Sunday, 17 September 2017

ವಿಶ್ವಕರ್ಮ ಸಮುದಾಯ ಶಿಕ್ಷಣಕ್ಕೂ ಆದ್ಯತೆ ನೀಡಲು ಜಿ,ಪಂ.ಅಧ್ಯಕ್ಷರ ಸಲಹೆ (17-09-2017) VEERABHADRA SWAMY S RAAMASAMUDRA

   

ವಿಶ್ವಕರ್ಮ ಸಮುದಾಯ ಶಿಕ್ಷಣಕ್ಕೂ ಆದ್ಯತೆ ನೀಡಲು ಜಿ,ಪಂ.ಅಧ್ಯಕ್ಷರ ಸಲಹೆ

ಚಾಮರಾಜನಗರ, ಸೆ. 17- ವಿಶ್ವಕರ್ಮ ಸಮುದಾಯ ಶೈಕ್ಷಣಿಕಾವಾಗಿ ಮುಂದೆ ಬರಲು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸಲಹೆ ಮಾಡಿದರು.
ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಸಮುದಾಯ ಪಂಚ ಕಸುಬುಗಳಿಂದ ವಿಶ್ವದಲ್ಲೇ ಮಾನ್ಯತೆ ಪಡೆದುಕೊಂಡಿದೆ. ದಿನನಿತ್ಯದ ಬದುಕಿನಲ್ಲಿ ಅವಶ್ಯವಿರುವ ಪರಿಕರಗಳು ವಿಶೇಷವಾಗಿ ರೈತ ಸಮುದಾಯದ ಕೃಷಿ ಚಟುವಟಿಕೆಗಳಿಗೆ ಬೇಕಿರುವ ಉಪಕರಣಗಳ ತಯಾರಿಕೆಯಲ್ಲಿ ಸಿದ್ದಹಸ್ತರಾಗಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಕುಲಕಸುಬು ಜೊತೆಗೆ ಶೈಕ್ಷಣಿಕ ರಂಗದಲ್ಲಿ ಆಸಕ್ತಿ ವಹಿಸಬೇಕು ಎಂದು ರಾಮಚಂದ್ರ ತಿಳಿಸಿದರು.

ರಾಜ್ಯ ಸರ್ಕಾರ ಶಿಕ್ಷಣ ಕೇತ್ರದ ಪ್ರಗತಿಗೆ ಹಲವಾರು ಅನುಕೂಲಕರ ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಶಿಕ್ಷಣ ಪಡೆದು ಸಮಾಜದಲ್ಲಿ ಅಭಿವೃದ್ಧಿಯಾಗಬೇಕೆಂದು ಮುಖ್ಯ ಉದ್ದೇಶವಾಗಿದೆ. ಪ್ರತಿಯೊಬ್ಬರು ಅಧ್ಯಯನ, ವ್ಯಾಸಂಗಕ್ಕೆ ಮಹತ್ವ ನೀಡಬೇಕೆಂದು ರಾಮಚಂದ್ರ ಅಭಿಪ್ರಾಯಪಟ್ಟರು.

ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ವಿಶ್ವಕರ್ಮ ಸಮುದಾಯ ಪ್ರಸ್ತುತ ಸಂದರ್ಭಗಳಿಗೆ ಅನುಗುಣವಾಗಿ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ನೂತನ ಆವಿಷ್ಕಾರ ತಂತ್ರಜ್ಞಾನದ ಬಗ್ಗೆ ತಿಳಿವಳಿಕೆ ಹೊಂದಲು ಶಿಕ್ಷಣ ಅತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕೆಂದು ಹೇಳಿದರು.


ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರ ಪ್ರತ್ಯೇಕವಾಗಿ ನಿಗಮ ಸ್ಥಾಪಿಸಿದೆ. ಈ ಮೂಲಕ ಸಮುದಾಯದ ಜನತೆಗೆ ನೆರವಾಗುವ ಯೋಜನೆಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ನಿಗಮಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕೆಂದು ಮನವಿ ಮಾಡಲಾಗಿದೆ. ಸರ್ಕಾರ ಒದಗಿಸಲಿರುವ ಸೌಲಭ್ಯಗಳನ್ನು ಪಡೆಯಲು ವಿಶ್ವಕರ್ಮ ಸಮಾಜದ ಜನರು ಮುಂದೆ ಬರಬೇಕು ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲ್ಲೂಕು ಪಂಚಾಂiÀiತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು ಮಾತನಾಡಿ ವಿಶ್ವಕರ್ಮ ಸಮುದಾಯ ಜನರು ನಿರಂತರ ಕಾಯಕ ಯೋಗಿಗಳು ಆಗಿದ್ದಾರೆ. ಬೇಲೂರು, ಹಳೆಬೀಡುವಿನಂತಹ ಐತಿಹಾಸಿಕ ವಾಸ್ತುಶಿಲ್ಪ  ದೇವಾಲಯಗಳನ್ನು ರಚಿಸುವ ಮೂಲಕ ಜನಮಾನಸದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಇಂತಹ ನೈಪುಣ್ಯತೆ ಹೊಂದಿರುವ ಸಮುದಾಯದ ಕೊಡುಗೆ ಇಂದಿಗು ಮುಂದುವರೆದಿದೆ ಎಂದು ಶ್ಲಾಘಿಸಿದರು.

ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಮುಖ್ಯಕಾಂiÀರ್iನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಅಮಚವಾಡಿ ಕಾಲೇಜು ಉಪನ್ಯಾಸಕರಾದ ಪ್ರಭುಸ್ವಾಮಿಅವರು ಶ್ರೀ ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಕನ್ನಡ ಮತ್ತು ಸಂಸೃತಿ ಇಲಾಖೆ ಸಹಾಯಕನಿರ್ದೇಶಕರಾದ ಡಿ.ನಾಗವೇಣಿ, ಸಮಾಜದ  ಮುಖಂಡರಾದ ಸೋಮಣ್ಣಚಾರ್, ಕಾಂತರಾಜು, ಅನಂತು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರ ಜಿಲ್ಲಾ ಪ್ರವಾಸ  


ಚಾಮರಾಜನಗರ, ಸೆ. 17  ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಸೆಪ್ಟೆಂಬರ್ 18 ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಸೆ. 18ರಂದು ಬೆಳಿಗ್ಗೆ 11 ಗುಂಡ್ಲುಪೇಟೆಯಲ್ಲಿ ಸಾರ್ವಜನಿಕರನ್ನು ಭೇಟಿ ಅಹವಾಲು ಸ್ವೀಕರಿಸುವರು. 12 ಗಂಟೆಗೆ ಗುಂಡ್ಲುಪೇಟೆಯ ಆದರ್ಶ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವರು. ಸಂಜೆ 4 ಗಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕ್ಷೇಮಾಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸೆ. 20ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಪಶು ಚಿಕಿತ್ಸಾಲಯದ ಕಟ್ಟಡದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 11.30 ಗಂಟೆಗೆ ಬೊಮ್ಮಲಾಪುರದಲ್ಲಿ ಪಶು ಚಿಕಿತ್ಸಾಲಯದ ಕಟ್ಟಡದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಸಾಗಡೆ, ಕೆಂಗಾಟಿ ಲೋಕೋಪಯೋಗಿ ರಸ್ತೆಗೆ ಗುದ್ದಲಿಪೂಜೆ ನೆರವೇರಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  





No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು