Friday, 1 September 2017

ಬಾಂಡಲಿ-ಮಾವುಟಿ ಹಿಡಿದು, ಗೋಣಿತಾಟ್ ಹಾಸಿ ಸತ್ಯಾಗ್ರಹ ಮಾಡಿದ ವಾಟಾಳ್.......vss (01-10-2017)


     

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಸೆ. 01 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು  ಸೆಪ್ಟೆಂಬರ್ 5 ರಿಂದ 27ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಸೆಪ್ಟೆಂಬರ್ 5ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಸೆಪ್ಟೆಂಬರ್ 12ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.
ಸೆಪ್ಟೆಂಬರ್ 18ರಂದು ಯಳಂದೂರು, 23ರಂದು ಕೊಳ್ಳೇಗಾಲ ಹಾಗೂ ಸೆಪ್ಟೆಂಬರ್ 27ರಂದು ಹನೂರಿನಲ್ಲಿ  ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ಕೊಳ್ಳೇಗಾಲ : ಸಾಲ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಸೆ. 01 - ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ದೀನದಯಾಳ್ ಅಂತ್ಯೋದಯ ಯೋಜನೆ, ನಲ್ಮ್ ಅಭಿಯಾನ ಯೋಜನೆಯಡಿ 2017-18ನೇ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಲ್ಲಿ ವ್ಯಕ್ತಿಗತ ಹಾಗೂ ಗುಂಪು ಉದ್ಯಮಶೀಲತೆ ಕಾರ್ಯಕ್ರಮದಡಿ ಸಾಲ ಮತ್ತು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕಾರ್ಯಪಡೆ (ಟಾಸ್ಕ್‍ಫೋರ್ಸ್) ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳನ್ನು ರೋಸ್ಟರ್ ಪದ್ದತಿಯಲ್ಲಿ ಆಯ್ಕೆ ಮಾಡಿ ಬ್ಯಾಂಕಿಗೆ ಸಲ್ಲಿಸಲಾಗುವುದು.
ಅರ್ಜಿಯಲ್ಲಿ ತಿಳಿಸಿರುವ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸುವುದು. ಗುಂಪು ಸಾಲಕ್ಕಾಗಿ  ಸದರಿ ಯೋಜನೆಯಲ್ಲಿ ರಚಿಸಿರುವ ಮಹಿಳಾ ಸಂಘಗಳು ಮಾತ್ರ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ಸಂಬಂಧಿಸಿದ ಶಾಖೆಯನ್ನು ಸಂಪರ್ಕಿಸಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು  ತಿಳಿಸಿದ್ದಾರೆ.

 ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ, ಸೆ. 01 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮಾರ್ಚ್ ಮತ್ತು ಏಪ್ರಿಲ್ 2017ರಲ್ಲಿ ನಡೆದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ.ಗೆ ಸೇರಿದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 4ರೊಳಗೆ ಸಲ್ಲಿಸಿ ಅಪ್ ಲೋಡ್ ಮಾಡಿರುವ ಎಲ್ಲಾ ದಾಖಲಾತಿಗಳ ದೃಢೀಕೃತ ಪ್ರತಿಗಳನ್ನು ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ವಿದ್ಯಾರ್ಥಿಗಳು ಸಲ್ಲಿಸುವ ದಾಖಲಾತಿಗಳನ್ನು ಆನ್ ಲೈನ್ ನಲ್ಲಿ ಪರಿಶೀಲಿಸಿ ಷರಾದೊಂದಿಗೆ ಆಯುಕ್ತರ ಕಚೇರಿಗೆ ಸಲ್ಲಿಸಲಾಗುವುದು. 
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4ರವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಹಾಗೂ ಮೀಲಾತಿಯನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರದ ಮೊತ್ತವನ್ನು ನಿಗದಿಪಡಿಸಲಾಗುವುದು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೃಢೀಕೃತ ದಾಖಲೆಗಳ ಪರಿಶೀಲನ ಹಾಗೂ ಆನ್ ಲೈನ್ ನಲ್ಲಿ ಪರಿಶೀಲನೆಯನ್ನು ಸೆಪ್ಟೆಂಬರ್ 8ರೊಳಗೆ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.   

ಪ.ಜಾ, ಪ.ಪಂ ಸಮುದಾಯದೊಳಗೆ ಅಂತರ ಜಾತಿ ವಿವಾಹವಾದವರಿಗೆ 2 ಲಕ್ಷ ರೂ. ಪ್ರೋತ್ಸಾಹಧನ

ಚಾಮರಾಜನಗರ, ಸೆ. 01 :- ರಾಜ್ಯ ಸರ್ಕಾರವು 2017-18ನೇ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವಿನ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದ ಯುವಕ ಯುವತಿಯರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಿದೆ.
ಅಂತರಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಯುವತಿಯವರು ರಾಜ್ಯಕ್ಕೆ ಸೇರಿದವರಾಗಿರಬೇಕು. ಯುವತಿಯ ವಯೋಮಾನ 18 ರಿಂದ 42 ವರ್ಷ ಹಾಗೂ ಯುವಕನ ವಯೋಮಾನ 21 ರಿಂದ 45 ವರ್ಷ ಆಗಿರಬೇಕು. ದಂಪತಿಗಳ ಒಟ್ಟಾರೆ ವಾರ್ಷಿಕ ವರಮಾನ ರೂ. 2 ಲಕ್ಷ ಮೀರಿರಬಾರದು. 
ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಮುಂಚೆ ಉಪನೊಂದಣಾಧಿಕಾರಿ ಕಚೇರಿಯಲ್ಲಿ ವಿವಾಹವಾದ ಬಗ್ಗೆ ನೊಂದಾಯಿಸಿರಬೇಕು. ವಾಸ್ತವ್ಯವಿರುವ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಅಸ್ಪøಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ವಿವಾಹ ಅಥವ ವಿಧವೆಯರು ಮರುವಿವಾಹ ಯೋಜನೆಗಳಡಿ ಪ್ರೋತ್ಸಾಹಧನ ಪಡೆದವರು ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಲ್ಲ. 
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯದವರು ಸರಳ ವಿವಾಹ ಕಾರ್ಯಕ್ರಮದಡಿ ಮದುವೆಯಾದಲ್ಲಿ ಸದರಿ ಯೋಜನೆಯಡಿ ಸರಳ ವಿವಾಹದ 50 ಸಾವಿರ ರೂ ಹೊರತುಪಡಿಸಿ ಉಳಿದ 1.5 ಲಕ್ಷ ರೂ. ಪ್ರೋತ್ಸಾಹಧನವನ್ನು ಪಡೆಯಲು ಅರ್ಹರಿರುತ್ತಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ಪಟ್ಟಿಯಲ್ಲಿ ಒಂದೇ ಸಂಖ್ಯೆಯಲ್ಲಿ ನಮೂದಿಸಿರುವ ಸಮಾನಾಂತರ ಜಾತಿಗಳ ಒಳಗೆ ವಿವಾಹವಾದಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ. 
ಅರ್ಹರಿಗೆ ದಂಪತಿಗಳ ಜಂಟಿ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ನೆಫ್ಟ್ ಮೂಲಕ ಪ್ರೋತ್ಸಾಹಧನ ಜಮೆ ಮಾಡಲಾಗುತ್ತದೆ. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರಾದ ಕೆ.ಎಸ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್ : ಪ್ರಬಂಧ, ಕಿರುಚಿತ್ರ ನಿರ್ಮಾಣ, ಚಿತ್ರಕಲಾ ಸ್ಪರ್ಧೆ 

ಚಾಮರಾಜನಗರ, ಸೆ. 01 - ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಚ ಸಂಕಲ್ಪದ ಮೂಲಕ ಸ್ವಚ್ಚ ಸಿದ್ಧಿ ಎಂಬ ಕಾರ್ಯಕ್ರಮದಡಿ ಸ್ವಚ್ಚ ಭಾರತ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಪ್ರಬಂಧ, ಕಿರುಚಿತ್ರ ನಿರ್ಮಾಣ ಹಾಗೂ ಚಿತ್ರಕಲೆ ಸ್ಪರ್ಧೆಯನ್ನು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಆಯೋಜಿಸಿದೆ.
ಭಾರತದ ಸ್ವಚ್ಚತೆಗೆ ನಾನೇನು ಮಾಡಬಹುದು ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆಯನ್ನು ಸೆಪ್ಟೆಂಬರ್ 3 ಹಾಗೂ 4 ರಂದು ಏರ್ಪಡಿಸಲಾಗಿದೆ. ಪ್ರತಿ ಪ್ರಬಂಧಕ್ಕೂ ಗರಿಷ್ಟ 250 ಪದಗಳಿಗೆ ಮೀರಿರಬಾರದು. ಭಾರತ ಸ್ವಚ್ಚಗೊಳ್ಳುವ ದಿಸೆಯಲ್ಲಿ ನನ್ನ ಕೊಡುಗೆ ಎಂಬ ಕಿರುಚಿತ್ರ ತಯಾರಿ ಸ್ಪರ್ಧೆಯು ಸ್ಪರ್ಧೆಯನ್ನು ಸೆಪ್ಟೆಂಬರ್ 3 ಹಾಗೂ 4ರಂದು ನಡೆಯಲಿದೆ. ಪ್ರತಿ ಕಿರುಚಿತ್ರ ಅವಧಿಯು ಗರಿಷ್ಠ 2 ರಿಂದ 3 ನಿಮಿಷ ಮೀರಿರಬಾರದು. 
ಈ ಎರಡೂ ಸ್ಪರ್ಧೆಗಳಿಗೆ ಶಿಕ್ಷಕರು, ಅಧ್ಯಾಪಕರು, ವೃತ್ತಿಪರರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕರು ಭಾಗವಹಿಸಬಹುದಾಗಿದೆ. 
ಒಂದರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 5 ಮತ್ತು 6ರಂದು ಚಿತ್ರಕಲೆ ಸ್ಪರ್ಧೆ (ಪೈಂಟಿಂಗ್) ನಡೆಯಲಿದೆ.  
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಬಂಧ ಹಾಗೂ ವಿಡಿಯೋ ಕಿರುಚಿತ್ರ ಹಾಗೂ ಬಣ್ಣದ ಚಿತ್ರಗಳನ್ನು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸಲ್ಲಿಸಬೇಕು. ಇವುಗಳನ್ನು ಗ್ರಾಮ ಪಂಚಾಯತಿ ಮೂಲಕ ತಾಲ್ಲೂಕು ಪಂಚಾಯತಿಗೆ ಸಲ್ಲಿಸಬೇಕಿದೆ.
ಗ್ರಾಮ ಪಂಚಾಯತಿಯಿಂದ ತಾಲ್ಲೂಕು ಪಂಚಾಯತಿಗೆ ಸೆಪ್ಟೆಂಬರ್ 6 ರೊಳಗೆ ಪ್ರಬಂಧ, ಕಿರುಚಿತ್ರ ಹಾಗೂ ಬಣ್ಣದ ಚಿತ್ರಗಳನ್ನು ತಾಲ್ಲೂಕು ಪಂಚಾಯತಿಗೆ ಸಲ್ಲಿಸಬೇಕು. ತಾಲ್ಲೂಕು ಹಂತದಲ್ಲಿ ಮೌಲ್ಯಮಾಪನ ನಡೆಸಿ ಸೆಪ್ಟೆಂಬರ್ 8 ರೊಳಗೆ ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕಿದೆ.
ತಾಲೂಕುಗಳಿಂದ ಸ್ವೀಕರಿಸಲಾದ ಪ್ರಬಂಧ ಕಿರುಚಿತ್ರ ಹಾಗೂ ಬಣ್ಣದ ಚಿತ್ರಗಳನ್ನು ಪರಿಶೀಲಿಸಿ ಅತ್ಯುತ್ತಮವಾಗಿರುವ ಮೂವರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮೂವರನ್ನು ರಾಜ್ಯ ಕಛೇರಿಗೆ ಸಲ್ಲಿಸಲಾಗುವುದು. ರಾಜ್ಯಮಟ್ಟದ ಮೌಲ್ಯಮಾಪನ ತಂಡವು ಪರಿಶೀಲಿಸಿ ಅತ್ಯುತ್ತಮ ಮೂರು ಆಯ್ಕೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆÀ ಅರ್ಜಿ ಆಹ್ವಾನ

ಚಾಮರಾಜನಗರ, ಸೆ. 01 :- ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಅಸ್ಪಶ್ಯತೆ ನಿರ್ಮೂಲನೆಗಾಗಿ ಮತ್ತು ದೌರ್ಜನ್ಯ ವಿರುದ್ಧ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. 
ಕಳೆದ 2 ವರ್ಷಗಳ ಗಣನೀಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 7 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆÀ ಅರ್ಜಿ ಆಹ್ವಾನ

ಚಾಮರಾಜನಗರ, ಸೆ. 01- ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದವರ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಿದ ವ್ಯಕ್ತಿ  ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. 
ಪರಿಶಿಷ್ಟ ವರ್ಗದವರ ಸರ್ವಾಂಗೀಣ ಅಭಿವೃದ್ಧಿಗೆ ಸಲ್ಲಿಸಿದ ಸೇವಾ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 12 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಸೆ. 01 - ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ನಿರ್ವಹಣೆಯ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಭೌತಶಾಸ್ತ್ರ ವಿಷಯದಲ್ಲಿ ಎಂಎಸ್ಸಿ, ಬಿಎಡ್ ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜು ಪ್ರಾಂಶುಪಾಲರನ್ನು (ಮೊ. 9844798718) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯಲ್ಲಿ ಕ್ರೀಡಾ ಮನೋಭಾವನೆ ಹೊಂದಿ : ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಸಲಹೆ

ಚಾಮರಾಜನಗರ, ಸೆ. 01 - ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಸ್ಪರ್ಧಿಗಳು ಎದೆಗುಂದದೆ ಕ್ರೀಡಾ ಮನೋಭಾವನೆ ಹೊಂದುವ ಮೂಲಕ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಸಲಹೆ ಮಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಕ್ರೀಡಾಪಟುವು ನಿರ್ದಿಷ್ಟ ಗುರಿ ಹೊಂದಬೇಕು. ಸತತ ಅಭ್ಯಾಸ ಪರಿಶ್ರಮ ಮೂಲಕ ಹೆಚ್ಚಿನ ಸಾಧನೆ ಮಾಡಬೇಕು. ಸೋಲು ಗೆಲುವು ಬಗ್ಗೆ ಚಿಂತನೆ ಬೇಡ. ಸ್ಪರ್ಧೆಯಲ್ಲಿ ಭಾಗವಹಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಸದಾಶಿವಮೂರ್ತಿ ಕಿವಿಮಾತು ಹೇಳಿದರು.
ತಾಲೂಕು ಮಟ್ಟದ ಕ್ರೀಡಾಪಟುಗಳಿಗೆ ಅವರ ಸಾಮಥ್ರ್ಯ ತೋರಲು ಅವಕಾಶ ನೀಡುವ ದಸರಾ ಕ್ರೀಡಾಕೂಟವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಲೂಕು ಕ್ರೀಡಾ ಸ್ಪರ್ಧಿಗಳು ಇನ್ನೂ ಉತ್ತಮ ಹಂತಕ್ಕೆ ತಲುಪಲಿ ಎಂದು ಸದಾಶಿವಮೂರ್ತಿ ಹಾರೈಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಮಾತನಾಡಿ ಕ್ರೀಡಾಪಟುಗಳು ಹುರುಪಿನಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಆಸಕ್ತಿ ಹಾಗೂ ಶ್ರದ್ಧೆ ರೂಢಿಸಿಕೊಂಡು ಎಲ್ಲಾ ಭಾಗಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವಂತಾಗಬೇಕು. ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕೆಂದು ಆಶಯ ವ್ಯಕ್ತಪಡಿಸಿದರು. 
ಮತ್ತೋರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ ಮಾತನಾಡಿ ಪಾಠಪ್ರವಚನಗಳ ಜತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಅಂದರೆ ಆಟೋಟ ಸ್ಪರ್ಧೆಗಳಲ್ಲಿ ತೊಡಗಿಕೊಂಡಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಕ್ರೀಡೆಯಲ್ಲಿ ನಿರತರಾಗುವುದರಿಂದ ಹಲವಾರು ಸ್ಪರ್ಧೆಗಳಲ್ಲಿ ಪಾಲ್ಗೊಂಡು ವೈಯಕ್ತಿಕವಾಗಿ ಹಾಗೂ ಜಿಲ್ಲೆಗೂ ಉತ್ತಮ ಕೀರ್ತಿ ತರಬಹುದೆಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಚಂದ್ರಕಲಾ ಚಂದ್ರಶೇಖರ್, ನಗರಸಭೆ ಸದಸ್ಯರಾದ ಎಂ. ರಾಜಶೇಖರ ಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 
***********************************************************************


 ಬಾಂಡಲಿ-ಮಾವುಟಿ ಹಿಡಿದು, ಗೋಣಿತಾಟ್ ಹಾಸಿ ಸತ್ಯಾಗ್ರಹ  ಮಾಡಿದ ವಾಟಾಳ್.......vss

ಚಾಮರಾಜನಗರ, ಸೆ,01- ಚಾಮರಾಜನಗರದ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ, ಅಭಿವೃದ್ದಿಯ ಸಂಕೇvವಾದÀ ಬಾಂಡಲಿ-ಮಾವುಟಿ ಹಿಡಿದು, ಗೋಣಿತಾಟ್ ಹಾಸಿ ಅದರ ಮೇಲೆ ಕುಳಿತು ಸತ್ಯಾಗ್ರಹ ಮಾಡಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಗರ್ಭಿಣಿ ಹೆಂಗಸರು ಹೆರಿಗೆಗೆ ಗಾಡಿ ಅಥವಾ ಯಾವುದೇ ವಾಹನದಲ್ಲಿ ಆಸ್ಪತ್ರೆಗೆ ಹೋಗಬೇಕಾದರೆ  ಮಾರ್ಗಮಧ್ಯದಲ್ಲಿ ಮಗು ಜನನವಾಗುತ್ತದೆ. ಇವರಿಗೆ ಆಸ್ಪತ್ರೆ ಮತ್ತು ಡಾಕ್ಟರ್ ಬೇಕಾಗಿಲ್ಲ ಅಂತಹ ಪರಿಸ್ಥಿತಿ ಇದೆ. ಚಾಮರಾಜನಗರದ ಎಲ್ಲಾ ಬೀದಿಯ ರಸ್ತೆಗಳು ಹಾಳಾಗಿ ಹಳ್ಳ-ಗುಂಡಿಗಳಾಗಿ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೆ ಸರ್ಕಾರ ಇತ್ತ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
    ರಸ್ತೆ ಆಗಲೀಕರಣಕ್ಕೆ ಮನೆಯನ್ನು ಕಳೆದುಕೊಂಡಿರುವ ನೊಂದ ನಿವಾಸಿಗಳಿಗೆ ಕೂಡಲೆ ನಿವೇಶನ ಕೊಡಬೇಕು ನಗರದಲ್ಲಿ 90 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ತಕ್ಷಣವೇ ಕಾವೇರಿ ಕುಡಿಯುವ ನೀರಿನ 2ನೇ ಹಂತ ಜಾರಿ ಆಗಬೇಕು. ಒಳಚರಂಡಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಬೇಗ ಮುಗಿಸಬೇಕು ಅಲ್ಲದೇ ನಗರದ ಸಮಗ್ರ ಅಭಿವೃದ್ದಿಗೆ ಸರ್ಕಾರ ವಿಶೇಷವಾಗಿ ಪರಿಗಣಿಸಬೇಕು ಎಂದು ವಾಟಾಳ್ ಅಗ್ರಹಿಸಿದರು.
    ಚಾಮರಾಜನಗರವನ್ನು ಜಿಲ್ಲೆಯನ್ನಾಗಿ ಮಾಡಿದವನು ನಾನೇ, ಕುಡಿಯಲು ಕಾವೇರಿ ನೀರು ತಂದವನು ನಾನೇ, ಜೋಡಿರಸ್ತೆ, ಖಾಸಗಿ ಬಸ್ ನಿಲ್ದಾಣ, ಆಟದ ಮೈದಾನ ಸೇರಿದಂತೆ ಇನ್ನೂ ಅನೇಕ ಅಭಿವೃದ್ದಿ ಕೆಲಸವನ್ನ ಮಾಡಿದ್ದೇನೆ ಎಂದು ತಿಳಿಸಿದ ವಾಟಾಳ್ ಅವರು ಇನ್ನೂ 15ದಿನಗಳ ಒಳಗಾಗಿ ನಗರ ಪ್ರದೇಶವನ್ನು ಅಭಿವೃದ್ದಿ ಪಡಿಸದಿದ್ದರೆ  ನಡು ಬೀದಿಯಲ್ಲಿ ಮಲಗಿ ಉರುಳು ಸೇವೆ ಮಾಡುವುದಾಗಿ ಎಚ್ಚರಕೆ ನೀಡಿದರು.
    ಚಾಮರಾಜನಗರ ಜಿಲ್ಲೆಯಾಗಿ 20ವರ್ಷಗಳು ಆಗಿದೆ. ಎಷ್ಟು ಅಭಿವೃದ್ದಿ ಯಾಗಬೇಕಾಗಿತ್ತು  ಅಷ್ಟು ಅಭಿವೃದ್ದಿ ಕಂಡಿಲ್ಲ ಗಡಿ ಪ್ರದೇಶವಾದ ಚಾಮರಾಜನಗgವನ್ನು  ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಸಾವಿರ ಕೋಟಿ ರೂಪಾಯಿ ಕೊಡಬೇಕೆಂದು ವಾಟಾಳ್ ಮನವಿ ಮಾಡಿದರು.
   ಹಿಂದುಳಿದ ಗಡಿ ಪ್ರದೇಶವಾದ ಚಾಮರಾಜನಗರ ಜಿಲ್ಲೆಗೆ ತನ್ನದೇ ಯಾದ ಗಾಂಭೀರ್ಯ ಶಕ್ತಿ ಇದೆ, ಅದ್ಬುತವಾದ ನಿಸರ್ಗ ಸಂಪತ್ತು ಇದೆ. ಪವಿತ್ರ ಸ್ಥಳ ಮಲೈ ಮಹದೇಶ್ವರ ಸ್ವಾಮಿ ಬೆಟ್ಟ, ಬಿಳಿಗಿರಿರಂಗಸ್ವಾಮಿ ಬೆಟ್ಟ, ಬಂಡಿಪುರ. ಅಲ್ಲದೇ ಇನ್ನೂ ಅನೇಕ ಪವಿತ್ರ ಸ್ಥಳವಿದೆ. ಆದ್ದರಿಂದ ಸರ್ಕಾರ ಹೆಚ್ಚಿನ ಗಮನ ಕೊಡಬೇಕೆಂದು ವಾಟಾಳ್ ಒತ್ತಾಯಿಸಿದರು.
  ಈ ಹಿಂದೆ ಚಾಮರಾಜನಗರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಂದಿದ್ದರು.
    ಆಟದ ಮೈದಾನದಲ್ಲಿ ಬೃಹತ್ ಸಭೆ ನಡೆಯಿತು.  ನಾನು ಶಾಸಕನಾಗಿದ್ದೆ  ಎಚ್,ಎಸ್.ಮಹದೇವಪ್ರಸಾದ್ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದರು. ಸಭೆಯಲ್ಲಿ ಚಾಮರಾಜನಗರ ಜಿಲ್ಲೆ ಸಮಗ್ರ ಅಭಿವೃದ್ದಿಗೆ 350 ಕೋಟಿ ರೂ ಕೊಡುತ್ತೇನೆ ಎಂದು ಹೇಳಿದರು ಆ ಹಣ ಎಲ್ಲಿ ಹೋಯಿತು ಎಂದು ಪ್ರಶ್ನೆಸಿದ ವಾಟಾಳ್‍ರು ಮೊನ್ನೆ ತೆರಕಣಾಂಬಿಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಹುಗ್ರಾಮಗಳ ಕುಡಿಯುವ ನೀರಿಗೆ ಚಾಲನೆ ನೀಡಿದರು ಆ ಹಣ ಮುಖ್ಯಮಂತ್ರಿ ಯಾಗಿದ್ದ ಕುಮಾರಸ್ವಾಮಿ ನೀಡಿದ್ದ ಹಣ ಎಂದು ತಿಳಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ರನ್ನು  ಗಡಿಪಾರ್ ಮಾಡಿ. ವಾಟಾಳ್ ಅಗ್ರಹ
  ಚಾಮರಾಜನಗರ,ಸೆ,01- ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ತೀರ್ಪು ನೀಡಿದರೆ. ನಾನೇ ಮೊದಲು ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಎಂದು ಕೂಗುತ್ತೇನೆ ಎಂದು ಹೇಳಿರುವ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು  ಅವರ ಸ್ಥಾನದಿಂದ ವಜಾಮಾಡಿ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು.
   ಇಂದು  ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ, ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ, ಬಾಂಡಲಿ-ಮಾವುಟಿ ಹಿಡಿದು ಸತ್ಯಾಗ್ರಹ ಮಾಡಿದ  ನಂತರ ವಾಟಾಳ್ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿರುವುದು ಅಕ್ಷಮ್ಯ ಅಪರಾಧ ಎಂದು ವಾಟಾಳ್ ಕಿಡಿ ಕಾರಿದರು.
 ಹೆಬ್ಬಾಳ್ಕರ್ ಅವರು ಜವಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ರಾಜ್ಯದ ಬಗ್ಗೆ ಗಂಭೀರವಾಗಿ ಮಾತನಾಡಬೇಕಾಗಿತ್ತು. ಆದರೆ ಬೇಜವಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಕೂಡಲೇ ಕಾಂಗ್ರೆಸ್ ಪಕ್ಷ ಇದರ ಬಗ್ಗೆ ಚಿಂತನೆ ಮಾಡಬೇಕು. ಇವರ ಹೆಸರನ್ನು ಮತದಾರರ ಪಟ್ಟಿಯಿಂದ ವಜಾ ಮಾಡಬೇಕು ಇವರ ವಿರುದ್ದವಾಗಿ ನಾಳೆ ಬೆಳಗಾವಿಯ ಕಿತ್ತೂರರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಮೆ ಮುಂದೆ ಕನ್ನಡ ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಲಾಗುವುದೆಂದು ವಾಟಾಳ್ ನಾಗರಾಜ್ ತಿಳಿಸಿದರು.
  ಈ ಸಂದರ್ಭದಲ್ಲಿ ದಳಪತಿವೀರತಪ್ಪ, ನಾಗರಾಜಮೂರ್ತಿ, ಕಾರ್‍ನಾಗೇಶ್, ವರದನಾಯಕ, ವಡ್ಡರಹಳ್ಳಿಮಹೇಶ್, ರೇವಣ್ಣಸ್ವಾಮಿ, ರಾಜೇಂದ್ರ, ವರದರಾಜು, ಶಿವಲಿಂಗಮೂರ್ತಿ, ಮಲ್ಲಿಕಾರ್ಜುನಸ್ವಾಮಿ, ಸಿದ್ದನಾಯಕ, ಗೋವಿಂದನಾಯಕ, ಲೋಕೇಶ್, ಚಿನ್ನನಾಯಕ, ಲಿಂಗಣ್ಣನಾಯಕ, ಗೋವಿಂದನಾಯಕ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.



No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು