ಸಂಖ್ಯೆ 9448413218 ಅಥವಾ ಕೆ.ಎಂ. ಲಿಂಗರಾಜು, ಲೆಕ್ಕಾಧೀಕ್ಷಕರು, ಆಹಾರ ಶಾಖೆ, ಮೊಬೈಲ್ ಸಂಖ್ಯೆ 8073160006 ಸಂಪರ್ಕಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೆಶಕರು ಹಾಗೂ ಆಹಾರ ಸಮಿತಿ ಕಾರ್ಯಾಧ್ಯಕ್ಷರು ಆಗಿರುವ ಆರ್. ರಾಚಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment