ವಿದ್ಯಾರ್ಥಿಗಳ ಬಹುಮುಖ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಪುಟ್ಟರಂಗಶೆಟ್ಟಿ
ಚಾಮರಾಜನಗರ, ಸೆ. 15:- ವಿದ್ಯಾರ್ಥಿಗಳು ಪಾಠ, ಪ್ರವಚನಗಳಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಬಹುಮುಖ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಗರದ ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆಯಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳಲ್ಲಿ ಹಲವಾರು ಬಗೆಯ ಪ್ರತಿಭೆಯಿದೆ. ಅದು ಅನಾವರಣಗೊಳ್ಳಲು ಶಿಕ್ಷಕರು ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ಸೂಕ್ತ ವೇದಿಕೆ ಒದಗಿಸಿಕೊಡಬೇಕು. ವಿದ್ಯಾರ್ಥಿಗಳು ವ್ಯಾಸಂಗಕ್ಕೆ ನೀಡುವಷ್ಟೆ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಾದ ಕಲೆ. ಕ್ರೀಡೆ, ಜಾನಪದ ಸಂಸ್ಕøತಿ ಬಿಂಬಿಸುವಂತಹ ಚಟುವಟಿಕೆಗಳಲ್ಲಿ ಹೆಚ್ಚು ತೋಡಗಿಸಿಕೊಳ್ಳಬೇಕು. ಆ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿ ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿದೆ. ಪ್ರತಿಭಾ ಕಾರಂಜಿಯಂತಹ ಪ್ರೋತ್ಸಾಹದಾಯಕ ಕಾರ್ಯಕ್ರಮಗಳಿಗೆ ಧನಸಹಾಯ ನೀಡುತ್ತಿದೆ. ಶಿಕ್ಷಕರು ಇದನ್ನು ಸದ್ಭಳಕೆ ಮಾಡಿ ಮಕ್ಕಳಲ್ಲಿರುವ ಬಹುಮುಖ ಪ್ರÀತಿಭೆಯನ್ನು ಹೆಕ್ಕಿ ತೆಗೆಯಬೇಕು ಎಂದು ಪುಟ್ಟರಂಗಶೆÉಟ್ಟಿ ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ ಅವರು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮೊದಲು ಖಾಸಗಿ ಶಾಲೆಗಳಿಗೆ ಮಾತ್ರ ಸೀಮಿತವಾಗಿತ್ತು. ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಸಹ ಇಂತಹ ಕಾರ್ಯಕ್ರಮ ರೂಪಿಸಿದೆ. ಮಕ್ಕಳು ಪ್ರತಿಭಾ ಕಾರಂಜಿ ಸ್ಫರ್ದೆಯಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಹೊರಸೂಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ,ಎನ್. ಬಾಲರಾಜು, ಆರ್. ಬಾಲರಾಜು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ನೇತ್ರಾವತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಶಿವಣ್ಣ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಮಲ್ಲಪ್ಪ, ಕಾರ್ಯಕ್ರಮದ ನೋಡೆಲ್ ಅಧಿಕಾರಿಗಳಾದ ರಾಜು, ಅಕ್ಷರ ದಾಸೋಹ ಅಧಿಕಾರಿ ಟಿ. ಸ್ವಾಮಿ ಮತ್ತು ಶಿಕ್ಷಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪರಿಶಿಷ್ಟ ಜಾತಿ, ಪಂಗÀಡದ ಪತ್ರಿಕೋದ್ಯಮ ಪದವೀಧರ ಅಭ್ಯರ್ಥಿಗಳಿಗೆ ವೃತ್ತಿ ನಿರೂಪಣಾ ಕೌಶಲ್ಯ, ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 15 - ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ, ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಇಲ್ಲವೆ ಇಲಾಖೆಯ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿiಟಿಜಿoಡಿmಚಿಣioಟಿ.gov.iಟಿ ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ, ಶೇಕಡಾವಾರು ಅಂಕ, ಉದ್ಯೋಗ ವಿವರ ಈ ಹಿಂದೆ ಯಾವುದಾದರು ತರಬೇತಿ ಪಡೆದ ವಿವರ ಹಾಗೂ ವಿಶೇಷ ಸಾಧನೆಗಳನ್ನೊಳಗೊಂಡ ಸ್ವ ವಿವರಗಳ ಮಾಹಿತಿಗಳನ್ನು ಭರ್ತಿ ಮಾಡಿ ಸ್ವ ವಿಳಾಸ ಇರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಸೆಪ್ಟೆಂಬರ್ 21ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560 001 ಇವರಿಗೆ ಸಲ್ಲಿಸಬೇಕು.
ಲಕೋಟೆಯ ಮೇಲ್ಬಾಗದಲ್ಲಿ "ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ" ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ, ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080- 22028037/87 ರ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗದ ಪತ್ರಿಕೋದ್ಯಮ ಪದವೀಧರ ಅಭ್ಯರ್ಥಿಗಳಿಗೆ ವೃತ್ತಿ ನಿರೂಪಣಾ ಕೌಶಲ್ಯ, ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. - ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿಂದುಳಿದ ವರ್ಗದÀ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಕೆಟಗರಿ 1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಇಲ್ಲವೆ ಇಲಾಖೆಯ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿiಟಿಜಿoಡಿmಚಿಣioಟಿ.gov.iಟಿ ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ, ಶೇಕಡಾವಾರು ಅಂಕ, ಉದ್ಯೋಗ ವಿವರ ಹಾಗೂ ಈ ಹಿಂದೆ ಯಾವುದಾದರು ತರಬೇತಿ ಪಡೆದ ವಿವರ ಮತ್ತು ವಿಶೇಷ ಸಾಧನೆಗಳನ್ನೊಳಗೊಂಡ ಸ್ವ ವಿವರಗಳ ಮಾಹಿತಿಗಳನ್ನು ಭರ್ತಿ ಮಾಡಿ ಸ್ವ ವಿಳಾಸ ಇರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ಧೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಅಕ್ಟೋಬರ್ 3ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560 001 ಇವರಿಗೆ ಸಲ್ಲಿಸಬೇಕು.
ಲಕೋಟೆಯ ಮೇಲ್ಬಾಗದಲ್ಲಿ "ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿ ವಿಕಸನ ತರಬೇತಿಗಾಗಿ ಅರ್ಜಿ (ಹಿಂದುಳಿದ ವರ್ಗ)" ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ, ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080- 22028037/87 ರ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹದೇಶ್ವರ ಬೆಟ್ಟದಲ್ಲಿ ಮಹಾಲಯ, ದಸರಾ, ದೀಪಾವಳಿ ಜಾತ್ರಾ ಮಹೋತ್ಸವ
ಚಾಮರಾಜನಗರ, ಸೆ. 15:- ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದಲ್ಲಿ ಮಲೆಮಹದೇಶ್ವರ ಸ್ವಾಮಿಯ ಮಹಾಲಯ ಜಾತ್ರಾ ಮಹೋತ್ಸವವು ಸೆಪ್ಟೆಂಬರ್ 18 ರಿಂದ 20ರವರೆಗೆ, ದಸರಾ ಜಾತ್ರಾ ಮಹೋತ್ಸವವು ಸೆಪ್ಟೆಂಬರ್ 21 ರಿಂದ 30ರವರೆಗೆ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವವು ಅಕ್ಟೋಬರ್ 18 ರಿಂದ 20ರವರೆಗೆ ನಡೆಯಲಿದೆ.
ಸೆಪ್ಟೆಂಬರ್ 18ರಂದು ಎಣ್ಣೆಮಜ್ಜನ, ತೈಲಾಭಿಷೇಕ, ವಿಶೇಷಸೇವೆ ಉತ್ಸವಗಳು ಜರುಗಲಿವೆ. 19 ಹಾಗೂ 20ರಂದು ಮಹಾಲಯ ಅಮಾವಾಸ್ಯೆ ವಿಶೇಷಸೇವೆ ಉತ್ಸವ ನಡೆಯಲಿದೆ.
ಸೆಪ್ಟೆಂಬರ್ 21ರಂದು ಶರನ್ನವರಾತ್ರಾರಂಭ, ಉಯ್ಯಾಲೋತ್ಸವ ಪ್ರಾರಂಭವಾಗಲಿದೆ. 29ರಂದು ಮಹಾನವಮಿ ಆಯುಧಪೂಜೆ, 30ರಂದು ವಿಜಯದಶಮಿ, ಕುದುರೆ ಮಹÉೂೀತ್ಸವ, ದಶಮಿ ಪೂಜೆ ನಡೆಯಲಿವೆ. ರಾತ್ರಿ ನೈವೇದ್ಯ ನಂತರ ತೆಪ್ಪೋತ್ಸವ ನಡೆಯಲಿದೆ.
ಅಕ್ಟೋಬರ್ 18ರಂದು ದೀಪಾವಳಿ ಜಾತ್ರೆ ಪ್ರಾರಂಭವಾಗಲಿದ್ದು ನರಕಚತುದರ್ಶಶಿ ಎಣ್ಣೆಮಜ್ಜನ ಅಭಿಷೇಕ ಸೇವೆ ಉತ್ಸವಾದಿಗಳು ಜರುಗಲಿವೆ. 19ರಂದು ಅಮಾವಾಸ್ಯೆ, ಹಾಲುರವೆ ಉತ್ಸವ ನಡೆಯಲಿದೆ. 20ರಂದು ದೀಪಾವಳಿ ಮಹಾರಥೋತ್ಸವವು ಬೆಳಿಗ್ಗೆ 9.20 ರಿಂದ 10.10 ಗಂಟೆಯವರೆಗೆ ನಡೆಯಲಿದೆ. ರಾತ್ರಿ ತೆಪ್ಪೋತ್ಸವ ಜರುಗಲಿದೆ.
ಕಾರ್ತೀಕ ಸೋಮವಾರದಂದೂ ಸಹ ವಿಶೇಷ ಉತ್ಸವಗಳು ನಡೆಯಲಿವೆ. ಕಾರ್ತೀಕ ಸೋಮವಾರವಾದ ಅಕ್ಟೋಬರ್ 23, 30 ನವೆಂಬರ್ 6ರಂದು ವಿಶೇಷ ಸೇವೆ ಉತ್ಸವಾದಿಗಳು ನಡೆಯಲಿವೆ. ನವೆಂಬರ್ 13ರ 4ನೇ ಕಾರ್ತೀಕ ಸೋಮವಾರದಂದು ಶ್ರೀ ಮಹದೇಶ್ವರ ಜ್ಯೋತಿ ದರ್ಶನ ಹಾಗೂ ತೆಪ್ಪೋತ್ಸವ ನಡೆಯಲಿದೆ. 16ರಂದು ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವ, 17 ಹಾಗೂ 18ರಂದು ಕಾರ್ತಿಕ ಅಮಾವಾಸ್ಯೆ ವಿಶೇಷ ಸೇವೆ ಉತ್ಸವ ನಡೆಯಲಿದೆ. ಪ್ರತಿದಿನ ಸಂಜೆ 7 ಗಂಟೆಗೆ ಬಂಗಾರದ ರಥೋತ್ಸವ ನಡೆಯಲಿದೆ.
ಈ ಎಲ್ಲ ವಿಶೇಷ ಸೇವೆ, ಉತ್ಸವ ಮತ್ತು ಮಹಾರಥೋತ್ಸವವು ಸಾಲೂರು ಬೃಹನ್ಮಠ ಅಧ್ಯಕ್ಷರಾದ ಶ್ರೀ ಗುರುಸ್ವಾಮಿ ಹಾಗೂ ಇಮ್ಮಡಿ ಮಹದೇವಸ್ವಾಮಿ ಅವರ ನೇತೃತ್ವದಲ್ಲಿ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸೆ. 16,17ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಸೆ. 15 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಸೆಪ್ಟೆಂಬರ್ 16 ಹಾಗೂ 17ರಂದು ಉಗೆನೆದಹುಂಡಿ ಕುಡಿಯುವ ನೀರಿನ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ತೆರಕಣಾಂಬಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿದ್ಯುತ್‍ನಲ್ಲಿ ವ್ಯತ್ಯಯವಾಗಲಿದೆ.
ಗುರುವಿನಪುರ ಎನ್ ಜೆ ವೈ ಮಾರ್ಗದಲ್ಲಿ ಬರುವ ತೆರಕಣಾಂಬಿ, ಗುರುವಿನಪುರ, ಲಕ್ಕೂರು, ತೆರಕಣಾಂಬಿ ಹುಂಡಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರ್ಷಿಕ ಶಿಲ್ಪ ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 15 ಕರ್ನಾಟಕ ಶಿಲ್ಪ ಕಲಾ ಅಡಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ 13ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45ರ ವಯೋಮಿತಿಯ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದು.
ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಗರಿಷ್ಟ 2 ಅಡಿಗಳ ಪ್ರಮಾಣದ ಲೋಹ, ಮರ, ಕಲ್ಲು ಮಿಶ್ರ ಮಾದ್ಯಮದಲ್ಲಿರಬೇಕು. ಅತ್ಯುತ್ತಮ ಕಲಾಕೃತಿಗೆ ತಲಾ 25 ಸಾವಿರ ರೂ.ಗಳ ಬಹುಮಾನ ಕೊಡಲಾಗುವುದು.
ಶಿಲ್ಪಕೃತಿಗಳನ್ನು ವಿವರಣಾ ಪತ್ರದ ಜತೆ ಅಕ್ಟೋಬರ್ 10ರೊಳಗಾಗಿ ಅಕಾಡೆಮಿ ಕಚೇರಿಗೆ ಖುದ್ದಾಗಿ ತಲುಪಿಸಬೇಕು. ಪ್ರವೇಶ ಶುಲ್ಕ 300 ರೂ. ಪ್ರವೇಶ ಪಡೆಯಲು ಇಚ್ಚಿಸುವವರು ವಿವರಣಾ ಪತ್ರವನ್ನು ಅಕಾಡೆಮಿಯಲ್ಲಿ ಪಡೆಯಬಹುದು.
ಹೆಚ್ಚಿನ ವಿವರಗಳಿಗೆ ರಿಜಿಸ್ಟ್ರಾರ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, 1ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು - 560002 (ದೂ.ಸಂ.080-22278725) ಇವರನ್ನು ಸಂಪರ್ಕಿಸಲು ಕೋರಿದೆ.
ವಿವರಣಾ ಪತ್ರವನ್ನು ಶಿಲ್ಪಕಲಾ ಅಕಾಡೆಮಿಯಲ್ಲಿ ಅಥವ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಥವಾ ಅಕಾಡೆಮಿ ಅಂತರ್ಜಾಲ ತಿತಿತಿ.ಞಚಿಡಿಟಿಚಿಣಚಿಞಚಿshiಟಠಿಚಿಞಚಿಟಚಿಚಿಛಿಚಿಜemಥಿ.oಡಿg ಇಲ್ಲಿ ಸಹ ಪಡೆಯಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಹೆಚ್.ವಿ. ಇಂದ್ರಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಮನ ಸೆಳೆದ ಭಾರತ ಯಾತ್ರೆ ಬೆಂಬಲಿತ ಬೃಹತ್ ಜಾಥಾ
ಚಾಮರಾಜನಗರ, ಸೆ. 15 ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಕಳ್ಳಸಾಗಾಣಿಕೆ ವಿರುದ್ಧ ಹೋರಾಡಲು ನೋಬೆಲ್ ಪಾರಿತೋಷಕ ಪುರಸ್ಕøತರಾದ ಕೈಲಾಸ್ ಸತ್ಯಾರ್ಥಿ ಅವರು ಕೈಗೊಂಡಿರುವ ಭಾರತ ಯಾತ್ರೆ ಬೆಂಬಲಿಸಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೂ ವಿದ್ಯಾರ್ಥಿಗಳ ಬೃಹತ್ ಜಾಥಾ ಕಾರ್ಯಕ್ರಮ ಇಂದು ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ ಹಾಗೂ ಸಾಧನಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ನಗರದ ಪ್ರವಾಸಿ ಮಂದಿರದ ಬಳಿ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ನ್ಯಾಯಾಧೀಶರು ಮಕ್ಕಳ ಹಕ್ಕುಗಳನ್ನು ಕಾಪಾಡಬೇಕಿದೆ. ಬಾಲ್ಯವಿವಾಹ ಪದ್ಧತಿ ಸಮಾಜದಲ್ಲಿ ದೊಡ್ಡ ಪಿಡುಗು ಆಗಿದೆ. 18 ವರ್ಷಕ್ಕೂ ಮುಂಚೆ ಹೆಣ್ಣುಮಕ್ಕಳಿಗೆ ಹಾಗೂ 21 ವರ್ಷಕ್ಕೂ ಮೊದಲು ಗಂಡುಮಕ್ಕಳಿಗೆ ವಿವಾಹ ಮಾಡುವಂತಿಲ್ಲ. ಈ ಸಂಬಂಧ ಕಾಯಿದೆ ಸಹ ಜಾರಿಗೆ ಬಂದಿದೆ. ಈ ಕುರಿತು ವ್ಯಾಪಕವಾಗಿ ಅರಿವು ಮೂಡಿಸಬೇಕಿದೆ ಎಂದರು.
ಬಾಲ್ಯವಿವಾಹ ಆಗುವುದರಿಂದ ಹೆಣ್ಣುಮಕ್ಕಳ ಮಾನಸಿಕ, ದೈಹಿಕ ಹಾಗೂ ಆರೋಗ್ಯ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಬಾಲ್ಯವಿವಾಹವಾದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಗ್ರಾಮ ಸುತ್ತಮುತ್ತಲ ಪ್ರದೇಶದಲ್ಲಿ ಬಾಲ್ಯವಿವಾಹ ತಡೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕು. ಜನರಿಗೆ ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮನದಟ್ಟಾಗುವಂತೆ ತಿಳಿವಳಿಕೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ ಇನ್ನಿತರ ಸಂಘಸಂಸ್ಥೆಗಳು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಶ್ರಮಿಸುತ್ತಿವೆ. ಇದಕ್ಕೆ ಸರ್ವರೂ ಕೈಜೋಡಿಸಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಬಳಿಕ ಪ್ರಾರಂಭವಾದ ವಿದ್ಯಾರ್ಥಿಗಳ ಜಾಗೃತಿ ಜಾಥಾ ನಗರದ ಚಾಮರಾಜೇಶ್ವರ ದೇವಾಲಯ ಬಳಿ ತಲುಪಿತು. ಇದೇ ವೇಳೆ ಸಮಾವೇಶಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಜೆ. ಸುರೇಶ್ ಅವರು ನೊಬೆಲ್ ಪಾರಿತೋಷಕ ಪುರಸ್ಕøತರಾದ ಕೈಲಾಸ್ ಸತ್ಯಾರ್ಥಿ ಅವರು ಸುರಕ್ಷಿತ ಬಾಲ್ಯ - ಸುರಕ್ಷಿತ ಭಾರತ ಎಂಬ ಆಶಯವನ್ನಿಟ್ಟುಕೊಂಡು ಭಾರತದ ಉದ್ದಗಲಕ್ಕೂ ಭಾರತ ಯಾತ್ರೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲೂ ಬೆಂಬಲಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾರತ ಯಾತ್ರೆ ಕಾರ್ಯಕ್ರಮ ಬೆಂಬಲಿಸಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿತ್ತು. ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸಹಿ ಹಾಕುವ ಮೂಲಕ ಭಾರತ ಯಾತ್ರೆಗೆ ತಮ್ಮ ಸಹಮತ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೆಜಿನಾ ಮೆಲಾಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾ ಅಧಿಕಾರಿ ಬಸವರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶೀಲ, ಎಲ್. ಸುರೇಶ್, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಸೆ. 16ರಂದು ಮುತ್ತಿಗೆ ಗ್ರಾಮದಲ್ಲಿ ಗ್ರಾಹಕ ಅದಾಲತ್
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಆಹಾರ ಇಲಾಖೆ ಸಹಯೋಗದೊಂದಿಗೆ ನಗರದ ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘ ಗ್ರಾಹಕ ಅದಾಲತ್ ಕಾರ್ಯಕ್ರಮವನ್ನು ಚಾಮರಾಜನಗರ ತಾಲೂಕಿನ ಮುತ್ತಿಗೆ ಗ್ರಾಮದ ಶಾಲಾ ಆವರಣದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಸೆಪ್ಟೆಂಬರ್ 16ರಂದು ನಗರದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಅವರ ಜಯಂತಿ ಕಾರ್ಯಕ್ರಮವನ್ನು ಸೆಪ್ಟಂಬರ್ 16ರಂದು ಬೆಳಗ್ಗೆ 11 ಗಂಟೆಗೆ ನಗರದ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಘನ ಉಪಸ್ಥಿತಿ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಬ್ರಹ್ಮರ್ಷಿ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಷನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆಯ ಪ್ರಗತಿಪರ ಚಿಂತಕರು ಹಾಗೂ ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment