Tuesday, 3 October 2017

ಮಹದೇಶ್ವರಬೆಟ್ಟ: 1,06,47,649 ಚಿನ್ನದ ಪದಾರ್ಥಗಳು 0.053( ಐವತ್ತು ಮೂರು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 0.650(ಆರು ನೂರು ಐವತ್ತು ಗ್ರಾಂ (03-10-2017)

 ಮಹದೇಶ್ವರಬೆಟ್ಟ: 1,06,47,649 ಚಿನ್ನದ  ಪದಾರ್ಥಗಳು 0.053( ಐವತ್ತು ಮೂರು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 0.650(ಆರು ನೂರು ಐವತ್ತು ಗ್ರಾಂ



ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:  ದಿನಾಂಕ:03-10 2017ರಂದು ಬೆಳಿಗ್ಗೆ  7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಎಂ.ಗಾಯತ್ರಿ, ಕೆ.ಎ.ಎಸ್.(ಹಿರಿಯ ಶ್ರೇಣಿ)ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಪ್ರಭಾರ  ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು  ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ,ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,  ಕಛೇರಿಯ ಅಧೀಕ್ಷಕರಾದ  ಶ್ರೀ ಬಿ.ಮಾದರಾಜು, ಆರೋಗ್ಯ ನಿರೀಕ್ಷಕರಾದ ಶ್ರೀಕಾಂತ್ ವಿಭೂತಿ ಹಾಗೂ ಪ್ರಾಧಿಕಾರದ ಸದಸ್ಯರುಗಳಾದ ಶ್ರೀ ಬಿ.ಮಹದೇವಪ್ಪರವರು ಮತ್ತು ಡಿ.ದೇವರಾಜುರವರು ಹಾಗು ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ  ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದುಹುಂಡಿ ಪರ್ಕಾವಣೆಯಿಂದ ಒಟ್ಟು ರೂ.1,06,47,649 ( ಒಂದು ಕೋಟಿ ಆರು ಲಕ್ಷ ದ ನಲವತ್ತೇಳು ಸಾವಿರ ಆರು ನೂರ ನಲವತ್ತೊಂಭತ್ತು ರೂಪಾಯಿಗಳು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ  ಪದಾರ್ಥಗಳು 0.053( ಐವತ್ತು ಮೂರು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 0.650(ಆರು ನೂರು ಐವತ್ತು ಗ್ರಾಂ) ದೊರೆತಿರುತ್ತದೆ.



ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಆರೋಗ್ಯ ಕುರಿತ ವಿಷನ್ ಡಾಕ್ಯುಮೆಂಟ್ ಪೂರ್ವಭಾವಿ ಸಭೆ

ಚಾಮರಾಜನಗರ, ಅ. 03 - ರಾಜ್ಯ ಸರ್ಕಾರ ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕುರಿತು ಅಭಿಪ್ರಾಯ ಸಂಗ್ರಹಿಸುವ ಪೂರ್ವಭಾವಿ ಸಭೆ ನಗರದಲ್ಲಿಂದು ನಡೆಯಿತು.
ಜಿಲ್ಲಾಡಳಿತ ಭವನದ ಕೆ.ಡಿ.ಪಿ ಸಭಾಂಗಣದಲ್ಲಿಂದು ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸಮಗ್ರ ಬೆಳವಣಿಗೆ ಕುರಿತು 2025ರಲ್ಲಿ ಕರ್ನಾಟಕ ರಾಜ್ಯವು ಅಭಿವೃದ್ಧಿ ಯೋಜನೆಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ ಹಾಗೂ ಸಲಹೆಗಳನ್ನು ಪಡೆಯುವ ಸಂಬಂಧ ಚರ್ಚೆ ನಡೆಸಿದರು.
ಆರಂಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ. ಸತೀಶ್ ಅವರು ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ಜಿಲ್ಲೆಯ ಪರಿಶಿಷ್ಟ ಜಾತಿ, ವರ್ಗಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಬದಲಾವಣೆ, ಸಮಾನತೆ, ತಾರತಮ್ಯ, ಆರೋಗ್ಯ, ವಸತಿ ಮತ್ತು ಶೈಕ್ಷಣಿಕ ಅಂತರಗಳನ್ನು ಕಡಿಮೆ ಮಾಡಲು ಸಾರ್ವಜನಿಕ ಅಭಿಪ್ರಾಯಗಳನ್ನು ಕಲೆ ಹಾಕುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಂದು ಅಭಿವೃದ್ಧಿಶೀಲ ದೇಶಗಳು ತಮ್ಮ ಯೋಜನೆಗಳ ಪ್ರಗತಿ ನಿರ್ಧರಿಸಲು ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಸಂಗ್ರಹಿಸುತ್ತವೆ. ಜನರ ಅನಿಸಿಕೆಗಳ ಸಾರಾಂಶ, ಸ್ಪಂದನೆ, ನಿರ್ಧಾರ, ಸಲಹೆಗಳನ್ನು ಕ್ರೋಢಿಕರಿಸಿ ಅಭಿವೃದ್ಧಿಗಾಗಿ ಮುಂದಿನ ಯೋಜನೆಗಳನ್ನು ರೂಪಿಸುವುದರಿಂದ ಇಂತಹ ವಿಷನ್ ಡಾಕ್ಯುಮೆಂಟ್ ಯೋಜನೆ ಅಗತ್ಯವಾಗಿದೆ ಎಂದರು.
ಜನಪ್ರತಿನಿಧಿಗಳು, ಧಾರ್ಮಿಕ ನಾಯಕರು, ಬುದ್ದಿಜೀವಿಗಳು, ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳು, ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸಾರ್ವಜನಿಕರು ಸಭೆಗೆ ಹಾಜರಾಗಿ ರಾಜ್ಯಸರ್ಕಾರದ ಯೋಜನೆಗಳ ಅನುಷ್ಠಾನ ಅವುಗಳ ಪ್ರಸ್ತುತತೆ,. ಅಗತ್ಯ ಮಾರ್ಪಾಡು, ಜನರನ್ನು ತಲುಪುವ ಬಗೆ, ಹಾಗೂ ವಿವಿಧ ಅಭಿವೃದ್ದಿ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಸಮಗ್ರ ಬದಲಾವಣೆಗಳನ್ನು ಸಭೆಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ಶಿಕ್ಷಣ ತಜ್ಞರಾದ ಜಿ.ಎಸ್. ಜಯದೇವ್, ಸಾಹಿತಿ ಸೋಮಶೇಖರ ಬಿಸಲ್ವಾಡಿ, ಪ್ರಗತಿಪರ ಸಂಘಟನೆ ಮುಖಂಡರಾದ ಅರಕಲವಾಡಿ ನಾಗೇಂದ್ರ, ಆಲೂರು ನಾಗೇಂದ್ರ, ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಕೇತಮ್ಮ, ಬೌದ್ಧ ಬಿಕ್ಕು ಬಂತೇಜಿ, ಸಾರ್ವಜನಿಕರು, ವಿವಿಧ ಶಾಲಾ ವಿದ್ಯಾರ್ಥಿಗಳು ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಆಗಬೇಕಾಗಿರುವ  ಅನಿಸಿಕೆಗಳನ್ನು ಪ್ರಸ್ತಾಪಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಜಿನಾ ಪಿ ಮಲಾಕಿ, ಖಾದಿ, ಗ್ರಾಮೋದ್ಯೋಗ ಅಧಿಕಾರಿ ರಾಜೇಂದ್ರ ಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೃಷ್ಣಯ್ಯ ಸಭೆಯಲ್ಲಿ ಉಪಸ್ಥಿತರಿದ್ದರು.

ಅಕ್ಟೋಬರ್ 4ರಂದು ನಗರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಚಾಮರಾಜನಗರ, ಅ. 03 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ  ಉದ್ಘಾಟನೆ ಸಮಾರಂಭ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಕ್ಟೋಬರ್ 4ರಂದು ಬೆಳಗ್ಗೆ 11.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಿದ್ದಾರೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭಾಪುಟ್ಟಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಉಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರುಗಳು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಬಾಗವಹಿಸುವರು

   
 *******************************************
     
ನಗರದಲ್ಲಿ ಅ. 5ರಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಂದೂಡಿಕೆ
ಚಾಮರಾಜನಗರ, ಅ. 03 - ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಅಕ್ಟೋಬರ್ 5ರಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಬೆಂಗಳೂರಿನಲ್ಲಿ ಅಕ್ಟೋಬರ್ 5ರಂದು ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿರುವುದರಿಂದ ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿ ನಡೆಯಬೇಕಿದ್ದ ವಾಲ್ಮೀಕಿ ಜಯಂತಿಯನ್ನು ಮತ್ತೊಂದು ದಿನ ಆಚರಣೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಏರ್ಪಡಿಸಲು ಮತ್ತೊಂದು ದಿನಾಂಕವನ್ನು ಗೊತ್ತುಪಡಿಸುವುದಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಚಾಮರಾಜನಗರದಲ್ಲಿ ಎನ್.ಐ.ಪಿ.ಇ.ಆರ್ ಕೇಂದ್ರ ಸ್ಥಾಪಿಸಲು ಸಂಸದರ ಮನವಿ  
ಚಾಮರಾಜನಗರ, ಅ. 03 - ರಾಷ್ಟ್ರೀಯ ಔಷಧ ಶಿಕ್ಷಣ ಸಂಶೋಧನಾ ಕೇಂದ್ರ(ಎನ್.ಐ.ಪಿ.ಇ.ಆರ್)ವನ್ನು ಚಾಮರಾಜನಗರದಲ್ಲಿ ಸ್ಥಾಪಿಸುವಂತೆ ಸಂಸದ ಆರ್. ಧ್ರುವನಾರಾಯಣ ಅವರು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಅನಂತಕುಮಾರ್ ಅವರಲ್ಲಿ ಮನವಿ ಮಾಡಿದರು. 
ನವದೆಹಲಿಯಲ್ಲಿಂದು ಸಚಿವ ಅನಂತಕುಮಾರ್ ಅವರನ್ನು ಭೇಟಿಯಾದ ಸಂಸದರು ಕರ್ನಾಟಕಕ್ಕೆ ರಾಷ್ಟ್ರೀಯ ಔಷಧ ಶಿಕ್ಷಣ ಸಂಶೋಧನಾ ಕೇಂದ್ರದ ಅವಶ್ಯಕತೆಯಿದೆ. ಈ ಕೇಂದ್ರ ಚಾಮರಾಜನಗರದಲ್ಲಿ ಸ್ಥಾಪನೆಯಾದರೆ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಔಷಧ ಕ್ಷೇತ್ರದಲ್ಲಿ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಸಂಶೋಧನೆ ಕೈಗೊಳ್ಳಲು ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಸದರಿ ಕೇಂದ್ರವನ್ನು ಚಾಮರಾಜನಗರದಲ್ಲಿ ಸ್ಥಾಪಿಸಬೇಕು. ಎಂದು ಒತ್ತಾಯಿಸಿದ್ದಾರೆ.
ಚಾಮರಾಜನಗರದಲ್ಲಿ 1600 ಎಕರೆ ಸರ್ಕಾರಿ ಭೂಮಿ ಇದೆ. ಔಷಧ ಶಿಕ್ಷಣ ಸಂಶೋಧನಾ ಕೇಂದ್ರಕ್ಕೆ ಬೇಕಾದ ಜಾಗವನ್ನು ಇದರಲ್ಲಿ ಪಡೆಯಬಹುದಾಗಿದೆ. ಆದ್ದರಿಂದ ಈ ಕೇಂದ್ರ ಮಂಜೂರು ಮಾಡಬೇಕೆಂದು ಅವರು ಕೋರಿದರು. ಸಂಸದರ ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಅಕ್ಟೋಬರ್ 4ರಂದು ಕೃಷಿ, ಗ್ರಾಮೀಣಾಭಿವೃದ್ಧಿ ಸಂಬಂಧ ವಿಷನ್ ಡಾಕ್ಯುಮೆಂಟ್ ಕುರಿತ ನೀಲನಕ್ಷೆ ತಯಾರಿ ಪೂರ್ವಭಾವಿ ಸಭೆ: ಆಹ್ವಾನ
ಚಾಮರಾಜನಗರ, ಅ. 03- ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ, ಸಾಮಾಜಿಕ ಅರಣ್ಯ, ಕೃಷಿ ಮಾರುಕಟ್ಟೆ, ಕೆ.ಎಂ.ಎಫ್ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳ ಕುರಿತು ಚರ್ಚಿಸಲು ಅಕ್ಟೋಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಡಿ.ಪಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ರೈತ ಭಾಂದವರು, ವಿವಿಧ ರೈತ ಸಂಘಟನೆಗಳ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಬುದ್ದಿಜೀವಿಗಳು ಸಭೆಗೆ ಹಾಜರಾಗಿ ಸಲಹೆಗಳನ್ನು ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.








    










No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು