Tuesday, 31 October 2017

ಮಹದೇಶ್ವರಬೆಟ್ಟ:-ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.1,09,10,190/- ( ಒಂದು ಕೋಟಿ ಒಂಭತ್ತು ಲಕ್ಷದ ಹತ್ತು ಸಾವಿರದ ನೂರತೊಂಭತ್ತು ರೂಪಾಯಿಗಳು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 027( ಇಪ್ಪತ್ತೇಳು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 2.805(ಎರಡು ಕೆ.ಜಿ ಎಂಟು ನೂರ ಐದು ಗ್ರಾಂ) ,ಶೈಕ್ಷಣಿಕ ಪ್ರಗತಿಗೆ ಉತ್ತೇಜಿಸಿ : ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ ಸಲಹೆ 31-10-2017

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:-

 ದಿನಾಂಕ:31-10-2017ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಕಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ ಪ್ರಾಧಿಕಾರದ ಸದಸ್ಯರುಗಳಾದ ಶ್ರೀ ಬಿ.ಮಹದೇವಪ್ಪ, ಶ್ರೀ ಕೊಪಾಳಿ ಮಾದೇವನಾಯ್ಕ, ಶ್ರೀ ಜವರೇಗೌಡ, ಡಿ.ದೇವರಾಜುರವರು  ಉಪಸ್ಥಿತರಿದ್ದರು ಹಾಗೂ ಪ್ರಾಧಿಕಾರದ ಪ್ರಭಾರ  ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು  ರವರು, ಸಹಾಯಕ ಅಭಿಯಂತರರಾದ 
ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,  ಕಛೇರಿಯ ಅಧೀಕ್ಷಕರಾದ  ಶ್ರೀಬಿ.ಮಾದರಾಜು, ಆರೋಗ್ಯ ನಿರೀಕ್ಷಕರಾದ ಶ್ರೀಕಾಂತ್ ವಿಭೂತಿ ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ  ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.1,09,10,190/- ( ಒಂದು ಕೋಟಿ ಒಂಭತ್ತು ಲಕ್ಷದ ಹತ್ತು ಸಾವಿರದ  ನೂರತೊಂಭತ್ತು ರೂಪಾಯಿಗಳು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ  ಪದಾರ್ಥಗಳು 0. 027( ಇಪ್ಪತ್ತೇಳು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 2.805(ಎರಡು ಕೆ.ಜಿ ಎಂಟು ನೂರ ಐದು ಗ್ರಾಂ) ದೊರೆತಿರುತ್ತದೆ.
*****************
     ನ. 10ರಂದು ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ, ಅ. 31- ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನವೆಂಬರ್ 10ರಂದು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಟಿಪ್ಪುಸುಲ್ತಾನ್ ಜಯಂತಿಯನ್ನು ಎಲ್ಲರ ಸಹಕಾರ ಪಡೆದು ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ನವೆಂಬರ್ 10ರಂದು ಮಧ್ಯಾಹ್ನ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವೇದಿಕೆ ಕಾರ್ಯಕ್ರಮ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ಅಂದು ಇರುವುದಿಲ್ಲ. ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮದ ಸಿದ್ಧತೆಗೆ ಎಲ್ಲ ವ್ಯವಸ್ಥೆಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಮಹಾನ್ ಪುರುಷರು, ನಾಯಕರು ಯಾವುದೇ ಒಂದು ವರ್ಗಕ್ಕೆ ಸೀಮಿತರಾಗಿಲ್ಲ. ಎಲ್ಲರೂ ಸೇರಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸೋಣ. ಈ ಹಿಂದೆಯೂ ಎಲ್ಲಾ ಕಾರ್ಯಕ್ರಮಗಳಿಗೂ ಸಹಕಾರ ನೀಡುತ್ತಾ ಬರಲಾಗಿದೆ. ಅದೇರೀತಿ ಈ ಬಾರಿಯೂ ಟಿಪ್ಪುಸುಲ್ತಾನ್ ಜಯಂತಿಯನ್ನು ಅಗತ್ಯ ಸಿದ್ಧತೆಗಳೊಂದಿಗೆ ಆಚರಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮಕ್ಕೆ ಮೊದಲು ಕವಾಲಿಯನ್ನು ಏರ್ಪಡಿಸಲಾಗುವುದು. ಜಯಂತಿ ಸಮಾರಂಭದಂದು ಟಿಪ್ಪುಸುಲ್ತಾನ್ ಅವರ ಕುರಿತು ಉಪನ್ಯಾಸ ನೀಡಲು ಭಾಷಣಕಾರರನ್ನು ಆಹ್ವಾನಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಅಂತಿಮವಾಗಿ ಭಾಷಣಕಾರರನ್ನು ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮಕ್ಕೆ ಅವಶ್ಯವಿರುವ ಎಲ್ಲ ಏರ್ಪಾಡುಗಳನ್ನು ಮಾಡಲು ಈಗಿನಿಂದಲೇ ಸೂಚನೆ ನೀಡಲಾಗುವುದು. ಎಲ್ಲರೂ ಸೇರಿ ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಫಲಪ್ರದಗೊಳಿಸೋಣವೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ನಗರಸಭೆ ಸದಸ್ಯರಾದ ಮಹೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸೈಯದ್ ರಫಿ, ಮುಖಂಡರಾದ ಸಯ್ಯದ್ ಆರಿಫ್, ರಫೀಕ್ ಅಹಮದ್, ಸುಹೇಬ್ ಅಹಮದ್, ನಾಗರಾಜು, ಆಲೂರು ನಾಗೇಂದ್ರ, ಸೈಯದ್ ಇಮ್ರಾನ್, ಮಹಮದ್ ಜಿಯಾವುಲ್ಲಾ, ಅಬ್ರಾರ್ ಅಹಮದ್, ಸಮೀವುಲ್ಲಾ ಖಾನ್, ಮಹಮದ್ ಅಸ್ಗರ್ ಮುನ್ನಾ, ಇತರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನ. 2ರಂದು ವಿಶ್ವ ಉಳಿತಾಯ ದಿನಾಚರಣೆ
ಚಾಮರಾಜನಗರ, ಅ. 31 - ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಚಂದನ ಮಹಿಳಾ ಅಭಿವೃದ್ಧಿ ಸಂಘ ಇವರ ಸಹಯೋಗದೊಂದಿಗೆ ನವೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರಿನÀಲ್ಲಿ ವಿಶ್ವ ಉಳಿತಾಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಯಳಂದೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋಮಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಚಂದನ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪುಟ್ಟಲಿಂಗಮ್ಮ ಅಧ್ಯಕ್ಷತೆ ವಹಿಸುವರು.
ಧ್ವನಿ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಲೀನಾಕುಮಾರಿ, ಚಂದನ ಮಹಿಳಾ ಅಭಿವೃದ್ಧಿ ಸಂಘದ ಕಾರ್ಯದರ್ಶಿ  ರತ್ನಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗಸ್ಥ ಮಹಿಳೆಯರ ವಸತಿಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಆಹ್ವಾನ
ಚಾಮರಾಜನಗರ, ಅ. 31 :-  ಉದ್ಯೋಗಸ್ಥ ಮಹಿಳೆಯರ ವಸತಿಗೃಹ  ನಿರ್ಮಾಣಕ್ಕಾಗಿ ವಸತಿಗೃಹ ನಿರ್ಮಿಸುವ ಸ್ವಯಂಸೇವಾ ಸಂಸ್ಥೆಗಳಿಗೆ ಕಟ್ಟಡ ನಿರ್ಮಾಣಕ್ಕಾಗಿ ನೆರವು ನೀಡಲಿದ್ದು ಪ್ರಸ್ತಾವನೆ ಆಹ್ವಾನಿಸಲಾಗಿದೆ.
 ಶೇ.60ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದ್ದು, ಶೇ. 15ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದ್ದು ಉಳಿದ ಶೇ.25ರಷ್ಟು ವೆಚ್ಚವನ್ನು ಸಂಸ್ಥೆ ಭರಿಸಬೇಕಾಗಿದೆ.
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅಗತ್ಯ ದಾಖಲಾತಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ನವೆಂಬರ್ 15ರೊಳಗೆ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೈಕ್ಷಣಿಕ ಪ್ರಗತಿಗೆ ಉತ್ತೇಜಿಸಿ : ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ ಸಲಹೆ



ಚಾಮರಾಜನಗರ, ಅ. 31 - ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಉತ್ತೇಜಿಸಬೇಕೆಂದು ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರ್ (ಗೀತಾ ಮಹದೇವಪ್ರಸಾದ್) ಸಲಹೆ ಮಾಡಿದರು.
ತಾಲೂಕಿನ ಹರವೆ ಗ್ರಾಮದಲ್ಲಿ ಇಂದು ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಡಾ. ಬಾಬು ಜಗಜೀವನರಾಂ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಣ ಅತ್ಯಂತ ಪ್ರಾಮುಖ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಜನರು ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಾರತಮ್ಯ ಮಾಡದೆ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ನೀಡಲು ಪ್ರೋತ್ಸಾಹಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ವಿದ್ಯೆ ಕಲಿತ ಹೆಣ್ಣು ಎಲ್ಲರಿಗೂ ಮಾದರಿಯಾಗಬಲ್ಲಳು ಎಂದು ಸಚಿವರು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಶಿಕ್ಷಣ ಪಡೆಯಲು ಪೂರಕ ಸೌಕರ್ಯಗಳು ಇವೆ. ಹೋಬಳಿ ಕೇಂದ್ರಗಳಲ್ಲಿ ಮೊರಾರ್ಜಿ ದೇಸಾಯಿ ಸೇರಿದಂತೆ ಇನ್ನಿತರ ವಸತಿಶಾಲೆಗಳಿವೆ. ಕಾಲೇಜುಗಳು ಸಹ ಸಾಕಷ್ಟಿವೆ. ಎಂಜಿನಿಯರಿಂಗ್, ವೈದ್ಯಕೀಯ, ಜಿಟಿಟಿಸಿಯಂತಹ ತರಬೇತಿ ಕೇಂದ್ರಗಳು ಸಹ ಕಾರ್ಯನಿರ್ವಹಿಸುತ್ತಿವೆ. ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲ ಉತ್ತೇಜನ ನೀಡಲಾಗುತ್ತಿದೆ ಎಂದರು.
ಗುಂಡ್ಲುಪೇಟೆ ಕ್ಷೇತ್ರದಲ್ಲಿ 36ಕ್ಕೂ ಹೆಚ್ಚು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಈ ಪೈಕಿ 6 ಭವನಗಳು ಪೂರ್ಣಗೊಂಡಿವೆ. ಉಳಿದ ಭವನಗಳು ಸಹ ವಿವಿಧ ಹಂತದಲ್ಲಿ ಇದ್ದು ಪೂರ್ಣಗೊಳ್ಳಲಿವೆ ಎಂದು ಸಚಿವರು ತಿಳಿಸಿದರು.
 ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬಹುಗ್ರಾಮ ಕುಡಿಯುವ ನೀರು ಯೋಜನೆ, ಕೆರೆಗಳಿಗೆ ನೀರು, ಶಾಲಾ ಕಾಲೇಜುಗಳಿಗೆ ಹೆಚ್ಚು ಅನುದಾನ ನೀಡಿ ವಿಶೇಷವಾಗಿ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಮಹದೇವಪ್ರಸಾದ್ ಅವರು ನೀಡಿದಷ್ಟು ಮಹತ್ವ ಇನ್ಯಾರೂ ನೀಡಿಲ್ಲ. ಎಲ್ಲಾ ಹಂತದ ಶಿಕ್ಷಣ ಪಡೆಯಲು ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ ಎಂದರು.
ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳಲ್ಳಿ ನವೀನ್ ಮಾತನಾಡಿ ಹರವೆ ಭಾಗದ ಸರ್ವಾಂಗೀಣ ಅಭಿವೃದ್ಧಿ ಅಪಾರ ಕೆಲಸಗಳು ಮಹದೇವಪ್ರಸಾದ್ ಅವರ ಅವಧಿಯಲ್ಲಿ ಆಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಾಮಗಾರಿ ಹೆಚ್ಚು ನಡೆದಿವೆ. ಅಭಿವೃದ್ಧಿ ವಿಷಯದಲ್ಲಿ ಎಲ್ಲರಿಗೂ ಮಹದೇವ ಪ್ರಸಾದ್ ಅವರು  ಮಾದರಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶಿವಮೂರ್ತಿ, ಎಪಿಎಂಸಿ ನಿರ್ದೇಶಕರಾದ ಸುಂದರಮ್ಮ. ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರವಿಕುಮಾರ್, ಗ್ರಾಮಪಂಚಾಯಿತಿಯ ಅಧ್ಯಕ್ಷರಾದ ಪುಟ್ಟಮ್ಮ, ಸದಸ್ಯರಾದ ಮಂಗಳಮ್ಮ, ದೇವಮ್ಮ, ರತ್ನಮ್ಮ, ಸುಬ್ಬಶೆಟ್ಟಿ, ಮುಖಂಡರಾದ ಹರವೆ ಆನಂದ್, ಗುರುಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    
ಕಿತ್ತೂರು ರಾಣಿ ಚೆÀನ್ನಮ್ಮ ಮಹಿಳೆಯರಿಗೆ ಸ್ಫೂರ್ತಿಯಾಗಲಿ:ಪ್ರೊ ಚಂದ್ರಶೇಖರಯ್ಯ.


ಚಾಮರಾಜನಗರ, ಅ. 31- ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ಕನ್ನಡ ನಾಡಿನ ರಕ್ಷಣೆಗಾಗಿ ಹೋರಾಡಿ ಮಡಿದ ಚೆನ್ನಮ್ಮನ ದಿಟ್ಟತನ ನಮ್ಮ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು ಎಂದು ಮಾನಸ ಗಂಗೋತ್ರೀಯ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಡಾ:ಚಂದ್ರಶೇಖರಯ್ಯ ಅಭಿಪ್ರಾಯ ಪಟ್ಟರು.   
      ಜಿಲ್ಲಾ ಆಡಳಿತ ಜಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಆಡಳಿತ ಭವನದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಇಂದು  ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದ ಅವರು, ಚೆನ್ನಮ್ಮ ತನ್ನ ಪತಿಯ ಅಕಾಲಿಕ ಮರಣದ ನಂತರ ತನ್ನ 20ನೇ ವಯಸ್ಸಿನಲ್ಲಿ ಸಂಸ್ಥಾನದ ಜಾವಾಬ್ದಾರಿಯನ್ನು ಹೊತ್ತು ಕನ್ನಡ ನಾಡು ನುಡಿ ಗಡಿಯನ್ನು ರಕ್ಷಿಸಲು      ದಿಟ್ಟತನದಿಂದ ಹೋರಾಡಿದರು. ಬಹಳ ಚಾಣಾಕ್ಷತನದಿಂದ ಆಡಳಿತ ನಡೆಸಿದ ಚೆನ್ನಮ್ಮನ ಜೀವನ ನಮ್ಮೆಲ್ಲರಿಗೂ ಆದರ್ಶವಾಗಬೇಕು ಎಂದರು.                                    
     ಚೆನ್ನಮ್ಮಳಿಗೆ ಮಕ್ಕಳಿಲ್ಲ ಎಂಬುದನ್ನು ಅರಿತ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತರುವುದರ ಮೂಲಕ ತನ್ನ ನಂಬಿಕಸ್ಥ ಸೈನ್ಯಾಧಿಕಾರಿಗಳಿಂದಲೇ ವಂಚನೆಗೆ ಒಳಗಾಗಿ ಯುದ್ದದಲ್ಲಿ ಸೋತು ಬಂದಿಸಲ್ಪಡುತ್ತಾಳೆ.ಇವರ ನಿಸ್ವಾರ್ಥ ಹೋರಾಟ ಎಂದಿಗೂ ಮರೆಯುವಂತಿಲ್ಲ ಎಂದರು .
    ಚೆನ್ನಮ್ಮರ ಆಡಳಿತ ಅವಧಿಯಲ್ಲಿ ಬಳಸಿದ್ದ ದಾಖಲೆಗಳು ಹಾಗೂ ಖಡ್ಗವು  ಇಂಗ್ಲೆಂಡ್‍ನ ಬ್ರಿಟಿಷ್ ಮ್ಯೂಸಿಯಮ್ ಹಾಗೂ ಇಂಡಿಯನ್ ಆಫೀಸ್ ನಲ್ಲಿರುವ ಬಗ್ಗೆ ಮಾಹಿತಿ ಇದ್ದು ಇವುಗಳನ್ನು ಸಂಗ್ರಹಿಸಿ ಚೆನ್ನಮ್ಮ ಮಡಿದ ಸ್ಥಳದಲ್ಲಿ  ವಸ್ತು ಸಂಗ್ರಹಾಲಯ ನಿರ್ಮಿಸಬೇಕಿದೆ ಎಂದು ಹೇಳಿದರು.
     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ ರಾಮು ಅವರು ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಲ್ಲ ವಿಜ್ಞಾನಮಯವಾಗಿದ್ದು ಇತಿಹಾಸದÀ ವಿಷಯಗಳಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದೆ. ಸಮಾಜದಲ್ಲಿ ಅವಕಾಶಗಳಿಂದ ವಂಚಿತರಾಗುವ ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಅವರನ್ನು ಸಬಲರನ್ನಾಗಿ ಮಾಡಲು ಹೆಚ್ಚು ಅವಕಾಶಗಳನ್ನು ಕಲ್ಪಿಸಿಬೇಕಿದೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಚೆನ್ನಮ್ಮಳ ವೀರ ಗುಣ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಹೇಳಿದರು.
   ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರ ಸಭೆ ಅಧ್ಯಕ್ಷರಾದ ಶೋಭ ಅವರು  ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಚೆನ್ನಮ್ಮಳ ಜೀವನ ನಮಗೆಲ್ಲ ಮಾದರಿಯಾಗಬೇಕು ಎಂದರು.
  ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕರಾದ ಕೆ.ಪಿ.ಸದಾಶಿವ ಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ ನಾಗವೇಣಿ ಕಾರ್ಯಕ್ರವiದಲ್ಲಿ ಉಪಸ್ಥಿತರಿದ್ದರು.








































ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS (31-10-2017)

 ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ..       VSS



 ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ


ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಬಹುತೇಕ ಒಳಬಾಡಿಗೆ ಪಡೆದು, ಸರಿಯಾಗಿ ಕೆಲವರು ಬಾಡಿಗೆ ಕಟ್ಟದೆ ವ್ಯಾಪಾರ ನಡೆಸುತ್ತಿದ್ದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಹಿಂದಿನ ಅಂಗಡಿ ಮುಗ್ಗಟ್ಟುಗಳನ್ನು ಹೊಡೆದು ಹಾಕುವ ಇಂದು ತೆರವು ಕಾರ್ಯ  ಮಾಡಲಾಯಿತು.


 


ಅಂಗಡಿಗಳು ಚಾಮರಾಜನಗರ ಚಾಮರಾಜೇಶ್ವರ ದೇವಾಲಯದ ಹಿಂಬಾಗದಲ್ಲಿದ್ದು ,ಸುಮಾರು 10 ಕ್ಕೂ ಹೆಚ್ಚು ಅಂಗಡಿಗಳು  ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ  ಹಲವಾರು ವರ್ಷಗಳಿಂದ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದರು
ಚಾಮರಾಜೇಶ್ವರ ದೇವಾಲಯದ ಹಿಂಬಾಗದಲ್ಲಿದ್ದ ಅಂಗಡಿಗಳು ಅತಿ ಕಡಿಮೆ ಬೆಲೆ ಅಂದರೆ 500 ರೂ ಗೆ ಒಬ್ಬರು ಪಡೆದು ಅದನ್ನು ಮತ್ತೋಬ್ಬರಿಗೆ 3500 ಕ್ಕೂ ಹೆಚ್ಚು ರೂಪಾಯಿಗೆ ಬಾಡಿಗೆ ನೀಡಿದ್ದರು. 





ಕಳೆದ ಎರಡು ವರ್ಷಗಳ ಹಿಂದೆ ಈ ಸಂಬಂದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕೆಲವರು ತಡೆಯಾಜ್ಞೆ ತಂದು ಅಲ್ಲಿಯೇ ಉಳಿದುಕೊಂಡಿದ್ದರು.ಈಗ ರಸ್ತೆ ಅಗಲೀಕರಣ ಕಾರ್ಯ ಸುಗಮವಾಗಿ ನಡೆಯುತ್ತಿರುವದರಿಂದ ದೇವಾಲಯದ ಹಿಂಬಾಗದ ರಸ್ತೆ ದೊಡ್ಡ ಅಂಗಡಿ ಬೀದಿಯಲ್ಲಿರುದ್ದು ಈಗ ಅದು 40 ಅಡಿ ರಸ್ತೆ ಅದಿಕೃತವಾಗಿರುವದರಿಂದ ಆ ಅಂಗಡಿಗಳನ್ನು ನಿರಾಂತಕವಾಗಿ ಹೊಡೆದು ಹಾಕಲು ಇಂದು ಸಹಕಾರಿಯಾಗಿದೆ ಎಂದರೆ ತಪ್ಪಾಗಲಾರದು.

ಅಂಗಡಿ ಮುಗ್ಗಟ್ಟು ತೆರವು ಕಾರ್ಯಾಚರಣೆ ಮಾಢುವುದು ಶತಸಿದ್ದ ಎಂದು ಗೊತ್ತಾಗುತ್ತಿದ್ದಂತೆಯೇ ನಾಮಾಕವಸ್ಥೆಗೆ ತಡೆಯಾಜ್ಞೆಯ ಪ್ರತಿಯನ್ನು ಅಂಗಡಿ ಮುಂದೆ ಹಾಕಿದ್ದರು. ಆದರೆ ಇದ್ಯಾವುದನ್ನ ಲೆಕ್ಕಿಸದೇ ಮುಲಾಜಿಲ್ಲದೇ ತೆರವು ಕಾರ್ಯ ನಡೆದಿದೆ.
ಅಂಗಡಿ ಮುಗ್ಗಟ್ಟು ತೆರವು ಕಾರ್ಯಾಚರಣೆ ಮಾಡುತ್ತಿರುವುದರಿಂದ ದೇವಾಲಯದ ಹಿಂಬಾಗ ಸಾಕಷ್ಟು ಜಾಗವಿರುದರಿಂದ, ದೇವಾಲಯದ ಮುಂದೆ ಹಾಗೂ ಒಳಭಾಗ  ಜೀರ್ಣೋದ್ದಾರ ಕಾರ್ಯ ನಡೆಯುತ್ತಿರುವದರಿಂದ ಚಾಮರಾಜೇಶ್ವರ ದೇವಾಲಯ ಅದ್ಬುತವಾಗಿ ಕಾಣಲಿದೆ ಎಂಬುದರಲ್ಲಿ ಸಂದೇಹವೇ ಇಲ್ಲ

Monday, 30 October 2017

ನವಕರ್ನಾಟಕ-2025 ಉತ್ತಮ ಯೋಜನೆ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (20-10-2017)

     

ನವಕರ್ನಾಟಕ-2025 ಉತ್ತಮ ಯೋಜನೆ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ

ಚಾಮರಾಜನಗರ, ಅ. 30 - ಜನರ ಅಗತ್ಯ ಹಾಗೂ ಆಶೋತ್ತರಗಳಿಗೆ ತಕ್ಕಂತೆ ಪ್ರಸ್ತುತ ಯೋಜನೆಗಳನ್ನು ವಿಮರ್ಶಿಸಿ, ಪರಾಮರ್ಶಿಸಿ ರೂಪಿಸಲು ಜನರಿಂದಲೇ ಅಭಿಪ್ರಾಯ, ನಿರೀಕ್ಷೆ ಮತ್ತು ಸಲಹೆಗಳನ್ನು ಪಡೆಯಲು ನವಕರ್ನಾಟಕ-2025(ವಿಷನ್ ಡಾಕ್ಯುಮೆಂಟ್) ಉತ್ತಮ ಯೋಜನೆಯಾಗಿದೆ ಎಂದು ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ(ಗೀತಾಮಹದೇವಪ್ರಸಾದ್) ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಂದಿನ ಏಳು ವರ್ಷಗಳ ಅವಧಿಯಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ವಿಷನ್ ಡಾಕ್ಯುಮೆಂಟ್ ನೀಲನಕ್ಷೆ ಹಾಗೂ ಅನುಷ್ಠಾನ ಕಾರ್ಯಯೋಜನೆ ಸಿದ್ದಪಡಿಸುವ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮುಖ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜೆಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ತನ್ನ ಶ್ರೇಯೋಭಿವೃದ್ಧಿಗಾಗಿ ಪ್ರಜೆಗಳಿಂದಲೇ ಅಭಿಪ್ರಾಯ ಸಂಗ್ರಹಿಸುವುದು ಅಗತ್ಯ. ಸರ್ಕಾರ ಜಾರಿಗೆ vರುವ ಯೋಜನೆ, ಕಾರ್ಯಕ್ರಮಗಳು ಹೇಗಿರಬೇಕು, ಯಾವ ರೀತಿ ಜನತೆಯನ್ನು ತಲುಪಬೇಕು ಎನ್ನುವುದರಲ್ಲಿ ಜನತೆಯ ಅಭಿಪ್ರಾಯಗಳಿಗೆ ಪ್ರಾಮುಖ್ಯತೆ ಇದೆ. ಜನಸಾಮಾನ್ಯರು ಸೇರಿದಂತೆ ಎಲ್ಲರ ಅಹವಾಲು, ಆಶಯಗಳನ್ನು ಮನಗಂಡು ನವಕರ್ನಾಟಕ-2015 ಕಾರ್ಯಕ್ರಮ ರೂಪಿಸಿ ಜನರಿಂದಲೇ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು.
ಜಿಲ್ಲೆಯಾಗಿ 20 ವರ್ಷವಾಗಿದ್ದರೂ ಅಭಿವೃದ್ಧಿಯಲ್ಲಿ ಸಾಗಬೇಕಿದೆ. ಜಿಲ್ಲೆಯ ಪ್ರಗತಿಗೆ ಅಗತ್ಯ ಮೂಲಸೌಕರ್ಯ, ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆ, ಕೌಶಲ್ಯಾಧಾರಿತ ಉದ್ಯೋಗ, ಸ್ಮಾರ್ಟ್‍ಸಿಟಿ, ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಕೈಗಾರಿಕಾಭಿವೃದ್ಧಿ ಕುರಿತು ಜನರ ನಿರೀಕ್ಷೆಗಳು ಸಾಕಷ್ಟಿವೆ, ಅವುಗಳನ್ನು ಅಭಿವ್ಯಕ್ತಗೊಳಿಸಲು ನವಕರ್ನಾಟಕ-2015 ಉತ್ತಮ ವೇದಿಕೆಯಾಗಿದೆ ಎಂದು ಸಚಿವರಾದ ಮೋಹನಕುಮಾರಿ ಅವರು ತಿಳಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿಷನ್ ಡಾಕ್ಯುಮೆಂಟ್ ಪ್ರಾಜೆಕ್ಟ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೇಣುಕಾಚಿದಂಬರಂ ಅವರು ಮಾತನಾಡಿ ಬದಲಾವಣೆ ನಿರಂತರ ಪ್ರಕ್ರಿಯೆ. 2025ರೊಳಗೆ ಕರ್ನಾಟಕ ಹೇಗಿರಬೇಕು. ಸರ್ಕಾರದ ಯೋಜನೆಗಳು ಯಾವ ರೀತಿ ಫಲಪ್ರಧವಾಗಿರಬೇಕು ಎನ್ನುವ ನೀಲನಕ್ಷೆ ತಯಾರಿಸಲು ಈ ವಿಷನ್ ಡಾಕ್ಯುಮೆಂಟ್ ಮಾದರಿ(ರೋಡ್‍ಮ್ಯಾಪ್)ಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ನವಕರ್ನಾಟಕ ಕಾರ್ಯಕ್ರಮದಡಿ ಈಗಾಗಲೇ 26 ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ. ಅಗತ್ಯ ಹಾಗೂ ಅಪೇಕ್ಷೇಗಳೇನು, ಮುಂದಿನ ಯೋಜನೆಗಳು ಹೇಗಿರಬೇಕು ಎಂಬ ಬಗ್ಗೆ ಜನರಿಂದಲೇ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುವ ವಿಷನ್ ಡಾಕ್ಯುಮೆಂಟ್ ಕಾರ್ಯಕ್ರಮ ದೇಶದಲ್ಲೇ ಮೊದಲು. ನವಕರ್ನಾಟಕ ಕಾರ್ಯಕ್ರಮವೊಂದು ವಿಶಿಷ್ಟ ಪ್ರಯೋಗವಾಗಿದೆ. ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದವರು, ವಿಷಯ ಪರಿಣಿತರು, ಅಧಿಕಾರಿಗಳು ಸೇರಿದಂತೆ ಎಲ್ಲರ ಅಭಿಪ್ರಾಯ, ಸಲಹೆ ಪಡೆಯಲಾಗುತ್ತಿದೆ ಎಂದರು.
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಚರ್ಚೆಯಾಗಬೇಕಿದೆ. ಜಿಲ್ಲೆಗಷ್ಟೇ ಸೀಮಿತವಾಗದೇ ಇಡೀ ರಾಜ್ಯಕ್ಕೂ ಅನುಕೂಲವಾಗುವ ಅನುಭವದ ಸಲಹೆಗಳು ಚರ್ಚೆ ಬಂದರೆ ಅನುಕೂಲವಾಗಲಿದೆ ಎಂದು ರೇಣುಕಾಚಿದಂಬರಂ ಆಶಿಸಿದರು.
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರೈತರು, ಸರ್ವ ಕ್ಷೇತ್ರಗಳ ಮುಖಂಡರು, ಪರಿಣಿತರು ಹಾಗೂ ಬುದ್ಧಿಜೀವಿಗಳು ಸೇರಿದಂತೆ ಎಲ್ಲ ವರ್ಗದವರ ಅಭಿಪ್ರಾಯಗಳು ಪಡೆದು ಅಭಿವೃದ್ಧಿಯ ನೀಲನಕ್ಷೆ ತಯಾರಿಕೆಗೆ ಪೂರ್ವಸಿದ್ದತೆ ಮಾಡಿಕೊಳ್ಳಬೇಕಿದೆ ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನವಕರ್ನಾಟಕ 2025ಕ್ಕೆ ಜಿಲ್ಲೆಯಿಂದ ನಡೆಸಲಾಗಿರುವ ಸಿದ್ದತೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಎಲ್ಲರ ಸಹಕಾರದೊಂದಿಗೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಶ್ರಮವೂ ಇದೆ ಎಂದರು.   
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಶೋಭಾಪುಟ್ಟಸ್ವಾಮಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಯಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಅ. 30 - ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಅಕ್ಟೋಬರ್ 31 ಹಾಗೂ ನವೆಂಬರ್ 1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 31ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡುವರು.
ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಗಂಟೆಗೆ ಗುಂಡ್ಲುಪೇಟೆಗೆ ತೆರಳಿ ಸ್ಥಳೀಯ ಕಾರ್ಯುಕ್ರಮದಲ್ಲಿ ಭಾಗವಹಿಸುವರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ ವೇಳೆಗೆ ನವಕರ್ನಾಟಕ-2025 ಕರಡು ಸಿದ್ಧ: ರೇಣುಕಾಚಿದಂಬರಂ



ಚಾಮರಾಜನಗರ, ಅ. 30- ಮುಂದಿನ ಏಳು ವರ್ಷಗಳ ಅವಧಿಯಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ತಯಾರಿಸಲಾಗುತ್ತಿರುವ ನವಕರ್ನಾಟಕ-2025 (ವಿಷನ್ ಡಾಕ್ಯುಮೆಂಟ್) ನೀಲನಕ್ಷೆ ಹಾಗೂ ಅನುಷ್ಠಾನ ಕಾರ್ಯಯೋಜನೆಯ ಕರಡು ಡಿಸೆಂಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿಷನ್ ಡಾಕ್ಯುಮೆಂಟ್ ಪ್ರಾಜೆಕ್ಟ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೇಣುಕಾಚಿದಂಬರಂ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ನವಕರ್ನಾಟಕ-2025 ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟನೆ ಸಮಾರಂಭದ ಬಳಿಕ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಸಮಗ್ರ ಪ್ರಗತಿ ಉದ್ದೇಶದೊಂದಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಭಿಪ್ರಾಯ, ಸಲಹೆ ಸಂಗ್ರಹಣೆ ಮಾಡಲಾಗುತ್ತಿದೆ. ಅಂತಿಮವಾಗಿ ಡಿಸೆಂಬರ್ ವೇಳೆಗೆ ಕರಡು ಸಿದ್ದವಾಗಲಿದೆ. ಎರಡು ಹಂತಗಳಲ್ಲಿ ಈ ಯೋಜನೆ ಪರಾಮರ್ಶೆ ನಡೆಯಲಿದೆ. ಮೊದಲು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಯಾಗಲಿದೆ. ಬಳಿಕ ಮುಖ್ಯಮಂತ್ರಿಯವರ ನೇತೃತ್ವದ ಉನ್ನತಾಧಿಕಾರಿ ಸಮಿತಿ ಇದರ ಪರಾಮರ್ಶೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಅದಾದ ಬಳಿಕ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದರು.
ಸರ್ಕಾರದ ಪ್ರಮುಖ ಇಲಾಖೆಗಳನ್ನೊಳಗೊಂಡ 13 ವಲಯಗಳನ್ನು ಗುರುತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ 5 ಸಮಾನಾಂತರ ವಿಷಯಗಳಾಗಿ ವಿಂಗಡಣೆ ಮಾಡಿದ್ದು, ಆ ಮೂಲಕ ಎಲ್ಲರನ್ನು ಒಳಗೊಂಡಂತೆ ಸಲಹೆ, ಅಭಿಪ್ರಾಯಗಳನ್ನು ಚರ್ಚೆಯ ಮುಖಾಂತರ ಪಡೆದು ಪ್ರತ್ಯೇಕವಾಗಿ ವಿಷಯ ಸಂಗ್ರಹಣೆ ಮಾಡಲಾಗುತ್ತಿದೆ. ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶವಾಗದೇ ಇರುವವರು ಸಾಮಾಜಿಕ ಜಾಲತಾಣಗಳ ಮೂಲಕವು ಅಭಿಪ್ರಾಯ ಸಲಹೆ ನೀಡಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಅಭಿವೃದ್ಧಿಗೆ ಪೂರಕವಾಗಿರುವ ಸಲಹೆ, ಅಭಿಪ್ರಾಯಗಳನ್ನು ಜನರಿಂದಲೇ ಪಡೆಯಲಾಗುತ್ತಿದೆ. ಸ್ಪಷ್ಟ ಗುರಿ ಹಾಗೂ ಸಾಧನೆ ಅಂಶಗಳು ಅಡಕವಾಗಲಿವೆ. ಈಗಾಗಲೇ 26 ಜಿಲ್ಲೆಗಳಲ್ಲೂ ಜಿಲ್ಲಾಮಟ್ಟದ ಕಾರ್ಯಾಗಾರ ನಡೆದಿದ್ದು, ಪ್ರತಿ ಜಿಲ್ಲೆಯಲ್ಲೂ ಪ್ರಸ್ತಾಪಿಸಿರುವ ಹಾಗೂ ಮಂಡನೆ ಮಾಡಿರುವ ವಿಚಾರ, ಅಂಶಗಳನ್ನು ಸ್ವೀಕರಿಸಲಾಗಿದೆ ಎಂದು ರೇಣುಕಾ ಚಿದಂಬರಂ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
 

ಅ. 31ರಂದು ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಅ. 30 - ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಸಲುವಾಗಿ ಅಕ್ಟೋಬರ್ 31ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ, ಸಂಘಸಂಸ್ಥೆಗಳ ಮುಖಂಡರು, ನಾಗರಿಕರು ಹಾಜರಾಗಿ ಸಲಹೆ, ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅ. 31ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಚಾಮರಾಜನಗರ, ಅ. 30 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ  ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕಿತ್ತೂರುರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರಯ್ಯ ಮುಖ್ಯ ಭಾಷಣ ಮಾಡುವರು.
ಜಯಂತಿ ಅಂಗವಾಗಿ ವೇದಿಕೆಯಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯ ಎಸ್.ಬಿ. ನಾಗರಾಜು ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅ. 31ರಂದು ನಗರದಲ್ಲಿ ರಾಷ್ಟ್ರೀಯ ಸಂಕಲ್ಪ ಹಾಗೂ ಏಕತಾ ದಿವಸ

ಚಾಮರಾಜನಗರ, ಅ. 30 - ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಹಾಗೂ ಸಂಯುಕ್ತ ಯುವಜನ ಸಂಘ ಇವರ ಸಹಯೋಗದೊಂದಿಗೆ ಅಕ್ಟೋಬರ್ 31ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಜಯಂತಿಯ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಗುತ್ತಿದೆ.
ಗೊರುಕನ ದಿನಪತ್ರಿಕೆ ಸಂಪಾದಕರಾದ ಸಿ. ಮಹÉೀಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎಂ. ಮರಿಸ್ವಾಮಿ ಅಧ್ಯಕ್ಷತೆ ವಹಿಸುವರು.
ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಲ್. ಸುರೇಶ್, ನಗರದ ನವಸಂವೃದ್ಧಿ ಸಂಸ್ಥೆಯ ತರಬೇತಿ ಸಂಪನ್ಮೂಲ ವ್ಯಕ್ತಿ ಕಾಳಿಂಗಸ್ವಾಮಿ ಸಿದ್ಧಾರ್ಥ, ಯುವಜನ ಮತ್ತು ಕ್ರೀಡಾ ಇಲಾಖೆಯ ಯುವ ಪರಿವರ್ತಕರಾದ ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಂಗವಾಹಿನಿ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ ಅತಿಥಿ ಉಪನ್ಯಾಸಕರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ನ. 2ರಂದು ನಗರದಲ್ಲಿ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆ
ಚಾಮರಾಜನಗರ, ಅ. 30 - ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 2ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜೆ.ಎಸ್.ಎಸ್. ವಿದ್ಯಾಸಂಸ್ಥೆಯ ಆವರಣದಲ್ಲಿ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕ್ರೀಡಾಜ್ಯೋತಿ ಸ್ವೀಕರಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ನ. 5ರಂದು ನಗರದಲ್ಲಿ ಎನ್‍ಟಿಎಸ್‍ಇ, ಎನ್‍ಎಂಎಂಎಸ್ ಪರೀಕ್ಷೆ

ಚಾಮರಾಜನಗರ, ಅ. 30 :- ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2017-18ನೇ ಸಾಲಿನಲ್ಲಿ ಎನ್‍ಟಿಎಸ್‍ಇ ಮತ್ತು ಎನ್‍ಎಂಎಂಎಸ್ ಪರೀಕ್ಷೆಯನ್ನು 8 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆಸಲಿದೆ.
10ನೇ ತರಗತಿ ಮಕ್ಕಳಿಗೆÉ ಎನ್‍ಟಿಎಸ್‍ಇ ಪರೀಕ್ಷೆಯು ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
8ನೇ ತರಗತಿ ಮಕ್ಕಳಿಗೆ ಎನ್‍ಎಂಎಂಎಸ್ ಪರೀಕ್ಷೆಯು ನಗರದ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರಾಢಶಾಲೆ ಹಾಗೂ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲÁಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ನಗರಸಭೆ : ಸಾಕು ಪ್ರಾಣಿ ಮಾಲೀಕರಿಗೆ ಸೂಚನೆ
ಚಾಮರಾಜನಗರ, ಅ. 30 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯು ಪಟ್ಟಣ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಬೀಡಾಡಿ ದನಗಳು, ಮೇಕೆಗಳು, ಬೀದಿ ನಾಯಿಗಳು, ಕುದುರೆಗಳು ಹಾಗೂ ಇತರೆ ಸಾಕು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು, ಶಾಲಾಮಕ್ಕಳು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಪಟ್ಟಣದ ಪ್ರಮುಖ ರಸ್ತೆಗಳಾದ ಬಿ. ರಾಚಯ್ಯ ಜೋಡಿ ರಸ್ತೆ, ನ್ಯಾಯಾಲಯದ ರಸ್ತೆ, ಅಂಗಡಿ ಬೀದಿ, ಸಂತೆಮರಳ್ಳಿ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ರಸ್ತೆ ಹಾಗೂ ಕರಿನಂಜನಪುರ ರಸ್ತೆ ಮತ್ತು ಪ್ರಮುಖ ವೃತ್ತಗಳಲ್ಲಿ ತಿರÀುಗಾಡುತ್ತಾ ಎಲ್ಲೆಂದರಲ್ಲಿ ಬಿದ್ದುಕೊಂಡು ಜನಸಾಮಾನ್ಯರ ತಿರುಗಾಟಕ್ಕೆ, ವಾಹನಗಳ ಸಂಚಾರಕ್ಕೆ ತೊಂದರೆ ಕೊಡುತ್ತಿವೆ. ತಿರುಗಾಡುವ ಶಾಲಾ ಮಕ್ಕಳಿಗೆ ತಿವಿದು ತೊಂದರೆ ಕೊಡುವ ಸಾಧ್ಯತೆಗಳಿರುತ್ತದೆ.
ಆದಕಾರಣ ಸಾಕುಪ್ರಾಣಿಗಳ ಮಾಲೀಕರು ತಮ್ಮ ಪ್ರಾಣಿಗಳನ್ನು ಸಾರ್ವಜನಿಕ ರಸ್ತೆಗೆ ಬಿಡದಂತೆ ಸೂಚಿಸಿದೆ. ಪ್ರಮುಖ ರಸ್ತೆಗಳಲ್ಲಿ ಸಾಕುಪ್ರಾಣಿಗಳು ಕಂಡುಬಂದರೆ ನಗರಸಭೆ ವತಿಯಿಂದ ಸೆರೆಹಿಡಿದು, ಮೈಸೂರಿನ ಪಿಂಜರಾಪೋಲ್‍ಗೆ ಕಳುಹಿಸಲಾಗುವುದು. ಪ್ರಾಣಿಗಳ ಮಾಲೀಕರಿಗೆ ಯಾವುದೇ ಪರಿಹಾರ ನೀಡದೇ ಕರ್ನಾಟಕ ಮುನಿಸಿಪಲ್ ಕಾಯ್ದೆ 1964ರ ಪ್ರಕಾರ ಕಾನೂನು ರೀತಿಯಂತೆ ಕ್ರಮ ವಹಿಸಲಾಗುವುದು ಎಂದು ನಗರಸಭಾ ಪ್ರಕಟಣೆಯಲ್ಲಿ ತಿಳಿಸಿದÉ.

ನ. 6ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ

ಚಾಮರಾಜನಗರ, ಅ. 30 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು  ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್,  ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ವಿಶ್ರಾಂತ ಪ್ರಾಂಶುಪಾಲರಾದ ಕೆಂಪರಾಜು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಗದಗಿನ ವೀರೇಶ್ವರ ಪುಣ್ಯಾಶ್ರಮದ ಏಕನಾಥ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.























Sunday, 29 October 2017

ನ. 1 ರಿಂದ ಕಾಲುಬಾಯಿ ಜ್ವರ ತಡೆಗೆ ಲಸಿಕೆ ಆಂದೋಲನ : ಪಶುಪಾಲನೆ ಇಲಾಖೆಯಿಂದ ಅಗತ್ಯ ಸಿದ್ಧತೆ ....VSS (29-10-2017)

ನ. 1 ರಿಂದ ಕಾಲುಬಾಯಿ ಜ್ವರ ತಡೆಗೆ ಲಸಿಕೆ ಆಂದೋಲನ : ಪಶುಪಾಲನೆ ಇಲಾಖೆಯಿಂದ ಅಗತ್ಯ ಸಿದ್ಧತೆ  ....VSS

ಚಾಮರಾಜನಗರ, ಅ. 29 :- ಜಾನುವಾರುಗಳಿಗೆ ತಗಲುವ ಕಾಲುಬಾಯಿ ಜ್ವರವನ್ನು ಪರಿಣಾಮಕಾರಿಯಾಗಿ ತಡೆಯುವ ಉದ್ದೇಶದಿಂದ ಜಿಲ್ಲಾದ್ಯಂತ ನವೆಂಬರ್ 1 ರಿಂದ 25ರವರೆಗೆ 13ನೇ ಸುತ್ತಿನ ಲಸಿಕೆ ನೀಡುವ ಕಾರ್ಯ ವ್ಯಾಪಕವಾಗಿ ನಡೆಯಲಿದ್ದು ಇದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಜ್ಜುಗೊಂಡಿದೆ.
ಜಿಲ್ಲೆಯಲ್ಲಿ ಜಾನುವಾರು ಗಣತಿ ಪ್ರಕಾರ ಒಟ್ಟು 249698 ಜಾನುವಾರುಗಳನ್ನು ಗುರುತಿಸಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 73472, ಗುಂಡ್ಲುಪೇಟೆ ತಾಲೂಕಿನಲ್ಲಿ 70330, ಕೊಳ್ಳೇಗಾಲ ತಾಲೂಕಿನಲ್ಲಿ 93292 ಮತ್ತು ಯಳಂದೂರು ತಾಲೂಕಿನಲ್ಲಿ 12604 ಜಾನುವಾರುಗಳು ಇವೆ ಎಂದು ಗಣತಿಯಲ್ಲಿ ಗುರುತಿಸಿದ್ದು ಈ ಎಲ್ಲ ಜಾನುವಾರುಗಳಿಗೆ ಲಸಿಕೆ ನೀಡÀಲಾಗುತ್ತದೆ.
ಜಾನುವಾರುಗಳಿಗೆ ಲಸಿಕೆ ನೀಡುವ ಸಲುವಾಗಿ ಜಾನುವಾರು ಸಂಖ್ಯೆಗಳಿಗೆ ಅನುಗುಣವಾಗಿ ಒಟ್ಟು 27 ಲಸಿಕಾ ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ  5 ರಿಂದ 6 ಮಂದಿ ಅರೆತಾಂತ್ರಿಕ ಸಿಬ್ಬಂದಿ ಇದ್ದು ಪಶುವೈದ್ಯರೊಬ್ಬರು ತಂಡದ ಮುಖ್ಯಸ್ಥರಾಗಿ ಇರಲಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 9, ಗುಂಡ್ಲುಪೇಟೆ ತಾಲೂಕಿನಲ್ಲಿ 7, ಕೊಳ್ಳೇಗಾಲ ತಾಲ್ಲೂಕಿಗೆ 8 ಹಾಗೂ ಯಳಂದೂರು ತಾಲ್ಲೂಕಿಗೆ 3 ತಂಡಗಳನ್ನು ನಿಯೋಜಿಸಲಾಗಿದೆ.
ನಿಯೋಜಿತವಾಗಿರುವ ಪ್ರತೀ ತಂಡವು ಒಂದು ದಿನಕ್ಕೆ 750 ರಾಸುಗಳಿಗೆ ಲಸಿಕೆ ಹಾಕಲಿವೆ. ಒಟ್ಟು 27 ತಂಡಗಳಿಗೆ ಪ್ರತಿ ದಿನ 20250 ಜಾನುವಾರುಗಳಿಗೆ ಲಸಿಕೆ ನೀಡಲು ಗುರಿ ನೀಡಲಾಗಿದೆ. ಈ ನಿಗದಿತ ಗುರಿಯೊಂದಿಗೆ ಲಸಿಕೆ ಕಾರ್ಯಕ್ರಮ ನಡೆಸಿ 15 ರಿಂದ 20 ದಿನಗಳೊಳಗೆ ಸಂಪೂರ್ಣ ಪ್ರಗತಿ ಸಾಧಿಸಲು ತೀರ್ಮಾನಿಸಲಾಗಿದೆ.
ಲಸಿಕೆಯನ್ನು ಸ್ಥಳೀಯ ಹಾಗೂ ಮಿಶ್ರತಳಿ ದನಗಳು, ಎಮ್ಮೆಗಳು, ಹಂದಿಗಳಿಗೆ ಕೊಡಲಾಗುತ್ತದೆ. 3 ತಿಂಗಳಿಗಿಂತ ಕಡಿಮೆ ವಯಸ್ಸಿನ ಕರುಗಳು ಹಾಗೂ 6 ತಿಂಗಳು ತುಂಬಿರುವ ಗರ್ಭ ಧರಿಸಿದ ರಾಸುಗಳಿಗೆ ಲಸಿಕೆ ನೀಡುವುದನ್ನು ಮುಂದೂಡಲಾಗುತ್ತದೆ. ಪ್ರತೀ ರಾಸುವಿಗೆ ಪ್ರತ್ಯೇಕ ಡಿಸ್ ಪೋಸಲ್ ಸಿರಿಂಜ್ ಹಾಗೂ ಸೂಜಿಗಳನ್ನು ಉಪಯೋಗಿಸಲಾಗುತ್ತದೆ. ಬೆಳಿಗ್ಗೆ 6 ರಿಂದ 11.30 ಗಂಟೆ ಹಾಗೂ ಸಂಜೆ 5 ರಿಂದ 7 ಗಂಟೆ ಅವಧಿಯೊಳಗೆ ಲಸಿಕೆ ನೀಡಲು ಸೂಚಿಸಲಾಗಿದೆ.
ಪಶುಪಾಲನೆ ಇಲಾಖೆಗೆ ಈಗಾಗಲೇ 2,57,500 ಡೋಸ್ ಲಸಿಕೆ ಸರಬರಾಜಾಗುತ್ತಿದೆ. ಚಾಮರಾಜನಗರ ತಾಲೂಕು ಪಶುವೈದ್ಯ ಆಸ್ಪತ್ರೆಯ ವಾಕ್-ಇನ್-ಕೂಲರ್‍ನಲ್ಲಿ 84400 ಹಾಗೂ ಉಳಿದ 1,73,000 ಡೋಸ್ ಲಸಿಕೆಯನ್ನು ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರಿನ ಪಶುವೈದ್ಯ ಆಸ್ಪತ್ರೆಯ ಬಾಟಲ್ ಕೂಲರ್ಸ್ ಯಂತ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಎಲ್ಲ ಹಂತದಲ್ಲೂ ಲಸಿಕೆಯ ಶೀತಲಿ ಸರಪಳಿ ನಿರ್ವಹಣೆ ಮಾಡಲಾಗಿದೆ. ಪ್ರತಿ ಗ್ರಾಮಕ್ಕೆ ಲಸಿಕೆಯನ್ನು ಕೊಂಡೊಯ್ಯಲು ವ್ಯಾಕ್ಸಿನ್ ಕ್ಯಾರಿಯರ್ ಸೌಲಭ್ಯ ಕಲ್ಪಿಸಲಾಗಿದೆ.
ಲಸಿಕಾ ತಂಡಗಳು ಗ್ರಾಮಗಳಿಗೆ ಸಕಾಲಕ್ಕೆ ತಲುಪಲು ಅವಶ್ಯವಿರುವ ವಾಹನ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿಗೆ 9, ಗುಂಡ್ಲುಪೇಟೆ ತಾಲೂಕಿಗೆ 7, ಕೊಳ್ಳೇಗಾಲ ತಾಲ್ಲೂಕಿಗೆ 8 ಹಾಗೂ ಯಳಂದೂರು ತಾಲ್ಲೂಕಿಗೆ 3 ವಾಹನ ಸೇರಿದಂತೆ ಒಟ್ಟು 27 ವಾಹನಗಳನ್ನು ಬಳಕೆ ಮಾಡಿಕೊಳ್ಳÀಲಾಗುತ್ತಿದೆ.
ಕಾರ್ಯಕ್ರಮ ಸಂಬಂಧ ರೈತರು, ಹೈನುಗಾರಿಕೆ ಅವಲಂಬಿತರಿಗೆ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಭಿತ್ತಿಪತ್ರ ಹಾಗೂ ಕರಪತ್ರಗಳ ಮೂಲಕ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತಿದೆ. ದೊಡ್ಡ ಗ್ರಾಮಗಳಲ್ಲಿ ಬ್ಯಾನರ್‍ಗಳನ್ನು ಹಾಕಲಾಗುತ್ತಿದೆ. ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕವೂ ಸಹ ಪ್ರಚಾರಕ್ಕಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಚಾರಕ್ಕಾಗಿ ಪೋಸ್ಟರ್ಸ್, ಬ್ಯಾನರ್ ಹಾಗೂ  ಕರೆಪತ್ರಗಳನ್ನು ಸಿದ್ದಪಡಿಸಲಾಗಿದೆ.
ಲಸಿಕೆಯನ್ನು ಪ್ರತಿ ದಿನ ಯಾವ ಗ್ರಾಮಕ್ಕೆ ಯಾವ ತಂಡ ಲಸಿಕೆ ನೀಡಲಿದೆ ಎಂಬ ವೇಳಾಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಪ್ರತಿ ಗ್ರಾಮದಲ್ಲಿ ನೀಡಲಾಗುವ ಲಸಿಕೆ ಹಾಗೂ ಇದನ್ನು ನಿರ್ವಹಿಸುವ ಪಶುಪಾಲಕರ ಮಾಹಿತಿಯನ್ನು ಆಯಾ ದಿನವೇ ತಾಲೂಕು ಉಸ್ತುವಾರಿ ಅಧಿಕಾರಿಗೆ ಕಳುಹಿಸಲಾಗುತ್ತದೆ. ಲಸಿಕೆ ವಿವರವನ್ನು ಕಳೆದ ಸುತ್ತಿನಲ್ಲಿ ಪಶುಪಾಲಕರಿಗೆ ನೀಡಿರುವ ಜಾನುವಾರು ಮಾಹಿತಿ ಪಾಸ್ ಪುಸ್ತಕಗಳಲ್ಲಿ ದಾಖಲು ಮಾಡಲಾಗುತ್ತದೆ. ಗ್ರಾಮವಾರು ಲಸಿಕೆ ಮಾಹಿತಿ ವರದಿಯನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಅದೇ ದಿನ ಮಧ್ಯಾಹ್ನ 3 ಗಂಟೆಯೊಳಗೆ ಆನ್ ಲೈನ್ ಮೂಲಕ ರವಾನಿಸಲಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳ ಲಸಿಕೆ ಮಾಹಿತಿಯನ್ನು ಜಿಲ್ಲಾ ಕೇಂದ್ರಕ್ಕೆ ಪ್ರತಿ ದಿನ 4 ಗಂಟೆಯೊಳಗೆ ರವಾನಿಸಲಾಗುತ್ತದೆ. ಕ್ರೋಡೀಕರಿಸಿದ ಮಾಹಿತಿಯನ್ನು ರಾಜ್ಯಕೇಂದ್ರ ಕಚೇರಿಗೆ ಸಂಜೆ 5 ಗಂಟೆಯೊಳಗೆ ಸಲ್ಲಿಸಲಾಗುತ್ತದೆ. ಯಾವುದೇ ಗ್ರಾಮದ ಲಸಿಕೆ ಪ್ರಗತಿ ನಿರ್ವಹಣೆ ಮಾಹಿತಿಯನ್ನು ನಾಗರಿಕರು ವೀಕ್ಷಿಸಲು ಅವಕಾಶವಿದೆ.
ಲಸಿಕೆ ಮಾಡುವ ಮೊದಲು ಜಾನುವಾರುಗಳಲ್ಲಿ ಜಂತು ನಿವಾರಣೆ ಮಾಡುವುದು ಸೂಕ್ತವೆಂದು ನಿರ್ಧರಿಸಲಾಗಿದೆ. ಇದರಿಂದ ಲಸಿಕೆಯಿಂದ ಉಂಟುಮಾಡುವ ರೋಗನಿರೋಧಕ ಶಕ್ತಿ ಹೆಚ್ಚಾಗಲಿದೆ. ಈ ಉದ್ದೇಶಕ್ಕಾಗಿಯೇ ಸಾಮೂಹಿಕ ಜಂತುನಿವಾರಣಾ ಕಾರ್ಯಕ್ರಮವನ್ನು  ನಡೆಸಲಾಗಿದೆ. ಲಸಿಕೆ ಮಾಡುವ ಮೊದಲು ಫೀಕಲ್  ಮಾದರಿಗಳನ್ನು ಶೇಖರಿಸಿ ಜಂತುನಾಶಕ ಸೇವನೆ ಮಾಡಿಸಿದ ಬಳಿಕ ಅದೇ ರಾಸುಗಳಲ್ಲಿ 28 ದಿನಗಳ ನಂತರ ಪರೀಕ್ಷೆ ನಡೆಸಲಾಗುತ್ತದೆ.
ಲಸಿಕೆ ಉಪಯುಕ್ತತೆಯನ್ನು ಅಳೆಯಲು ಜಿಲ್ಲೆಯ ಆಯ್ದ 10 ಗ್ರಾಮಗಳಲ್ಲಿ 20 ಜಾನುವಾರುಗಳಿಂದ ಲಸಿಕೆ ನೀಡುವ ಮೊದಲು ಸೀರಂ ಶೇಖರಿಸಲಾಗುತ್ತದೆ. ಲಸಿಕೆ ಮಾಡಿದ 28 ದಿನಗಳ ಬಳಿಕ ಅದೇ ರಾಸುಗಳಿಂದ ಸೀರಂ ಶೇಖರಿಸಿ ರೋಗನಿರೋಧಕ ಶಕ್ತಿ ಪರೀಕ್ಷೆ ಮಾಡಲಾಗುತ್ತದೆ.
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗು ಅರಣ್ಯ ಇಲಾಖೆ ಬೃಹತ್ ಲಸಿಕಾ ಆಂದೋಲನಕ್ಕೆ ಕೈಜೋಡಿಸಿವÉ. ಇಲಾಖೆಯ ಲಸಿಕಾ ತಂಡವು ನಿಗದಿತ ದಿನಾಂಕಗಳಂದು ಭೇಟಿ ಕೊಡುವ ಸಂದರ್ಭದಲ್ಲಿ ಜಾನುವಾರು ಮಾಲೀಕರು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಕಾಲುಬಾಯಿ ಜ್ವರ ತಡೆಗೆ ವಿಶೇಷ ಲಸಿಕೆ ನೀಡುವ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ವೀರಭದ್ರಯ್ಯ ಮನವಿ ಮಾಡಿದ್ದಾರೆ.

ಬೆಳೆ ಸಮೀಕ್ಷೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ : ಡಿ.ಸಿ.ಸೂಚನೆ

ಚಾಮರಾಜನಗರ, ಅ. 29 :- ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಬೆಳೆ ಸಮೀಕ್ಷೆಕಾರ್ಯವನ್ನು ನವೆಂಬರ್ 6ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ಬೆಳೆ ಸಮೀಕ್ಷೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಬೆಳೆ ಸಮೀಕ್ಷೆ ಕಾರ್ಯವು ಅತ್ಯಂತ ಮಹತ್ತರವಾಗಿದೆ, ಎಲ್ಲ ಭಾಗದಲ್ಲೂ ವ್ಯಾಪಕವಾಗಿ ಬೆಳೆಸಮೀಕ್ಷೆ ನಿಖರವಾಗಿ ನಡೆಯಬೇಕಿದೆ. ಸಮೀಕ್ಷೆ ಕಾರ್ಯಕ್ಕೆ ನಿಯೋಜಿತರಾಗಿರುವ ಕಂದಾಯ, ತೋಟಗಾರಿಕೆ, ಕೃಷಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬೆಳೆಸಮೀಕ್ಷೆ ಕರ್ತವ್ಯಕ್ಕೆ ತೊಡಗಿರುವ ಅಧಿಕಾರಿ ಸಿಬ್ಬಂದಿ ನಿಗದಿತ ಗುರಿ ಇಟ್ಟುಕೊಂಡು ಅದರಂತೆ ಕೆಲಸ ನಿರ್ವಹಿಸಿ ಸೂಚಿಸಲಾಗಿರುವ ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಬೇಕು, ಪ್ರತಿಯೊಬ್ಬರ ಕರ್ತವ್ಯ ನಿರ್ವಹಣೆಯನ್ನು ಗಮನಿಸಲಾಗುತ್ತದೆ. ಉತ್ತಮ ಸಾಧನೆ ಮಾಡಿದವರನ್ನು ಅಭಿನಂದಿಸಲಾಗುತ್ತದೆ ಎಂದರು.
ಉಪವಿಭಾಗಾಧಿಕಾರಿಗಳು ತಹಶೀಲ್ಧಾರರು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಅಗತ್ಯ ಸಲಹೆ ಪರಿಹಾರ ನೀಡಲಿದ್ದಾರೆ. ಸಮೀಕ್ಷೆ ಕೆಲಸದ ಉಸ್ತುವಾರಿಯನ್ನು ನಿರ್ವಹಿಸಲಿದ್ದಾರೆ. ತಾಂತ್ರಿಕ ದೋಷ, ತೊಡಕುಗಳು ಕಂಡು ಬಂದಲ್ಲಿ ಜಿಲ್ಲಾ ಮಟ್ಟದ ತಂತ್ರಜ್ಞರು ಮಾರ್ಗದರ್ಶನ ಮಾಡಿ ಪರಿಹರಿಸಲಿದ್ದಾರೆ. ಹೀಗಾಗಿ ಯಾವುದೇ ಗೊಂದಲಕ್ಕೆ ಒಳಗಾಗದೇ ಸಮೀಕ್ಷೆ ಕಾರ್ಯವನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಆಪ್ ಆಧಾರಿತ ಬೆಳೆ ಸಮೀಕ್ಷೆಗೆ ಮೊಬೈಲ್ ಅವಶ್ಯಕತೆ ಇರುವವರಿಗೆ ಶೀಘ್ರವೇ ಪೂರೈಸಲಾಗುವುದು. ಈಗಾಗಲೇ ಮೊಬೈಲ್ ಹೊಂದಿದ್ದು ಕಾರ್ಯ ನಿರ್ವಹಿಸುತ್ತಿರುವವರು  ಹೆಚ್ಚು ಪ್ರದೇಶಗಳಿಗೆ ಭೇಟಿ ನೀಡಿ ತ್ವರಿತವಾಗಿ ಸಮೀಕ್ಷೆ ಕೆಲಸ ಮಾಡಬೇಕು. ಕೃಷಿ, ತೋಟಗಾರಿಕೆ ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಸಹಕಾರ ಪಡೆದು ಯಶಸ್ವಿಯಾಗಿ ನಿಗದಿತ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ ಸಮೀಕ್ಷೆ ವೇಳೆ ಬರಬಹುದಾದ ಎಲ್ಲ ತಾಂತ್ರಿಕ ಅಡಚಣೆಗೂ ಪರಿಹಾರವಿದೆ, ಯಾವುದೇ ಮಾಹಿತಿ ಬೇಕಿದ್ದರೂ ಹಿರಿಯ ಅಧಿಕಾರಿಗಳನ್ನು ಸಂರ್ಪಕಿಸಿ ಪರಿಹಾರ ಮಾಡಿಕೊಳ್ಳಬೇಕು. ದಿನನಿತ್ಯದ ಕಾರ್ಯ ಸಾಧನೆಯನ್ನು ಗಮನಿಸಲಾಗುತ್ತದೆ ಎಂದರು.
ಉಪವಿಭಾಗಾಧಿಕಾರಿ ಫೌಜಿಯ ತರನಂ, ಕೃಷಿ ಉಪನಿರ್ದೇಶಕರಾದ ಯೋಗೇಶ್,ತೋಟಗಾರಿಕೆ ಉಪನಿರ್ದೇಶಕರಾದ ಶಿವಪ್ರಸಾದ್, ತಹಶೀಲ್ಧಾರರು ಇತರರು ಹಾಜರಿದ್ದರು.

ಅ. 30ರಂದು ನಗರದಲ್ಲಿ ವಿಷನ್ 2025 ಡಾಕ್ಯುಮೆಂಟ್ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ

ಚಾಮರಾಜನಗರ, ಅ. 29 :- ಮುಂದಿನ ಏಳುವರ್ಷಗಳ ಅವಧಿಯಲ್ಲಿ ರಾಜ್ಯದ ಸಮಗ್ರ ಅಭಿವೃದ್ದಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರ ವಿಷನ್ 2025 ಡಾಕ್ಯುಮೆಂಟ್ ನೀಲನಕ್ಷೆ ಹಾಗೂ ಅನುಷ್ಟಾನ ಕಾರ್ಯಯೋಜನೆ ಸಿದ್ದಪಡಿಸುವ ಜಿಲ್ಲಾ ಮಟ್ಟದ ಮುಖ್ಯಕಾರ್ಯಾಗಾರ ಅಕ್ಟೋಬರ್ 30ರಂದು ನಗರದಲ್ಲಿ ನಡೆಯಲಿದೆ.
ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರ್ಕಾರದ ಪ್ರಧಾನಕಾರ್ಯದರ್ಶಿಯವರು ಮತ್ತು ವಿಷನ್-2025 ಡಾಕ್ಯುಮೆಂಟ್ ಪ್ರಾಜೆಕ್ಟ್‍ನ  ಮುಖ್ಯಕಾರ್ಯನಿರ್ವಾಹಣಾಧಿಕಾರಿ ರೇಣುಕಾಚಿದಂಬರಂ ಅವರ ನೇತೃತ್ವದಲ್ಲಿ ಕಾರ್ಯಗಾರ ನಡೆಯಲಿದೆ, ಅಕ್ಟೋಬರ್ 30ರಂದು  ಬೆಳಿಗ್ಗೆ 10.30ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಗಾರಕ್ಕೆÀ ಚಾಲನೆ ನೆರವೇರಲಿದೆ.
ಚಾಲನೆ ನೀಡಿದ ಬಳಿಕ ಜಿಲ್ಲಾಡಳಿತ ಭವನದ ಐದು ಪ್ರತ್ಯೇಕ ಕೊಠಡಿಗಳಲ್ಲಿ ನಗರ ಮೂಲಸೌರ್ಕಯ/ ಸ್ಮಾರ್ಟ್ ಸಿಟಿ, ಸಾಮಾಜಿಕ ನ್ಯಾಯ, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಇದರ ಸಂಬಂಧಿ ಹಾಗೂ ಗ್ರಾಮೀಣಾಭಿವೃದ್ದಿ, ಕೈಗಾರಿಕೆ ಅಭಿವೃದ್ದಿ, ಸೇವೆಗಳು,  ಉದೋಗ್ಯ ಮತ್ತು ಕೌಶಲ್ಯ ಅಭಿವೃದ್ದಿ, ಆಡಳಿತ ಕಾನೂನು ಮತ್ತು ನ್ಯಾಯ ವಿಷಯಗಳ ಸಭೆ ಚರ್ಚೆ ನಡೆಯಲಿವೆ.
ವಿಷನ್ ಡಾಕ್ಯುಮೆಂಟ್ ತಯಾರಿ ಹಾಗೂ ಅನುಷ್ಟಾನ ಕಾರ್ಯಯೋಜನೆ ಸಿದ್ದಪಡಿಸುವ ಸಲುವಾಗಿ ಸರ್ಕಾರದ ಪ್ರಮುಖ ಇಲಾಖೆಗಳನ್ನು ಒಳಗೊಂಡ 13ವಲಯಗಳನ್ನು ಗುರುತಿಸಲಾಗಿದೆ. ಅವುಗಳೆಂದರೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳು, ಮೂಲಸೌಕರ್ಯಗಳು (ರಸ್ತೆ, ವಿದ್ಯುತ್‍ಚ್ಛಕ್ತಿ, ಕುಡಿಯುವ ನೀರು ಸೌಲಭ್ಯ ಮತ್ತು ನೈರ್ಮಲ್ಯೀಕರಣ), ಉದ್ಯೋಗ ಮತ್ತು ಕೌಶಲ್ಯ , ಕೈಗಾರಿಕಾಭಿವೃದ್ದಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ ಮತ್ತು ಪೋಷಣೆ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ, ಸೇವೆಗಳು, ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ/ನ್ಯಾಯಾಧಿಕಾರ. ಈ ಎಲ್ಲ 13ವಲಯಗಳಿಗೆ  ಸಂಬಂಧಿಸಿದಂತೆ ಐದು ಸಮಾನಂತರ ವಿಷಯಗಳನ್ನಾಗಿ ವಿಂಗಡಿಸಿ ಪ್ರತ್ಯೇಕವಾಗಿ ವಿಷಯಾಧಾರಿತ ಉಪವಿಭಾಗಗಳಾಗಿ ಚರ್ಚಿಸಲಾಗುತ್ತದೆ.
ರಾಜ್ಯ ಸರ್ಕಾರ ಮುಂದಿನ ಏಳು ವರ್ಷಗಳಲ್ಲಿ ಜನರ ಅಗತ್ಯದ ಯೋಜನೆಗೆ ಜನಾಭಿಪ್ರಾಯವನ್ನು ಜಿಲ್ಲೆಯಿಂದಲೆ ಸಂಗ್ರಹಿಸುವ ಉದ್ದೇಶದಿಂದಲೇ ಪ್ರತಿ ಜಿಲ್ಲೆಯಲ್ಲೂ ಅಭಿಪ್ರಾಯ ಸಲಹೆಗಳನ್ನು ಪಡೆಯುತ್ತಿದೆ. ವಿಷಯ ತಜÐರು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಣಿತರಿಂದ ಅಭಿಪ್ರಾಯ ಕ್ರೋಢಿಕರಣ ಮಾಡಲಾಗುತ್ತಿದೆ.
ಪ್ರತಿ ವಿಷಯಾಧಾರಿತ ಸಮೂಹದಲ್ಲಿ 20 ಜನರ ಗುಂಪುನ್ನು ಮಾಡಿಕೊಂಡು ಜಿಲ್ಲಾ ಮಟ್ಟದ ಕಾರ್ಯಗಾರದಂದು ಚರ್ಚಿಸಿ ಪ್ರಗತಿಯ ಮುನ್ನೋಟ ಮತ್ತು ಅಪೇಕ್ಷಿತ ಫಲಿತಾಂಶಗಳ ಬಗ್ಗೆ ಪ್ರಸ್ತುತ ಪಡಿಸಲಾಗುತ್ತದೆ. ಪ್ರತಿ ಗುಂಪು ಪ್ರತ್ಯೇಕವಾಗಿ ತನ್ನ ವಲಯಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಕ್ರೋಢಿಕರಿಸಿದ ವಿಷಯಗಳ ಬಗ್ಗೆ ಪ್ರಸ್ತುತ ಪಡಿಸಲಿದೆ.


























Saturday, 28 October 2017

ನೇರ ಫೋನ್ ಇನ್ ಕಾರ್ಯಕ್ರಮ : 27 ದೂರುಗಳು ದಾಖಲು 28-10-2017)

      ನೇರ ಫೋನ್ ಇನ್ ಕಾರ್ಯಕ್ರಮ : 27 ದೂರುಗಳು ದಾಖಲು

ಚಾಮರಾಜನಗರ, ಅ. 28- ಜಿಲ್ಲೆಯ ನಾಗರಿಕರ ಕುಂದುಕೊರತೆ ಅಹವಾಲುಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 27 ದೂರುಗಳು ದಾಖಲಾದವು. 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ರಾಮು,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನಡೆದ ಒಂದು ತಾಸಿನ ಕಾರ್ಯಕ್ರಮದಲ್ಲಿ ನಾನಾ ಭಾಗದಿಂದ ಜನರು ತಮ್ಮ ಸಮಸ್ಯೆ, ದೂರುಗಳನ್ನು ದೂರವಾಣಿ ಮೂಲಕ ತಿಳಿಸಿದರು.
ಮಾಂಬಳ್ಳಿಯಿಂದ ಕರೆಮಾಡಿದ ನಾಗರಿಕರೊಬ್ಬರು ಮಾಂಬಳ್ಳಿ ಸೂರಾಪುರ ಸೇರಿದಂತೆ ಹಲವೆಡೆ ಪೆಟ್ಟಿಗೆ ಅಂಗಡಿಗಳಲ್ಲಿ ಮದ್ಯ ಮಾರಾಟ ಅಕ್ರಮವಾಗಿ ನಡೆಯುತ್ತಿದೆ. ಕೆಲವೆಡೆ ಗರಿಷ್ಟ ಮಾರಾಟ ಬೆಲೆಗಿಂತಲೂ ಹೆಚ್ಚು ಪಡೆಯಲಾಗುತ್ತಿದೆ. ಆದರೂ ಅಬಕಾರಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲವೆಂದು ಗಂಭೀರ ಆರೋಪ ಮಾಡಿದರು. ಸೋಮಹಳ್ಳಿ ಹಾಗೂ ರಾಮಾಪುರದಲ್ಲಿಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು.
ಇದಕ್ಕೆ ಪ್ರಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ಅಬಕಾರಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಲು ಸೂಚಿಸಲಾಗುತ್ತದೆ. ಎಂದರು.
ಯರಗಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಅವ್ಯವಹಾರ ನಡೆದಿದೆ ಎಂದು ಸ್ಥಳೀಯರೊಬ್ಬರು ದೂರಿದರು. ಸತ್ತೇಗಾಲ ಗ್ರಾಮಪಂಚಾಯಿತಿಯಲ್ಲಿ ಶೌಚಾಲಯವಿಲ್ಲ. ಬಸ್ ನಿಲ್ದಾಣ ಸೌಲಭ್ಯವೂ ಇಲ್ಲವಾಗಿದೆ. ಇಲ್ಲಿನ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವೆಂದು ಮತ್ತೊಬ್ಬರು ಗಮನ ಸೆಳೆದರು.
ಕೊಳ್ಳೇಗಾಲ ಪಟ್ಟಣದ ನೂರ್ ಮೊಹಲ್ಲಾದಲ್ಲಿ ಮೂಲಸೌಕರ್ಯಗಳು ಸರಿಯಾಗಿ ಇಲ್ಲ. ರಸ್ತೆ, ಚರಂಡಿ ಸೌಲಭ್ಯಗಳು ಇಲ್ಲದಿರುವುದರಿಂದ ಸ್ಥಳೀಯ ಜನರು ಪರಿತಪಿಸುವಂತಾಗಿದೆ ಎಂದು ಅಲ್ಲಿನ ಬಡಾವಣೆಯ ನಿವಾಸಿಯೊಬ್ಬರು ಅಳಲು ತೋಡಿಕೊಂಡರು. ಕೊಳ್ಳೇಗಾಲ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ ಎಂದು ಮತ್ತೊಬ್ಬರು ದೂರಿದರು.
ಫೋನ್ ಇನ್ ಕಾರ್ಯಕ್ರಮದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಕಾರ್ಯಕ್ರಮದಲ್ಲಿ ಕೇಳಿಬರುವ ಕುಂದುಕೊರತೆ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಸಿಗಲು ಅಧಿಕಾರಿಗಳು ಮುಂದಾಗಬೇಕು. ಕೆಲ ಸಮಸ್ಯೆಗಳು ದೂರುಗಳು ನಾಗರಿಕರಿಂದ ಮತ್ತೆ ಕೇಳಿಬರುತ್ತಿವೆ. ಇದಕ್ಕೆ ಅವಕಾಶವಾಗದಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು, ಆಯಾ ಭಾಗದ ಸಮಸ್ಯೆಗಳು ಸ್ಥಳೀಯವಾಗಿ ಪರಿಹರಿಸಿ ಅನುಕೂಲ ಕಲ್ಪಿಸಬೇಕೆಂದು ತಾಕೀತು ಮಾಡಿದರು.
 ಹÉಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪರಿಶಿಷ್ಟ ಜನತೆಯ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ : ಜಿಲ್ಲಾಧಿಕಾರಿ ಬಿ. ರಾಮು

ಚಾಮರಾಜನಗರ, ಅ. 28 – ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗುವ ಸಮಸ್ಯೆ ಹಾಗೂ ದೂರುಗಳಿಗೆ ತ್ವರಿತವಾಗಿ ಪರಿಹಾರ ಕ್ರಮಗಳಿಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸಕಾಲಕ್ಕೆ ನಡೆಯಬೇಕು. ಸಭೆಯಲ್ಲಿ ಚರ್ಚಿತವಾಗುವ ಸಮಸ್ಯೆ ಕುಂದುಕೊರತೆಗಳಿಗೆ ಶೀಘ್ರವಾಗಿ ಪರಿಹಾರ ಸಿಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಆದ್ಯ ಗಮನ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಚಾಮರಾಜನಗರ ಪಟ್ಟಣದ ಆದಿಜಾಂಬವ ಜನಾಂಗದವರಿಗೆ ರುದ್ರಭೂಮಿ ಒದಗಿಸುವ ನಿಟ್ಟಿನಲ್ಲಿ ತುರ್ತಾಗಿ ಅಗತ್ಯವಿರುವ ಪ್ರಕ್ರಿಯೆ ಕೈಗೊಳ್ಳಬೇಕು. ಗಂಗಾಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲು ವಿಳಂಬಧೋರಣೆ ಮಾಡಬಾರದು. ನಿಗದಿತ ವೇಳೆಗೆ ವಿದ್ಯುದೀಕರಣ ಕಾಮಗಾರಿ ಪೂರೈಸಿ ಪರಿಶಿಷ್ಟರಿಗೆ ನೀರಾವರಿ ಸೌಲಭ್ಯ ಪಡೆಯಲು ಅನುವು ಮಾಡಿಕೊಡಬೇಕೆಂದು ತಿಳಿಸಿದರು.
ಪರಿಶಿಷ್ಟ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆರಂಭಿಸಲು ಅಗತ್ಯವಿರುವ ಪ್ರಕ್ರಿಯೆ ಕೈಗೊಳ್ಳಬೇಕು. ಇದರಿಂದ ಅಭ್ಯರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ನೆಟ್, ಕೆಸೆಟ್, ಯುಜಿಸಿ ಪರೀಕ್ಷಾರ್ಥಿಗಳಿಗೂ ನೆರವಾಗುವ ಉದ್ದೇಶದಿಂದ ತರಬೇತಿ ಕೇಂದ್ರವನ್ನು ವ್ಯವಸ್ಥೆ ಮಾಡಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಸಿವಿಲ್ ಕಾಮಗಾರಿ ಹಂಚಿಕೆ ಮಾಡುವಾಗ ಮೀಸಲಾತಿಯನ್ವಯ ನೀಡಬೇಕಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಪ್ರಸ್ತುತ ಟೆಂಡರ್ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ಕಾಮಗಾರಿ ನಿರ್ವಹಣೆಗೆ ಮೀಸಲಿರಿಸಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಸ್ಪಷ್ಟಪಡಿಸಿದರು.
ಹಿತರಕ್ಷಣಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಎಂ. ಚಿಕ್ಕಮಹದೇವ ಹಾಗೂ ರಾಮಕೃಷ್ಣಯ್ಯ ಅವರು ಮಾತನಾಡಿ ಎಚ್ ಡಿ ಫಾರೆಸ್ಟ್‍ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಮಂಜೂರಾಗಿರುವ ದರಖಾಸ್ತು ಜಮೀನು ಹಾಗೂ ಜೀತವಿಮುಕ್ತರಿಗೆ ಸಾಗುವಳಿ ಚೀಟಿ ನೀಡಿ ಜಮೀನು ಹಂಚಿಕೆ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು. ಈ ಕುರಿತು ಈ ಹಿಂದೆಯೂ ಚರ್ಚೆಯಾಗಿದೆ ಎಂದು ಗಮನ ಸೆಳೆದರು.
ತಾಲೂಕಿನ ಹರದನಹಳ್ಳಿಯಲ್ಲಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ, ಗಿರಿಜನ ಉಪಯೋಜನೆಯಡಿ ಕುರಿ ವಿತರಣೆ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಪರಿಹಾರ ಕ್ರಮಗಳು ಸೇರಿದಂತೆ ಕಳೆದ ಸಭೆಯಲ್ಲಿ ದಾಖಲಾದ ದೂರು ಸಮಸ್ಯೆಗಳಿಗೆ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಯಿತು.
ಇಂದಿನ ಸಭೆಯಲ್ಲಿ ಪಿಟಿಸಿಎಲ್ ಕಾಯಿದೆ ದುರುಪಯೋಗ, ಬಾಂಕಿನಲ್ಲಿ ಸಾಲಸೌಲಭ್ಯಕ್ಕೆ ವಿಳಂಬ, ಪೌರಕಾರ್ಮಿಕರಿಗೆ ಮೂಲಸೌಕರ್ಯ, ಜಮೀನು ಮಂಜೂರು ಸೇರಿದಂತೆ ವಿವಿಧ ದೂರುಗಳ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಅ. 29ರಂದು ಪೋಲ್ ಸೆಟ್ ಪರೀಕ್ಷೆ : ನಿಷೇದಾಜ್ಞೆ ಜಾರಿ

ಚಾಮರಾಜನಗರ, ಅ. 28 - ಸಶಸ್ತ್ರ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗÀಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಯು ಅಕ್ಟೋಬರ್ 29ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಪದವಿ ಕಾಲೇಜು, ಮಹರ್ಷಿ ಭಗೀರಥ ರಸ್ತೆಯಲ್ಲಿರುವ ಸೇವಾ ಭಾರತಿ ಶಿಕ್ಷಣ ಸಂಸ್ಥೆಗಳು, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ (ಸ್ಯಾಟಲೈಟ್) ಅಧ್ಯಯನ ಕೇಂದ್ರ ಹಾಗೂ ನಂಜನಗೂಡು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯವನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಚ್ಚುವಂತೆಯೂ ಆದೇಶಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ವರ್ಗಕ್ಕೆ ನಿಷೇದಾಜ್ಞೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಅ. 31ರಂದು ಮಹದೇಶ್ವರ ಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ಅ. 28 - ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯ ಅಕ್ಟೋಬರ್ 31ರಂದು ಬೆಳಿಗ್ಗೆ ಅಲ್ಲಿನ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ನಡೆಯಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಹಣ ಎಣಿಕೆ ಕಾರ್ಯಕ್ಕೆ ಸಹಕರಿಸಲಿದ್ದಾರೆ ಎಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ

ಚಾಮರಾಜನಗರ, ಅ. 28 - ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ,  ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಅಂದು ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5.30ರಿಂದ 6.30 ಗಂಟೆಯವರೆಗೆ ರಾಮಸಮುದ್ರದ  ಮಂಜುನಾಥ್ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 7.30 ರಿಂದ 8.30 ಗಂಟೆಯವರೆಗೆ ನಗರದ ಶ್ರೀ ಶಾರದಾ ನೃತ್ಯ ಶಾಲೆಯಿಂದ ನೃತ್ಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನ. 2ರಂದು ಉದ್ಯೋಗಿನಿ ಯೋಜನೆ ಸಾಲಸೌಲಭ್ಯಕ್ಕೆ ಫಲಾನುಭವಿಗಳ ಆಯ್ಕೆಗೆ ಸಂದರ್ಶನ
ಚಾಮರಾಜನಗರ, ಅ. 28 - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2017-18ನೇ ಸಾಲಿನ ಉದ್ಯೋಗಿನಿ ಯೋಜನೆಯಡಿ ಸಾಲಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಸಂದರ್ಶನವನ್ನು ನವೆಂಬರ್ 2ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಿದೆ.
ಸಂದರ್ಶನ ಪತ್ರ ರವಾನಿಸಲಾಗಿದ್ದು ಪತ್ರ ತಲುಪದಿದ್ದವರು ಅರ್ಜಿಯೊಡನೆ ಲಗತ್ತಿಸಿರುವ ಎಲ್ಲಾ ಮೂಲ ದಾಖಲÁತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಲೋಕಸಭಾ ಸದಸ್ಯರ ಪ್ರವಾಸ

ಚಾಮರಾಜನಗರ, ಅ. 28- ಕೇಂದ್ರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಮನ್ವಯ ಸಮಿತಿಯ ಸದಸ್ಯರಾಗಿರುವ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಕ್ಟೋಬರ್ 30 ರಿಂದ ನವೆಂಬರ್ 6ರವರೆಗೆ ವಿವಿದೆಡೆ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 30 ಹಾಗೂ 31ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸುವರು.
ಕೇಂದ್ರ ಸರ್ಕಾರದ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಸಮಿತಿಯ ಸದಸ್ಯರೂ ಆಗಿರುವ  ಆರ್. ಧ್ರುವನಾರಾಯಣ ಅವರು ಸಮಿತಿಯ ತಂಡದೊಂದಿಗೆ ನವೆಂಬರ್ 1 ರಿಂದ 6ರವರೆಗೆ ಲಕ್ನೋ, ಭೂಪಾಲ್, ಮುಂಬೈ, ರಾನ್ನ್ ಆಫ್ ಕುಟ್ಚಾಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ನೈಪರ್ ಸಂಸ್ಥೆ, ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್, ಪ್ಲಾಸ್ಟಿಕ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕೇಂದ್ರ ಸಂಸ್ಥೆ, ಹಿಂದೂಸ್ಥಾನ್ ಇನ್‍ಸೆಕ್ಟಿಸೈಡ್ ಲಿಮಿಟೆಡ್‍ನ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸುವರು ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


















Friday, 27 October 2017

27-10-2017 ಚಾಮರಾಜನಗರ ಸುದ್ದಿಗಳು

     

ಅ. 31ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ


ಚಾಮರಾಜನಗರ, ಅ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ  ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕಿತ್ತೂರುರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರಯ್ಯ ಮುಖ್ಯ ಭಾಷಣ ಮಾಡುವರು.
ಜಯಂತಿ ಅಂಗವಾಗಿ ವೇದಿಕೆಯಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯ ಎಸ್.ಬಿ. ನಾಗರಾಜು ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅ. 30ರಂದು ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನಾಚರಣೆ

ಚಾಮರಾಜನಗರ, ಅ. 27 :- ತಾಲೂಕಿನ ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನಾಚರಣೆಯನ್ನು ಅಕ್ಟೋಬರ್ 30ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ : ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಚಾಮರಾಜನಗರ, ಅ. 27 :- ಜವಹರ್ ನವೋದಯ ವಿದ್ಯಾಲಯದ 2018ನೇ ಸಾಲಿನ ಪ್ರವೇಶಕ್ಕೆ  ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ಜಿಲ್ಲೆಯಾದ್ಯಂತ 5ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲಾ ಶಾಲೆಗಳ (ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ) ಮುಖ್ಯಸ್ಥರು ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ತಿಳಿಸಬೇಕÀು.
ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಸಾರ್ವಜನಿಕ  ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




 ಕೊಳ್ಳೇಗಾಲ : ವಿವಿಧ ತರಬೇತಿಗೆ ಪ.ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅ. 27 (ಕರ್ನಾಟಕ ವಾರ್ತೆ):- ತಾಲೂಕಿನ ಪರಿಶಿಷ್ಟ ವರ್ಗಗಳ  ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಗೃಹೋಪಯೋಗಿ ವಿದ್ಯುತ್ ಉಪಕರಣ, ಮೊಬೈಲ್ ದುರಸ್ತಿ, ಹೊಲಿಗೆ (ಯುವತಿಯರಿಗೆ) ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ವಾಹನ ಚಾಲನಾ ಹಾಗೂ ಹೊಲಿಗೆ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ 10ನೇ ತರಗತಿ ಪಾಸಾಗಿರಬೇಕು. ಉಳಿದ ಎಲ್ಲ ತರಬೇತಿಗೆ ಕನಿಷ್ಟ 8ನೇ ತರಗತಿ ತೇರ್ಗಡೆಯಾಗಿರಬೇಕು. 18 ರಿಂದ 35ರ ವಯೋಮಿತಿಯ ನಿರುದ್ಯೋಗಿಗಳು ಅರ್ಹರು. ಯಾವುದೇ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಅಥವಾ ತರಬೇತಿ ಪಡೆಯುತ್ತಿರಬಾರದು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು.
ಅರ್ಜಿಯನ್ನು ಕೊಳ್ಳೇಗಾಲ ಪಟ್ಟಣದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ,  ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 8ರ ಒಳಗೆ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ತಾಲೂಕು ಪರಿಶಿಷ್ಟ ವರ್ಗಗಳ  ಕಲ್ಯಾಣ ಅಧಿಕಾರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08224-255060 ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಅ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಅ. 27 :- ಜಿಲ್ಲೆಯನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕೋಬರ್ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 28ರಂದು ಜಿಲ್ಲಾ ಪ. ಜಾತಿ, ಪ. ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಅ. 27 – ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು, ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನ. 10,11ರಂದು ನಗರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಗಳ ಆಯೋಜನೆ

ಚಾಮರಾಜನಗರ, ಅ. 27 :– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 10 ಹಾಗೂ 11ರಂದು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನೊಂದಾಯಿತ ಯುವಕ ಯುವತಿ ಸಂಘದ ಸ್ಪರ್ಧಾಳುಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯುವಕ ಯುವತಿಯರು ಯುವಜನೋತ್ಸವಕ್ಕೆ ಭಾಗವಹಿಸಬಹುದಾಗಿದೆ.
ಜಾನಪದ ನೃತ್ಯ (20 ಮಂದಿಗೆ ಸೀಮಿತ), ಜಾನಪದ ಗೀತೆ (10 ಮಂದಿಗೆ ಸೀಮಿತ), ಏಕಾಂಕ ನಾಟಕ (ಹಿಂದಿ ಅಥವಾ ಇಂಗ್ಲೀಷ್) (12 ಮಂದಿಗೆ ಸೀಮಿತ), ಆಶು ಭಾಷಣ (ಹಿಂದಿ ಅಥವಾ ಇಂಗ್ಲೀಷ್), ಗಿಟಾರ್, ಹಾರ್ಮೋನಿಯಂ, ಶಾಸ್ತ್ರೀಯ ವಾದ್ಯಗಳು - ಸಿತಾರ್, ತಬಲ, ಕೊಳಲು, ವೀಣೆ, ಮೃದಂಗ (5 ಮಂದಿಗೆ), ಶಾಸ್ತ್ರೀಯ ಗಾಯನ - ಹಿಂದೂಸ್ತಾನಿ ಹಾಗೂ ಕರ್ನಾಟಕ, ಶಾಸ್ತ್ರೀಯ ನೃತ್ಯ – ಮಣಿಪುರಿ, ಒರಿಸ್ಸಾ, ಭರತ ನಾಟ್ಯಂ, ಕಥಕ್, ಕುಚಿಪುಡಿ (5 ಮಂದಿಗೆ ಸೀಮಿತ) ಸ್ಪರ್ಧೆಗಳು ಇರಲಿವೆ.
ವಯೋಮಿತಿ 15 ರಿಂದ 29 ವರ್ಷದೊಳಗೆ ಇರಬೇಕು. ವಯಸ್ಸಿನ ದೃಢೀಕರಣಕ್ಕೆ ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಇತರೆ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು.
ಆಸಕ್ತರು ಪೂರ್ಣ ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಪಟ್ಟಿಯನ್ನು ಕಚೇರಿಗೆ ಕಳುಹಿಸಬೇಕು. ಭಾಗವಹಿಸುವ ಸ್ಪರ್ಧಾಳುಗÀಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದವರು ಉಡುಪಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9482718278 ಯನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರÀು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Thursday, 26 October 2017

ಶಾಸಕರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಹೈಮಾಸ್ಟ್ ದೀಪ ಸೇವೆಗೆ ವ್ಯವಸ್ಥೆ ಸಮರ್ಪಣೆ (26-10-2017)

ಶಾಸಕರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಹೈಮಾಸ್ಟ್ ದೀಪ ಸೇವೆಗೆ ವ್ಯವಸ್ಥೆ  ಸಮರ್ಪಣೆ

ಚಾಮರಾಜನಗರ, ಅ. 26 - ನಗರದ ಗಾಳಿಪುರ ಬಡಾವಣೆಯ ವಿವಿಧ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ಹಾಗೂ ವಿವಿದ ಬೀದಿಗಳಲ್ಲಿ ಅಳವಡಿಸÀಲಾಗಿರುವ ಹೈಮಾಸ್ಟ್ ಬೀದಿ ದೀಪ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು 1.5 ಕೋಟಿ ರೂ. ವೆಚ್ಚದ ಹಾಗೂ 8 ಲಕ್ಷ ರೂ. ವೆಚ್ಚದ ಪ್ರತ್ಯೇಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಇದೇವೇಳೆ ಪ್ರಮುಖ ರಸ್ತೆ ಹಾಗೂ ಬಡಾವಣೆ ಬೀದಿಗಳಲ್ಲಿ ಅಳವಡಿಸಿರುವ ಹೈಮಾಸ್ಟ್ ಬೀದಿ ದೀಪವನ್ನು ಗುಂಡಿ ಒತ್ತುವ ಮೂಲಕ ಸೇವೆಗೆ ಶಾಸಕರು ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿಯವರು ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಈ ಅನುದಾನ ಬಳಕೆ ಮಾಡಿಕೊಂಡು ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮುಂದಾಗಿದ್ದೇವೆ ಎಂದರು.
ಎಸ್‍ಎಫ್‍ಸಿ ಅನುದಾನದಡಿ ಅತ್ಯಾಧುನಿಕವಾಗಿ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ನಗರೋತ್ಥಾನದಡಿಯೂ ರಸ್ತೆ ಕಾಮಗಾರಿಗೆ ಹಣ ನಿಗದಿಯಾಗಿದೆ. 10.5 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ, ಸಂಪಿಗೆ ರಸ್ತೆ, ಪಿಕಾಡೋ ಆಸ್ಪತ್ರೆ ರಸ್ತೆ ಸೇರಿದಂತೆ ಇತರೆಡೆ ರಸ್ತೆ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕರು ವಿವರಿಸಿದರು.
ನಗರಸಭೆ ಅಧ್ಯಕ್ಷರಾದ ಶೋಭ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಹಾಲಿ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರೂ ಆದ ನಂಜುಂಡಸ್ವಾಮಿ, ಸದಸ್ಯರಾದ ಸೈಯದ್ ಆರಿಫ್, ಮಹೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಉಮೇಶ್, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಮುಖಂಡರಾದ  ಸುರೇಶ್ ನಾಯಕ, ಮಹಮದ್ ಅಸ್ಗರ್ ಮುನ್ನ, ನಗರಸಭೆ ಆಯುಕ್ತರಾದ ರಾಜಣ್ಣ, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಅ. 29ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ

ಚಾಮರಾಜನಗರ, ಅ. 26 (:- ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ (ಸಿಎಆರ್, ಡಿಎಆರ್) ಹುದ್ದೆಗÀಳಿಗೆ ಅರ್ಹರಾದ ಒಟ್ಟು 1400 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯು ಅಕ್ಟೋಬರ್ 29ರಂದು ಬೆಳಿಗ್ಗೆ 11 ರಿಂದ 12.30 ಗಂಟೆಯವರೆಗೆ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಮಹರ್ಷಿ ಭಗೀರಥ ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್, ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿವೆ.
ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ವೆಬ್ ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳಬಹುದು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್, ಲ್ಯಾಪ್ ಟಾಪ್, ಕ್ಯಾಲ್ಕÀ್ಯುಲೇಟರ್, ಪೇಜರ್, ಚಿಟ್ಸ್, ನೋಟ್ ಬುಕ್, ಎಲೆಕ್ಟ್ರಾನಿಕ್ ಉಪಕರಣಗಳು ಇತರೆ ಸಾಮಗ್ರಿಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ. ನೇಮಕಾತಿಯು ಪಾರದರ್ಶಕ ಗಣಕೀಕೃತ ವಸ್ತುನಿಷ್ಟ, ಅರ್ಹತೆ ಹಾಗೂ ಮೀಸಲಾತಿ ಆಧಾರದ ಮೇಲೆ ನಡೆಯಲಿದೆ. ಯಾವುದೇ ಅಭ್ಯರ್ಥಿ ಉದ್ಯೋಗ ಪಡೆಯುವ ಸಲುವಾಗಿ ಇಲಾಖೆಯ ಹೊರಗೆ ಅಥವಾ ಒಳಗೆ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಪಾರತೋಷಕ ನೀಡುವುದನ್ನು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಮಧ್ಯವರ್ತಿಗಳ ಭರವಸೆಗಳಿಗೆ ಅಭ್ಯರ್ಥಿಗಳು ಮಾರುಹೋಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 28ರಂದು ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ

ಚಾಮರಾಜನಗರ, ಅ. 26 - ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘ ಆಶ್ರಯದಲ್ಲಿ ಪ್ರಾಣಿಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮವನ್ನು ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಪ್ರಾಣಿಪ್ರಿಯರು, ನಾಗರಿಕರು ತಮ್ಮ ಸಾಕು ನಾಯಿ, ಬೆಕ್ಕುಗಳನ್ನು ಆಸ್ಪತ್ರೆಗೆ ಕರೆತಂದು ಉಚಿತ ಲಸಿಕೆ ಹಾಕಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ನ. 3, 4ರಂದು ಸಿಎಸ್‍ಎಎಸ್ ಮೌಲ್ಯಂಕನ ಪರೀಕ್ಷೆ

ಚಾಮರಾಜನಗರ, ಅ.:– ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ನವೆಂಬರ್ 3 ಹಾಗೂ 4ರಂದು 2017-18ನೇ ಸಾಲಿನ ಸಿಎಸ್‍ಎಎಸ್ ಮೌಲ್ಯಂಕನ ಪರೀಕ್ಷೆಯನ್ನು 4 ರಿಂದ 9ನೇ ತರಗತಿಯವರಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನಡೆಸಲಿದೆ.
ಪರೀಕ್ಷಾ ದಿನಗಳಂದು ಮಕ್ಕಳು ಶಾಲೆಗೆ ಗೈರುಹಾಜರಾಗದಂತೆ ಶಿಕ್ಷಕರು ಕ್ರಮ ವಹಿಸಲು ತಿಳಿಸಿದ್ದು, ಶಾಲಾಭಿವೃದ್ಧಿ (ಎಸ್‍ಡಿಎಂಸಿ) ಅಧ್ಯಕ್ಷರು ಶಾಲೆಯಲ್ಲಿ ಹಾಜರಿರುವಂತೆ ತಿಳಿಸಲಾಗಿದೆ.
ಎಲ್ಲ ಶಿಕ್ಷಕರು ಕಡ್ಡಾಯವಾಗಿ ಶಾಲಾ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 27ರಂದು ಉಸ್ತುವಾರಿ ಜಿಲ್ಲಾ ಸಚಿವರ ಪ್ರವಾಸ
ಚಾಮರಾಜನಗರ, ಅ. - ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವ ಪ್ರಸಾದ್) ಅವರು ಅಕ್ಟೋಬರ್ 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಶಾಲೆಗಳ ವಿರುದ್ಧ ದೂರು ನೀಡಲು ಮನವಿ

ಚಾಮರಾಜನಗರ, ಅ. 26 - ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ವಸೂಲು ಮಾಡುತ್ತಿದ್ದಲ್ಲಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲೆಗಳ ವಿರುದ್ಧ ಪೋಷಕರು ನಾಗರಿಕರು ಲಿಖಿತವಾಗಿ ದೂರು ನೀಡುವಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿವಿಧ ತರಬೇತಿ : ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅ. 26- ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2007-18ನೇ ಸಾಲಿಗೆ ವಿವಿಧ ಕೌಶಲ್ಯ ತರಬೇತಿ ನೀಡಲಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಯುವತಿಯರು ವಿವಿಧ ಟ್ರೇಡ್‍ಗಳಲ್ಲಿ ತರಬೇತಿ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ನವೆಂಬರ್ 31ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224133 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಅ. 27ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಅ. 26 - ತಾಲೂಕಿನ ಚಂದಕವಾಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 27ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಿರಿಕೆರೆ, ಕಾಳಿಕಾಂಬ, ಚಂದಕವಾಡಿ, ರೇಚಂಬಳ್ಳಿ, ಮಲ್ಲೆದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 28ರಂದು ಜಿಲ್ಲಾ ಪ. ಜಾತಿ, ಪ. ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಅ. 26– ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು, ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Wednesday, 25 October 2017

ಆತ್ಮಹತ್ಯೆ ಪ್ರಕರಣ : ಪತಿಗೆ ಸಜೆ ,ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ,ಶಿಕ್ಷಣದಿಂದಲೇ ಸರ್ವಾಂಗೀಣ ಅಭಿವೃದ್ಧಿ : ಧ್ರುವನಾರಾಯಣ (25-10-2017)

ಆತ್ಮಹತ್ಯೆ ಪ್ರಕರಣ : ಪತಿಗೆ ಸಜೆ

ಚಾಮರಾಜನಗರ, ಅ. 25 :- ಪತಿಯ ಹಿಂಸೆ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ 2 ವರ್ಷ 11 ತಿಂಗಳು ಸಜೆ ಹಾಗೂ 1500 ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು  ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಗ್ರಾಮದ ಕುಂಬಾರ ಬೀದಿಯ ಸುರೇಶ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ತನ್ನ ಹೆಂಡತಿ ಸಾವಿತ್ರಿಗೆ ಮಕ್ಕಳಾಗದ ಕಾರಣ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಇದನ್ನು ತಾಳಲಾರದೆ ಈತನ ಪತ್ನಿ ತಂದೆ ಮನೆಗೆ ಹೋಗಿದ್ದರು. ಈ ಬಗ್ಗೆ ಗ್ರಾಮದಲ್ಲಿ ನ್ಯಾಯಪಂಚಾಯಿತಿಯು ನಡೆದಿದ್ದು ಇನ್ನುಮುಂದೆ ಯಾವುದೇ ಹಿಂಸೆ ಮಾಡುವುದಿಲ್ಲ ಎಂದು ಪತ್ನಿಯನ್ನು ಸುರೇಶ ಮನೆಗೆ ಕರೆದುಕೊಂಡು ಹೋಗಿದ್ದನು. ಆದರೆ ಮತ್ತೆ ಹಿಂಸೆ ಕೊಡುವುದು ಮುಂದುವರೆದಿದ್ದರಿಂದ ಕಳೆದ 2014ರ ಜನವರಿ 23ರಂದು ಪತಿ ಸುರೇಶನ ಹಿಂಸೆ ತಾಳಲಾರದೆ ಮನನೊಂದು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪತಿ ಸುರೇಶನೇ ಕಾರಣ ಎಂದು ರುಜುವಾತಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಸುರೇಶನಿಗೆ 2 ವರ್ಷ 11 ತಿಂಗಳು ಸಜೆ ಹಾಗೂ 1500 ರೂ. ದಂಡ ವಿಧಿಸಿ ಅಕ್ಟೋಬರ್ 24ರಂದು ತೀರ್ಪು ನೀಡಿದ್ದಾರೆ.

ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.


 ಚಾಮರಾಜನಗರ ಅ,25- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ರಾಜ್ಯ ಸರ್ಕಾರಿ ನೌಕರರಿಗೆ ಅನುಷ್ಟಾನಗೊಳಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳಲ್ಲಿ ಸರಿಸಮಾನತೆಯನ್ನು ಮೂಡಿಸುವ ಏಕೈಕ ಬೇಡಿಕೆಯನ್ನು  ವರ್ಷದ ನವಂಬರ್ ಅಂತ್ಯದ ಒಳಗೆ ಘೋಷಣೆ ಮಾಡಬೇಕೆಂದು ಆಗ್ರಹಿಸಿ  ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
   ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ನಡೆದ    ಪ್ರತಿಭನೆಯಲ್ಲಿ ಮಾತನಾಡುತ್ತಿದ್ದರು. ಸರ್ಕಾರಕ್ಕೆ ಮನವಿ ಮಂಡಿಸಿದ್ದ ಸಂದರ್ಭದಲ್ಲಿ ತಾವು ಶಾಸಕಾಂಗ ಹಾಗೂ ಕಾರ್ಯಾಂಗಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಪ್ರತಿಪಾದಿಸಿ, ಒಂದೇ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳಲ್ಲಿ ಸಮಾನತೆಯನ್ನು ಮೂಡಿಸುವುದು ಹಾಗೂ ‘ ಸಮಾನ ಕೆಲಸಕ್ಕೆ ಸಮಾನ ವೇತನ’ ತತ್ವವನ್ನು ಪ್ರತಿಪಾದಿಸಿ ಕಾರ್ಯಾಂಗದ ಆಧಾರ ಸ್ಥಂಭಗಳಾದ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗೆ ಸ್ಪಂದಿಸಿ, ರಾಜ್ಯ ಸರ್ಕಾರಿ ನೌಕರಿಗೆ ವೇತನ ಆಯೋಗವನ್ನು ರಚಿಸಿ ನಾಲ್ಕು ತಿಂಗಳ ಅವಧಿಯೊಳಗೆ ಆಯೋಗವು ತನ್ನ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ತಿಳಿಸಿದ್ದರು ಅದರೆ ವೇತನ ಆಯೋಗವು ಕಾಲಾವಧಿಯನ್ನು ವಿಸ್ತರಿಸಿಕೊಂಡಿರುವ ಹಿನ್ನೆಲೆ ಹಾಗೂ ರಾಜ್ಯದಲ್ಲಿ ಈ ಹಿಂದೆ ರಚಿತವಾದ ವೇತನ ಆಯೋಗ/ ಸಮಿತಿಗಳು ಅನುಸರಿಸಿರುವ ಸಂಪ್ರದಾಯದಂತೆ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡುವ ಸಕಾಲ ಹಾಗೂ ಅನಿವಾರ್ಯತೆ ಉದ್ವವಿಸಿದ್ದು, ಅದರಿಂದ  ದಿನಾಂಕ:1-4-2017ರಿಂದ ಶೇ.30ರಷ್ಟು ಮಧ್ಯಂತರ ಪರಿಹಾರ ಅಕ್ಟೋಬರ್ ಅಂತ್ಯದೊಳಗೆ ಮಂಜೂರು ಮಾಡಬೇಕೆಂದು ಸಂಘವು ಒತ್ತಾಯುಸುತ್ತಿದೆ ಎಂದು ರಾಚಪ್ಪ ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿ  ಪ್ರಸ್ತುತ ಕೇಂದ್ರ ಸರ್ಕಾರವು ಕನಿಷ್ಠ ವೇತನವನ್ನು ರೂ. 18,000-00ಗಳಿಗೆ ಹಾಗೂ ಗರಿಷ್ಠ ವೇತನವನ್ನು ರೂ. 2,50,000-00ಗಳಿಗೆ ನಿಗದಿಪಡಿಸಿದೆ.
ಎಲ್ಲಾ ವೇತನ ಶ್ರೇಣಿಗಳಿಗೂ ಒಂದಿಲ್ಲೊಂದು ರೀತಿಯ ವಿಶೇಷ ಭತ್ಯೆಗಳನ್ನು ನೀಡಿದ್ದು, ಅನೇಕ ರಾಜ್ಯಗಳು ತನ್ನ ನೌಕರರ ಹಿತಾಶಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಹೊಂದಿರುವ ಸಕಾರಾತ್ಮಕ ಧೋರಣೆಗೆ ನಿದರ್ಶನವಾಗಿರುತ್ತದೆ. ಮಹಾರಾಷ್ಟ್ರ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಕೇಂದ್ರದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕವಾದ ಆಯೋಗ ರಚಿಸಿವೆ.
ಅಗತ್ಯ ಸಾಮಗ್ರಿಗಳ ಬೆಲೆಗಳು ಗಗನಕ್ಕೇರುತ್ತಿರುವ ಈ ಕಾಲದಲ್ಲಿ ನಿಷ್ಠೆಯಿಂದ ಸರ್ಕಾರಿ ಕಾರ್ಯಗಳನ್ನು ತೃಪ್ತಿಕರವಾಗಿ ನಿರ್ವಹಿಸುತ್ತಿರುವ ಸರ್ಕಾರಿ ನೌಕರನ ಮತ್ತು ಅವನ ಕುಟುಂಬದ ಅವಲಂಬಿತರ ಯೋಗಕ್ಷೇಮ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯ. ‘ಸಂತೃಪ್ತ ಸರ್ಕಾರಿ ನೌಕರ ಸರ್ಕಾರಕ್ಕೆ ಆಸ್ತಿ ಇದ್ದಂತೆ’ ಆದ್ದರಿಂದ ಹೆಚ್ಚು ಹೆಚ್ಚು ಸೇವೆಯನ್ನು ಪಡೆಯಲು ಸಾಧ್ಯವೆಂಬುದು ಸರ್ವವಿಧಿತ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರು  ತಮ್ಮ ಕಾರ್ಯನಿರ್ವಹಣೆಯಲ್ಲಿ  ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಹೊಂದಿದ್ದು, ಸರ್ಕಾರದ ಎಲ್ಲಾ ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಉತ್ತಮ ಸಹಕಾರ ನೀಡುತ್ತಿರುವರೆಂದು ತಾವು ಹಲವು ಸಂದರ್ಭಗಳಲ್ಲಿ ಸ್ಪಷ್ಟಪಡಿಸಿರುವುದು ಇಲ್ಲಿ ಗಮನಾರ್ಹ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಇಡೀ ರಾಷ್ಟ್ರದಲ್ಲಿ ಅತ್ಯಂತ ಕಡಿಮೆ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಾಗಿರುತ್ತಾರೆ. ರಾಜ್ಯ ಸರ್ಕಾರವು ತನ್ನ ನೌಕರರಿಗೆ ದಿನಾಂಕ 1-4-2012ರಿಂದ ವೇತನ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿ ಹೊಸ ವೇತನ ಶ್ರೇಣಿ ಹಾಗೂ ಕೆಲವು ಭತ್ಯೆಗಳಲ್ಲಿ ಹೆಚ್ಚಳವನ್ನು ನೀಡಿದೆ. ಆದರೆ, ಆ ವೇಳೆಗೆ ಕೇಂದ್ರ ಸರ್ಕಾರಿ ನೌಕರರ ವೇತನ
    ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಅನುಭವಿಸಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ದಿನಾಂಕ 1-4-2017ರಿಂದ ಪೂರ್ವಾನ್ವಯವಾಗಿ ಮೂಲವೇತನದ ಶೇ. 30ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಕೋರುತ್ತೇವೆ. ಎಂದರು.
.


ಶಿಕ್ಷಣದಿಂದಲೇ ಸರ್ವಾಂಗೀಣ ಅಭಿವೃದ್ಧಿ : ಧ್ರುವನಾರಾಯಣ

ಚಾಮರಾಜನಗರ, ಅ. 25 :- ಶಿಕ್ಷಣದಿಂದಲೇ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ. ಹೀಗಾಗಿ ಸÀಮಾಜದ ಎಲ್ಲ ವರ್ಗದವರು ಸಮಾನವಾಗಿ ಶಿಕ್ಷಣ ಪಡೆಯಲು ಉತ್ತೇಜಿಸಬೇಕಾದ ಅಗತ್ಯವಿದೆ ಎಂದು ಲೋಕಸಬಾ ಸದಸ್ಯರಾದ ಆರ್. ಧ್ರುವನಾರಾಯಣ ಅಭಿಪ್ರಾಯಪಟ್ಟರು.
ನಗರದ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣ ಮಾಡಲಾಗಿರುವ ಹೆಚ್ಚುವರಿ ತರಗತಿ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಣವೇ ಎಲ್ಲ ಅಭಿವೃದ್ಧಿಗೆ ಮುಖ್ಯವಾಗಿದೆ. ಇದರಿಂದಲೇ ಕಡ್ಡಾಯ ಶಿಕ್ಷಣ ನೀತಿ ಜಾರಿಗೆ ಬಂದಿದೆ. ಎಲ್ಲ ವರ್ಗದವರು ಶಿಕ್ಷಣ ಪಡೆಯಬೇಕು. ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಧ್ರವನಾರಾಯಣ ತಿಳಿಸಿದರು.
ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಸಂಖ್ಯೆ ಶೇ. 24ರಷ್ಟಿದೆ. ಗುಣಮಟ್ಟದ ಶಿಕ್ಷಣಕ್ಕೆ ಎಲ್ಲರೂ ಮುಂದಾಗಬೇಕಿದೆ. ಜಿಲ್ಲೆಯಲ್ಲೂ ಎಸ್ ಎಸ್ ಎಲ್ ಸಿ, ಪಿಯುಸಿಯಂತಹ ಪ್ರಮುಖ ಘಟ್ಟಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಪರಿಶ್ರಮದಿಂದ ಮಾರ್ಗದರ್ಶನ ಬೋಧನೆ ಮಾಡಿ ಫಲಿತಾಂಶದಲ್ಲಿ ಮತ್ತಷ್ಟು ಸುಧಾರಣೆ ತರಬೇಕೆಂದು ಧ್ರುವನಾರಾಯಣ ಸಲಹೆ ಮಾಡಿದರು.
ಪ್ರಸ್ತುತ ಪದವಿಪೂರ್ವ ಕಾಲೇಜಿಗೆ 54 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಇನ್ನೂ ಹಲವು ಸೌಲಭ್ಯಗಳು ಬೇಕೆಂಬ ಬೇಡಿಕೆಗೆ ಚಿಂತನೆ ನಡೆಸಲಾಗುವುದು. ಕಾಲೇಜು ಮಂಜೂರಾತಿ ಸಮಯದಲ್ಲಿಯೇ ಕೊಠಡಿಗಳಲ್ಲದೆ ಇನ್ನಿತರ ಪೀಠೋಪಕರಣಗಳೂ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಕಾಲೇಜು ಕಟ್ಟಡ ದುರಸ್ತಿ ಸೇರಿದಂತೆ ಅವಶ್ಯ ಸೌಲಭ್ಯಗಳಿಗೆ ಅನುದಾನ ನೀಡಲಾಗಿದೆ. ನಗರಕ್ಕೆ ಐಟಿಐ ಕಾಲೇಜು ಮಂಜೂರಾಗಿದೆ. ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಬೇಕಿರುವ ಎಲ್ಲಾ ಸೌಕರ್ಯಗಳಿಗೆ ಶ್ರಮ ವಹಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ವ್ಯಾಸಂಗ ಅವಧಿಯಲ್ಲಿ ಶ್ರದ್ಧೆ, ಏಕಾಗ್ರತೆಯಿಂದ ಅಧ್ಯಯನ ಪೂರೈಸಿ ಉತ್ತಮ ಭವಿಷ್ಯ ಕಂಡುಕೊಳ್ಳಬೇಕು. ಗುರುಹಿರಿಯರಿಗೆ ಗೌರವ ತೋರಿ ಜ್ಞಾನಾರ್ಜನೆ ಮಾಡಬೇಕು ಎಂದು ಪುಟ್ಟರಂಗಶೆಟ್ಟಿಯವರು ಕಿವಿಮಾತು ಹೇಳಿದರು.
ನಗರಸಭೆ ಅಧ್ಯಕ್ಷರಾದ ಶೋಭಾ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಸದಸ್ಯರಾದ ರೇಣುಕಾ ಮಲ್ಲಿಕಾರ್ಜುನ್, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಅ. 25 – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ 2017-18ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 31ರೊಳಗೆ ಸಲ್ಲಿಸಬೇಕÀು.
ಹೆಚ್ಚಿನ ಮಾಹಿತಿಗಳಿಗೆ ಕಚೇರಿ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಕೈಗಾರಿಕಾ ಸ್ಪಂದನ : ಉದ್ಯಮಿಗಳಿಂದ ಮನವಿ ಆಹ್ವಾನ
ಚಾಮರಾಜನಗರ, ಅ. 25 - ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಕೈಗಾರಿಕೋದ್ಯಮಿಗಳು ಉದ್ದಿಮೆಗಳನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಸ್ಪಂದನ ಎಂಬ ಸಮಿತಿಯನ್ನು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.
ಕೈಗಾರಿಕೋದ್ಯಮಿಗಳು ಉದ್ದಿಮೆಗಳನ್ನು ಅನುಷ್ಠಾನಗೊಳಿಸುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ನವೆಂಬರ್ 5ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಿಗೆ ಸಲ್ಲಿಸಬೇಕು.
ನಂತರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಒಳಗೊಂಡಂತೆ ಸಭೆ ಏರ್ಪಡಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರವನ್ನು ಸಂಪರ್ಕಿಸುವಂತೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅ. 26ರಂದು ನಗರದಲ್ಲಿ ವಿಚಾರ ಸಂಕಿರಣ

ಚಾಮರಾಜನಗರ, ಅ. 25 :- ಕಾಲೇಜು ಶಿಕ್ಷಣ ಇಲಾಖೆಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ  ಅಕ್ಟೋಬರ್ 26ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಚಾರ ಸಂಕಿರಣ ಮತ್ತು ಪ್ರಥಮ ಎಂಎ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್.ಎಸ್. ಪ್ರೇಮಲತಾ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಚಂದ್ರಮ್ಮ ಅಧ್ಯಕ್ಷತೆ ವಹಿಸುವರು.
ಭಾರತದ ಸಾಮಾಜಿಕ ಪ್ರಜಾಪ್ರಭುತ್ವದ ಸಂಸ್ಥಾಪಕರು ಕುರಿತು ವಿಚಾರ ಸಂಕಿರಣ ನಡೆಯಲಿದೆ.
ಗುಂಡ್ಲುಪೇಟೆ ಜೆಎಸ್‍ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಹದೇವಸ್ವಾಮಿ ಅವರು ಸಾಮಾಜಿಕ ಪ್ರಜಾಪ್ರಭುತ್ವದ ಸಂಸ್ಥಾಪಕರಾಗಿ ಮಹಾತ್ಮ ಗಾಂಧೀಜಿ ಕುರಿತು ವಿಚಾರ ಮಂಡಿಸುವರು.
ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕರಾದ ಡಾ. ಕುಪ್ಪಳ್ಳಿ ಎಂ. ಭೈರಪ್ಪ ಅವರು ಸಾಮಾಜಿಕ ಪ್ರಜಾಪ್ರಭುತ್ವದ ಸಂಸ್ಥಾಪಕರಾಗಿ ಬಸವಣ್ಣ ಹಾಗೂ ಕೇಂದ್ರದ ಸಂಶೋಧಕರಾದ ಎನ್.ವಿ. ಪ್ರದೀಪ್ ಅವರು ಸಾಮಾಜಿಕ ಪ್ರಜಾಪ್ರಭುತ್ವದ ಸಂಸ್ಥಾಪಕರಾಗಿ ಜ್ಯೋತಿಭಾ ಫುಲೆ ವಿಷಯ ಕುರಿತು ವಿಚಾರ ಮಂಡಿಸುವರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಪಿ. ದೇವರಾಜು ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


ಅಂಗಾಂಶ ಕೃಷಿ ಬೆಳೆಗೆ ಸಹಾಯಧನ

ಚಾಮರಾಜನಗರ, ಅ. 25 - ತೋಟಗಾರಿಕೆ ಇಲಾಖೆಯು 2017-18ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸದಾಗಿ ಅಂಗಾಂಶ ಕೃಷಿ ಬಾಳೆ ತಾಕು ಅಭಿವೃದ್ಧಿಪಡಿಸಲು ಸಹಾಯಧನ ನೀಡಲಿದೆ.
ಯೋಜನೆಯಡಿ ಹೊಸದಾಗಿ ಅಂಗಾಂಶ ಕೃಷಿಬಾಳೆ ನಾಟಿ ಮಾಡುವ ರೈತರಿಗೆ ಪ್ರತಿ ಎಕರೆಗೆ 12240 ರೂ.ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ತೋಟಗಾರಿಕಾ ಕಚೇರಿಯಲ್ಲಿ ಮಾಹಿತಿ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಘು ವಾಹನ ಚಾಲನಾ ತರಬೇತಿಗೆ ಪ.ಜಾ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 25 - ಸಮಾಜ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಯುವತಿಯರಿಗೆ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಟ ವಿದ್ಯಾರ್ಹತೆ 10ನೇ ತರಗತಿ ಪಾಸಾಗಿರಬೇಕು. 18 ರಿಂದ 35ರ ವಯೋಮಿತಿಯ ನಿರುದ್ಯೋಗಿಗಳು ಅರ್ಹರು. ಯಾವುದೇ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಅಥವಾ ತರಬೇತಿ ಪಡೆಯುತ್ತಿರಬಾರದು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಿಲ್ಲಾ ವೈದ್ಯಾಧಿಕಾರಿಗಳಿಂದ ದೃಢೀಕರಿಸಿದ ದೈಹಿಕ ಅರ್ಹತೆ ಪ್ರಮಾಣ ಪತ್ರ ಪಡೆದು ಎಲ್ಲ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ನವೆಂಬರ್ 2ರ ಒಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.


ನ. 19ರಂದು ನಗರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಗಳಿಗೆ ಅವಕಾಶ

ಚಾಮರಾಜನಗರ, ಅ. 25 :– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 19ರಂದು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನೊಂದಾಯಿತ ಯುವಕ ಯುವತಿ ಸಂಘದ ಸ್ಪರ್ಧಾಳುಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯುವಕ ಯುವತಿಯರು ಯುವಜನೋತ್ಸವಕ್ಕೆ ಭಾಗವಹಿಸಬಹುದಾಗಿದೆ.
ಜಾನಪದ ನೃತ್ಯ (20 ಮಂದಿಗೆ ಸೀಮಿತ), ಜಾನಪದ ಗೀತೆ (10 ಮಂದಿಗೆ ಸೀಮಿತ), ಏಕಾಂಕ ನಾಟಕ (ಹಿಂದಿ ಅಥವಾ ಇಂಗ್ಲೀಷ್) (12 ಮಂದಿಗೆ ಸೀಮಿತ), ಆಶು ಭಾಷಣ (ಹಿಂದಿ ಅಥವಾ ಇಂಗ್ಲೀಷ್), ಗಿಟಾರ್, ಹಾರ್ಮೋನಿಯಂ, ಶಾಸ್ತ್ರೀಯ ವಾದ್ಯಗಳು - ಸಿತಾರ್, ತಬಲ, ಕೊಳಲು, ವೀಣೆ, ಮೃದಂಗ (5 ಮಂದಿಗೆ), ಶಾಸ್ತ್ರೀಯ ಗಾಯನ - ಹಿಂದೂಸ್ತಾನಿ ಹಾಗೂ ಕರ್ನಾಟಕ, ಶಾಸ್ತ್ರೀಯ ನೃತ್ಯ – ಮಣಿಪುರಿ, ಒರಿಸ್ಸಾ, ಭರತ ನಾಟ್ಯಂ, ಕಥಕ್, ಕುಚಿಪುಡಿ (5 ಮಂದಿಗೆ ಸೀಮಿತ) ಸ್ಪರ್ಧೆಗಳು ಇರಲಿವೆ.
ವಯೋಮಿತಿ 15 ರಿಂದ 29 ವರ್ಷದೊಳಗೆ ಇರಬೇಕು. ವಯಸ್ಸಿನ ದೃಢೀಕರಣಕ್ಕೆ ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಇತರೆ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು.
ಆಸಕ್ತರು ಪೂರ್ಣ ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಪಟ್ಟಿಯನ್ನು ಕಚೇರಿಗೆ ಕಳುಹಿಸಬೇಕು. ಭಾಗವಹಿಸುವ ಸ್ಪರ್ಧಾಳುಗÀಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು.
ಜಿಲ್ಲಾ ಮಟ್ಟದ ವಿಜೇತರು ಉಡುಪಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9482718278 ಯನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರÀು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಅವಕಾಶ

ಚಾಮರಾಜನಗರ, ಅ. 25 :– ಚಾಮರಾಜನಗರ ಜಿಲ್ಲಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಜಿದಾರರು ಹೆಸರು ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಸರು ನೊಂದಣಿಗೆ ನಿಗದಿತ ನಮೂನೆ 19ರಲ್ಲಿ ಅರ್ಜಿಯನ್ನು ಭರ್ತಿ ಮಾಡಿ ನವೆಂಬರ್ 7ರೊಳಗೆ ಅಥವಾ ಅದಕ್ಕೂ ಮೊದಲೇ ಸಹಾಯಕ ಮತದಾರ ನೋಂದಣಿ ಅಧಿಕಾರಿಗಳಾದ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಆಯಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕಿನ ನಿಯೋಜಿತ ಅಧಿಕಾರಿಗಳಾದ ಚುನಾವಣಾ ಶಿರಸ್ತೇದಾರ್, ಉಪತಹಸೀಲ್ದಾರ್ (ಹನೂರು) ಅವರಿಗೂ ಸಲ್ಲಿಸಬಹುದು.
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರತಿ ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು.
ಭಾರತದ ಪ್ರಜೆಯಾಗಿರುವ ಮತ್ತು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿದ್ದು 2017ರ ನವೆಂಬರ್ 1ಕ್ಕೆ ಮೊದಲು 6 ವರ್ಷದ ಅವಧಿಯಲ್ಲಿ ಕನಿಷ್ಟ 3 ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.
ನಮೂನೆ 19ರಲ್ಲಿ ಅರ್ಜಿ ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೊಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ಹಿಂದಿನ 6 ವರ್ಷಗಳಲ್ಲಿ ಒಟ್ಟು 3 ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕಿದೆ.
ಅರ್ಜಿ ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿ ಬೋಧನಾ ವೃತ್ತಿಯಲ್ಲಿ ನಿರತರಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದಲೇ ಸಹಿ ಮಾಡಿಸಿರಬೇಕು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲ ಅರ್ಜಿಗಳನ್ನು ಒಟ್ಟಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ 19ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು. ಹಾಗೂ ಪ್ರತೀ ಸದಸ್ಯರಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಬೇಕು.
ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ತಿಳಿದಿರುವ ಅಥವಾ ನಂಬುವಂತಹ ಇಲ್ಲವೇ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ವ್ಯಕ್ತಿಯನ್ನು ಪ್ರಜಾ ಪ್ರಾತಿನಿಧ್ಯ ಅಧಿನಿಯಮ 1950ರ 31ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುತ್ತದೆ.
ಪ್ರಮಾಣ ಪತ್ರದ ಮಾದರಿ ಮತ್ತು ನಮೂನೆ 19ರ ಅರ್ಜಿಯನ್ನು ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿಯೋಜಿತ ಅಧಿಕಾರಿಗಳ ಕಚೇರಿಯಿಂದ ಪಡೆಯಬಹುದು. ಕೈಬರಹ, ಬೆರಳಚ್ಚು ಮಾಡಿದ ಸೈಕ್ಲೋಸ್ಟೈಲ್ (ಕಲ್ಲಚ್ಚು) ಮಾಡಿದ ಅಥವಾ ಖಾಸಗಿಯಾಗಿ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, 24 October 2017

ನ.4ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಯವರಿಂದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ....VSS (24-10-2017)

  ನ.4ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಯವರಿಂದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ....VSS


ಚಾಮರಾಜನಗರ, ಅ. 24 – ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ನವೆಂಬರ್ 4ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಣ್ಣ ಕೈಗಾರಿಕೆ ಹಾಗೂ ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನ್‍ಕುಮಾರಿ (ಡಾ. ಗೀತಾ ಮಹದೇವ ಪ್ರಸಾದ್) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿಯವರ ಭೇಟಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
      ಮುಖ್ಯಮಂತ್ರಿಯವರು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕೆ ಪೂರಕವಾಗಿ ಆಗಬೇಕಿರುವ ಎಲ್ಲಾ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಸಕಲ ಸಿದ್ದತೆ ಕೆಲಸವನ್ನು ಸಕಾಲಕ್ಕೆ ಅಧಿಕಾರಿಗಳು ಪೂರ್ಣಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
      ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಕೊಳ್ಳೇಗಾಲ ಪಟ್ಟಣದ ಎಂಜಿಎಸ್‍ವಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಜರುಗಲಿದ್ದು, ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 209 ನಾಲ್ಕು ಪಥದ ರಸ್ತೆಯನ್ನು ಬಿರುಸಿನಿಂದ ಪೂರ್ಣಗೊಳಿಸಿ ಕಾರ್ಯಕ್ರಮಕ್ಕೆ ಅನುಕೂಲ ಕಲ್ಪಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು. ಅಭಿವೃದ್ಧಿ ಹಿನ್ನಡೆಗೆ ಕಾರಣರಾಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ  ಸಚಿವರು ಎಲ್ಲಾ ಇಲಾಖೆಯ ಅಧಿಕಾರಿಗಳು ಕಾಮಗಾರಿಯನ್ನು ಚುರುಕುಗೊಳಿಸಿ, ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂದರು.
ಸರ್ಕಾರ ವಿವಿಧ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ನೀಡುವಂತೆ ಸೂಚಿಸಲಾಗಿದ್ದು, ಎಲ್ಲಾ ವರ್ಗದ ಬಡವರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು, ಜಿಲ್ಲೆಯನ್ನು ಮಾದರಿ ಯನ್ನಾಗಿ ಮಾಡುವ ಹೊಣೆ ಎಲ್ಲಾ ಅಧಿಕಾರಿಗಳ ಮೇಲೆ ಇದೆ ಎಂದು ಉಸ್ತುವಾರಿ ಸಚಿವರು ಹೇಳಿದರು.

      ಇತ್ತೀಚಿಗೆ ಸುರಿದ ಧಾರಾಕಾರ ಮಳೆಗೆ ತಾಲೂಕಿನಲ್ಲಿ ಸಿಡಿಲು ಬಡಿದು ಜಾನುವಾರು, ಮನೆ ಮತ್ತು ಆಸ್ತಿಗಳನ್ನು ಕಳೆದುಕೊಂಡವರಿಗೆ ಪ್ರಕೃತಿ ವಿಕೋಪದ ಅಡಿಯಲ್ಲಿ ತುರ್ತಾಗಿ ಪರಿಹಾರ ನೀಡಬೇಕೆಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಉಸ್ತುವಾರಿ ಸಚಿವರು ಸೂಚಿಸಿದರು.

      ಶಾಸಕರಾದ ಎಸ್.ಜಯಣ್ಣ ಹಾಗೂ ಆರ್.ನರೇಂದ್ರರವರು ಮಾತನಾಡಿ ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ಅಧಿಕಾರಿಗಳು ಯಾವುದೇ ವಿಳಂಬ ಧೋರಣೇ ಮಾಡದೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಮಾತನಾಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾಮಗಾರಿ ವಿವರಗÀಳನ್ನು ಸಂಪೂರ್ಣ ಸಿದ್ಧಪಡಿಸಿಕೊಂಡು ಅಕ್ಟೋಬರ್ 30ರ ಒಳಗಾಗಿ ಎಲ್ಲಾ ಕಾಮಗಾರಿಗಳ ಆದೇಶ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಡಾ. ಹರೀಶ್‍ಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ತಾಪಂ ಅಧ್ಯಕ್ಷ ರಾಜು, ನಗರಸಭೆ ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷ ನಂಜುಂಡ, ಉಪ ವಿಭಾಗಾಧಿಕಾರಿ ಪೌಜಿಯ ತರನಮ್, ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರೂಪ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಅ. 25ರಂದು ವಿಶ್ವ ಶೌಚಾಲಯ ದಿನಾಚರಣೆ

ಚಾಮರಾಜನಗರ, ಅ. 24 – ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಹಾಗೂ ಕೆಂಪನಪುರ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಆಶ್ರಯದಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎನ್. ಮಹದೇವಸ್ವಾಮಿ ಅಧ್ಯಕ್ಷತೆ ವಹಿಸುವರು. ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಎಂ. ಮಹೇಶ್, ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಅಧ್ಯಕ್ಷರಾದ ಕೆ.ಎನ್. ನಾಗೇಶ್ ನಾಯಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಲ್. ಸುರೇಶ್ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
 ಆರ್‍ಟಿಇ : ಮಾಹಿತಿ ವಿವರ ಪ್ರದರ್ಶನ ಕಡ್ಡಾಯ
ಚಾಮರಾಜನಗರ, ಅ. 24 - ಜಿಲ್ಲೆಯ ಎಲ್ಲಾ ಖಾಸಗಿ ಅನುದಾನರಹಿತ ಶಾಲೆಗಳು ಇಲಾಖಾ ಹಾಗೂ ಆರ್‍ಟಿಇ ನಿಯಮಗಳನ್ವಯ ಶುಲ್ಕ ನಿಗದಿಪಡಿಸಿ ಕಾನೂನಿನ ಮಾಹಿತಿಗಳನ್ನು ಒಳಗೊಂಡ ವಿವರವನ್ನು ಶಾಲಾ ಆವರಣದ ಸೂಚನಾ ಫಲಕದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಜಿಲ್ಲೆಯ ಖಾಸಗಿ ಅನುದಾನ ರಹಿತ ಶಾಲೆಗಳು ಹೆಚ್ಚುವರಿ ಡೊನೇಷನ್ ಮತ್ತು ಶುಲ್ಕವನ್ನು ವಸೂಲಿ ಮಾಡುತ್ತಿದ್ದಲ್ಲಿ ಅಂತಹ ಶಾಲೆಗಳ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ ಅಗತ್ಯ ಹಾಗೂ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಪೋಷಕರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ದೂರು ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಅ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ

ಚಾಮರಾಜನಗರ, ಅ. 24 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕೋಬರ್ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 2 ಹಾಗೂ 3ರಂದು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಚಾಮರಾಜನಗರ, ಅ. 24:- ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2017-18ನೇ ಸಾಲಿನ 17 ವರ್ಷ ವಯೋಮಿತಿಯ ಶಾಲಾ ಬಾಲಕ ಬಾಲಕಿಯರ ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಅಕ್ಟೋಬರ್ 2 ಹಾಗೂ 3ರಂದು ನಗರದ ಜೆ ಎಸ್ ಎಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕ್ರೀಡಾಪಟುಗಳು ಭಾಗÀವಹಿಸಲಿದ್ದಾರೆ.
ನವೆಂಬರ್ 2ರಂದು ಮಧ್ಯಾಹ್ನ 3 ಗಂಟೆಗೆ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಎಲ್ಲ ಜಿಲ್ಲೆಯ ಮೇಲ್ವಿಚಾರಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಪ್ರಾಥಮಿಕ ಶಿಕ್ಷಕರ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ : ದಿನಾಂಕ ಬದಲು

ಚಾಮರಾಜನಗರ, ಅ. 24- ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಮರುನಿಗದಿಗೊಳಿಸಿದೆ.
ಪರೀಕ್ಷೆ–1 ನವೆಂಬರ್ 11ರಂದು ಹಾಗೂ 12ರಂದು, ಪರೀಕ್ಷೆ–2 ನವೆಂಬರ್ 18 ಹಾಗೂ 19ರÀಂದು, ಪರೀಕ್ಷೆ–3 ನವೆಂಬರ್ 25 ಹಾಗೂ 26ರಂದು ಮತ್ತು ಪರೀಕ್ಷೆ–4 ಡಿಸೆಂಬರ್ 9 ಹಾಗೂ 10ರಂದು ನಡೆಯಲಿದೆ.
ಹೆಚ್ಚಿನ ವಿವರಗಳನ್ನು ಇಲಾಖಾ ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಒದಗಿಸಲಾಗಿರುವ ಸಿಎಸಿ ಲಿಂಕ್ ಮೂಲಕ ಪಡೆಯಬಹುದು. ಅಲ್ಲದೆ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರಿಗಳಾದ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರ ಕಚೇರಿ (ದೂ.ಸಂ. 08226-222406) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಅ. 28ರಂದು ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಅ. 24– ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಮಾದ್ಯಮದವರೊಂದಿಗೆ ವಿಷನ್ 2025 ರ ಚರ್ಚೆ ನಡೆಸಿದ ಜಿಲ್ಲಾಡಳಿತ


“ವಿಷನ್ 2025” ಕರ್ನಾಟಕ ರಾಜ್ಯ ಹಾಗೂ ಚಾಮರಾಜನಗರ ಜಿಲ್ಲೆ ಅಭುವೃದ್ದಿ ಮುನ್ನೋಟ .. Thisi is MY Vision ...........VSS

“ವಿಷನ್ 2025” ಕರ್ನಾಟಕ ರಾಜ್ಯ ಹಾಗೂ ಚಾಮರಾಜನಗರ ಜಿಲ್ಲೆ ಅಭುವೃದ್ದಿ ಮುನ್ನೋಟ                ...........VSS


1) ನಗರ ಮೂಲಭೂತ ಸೌಕರ್ಯ/ಸ್ಮಾರ್ಟ್ ಸಿಟಿ: ಚಾಮರಾಜನಗರದಲ್ಲಿ ಒತ್ತುವರಿಯಾರಿಯಾದ ರಸ್ತೆ ತೆರವು ಮಾಡಿ ಉತ್ತಮ ರಸ್ತೆ ನಿರ್ಮಾಣ ಮಾಡುವುದು, ಪದೇ ಪದೇ ರಸ್ತೆಅಗೆಯುವುದು ನಿಲ್ಲಿಸಿ  ರಸ್ತೆ ಮಾಡುವ ಮುನ್ನ ಎಲ್ಲಾ ಅದಿಕಾರಿಗಳ ಸಂಯೋಜಕತ್ವದಲ್ಲಿ ಸಬೆ ಕರೆದು ಅಂತಿಮಗೊಳಿಸಿವುದು. ಮನೆಮುಂದೆ ಉತ್ತಮ ರಸ್ತೆಗಳನ್ನು ಅಗೆದು ಯಾರು ಗುಂಡಿಗಳನ್ನು ಮಾಡುತ್ತಾರೋ ಅವರನ್ನೆ ಹೊಣೆಗಾರಿಕೆ ಮಾಡಿ ಶಿಕ್ಷೆಗೆ ಗುರಿಪಡಿಸುವುದು. 
2) ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವಂತೆ ಕಾನೂನಡಿ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಬೇಕು. ಬಹುತೇಕ ಆಸ್ಪತ್ರೆಗಳಲ್ಲಿ ನಾಮಾಕಾವಸ್ಥೆಗೆ ಎಲ್ಲ ವೈದ್ಯರಿದ್ದರೂ ಚಿಕಿತ್ಸೆಗೆ ಮಾತ್ರ ಸಿಗುವುದಿಲ್ಲ. ಅವರು ಕಡ್ಡಾಯವಾಗಿ ಹಾಜರಾಗಬೇಕು ಜೊತೆಗೆ ಗಂಟೆಗೊಮ್ಮೆ ತಮ್ಮ ಹಸ್ತ್ರ ಮುದ್ರಿಕೆ (ಥಮ್ ಇಂಪೆಷನ್) ಹಾಕುವ ವ್ಯವಸ್ಥೆ ಜಾರಿಯಾಗಬೇಕು.  ಸರಿಯಾಗಿ ಕರ್ತವ್ಯ ನಿರ್ವಹಿಸದ ವೈದ್ಯರ ಮೇಲೆ ಅಮಾನತು ಮಾಡುವುದು ಹಾಗೂ ಆ ಅವದಿಯಲ್ಲಿ ಸಿಗುವ ಅರ್ದ ವೇತನವನ್ನು ನಿಲ್ಲಿಸುವುದು. ಜಿಲ್ಲಾ ಕೇಂದ್ರದಲ್ಲಿ ವೈದ್ಯರು ಉಳಿಯುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸುವುದು.  ಕಡ್ಡಾಯ ಶಿಕ್ಷಣದಂತೆ ಎಲ್ಲಾ ಮಕ್ಕಳ ಅನುಕೂಲಕ್ಕಾಗಿ ಏಕರೂಪ ಶಿಕ್ಷಣ ನೀತಿ ಜಾರಿ ಮಾಡುವುದು. ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಡೆಗೆ ವಿಶೇಷ ಪ್ರಾದಿಕಾರ ರಚಿಸುವುದು ಹಾಗೂ ಡೋನೆಷನ್ ಪಡೆಯುವ ಶಾಲೆಗಳ ಅಮಾನ್ಯ ಮಾಢುವುದು.
3) ಕೃಷಿ ಮತ್ತು ಅಲೈಡ್, ಗ್ರಾಮೀಣಾಭಿವೃದ್ದಿ: ಬಹುತೇಕರು ಕೃಷಿ ಅವಲಂಬಿತರಾಗಿರುವ ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರವನ್ನು ನೇರ ಕಂಪನಿಯಿಂದ ಪಡೆದು ನೇರ ರೈತನ ಮನೆ ಬಾಗಿಲಿಗೆ ತಲುಪಿಸುವುದು. ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡು ಗೊಬ್ಬರ ತಯಾರು ಮಾಡಿ ಉತ್ತಮ ಬೆಳೆ ಬೆಳೆದವರಿಗೆ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸುವುದು
4) ಕೈಗಾರಿಕಾ ಅಬಿವೃದ್ದಿ  ಸೇವೆಗಳು, ಉದ್ಯೋಗ ಮತ್ತು ಕೌಶಲ್ಯಭಿವೃದ್ದಿ, ಮಾಹಿತಿ ತಂತ್ರಜ್ಞಾನ: ಜಿಲ್ಲೆಯಲ್ಲಿ ಕೈಗಾರಿಗೆಳು ಇಲ್ಲದೇ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು ಅದನ್ನು ನಿವಾರಿಸಿಲು ಗುಡಿ ಕೈಗಾರಿಗೆಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಕರಕುಶಲ ಪದಾರ್ಥಗಳಿಗೆ ಉತ್ತಮ ಬೆಲೆ ಕೊಡಿಸಿಕೊಡುವಂತಾಗಬೇಕು. ಕಾಡಂಚಿನಂಚಿನ ಗ್ರಾಮಗಳು ಹಾಗೂ ಕಾಡುಗಳಲ್ಲಿ ಸೋಲಿಗರನ್ನು ಬಳಸಿಕೊಂಡು ನರೇಗಾ ಹಾಗೂ ಇನ್ನಿತರ ರಾಜ್ಯ ಸರ್ಕಾರದ ಯೋಜನೆಯಡಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ಅವರಿಗೆ ಉನ್ನತ ಶಿಕ್ಷಣ ನೀಡಿ ಅವರಲ್ಲಿ ಸಿಗುವ ಕೌಶಲ್ಯವನ್ನ ಸದುಪಯೋಗಪಡಿಸಿಕೊಳ್ಳುವುದು.
5) ಆಡಳಿತ, ಕಾನೂನು ಮತ್ತು ನ್ಯಾಯ: ಪ್ರತಿಯೊಂದು ಪ್ರಾದಿಕಾರಕ್ಕೂ ಜಿಲ್ಲಾದಿಕಾರಿ  ಅದ್ಯಕ್ಷರಾಗಿದ್ದ ಜಿಲ್ಲಾದಿಕಾರಿಗಳ ಆಡಳಿತವನ್ನು ಇನ್ನ ಕಠಿಣಗೊಳಿಸುವುದು. ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಅದಿಕಾರಿಗಳು ಉಳಿಯುವಂತೆ ಸೂಚನೆ ನೀಡುವುದು ಹಾಗೂ ಅವರಿಗೆ ಸುವ್ಯವಸ್ಥಿತಿ ಮನೆ ನೀಡುವುದು. ಮಾಹಿತಿ ಹಕ್ಕು ಕಾಯ್ದೆ ಪ್ರಬಲಗೊಳಿಸುವುದು ಅದರಲ್ಲೂ 4.1(ಎ) ಮತ್ತು 4.1(ಬಿ) ಸುಸ್ಥಿತಿಯಲ್ಲಿಡುವಂತೆ ನೋಡಿಕೊಳ್ಳುವುದು. ಅದಿಕಾರ ದುಪಯೋಗಪಡಿಸಿಕೊಂಡ ಅದಿಕಾರಿಗಳನ್ನು  ಅಮಾನತು ಮಾಡುವ ಬದಲು ವಜಾ ಮಾಡುವಂತೆ ಹೆಚ್ಚಿ  ಪರಮಾದಿಕಾರ ಪಡೆಯುವುದು
ಪೊಲೀಸ್ ಇಲಾಖೆಯಲ್ಲಿ ಕೆಳಹಂತದ ಸಿಬ್ಬಂದಿಗಳಿಗೆ ಮೇಲಾದಿಕಾರಿಗಳು ನೀಡುವ ಕಿರುಕುಳ ತಡೆಯುವ ನಿಟ್ಟಿನಲ್ಲಿ ವಿಶೇಷ ಘಟಕ ತೆರೆಯುವುದು. ಸೂಕ್ತ ನ್ಯಾಯ ನೀಡುವ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿನ ನ್ಯಾಯಾದೀಶರನ್ನು ಅದ್ಯಕ್ಷರನ್ನಾಗಿ ಮಾಡಿ  ತಪ್ಪು ಮಾಡಿದ ಮೇಲಾದಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸುವುದು.
ಜಾತಿ ನಿಂದನೆ, ವರದಕ್ಷಿಣೆಯಂತಹ ಸುಳ್ಳು ಪ್ರಕರಣ ನೀಡುವ ದೂರುದಾರರ ಮೇಲೆ ಕ್ರಮ ತೆಗೆದುಕೊಂಡು ಕಠಿಣ ಶಿಕ್ಷೆ ಜರುಗಿಸುವುದು.  


ಇಂದ, ಎಸ್.ವೀರಭದ್ರಸ್ವಾಮಿ
ಚಾಮರಾಜನಗರ-
ಪೋ-9480030980


01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು