ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 07 :- ಪ್ರವಾಸೋದ್ಯಮ ಇಲಾಖೆಯು ವಿಶೇಷ ಘಟಕ ಉಪಯೋಜನೆ, ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ಲಕ್ಷ ರೂ. ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಪರಿಶಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿರಬೇಕು. 20 ರಿಂದ 40ರ ವಯೋಮಿತಿಯೊಳಗಿರಬೇಕು. ಕನಿಷ್ಟ 10ನೇ ತರಗತಿ ತೇರ್ಗಡೆಯಾಗಿರಬೇಕು. ಲಘು ವಾಹನ ಚಾಲನಾ (ಎಲ್‍ಎಂವಿ) ಪರವಾನಗಿ ಪಡೆದು ಕನಿಷ್ಟ ಒಂದು ವರ್ಷವಾಗಿರಬೇಕು. ಬ್ಯಾಡ್ಜ್ ಹೊಂದಿರುವುದು ಕಡ್ಡಾಯವಾಗಿದೆ. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ನೌಕರಿಯಲ್ಲಿರಬಾರದು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 214) ಅಕ್ಟೋಬರ್ 10ರಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯ ಜತೆ ಇತ್ತೀಚಿನ ಭಾವಚಿತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಆದಾಯ ಪ್ರಮಾಣಪತ್ರ, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಇತರೆ ನಿಗಮಗಳಲ್ಲಿ ಯಾವುದೇ ರೀತಿಯ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ ಹಾಗೂ ಸೂಚಿಸಿರುವ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಕೆÉÉಗೆ ನವೆಂಬರ್ 10 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ 08226-226512 ಸಂಪರ್ಕಿಸಿ ಪಡೆದುಕೊಳ್ಳಬೇಕೆಂದು ಜಿಲ್ಲಾ ಅಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 07 :- ಕೊಡಗಿನ ಸೈನಿಕ ಶಾಲೆಯ 2018-19ನೇ ಸಾಲಿಗೆ 6 ಮತ್ತು 9ನೇ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿಗೆ ಸೇರಿಸಲು ಶೈಕ್ಷಣಿಕ, ಮಾನಸಿಕ ಹಾಗೂ ದೈಹಿಕವಾಗಿ ತರಬೇತಿಗೊಳಿಸುವುದು ಉದ್ದೇಶವಾಗಿದೆ.
6ನೇ ತರಗತಿ ಪ್ರವೇಶಕ್ಕೆ 2ನೇ ಜುಲೈ 2007 ರಿಂದ 1ನೇ ಜುಲೈ 2008ರೊಳಗೆ ಜನಿಸಿದವರಾಗಿರಬೇಕು. 9ನೇ ತರಗತಿ ಪ್ರವೇಶಕ್ಕೆ 2ನೇ ಜುಲೈ 2004 ರಿಂದ 1ನೇ ಜುಲೈ 2005ರೊಳಗೆ ಜನಿಸಿದವರಾಗಿರಬೇಕು. ಅಖಿಲ ಭಾರತ ಮಟ್ಟದ ಸೈನಿಕ ಶಾಲಾ ಪ್ರವೇಶ ಪರೀಕ್ಷೆ, ಮೌಖಿಕ ಸಂದರ್ಶನ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರವೇಶ ಪರೀಕ್ಷೆಯು 2018ರ ಜನವರಿ 7ರಂದು ನಡೆಯಲಿದೆ.
ಉತ್ತಮ ಶ್ರೇಣಿ, ಆದಾಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ರಕ್ಷಣಾ ಇಲಾಖೆ ವಿದ್ಯಾರ್ಥಿ ವೇತನವು ಹಾಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆಯಿಂದ ನಿವೃತ್ತಿ ಹೊಂದಿರುವ ರಕ್ಷಣಾ ಇಲಾಖಾ ಯೋಧರ ಮಕ್ಕಳಿಗೆ ನೀಡಲಾಗುತ್ತದೆ.
ಅರ್ಜಿಯನ್ನು ಅಕ್ಟೋಬರ್ ಇಲ್ಲವೇ ನವೆಂಬರ್ 2017ರಲ್ಲಿ ಶಾಲೆಯ ವೆಬ್‍ಸೈಟ್ ತಿತಿತಿ.sಚಿಟಿiಞsಛಿhooಟಞoಜಚಿgu.eಜu.iಟಿ ಸಂಪರ್ಕಿಸಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಶಾಲೆಯಿಂದ ಖುದ್ದಾಗಿ ಸಹ ಅರ್ಜಿ ಹಾಗೂ ಮಾಹಿತಿ ಪುಸ್ತಕ ಪಡೆಯಬಹುದು. ವಿವರಗಳಿಗೆ ದೂರವಾಣಿ ಸಂಖ್ಯೆ 08276-278963 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment