ಅತೀವೃಷ್ಠಿ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಅಧಿಕಾರಿಗಳಿಗೆ ಡಿ.ಸಿ ತಾಕೀತು
ಚಾಮರಾಜನಗರ, ಸೆ. 28 - ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾಗುವ ಅತೀವೃಷ್ಠಿ ಸಂದರ್ಭಗಳಿಗೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ ಅಗತ್ಯ ಪರಿಹಾರ ಕ್ರಮಗಳನ್ನು ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಾಕೀತು ಮಾಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅತೀವೃಷ್ಠಿಯಿಂದ ಉಂಟಾಗುವ ಹಾನಿ ತಡೆ ಕುರಿತು ವಹಿಸಬೇಕಿರುವ ಮುಂಜಾಗರೂಕತಾ ಕ್ರಮಗಳ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ತಲೆದೋರುವ ಹಾನಿ, ಇನ್ನಿತರ ಸಂದರ್ಭಗಳಲ್ಲಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಬೇಕು. ಅತೀವೃಷ್ಠಿ, ಮಳೆ, ಇನ್ನಿತರ ಪ್ರಕೃತಿ ವಿಕೋಪದಿಂದ ಉಂಟಾಗುವ ತೊಂದರೆ ಪ್ರಕರಣಗಳಿಗೆ ಅಧಿಕಾರಿಗಳು ವಿಳಂಬ ಮಾಡದೇ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ರಾಮು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಬೇಕು. ತೊಂದರೆಗೆ ಒಳಗಾಗುವ ಜನ, ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಹಾಗೂ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗುವುದನ್ನು ತಡೆಯಲು ತಕ್ಷಣವೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ತುರ್ತು ವೈದ್ಯಕೀಯ ಸೇವೆ, ಪರಿಹಾರ ಸಾಮಗ್ರಿಗಳು,ಸಂಪರ್ಕ ಸಾಧನಗಳು, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾ ಮತ್ತು ತಾಲೂಕುಮಟ್ಟದಲ್ಲಿರುವ ಸಹಾಯವಾಣಿ, ಕಂಟ್ರೋಲ್ ರೂಮ್‍ಗಳಲ್ಲಿ ದೂರುಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ, ಸಲಹೆ, ಸೂಚನೆ ನೀಡಬೇಕು ಎಂದರು.
ತರಬೇತಿ ಹೊಂದಿದ ಶೋಧನಾ ಮತ್ತು ರಕ್ಷಣಾ ತಂಡವು ಜೀವರಕ್ಷಕ ಸಾಧನಗಳೊಂದಿಗೆ ಸನ್ನದ್ಧರಾಗಿರಬೇಕು. ಯಾವುದೇ ಭಾಗದಲ್ಲಿ ತೊಂದರೆ, ಅನಾಹುತ ಉಂಟಾದಲ್ಲಿ ಕ್ಷಿಪ್ರವಾಗಿ ಪರಿಹಾರ ಕಾರ್ಯಗಳಿಗೆ ಮುಂದಾಗಬೇಕು ಎಂದರು.
ನಗರ, ಸ್ಥಳೀಯ ಸಂಸ್ಥೆಗಳು, ಗ್ರಾಮಗಳು ಸೇರಿದಂತೆ ಯಾವುದೇ ಭಾಗದಲ್ಲಿ ವ್ಯಾಪಕವಾಗಿ ಅತೀವೃಷ್ಠಿ ತೊಂದರೆಯನ್ನು ನಿಭಾಯಿಸಬೇಕು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇರಬೇಕು. ಯಾವುದೇ ಕಾರಣಕ್ಕೂ ಅತೀವೃಷ್ಠಿ ಸಂದರ್ಭದಲ್ಲಿ ಜನ, ಜಾನುವಾರುಗಳಿಗೆ ಅನಾನುಕೂಲವಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ರಾಮು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅತೀವೃಷ್ಠಿ ನೆರವಿಗೆ ಸಹಾಯವಾಣಿ
ಚಾಮರಾಜನಗರ, ಸೆ. 28 - ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು, ಅತೀವೃಷ್ಠಿಯಿಂದ ಯಾವುದೇ ತೊಂದರೆ ಉಂಟಾದಲ್ಲಿ ಜನ, ಜಾನುವಾರುಗಳಿಗೆ ತಕ್ಷಣವೇ ರಕ್ಷಣೆ ಹಾಗೂ ಪರಿಹಾರಕ್ಕೆ ಸ್ಪಂದಿಸಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ(ಕಂಟ್ರೋಲ್ ರೂಮ್) ನಿರ್ವಹಿಸುತ್ತಿದೆ. ಸಾರ್ವಜನಿಕರು ದೂರವಾಣಿ ಸಂಪರ್ಕಿಸಿ ನೆರವು ಪಡೆಯಬಹುದಾಗಿದೆ.ಸಹಾಯವಾಣಿ(ಕಂಟ್ರೋಲ್ ರೂಮ್) ಸಂಖ್ಯೆ ಹಾಗೂ ತಹಶೀಲ್ದಾರರ ದೂರವಾಣಿ ಸಂಖ್ಯೆ ಇಂತಿದೆ. ಚಾಮರಾಜನಗರ-08226-222046, ಪುರಂದರ್ ತಹಶೀಲ್ದಾರ್ ಮೊ. 9742444578, ಕೊಳ್ಳೇಗಾಲ-08224-252042, ಕಾಮಾಕ್ಷಮ್ಮ ತಹಶೀಲ್ದಾರ್ ಮೊ. 9986083441, ಗುಂಡುಪೇಟೆ-08225-222225, ಕೆ. ಸಿದ್ದು ತಹಶೀಲ್ದಾರ್ ಮೊ. 9448642666, ಯಲಂದೂರು-08226-240029, ಚಂದ್ರಮೌಳಿ ತಹಶೀಲ್ದಾರ್ ಮೊ. 9448625194, ಜಿಲ್ಲಾ ಕಂಟ್ರೋಲ್ ರೂಮ್-08226-223160.
ಅಗ್ನಿ ಶಾಮಕ ಠಾಣೆ ದೂರವಾಣಿ ಸಂಖ್ಯೆ: ಚಾಮರಾಜನಗರ-08226-222661, ಗುಂಡ್ಲುಪೇಟೆ-08225-222811, ಕೊಳ್ಳೇಗಾಲ-08224-253101, ಹನೂರು-ಮೊ. 9482027101, ಅಲ್ಲದೆ 101 ಸಂಖ್ಯೆಗೂ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಪದವೀಧರ ಪ್ರಾಥಮಿಕ ಶಿಕ್ಷಕರ ನೇರ ನೇಮಕಾತಿ : ಅವಧಿ ವಿಸ್ತರಣೆÉ
ಚಾಮರಾಜನಗರ, ಸೆ. 28:- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ(6ರಿಂದ 8ನೇ ತರಗತಿ) ವೃಂದದ ಒಟ್ಟು 10 ಸಾವಿರ ಹುದ್ದೆಗಳನ್ನು ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಅಕ್ಟೋಬರ್ 2ರವರೆಗೆ ವಿಸ್ತರಿಸಲಾಗಿದೆ.ಇತರೆ ವಿವರಗಳನ್ನು ಇಲಾಖೆಯ ವೆಬ್‍ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ನೀಡಿರುವ ಛಿಚಿಛಿ ಲಿಂಕ್ ನಲ್ಲಿ ಪಡೆಯಬಹುದಾಗಿದೆ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 1ರಂದು ಕೊಳ್ಳೇಗಾಲದಲ್ಲಿ 63ನೇ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಸೆ. 28 :- ಚಾಮರಾಜನಗರ ವೃತ್ತದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗ ಮತ್ತು ಕಾವೇರಿ ವನ್ಯಜೀವಿ ವಿಭಾಗದ ಸಂಯುಕ್ತಾಶ್ರಯದಲ್ಲಿ 63ನೇ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಜ್ಯೋತಿ ಬೆಳಗಿಸುವರು. ಕೊಳ್ಳೇಗಾಲ ಶಾಸಕರಾದ ಎಸ್.ಜಯಣ್ಣ ಅಧ್ಯಕ್ಷತೆ ವಹಿಸುವರು.
ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಆರ್.ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಎಸ್. ಶಾಂತರಾಜು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ನಗರಸಭೆ ಉಪಾಧ್ಯಕ್ಷರಾದ ನಂಜುಂಡ, ತಾ.ಪಂ ಉಪಾಧ್ಯಕ್ಷರಾದ ಲತಾ ರಾಜಣ್ಣ, ಪ್ರಧಾನ ಮುಖ್ಯ ಅರಣ್ಯ (ಅರಣ್ಯ ಪಡೆ ಮುಖ್ಯಸ್ಥರು) ಸಂರಕ್ಷಣಾಧಿಕಾರಿ ಕೆ.ಎಸ್. ಸುಗಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಪುನಾಟಿ ಶ್ರೀಧರ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವನ್ಯಜೀವಿ ಪರಿಪಾಲಕರಾದ ಸಿ. ಜಯರಾಮ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅಭಿವೃದ್ಧಿ) ಹಾಗೂ ಚಾಮರಾಜನಗರ ವೃತ್ತದ ನೋಡೆಲ್ ಅಧಿಕಾರಿ ಅಜಯ್ ಮಿಶ್ರಾ, ಪ್ರಾದೇಶಿಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಅಂಬಾಡಿ ಮಾಧವ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿ.ಅರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಡಾ. ಪಿ. ಶಂಕರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್. ಎಚ್. ನಾಗರಾಜು, ಸಾಮಾಜಿಕ ಅರಣ್ಯ ವಿಭಾಗ ಮತ್ತು ವನ್ಯಜೀವಿ ಪರಿಪಾಲಕರಾದ ಚೋಳರಾಜ್ ಮತ್ತು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಬಿ. ಮಲ್ಲೇಶಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 2ರಂದು ಗುಂಡ್ಲುಪೇಟೆಯಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ
ಚಾಮರಾಜನಗರ, ಸೆ. 28- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಗರ್ಭೀಣಿ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಗುಂಡ್ಲುಪೇಟೆಯ ಶಿಕ್ಷಕರ ಭವನದಲ್ಲಿ ಅಕ್ಟೋಬರ್ 2ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಪುರಸಭೆ ಉಪಾಧ್ಯಕ್ಷರಾದ ಟಿ. ರಂಗಸ್ವಾಮಿ, ತಾ.ಪಂ. ಉಪಾಧ್ಯಕ್ಷರಾದ ರೂಪ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರುಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆವ ತಿಳಿಸಿದೆ.
ಅಕ್ಟೋಬರ್ 3ರಂದು ವಿಷನ್ ಡಾಕ್ಯುಮೆಂಟ್ ಕುರಿತ ನೀಲನಕ್ಷೆ ತಯಾರಿ ಪೂರ್ವಭಾವಿ ಸಭೆ:ಆಹ್ವಾನ
ಚಾಮರಾಜನಗರ, ಸೆ. 28 - ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕುರಿತು ಅಭಿಪ್ರಾಯ ಮಂಡಿಸಲು ಅಕ್ಟೋಬರ್ 3ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕೆ.ಡಿ.ಪಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.ಶಿಕ್ಷಣ ತಜ್ಞರು, ಧಾರ್ಮಿಕ ನಾಯಕರು, ಬುದ್ದಿಜೀವಿಗಳು, ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಸಂಸ್ಥೆಯ ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಅಭಿಪ್ರಾಯ, ಸಲಹೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 4ರಂದು ಕೃಷಿ, ಗ್ರಾಮೀಣಾಭಿವೃದ್ಧಿ ಸಂಬಂಧ ವಿಷನ್ ಡಾಕ್ಯುಮೆಂಟ್ ಕುರಿತ ನೀಲನಕ್ಷೆ ತಯಾರಿ ಪೂರ್ವಭಾವಿ ಸಭೆ: ಆಹ್ವಾನ
ಚಾಮರಾಜನಗರ, ಸೆ. 28 :- ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ, ಸಾಮಾಜಿಕ ಅರಣ್ಯ, ಕೃಷಿ ಮಾರುಕಟ್ಟೆ, ಕೆ.ಎಂ.ಎಫ್ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳ ಕುರಿತು ಚರ್ಚಿಸಲು ಅಕ್ಟೋಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಡಿ.ಪಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.ರೈತ ಭಾಂದವರು, ವಿವಿಧ ರೈತ ಸಂಘಟನೆಗಳ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಬುದ್ದಿಜೀವಿಗಳು ಸಭೆಗೆ ಹಾಜರಾಗಿ ಸಲಹೆಗಳನ್ನು ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಅ. 6 ಮತ್ತು 7ರಂದು ಗುಂಡ್ಲುಪೇಟೆಯಲ್ಲಿ ಮೈಸೂರು ವಿಭಾಗಮಟ್ಟದ ಷೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಚಾಮರಾಜನಗರ, ಸೆ. 28 - ಪ್ರಸಕ್ತ ಸಾಲಿನ 14ರಿಂದ 17 ವರ್ಷ ವಯೋಮಿತಿಯ ಶಾಲಾ ಬಾಲಕ, ಬಾಲಕಿಯರಿಗೆ ಮೈಸೂರು ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಅಕ್ಟೋಬರ್ 6 ಮತ್ತು 7ರಂದು ಗುಂಡ್ಲುಪೇಟೆಯ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಆಯಾ ಜಿಲ್ಲೆಯ ಮೇಲ್ವಿಚಾರಕರು ಅ. 6ರಂದು ಮಧ್ಯಾಹ್ನ 1 ಗಂಟೆಗೆ ಡಿ. ದೇವರಾಜು ಅರಸು ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment